Tag: tweet

  • ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ

    ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ: ಸಿಎಂ ಬಿಎಸ್‍ವೈ

    ಬೆಂಗಳೂರು: ರಾಜ್ಯ ಉಪಚುನಾವಣೆ, ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ಚುನಾವಣಗಳ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪರವರು ಹರ್ಷ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ, 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧನೆಯೂ ಅಭಿನಂದನಾರ್ಹ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ಬೆಳಗಾವಿಯಲ್ಲಿ ಮತದಾರರು ಮತ್ತೊಮ್ಮೆ ಪಕ್ಷವನ್ನು ಗೆಲ್ಲಿಸಿ, ಆಶೀರ್ವದಿಸಿದ್ದಾರೆ. ಬಸವಕಲ್ಯಾಣದಲ್ಲಿ ಅನುಕಂಪದ ಅಲೆಯನ್ನೂ ಮೀರಿ ಪಕ್ಷದ ಅಭಿವೃದ್ಧಿಪರ ಹಾಗೂ ಜನಹಿತ ಪರ ಕಾರ್ಯಸೂಚಿಗೆ ಮತದಾರರು ಒಲವು ತೋರಿದ್ದಾರೆ. ಅಸ್ಸಾಂನಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಮರಳಿದ್ದು, ಪುದುಚೇರಿಯಲ್ಲೂ ಸರ್ಕಾರ ರಚನೆಯಲ್ಲಿ ಪಕ್ಷ ಭಾಗಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಸಂಖ್ಯಾಬಲವನ್ನು 3 ರಿಂದ 75 ಸ್ಥಾನಗಳಿಗೆ ಹೆಚ್ಚಿಸಿಕೊಂಡಿರುವುದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಬಿಜೆಪಿಯ ಮತ ಪ್ರಮಾಣ ಹೆಚ್ಚಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

    ದಕ್ಷಿಣದ ಇತರ ರಾಜ್ಯಗಳಲ್ಲೂ ಬಿಜೆಪಿ ಇನ್ನಷ್ಟು ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ನರೇಂದ್ರಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, ಬಿಜೆಪಿ ಅಭ್ಯರ್ಥಿಗೆ ಆಶೀರ್ವದಿಸಿರುವ ಕ್ಷೇತ್ರದ ಜನತೆಗೆ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

    ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶ್ರೀ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು.

  • ದೀದಿ ಜಯಭೇರಿ- ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

    ದೀದಿ ಜಯಭೇರಿ- ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

    ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃಣ ಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಪಶ್ಚಿಮ ಬಂಗಾಳದಲ್ಲಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿಯವರಿಗೆ ಅಭಿನಂದನೆಗಳು. ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ ಸಾಧ್ಯವಾಗುವ ಎಲ್ಲ ಬೆಂಬಲ ನೀಡುತ್ತದೆ. ಬಿಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಿದ ಪಶ್ಚಿಮ ಬಂಗಾಳದ ಜನತೆಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

    ಒಟ್ಟು 292 ಕ್ಷೇತ್ರಗಳಲ್ಲಿ ಟಎಂಸಿ 215ರಲ್ಲಿ ಗೆಲುವು ಪಡೆದುಕೊಂಡಿದೆ. ಬಿಜೆಪಿ 76ರಲ್ಲಿ ಗೆಲುವು ದಾಖಲಿಸಿದೆ. ಇತ್ತ ಶಿಷ್ಯ ಸುವೇಂದು ಅಧಿಕಾರಿ ವಿರುದ್ಧ ನಂದಿಗ್ರಾಮದಲ್ಲಿ ಕಣಕ್ಕಿಳಿದಿದ್ದ ಮಮತಾ ಬ್ಯಾನರ್ಜಿ ಸೋತಿದ್ದಾರೆ. ಒಮ್ಮೆ ಸುವೆಂದು ಮುನ್ನಡೆಗೆ ಬಂದ್ರೆ ಮರುಕ್ಷಣವೇ ಮಮತಾ ಲೀಡ್‍ಗೆ ತೆಗೆದುಕೊಳ್ಳುತ್ತಿದ್ದರು. ಕೊನೆವರೆಗೂ ವಿಜಯಮಾಲೆ ತೂಗೂಯ್ಯಾಲೆಯಲ್ಲೇ ಇತ್ತು. ಅಷ್ಟರ ಮಟ್ಟಿಗೆ ಸುವೆಂದು ಅಧಿಕಾರಿ ಬಿಗ್ ಫೈಟ್ ನೀಡಿದರು. ಕೊನೆಗೆ ಚುನಾವಣಾಧಿಕಾರಿಗಳು ಮಮತಾ 1,200 ಮತಗಳಿಂದ ಗೆದ್ದರು ಎಂದು ಘೋಷಿಸಿದ್ರು. ಆದ್ರೆ ಇದಾದ ಸ್ವಲ್ಪ ಹೊತ್ತಿಗೆ ಸುವೆಂದು 1,622 ಮತಗಳಿಂದ ಗೆದ್ದರು ಎಂದು ಘೋಷಿಸಲಾಯ್ತು.

    ಸದ್ಯ ನಂದಿಗ್ರಾಮ ಫಲಿತಾಂಶದ ಬಗ್ಗೆ ಗೊಂದಲ ಏರ್ಪಟ್ಟಿದೆ. ಮತ್ತೆ ಮರು ಎಣಿಕೆ ನಡೆಯುತ್ತಿದೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ಮಮತಾ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

  • ತಲೆಬಾಗಿ ಕ್ಷಮೆ ಕೋರುವೆ – ಮಾಲಾಶ್ರೀಗೆ ಸಾಂತ್ವನ ಹೇಳಿದ ಜಗ್ಗೇಶ್

    ತಲೆಬಾಗಿ ಕ್ಷಮೆ ಕೋರುವೆ – ಮಾಲಾಶ್ರೀಗೆ ಸಾಂತ್ವನ ಹೇಳಿದ ಜಗ್ಗೇಶ್

    ಬೆಂಗಳೂರು: ಕೋಟಿ ರಾಮು ಎಂದೇ ಖ್ಯಾತಿ ಪಡೆದಿದ್ದ ನಿರ್ಮಾಪಕ ರಾಮು ಕೊರೊನಾದಿಂದ ನಿಧನರಾಗಿದ್ದರೆ ಎಂದರೆ ಇಂದಿಗೂ ಯಾರಿಂದಲೂ ನಂಬಲು ಸಾಧ್ಯವಾಗುತ್ತಿಲ್ಲ. ಹಲವಾರು ಹಿಟ್ ಸಿನಿಮಾಗಳನ್ನು ನೀಡಿದ ರಾಮುರನ್ನು ಕಳೆದುಕೊಂಡ ಚಂದನವನಕ್ಕೆ ಭರಿಸಲಾಗದ ನಷ್ಟವುಂಟಾಗಿದೆ.

    ಪತಿಯ ಅಗಲಿಕೆಯಿಂದ ನೊಂದಿರುವ ನಟಿ ಮಾಲಾಶ್ರೀಗೆ ಸ್ಯಾಂಡಲ್‍ವುಡ್‍ನ ಅನೇಕ ಕಲಾವಿದರು ಸಾಂತ್ವನ ಹೇಳುತ್ತಿದ್ದಾರೆ. ಇದೀಗ ನವರಸ ನಾಯಕ ಜಗ್ಗೇಶ್ ಕೂಡ ಮಾಲಾಶ್ರೀಯವರಿಗೆ ಟ್ವಿಟ್ಟರ್ ಮೂಲಕ ಸಮಾಧಾನ ಪಡಿಸುವ ಪ್ರಯತ್ನ ಮಾಡಿದ್ದಾರೆ.

    ‘ಮೇಡಂ ನಿಮ್ಮ ಸಂಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರರಂಗದ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿಕೋರಿ ನಿಮ್ಮ ಮನೆಯಲ್ಲೇ  ರಾಮು ಹುಟ್ಟಿಬರಲಿ ಎಂದು ರಾಯರಲ್ಲಿ ಪ್ರಾರ್ಥನೆ ಎಂದು ಟ್ವೀಟ್ ಮಾಡಿದ್ದಾರೆ.

    ದಯಮಾಡಿ ನೀವು ಧೈರ್ಯದಿಂದ ಈ ಸಂಕಷ್ಟ ಎದುರಿಸಿ ಮಕ್ಕಳನ್ನು ರಾಮು ಎತ್ತರಕ್ಕೆ ಬೆಳೆಸಿ. ನಿಮ್ಮ ಜೊತೆ ನಾವು ಉದ್ಯಮದ ಎಲ್ಲ ಸ್ನೇಹಿತರು ಸದಾ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ರಾಯರು ನಿಮಗೆ ನೀಡಲಿ ನಿಮ್ಮ ಕಲಾಬಂಧು ಎಂದು ಟ್ವೀಟ್ ಮಾಡಿದ್ದಾರೆ.

    ಈ ಮುನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಶ್ರುತಿ, ಸುದೀಪ್, ಮಾಳವಿಕ ಅವಿನಾಶ್, ಶ್ರೀ ಮುರುಳಿ ಸೇರಿದಂತೆ ಅನೇಕ ಕಲಾವಿದರೂ ಸಾಂತ್ವನ ಹೇಳಿದ್ದರು.

  • ಸ್ಟಾರ್ ನಟರಿಗೆ ಬಣ್ಣ ಹಚ್ಚಿದ ಮೇಕಪ್ ಮ್ಯಾನ್ ಸೀನಣ್ಣ ಇನ್ನಿಲ್ಲ

    ಸ್ಟಾರ್ ನಟರಿಗೆ ಬಣ್ಣ ಹಚ್ಚಿದ ಮೇಕಪ್ ಮ್ಯಾನ್ ಸೀನಣ್ಣ ಇನ್ನಿಲ್ಲ

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಸ್ಟಾರ್ ನಟರಿಗೆ ಮೇಕಪ್ ಮಾಡಿದ್ದ ಮೇಕಪ್ ಸೀನಣ್ಣ ನಿಧನರಾಗಿದ್ದಾರೆ. ಹಲವು ದಿನಗಳಿಂದ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮೇಕಪ್ ಸೀನಣ್ಣ ಇಂದು ಬೆಳಗ್ಗೆ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ.

    ಹಲವಾರು ವರ್ಷಗಳಿಂದ ಚಂದನವನದಲ್ಲಿ ಶ್ರೀನಿವಾಸ್‍ರವರು ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದು, ಮೇಕಪ್ ಸೀನಣ್ಣ ಎಂದೇ ಖ್ಯಾತಿ ಪಡೆದಿದ್ದರು. ಅಲ್ಲದೇ ಶ್ರೀನಿವಾಸ್ ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.

    ಮೇಕಪ್ ಶ್ರೀನಿವಾಸ್‍ರವರು ನಿರ್ದೇಶಕ ಚೇತನ್ ಕುಮಾರ್ ಆ್ಯಕ್ಷನ್ ಕಟ್ ಹೇಳಿರುವ ಬಹದ್ದೂರ್, ಭರ್ಜರಿ, ಭರಾಟೆ ಇನ್ನಿತರ ಅನೇಕ ಸಿನಿಮಾಗಳಲ್ಲಿ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‍ರವರ ಮುಂಬರುವ ಜೇಮ್ಸ್ ಸಿನಿಮಾಕ್ಕೆ ಕೂಡ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ದುರದೃಷ್ಟವಶತ್ ಮೇಕಪ್ ಸೀನಣ್ಣ ಇಂದು ಎಲ್ಲರನ್ನು ಅಗಲಿದ್ದಾರೆ.

    ಸದ್ಯ ಮೇಕಪ್ ಮ್ಯಾನ್ ಸೀನಣ್ಣ ಸಾವಿಗೆ ನಿರ್ದೇಶಕ ಚೇತನ್ ಕುಮಾರ್ ಸಂತಾಪ ಸೂಚಿಸಿದ್ದು, ‘ನನ್ನ ಎಲ್ಲ ಸಿನಿಮಾಗಳಿಗೂ ಮೇಕಪ್ ಕಲಾವಿದರಾಗಿ ಕೆಲಸ ನಿರ್ವಹಿಸಿದ್ದ ಸೀನಣ್ಣ ಇಂದು ಬೆಳಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ. ವೀ ಮಿಸ್ ಯೂ’ ಎಂದು ಟ್ವೀಟ್ ಮಾಡಿದ್ದಾರೆ.

  • ಇಂದು ಶ್ರೀ ರಾಮ ನವಮಿ ಹಬ್ಬ – ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ

    ಇಂದು ಶ್ರೀ ರಾಮ ನವಮಿ ಹಬ್ಬ – ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ

    ನವದೆಹಲಿ: ಇಂದು ಶ್ರೀ ರಾಮ ನವಮಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಜನತೆಗೆ ಶುಭ ಕೋರಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ದೇವರು ಶ್ರೀ ರಾಮನ ಆಶೀರ್ವಾದ ಯಾವಾಗಲೂ ಭಾರತ ದೇಶದ ಜನತೆಯ ಮೇಲೆ ಇರುತ್ತದೆ ಎಂದು ತಿಳಿಸಿದ್ದಾರೆ.

    ರಾಮನ ಜನ್ಮ ದಿನವನ್ನು ಭಾರತದ ಜನತೆ ರಾಮನವಮಿ ಎಂದು ಇಂದು ಆಚರಿಸುತ್ತಾರೆ. ಶ್ರೀ ರಾಮನವಮಿ ಒಂಬತ್ತು ದಿನಗಳ ಚೈತ್ರ ನವರಾತ್ರಿ ಅಥವಾ ವಸಂತ ನವರಾತ್ರಿಯ ಅಂತ್ಯವನ್ನು ಸೂಚಿಸುತ್ತದೆ. ಕೋವಿಡ್ ಸಾಂಕ್ರಾಮಿಕ ರೋಗದ ಮಧ್ಯೆ ಇದು ಆಚರಿಸುತ್ತಿರುವ ಎರಡನೇ ಶ್ರೀ ರಾಮನವಮಿ ಹಬ್ಬವಾಗಿದೆ.

    ರಾಷ್ಟ್ರಾದ್ಯಂತ ಕೋವಿಡ್-19 ಬಿಕ್ಕಟ್ಟಿನ ಮಧ್ಯೆ ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಅಗತ್ಯವಿದ್ದರೆ ಮಾತ್ರ ಹೊರಗಡೆ ಹೋಗಬೇಕು. ಇಂದಿನ ಬಿಕ್ಕಟ್ಟನ್ನು ಪರಿಹರಿಸಲು ರಾಷ್ಟ್ರವು ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.

    ಮಾರಿಯಾದ ಪುರುಷ ಶ್ರೀ ರಾಮ ಅವರ ಸಂದೇಶವನ್ನು ನಾವು ಶಿಸ್ತುಬದ್ಧವಾಗಿ ಪಾಲಿಸಬೇಕು. ಇದು ರಂಜಾನ್ 7ನೇ ದಿನವೂ ಆಗಿದೆ. ಹಬ್ಬವು ನಮಗೆ ತಾಳ್ಮೆ ಮತ್ತು ಶಿಸ್ತು ಕಲಿಸುತ್ತದೆ. ಕೋವಿಡ್ ವಿರುದ್ಧ ಹೋರಾಡಲು ನಮಗೆ ತಾಳ್ಮೆ ಹಾಗೂ ಶಿಸ್ತು ಎರಡು ಬಹಳ ಮುಖ್ಯ ಎಂದು ಹೇಳಿದ್ದಾರೆ.

  • ಮನಮೋಹನ್ ಸಿಂಗ್ ಶೀಘ್ರ ಚೇತರಿಕೆಗೆ ಇಮ್ರಾನ್ ಖಾನ್ ವಿಶ್

    ಮನಮೋಹನ್ ಸಿಂಗ್ ಶೀಘ್ರ ಚೇತರಿಕೆಗೆ ಇಮ್ರಾನ್ ಖಾನ್ ವಿಶ್

    ನವದೆಹಲಿ: ಕೋವಿಡ್-19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ರವರು ಶೀಘ್ರವೇ ಚೇತರಿಸಿಕೊಳ್ಳಬೇಕೆಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಶುಭ ಹಾರೈಸಿದ್ದಾರೆ.

    ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (88) ರವರಿಗೆ ಸೋಮವಾರ ವಿಪರೀತ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಮನಮೋಹನ್ ಸಿಂಗ್‍ರವರು ಕೋವಿಡ್-19 ಸೋಂಕಿನಿಂದ ಶೀಘ್ರವೇ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಈ ಮುನ್ನ ಮನಮೋಹನ್ ಸಿಂಗ್‍ರವರು ಮಾರ್ಚ್ 4ರಂದು ಎರಡು ಡೋಸ್ ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದರು.

  • ಪ್ರಕಾಶ್ ರಾಜ್ ಅಭಿನಯಕ್ಕೆ ಮೆಗಾಸ್ಟಾರ್ ಚಿರು ಫಿದಾ!

    ಪ್ರಕಾಶ್ ರಾಜ್ ಅಭಿನಯಕ್ಕೆ ಮೆಗಾಸ್ಟಾರ್ ಚಿರು ಫಿದಾ!

    ಹೈದರಾಬಾದ್: ಟಾಲಿವುಡ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ‘ವಕೀಲ್ ಸಾಬ್’ ಚಿತ್ರ ತೆರೆಕಂಡು ಟಿ-ಟೌನ್‍ನಲ್ಲಿ ಧೂಳ್ ಎಬ್ಬಿಸುತ್ತಿದೆ. ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅಭಿನಯಕ್ಕೆ ಮೆಗಾ ಸ್ಟಾರ್ ಚಿರಂಜೀವಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಹೌದು, ಸುಮಾರು ಮೂರೂವರೆ ವರ್ಷದ ಬಳಿಕ ನಟ ಪವನ್ ಕಲ್ಯಾಣ್ ‘ವಕೀಲ್ ಸಾಬ್’ ಸಿನಿಮಾದ ಮೂಲಕ ಸ್ಕ್ರೀನ್ ಮೇಲೆ ಪ್ರೇಕ್ಷಕರ ಮುಂದೆ ಬಂದಿದ್ದು, ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದ್ದಾರೆ. ಈ ಮಧ್ಯೆ ಸಿನಿಮಾದಲ್ಲಿ ಪವನ್ ಕಲ್ಯಾಣ್‍ಗೆ ಎದುರಾಳಿ ಲಾಯರ್ ಆಗಿ ಖಡಕ್ ಡೈಲಾಗ್ ಹೊಡೆಯುವ ಪ್ರಕಾಶ್ ರಾಜ್ ಅಭಿನಯಕ್ಕೆ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

    ಪ್ರಕಾಶ್ ರಾಜ್ ನಟನೆಗೆ ಅಭಿಮಾನಿಗಳಷ್ಟೇ ಅಲ್ಲದೇ ಚಿರಂಜೀವಿ ಕೂಡ ಮಾರುಹೋಗಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರಕಾಶ್ ರಾಜ್‍ರಂತಹ ಕಲಾವಿದ ಇದ್ದರೆ, ಸಹಜವಾಗಿ ಸಹ ಕಲಾವಿದರು ಪರ್ಫಾಮೆನ್ಸ್ ಕೂಡ ಹೆಚ್ಚಾಗುತ್ತದೆ. ‘ವಕೀಲ್ ಸಾಬ್’ ಚಿತ್ರದಲ್ಲಿ ಅವರ ನಟನೆ ಅದ್ಭುತ, ಪವನ್ ಕಲ್ಯಾಣ್ ಮುಂದೆ ಉತ್ತಮವಾಗಿ ನಟಿಸಿದ್ದಾರೆ. ಶುಭಾಶಯಗಳು ಪ್ರಕಾಶ್, ಹೀಗೆ ಮುಂದುವರಿಸಿ ಎಂದು ಕ್ಯಾಪ್ಷನ್ ಹಾಕಿ ಟ್ವೀಟ್ ಮಾಡಿದ್ದಾರೆ.

    ಚಿರು ಟ್ವೀಟ್‍ಗೆ ರಿಯಾಕ್ಟ್ ಮಾಡಿರುವ ಪ್ರಕಾಶ್, ಎಂದಿಗೂ ಸ್ಫೂರ್ತಿದಾಯಕ, ಎಂದಿಗೂ ಪ್ರೋತ್ಸಾಹಿಸುವ ಅಣ್ಣಾ.. ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ‘ವಕೀಲ್ ಸಾಬ್’ ಸಿನಿಮಾದಲ್ಲಿ ವಕೀಲ ಪಾತ್ರನಾಗಿ ಪವನ್ ಕಲ್ಯಾಣ್ ಮಿಂಚಿದ್ದು, ನಿರ್ದೇಶಕ ವೇಣು ಶ್ರೀರಾಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾದ ಪ್ರಮುಖ ಪಾತ್ರದಲ್ಲಿ ನಿವೇತಾ ಥಾಮಸ್, ಶ್ರುತಿ ಹಾಸನ್, ಅನನ್ಯಾ ಮತ್ತು ಅಂಜಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಹಿಂದಿಯ ಪಿಂಕ್ ಸಿನಿಮಾದ ರಿಮೇಕ್ ಆಗಿದೆ.

  • 2006ರ ಶೂಟಿಂಗ್ ನೆನಪಿಸಿ ರಾಜಣ್ಣನ ನೆನೆದು ಭಾವುಕರಾದ ಜಗ್ಗೇಶ್

    2006ರ ಶೂಟಿಂಗ್ ನೆನಪಿಸಿ ರಾಜಣ್ಣನ ನೆನೆದು ಭಾವುಕರಾದ ಜಗ್ಗೇಶ್

    ಬೆಂಗಳೂರು: ಇಂದು ವರನಟ ಡಾ. ರಾಜ್‍ಕುಮಾರ್‍ರವರ 15ನೇ ವರ್ಷದ ಪುಣ್ಯ ಸ್ಮರಣೆ. ಈ ಹಿನ್ನೆಲೆ ಸ್ಯಾಂಡಲ್‍ವುಡ್ ನವರಸ ನಾಯಕ ಜಗ್ಗೇಶ್ ಅಂದಿನ ಹಳೆಯ ನೆನಪುಗಳನ್ನು ಮೆಲುಕುಹಾಕಿಕೊಂಡಿದ್ದಾರೆ.

    ಈ ಬಗ್ಗೆ ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಏಪ್ರಿಲ್ 2006 ಮಧ್ಯಾಹ್ನ 1 ಗಂಟೆಗೆ ಪಾಂಡವರು ಚಿತ್ರದ ಊಟದ ವಿರಾಮ. ಶ್ರೀರಂಗಪಟ್ಟಣದ ಕುಂತಿಬೆಟ್ಟದ ರಸ್ತೆಯಲ್ಲಿನ ಮನೆ. ಅಂದು ಅಂಬರೀಶ್‍ರವರ ಅಭಿಮಾನಿ ಮನೆಯಿಂದ ವಿಶೇಷ ಊಟದ ವ್ಯವಸ್ಥೆ ಇತ್ತು. ಅಂದು ಅಂಬರೀಶ್‍ರವರೇ ಎಲ್ಲರಿಗೂ ಪ್ರೀತಿಯಿಂದ ಊಟ ಬಡಿಸಿ ತಾವು ತಿಂದರು. ಆಗ ಕ್ಯಾರಾವಾನ್ ವ್ಯವಸ್ಥೆ ಇರದ ಕಾರಣ ಎಲ್ಲ ನಟರು ಅವರವರ ಕಾರಿನಲ್ಲಿ ಎಸಿ ಹಾಕಿ ವಿಶ್ರಾಂತಿ ಪಡೆಯುವ ಅಭ್ಯಾಸ.

    ನಾನು ಊಟ ಆದಮೇಲೆ 1/2 ಗಂಟೆ ಮಲಗುವೆ. ನನಗೆ ತೊಂದರೆಕೊಡದಂತೆ ಸಹಾಯಕರು ಕಾವಲು ಇರುತ್ತಾರೆ. ನಾನು ಏಳುವವರೆಗೂ ಯಾರು ಹತ್ತಿರಬರುವುದಿಲ್ಲ. ಆ ನಂಬಿಕೆಯಲ್ಲೆ ನಿದ್ರೆಗೆ ಜಾರಿದೆ. ಇದ್ದಕ್ಕಿದಂತೆ ವಾಂತಿಬಾಬು ಕಿಟಕಿ ಜೋರಾಗಿ ತಟ್ಟಿದ. ನನ್ನ ಸಿಟ್ಟು ನೆತ್ತಿಗೇರಿತು. ಕಾರಣ ಕೇಳಲು ಬಾಗಿಲು ತೆರೆದೆ. ವಾಂತಿ ಬಾಬು ರಾಜಣ್ಣ ಹೋಗಿಬಿಟ್ಟರು ಎಂದ. ಕೆಲ ನಿಮಿಷ ಏನು ಕಾಣಲಿಲ್ಲ, ಕೇಳಲಿಲ್ಲ. ನನ್ನ ತಂದೆ ಸತ್ತಾಗಲು ಹಾಗೆ ಆಯಿತು. ಯಾರಿಗೂ ಹೇಳದೆ ಹೊರಟವನೆ ಅಣ್ಣನ ಚಿತಾವಾಹನ ತಲುಪಿದೆ. ಕೊನೆವರೆಗೂ ಜೊತೆಯಿದ್ದು ಬಾಲ್ಯದಿಂದ ಕಂಡ ರಾಜಣ್ಣನ ಪಾತ್ರ ಹಾಗೂ ಅವರ ಸಾಂಗತ್ಯ ಮಾತ್ರ ನೆನಪಾಗುತ್ತಿತ್ತು. ಇತಿಹಾಸ ನೆನಪಿನ ಅಂಗಳಕ್ಕೆ ಜಾರಿತು. ರಾಜಣ್ಣ ನನ್ನ ಹೃದಯದಲ್ಲೇ ಲೀನವಾದರು. ಮತ್ತೆ ಬನ್ನಿ ಅಣ್ಣ ಎಂದು ಟ್ವೀಟ್ ಮಾಡಿದ್ದಾರೆ.

     

     

  • ಸಮಾಜ ಸುಧಾರಕ ಜ್ಯೋತಿಬಾ ಫುಲೆಗೆ ಗೌರವ ಸಲ್ಲಿಸಿದ ಮೋದಿ

    ಸಮಾಜ ಸುಧಾರಕ ಜ್ಯೋತಿಬಾ ಫುಲೆಗೆ ಗೌರವ ಸಲ್ಲಿಸಿದ ಮೋದಿ

    ನವದೆಹಲಿ: ಸಮಾಜ ಸುಧಾರಕ ಜ್ಯೋತಿಬಾ ಫುಲೆರವರ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದ್ದಾರೆ ಹಾಗೂ ಇವರ ಸಾಮಾಜಿಕ ಕಾರ್ಯಗಳು ಭವಿಷ್ಯದ ಪೀಳಿಗೆಗೆ ಸ್ಪೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು, ಜ್ಯೋತಿ ಬಾ ಫುಲೆಯವರು ಶ್ರೇಷ್ಠ ಚಿಂತಕ, ದಾರ್ಶನಿಕ ಮತ್ತು ಬರಹಗಾರ ಎಂದು ಶ್ಲಾಘಸಿದ್ದಾರೆ. ಅವರು ತಮ್ಮ ಜೀವನದೂದ್ದಕ್ಕೂ ಮಹಿಳಾ ಶಿಕ್ಷಣ ಹಾಗೂ ಮತ್ತು ಸಬಲೀಕರಣಕ್ಕೆ ಬದ್ದರಾಗಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

    1827ರಲ್ಲಿ ಮಹಾರಾಷ್ಟ್ರದಲ್ಲಿ ಹಿಂದೂಳಿದ ಜನಾಂಗದಲ್ಲಿ ಜನಿಸಿದ ಜ್ಯೋತಿಬಾ ಫುಲೆ ಸಾಮಾಜಿಕ ತಾರತಮ್ಯದ ವಿರುದ್ಧ ಹೋರಾಟ ನಡೆಸಿದರು ಹಾಗೂ ವಂಚಿತಗೊಂಡ ಸಮುದಾಯಗಳಿಗೆ ಶಿಕ್ಷಣ ಬಗ್ಗೆ ಉತ್ತೇಜಿಸುವಲ್ಲಿ ಶ್ರಮಪಟ್ಟರು. ಅಲ್ಲದೆ ಅವರ ಪತ್ನಿ ಸಾವಿತ್ರಿ ಬಾಯಿ ಫುಲೆ ದೇಶದ ಮೊದಲ ಮಹಿಳಾ ಶಿಕ್ಷಕಿ ಎಂದು ಕರೆಯಲಾಗುತ್ತದೆ. ಜೊತೆಗೆ ಸಾವಿತ್ರಿ ಬಾಯಿ ಫುಲೆ ಮಹಿಳೆಯರಿಗೆ ಶಿಕ್ಷಣವನ್ನು ಉತ್ತೇಜಿಸುವ ಪ್ರಯತ್ನಗಳಲ್ಲಿ ಪ್ರವರ್ತಕರು ಎಂದರು.

  • ಸಿದ್ದಗಂಗಾ ಶ್ರೀಗಳ 114ನೇ ಹುಟ್ಟುಹಬ್ಬ – ಪ್ರಧಾನಿಗಳಿಂದ ಗೌರವ ಸಲ್ಲಿಕೆ

    ಸಿದ್ದಗಂಗಾ ಶ್ರೀಗಳ 114ನೇ ಹುಟ್ಟುಹಬ್ಬ – ಪ್ರಧಾನಿಗಳಿಂದ ಗೌರವ ಸಲ್ಲಿಕೆ

    ನವದೆಹಲಿ: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 114ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.

    ಶಿವಕುಮಾರ ಸ್ವಾಮೀಜಿಯವರು ಪ್ರಖ್ಯಾತ ಲಿಂಗಾಯತ ವಿದ್ವಂಸರು, ಶಿಕ್ಷಣತಜ್ಞರು ಮತ್ತು ಪ್ರಸಿದ್ಧ ಸಿದ್ಧಗಂಗ ಮಠದ ಆಧ್ಯಾತ್ಮಿಕ ನಾಯಕರಾಗಿದ್ದರು. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳು ಸ್ಪೂರ್ತಿದಾಯಕವಾದವುಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ಪವಿತ್ರವಾದಂತಹ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಯವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಸಮಾಜಕ್ಕೆ ಸೇವೆ ಸಲ್ಲಿಸಲು ಹಾಗೂ ಬಡವರ ಆರೈಕೆಗಾಗಿ ಅವರು ಮಾಡಿದ ಅಸಂಖ್ಯಾತ ಪ್ರಯತ್ನಗಳು ವ್ಯಾಪಕವಾಗಿ ನೆನಪಿನಲ್ಲಿವೆ. ಅವರ ಉದಾತ್ತ ಆಲೋಚನೆಗಳು ಮತ್ತು ಆದರ್ಶಗಳಿಂದ ನಾವು ಆಳವಾಗಿ ಪ್ರೇರಿತರಾಗಿದ್ದೇವೆ ಎಂದು ಕ್ಯಾಪ್ಷನ್ ಹಾಕುವ ಮೂಲಕ ಟ್ವೀಟ್ ಮಾಡಿದ್ದಾರೆ.