ಚಿಕ್ಕೋಡಿ: ಹಿಂದೂ ದೇವರಾದ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕೋಡಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಗ್ರಾಮದಲ್ಲಿ ರವೀಂದ್ರ ಹಾರೋಹಳ್ಳಿ ಅನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ
ಈ ಹಿಂದೆ ಚೇತನ್ ಹೊನ್ನಗೋಳ ಕೋರ್ಟ್‍ಗೆ ಹಾಜರಾಗಿದ್ದನು. ಆದರೆ 2019ರಿಂದ ಇದುವರೆಗೂ ರವೀಂದ್ರ ಕೋರ್ಟ್‍ಗೆ ಹಾಜರಾಗಿರಲಿಲ್ಲ. 2019 ರಿಂದಲು ಚಿಕ್ಕೋಡಿ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‍ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಮೊನ್ನೆ ಜಿಗ್ನೇಶ್ ಮೇವಾನಿ ಇಂದು ಹಾರೋಹಳ್ಳಿ ರವೀಂದ್ರ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಕಾರಣಕ್ಕಾಗಿ ದಲಿತ ಪರ ಹೋರಾಟಗಾರರ ಬಂಧನ ಆಗಿದೆ. ಹೋರಾಟಗಾರರು ಬರಹಗಾರರನ್ನು ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ನಡೆಯನ್ನು ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರನನ್ನ ಬಿಡುಗಡೆ ಮಾಡಬೇಕು ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ. ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಹಿಂದಿ ಹೇರಿಕೆ ವಿಚಾರವಾಗಿ ಅಮಿತ್ ಶಾ ಪರವಾಗಿ ಮಾತನಾಡಿದ ಬಿಜೆಪಿಗರಿಗೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ @BJP4India ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ. 1/12#HindiImposition
ಹಿಂದಿ ಭಾಷೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಬೆಂಬಲವಾಗಿ ನಿಂತ ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಹೇಳಿದ್ದಾರೆ.
ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು "ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು. 2/12#HindiImposition#Kannadiga
ಟ್ವೀಟ್‌ನಲ್ಲೇನಿದೆ?
ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.
ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ. 3/12#HindiImposition
ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ”… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ. 4/12#HindiImposition#Kannadiga
ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.
ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯಭಾಷೆಯೂ ನಮ್ಮ ರಾಷ್ಟ್ರಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ. 5/12#HindiImposition#Kannadiga
ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ ಮಾತೃಭಾಷೆಯೂ ಹೌದು, ಪರಿಸರದ ಭಾಷೆ ಕೂಡಾ.
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ. 6/12#HindiImposition#Kannadiga
ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರ ಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.
ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ @CTRavi_BJP, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ. 7/12#HindiImposition
ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.
ಕೇಂದ್ರ ಗೃಹ ಸಚಿವ @AmitShah ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ @BJP4Karnataka ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ. 8/12#HindiImposition
ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು, ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ. 9/12#HindiImposition#Kannadiga
ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು, ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ.
ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ. 10/12#HindiImposition
ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.
ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ @BJP4India ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ. 11/12#HindiImposition
ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.
ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ. 12/12#HindiImposition
ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.
ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು ‘ಸಾಂಸ್ಕೃತಿಕ ಭಯೋತ್ಪಾದನೆ’ ಎನ್ನದೆ ಬೇರೇನು ಹೇಳಲು ಸಾಧ್ಯ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಘಟನೆ ಕುರಿತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸರಪಂಚ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸರಪಂಚ್ ಫಯಾಜ್ ಅಹ್ಮದ್ ಭಟ್ ಅವರ ದುರದೃಷ್ಟಕರ ನಿಧನದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇವೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ
ನವದೆಹಲಿ: ಪ್ರಧಾನಿ ಮೋದಿಯವರ ಕೆಲ ನಿರ್ಧಾರಗಳಿಂದಾಗಿ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ ಎಂದು ಪ್ರದಾನಿ ಮೋದಿಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಒಂದು ದಿನದ ಹಿಂದೆ, ರಾಹುಲ್ ಗಾಂಧಿ ಅವರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ವಾಸ್ತವವಾಗಿ ‘ಸೆಂಟ್ರಲ್ ಬೋರ್ಡ್ ಆಫ್ ಸಪ್ರೆಸಿಂಗ್ ಎಜುಕೇಶನ್’ ಎಂದು ಹೇಳಿದರು. ಸಿಬಿಎಸ್‍ಸಿ ಬೋರ್ಡ್ 10 ಮತ್ತು 12 ನೇ ತರಗತಿಗಳ ಪಠ್ಯಕ್ರಮವನ್ನು ಮಾರ್ಪಡಿಸಿದ ಕೆಲವು ದಿನಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ಪಠ್ಯಕ್ರಮದ ಮಾರ್ಪಾಡಿನ ಕುರಿತು ಗಾಂಧಿ ವಂಶಸ್ಥರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಟ್ಟುಕೊಂಡು ಅದನ್ನು ‘ರಾಷ್ಟ್ರೀಯ ಶಿಕ್ಷಾ ಛೇದಕ’ ಎಂದು ಕರೆದರು. ಆಂಗ್ಲೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತಗಳು, ಶೀತಲ ಸಮರ ಮತ್ತು ಕೈಗಾರಿಕಾ ಕ್ರಾಂತಿಯನ್ನು 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಸಿಬಿಎಸ್‍ಸಿ ತೆಗೆದುಹಾಕಿದೆ. ಆದ್ದರಿಂದ ರಾಹುಲ್ ಗಾಂಧಿ ಸಿಬಿಎಸ್‍ಸಿ ವಿರುದ್ಧ ಸಿಡಿದಿದ್ದರು. ಇದನ್ನೂ ಓದಿ: ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ
ಎಪ್ರಿಲ್ 9 ರಂದು ದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನವನ್ನು ಉಳಿಸಲು ನಾವು ಆರ್‍ಎಸ್‍ಎಸ್ ಕೈಯಲ್ಲಿರುವ ಸಂಸ್ಥೆಗಳನ್ನು ರಕ್ಷಿಸಬೇಕು ಎಂದು ಹೇಳುವ ಮೂಲಕ ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವ ನಿತಿನ ಗಡ್ಕರಿ ಅವರು, ಸುರಕ್ಷತಾ ಮಾನದಂಡಗಳನ್ನು ಅಳವಡಿಕೊಳ್ಳುವಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕರು ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Several mishaps involving Electric Two Wheelers have come to light in last two months. It is most unfortunate that some people have lost their lives and several have been injured in these incidents.
ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ
We have constituted an Expert Committee to enquire into these incidents and make recommendations on remedial steps.
Based on the reports, we will issue necessary orders on the defaulting companies. We will soon issue quality-centric guidelines for Electric Vehicles.
ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಪರಿಹಾರ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲು ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. ವರದಿಗಳ ಆಧಾರದ ಮೇಲೆ, ನಾವು ಎಲೆಕ್ಟ್ರಿಕ್ ವಾಹನಗಳ ಕಂಪನಿಗಳ ಮೇಲೆ ಅಗತ್ಯ ಆದೇಶಗಳನ್ನು ನೀಡುತ್ತೇವೆ ಎಂದು ಹೇಳಿದರು.
ನಾವು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ-ಕೇಂದ್ರಿತ ಮಾರ್ಗಸೂಚಿಗಳನ್ನು ನೀಡುತ್ತೇವೆ. ಯಾವುದೇ ಕಂಪನಿಯು ತನ್ನ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುವುದು ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
If any company is found negligent in their processes, a heavy penalty will be imposed and a recall of all defective vehicles will also be ordered.
ಇದರ ಮಧ್ಯೆ ಎಲ್ಲಾ ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಮುಂಗಡ ಕ್ರಮವನ್ನು ತೆಗೆದುಕೊಳ್ಳಬಹುದು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್ – ಬ್ರಿಟನ್ ಪ್ರಧಾನಿ ಚಾಲನ
Meanwhile companies may take advance action to Recall all defective batches of vehicles immediately. Under the leadership of PM Shri @narendramodi ji, our government is committed to ensure safety of each and every commuter.
ಕಳೆದ ತಿಂಗಳು ಪುಣೆಯಲ್ಲಿ ರೈಡ್-ಹೇಲಿಂಗ್ ಆಪರೇಟರ್ ಓಲಾ ಅವರ ಎಲೆಕ್ಟ್ರಿಕ್ ಮೊಬಿಲಿಟಿ ಆರ್ಮ್ ಬಿಡುಗಡೆ ಮಾಡಿದ ಇ-ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು.
ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ಬೆಂಕಿ ಸ್ಫೋಟಕ ಮತ್ತು ಪರಿಸರ ಸುರಕ್ಷತೆ ಕೇಂದ್ರವನ್ನು ಕೇಳಲಾಗಿದೆ.
ಬೆಂಗಳೂರು: ‘ಹುಬ್ಬಳ್ಳಿ ವಿಚಾರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಘಟನೆಗಳಿಗೆ ಮೂಲ ಪ್ರಚೋದನೆ ಬಿಜೆಪಿಯವರ ಕುಮ್ಮಕ್ಕಿನಿಂದಾದ ಟ್ವೀಟ್. ಇದಕ್ಕೆ ಬಿಜೆಪಿಯವರೇ ಕಾರಣ. ಅದರ ಬಗ್ಗೆ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ನಮ್ಮ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದು, ಕೈ ಮುರಿದುಕೊಂಡು, ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಗಾಂಧೀಜಿ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದ ಬ್ರಿಟನ್ ಪ್ರಧಾನಿ
ಅವರು ತಮ್ಮ 40% ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ. ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ ಅಷ್ಟೇ ಎಂದು ಹೇಳಿದರು.
ನವದೆಹಲಿ: ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಿ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀಕ್ಷ್ಣವಾಗಿ ತಿವಿದಿದ್ದಾರೆ.
ಶಾಸಕ ಜಿಗ್ನೇಶ್ ಮೇವಾನಿ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ, ಈ ಕ್ರಮ ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಾಂವಿಧಾನಿಕ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನತೆಗೆ ಮಾಡಿದ ಅವಮಾನ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ಗುಜರಾತ್ MLA ಜಿಗ್ನೇಶ್ ಮೇವಾನಿ ಬಂಧನ
Modi ji, you can try to crush dissent by abusing the state machinery.
ಮೋದಿ ಜೀ, ನೀವು ರಾಜ್ಯ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನೀವು ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಯನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆಯಾಗಿದೆ. ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ. ಇಂತಹ ದಬ್ಬಾಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದನಿ ಎತ್ತಬೇಕು ಎಂದು ಟ್ವೀಟ್ ಮಾಡಿ ಕರೆ ನೀಡಿದ್ದಾರೆ. ಇದನ್ನೂ ಓದಿ: 5-12 ವರ್ಷದ ಮಕ್ಕಳಿಗೂ ಶೀಘ್ರದಲ್ಲಿ ವ್ಯಾಕ್ಸಿನ್?
ಅಸ್ಸಾಂ ಪೊಲೀಸರು ಮಧ್ಯರಾತ್ರಿ ಜಿಗ್ನೇಶ್ ಮೇವಾನಿ ಅವರನ್ನು ಕಾನೂನುಬಾಹಿರ ಮತ್ತು ಅಸಂವಿಧಾನಿಕವಾಗಿ ಬಂಧಿಸಿರುವುದು ಬಿಜೆಪಿಯ ಅಧಿಕಾರ ದಬ್ಬಾಳಿಕೆಯ ಇತ್ತೀಚಿನ ಪುರಾವೆಯಾಗಿದೆ. ಜನಪ್ರತಿನಿಧಿಯ ಟೀಕೆಗಳ ಭಯಕ್ಕೆ ಬಂಧಿಸಲಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೂ ದಾಳಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಗುಜರಾತ್‍ನ ಪಾಲನ್‍ಪುರದ ಸರ್ಕ್ಯೂಟ್ ಹೌಸ್‍ನಿಂದ ಬಂಧಿಸಿದ್ದಾರೆ.
ಬೆಂಗಳೂರು: ಅರ್ಥಹೀನ ಹೇಳಿಕೆಗಳಿಂದಲೇ ಅಪಖ್ಯಾತಿ ಗಳಿಸಿರುವ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಹಣದುಬ್ಬರದ ಬಗ್ಗೆ ಅರ್ಥಹೀನ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ.
ವಾಷಿಂಗ್ಟನ್‍ನ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್ ಅವರು, ಜಾಗತಿಕ ಮಟ್ಟದಲ್ಲಿ ಸವಾಲುಗಳಿವೆ. ಭಾರತದಲ್ಲಿ ಹಣದುಬ್ಬರ ದರವು ಮಾರ್ಚ್‍ನಲ್ಲಿ ಸೇ.6.9 ರಷ್ಟಿದೆ. ಹಣದುಬ್ಬರವು ಗರಿಷ್ಠ ಸೇ 6ರವರೆಗೆ ತಲುಪಲು ಅವಕಾಶವಿದೆ. ಆ ಗಡಿಯನ್ನು ನಾವು ದಾಟಿದ್ದೇವೆ. ಆದರೆ ಹಣದುಬ್ಬರದ ಈ ಏರಿಕೆ ಅತಿಯಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ
ಇದೀಗ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಅರ್ಥಹೀನ ಹೇಳಿಕೆಗಳಿಂದಲೇ ಅಪಖ್ಯಾತಿ ಗಳಿಸಿರುವ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್, ಈಗ ಹಣದುಬ್ಬರದ ಬಗ್ಗೆ ಮತ್ತೊಮ್ಮೆ ಅರ್ಥಹೀನ ಮಾತನಾಡಿದ್ದಾರೆ. ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಟ ಮಟ್ಟ 6.9 ಕ್ಕೆ ತಲುಪಿದೆ. ಸಗಟು ಹಣದುಬ್ಬರ ದರ 4 ತಿಂಗಳ ಗರಿಷ್ಠ ಮಟ್ಟ ಶೇ 14.55ಕ್ಕೆ ತಲುಪಿದೆ. ಇಷ್ಟಾದರೂ ಹಣದುಬ್ಬರ ಅತಿಯಾಗಿ ಏರಿಕೆಯಾಗಿಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿದ್ದಾರೆ.
ಏರುತ್ತಿರುವ ಸಗಟು ಹಣದುಬ್ಬರ ಭವಿಷ್ಯದಲ್ಲಿ ಚಿಲ್ಲರೆ ಹಣದುಬ್ಬರದ ಮೇಲೂ ನೇರ ಪರಿಣಾಮ ಬೀರಲಿದೆ. ಈಗಾಗಲೇ ಬೆಲೆಯೇರಿಕೆಯಿಂದ ಜನಸಾಮಾನ್ಯ ತತ್ತರಿಸಿದ್ದಾನೆ. ಹಣದುಬ್ಬರ ಹೀಗೆ ಏರುತ್ತಿದ್ದರೆ ಜನರ ಬದುಕು ಏನಾಗಬೇಕು? ಹಣದುಬ್ಬರದ ಬಗ್ಗೆ ಆರ್ಥಿಕ ತಜ್ಞರ ಆತಂಕ ಭಾರತದ ಮಟ್ಟಿಗೆ ಎಚ್ಚರಿಕೆಯ ಕರೆಗಂಟೆ. ಅರ್ಥ ಸಚಿವರು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.
ಹಣದುಬ್ಬರ ನಿಯಂತ್ರಿಸಲು ಸ್ವತಃ RBI ಕೂಡ ಹೆಣಗಾಡುತ್ತಿದೆ. ಹೀಗಿರುವಾಗ ನಿರ್ಮಲಾ ಸೀತಾರಾಮನ್ ಅವಾಸ್ತವಿಕ ಅಂಕಿ ಅಂಶಗಳ ಮೂಲಕ ದೇಶದ ದಾರಿ ತಪ್ಪಿಸಬಾರದು. ಬಹುಶಃ ಅರ್ಥಸಚಿವರಿಗೆ ಹಣಕಾಸು ಇಲಾಖೆಯ ಮಹತ್ವವೇ ಗೊತ್ತಿಲ್ಲ. ಆರ್ಥಿಕ ನಿರ್ವಹಣೆ ಪೂರ್ವಾಶ್ರಮದಲ್ಲಿ TV ಡಿಬೇಟ್‍ಗಳ ಪ್ಯಾನೆಲಿಸ್ಟ್ ಆಗಿ ಕೂಗಿದಷ್ಟು ಸರಳವಲ್ಲ ಎಂದು ಸಚಿವೆ ತಿಳಿದುಕೊಳ್ಳಲಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಹಾಕಿದ್ದ ಕಿಡಿಗೇಡಿಗಳು
3
ಹಣದುಬ್ಬರ ನಿಯಂತ್ರಿಸಲು @RBI ಕೂಡ ಹೆಣಗಾಡುತ್ತಿದೆ.
ಹೀಗಿರುವಾಗ @nsitharaman ಅವಾಸ್ತವಿಕ ಅಂಕಿ ಅಂಶಗಳ ಮೂಲಕ ದೇಶದ ದಾರಿ ತಪ್ಪಿಸಬಾರದು.
ಬಹುಶಃ ಅರ್ಥಸಚಿವರಿಗೆ ಹಣಕಾಸು ಇಲಾಖೆಯ ಮಹತ್ವವೇ ಗೊತ್ತಿಲ್ಲ.
ಆರ್ಥಿಕ ನಿರ್ವಹಣೆ ಪೂರ್ವಾಶ್ರಮದಲ್ಲಿ TV ಡಿಬೇಟ್‍ಗಳ ಪ್ಯಾನೆಲಿಸ್ಟ್ ಆಗಿ ಕೂಗಿದಷ್ಟು ಸರಳವಲ್ಲ ಎಂದು ಸಚಿವೆ ತಿಳಿದುಕೊಳ್ಳಲಿ
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 21, 2022
ಬೆಂಗಳೂರು: ದಿವ್ಯಾ ಹಾಗರಗಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆ ಮತ್ತು ಮುಖಂಡರಾಗಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜೊತೆ ಇಡೀ ಸರ್ಕಾರವೇ ಶಾಮೀಲಾಗಿ ದಂಧೆ ನಡೆಸಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ.
1 ಅಕ್ರಮ 545 PSI ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ @BJP4Karnataka ಯವರಿಗೆ ಕೆಲ ಪ್ರಶ್ನೆಗಳು. 1) ದಿವ್ಯಾ ಹಾಗರಗಿ ಕುಟುಂಬಕ್ಕೂ @JnanendraAraga ರ ನಡುವೆ ಇರುವ ಲಿಂಕ್ ಏನು? 2) ದಿವ್ಯಾ ನಿವಾಸಕ್ಕೆ ಗೃಹ ಸಚಿವರು ಯಾವ ಡೀಲ್ ಕುದುರಿಸಲು ಭೇಟಿ ಕೊಟ್ಟಿದ್ದರು? pic.twitter.com/Gh2nAa5tAv
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 20, 2022
PSI ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜೊತೆ ಇಡೀ ಸರ್ಕಾರವೇ ಶಾಮೀಲಾಗಿ ದಂಧೆ ನಡೆಸಿದೆ.
ಈಗ ದಿವ್ಯಾ ಹಾಗರಗಿಗೂ ನಮಗೂ ಸಂಬಂಧವಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡರೆ ಯಾರದರೂ ನಂಬಲು ಸಾಧ್ಯವೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 20, 2022
ಟ್ವೀಟ್‌ನಲ್ಲೇನಿದೆ?
545 ಪಿಎಸ್‌ಐ ಅಕ್ರಮ ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಕೆಲ ಪ್ರಶ್ನೆಗಳು. ದಿವ್ಯಾ ಹಾಗರಗಿ ಕುಟುಂಬಕ್ಕೂ ಆರಗ ಜ್ಞಾನೇಂದ್ರ ಅವರ ನಡುವೆ ಇರುವ ಲಿಂಕ್ ಏನು? ದಿವ್ಯಾ ನಿವಾಸಕ್ಕೆ ಗೃಹ ಸಚಿವರು ಯಾವ ಡೀಲ್ ಕುದುರಿಸಲು ಭೇಟಿ ಕೊಟ್ಟಿದ್ದರು?
2 3) PSI ನೇಮಕಾತಿಯ 200 ಕೋಟಿ ಲಂಚದಲ್ಲಿ ದಿವ್ಯಾ ಹಾಗರಗಿಯಿಂದ ಗೃಹ ಸಚಿವರಿಗೆ ಬಂದ ಪಾಲೆಷ್ಟು? 4) ಲಂಚದ ಹಣದಲ್ಲೂ ಈ ಸರ್ಕಾರಕ್ಕೆ 40 ಪರ್ಸೆಂಟ್ ಪಾಲು ಸಿಕ್ಕಿದೆಯೇ ಅಥವಾ ಡಿಸ್ಕೌಂಟ್ ಸಿಕ್ಕಿದೆಯೇ? 5) ದಿವ್ಯಾ #BJP ಯವರಲ್ಲದಿದ್ದರೆ @BSYBJP ರವರು CM ಆಗಿದ್ದಾಗ ದಿವ್ಯಾರನ್ನು ನರ್ಸಿಂಗ್ ಕೌನ್ಸಿಲ್ ಸದಸ್ಯರಾನ್ನಾಗಿ ಮಾಡಿದ್ದು ಯಾಕೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 20, 2022
PSI ನೇಮಕಾತಿಯ 200 ಕೋಟಿ ಲಂಚದಲ್ಲಿ ದಿವ್ಯಾ ಹಾಗರಗಿಯಿಂದ ಗೃಹ ಸಚಿವರಿಗೆ ಬಂದ ಪಾಲೆಷ್ಟು? ಲಂಚದ ಹಣದಲ್ಲೂ ಈ ಸರ್ಕಾರಕ್ಕೆ 40 ಪರ್ಸೆಂಟ್ ಪಾಲು ಸಿಕ್ಕಿದೆಯೇ ಅಥವಾ ಡಿಸ್ಕೌಂಟ್ ಸಿಕ್ಕಿದೆಯೇ? ದಿವ್ಯಾ, ಬಿಜೆಪಿಯವರಲ್ಲದಿದ್ದರೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ದಿವ್ಯಾರನ್ನು ನರ್ಸಿಂಗ್ ಕೌನ್ಸಿಲ್ ಸದಸ್ಯರಾನ್ನಾಗಿ ಮಾಡಿದ್ದು ಯಾಕೆ ಎಂದು ಟ್ವಿಟ್ಟರ್‌ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ. ಇದನ್ನೂ ಓದಿ: ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್
ನವದೆಹಲಿ: ಬನಾಸ್ ಡೈರಿಯಲ್ಲಿನ ಉಪಕ್ರಮಗಳು ರೈತರನ್ನು ಸಬಲಗೊಳಿಸುತ್ತದೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಇಂದು ಗುಜರಾತ್‍ನ ಬನಸ್ಕಾಂತದಲ್ಲಿರುವ ಬನಾಸ್ ಡೈರಿ ಸಂಕುಲ್‍ನಲ್ಲಿ ಅತ್ಯಾಧುನಿಕ ಡೈರಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ಸ್ಥಳೀಯ ಸಮುದಾಯಗಳನ್ನು ಸಬಲೀಕರಣಗೊಳಿಸುವ ಕೇಂದ್ರವಾಗಿದೆ. ಬನಾಸ್ ಡೈರಿಯಲ್ಲಿನ ಅಭಿವೃದ್ಧಿ ಉಪಕ್ರಮಗಳು ರೈತರನ್ನು ಸಬಲೀಕರಣಗೊಳಿಸುತ್ತದೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ. ಆತ್ಮನಿರ್ಭರ ಭಾರತ್ ಅಭಿಯಾನಕ್ಕೆ ಸಹಕಾರಿ ಚಳುವಳಿ ಹೇಗೆ ಶಕ್ತಿ ನೀಡುತ್ತದೆ ಎಂಬುದನ್ನು ನಾವು ಇಲ್ಲಿ ಅನುಭವಿಸಬಹುದು ಎಂದು ಡೈರಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
I am delighted to be visiting @banasdairy1969 yet again. I had last visited the Dairy in 2016. That time a series of products of the Dairy were launched. I had also visited the Dairy in 2013. Here are glimpses from both programmes. pic.twitter.com/J8xlTPHT6e
ಪ್ರಧಾನಮಂತ್ರಿಯವರು ಇಂದು ಬನಸ್ಕಾಂತದಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗುಜರಾತಿನ ಅಭಿವೃದ್ಧಿಯ ಮಟ್ಟವು ಪ್ರತಿ ಗುಜರಾತಿಯನ್ನು ಹೆಮ್ಮೆಪಡುವಂತೆ ಮಾಡುತ್ತದೆ. ನಾನು ನಿನ್ನೆ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದೆ, ಅಲ್ಲಿ ತಂತ್ರಜ್ಞಾನದ ಬಳಕೆ ಪ್ರಭಾವಶಾಲಿಯಾಗಿದೆ. ಇತರ ರಾಜ್ಯಗಳ ಶಿಕ್ಷಣ ಇಲಾಖೆಗಳು ಈ ಕೇಂದ್ರಕ್ಕೆ ಭೇಟಿ ನೀಡುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
Gujarat | PM Narendra Modi today inaugurated and visited the new dairy complex and potato processing plant at Diyodar, Banaskantha district, built at a cost of over Rs 600 crores pic.twitter.com/7DzeFjiZn0
ಸಾಮಾಜಿಕ ಜಾಲತಾಣದಲ್ಲಿ ಅವರು ಈ ಹಿಂದೆ 2016ರಲ್ಲಿ ಡೈರಿಗೆ ಭೇಟಿ ನೀಡಿದ್ದ ಫೋಟೋವನ್ನು ಹಂಚಿಕೊಂಡಿದ್ದಾರೆ. ಬನಾಸ್ ಡೈರಿಗೆ ಮತ್ತೊಮ್ಮೆ ಭೇಟಿ ನೀಡುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು 2016ರಲ್ಲಿ ಕೊನೆಯದಾಗಿ ಡೈರಿಗೆ ಭೇಟಿ ನೀಡಿದ್ದೇನೆ. ಆ ಸಮಯದಲ್ಲಿ ಡೈರಿಯ ಉತ್ಪನ್ನಗಳನ್ನು ಪ್ರಾರಂಭಿಸಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
Sharing some glimpses from my visit to the Vidya Samiksha Kendra in Gandhinagar. It is commendable how technology is being leveraged to ensure a more vibrant education sector in Gujarat. This will tremendously benefit the youth of Gujarat. pic.twitter.com/ezRueOdfjq
ಬನಸ್ಕಾಂತದ ಜನರ ಕಠಿಣ ಪರಿಶ್ರಮ ಮತ್ತು ಸಹಿಷ್ಣುತೆಯ ಮನೋಭಾವಕ್ಕಾಗಿ ನಾನು ಶ್ಲಾಘಿಸಲು ಬಯಸುತ್ತೇನೆ. ಈ ಜಿಲ್ಲೆಯ ಕೃಷಿಯಲ್ಲಿ ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದಾರೆ. ನೀರಿನ ಸಂರಕ್ಷಣೆಯತ್ತ ಗಮನಹರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.