Tag: tweet

  • ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

    ಬೆಂಗಳೂರಿನಲ್ಲಿಂದು ಹಲವೆಡೆ ವಿದ್ಯುತ್ ಕಡಿತ – ಬೆಸ್ಕಾಂನಿಂದ ಮಾಹಿತಿ

    ಬೆಂಗಳೂರು: ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಂಗಳವಾರ( ಅಕ್ಟೋಬರ್ 12) ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದೆ.

    ರಾಜ್ಯಕ್ಕೆ ಕಲ್ಲಿದ್ದಲು ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಮತ್ತು ಒಡಿಶಾದ ಮಹಾನದಿ ಕೋಲ್‍ಫೀಲ್ಡ್ಸ್ ಲಿಮಿಟೆಡ್‍ನ ಗಣಿಗಳಿಂದ ಕರ್ನಾಟಕ ಕಲ್ಲಿದ್ದಲು ಹಂಚಿಕೆಯನ್ನು ಪಡೆದಿದ್ದು, ಕಾಯಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ವಿದ್ಯುತ್ ಸ್ಥಗಿತಗೊಳಿಸುವ ಪ್ರದೇಶಗಳು:
    ಜೆಪಿ ನಗರ 3 ನೇ ಹಂತ ಮತ್ತು ಜಯನಗರ ವಿಭಾಗದ ಬಿಜಿ ರಸ್ತೆ, ರಾಘವೇಂದ್ರ ಅಪಾರ್ಟ್‍ಮೆಂಟ್ ಮತ್ತು ಕೋರಮಂಗಲದ ಮುನ್ನೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 1.30 ರಿಂದ 4 ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ, ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಬಿಕೆ ವೃತ್ತ, ಸುರಭಿ ನಗರ, ಹೊಸ ರಸ್ತೆ, ಕೋನಪ್ಪನ ಅಗ್ರಹಾರ ಮತ್ತು ಕ್ಲಬ್ ರಸ್ತೆ ವೃತ್ತ ಸೇರಿದಂತೆ ಎಚ್‍ಎಸ್‍ಆರ್ ಲೇಔಟ್ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಮತ್ತು ಜಯನಗರ ವಿಭಾಗದ ಆರ್‍ಬಿಐ ಲೇಔಟ್, ಎಸ್‍ಬಿಎಂ ಕಾಲೋನಿ, ಹರಿ ನಗರ, ಈಶ್ವರ ಲೇಔಟ್ ಮತ್ತು ಶಿವಶಕ್ತಿ ನಗರಗಳಂತಹ ಪ್ರದೇಶಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ದೀರ್ಘಾವಧಿಯ ವಿದ್ಯುತ್ ಕಡಿತವನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ:  ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ನಿಧನ

    ಪಶ್ಚಿಮ ವಲಯಗಳಾದ ರಾಜಾಜಿನಗರ ವಿಭಾಗದ ಗೋವಿಂದರಾಜ್ ನಗರ, ಕೋಳಿಮನೆ ರಸ್ತೆ, ಸುಬಣ್ಣ ಗಾರ್ಡನ್, ಜಿಕೆಡಬ್ಲ್ಯೂ ಲೇಔಟ್, ವಿನಾಯಕ ಲೇಔಟ್, ಅನುಭವ ನಗರ, ಮಾರುತಿ ನಗರ, ಮತ್ತು ಗಂಗೊಂಡನ ಹಳ್ಳಿಯಲ್ಲಿ ಬೆಳಗ್ಗೆ 10.30 ರಿಂದ ಸಂಜೆ 5.30 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಮತ್ತು ಆರ್.ಆರ್.ನಗರ ವಿಭಾಗದ ಎಚ್.ಬಿ.ಸಮಾಜ ರಸ್ತೆ ಮತ್ತು ರಂಗನಾಥ ಕಾಲೋನಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6ರ ನಡುವೆ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿ, ಸಿರ್ಸಿ ವೃತ್ತದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮತ್ತು ದ್ವಾರಕನಗರದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿದ್ಯುತ್ ಕಡಿತವಾಗಲಿದೆ. ಕೆಂಗೇರಿ ವಿಭಾಗದ ಭೂಮಿಕಾ ಲೇಔಟ್, ಪತಂಗಿರಿ ಮತ್ತು ಕೃಷ್ಣಾ ಗಾರ್ಡನ್ ಕೂಡ ಮಂಗಳವಾರ ಬೆಳಗ್ಗೆ 9 ರಿಂದ ಸಂಜೆ 5ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಇದನ್ನೂ ಓದಿ: ಕೆರೆ ನೋಡಲು ಬಂದವರಿಗೆ ಕೊರೊನಾ ವ್ಯಾಕ್ಸಿನ್

    ಪೂರ್ವ ವಲಯಗಳಾದ ಇಂದಿರಾನಗರ ವಿಭಾಗದ ಹೊಯ್ಸಳ ನಗರ, 11 ನೇ ಕ್ರಾಸ್ ಮತ್ತು ಮೀನಾಕ್ಷಿ ದೇವಸ್ಥಾನ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ ಇರುತ್ತದೆ. ಶಿವಾಜಿನಗರ ವಿಭಾಗದ ರಾಯಲ್ ಎನ್ಕ್ಲೇವ್ ಮತ್ತು ಪೊನಪ್ಪ ಲೇಔಟ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ, ಭಾರತ್ ನಗರ ಮತ್ತು ಫಾತಿಮಾ ಲೇಔಟ್‍ನಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3ರವರೆಗೆ ಮತ್ತು ದೂಪನಹಳ್ಳಿಯ ಕೆಲವು ಭಾಗಗಳಲ್ಲಿ ಮಧ್ಯಾಹ್ನ 2 ರಿಂದ 5 ರವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ. ಅಲ್ಲದೇ ವಿಧಾನಸೌಧ ವಿಭಾಗದ ರಾಜಭವನ ಮತ್ತು ಮಾಗಡಿ ಮುಖ್ಯರಸ್ತೆಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಕನ್ನಿಂಗ್‍ಹ್ಯಾಮ್ ರಸ್ತೆ ಮತ್ತು ಮೈಸೂರು ರಸ್ತೆಯಲ್ಲಿ ಮಧ್ಯಾಹ್ನ 2.30 ರಿಂದ 5 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ತಾಯಿಯಾಗಿರುವ ವಿಚಾರ 2 ವರ್ಷಗಳ ನಂತ್ರ ಬಹಿರಂಗ ಪಡಿಸಿದ ಶ್ರಿಯಾ ಶರಣ್

    ಇನ್ನೂ ಉತ್ತರ ವಲಯಗಳಾದ ಹೆಬ್ಬಾಳ ವಿಭಾಗದ ಕೋಗಿಲು ಲೇಔಟ್, ಅಗ್ರಹಾರ ಮತ್ತು ತಿರುಮೇನಹಳ್ಳಿ ಗ್ರಾಮದ ನಿವಾಸಿಗಳು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಇದೇ ರೀತಿಯ ಅಡೆತಡೆಗಳನ್ನು ಬಾಗಲೂರು ಕ್ರಾಸ್‍ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮತ್ತು ಎಂಎಲ್‍ಎ ಲೇಔಟ್ ಅನ್ನು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತಗೊಳಿಸಲು ಸಮಯ ನಿಗದಿಪಡಿಸಲಾಗಿದೆ.  ಇದನ್ನೂ ಓದಿ: ನಮ್ಗೆ ಲಸಿಕೆ ಕೊಡ್ಬೇಡಿ, ನಮ್ಮ ಮೇಲೆ ದೇವರು ಬಂದಿದ್ದಾರೆ – ಯಾದಗಿರಿಯಲ್ಲಿ ಹೈಡ್ರಾಮಾ

    ಅದೇ ರೀತಿ, ಪೀಣ್ಯ ವಿಭಾಗದಲ್ಲಿ ಪೈಪ್‍ಲೈನ್ ರಸ್ತೆ, ಪ್ರಶಾಂತನಗರ ಸುತ್ತಮುತ್ತ, ಎಂಟಿಎಸ್ ಕಾಲೋನಿ, ಎಜಿಬಿಜಿ ಲೇಔಟ್, ಜಿಡಿ ನಾಯ್ಡು ಹಾಲ್ ರಸ್ತೆ ಮತ್ತು ಎಂಎಲ್ ಲೇಔಟ್ (ಮತ್ತಷ್ಟು ವಿಸ್ತರಣೆ) ಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಲ್ಲೇಶ್ವರ ವಿಭಾಗದ ಗಾಯತ್ರಿನಗರ ಮತ್ತು ಇ-ಬ್ಲಾಕ್ ರಾಜಾಜಿನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಕಡಿತವಾಗಲಿದ್ದು, ಇದೇ ರೀತಿಯ ಸ್ಥಗಿತವನ್ನು ಎಚ್‍ಎಂಟಿ ಲೇಔಟ್‍ಗೆ ಬೆಳಗ್ಗೆ 10.30 ರಿಂದ ಸಂಜೆ 6 ರವರೆಗೆ ನಿಗದಿಪಡಿಸಲಾಗಿದೆ.

  • ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಹೆಚ್‍ಡಿ ಕುಮಾರಸ್ವಾಮಿ

    ಜೆಡಿಎಸ್ ಬಗ್ಗೆ ಮಾತನಾಡದಿದ್ದರೆ ಸಿದ್ದರಾಮಯ್ಯಗೆ ನಿದ್ದೆ ಬರಲ್ಲ: ಹೆಚ್‍ಡಿ ಕುಮಾರಸ್ವಾಮಿ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಬಗ್ಗೆ ಮಾತನಾಡದಿದ್ದಾರೆ ನಿದ್ದೆ ಬರಲ್ಲ ಅಂತ ಕಾಣಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

    ಸಿದ್ದರಾಮಯ್ಯ ಕುರಿತಂತೆ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿರುವ ಅವರು, ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉಸ್ತುವಾರಿಗಾಗಿ ಸೋಮಣ್ಣ-ಅಶೋಕ್ ಮಧ್ಯೆ ಕೋಲ್ಡ್ ವಾರ್ – ಸಿಎಂಗೆ ಸಂಕಟ

    ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ಸಿದ್ದಕಲೆ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಐಟಿ ಅಧಿಕಾರಿಯ ಸೋಗಿನಲ್ಲಿ ಉದ್ಯಮಿ ಕಿಡ್ನಾಪ್‍ಗೆ ಪ್ಲಾನ್ – ಸಿನಿಮಾ ನಿರ್ಮಾಪಕ ಸೇರಿದಂತೆ ನಾಲ್ವರ ಬಂಧನ

    ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ದಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಇದಕ್ಕೆ ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

  • ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

    ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದ್ರೆ, ಅದು ನಂಗೆ ಅಂದ್ರೆ ಜವಾಬ್ದಾರ ನಾನಲ್ಲ: ಸಿದ್ದಾರ್ಥ್

    ಚೆನ್ನೈ: ಟಾಲಿವುಡ್ ನಟ ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಬಳಿಕ ಕಾಲಿವುಡ್ ನಟ ಸಿದ್ಧಾರ್ಥ್ ಮಾಡಿದ್ದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿತ್ತು. ಸದ್ಯ ಈ ಟ್ವೀಟ್ ಮಾಡಿದ್ದು ಯಾರಿಗೆ ಎಂಬುವುದರ ಬಗ್ಗೆ ಸಿದ್ದಾರ್ಥ್ ಸ್ಪಷ್ಟನೆ ನೀಡಿದ್ದಾರೆ.

    ಸಿದ್ದಾರ್ಥ್ ಹಾಗೂ ಸಮಂತಾ ಒಂದು ಕಾಲದಲ್ಲಿ ರಿಲೇಶನ್ ಶಿಪ್‍ನಲ್ಲಿದ್ದರು. ಆದರೆ ಕಾರಣಾಂತರಗಳಿಂದ ಇಬ್ಬರು ದೂರ ಆದರು. ಬಳಿಕ ಸಮಂತಾ, ನಾಗಚೈತನ್ಯರನ್ನು ಪ್ರೀತಿಸಿ ವಿವಾಹವಾದರು. ಆದ್ಯಾಗೂ ಕೆಲವು ಮನಸ್ತಾಪಗಳಿಂದ 4 ವರ್ಷಗಳ ನಂತರ ಇಬ್ಬರು ಇತ್ತೀಚೆಗಷ್ಟೇ ವಿಚ್ಛೇದನ ಪಡೆದುಕೊಂಡರು. ಈ ವೇಳೆ ಸಿದ್ದಾರ್ಥ್ ಮೋಸ ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ, ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ನಟ ಸಿದ್ದಾರ್ಥ್ ಟ್ವೀಟ್ ಮಾಡಿದ್ದರು.

    ಈ ಹಿನ್ನೆಲೆ ಸಿದ್ದಾರ್ಥ್ ಟ್ವೀಟ್‍ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಕೆಂಡಕಾರಿದ್ದಾರೆ. ಹೀಗೆ ಹೀನಾಯಾವಾಗಿ ಮಾತನಾಡಲು ಮನಸ್ಸಾದರೂ ಹೇಗೆ ಬರುತ್ತದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೋಸ ಮಾಡುವವರು ಎಂದಿಗೂ ಉದ್ಧಾರ ಆಗಲ್ಲ: ಸಿದ್ದಾರ್ಥ್

    ಹೀಗಾಗಿ ಈ ಕುರಿತಂತೆ ಸಿದ್ದಾರ್ಥ್ ತಮ್ಮ ಹಿಂದಿನ ಟ್ವೀಟ್ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ನಿತ್ಯ ನನ್ನ ಮನಸ್ಸಿಗೆ ಏನು ಬರುತ್ತದೆ ಅದನ್ನು ಟ್ವೀಟ್ ಮಾಡುತ್ತೇನೆ. ಬೀದಿ ನಾಯಿಗಳ ಬಗ್ಗೆ ಟ್ವೀಟ್ ಮಾಡಿದಾಗ ಅದು ನನಗೆ ಅಂದು ಕೊಂಡರೆ ನಾನು ಜವಾಬ್ದಾರನಲ್ಲ ಎಂದಿದ್ದಾರೆ. ಹೀಗೆ ಟ್ರೋಲ್ ಮಾಡುವವರಿಗೆ ಕಾರವಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ

     

  • ಎರಡನೇ ಬಾರಿ ಸರ್ವರ್ ಡೌನ್ – ಸಮಸ್ಯೆ ಬಗೆಹರಿಸಿ ಬಳಕೆದಾರರಲ್ಲಿ ಕ್ಷಮೆಯಾಚಿಸಿದ ಇನ್‍ಸ್ಟಾಗ್ರಾಮ್‍

    ಎರಡನೇ ಬಾರಿ ಸರ್ವರ್ ಡೌನ್ – ಸಮಸ್ಯೆ ಬಗೆಹರಿಸಿ ಬಳಕೆದಾರರಲ್ಲಿ ಕ್ಷಮೆಯಾಚಿಸಿದ ಇನ್‍ಸ್ಟಾಗ್ರಾಮ್‍

    ಬೆಂಗಳೂರು: ಪ್ರಸಿದ್ಧ ಫೋಟೋ ಶೇರಿಂಗ್ ಆ್ಯಪ್ ಇನ್‍ಸ್ಟಾಗ್ರಾಮ್‍ನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಫೇಸ್‍ಬುಕ್  ತಿಳಿಸಿದೆ.

    ಎಲ್ಲವನ್ನು ಸರಿಪಡಿಸಲಾಗಿದೆ ಮತ್ತು ಈಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ನಮ್ಮೊಂದಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಲಾಗಿದೆ. ಇದನ್ನೂ ಓದಿ: ಇಶನ್‌ ಕಿಶನ್‌, ಸೂರ್ಯಕುಮಾರ್‌ ಸ್ಫೋಟಕ ಆಟ – ಮುಂಬೈಗೆ 42 ರನ್‌ ಜಯ

    ಸೋಮವಾರ ಪ್ರಸಿದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತು ಫೇಸ್‍ಬುಕ್ ಸೇವೆಗಳು ಕೆಲವು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಇದೀಗ ಒಂದು ವಾರದೊಳಗೆಯೇ ಕೆಲವು ಬಳಕೆದಾರರು ಇನ್‍ಸ್ಟಾಗ್ರಾಮ್ ಉಪಯೋಗಿಸಲಾಗದೇ ಸಮಸ್ಯೆಯನ್ನು ಎದುರಿಸುತ್ತಿದ್ದರು. 10,400 ಬಳಕೆದಾರರು ಅಪ್ಲಿಕೇಶನ್‍ಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದರು. ಅಲ್ಲದೇ ಕೆಲವರು ಸರ್ವರ್ ಸಂಪರ್ಕಿಸಿದ್ದಾರೆ.

    FB, Instagram, Whatsapp

    ಭಾರತದಲ್ಲಿ ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್ ಎರಡು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದರೆ ಕೆಲವು ಬಳಕೆದಾರರು ಈ ಫ್ಲಾಟ್‍ಫಾರ್ಮ್‍ನಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಲು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಇದನ್ನೂ ಓದಿ: WhatsApp, Facebook, ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ – ಮೆಸೇಜ್‌ ಹೋಗ್ತಿಲ್ಲ, ಬರ್ತಿಲ್ಲ..!

    ಈ ಕುರಿತಂತೆ ಟ್ವಿಟ್ಟರ್‌ನಲ್ಲಿ ನಮ್ಮ ಅಪ್ಲಿಕೇಶನ್‍ಗಳನ್ನು ಉಪಯೋಗಿಸಲು ಕೆಲವು ಜನರಿಗೆ ತೊಂದರೆಯಾಗುತ್ತಿದೆ ಎಂದು ನಮಗೆ ತಿಳಿದಿದೆ. ಸಾಧ್ಯವಾದಷ್ಟು ಬೇಗನೆ ಸಾಮಾನ್ಯ ಸ್ಥಿತಿಗೆ ಮರಳಲು ನಾವು ಕೆಲಸಮಾಡುತ್ತಿದ್ದೇವೆ ಮತ್ತು ಯಾವುದೇ ಸಮಸ್ಯೆಯುಂಟಾಗಿದ್ದರೆ ನಾವು ಕ್ಷಮೆಯಾಚಿಸುತ್ತೇವೆ ಎಂದು ಟ್ವೀಟ್ ಮಾಡಿದೆ.

    ಸೋಮವಾರ ಭಾರತೀಯ ಕಾಲಮಾನ ರಾತ್ರಿ 9 ಗಂಟೆಯ ಬಳಿಕ ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತು ಫೇಸ್‍ಬುಕ್ ಸೇವೆಗಳಲ್ಲಿ ವ್ಯತ್ಯಯ ಕಂಡು ಬಂದಿತ್ತು. ವಿಶ್ವದ ಎಲ್ಲ ಕಡೆಯ ಬಳಕೆದಾರರಿಗೂ ಈ ತಾಂತ್ರಿಕ ಸಮಸ್ಯೆಯ ಬಿಸಿ ತಟ್ಟಿತ್ತು. ಇದರಿಂದಾಗಿ ವಾಟ್ಸಪ್‍ನಿಂದ ಯಾವುದೇ ಮೆಸೇಜ್ ಸೆಂಡ್ ಆಗುತ್ತಿಲ್ಲ ಜೊತೆಗೆ ಬೇರೆಯವರು ಕಳಿಸಿದ ಮೆಸೇಜ್ ಕೂಡಾ ರಿಸೀವ್ ಆಗುತ್ತಿಲ್ಲ. ಇನ್‍ಸ್ಟಾಗ್ರಾಂನಲ್ಲಿ couldn’t refresh the feed ಎಂಬ ಸಂದೇಶ ಬಳಕೆದಾರರಿಗೆ ಕಾಣಿಸುತ್ತಿತ್ತು. Facebook ಪೇಜ್ ಲೋಡ್ ಆಗುತ್ತಿರಲಿಲ್ಲ.

    ಫೇಸ್‍ಬುಕ್ ಸಂಸ್ಥೆ ತನ್ನ Twitter ಖಾತೆಯ ಮೂಲಕ ಸೇವೆ ವ್ಯತ್ಯಯವಾಗಿದ್ದನ್ನು ಖಚಿತಪಡಿಸಿತು. ಅಲ್ಲದೇ ಬಳಕೆದಾರರ ಕ್ಷಮೆ ಯಾಚಿಸಿತು. ‘ನಮ್ಮ App & Productಗಳ ಸೇವೆ ಪಡೆಯಲು ಕೆಲವು ಬಳಕೆದಾರರಿಗೆ ಸಮಸ್ಯೆಯಾಗುತ್ತಿದೆ ಎಂಬುದು ನಮ್ಮ ಅರಿವಿಗೆ ಬಂದಿದೆ. ನಾವು ಸಾಧ್ಯವಾದಷ್ಟು ಬೇಗ ಈ ಸಮಸ್ಯೆ ಬಗೆಹರಿಸುವ ಕೆಲಸದಲ್ಲಿ ನಿರತವಾಗಿದ್ದೇವೆ. ನಿಮಗಾಗುತ್ತಿರುವ ತೊಂದರೆಗೆ ನಾವು ಕ್ಷಮೆ ಯಾಚಿಸುತ್ತೇವೆ’ ಎಂದು Facebook ಅಧಿಕೃತವಾಗಿ ಟ್ವೀಟ್ ಮಾಡಿತು.

  • RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

    ಬೆಂಗಳೂರು: ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. ಆರ್‌ಎಸ್‌ಎಸ್‌ ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ ಎಂದು ಎಚ್.ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?

    ಜನ ಪ್ರತಿನಿಧಿಗಳನ್ನು, ಸರ್ಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿ ರವಿಯರೇ. ನಾನು ಸತ್ಯದ ಪರ. ಸಿ.ಟಿ ರವಿಯವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್‌ಎಸ್‌ಎಸ್‌ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ. ಇದನ್ನೂ ಓದಿ: RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ‘ಆಪರೇಷನ್ ಕಮಲ’ದಂಥ ‘ಅನೈತಿಕ’, ‘ನಿರ್ಲಜ್ಜ’, ‘ನೀಚ’ ರಾಜಕಾರಣವನ್ನು ಆರ್‌ಎಸ್‌ಎಸ್‌ ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

  • RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಬೆಂಗಳೂರು: ರಾಷ್ಟ್ರಕ್ಕೆ ಸಂಕಷ್ಟ ಬಂದಾಗ ಆಗಲಿ, ವಿದ್ಯೆ ದಾನಕ್ಕಾಗಿ, ಅನ್ನದ ಮಾರ್ಗಕ್ಕಾಗಲಿ ಶಿಸ್ತಿನ ಸೈನ್ಯ ಆರ್‌ಎಸ್‌ಎಸ್‌ . ಇಂಥ ಸ್ವಾರ್ಥ ಜಗದಲ್ಲಿ ನಿಸ್ವಾರ್ಥಸೇವೆ ಮಾಡುವ ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಸ್ಥೆ ಎಂದರೆ ಅದು ಒಂದೇ ಆರ್‌ಎಸ್‌ಎಸ್‌ ಎಂದು ನಟ, ಬಿಜೆಪಿ ಮುಖಂಡ ನವರಸ ನಾಯಕ ಜಗ್ಗೇಶ್, ಎಚ್.ಡಿ ಕುಮಾರಸ್ವಾಮಿ ಅವರಿಗೆ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

    ಆರ್‌ಎಸ್‌ಎಸ್‌  ನಿಂದ 4 ಸಾವಿರ ಐಎಎಸ್, ಐಪಿಎಸ್ ಗಳಿಗೆ ಟ್ರೈನಿಂಗ್ ಎಂಬ ಎಚ್‍ಡಿಕೆ ಆರೋಪ ವಿಚಾರವಾಗಿ ಟ್ವೀಟ್ ಮಾಡಿರುವ ಜಗೇಶ್, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನನ್ನನ್ನು ಸೋಲಿಸಿದ್ದು ಮೋದಿ, ಶಾ, ಆರ್‌ಎಸ್‌ಎಸ್‌: ಖರ್ಗೆ

    ಟ್ವೀಟ್‍ನಲ್ಲಿ ಏನಿದೆ?:
    ಆರ್‌ಎಸ್‌ಎಸ್‌  ಸಂಪರ್ಕ ದೊರಕಿದರೆ ಅಂಥವರು ತಮಗರಿಯದೆ ಸಾತ್ವಿಕನಾಗಿ ಸ್ವಾರ್ಥಬಿಟ್ಟು ಸಮಾಜಕ್ಕೆ ಹೆಗಲುಕೊಡುವ ಕರ್ಮಯೋಗಿ ಆಗುತ್ತಾನೆ. ದೂರನಿಂತು ಬೆಟ್ಟ ನೋಡುವರಿಗು ಆ ಬೆಟ್ಟ ಏರಿದವರು ಕೊಡುವ ವಿವರಣೆಗೆ ವ್ಯೆತಾಸವಿದೆ. ನೋಡುಗರಿಗಿಂತ ಅದರ ಸಾಂಗತ್ಯ ಇರುವವರ ಸಂಖ್ಯೆ ಹೆಚ್ಚು. ಕಾರಣ ಅದರ ಮಾತೃರೂಪ ಹಾಗೂ ಸರ್ವಸಂಗ ಪರಿತ್ಯಾಗಿಗಳು ಕಟ್ಟಿದ ನಿಸ್ವಾರ್ಥವಾಗಿದೆ. ಆ ಸಂಘದಲ್ಲಿ ಅದರ ಸಿದ್ಧಾಂತ ಅಪ್ಪಿ ಜೀವಿಸುವವರು ವಿದ್ಯಾವಂತರು ರಾಷ್ಟ್ರಪ್ರೇಮಿಗಳು, ಆತ್ಮಸಾಕ್ಷಾತ್ಕಾರ ಆದ ಶ್ವೇತವರ್ಣ ಸನ್ಯಾಸಿಗಳು. ಅವರಿಗೆ ದೇಶವೇ ಮನೆ ದೇಶವಾಸಿಗಳೇ ಬಂಧುಗಳು ಅವರ ನಿಸ್ವಾರ್ಥ ಸಮಾಜಸೇವೆಯೇ ದೇವರ ಪೂಜೆ. ಆ ಸಂಘದ ಬಗ್ಗೆ ಮಾತಾಡುವ ಮುನ್ನ ಅದರ ನಿಸ್ವಾರ್ಥಗುಣ ಅರಿಯಿರಿ ಎಂದು ಪರೋಕ್ಷವಾಗಿ ಎಚ್‍ಡಿಕೆಗೆ ಜಗ್ಗೇಶ್ ಟಾಂಕ್ ನೀಡಿದ್ದಾರೆ. ಇದನ್ನೂ ಓದಿ: ಎನ್‍ಸಿಬಿ ಅಧಿಕಾರಿಗಳ ಮುಂದೆ ವಿಜ್ಞಾನ ಪುಸ್ತಕಕ್ಕೆ ಬೇಡಿಕೆಯಿಟ್ಟ ಆರ್ಯನ್!

     

  • FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

    FIR ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ: ಪ್ರಿಯಾಂಕಾ ಗಾಂಧಿ ಕಿಡಿ

    ಲಕ್ನೋ: ಲಖಿಂಪುರ್ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ರೈತರನ್ನು ಭೇಟಿ ಮಾಡಲು ತೆರಳಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ

    ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನರೇಂದ್ರ ಮೋದಿ ಜೀ, ಕಳೆದ 28 ಗಂಟೆಗಳಿಂದ ನಿಮ್ಮ ಸರ್ಕಾರ ಯಾವುದೇ ಆದೇಶವಿಲ್ಲದೇ ಹಾಗೂ ಎಫ್‍ಐಆರ್ ಇಲ್ಲದೇ ನನ್ನನ್ನು ಗೃಹ ಬಂಧನದಲ್ಲಿರಿಸಿದೆ ಎಂದು ಟ್ವೀಟ್ ಮಾಡಿ ಮೋದಿಗೆ ಟ್ಯಾಗ್ ಮಾಡಿದ್ದಾರೆ.

    ಹಿನ್ನೆಲೆ:
    ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ:  ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ಆದರೆ ಇದೀಗ ಪ್ರೀಯಾಂಕಾ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಕೇಂದ್ರ ಸರ್ಕಾರವನ್ನುತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

  • ಪ್ರಿಯಾಂಕಾ ಗಾಂಧಿಗೆ ಗೃಹಬಂಧನ – ಸಿದ್ದರಾಮಯ್ಯ ಖಂಡನೆ

    ಪ್ರಿಯಾಂಕಾ ಗಾಂಧಿಗೆ ಗೃಹಬಂಧನ – ಸಿದ್ದರಾಮಯ್ಯ ಖಂಡನೆ

    – ಬಿಜೆಪಿ ವಿರುದ್ಧ ಮಾಜಿ ಸಿಎಂ ಕಿಡಿ

    ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರಪ್ರದೇಶದ ಪೊಲೀಸರು ಗೃಹಬಂಧನದಲ್ಲಿರಿಸಿದ್ದು, ಈ ವರ್ತನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿ ಆಕ್ರೋಶಧ ಹೊರಹಾಕಿರುವ ಸಿದ್ದರಾಮಯ್ಯ, ಇದು ಬಿಜೆಪಿಯ ತಾಲಿಬಾನಿ ಸಂಸ್ಕೃತಿ. ರೈತರ ಪರ ನಿಲ್ಲೋದನ್ನು ತಪ್ಪಿಸುವ ಪರಿ ಇದಾಗಿದ್ದು, ಪ್ರಜಾಪ್ರಭುತ್ವಕ್ಕೆ ಇದು ಕಪ್ಪುಚುಕ್ಕೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗೆಸ್ಟ್ ಹೌಸ್‌ನಲ್ಲಿ ಕಸ ಗುಡಿಸುತ್ತಿರೋ ಪ್ರಿಯಾಂಕಾ ಗಾಂಧಿ ವೀಡಿಯೋ ವೈರಲ್

    ಇದೇ ವೇಳೆ ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿದ ಪ್ರಕರಣವನ್ನೂ ಖಂಡಿಸಿರುವ ಮಾಜಿ ಸಿಎಂ, ಮುಗ್ಧ ರೈತರ ಅವರ ಹಕ್ಕಿಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಮುಗ್ಧ ರೈತರ ಮೇಲೆ ಈ ರೀತಿ ಮಾಡಿದ್ದು ಸರಿಯಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

    ಅಲ್ಲದೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಹಾಗೂ ಇಡೀ ದೇಶ ಗೂಂಡಾ ರಾಜ್ಯವಾಗಿ ಬದಲಾಗುತ್ತಿದೆ. ಬಿಜೆಪಿ ತಪ್ಪನ್ನು ಪ್ರಶ್ನೆ ಮಾಡುವಂತಾ ಹಕ್ಕೆ ಇಲ್ಲದಂತಾಗಿದೆ. ಇದು ಮೋದಿ ಆಡಳಿತದ ನಿರಂಕುಶ ಪ್ರಭುತ್ವವೇ ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನೀವು ಹತ್ಯೆ ಮಾಡಿದ ಜನರಿಗಿಂತ ನಾನು ಮುಖ್ಯ ಅಲ್ಲ: ಪ್ರಿಯಾಂಕಾ ಗಾಂಧಿ

  • ಇದು ‘ಕೊಲೆಗೆಡುಕ ಸರ್ಕಾರ’  – ಹೆಚ್‍ಡಿಕೆ ಕಿಡಿ

    ಇದು ‘ಕೊಲೆಗೆಡುಕ ಸರ್ಕಾರ’ – ಹೆಚ್‍ಡಿಕೆ ಕಿಡಿ

    ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ‘ಕೊಲೆಗೆಡುಕ ಸರ್ಕಾರ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದರೆ, ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗೆಡುಕ ಸರ್ಕಾರ’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

    ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲೇ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ್ಯ ರೀತಿ ಪಾರು

    ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

     

  • ಮೋದಿ ಬಗ್ಗೆ ಸ್ವಾಮಿ ವ್ಯಂಗ್ಯ – ಕುದುರೆಗೆ ನೀರು ಕುಡಿಯುವಂತೆ ಮಾಡೋದು ಹೇಗೆ?

    ಮೋದಿ ಬಗ್ಗೆ ಸ್ವಾಮಿ ವ್ಯಂಗ್ಯ – ಕುದುರೆಗೆ ನೀರು ಕುಡಿಯುವಂತೆ ಮಾಡೋದು ಹೇಗೆ?

    ನವದೆಹಲಿ: ಸ್ವಪಕ್ಷದ ಬಗ್ಗೆಯೇ ಆಗಾಗ ಚಾಟಿ ಬೀಸುತ್ತಾ ಕೆಲವು ಸಲಹೆಗಳನ್ನು ನೀಡುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಇದೀಗ ಪ್ರಧಾನಿ ಮೋದಿ ಅವರಿಗೆ ವ್ಯಂಗ್ಯವಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಕೆಲವು ದಿನಗಳಿಂದ ನನಗೆ ಅಂಗಡಿಗಳನ್ನು ಇಟ್ಟುಕೊಂಡಿರುವವರು ಫೋನ್ ಮಾಡಿ ಸದ್ಯ ನಿರ್ಮಾಣವಾಗಿರೋ ಆರ್ಥಿಕ ಪರಿಸ್ಥಿತಿಯಿಂದ ಪರಿಹಾರ ಪಡೆಯಲು ಮೋದಿಗೆ ಕೆಲವು ಸೂಚನೆ ನೀಡಿ ಎಂದು ಹೇಳುತ್ತಾರೆ. ಅವರಿಗೆ ನಾನು ಕುದುರೆಯನ್ನ ನೀರಿರುವಲ್ಲಿಗೆ ಕರೆದೊಯ್ಯಬಹುದು. ಆದರೆ ನೀರು ಕುಡಿಯುವುದು ಹೇಗೆ? ಎಂದು ಹೇಳಿದ್ದೇನೆ. ನಾನು ಮೋದಿಗೆ 12 ಪತ್ರಗಳನ್ನು ಬರೆದಿದ್ದೇನೆ. ಆದರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    ನಿನ್ನೆ ಸುಬ್ರಮಣಿಯನ್ ಸ್ವಾಮಿ ಒಬ್ಬ ಫ್ರಿಲಾನ್ಸ್ ಪೊಲಿಟಿಶಿಯನ್(ಸ್ವತಂತ್ರ ರಾಜಕಾರಣಿ) ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೇಳಿಕೆಗೆ ಸುಬ್ರಮಣಿಯನ್ ಸ್ವಾಮಿಯವರು ಖಾರವಾಗಿ ತಿರುಗೇಟು ನೀಡಿದ್ದರು. ಇದನ್ನೂ ಓದಿ:  ದಳ ತೊರೆದು ಕೈ ಹಿಡಿಯಲು ನಿರ್ಧರಿಸಿದ ಕೋಲಾರ ಶಾಸಕ ಶ್ರೀನಿವಾಸಗೌಡ

    ಬೊಮ್ಮಾಯಿ ಹೇಳಿದ್ದೇನು?
    ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಸೆಪ್ಟೆಂಬರ್ 15ರಂದು ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಬ್ರಮಣಿಯನ್ ಸ್ವಾಮಿಯವರ ಟ್ವೀಟ್ ಕುರಿತು ಉಲ್ಲೇಖಿಸಿ ಮಾತನಾಡುತ್ತಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ್ದ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ, ಸುಬ್ರಮಣಿಯನ್ ಸ್ವಾಮಿಯವರ ಬಗ್ಗೆ ನಿಮಗೆ ಗೊತ್ತಿದೆ. ಅವರು ಯಾವುದೇ ಪಕ್ಷದಲ್ಲಿರಲಿ ಸ್ವತಂತ್ರ ರಾಜಕಾರಣಿ ಇದ್ದಂಗೆ. ಅವರಿಗೆ ಏನು ಮನಸ್ಸಿಗೆ ಬರುತ್ತದೋ ಅದನ್ನು ಹೇಳುತ್ತಾರೆ. ಅವರೊಬ್ಬರ ಸ್ವತಂತ್ರ ರಾಜಕಾರಣಿಯಾಗಿ ಅವರದ್ದೇಯಾದ ವಿಶ್ಲೇಷಣೆಯಲ್ಲಿ ಹೇಳುತ್ತಿರುತ್ತಾರೆ ಎಂದು ಹೇಳಿದ್ದರು. ಇದನ್ನೂ ಓದಿ: ನಾನು ಯಾರ ಬೂಟೂ ನೆಕ್ಕಿಲ್ಲ – ಬೊಮ್ಮಾಯಿಗೆ ಸುಬ್ರಮಣಿಯನ್ ಸ್ವಾಮಿ ತಿರುಗೇಟು

    ಈ ಕುರಿತು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸುಬ್ರಮಣಿಯನ್ ಸ್ವಾಮಿ ಒಬ್ಬ ಸ್ವತಂತ್ರ ರಾಜಕಾರಣಿ ಎಂದು ಹೇಳಿದ್ದಾರೆ. ನಾನು 6 ಬಾರಿ ಸಂಸದನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ. ಆದರೆ ಯಾರ ಬೂಟನ್ನು ನೆಕ್ಕಿಲ್ಲ. ಪ್ರಜಾಪ್ರಭುತ್ವಕ್ಕೆ ಸತ್ಯ ಹೇಳುವುದು ಅನಿವಾರ್ಯ ಎಂದು ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದರು.