Tag: tweet

  • ಮನೆ ಮಾಲೀಕಳ ಪ್ರಾಣ ಉಳಿಸಲು ಪರ್ವತ ಸಿಂಹದೊಂದಿಗೆ ಹೋರಾಡಿದ ಶ್ವಾನ

    ಮನೆ ಮಾಲೀಕಳ ಪ್ರಾಣ ಉಳಿಸಲು ಪರ್ವತ ಸಿಂಹದೊಂದಿಗೆ ಹೋರಾಡಿದ ಶ್ವಾನ

    ನ್ಯೂಯಾರ್ಕ್: ನಾಯಿ ಮತ್ತು ಮನುಷ್ಯರ ನಡುವಿನ ಸ್ನೇಹ ಸಂಬಂಧವು ಯಾವಾಗಲೂ ಉತ್ತಮವಾಗಿರುತ್ತದೆ. ತನಗೆ ಅನ್ನ ಹಾಕಿದ ಮಾಲೀಕರಿಗೆ ಅದು ಯಾವಾಗಲೂ ಋಣಿಯಾಗಿರುತ್ತದೆ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೆ ಸಾಕ್ಷಿಯಾಗಿ ಸಾಕಷ್ಟು ಪುರಾವೆಗಳಿವೆ. ಅಲದೇ ಮಾಲೀಕರೇನಾದರೂ ಪ್ರಾಣಾಪಾಯದಲ್ಲಿದ್ದರೆ ತನ್ನ ಪ್ರಾಣ ಒತ್ತೆಯಿಟ್ಟಾದರೂ ಕಾಪಾಡಲು ಮುಂದಾಗುತ್ತವೆ. ಇದೀಗ ಯುವತಿಯೊಬ್ಬಳು ಪರ್ವತ ಸಿಂಹದಿಂದ ದಾಳಿಗೊಳಗಾಗಿದ್ದ ಸಂದರ್ಭದಲ್ಲಿ ನಾಯಿಯೊಂದು ರಕ್ಷಿಸಿರುವ ಟ್ವೀಟ್‍ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಯುವತಿಯೊಬ್ಬಳು ತಮ್ಮ ಸಾಕು ನಾಯಿಯೊಂದಿಗೆ ವಾಯು ವಿಹಾರಕ್ಕೆಂದು ತೆರಳಿದ್ದಾಗ ಪರ್ವತ ಸಿಂಹವೊಂದು ಅವರ ಮೇಲೆ ದಾಳಿ ನಡೆಸಿದ ಘಟನೆ ಉತ್ತರ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಈ ವೇಳೆ ಅವಳ ಜೊತೆಯಿದ್ದ ಸಾಕು ನಾಯಿ ತನ್ನ ಮಾಲೀಕಳನ್ನು ರಕ್ಷಿಸುವ ಸಲುವಾಗಿ ಪರ್ವತ ಸಿಂಹದ ಎದುರು ನಿಂತು ಹೋರಾಡಿ ಆಕೆಯನ್ನು ರಕ್ಷಿಸಿದೆ.

    ಉತ್ತರ ಕ್ಯಾಲಿಫೋರ್ನಿಯಾದ ಟ್ರಿನಿಟಿ ನದಿಯ ಬಳಿ ಎರಿನ್ ವಿಲ್ಸನ್ ತನ್ನ ಸಾಕು ನಾಯಿಯೊಂದಿಗೆ ವಿಹರಿಸುತ್ತಿದ್ದಳು. ಈ ಸಂದರ್ಭದಲ್ಲಿ ಪರ್ವತ ಸಿಂಹವು ಆಕೆಯ ಮೇಲೆ ದಾಳಿ ನಡೆಸಿದೆ. ಈ ವೇಳೆ ಆಕೆ ಭೀತಿಯಿಂದ ಕಿರುಚಾಡಿದ್ದಾಳೆ. ಶೀಘ್ರದಲ್ಲೇ ಪರ್ವತ ಸಿಂಹವನ್ನು ಕಂಡ ನಾಯಿಯು ತನ್ನ ಪ್ರಾಣವನ್ನು ಸಹ ಲೆಕ್ಕಿಸದೆ ಅದರ ಮೇಲೆ ಮುಗಿಬಿದ್ದಿದೆ. ಘಟನೆಯಿಂದಾಗಿ ನಾಯಿಯು ತೀವ್ರ ಗಾಯಗೊಂಡಿದ್ದು, ಶ್ವಾನಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾನ ಚೇತರಿಸಿಕೊಳ್ಳುತ್ತಿದೆ. ಯುವತಿಯ ಮೇಲೆ ದಾಳಿ ಮಾಡಿದ ಸಿಂಹವು ಆಕೆಯ ಜಾಕೆಟ್ ಅನ್ನು ಎಳೆದು ತನ್ನ ಚೂಪಾದ ಉಗುರುಗಳಿಂದ ಪರಚಿದೆ.

    ಶ್ವಾನದ ಧೈರ್ಯಕ್ಕೆ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಹೇಳೋದು ನಾಯಿಗಿರುವ ನಿಯತ್ತು ಮನುಷ್ಯರಿಗೆ ಇರುವುದಿಲ್ಲ ಎಂದು.

  • ಇದು ದುರಹಂಕಾರವಲ್ಲ, ಆತ್ಮವಿಶ್ವಾಸ: ರಾಹುಲ್‌ಗೆ ವಿದೇಶಾಂಗ ಸಚಿವ ತಿರುಗೇಟು

    ಇದು ದುರಹಂಕಾರವಲ್ಲ, ಆತ್ಮವಿಶ್ವಾಸ: ರಾಹುಲ್‌ಗೆ ವಿದೇಶಾಂಗ ಸಚಿವ ತಿರುಗೇಟು

    ನವದೆಹಲಿ: ಭಾರತೀಯ ವಿದೇಶಾಗ ನೀತಿಯನ್ನು ದುರಹಂಕಾರಿ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿರುಗೇಟು ನೀಡಿದ್ದಾರೆ. ವಿಶ್ವ ವೇದಿಕೆಯಲ್ಲಿ ಭಾರತ ಪ್ರದರ್ಶಿಸುತ್ತಿರುವುದು ದುರಹಂಕಾರವಲ್ಲ, ಆತ್ಮವಿಶ್ವಾಸ ಎಂದು ಹೇಳಿದ್ದಾರೆ.

    sಶುಕ್ರವಾರ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ನಡೆದ ಇಂಡಿಯಾಸ್ ಫಾರ್ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತಮಾಡಿದ ರಾಹುಲ್ ಗಾಂಧಿ, ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ. ಅಲ್ಲಿನ ಅಧಿಕಾರಿಗಳು ಯಾರ ಮಾತನ್ನೂ ಕೇಳುವುದಿಲ್ಲ. ದುರಹಂಕಾರದಿಂದ ನಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದರು. ಇದನ್ನೂ ಓದಿ: ಭಾರತದ ವಿದೇಶಾಂಗ ನೀತಿ ಸಂಪೂರ್ಣ ಬದಲಾಗಿದೆ, ಯಾರ ಮಾತನ್ನೂ ಕೇಳಲ್ಲ: ರಾಹುಲ್ ಗಾಂಧಿ

    ಇದಕ್ಕೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಜೈಶಂಕರ್, ಹೌದು.. ಭಾರತೀಯ ವಿದೇಶಾಂಗ ಸೇವೆ ಬದಲಾಗಿದೆ. ಅವರು ಸರ್ಕಾರದ ಆದೇಶವನ್ನು ಅನುಸರಿಸುತ್ತಾರೆ. ಅವರು ಇತರರ ವಾದಗಳನ್ನೂ ಎದುರಿಸುತ್ತಾರೆ. ಆದರೆ ಅದನ್ನು ದುರಹಂಕಾರ ಎಂದು ಕರೆಯಲಾಗುವುದಿಲ್ಲ. ಅದನ್ನು ಆತ್ಮವಿಶ್ವಾಸ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ಹಿತಾಸಕ್ತಿ ರಕ್ಷಿಸುವುದು ಎಂದು ಕರೆಯಲಾಗುತ್ತದೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – 14ಕ್ಕೇರಿದ ಸಾವಿನ ಸಂಖ್ಯೆ

    ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಜಾಗತಿಕ ಸಮಸ್ಯೆಗಳ ವಿಚಾರದಲ್ಲಿ ಭಾರತದ ಸ್ಥಾನ ಹಾಗೂ ಹಿತಾಸಕ್ತಿಗಳಿಗೆ ಮೊದಲ ಸ್ಥಾನ ನೀಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ರಷ್ಯಾ-ಉಕ್ರೇನ್ ಯುದ್ಧದ ನಡುವೆ ರಷ್ಯಾದಿಂದ ಅಗ್ಗದ ಬೆಲೆಗೆ ಭಾರತ ತೈಲವನ್ನು ಖರೀದಿಸಿತ್ತು. ಆ ಸಂದರ್ಭ ಇತರ ದೇಶಗಳು ಭಾರತವನ್ನು ವಿರೋಧಿಸಿದ್ದವು. ಆಗ ಜೈಶಂಕರ್ ವಿದೇಶಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

  • ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ – ಸಿದ್ದುಗೆ ಸುನಿಲ್ ಕುಮಾರ್ ಟಾಂಗ್

    ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ – ಸಿದ್ದುಗೆ ಸುನಿಲ್ ಕುಮಾರ್ ಟಾಂಗ್

    ಬೆಂಗಳೂರು: ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

    SIDDARAMAIHA SPOKE

    ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಾಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

    ಸದ್ಯ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಅವರು, ನಾರಾಯಣ ಗುರು ಕುರಿತು ಹಾಗೂ ಅವರ ಆದರ್ಶಗಳನ್ನು ಪಠ್ಯ ಪುಸ್ತಕದಿಂದ ನಮ್ಮ ಸರ್ಕಾರವು ತೆಗೆದು ಹಾಕಿಲ್ಲ. ನಾರಾಯಣ ಗುರುಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಶ್ರದ್ದೆ, ಭಕ್ತಿ ಇದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ವಿನಾಕಾರಣ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಹರಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಇಂದು SSLC ಫಲಿತಾಂಶ – ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಗುಡ್‌ನ್ಯೂಸ್!

    ಪದೇ ಪದೇ ನಾರಾಯಣ ಗುರುಗಳ ವಿಷಯವನ್ನು ರಾಜಕೀಯಕ್ಕೆ ಎಳೆದು ತರುವುದು ಶೋಭೆ ತರುವಂತದ್ದಲ್ಲ. ಬಲವಂತದ ಮತಾಂತರ ನಿಷೇಧ ಕಾಯ್ದೆಯ ಸುಗ್ರೀವಾಜ್ಞೆಗೆ ಘನತೆವೆತ್ತ ರಾಜ್ಯಪಾಲರ ಅಂಕಿತ ದೊರೆತಿದೆ. ಇನ್ನು ಮುಂದೆ ರಾಜ್ಯದಲ್ಲಿ ಬಲವಂತದ, ಆಸೆ, ಆಮಿಷಗಳ ಮೂಲಕ ನಡೆಯುತ್ತಿದ್ದ ಮತಾಂತರಗಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ ಎಂದಿದ್ದಾರೆ.

    ಭಾರತದ ಶೌರ್ಯ, ಪರಾಕ್ರಮದ ಇತಿಹಾಸವನ್ನು ಪಠ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮರೆಮಾಚಿ, ತಿರುಚಿದ ಇತಿಹಾಸವನ್ನು ತಿಳಿಸುವ ಕೃತ್ಯವನ್ನು ಕಾಂಗ್ರೆಸ್ ಕಳೆದ 70 ವರ್ಷಗಳಿಂದ ಮಾಡುತ್ತಾ ಬಂದಿತ್ತು. ಈಗ ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಅಸ್ಸಾಂನಲ್ಲಿ ಭೀಕರ ಪ್ರವಾಹ – 9 ಮಂದಿ ಸಾವು, ಸಂಕಷ್ಟದಲ್ಲಿ ಲಕ್ಷಾಂತರ ಜನ

    ಆ ಇತಿಹಾಸವನ್ನು ಪಠ್ಯಕ್ರಮದಲ್ಲಿ ಜೋಡಿಸುವಂತಹ ಕಾರ್ಯವನ್ನು ತಜ್ಞರ ಸಮಿತಿ ಕೈಗೊಂಡಿರುವುದು ಸ್ವಾಗತಾರ್ಹ. ಭಾರತದ ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ,ವಿಜಯನಗರ, ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ ಎಂದು ಟಾಂಗ್ ನೀಡಿದ್ದಾರೆ.

    ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

  • ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ

    ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಎಷ್ಟೇ ದುಡಿದರೂ ಯಾವುದೇ ಪ್ರಯೋಜನವಿಲ್ಲ ಎಂದು ವೀಡಿಯೋ ಶೇರ್ ಮಾಡಿ ಬಿಜೆಪಿ ಸಲಹೆ ಕೊಟ್ಟಿದೆ.

    ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಲು ಮುಂದಾಗಿದ್ದರು. ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಹ ಉಪಸ್ಥಿತರಿದ್ದರು. ಡಿಕೆಶಿ ಅವರು ಕೇಕ್ ಕಟ್ ಮಾಡಿದ ಮೇಲೆ ಪ್ರಿಯಾಂಕಾ ಗಾಂಧಿ ಬೇರೆಯವರ ಕೈಯಿಂದ ಕೇಕ್ ತಿನ್ನಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ವೀಡಿಯೋ ಸರಣಿ ಟ್ವೀಟ್ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್

    ಸರಣಿ ಟ್ವೀಟ್‍ನಲ್ಲಿ ಏನಿದೆ?
    ಡಿ.ಕೆ.ಶಿವಕುಮಾರ್ ಅವರೇ, ಅವರ ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ. ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ. ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ. ಅಸಹಾಯಕಡಿಕೆಶಿ ಇಷ್ಟೊಂದು ದುರ್ಬಲವೇ?

    ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿಯೇ ಇಡುತ್ತಾರೆ. ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕಾ ಗಾಂಧಿಗೆ ಸೌಜನ್ಯವಿಲ್ಲ.

    ಮತ್ತೊಬ್ಬರ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಈ ಹೊತ್ತಿನಲ್ಲಿ, ನಕಲಿ ಗಾಂಧಿ ವಂಶದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ. ಕನಕಪುರದ ಬಂಡೆ ಹೀಗೆ ಬಗ್ಗಿದ್ದು, ಕುಗಿದ್ದು ಅಸಹಾಯಕತನದ ಪರಮಾವಧಿಯಲ್ಲದೆ ಮತ್ತೇನು?. ಇದನ್ನೂ ಓದಿ: ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ 

    ಕೇಕ್ ತಿನ್ನಿಸಲು ನಿರಾಕರಣೆ, ರಮ್ಯಾ ಟ್ವೀಟ್ ದಾಳಿ, ಎಂ.ಬಿ.ಪಾಟೀಲ್ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಮತ್ತು ಬಣದ ಇತ್ತೀಚೆಗಿನ ನಡೆ, ಕೆಪಿಸಿಸಿ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಇದೆಲ್ಲವೂ ಡಿ.ಕೆ.ಶಿವಕುಮಾರ್ ಅವರನ್ನು ಹರಕೆಯ ಕುರಿ ಮಾಡುವ ತಂತ್ರ. ಈ ಎಲ್ಲ ಘಟನೆಗಳು ಏನೋ ಮುನ್ಸೂಚನೆ ನೀಡುತ್ತಿರುವುದು ನಿಜವಲ್ಲವೇ ಎಂದು ಸಂಶಯವನ್ನು ವ್ಯಕ್ತಪಡಿಸಿದೆ.

  • ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ `ಭಾರತ್ ಜೋಡೋ’ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದು ಬಿಜೆಪಿ ಕುಟುಕಿದೆ.

    ʼಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್‌ ಜೋಡೋʼ ಯಾತ್ರೆ ಕೈಗೊಳ್ಳುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಯಾತ್ರೆ ಕುರಿತು ʼ#ಕಾಂಗ್ರೆಸ್‌ಛೋಡೋʼ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬಿಜೆಪಿ ಸರಣಿ ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ.

    ಟ್ವೀಟ್‌ನಲ್ಲಿ ಏನಿದೆ?
    ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು. ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ. ಎಷ್ಟೊಂದು ನಾಟಕ ಮಾಡುವಿರಿ?

    ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.

    ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?

    ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ. ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?

    ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ G23 ನಾಯಕರ ಪಾತ್ರವೇನು? ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ? ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

    ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?

  • ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬೆಂಗಳೂರು: ಕಾಂಗ್ರೆಸ್ ಯುವ ನಾಯಕರ ಒಳ ಜಗಳ ಈಗ ಬೀದಿಗೆ ಬಂದಿದೆ. ಈ ಬೀದಿ ಜಗಳವನ್ನು ಶಮನ ಮಾಡಲು ಈಗ ಹಿರಿಯ ನಾಯಕರು ಅಖಾಡಕ್ಕೆ ಧುಮುಕಿದ್ದಾರೆ.

    ರಮ್ಯಾ, ನಲಪಾಡ್ ಮಧ್ಯೆ ವಾಕ್ಸಮರದ ಬಳಿಕ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದರು. ಈಗ ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಚಿವ ಮಹದೇವಪ್ಪ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

     

    ಟ್ವೀಟ್ ಮಾಡಿದ ಅವರು, ನಮ್ಮ ಹೋರಾಟ ಬಿಜೆಪಿ ವಿರುದ್ಧ ಇರಬೇಕು ಹೊರತು ರಮ್ಯಾ ವಿರುದ್ಧ ಅಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರಿಗೆ ಟಾಂಗ್ ನೀಡಿದ್ದಾರೆ.

    DKS AND RAMYA

    ಎಂಬಿ ಪಾಟೀಲ್ ಅಶ್ವಥ್ ನಾರಾಯಣ ಭೇಟಿ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ ಬಳಿಕ ಕಾಂಗ್ರೆಸ್ ಒಳಜಗಳ ಈಗ ಬೀದಿಗೆ ಬಂದಿದೆ. ಡಿಕೆಶಿ ಹೇಳಿಕೆ ವಿರೋಧಿಸಿ ರಮ್ಯಾ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದರು. ಈ ಹಿನ್ನೆಲೆ ಮಾಧ್ಯಮಗಳ ಮೂಲಕ ರಮ್ಯಾ ಟ್ವೀಟ್‍ಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರ್ಯಾರಿಗೆ ಏನು ನೋವಿದೆಯೋ ಏನು ದುಗುಡ ಇದೆಯೋ ಗೊತ್ತಿಲ್ಲಾ ಎಂದಿದ್ದರು.

    ಇಬ್ಬರ ನಡುವಿನ ಟ್ವೀಟ್ ವಾರ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್‍ನ ಹಲವು ನಾಯಕರು ಪ್ರತಿಕ್ರಿಯಿಸಿದ್ದರು. ನಿನ್ನೆ ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ಮಾತನಾಡಿ, ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದರು.

  • ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಕ್ಕೆ ತಮ್ಮ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ಗೆ ಟ್ವೀಟ್‌ ಮೂಲಕ ಕಾಂಗ್ರೆಸ್‌ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.

    ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಮೊಹಮ್ಮದ್‌ ನಲಪಾಡ್‌ ಮೇಲಿರುವ ಆರೋಪದ ಸುದ್ದಿಗಳ ಫೋಟೋಗಳನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿರುವ ರಮ್ಯಾ, ನಲಪಾಡ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ

    ಈತ ಮೊಹಮ್ಮದ್‌ ನಲಪಾಡ್‌. ಗೌರವಾನ್ವಿತ ಶಾಸಕ ಹ್ಯಾರಿಸ್‌ ಅವರ ಪುತ್ರ. ಯುವ ಕಾಂಗ್ರೆಸ್ ಅಧ್ಯಕ್ಷರೂ ಕೂಡ. ಬೇಲ್‌ ಮೇಲೆ ಹೊರಗಿರುವ ನಲಪಾಡ್‌ ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಟ್ವೀಟ್‌ ಮಾಡಿ ಕುಟುಕಿದ್ದಾರೆ.

    ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ ಅವರನ್ನು ಶಾಸಕ ಎಂ.ಬಿ.ಪಾಟೀಲ್‌ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಇದಕ್ಕೆ ರಮ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಭೇಟಿಯಲ್ಲಿ ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ನಲಪಾಡ್‌ ಹರಿಹಾಯ್ದಿದ್ದರು. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಟಾಂಗ್‌ ಕೊಟ್ಟಿದ್ದರು. ಇದನ್ನೂ ಓದಿ: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

  • ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

    ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

    ಬೆಂಗಳೂರು: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಎಂದು ಮಾಜಿ  ಸಂಸದೆ ರಮ್ಯಾ ಸರಣಿ ಟ್ವೀಟ್ ಮಾಡಿದ್ದಾರೆ.

    ಬೆಳಗ್ಗಿನಿಂದ ರಮ್ಯಾ ಟ್ವೀಟ್ ವಾರ್ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟಾಂಗ್ ಕೊಟ್ಟಿದ್ದರು. ಈಗ ಮತ್ತೆ ಮುಂದುವರಿದ ಅವರು, ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ ಗಾಂಧಿ. ನನಗೆ ಅವಕಾಶ ನೀಡಲಾಗಿದೆ ಅಂತ ಯಾರದ್ರೂ ಹೇಳಿದ್ರೆ ಅವರು ಅವಕಾಶವಾದಿಗಳು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:  ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ 

    ಕಾಂಗ್ರೆಸ್ ನಿಂದ 8 ಕೋಟಿ ಪಡೆದಿದ್ದೇನೆ ಅಂತಾ ಸುಳ್ಳುಸುದ್ದಿ ಹರಿಬಿಡಲಾಗಿದೆ. ನಾನು ಓಡಿ ಹೋಗಿದ್ದೇನೆ ಅಂತಾ ಸುಳ್ಳು ಸುದ್ದಿ ಹರಡಿಸಿದ್ರು. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಲಾಯ್ತು. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದೆ. ನಾನು ಮೌನವಾಗಿದ್ದೇ ತಪ್ಪಾಯ್ತು ಎಂದು ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

    ವೇಣುಗೋಪಾಲ್ ಜೀ ಮುಂದಿನ ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಸ್ಪಷ್ಟನೆ ಕೊಡಿ. ಈ ಸುಳ್ಳು ಸುದ್ದಿಯಿಂದ ನನ್ನನ್ನು ಮುಕ್ತಗೊಳಿಸಿ. ಇದು ನೀವು ನನಗೆ ಮಾಡಬಹುದಾದ ಕನಿಷ್ಠ ಸಹಾಯ. ಇಲ್ಲದೇ ಹೋದರೆ ನಾನು ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‍ನೊಂದಿಗೆ ಇರಬೇಕಾಗುತ್ತೆ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

  • ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ

    ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ

    ಬೆಂಗಳೂರು: ಯಾರ್ಯಾರಿಗೆ ಏನು ನೋವಿದೆಯೋ, ಏನು ದುಗುಡ ಇದೆಯೋ ಗೊತ್ತಿಲ್ಲ ಎಂದು ರಮ್ಯಾ ಟ್ವೀಟ್‍ಗೆ ಉತ್ತರವನ್ನು ಕೊಟ್ಟಿದ್ದಾರೆ.

    ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಈ ಹಿನ್ನೆಲೆ ಮಾಧ್ಯಮಗಳ ಮೂಲಕ ರಮ್ಯಾ ಟ್ವೀಟ್‌ ಉತ್ತರಿಸಿದ ಅವರು, ಯಾರ್ಯಾರಿಗೆ ಏನು ನೋವಿದೆಯೋ ಏನು ದುಗುಡ ಇದೆಯೋ ಗೊತ್ತಿಲ್ಲಾ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ್ತೀವಿ. ನನಗೆ ರಮ್ಯಾ ಟ್ವೀಟ್ ವಿಚಾರ ಯಾವುದು ಗೊತ್ತಿಲ್ಲ. ಎಂಬಿಪಿ, ರಮ್ಯಾ ಇಬ್ರೂ ನಮ್ಮ ಪಕ್ಷದವರು. ಟ್ವೀಟ್ ವಿಚಾರದಲ್ಲಿ ಎಲ್ಲೋ ಗೊಂದಲವಾಗಿದೆ. ಅದನ್ನ ನಾವು ಸರಿಪಡಿಸಿಕೊಳ್ತೇವೆ ಎಂದು ಉತ್ತರಿಸಿದರು.

    ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್‌ ಬಿಟ್ಟು ಪ್ರಸನ್ನ ಅವರು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ.

  • ನಾನು ಮಗನಷ್ಟು ಒಳ್ಳೆಯವನಲ್ಲ: ಅಮ್ಮನಿಗೆ ಆರ್‌ಜಿವಿ ವಿಶ್

    ನಾನು ಮಗನಷ್ಟು ಒಳ್ಳೆಯವನಲ್ಲ: ಅಮ್ಮನಿಗೆ ಆರ್‌ಜಿವಿ ವಿಶ್

    ಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ಸದಾ ಒಂದಲ್ಲಾ ಒಂದು ವಿಚಾರಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯಲ್ಲಿರುತ್ತಾರೆ. ಸಿನಿಮಾಗಳಿಗಿಂತ ಇತರೆ ವಿಚಾರಗಳಿಂದ ಹೆಚ್ಚು ಸುದ್ದಿಯಾಗುವ ಆರ್‌ಜಿವಿ ಇದೀಗ ಮದರ್ಸ್ ಡೇಯಂದು ಅಮ್ಮನಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ.

    ಅಮ್ಮಾ ಈ ಎರಡು ಅಕ್ಷರವೇ ಅದ್ಭುತ ಅವಳಿಗೆ ಅವಳೇ ಸಾಟಿ. ಮಹಾನ್ ದೈವ ಸ್ವರೂಪಿ ಆ ತಾಯಿ. ತೆರೆಯ ಮೇಲೆ ವಿಜೃಂಭಿಸುವ ತಾರೆಯರ ಬದುಕಲ್ಲೂ ತಾಯಿಯೇ ಶಕ್ತಿ, ತಾಯಿಯೇ ಸ್ಫೂರ್ತಿ. ಅಂತಹ ತಾಯಿಗೆ ಭಿನ್ನವಾಗಿ ವಿಶ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ.‌ ಇದನ್ನೂ ಓದಿ: ವೈರಲ್ ಆಯ್ತು ಸಂಜನಾ ಗಲ್ರಾನಿ ಬೇಬಿ ಶವರ್ ಸಮಾರಂಭದ ಫೋಟೋಗಳು

    ಭಿನ್ನ ಸಿನಿಮಾಗಳನ್ನ ತೆರೆಯ ಮೇಲೆ ತೋರಿಸೋದ್ರಲ್ಲಿ ಆರ್‌ಜಿವಿ ಯಾವಾಗಲೂ ಮುಂದು, ಇನ್ನು ಸಿನಿಮಾಗಿಂತ ಹೆಚ್ಚು ಕಾಂಟ್ರವರ್ಸಿಯಿಂದಲೇ ಸದ್ದು ಮಾಡುವ ಆರ್‌ಜಿವಿ ಇದೀಗ ವಿಶ್ವ ಅಮ್ಮಂದಿರ ದಿನದಂದು ವಿಶೇಷವಾಗಿ ವಿಶ್ ಮಾಡಿದ್ದಾರೆ. ತಾಯಂದಿರ ದಿನದ ಶುಭಾಶಯಗಳು ಅಮ್ಮಾ, ನಾನು ಮಗನಷ್ಟು ಒಳ್ಳೆಯವನಲ್ಲ. ಆದರೆ ನೀನು ತಾಯಿಗಿಂತ ಹೆಚ್ಚು ಒಳ್ಳೆಯವಳು ಎಂದು ಅಮ್ಮನ ಜತೆಯಿರೋ ಫೋಟೋ ಶೇರ್ ಮಾಡಿ, ಆರ್‌ಜಿವಿ ಟ್ವೀಟ್ ಮಾಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.