Tag: tweet

  • ಹಿಜಬ್‌ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ: ಬಿಜೆಪಿ ಪ್ರಶ್ನೆ

    ಹಿಜಬ್‌ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ: ಬಿಜೆಪಿ ಪ್ರಶ್ನೆ

    ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಿರುವ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಖಡಕ್‌ ಸೂಚನೆ ನೀಡಿದ್ದರೂ, ಕಾಂಗ್ರೆಸ್‌ ನಾಯಕರು ಹಿಜಬ್‌ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ ಎಂದು ಬಿಜೆಪಿ ಲೇವಡಿ ಮಾಡಿದೆ. ಇದನ್ನೂ ಓದಿ: ಹಿಜಬ್ ಹೈಡ್ರಾಮಾ ನೋಡಿ ಕೇಸರಿ ಶಾಲು ತೆಗೆದ ವಿದ್ಯಾರ್ಥಿ

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ಹಿಜಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಹಿಜಬ್ ಬಗ್ಗೆ ಯಾರೂ ಮಾತನಾಡಬಾರದು ಎಂಬ ಡಿ.ಕೆ.ಶಿವಕುಮಾರ್‌ ಆದೇಶಕ್ಕೆ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಅಸಮರ್ಥ ರಾಜ್ಯಾಧ್ಯಕ್ಷ ಡಿಕೆಶಿ ಅವರೀಗ ಹತಾಶೆಗೆ ಬಿದ್ದಿದ್ದಾರೆ.

    ಹಿಜಾಬ್ ಬಗ್ಗೆ ಮಾತನಾಡಬಾರದು ಎಂದು ಜಮೀರ್ ಅವರಿಗೆ ಡಿಕೆಶಿ ಕಟ್ಟಪ್ಪಣೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರು ಪಕ್ಷದ ವೇದಿಕೆಯಲ್ಲೇ ಹಿಜಾಬ್ ಸಭೆ ಕರೆದಿದ್ದಾರೆ. ಅದಕ್ಕೆ ಜಮೀರ್ ಅವರನ್ನೂ ಆಹ್ವಾನಿಸಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ ಎಂದು ಬಿಜೆಪಿ ಟ್ವೀಟ್‌ ಮಾಡಿ ಪ್ರಶ್ನಿಸಿದೆ. ಇದನ್ನೂ ಓದಿ: ಹಿಜಬ್ ವಿವಾದದ ನಡುವೆಯೇ ಮಾದರಿಯಾದ ಮುಸ್ಲಿಂ ಶಿಕ್ಷಣ ಸಂಸ್ಥೆ

    ಹಿಜಬ್‌ ವಿಚಾರವಾಗಿ ಉಡುಪಿ ಕಾಲೇಜೊಂದರಲ್ಲಿ ಹಿಜಬ್‌ ವಿವಾದ ಶುರುವಾಯಿತು. ಹಿಜಬ್‌ ವಿರೋಧಿಸಿ ವಿದ್ಯಾರ್ಥಿಗಳ ಗುಂಪು ಕೇಸರಿ ಶಾಲು ಧರಿಸಿದ್ದು, ವಿವಾದ ಹೋರಾಟದ ಸ್ವರೂಪ ಪಡೆಯಿತು. ಸದ್ಯ ಹಿಜಬ್‌ ವಿವಾದ ಹೈಕೋರ್ಟ್‌ ವಿಚಾರಣೆಯಲ್ಲಿದೆ. ಆದರೆ ಇಡೀ ವಿಶ್ವದಾದ್ಯಂತ ಹಿಜಬ್‌ ಹೋರಾಟ ಸದ್ದು ಮಾಡಿದೆ.

  • ಹಿಜಬ್-ಕೇಸರಿ ಶಾಲು ಗಲಭೆಗೆ ಬಿಜೆಪಿ ಸರ್ಕಾರವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

    ಹಿಜಬ್-ಕೇಸರಿ ಶಾಲು ಗಲಭೆಗೆ ಬಿಜೆಪಿ ಸರ್ಕಾರವೇ ಕಾರಣ: ಪ್ರಿಯಾಂಕ್ ಖರ್ಗೆ ಆರೋಪ

    ಕಲಬುರಗಿ: ಹಿಜಬ್ ಕೇಸರಿ ಶಾಲು ವಿಚಾರವಾಗಿ ರಾಜ್ಯದ ಕಾಲೇಜುಗಳಲ್ಲಿನ ವಾತಾವರಣ ಪ್ರಕ್ಷುಬ್ಧವಾಗಿದ್ದು ಇದಕ್ಕೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

    ಟ್ವೀಟ್ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಹಲವಾರು ದಿನಗಳಿಂದ ವಿವಾದವಿದ್ದರೂ, ಬಗೆಹರಿಸಲು ಅವಕಾಶವಿದ್ದರೂ ಸರ್ಕಾರ ಬೆಳೆಯಲು ಬಿಟ್ಟಿದೆ. ರಾಜ್ಯಾದ್ಯಂತ ಗಲಭೆಯಾಗುತ್ತದೆ ಎಂದು ನಿಮಗೆ ತಿಳಿದಿರಲಿಲ್ಲವೇ? ಶಾಲು ಹಂಚುವವರನ್ನು, ಪ್ರತಿಭಟನೆ ಸಂಘಟಿಸುವವರನ್ನು ನಿಯಂತ್ರಿಸಲು ಬಿಟ್ಟಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶಾಲೆಗಳು ಧರ್ಮ ಪ್ರದರ್ಶನದ ಸ್ಥಳವಲ್ಲ, ಭಾರತೀಯರೆಂಬ ಒಗ್ಗಟ್ಟನ್ನು ಪ್ರದರ್ಶಿಸಿ: ಖುಷ್ಬೂ

    ಟ್ವಿಟ್ಟರ್‍ನಲ್ಲೇನಿದೆ?
    ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಬೇಕಾದಲ್ಲಿ ಕೇಸರಿ ಧ್ವಜ ಹಾರಿಸಲಾಯ್ತು. ಸಾಗರದಲ್ಲಿ ಶಾಸಕರ ಎದುರೇ ಹಲ್ಲೆ ಘರ್ಷಣೆ ನಡೆಯಿತು. ಕುಶಾಲನಗರದಲ್ಲಿ ಕೇಸರಿ ಶಾಲು ಧರಿಸಲು ಒಪ್ಪದ ವಿದ್ಯಾರ್ಥಿಗೆ ಚೂರಿ ಇರಿಯಲಾಯ್ತು. ಪ್ರಾಧ್ಯಾಪಕರು, ಪೆÇಲೀಸರ ಮೇಲೆಯೇ ಹಲ್ಲೆಗಳು ನಡೆದವು. ಇದನ್ನೂ ಓದಿ: ಹಿಜಬ್ ವಿವಾದದಲ್ಲಿ ತಪ್ಪು ಮಾಡಿದವರನ್ನು ಬಂಧಿಸಲಿ: ತಂಗಡಗಿ

    ರಾಜ್ಯದ ಯುವಜನತೆಗೆ ಉದ್ಯೋಗ ದೊರಕಿಸಿಕೊಡಬೇಕಾದ ಸರ್ಕಾರ ಶಿಕ್ಷಣವನ್ನು ವಂಚಿಸುತ್ತಿದೆ. ಕೌಶಲ್ಯ ತರಬೇತಿ ನೀಡಬೇಕಾದ ಸರ್ಕಾರ ಕೇಸರಿ ಶಲ್ಯದ ತರಬೇತಿ ನೀಡುತ್ತಿದೆ. ಪುಸ್ತಕ ಕೊಡಬೇಕಾದ ಸರ್ಕಾರ ಕೈಯಲ್ಲಿ ಕಲ್ಲು ಕೋಲು ಕೊಟ್ಟು ಕಳಿಸುತ್ತಿದೆ. ವಿದ್ಯಾಧೀಕ್ಷೆ ಬದಲು ತ್ರಿಶೂಲ ದೀಕ್ಷೆಗೆ ಪ್ರೇರೇಪಿಸುತ್ತಿದೆ.

    ರಾಜ್ಯದ ಓದುವ ಮಕ್ಕಳು ತಮ್ಮ ಭವಿಷ್ಯದ ಚಿಂತನೆ ಏಕೈಕ ಗುರಿಯೊಂದಿಗೆ ಓದುತ್ತಿದ್ದರು. ಬೇಧ ಭಾವ ಅರಿಯದೆ ಆಟ ಪಾಠಗಳಲ್ಲಿ ಒಂದಾಗುತ್ತಿದ್ದರು. ರಾಜಕೀಯ ಹಾಗೂ ಧಾರ್ಮಿಕ ಪ್ರಲೋಭನೆಗೆ ಸಿಲುಕದೆ ನಿಷ್ಕಲ್ಮಶ ಮನಸ್ಸು ಹೊಂದಿದ್ದರು. ಇಂತಹ ಮನಸ್ಸುಗಳಲ್ಲಿ ಈಗ ಏಕಾಏಕಿ ದ್ವೇಷದ ಕಿಚ್ಚು ಹಚ್ಚಲು ಬಿಜೆಪಿ ಅತ್ಯಂತ ಕೀಳುಮಟ್ಟಕ್ಕೆ ಇಳಿದಿದೆ. ಇದನ್ನೂ ಓದಿ:  ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

    ಸಮಾಜವಾದದ ನೆಲದಲ್ಲಿ ರಾಜ್ಯವೇ ತಲೆ ತಗ್ಗಿಸುವ ಘಟನೆಗಳು ನಡೆದಿವೆ. ನಿಮ್ಮದೇ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗದಿರುವುದು ನಿಮ್ಮ ಅಸಾಮಾಥ್ರ್ಯವೇ ಅಥವಾ ನಿಮ್ಮ ಕುಮ್ಮಕ್ಕು ಇದೆಯೇ? ನೀವು ಜಪಿಸುವ ಯುಪಿ ಮಾಡೆಲ್‍ಅನ್ನು ಜಾರಿಗೊಳಿಸಿ ಕರ್ನಾಟಕವನ್ನು ಬೆಂಕಿಯಲ್ಲಿ ಬೇಯಿಸುವ ಇರಾದೆಯೇ ಎಂದು ಪ್ರಶ್ನಿಸಿದ್ದಾರೆ.

  • ಕಾಂಗ್ರೆಸ್‌ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿದ್ದು, ಸಿಧು ಸಾಕು: ಬಿಜೆಪಿ ವ್ಯಂಗ್ಯ

    ಕಾಂಗ್ರೆಸ್‌ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿದ್ದು, ಸಿಧು ಸಾಕು: ಬಿಜೆಪಿ ವ್ಯಂಗ್ಯ

    ಬೆಂಗಳೂರು: ಕರ್ನಾಟಕ ಹಾಗೂ ಪಂಜಾಬ್‌ನಲ್ಲಿ ಕಾಂಗ್ರೆಸ್‌ ನಾಯಕರು ಶೀತಲ ಸಮರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ರಾಜ್ಯ ಬಿಜೆಪಿ, ಸಿದ್ದರಾಮಯ್ಯ ಮತ್ತು ನವಜೋತ್‌ ಸಿಂಗ್‌ ಸಿಧು ವಿರುದ್ಧ ಹರಿಹಾಯ್ದಿದೆ.

    ಪಂಜಾಬ್‌ನಲ್ಲಿ ಚುಣಾವಣೆಗೆ ದಿನಗಣನೆ ಆರಂಭವಾದರೂ ಬಂಡಾಯ ಶಮನವಾಗಿಲ್ಲ. ಅಲ್ಲಿ ಸಿಧು, ಇಲ್ಲಿ ಸಿದ್ದು. ಕಾಂಗ್ರೆಸ್‌ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು ಎಂದು ಟ್ವೀಟ್‌ ಮಾಡಿ ಬಿಜೆಪಿ ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: Punjab Election: ಚನ್ನಿ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ – ರಾಹುಲ್‌ ಗಾಂಧಿ ಅಧಿಕೃತ ಘೋಷಣೆ

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ತೇಪೆ ಹಚ್ಚಲು ರಾಹುಲ್ ಗಾಂಧಿ ಅವರು ತಮ್ಮ ಆಪ್ತ ಸಲಹೆಗಾರರನ್ನೇ ಸಿದ್ದರಾಮಯ್ಯ ನಿವಾಸಕ್ಕೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ತೀವ್ರ “ನಿಗಾ” ಘಟಕ ಸೇರುವಂತಾಗಿದೆಯೇ?

    ಒಂದೆಡೆ ಅಧ್ಯಕ್ಷರು ಹಿಜಬ್ ಬಗ್ಗೆ ಪಕ್ಷದವರಿಗೆ ಎಲ್ಲಿಯೂ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಅಧ್ಯಕ್ಷರ ಮಾತನ್ನು ಧಿಕ್ಕರಿಸಿ ಹಿಜಬ್ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಮಾನ್ಯ ಕೆಪಿಸಿಸಿ ಅಧ್ಯಕ್ಷರೇ, ಮುಂದಿನ ನೋಟಿಸ್ ಸಿದ್ದರಾಮಯ್ಯ ಹೆಸರಿಗೆ ಕಳುಹಿಸುತ್ತೀರಾ? ಇದನ್ನೂ ಓದಿ: ಸಿದ್ದರಾಮಯ್ಯರ ಮುತ್ಸದ್ಧಿತನ ಮಸುಕಾಗಿ ತಾಲಿಬಾನ್ ಭೂತ ಹೊಕ್ಕಿದೆ: ಸಿ.ಟಿ. ರವಿ

    ಕಾಂಗ್ರೆಸ್ ಪಕ್ಷಕ್ಕೆ ಪಂಚರಾಜ್ಯಗಳ ಚುನಾವಣೆ ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

  • ಆರು ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

    ಆರು ತಿಂಗಳ ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆರು ತಿಂಗಳ ಆಡಳಿತವನ್ನು ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. ಇದರ ಮಧ್ಯೆಯೇ ಬೊಮ್ಮಾಯಿ ಅವರ ಆರು ತಿಂಗಳ ಸರ್ಕಾರಕ್ಕೆ 6 ಕಾಂಗ್ರೆಸ್‌ ಆರು ಪ್ರಶ್ನೆಗಳನ್ನು ಕೇಳಿ ಕುಟುಕಿದೆ.

    ಕಾಂಗ್ರೆಸ್‌ ಟ್ವೀಟ್‌ನಲ್ಲೇನಿದೆ?
    ನೋಟ್ ಬ್ಯಾನ್ ಹಾಗೂ ಗಬ್ಬರ್ ಸಿಂಗ್ ಟ್ಯಾಕ್ಸ್‌ಗಳಿಂದಾಗಿ ಶುರುವಾದ ನಿರುದ್ಯೋಗ ಸಮಸ್ಯೆ ಲಾಕ್‌ಡೌನ್‌ ನಂತರ ಉತ್ತುಂಗಕ್ಕೇರಿದೆ. ಸಿಎಂ ಆಗಿ ಅರ್ಧ ವರ್ಷ ಅಧಿಕಾರ ಪೂರೈಸಿದ ಬೊಮ್ಮಾಯಿ ಅವರೇ, ಉದ್ಯೋಗ ಸೃಷ್ಟಿಗೆ ತಾವು ಕೈಗೊಂಡ ಕ್ರಮಗಳೇನು? ರೂಪಿಸಿದ ಯೋಜನೆಗಳೇನು? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ?

    ಮುಖ್ಯಮಂತ್ರಿಯಾಗಿ ಹಣಕಾಸು ಖಾತೆಯನ್ನು ಖಾತೆಯನ್ನು ನಿಭಾಯಿಸುತ್ತಿರುವ ಬೊಮ್ಮಾಯಿ ಅವರೇ, ತಮ್ಮ ಅಧಿಕಾರದ 6 ತಿಂಗಳಲ್ಲಿ ಹಾಗೂ ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಕೇಂದ್ರದಿಂದ ಯಾವ್ಯಾವ ಯೋಜನೆಗೆ ಎಷ್ಟು ಅನುದಾನ ತಂದಿದ್ದೀರಿ? GST ಬಾಕಿ, ನೆರೆ ಪರಿಹಾರ ಸೇರಿದಂತೆ ಎಷ್ಟು ನೆರವನ್ನು ತಂದಿದ್ದೀರಿ?

    ಬಿಬಿಎಂಪಿಯಲ್ಲಿ ಭ್ರಷ್ಟಾಚಾರ, ಬಿಡಿಎಯಲ್ಲಿ ಭ್ರಷ್ಟಾಚಾರ, ನೇಮಕಾತಿಯಲ್ಲಿ ಭ್ರಷ್ಟಾಚಾರ, ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗುತ್ತಿಗೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ. ಈ ಸರ್ಕಾರದಲ್ಲಿ ಎಲ್ಲೆಲ್ಲೂ ಭ್ರಷ್ಟಾಚಾರವೇ. ಬೊಮ್ಮಾಯಿ ಅವರೇ, ಈ 6 ತಿಂಗಳಲ್ಲಿ ಭ್ರಷ್ಟಾಚಾರ ನಿಗ್ರಹಕ್ಕೆ ಕೈಗೊಂಡ ಕ್ರಮಗಳೇನು?

    ಸಿಗದ ನೆರೆ ಪರಿಹಾರ, ದೊರಕದ ಕರೋನಾ ಪರಿಹಾರ, ಕುಂಟುವ ಅಡಳಿತಯಂತ್ರ, ಇಲ್ಲದ ವಸತಿ ಯೋಜನೆಗಳು. ಜನರ ಸಮಸ್ಯೆ ಹಲವಾರಿದ್ದರೂ ಒಂದೇ ಒಂದು ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲವೇಕೆ? ಉಪಯೋಗವಿಲ್ಲದ ದೆಹಲಿ ದರ್ಶನಕ್ಕೆ ಹೋಗುವ ತಮಗೆ ಜನತಾದರ್ಶನಕ್ಕೆ ಸಮಯವಿರಲಿಲ್ಲವೇ?

    ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಬೊಮ್ಮಾಯಿ ಅವರು, ರಾಜ್ಯದ ಹಣಕಾಸು ಸ್ಥಿತಿಯನ್ನು ವೃದ್ಧಿಸುವಲ್ಲಿ ಕೈಗೊಂಡ ಕ್ರಮಗಳೇನು? ಆರ್ಥಿಕ ಶಿಸ್ತು ಕಾಪಾಡಲು ರೂಪಿಸಿದ ಯೋಜನೆಗಳೇನು? ತೆರಿಗೆ ಪಾಲು, ಅನುದಾನ, ಪರಿಹಾರ ಮುಂತಾದವುಗಳನ್ನು ಕೇಂದ್ರದಿಂದ ತರುವಲ್ಲಿ ಮಾಡಿದ ಪ್ರಯತ್ನಗಳೇನು?

    ಬೊಮ್ಮಾಯಿ ಅವರೇ, ನಿಮ್ಮ ಸರ್ಕಾರಕ್ಕೆ 6 ತಿಂಗಳಗಿದೆ, ನಿಮ್ಮ ಸಚಿವರ ಕೆಲಸಗಳ ಬಗ್ಗೆ ನಿಮಗೆ ತೃಪ್ತಿ ಇದೆಯೇ? ಅಸಮಾಧಾನದಿಂದ ಒಲ್ಲದ ಖಾತೆ ನಿಭಾಯಿಸುತ್ತಿರುವವರು, ಉಸ್ತುವಾರಿಗಾಗಿ ಕಿತ್ತಾಡುವವರು, ತಮ್ಮದೇ ಶಾಸಕರೊಂದಿಗೆ ಮುನಿಸಿಟ್ಟುಕೊಂಡ ಸಚಿವರುಗಳು ನಿಮ್ಮಲ್ಲಿದ್ದಾರೆ, ಅವರ ಕೆಲಸಗಳ ಬಗ್ಗೆ ಸಮಾಧಾನವಿದೆಯೇ ಎಂದು 6 ತಿಂಗಳು ಪೂರೈಸಿರುವ ಬೊಮ್ಮಾಯಿ ಸರ್ಕಾರಕ್ಕೆ 6 ಪ್ರಶ್ನೆಗಳನ್ನು ಕೇಳುವ ಮೂಲಕ ಕಾಂಗ್ರೆಸ್‌ ಚಾಟಿ ಬೀಸಿದೆ.

  • ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ: ಮತ್ತೆ ಗುಡುಗಿದ ಹೆಚ್‌ಡಿಕೆ

    ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ: ಮತ್ತೆ ಗುಡುಗಿದ ಹೆಚ್‌ಡಿಕೆ

    ಬೆಂಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮಾಜಿ ಮುಖ್ಯಮಂತ್ರಿಗಳ ನಡುವಿನ ವಾಕ್ಸಮರ ಮುಂದುವರಿದಿದೆ. ಸಿದ್ದರಾಮಯ್ಯ ವಿರುದ್ಧ ಟ್ವೀಟ್‌ ಮೂಲಕ ಹೆಚ್‌.ಡಿ.ಕುಮಾರಸ್ವಾಮಿ ಮತ್ತೆ ಕಿಡಿಕಾರಿದ್ದಾರೆ.

    ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ ಮತ್ತು ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದು ಸಿದ್ದು ವಿರುದ್ಧ ಹೆಚ್‌ಡಿಕೆ ಗುಡುಗಿದ್ದಾರೆ. ಇದನ್ನೂ ಓದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

    ಹೆಚ್‌ಡಿಕೆ ಟ್ವೀಟ್‌ನಲ್ಲೇನಿದೆ?
    ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ?

    ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ? ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. ‘ಸುಳ್ಳಿನ ಸಿದ್ದಪುರುಷ’ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?

    ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ? ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ. ಇದನ್ನೂ ಓದಿ: ನಾನು ಸಿಎಂ ಆಗಬೇಕು ಎಂದು ಕೂಗ್ಬೇಡಿ, ಒಳ ಸಂಚು ಶುರುವಾಗುತ್ತೆ: ಪರಮೇಶ್ವರ್

    ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ. ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು ‘ಸ್ವಯಂ ಘೋಷಿತ ಸಂವಿಧಾನ ಪಂಡಿತ’ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ.

    ನಿಜ. ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ.

    ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ‘ ಅರ್ಕಾವತಿ ‘ ಆರ್ತನಾದಕ್ಕೆ ಕಾರಣರು ಯಾರು?

    ಈ ಸತ್ಯ ಆಚೆ ಬಿದ್ದರೆ ಆ ಸಿದ್ದಹಸ್ತರು ಮುಖವನ್ನು ಎಲ್ಲಿ ಇಟ್ಟುಕೊಳ್ಳುತ್ತಾರೆ? ದೇವರಾಜ ಅರಸು ಅವರ ನಂತರ ‘ ಐದು ವರ್ಷದ ಮುಖ್ಯಮಂತ್ರಿ ‘ ಎಂದು ಹೇಳಿಕೊಳ್ಳುವ ಅಪರ ಸಿದ್ದಪುರುಷರ ಪಾಡೇನು? ‘ ಐದು ವರ್ಷದ ಮುಖ್ಯಮಂತ್ರಿ ‘ ಎಂಬ ಪ್ರಭಾವಳಿಯ ಕಥೆ ಏನು?

  • ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    ಬಿಜೆಪಿಯ ದ್ವೇಷದ ರಾಜಕಾರಣ ಭಾರತಕ್ಕೆ ಹಾನಿಕಾರಕ: ರಾಹುಲ್ ಗಾಂಧಿ

    ನವದೆಹಲಿ: ಬಿಜೆಪಿಯ ದ್ವೇಷದ ರಾಜಕಾರಣವು ಭಾರತಕ್ಕೆ ಹಾನಿಕಾರಕವಾಗಿದೆ ಮತ್ತು ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗಕ್ಕೆ ಇದು ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ಸಾಮಾಜಿಕ ಶಾಂತಿ ಇಲ್ಲದೇ ದೇಶೀಯ ಮತ್ತು ವಿದೇಶಿ ಕೈಗಾರಿಕೆಗಳು ನಡೆಯಲು ಸಾಧ್ಯವಿಲ್ಲ. ಈ ದ್ವೇಷವನ್ನು ಸಹೋದರತ್ವದಿಂದ ಎದುರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ

    ಬಿಜೆಪಿ ಆಡಳಿತದಲ್ಲಿ ನಿರುದ್ಯೋಗ, ತೆರಿಗೆ ಸುಲಿಗೆ, ಹಣದುಬ್ಬರ ಮತ್ತು ದ್ವೇಷದ ರಾಜಕಾರಣ ಎಂಬ ನಾಲ್ಕು ಆಯ್ಕೆಗಳನ್ನು ನೀಡಿ ರಾಹುಲ್ ಗಾಂಧಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಮೀಕ್ಷೆ ನಡೆಸಿದ್ದರು. ಈ ಸಮೀಕ್ಷೆಗೆ 347, 396 ಮಂದಿ ಪ್ರತಿಕ್ರಿಯಿಸಿದ್ದು, ಶೇ.35 ರಷ್ಟು ಜನರು ದ್ವೇಷದ ರಾಜಕಾರಣ ಎಂಬ ಆಯ್ಕೆ ಮಾಡಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ.

    ಸರ್ಕಾರದ ಎರಡನೇ ಅತಿದೊಡ್ಡ ವೈಫಲ್ಯವೆಂದರೆ ನಿರುದ್ಯೋಗ ಸಮೀಕ್ಷೆಯಲ್ಲಿ ಶೇ.28ರಷ್ಟು ಮಂದಿ ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ನಂತರ 17.2 ರಷ್ಟು ಮಂದಿ ತೆರಿಗೆ ಸುಲಿಗೆ ಮತ್ತು ಶೇ. 19.28ರಷ್ಟು ಮಂದಿ ಹಣದುಬ್ಬರ ಎಂದು ಉತ್ತರಿಸಿದ್ದಾರೆ. ಇದು ಬಿಜೆಪಿ ಸರ್ಕಾರದ ನ್ಯೂನತೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: MPSC ಹುದ್ದೆ ಆಕಾಂಕ್ಷಿ ಅನುಮಾನಾಸ್ಪದ ರೀತಿಯಲ್ಲಿ ಕೊಠಡಿಯಲ್ಲಿ ಶವವಾಗಿ ಪತ್ತೆ

    ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ, ಅದನ್ನು ಪರಿಹರಿಸುವುದು ಪ್ರಧಾನ ಮಂತ್ರಿಯ ಜವಾಬ್ದಾರಿಯಾಗಿದೆ. ದೇಶದ ಜನತೆ ಉತ್ತರ ಕೇಳುತ್ತಿದ್ದಾರೆ, ಕ್ಷಮಾಪಣೆ ಕೇಳುವುದನ್ನು ನಿಲ್ಲಿಸಿ ಎಂದು ಟ್ವೀಟ್ ಮಾಡಿದ್ದಾರೆ.

  • ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ಸೈನಾ ನೆಹ್ವಾಲ್ ಟ್ವೀಟ್‍ಗೆ ಸಿದ್ದಾರ್ಥ್ ಅವಹೇಳನಕಾರಿ ಕಾಮೆಂಟ್ – ನೆಟ್ಟಿಗರು ಗರಂ

    ನವದೆಹಲಿ: ತಮಿಳು ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿನ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

    ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಯಾವುದೇ ರಾಷ್ಟ್ರದಲ್ಲಿ ಪ್ರಧಾನ ಮಂತ್ರಿಗೆ ಭದ್ರತೆ ಸಿಗದೇ ಇದ್ದರೆ, ಆ ದೇಶದಲ್ಲಿ ನಾವೂ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಅಜರೂಕತೆಯನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್- ಪಲ್ಸರ್ ಸುನಿಯ ವಕೀಲರೇ ಈಗ ಸಾಕ್ಷಿಧಾರ

    ಸೈನಾ ನೆಹ್ವಾಲ್ ಅವರ ಈ ಟ್ವೀಟ್‍ಗೆ ಕಾಲಿವುಡ್ ನಟ ಸಿದ್ದಾರ್ಥ್, ವಿಶ್ವದ ಸಟಲ್ ಕಾಕ್ ಚಾಂಪಿಯನ್. ದೇವರಿಗೆ ಧನ್ಯವಾದಗಳು ನಾವು ಭಾರತದ ರಕ್ಷಕರನ್ನು ಹೊಂದಿದ್ದೇವೆ. ರೆಹಾನ್ನಾ ನಿಮಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

    ಪುರುಷನ ಮರ್ಮಾಂಗವನ್ನು ಗ್ರಾಮ್ಯವಾಗಿ ‘ಕಾಕ್’ ಎಂದು ಕರೆಯಲಾಗುತ್ತದೆ. ಈ ಟ್ವೀಟ್ ಮೂಲಕ ಸಿದ್ದಾರ್ಥ್ ಸೈನಾ ಅವರನ್ನು ಲೈಂಗಿಕವಾಗಿ ಅವಮಾನಿಸಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಧ್ವನಿಯನ್ನು ಅಡಗಿಸುವ ಅನೇಕ ಪ್ರಯತ್ನಗಳು ನಡೆದಿವೆ: ಭಾವನಾ ಮೆನನ್

    ಸಿದ್ದಾರ್ಥ್ ಅವರ ಈ ಟ್ವೀಟ್‍ಗೆ ಶಿವಸೇನೆಯ ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು, ಈ ಟ್ವೀಟ್ ಅರ್ಥಪೂರ್ಣವಾದ್ದಲ್ಲ ಮತ್ತು ಇದು ಯಾರಿಗೂ ಬಳಸಲು ಯೋಗ್ಯವಲ್ಲದ ಭಾಷೆ. ಯಾವುದೇ ಭಿನ್ನಾಭಿಪ್ರಾಯ ಇರಲಿ, ಮಾತನಾಡುವಾಗ ಸಭ್ಯತೆ ಇರಬೇಕು. ಸೈನಾ ನೆಹ್ವಾಲ್ ನಮ್ಮ ದೇಶದ ಕ್ರೀಡಾ ಹೆಮ್ಮೆ, ಅವರಿಗೆ ರಾಜಕೀಯ ಮಾಡುವ ಹಕ್ಕಿದೆ. ರಾಷ್ಟ್ರದ ಉಳಿದವರ ಅಭಿಪ್ರಾಯ. ನೀವು ಅವರ ಹೇಳಿಕೆಯನ್ನು ಒಪ್ಪದಿದ್ದಲ್ಲಿ ಚರ್ಚೆ ಮಾಡಿ, ಆದರೆ ಅವರ ಆಲೋಚನೆ ಮತ್ತು ಚಿಂತನೆಗಳನ್ನು ಕೀಳಾಗಿ ಕಾಣುವುದಲ್ಲ. ಅವಹೇಳನಕಾರಿ ಟ್ವೀಟ್ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.

    ರಾಷ್ಟ್ರೀಯ ಮಹಿಳಾ ಆಯೋಗ ಗರಂ ಆಗಿದ್ದು ಸಿದ್ದಾರ್ಥ್ ಖಾತೆಯನ್ನೇ ಬ್ಲಾಕ್ ಮಾಡುವಂತೆ ಟ್ವಿಟ್ಟರ್‌ಗೆ ಪತ್ರ ಬರೆದಿದೆ.

  • ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ: ಸಿ.ಟಿ.ರವಿ

    ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ: ಸಿ.ಟಿ.ರವಿ

    ನವದೆಹಲಿ: ದೇಶದ್ರೋಹಿಗಳನ್ನು ಗುಂಡಿಟ್ಟು ಕೊಲ್ಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

    ಪಂಜಾಬ್‌ ರ‍್ಯಾಲಿಗೆ ತೆರಳುತ್ತಿದ್ದ ಪ್ರಧಾನಿ ಮೋದಿ(Narendra Modi) ಅವರು ಫ್ಲೈಓವರ್‌ನಲ್ಲಿ 20 ನಿಮಿಷ ಸಿಲುಕಿದ್ದಕ್ಕೆ ಭದ್ರತಾ ಲೋಪವೇ(security breach) ಕಾರಣ ಎಂದು ಸಿ.ಟಿ.ರವಿ ಟ್ವೀಟ್‌ ಮಾಡಿ ಖಂಡಿಸಿದ್ದಾರೆ. ಪಂಜಾಬ್‌ನ ಫ್ಲೈಓವರ್‌ನಲ್ಲಿ ಪಿಎಂ ಮೋದಿ ಅವರು ಸಿಲುಕಿಕೊಂಡಿದ್ದು ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡಿದಂತಿದೆ. ಪಂಜಾಬ್‌ನ ಕಾಂಗ್ರೆಸ್‌ ಸರ್ಕಾರದ ದುರಹಂಕಾರದಿಂದ ಈ ಭದ್ರತಾ ಲೋಪ ಉಂಟಾಗಿದೆ. ಮುಂಬರುವ ಚುನಾವಣೆಯಲ್ಲಿ ನಕಲಿ ಗಾಂಧಿಗಳಿಗೆ ಪಂಜಾಬ್‌ನ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಟ್ವಿಟರ್‌ನಲ್ಲಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

    ತಾನು ಸುರಕ್ಷಿತವಾಗಿ ತಲುಪಿದ್ದೇನೆ ಎಂಬ ಪ್ರಧಾನಿ ಮೋದಿ ಅವರ ಟ್ವೀಟ್‌ ಅನ್ನು ಹಂಚಿಕೊಂಡಿರುವ ಸಿ.ಟಿ.ರವಿ, ಸೋನಿಯಾ ಮಾತೆಯನ್ನು ಮೆಚ್ಚಿಸಲು ಹೋಗಿ ಪಂಜಾಬ್‌ ಸಿಎಂ ಚನ್ನಿ ಅವರು ಭಾರತ ಮಾತೆಗೆ ದ್ರೋಹ ಬಗೆದಿದ್ದಾರೆ. ಕಾಂಗ್ರೆಸ್‌ನ ಈ ಹೇಯ ಕೃತ್ಯವನ್ನು ಭಾರತೀಯರು ಎಂದಿಗೂ ಮರೆಯುವುದಿಲ್ಲ ಮತ್ತು ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಕಾಂಗ್ರೆಸ್‌ನ ಇಬ್ಬರು ನಾಯಕರು ಮಾತನಾಡಿಕೊಳ್ಳುತ್ತಿರುವ ವೀಡಿಯೋವನ್ನು ಹಂಚಿಕೊಂಡಿರುವ ಸಿ.ಟಿ.ರವಿ, ಫ್ಲೈಓವರ್‌ನಲ್ಲಿ ಇಂದು ಆದ ಘಟನೆ ಸಂಬಂಧ ಕಾಂಗ್ರೆಸ್‌ ನಾಯಕರೊಂದಿಗೆ ರಾಹುಲ್‌ ಗಾಂಧಿಯವರು ರಹಸ್ಯ ಸಭೆಯನ್ನೇನಾದರೂ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

    ಪಂಜಾಬ್‌ನಲ್ಲಿ ರ‍್ಯಾಲಿ ಮತ್ತು ಹುತಾತ್ಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ಭೇಟಿ ಕಾರ್ಯಕ್ರಮ ಇಂದು ಆಯೋಜಿಸಲಾಗಿತ್ತು. ಕಾರಣಾಂತರಗಳಿಂದ ಅವರು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ಇದು ಭದ್ರತೆ ಲೋಪ ಎಂದು ಪಂಜಾಬ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪಿಎಂ ಮೋದಿ ಹಾಗೂ ಬಿಜೆಪಿ ಸರ್ಕಾರ ಗಂಭೀರ ಆರೋಪ ಮಾಡಿತ್ತು. ಆದರೆ ಈ ಆರೋಪವನ್ನು ಪಂಜಾಬ್‌ ಕಾಂಗ್ರೆಸ್‌ ತಳ್ಳಿಹಾಕಿದೆ. ರ‍್ಯಾಲಿಯಲ್ಲಿ ಜನರೇ ಭಾಗವಹಿಸಿರಲಿಲ್ಲ. ಹೀಗಾಗಿ ಮೋದಿ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

  • ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

    ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

    ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಸತ್ಯಕ್ಕೆ ಸಮಾಧಿ ಕಟ್ಟಿ ʻಸುಳ್ಳಿನ ಯಾತ್ರೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಅವರು, ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ. ಇದನ್ನೂ ಓದಿ: ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು

    siddaramaiah

    ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ?..
    ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ.

    2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು. ಇದನ್ನೂ ಓದಿ: ಶೀಘ್ರವೇ ಮೇಕೆದಾಟು ಸ್ಫೋಟಕ ದಾಖಲೆ ರಿಲೀಸ್ ಮಾಡ್ತೀನಿ ಕಾರಜೋಳ ತಿರುಗೇಟು

    ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು.

    ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜ ಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

    ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್‌ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು

    ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?

    ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?

    2017ರಲ್ಲೇ ಕಾಂಗ್ರೆಸ್ ಸರ್ಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ.

    ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ.

    1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

    ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಎಚ್‌ಡಿಕೆ ಹರಿಹಾಯ್ದಿದ್ದಾರೆ.

  • ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’

    ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’

    ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ – ಜೆಡಿಎಸ್ ನಡುವೆ ರಾಜಕೀಯ ಗುದ್ದಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಸರಣಿ ಟ್ವೀಟ್ ಮೂಲಕ‌ ಕಾಂಗ್ರೆಸ್ ನಾಯಕರ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಂದು 13 ಟ್ವೀಟ್‌ಗಳಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಟುವಾದ ಟೀಕೆ ಮಾಡಿದ್ದಾರೆ.

    ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ..?:
    ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

    ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ ಎಂದು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

    ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ, ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ, ಸತ್ಯ ಸತ್ಯವೇ. ದೇವೇಗೌಡರು ಅಂತಹ ಸತ್ಯದ ಸಾಕ್ಷಿ. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ.

    ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಈಗಿನಂತೆ ಗಡಿ ಸಮಸ್ಯೆ ಇದ್ದಿದ್ರೆ ರಾಜೀನಾಮೆ ಕೊಡ್ತಿದ್ರು: ಮೋದಿ ವಿರುದ್ಧ ರಾಗಾ ವಾಗ್ದಾಳಿ

    ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು.

    ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು ಎಂದು ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್‌ನ 5 ವರ್ಷದ ಸರಕಾರವೇ ಇತ್ತು. ‘ಸಿದ್ದಹಸ್ತರೇ’ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ? ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೆತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ ಎಂದಿದ್ದಾರೆ.

    ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ ಎಂದರು.

    ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.

    h.d.kumaraswamy

    ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.

    ಪಾಪ ತೊಳೆಯುವ ತಾಯಿ ‘ಲೋಕಪಾವನಿ’ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ‘ರಕ್ಕಸ ರಾಜಕಾರಣ’ದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.

    ನಿಮ್ಮ ‘ಬ್ರೂಟಸ್’ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ‘ಸಿದ್ಧಕಲೆ’ಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.