Tag: tweet

  • ಭಯೋತ್ಪಾದಕರ ಅಟ್ಟಹಾಸಕ್ಕೆ ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಲಿ

    ಭಯೋತ್ಪಾದಕರ ಅಟ್ಟಹಾಸಕ್ಕೆ ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಬಲಿ

    ಶ್ರೀನಗರ: ಭಯೋತ್ಪಾದಕರ ಅಟ್ಟಹಾಸಕ್ಕೆ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ಜಮ್ಮು ಹಾಗೂ ಕಾಶ್ಮೀರದ ಸೊಪೋರ್‍ನಲ್ಲಿ ನಡೆದಿದೆ. ಸದ್ಯ ಘಟನೆ ಕುರಿತಂತೆ ಪ್ರದೇಶದ ಸುತ್ತಮುತ್ತಲು ಶೋಧಕಾರ್ಯ ಆರಂಭಿಸಲಾಗಿದೆ.

    ಘಟನೆ ವೇಳೆ ಜಮ್ಮು ಹಾಗೂ ಕಾಶ್ಮೀರದ ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರೊಬ್ಬರು ಮೃತಪಟ್ಟಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

    ಬಿ ಡಿ ಸಿ ಅಧ್ಯಕ್ಷೆ ಮತ್ತು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಫರೀದಾ ಖಾನ್ ನೇತೃತ್ವದಲ್ಲಿ ನಡೆದ ಮುನ್ಸಿಪಲ್ ಕೌನ್ಸಿಲ್ ಸಭೆ ವೇಳೆ ಭಯೋತ್ಪಾದಕರು ಹೊರಗಿನಿಂದ ದಾಳಿ ನಡೆಸಿದ್ದರು. ಲಂಗೇಟ್ ಹಂದ್ವರದ ಬಿಡಿಸಿ ಅಧ್ಯಕ್ಷೆ ಫರೀದಾ ಖಾನ್ ದಕ್ ಬಂಗಲೆಯಲ್ಲಿ ಸಭೆ ನಡೆಸುತ್ತಿದ್ದ ವೇಳೆ ಉಗ್ರರು ಅವರ ಮೇಲೆ ಗುಂಡು ಹಾರಿಸಿರುವುದಾಗಿ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಪ್ರೀತಿಯ ಮಳೆ ಸುರಿಸಿದ ನಿಮಗೆ ಒಳ್ಳೆಯದಾಗಲಿ – ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಲ್ಲು ಅರ್ಜುನ್

    ಪ್ರೀತಿಯ ಮಳೆ ಸುರಿಸಿದ ನಿಮಗೆ ಒಳ್ಳೆಯದಾಗಲಿ – ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಲ್ಲು ಅರ್ಜುನ್

    ಹೈದರಾಬಾದ್: ಟಾಲಿವುಡ್ ನಟ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಚಿತ್ರರಂಗಕ್ಕೆ ಪ್ರವೇಶಿ ಇಂದಿಗೆ 18 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆ ಅಲ್ಲು ಅರ್ಜುನ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

    2003ರಲ್ಲಿ ಗಂಗೋತ್ರಿ ಸಿನಿಮಾದ ಮೂಲಕ ತೆಲುಗು ಚಿತ್ರರಂಗಕ್ಕೆ ಪ್ರವೇಶಿಸಿದ ಹಲವಾರು ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಅಭಿಮಾನಿಗಳಗೆ ಮನರಂಜನೆ ನೀಡಿದ್ದಾರೆ. ಈ ಕುರಿತಂತೆ ಅಲ್ಲು ಅರ್ಜುನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

    ಇಷ್ಟು ವರ್ಷ ಅಭಿಮಾನಿಗಳು ನೀಡಿದ ಪ್ರೀತಿ ಹಾಗೂ ಬೆಂಬಲಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಇಂದಿಗೆ ನನ್ನ ಮೊದಲ ಸಿನಿಮಾ ಗಂಗೋತ್ರಿ ಬಿಡುಗಡೆಯಾಗಿ 18 ವರ್ಷ ಕಳೆದಿದೆ. ನನ್ನ ಈ ಸಿನಿ ಜರ್ನಿಯಲ್ಲಿ ಭಾಗಿಯಾಗಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನನ್ನ ಹೃದಯವು ಕೃತಜ್ಞತೆಗಳಿಂದ ತುಂಬಿದೆ. ಇಷ್ಟು ವರ್ಷ ನನಗೆ ಪ್ರೀತಿಯ ಮಳೆ ಸುರಿಸಿದ ಎಲ್ಲರಿಗೂ ನಿಜವಾಗಿಯೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ನಿಮ್ಮೆಲ್ಲರ ಆಶೀರ್ವಾದಗಳಿಗೆ ಧನ್ಯವಾದ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    ಗಂಗೋತ್ರಿ ಸಿನಿಮಾದ ಬಳಿಕ, 2004ರಲ್ಲಿ ನಿರ್ದೇಶಕ ಸುಕುಮಾರನ್ ಆ್ಯಕ್ಷನ್ ಕಟ್ ಹೇಳಿದ್ದ ಆರ್ಯ ಸಿನಿಮಾದಲ್ಲಿ ಅಭಿನಯಿಸಿದ್ದರು. 2005ರಲ್ಲಿ ಬನ್ನಿ, 2006ರಲ್ಲಿ ಹ್ಯಾಪಿ, 2007ರಲ್ಲಿ ದೇಸಮದುರು ಸಿನಿಮಾದಲ್ಲಿ ಅಭಿನಯಿಸಿದರು. ಇತ್ತೀಚೆಗೆ ಅಲಾ ವೈಕುಂಠಪುರಂಲೋ ಸಿನಿಮಾದಲ್ಲಿ ನಟಿಸಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿದ್ದರು. ಇನ್ನೂ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ಡ್ಯೂಯೆಟ್ ಹಾಡಿದ್ದರು. ಸಿನಿಮಾಕ್ಕೆ ತ್ರಿವಿಕ್ರಮ್ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಿದ್ದರು.

    ಸದ್ಯ ಅಲ್ಲು ಅರ್ಜುನ್ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಈ ಸಿನಿಮಾದಲ್ಲಿ ಸ್ಟೈಲಿಷ್ ಸ್ಟಾರ್‍ಗೆ ಜೊತೆಯಾಗಿ ಕನ್ನಡದ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ನಿರ್ದೇಶಕ ಸುಕುಮಾರನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ದೇವಿ ಶ್ರೀ ಪ್ರಸಾದ್ ಸಂಗೀತಾ ಸಂಯೋಜಿಸಿದ್ದಾರೆ. ಈ ಸಿನಿಮಾ 5 ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ.

  • ರೈತರ ಆದಾಯ ದ್ವಿಗುಣ ಮಾಡ್ತೇವೆ ಎಂದಿದ್ದ ಪ್ರಧಾನಿ ವಿರುದ್ಧ ಹೆಚ್‍ಡಿಕೆ ಕಿಡಿ

    ರೈತರ ಆದಾಯ ದ್ವಿಗುಣ ಮಾಡ್ತೇವೆ ಎಂದಿದ್ದ ಪ್ರಧಾನಿ ವಿರುದ್ಧ ಹೆಚ್‍ಡಿಕೆ ಕಿಡಿ

    ಬೆಂಗಳೂರು: ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿದ್ದ ಪ್ರಧಾನಿ ನರೆಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

    2022ರ ಹೊತ್ತಿಗೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಮೋದಿ ಹೇಳಿದ್ದರು. ಆದರೆ, 2021ರ ವೇಳೆಗೆ ರೈತರ ಕೃಷಿ ಖರ್ಚು-ವೆಚ್ಚ ದುಪ್ಪಟ್ಟಾಗಿದೆ. ರಸಗೊಬ್ಬರ ಬೆಲೆ ಏರಿದೆ. ರೈತರು ಬೋರ್‍ವೆಲ್ ಕೊರೆಸಲಾಗದಂತಹ ಪರಿಸ್ಥಿತಿ ಉದ್ಭವವಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯು ಪರಿಸ್ಥಿತಿಯನ್ನು ವಿಷಮಗೊಳಿಸಿದೆ. ಆದಾಯ ದ್ವಿಗುಣ ಎಲ್ಲಿ? ಎಂದು ಪ್ರಶ್ನಿಸಿದರು.

    ಇವತ್ತಿನ ಲೆಕ್ಕಾಚಾರದ ಪ್ರಕಾರ ರೈತರು ಬೋರ್‍ವೆಲ್ ಕೊರೆಸಬೇಕಿದ್ದರೆ, 1-2ಲಕ್ಷ ಖರ್ಚು ಮಾಡಬೇಕು. ಪಿವಿಸಿ ಪೈಪ್‍ಗಳ ದರ ದುಪ್ಪಟ್ಟಾಗಿದೆ, ಮೋಟರ್ ಬೆಲೆಯಲ್ಲಿ ಜಿಗಿತವಾಗಿದೆ. ಕೃಷಿ ಪಂಪ್ ಸೆಟ್‍ಗಳಿಗೆ ರೈತರಾದವರೇ ಶೇ.18ರಷ್ಟು ಜಿಎಸ್‍ಟಿ ಪಾವತಿಸಬೇಕಿರುವುದು ವಿಷಾದಕರ. ಇದು ಕೃಷಿಗೆ ಪೂರಕ ಸ್ಥಿತಿಯೇ ಎಂಬುದರ ಅವಲೋಕನೆಯಾಗಬೇಕಿದೆ ಎಂದು ತಿಳಿಸಿದರು.

    ಕೃಷಿ ಪರಿಕರಗಳ ಬೆಲೆ ಏರಿಕೆ ಬಗ್ಗೆ ರಾಜ್ಯದ ಕೃಷಿ ಸಚಿವರು ನೀಡಿರುವ ಹೇಳಿಕೆ ಇಂತಿದೆ. ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಹೆಚ್ಚಳಕ್ಕೆ ರೈತರು ಹೊಂದಿಕೊಳ್ಳಬೇಕು ಎಂದಿದ್ದಾರೆ. ರೈತರ ಕಷ್ಟ ನೀಗಿಸಬೇಕಾದವರು ಬೇಜವಾಬ್ದಾರಿತನ ತೋರುವುದು ಬೇಸರದ ವಿಚಾರ ಎಂದು ವಿಷಾದ ವ್ಯಕ್ತಪಡಿಸಿದರು.

    ಕೃಷಿಯಲ್ಲಿ ಆದಾಯ ಗಳಿಸುವುದು ಇರಲಿ, ಕೃಷಿ ಮಾಡಲೇ ರೈತ ಸಂಕಷ್ಟ ಅನುಭವಿಸಬೇಕಾಗಿರುವುದು ಇವತ್ತಿನ ದುರಂತ. ಇದನ್ನು ನಿವಾರಿಸಲಾಗದೇ ಇರುವುದು ರೈತರ ಆದಾಯ ದ್ವಿಗುಣ ಮಾಡುವ ಕ್ರಮವೇ ಎಂಬುದರ ಬಗ್ಗೆ ಮೋದಿ ಅವರು ಉತ್ತರಿಸಬೇಕು. ಪರಿಸ್ಥಿತಿ ಹೀಗಿದ್ದು, ಸಮಾವೇಶದಲ್ಲಿ ರೈತರ ಕಲ್ಯಾಣದ ಬಗ್ಗೆ ಮೋದಿ ಅವರು ಆಡುವ ಮಾತುಗಳು ಪ್ರಾಮಾಣಿಕವೇ? ಎಂದು ಕಿಡಿ ಕಾರಿದರು.

    ಪ್ರಧಾನಿ ಮೋದಿ ಅವರು ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತ ಅಳಿಯ ಕೇಂದ್ರಿತ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ. ಆದರೆ ಕರ್ನಾಟಕದಲ್ಲಿ ಯಾವ ಏಕಗವಾಕ್ಷಿ ವ್ಯವಸ್ಥೆ ಇದೆ? ಮೋದಿ ಉತ್ತರಿಸುವರೇ? ಎಂದು ಹರಿಹಾಯ್ದರು.

    ಕರ್ನಾಟಕದಲ್ಲಿ ಯಡಿಯೂರಪ್ಪ ಅವರ ಕುರ್ಚಿ ಹಿಂದೆ ಅಡಗಿ ಕುಳಿತಿರುವ, ರಾಜ್ಯದ ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ಬಗ್ಗೆ ಬಿಜೆಪಿಯ ಹಿರಿಯ ಶಾಸಕರೇ ಹಾದಿ ಬೀದಿಯಲ್ಲಿ ಗೋಳಾಡುತ್ತಿದ್ದಾರೆ. ಯಡಿಯೂರಪ್ಪ ಕುಟುಂಬದ ಅಕ್ರಮದ ಬಗ್ಗೆ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ಸ್ವಘೋಷಿತ ಮಹಾನಾಯಕ-ಏಕಗವಾಕ್ಷಿ ಬಗ್ಗೆ ಮೋದಿ ಮಾತಾಡುವರೇ? ಎಂದು ವಾಗ್ದಾಳಿ ನಡೆಸಿದ್ದಾರೆ.

    ಕರ್ನಾಟಕದ ಸರ್ಕಾರದಲ್ಲೇ ಏಕಗವಾಕ್ಷಿ ಯೊಂದು ಇರುವಾಗ, ಅದನ್ನು ಉದ್ದೇಶಪೂರ್ವಕವಾಗಿ ಪೋಷಿಸುತ್ತಿರುವಾಗ ಮೋದಿ ಅವರು ಮಮತ ಬಗ್ಗೆ ಟೀಕಿಸುವುದು ಆತ್ಮವಂಚನೆ. ರಾಜ್ಯದ ಜನರ ತೆರಿಗೆ ಹಣ, ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ನುಂಗಿಹಾಕುತ್ತಿರುವ, ಬಿಜೆಪಿ ಸರ್ಕಾರದ ‘ಏಕಗವಾಕ್ಷಿ’ ವ್ಯವಸ್ಥೆಯನ್ನು ಮೋದಿ ಮೊದಲು ಕೊನೆಗಾಣಿಸಲಿ ಎಂದು ಹೆಚ್‍ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.

  • ಪಾಕ್ ಪ್ರಧಾನಿಗೆ ಕೊರೊನಾ – ಶೀಘ್ರ ಚೇತರಿಕೆಗೆ ಮೋದಿ ಹಾರೈಕೆ

    ಪಾಕ್ ಪ್ರಧಾನಿಗೆ ಕೊರೊನಾ – ಶೀಘ್ರ ಚೇತರಿಕೆಗೆ ಮೋದಿ ಹಾರೈಕೆ

    ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

    ಈ ಕುರಿತಂತೆ ಶನಿವಾರ ಸಂಜೆ ಟ್ವೀಟ್ ಮಾಡಿರುವ ಮೋದಿ, ಕೊರೊನಾ ಸೋಂಕಿನಿಂದ ಇಮ್ರಾನ್ ಖಾನ್ ಶೀಘ್ರವೇ ಗುಣಮುಖರಾಗಲಿ ಎಂದು ಬರೆದುಕೊಂಡಿದ್ದಾರೆ.

    ಕೆಲವು ದಿನಗಳ ಹಿಂದೆ ಪಾಕಿಸ್ತಾನದ ಆರೋಗ್ಯ ಸಚಿವರು, ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ಇಬ್ಬರನ್ನೂ ಮನೆಯಲ್ಲಿಯೇ ಕ್ವಾರಂಟೈನ್‍ಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.

    ಕಳೆದ ಗುರುವಾರ ಮಾರ್ಚ್ 19 ರಂದು ಇಮ್ರಾನ್ ಖಾನ್ ಅವರು ಚೀನಾದ ಸಿನೋಫಾರ್ಮ್ ಲ್ಯಾಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಅಲ್ಲದೆ ಇತ್ತೀಚೆಗೆ ಇಮ್ರಾನ್‍ಖಾನ್ ಹಲವಾರು ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಭೆಗಳಿಗೆ ಮಾಸ್ಕ್ ಧರಿಸದೇ ಭಾಗವಹಿಸಿದ್ದರು ಎಂಬ ಆರೋಪಗಳು ಕೇಳಿಬರುತ್ತಿದೆ.

    ಒಟ್ಟಾರೆ ಸದಾ ಯುದ್ಧ, ಕದನದಿಂದ ಕೂಡಿರುವ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯಾವುದೇ ಉತ್ತಮ ಬಾಂಧವ್ಯವಿಲ್ಲ ಎಂದು ಉಭಯ ದೇಶಗಳು ತಿಳಿದಿದ್ದವು. ಆದರೆ ಮೋದಿ, ಇಮ್ರಾನ್‍ ಖಾನ್‍ಗೆ ಚೇತರಿಕೆಗೊಳ್ಳುವಂತೆ ಶುಭ ಕೋರಿರುವುದು ಮಾನವೀಯತೆ ಮೆರೆದಿರುವುದಕ್ಕೆ ಸಾಕ್ಷಿಯಾಗಿದ್ದು, ಎಲ್ಲ ರಾಷ್ಟ್ರಗಳ ಗಮನ ಸೆಳೆದಿದೆ.

     

     

  • ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ತಳಮಟ್ಟದಿಂದ ಪಕ್ಷವನ್ನು ಬಲ ಪಡಿಸಿದ ಪ್ರಮುಖ ನಾಯಕ – ಡಿವಿಎಸ್‍ಗೆ ಮೋದಿ ಶುಭಾಶಯ

    ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರು ಇಂದು 68 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಸಹೋದ್ಯೋಗಿಗಳು ಟ್ವೀಟ್ ಮಾಡುವ ಮೂಲಕ ಸದಾನಂದ ಗೌಡರಿಗೆ ಶುಭಾಶಯ ತಿಳಿಸಿದ್ದಾರೆ.

    ಈ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯವರು, ಕೇಂದ್ರ ಸಚಿವ ಶ್ರೀ ಡಿ.ವಿ ಸದಾನಂದ ಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ನೀವು ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಪ್ರಮುಖ ಕಾರ್ಯನಿರ್ವಹಿಸಿದ ಓರ್ವ ಅನುಭವಿ ಪ್ರಭಾವಿ ನಾಯಕ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರಗಳ ಬೆಳವಣಿಗೆ ಪ್ರಮುಖ ಪಾತ್ರವಹಿಸಿದವರು. ಅವರ ದೀರ್ಘಕಾಲ ಬಾಳಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಕೇಂದ್ರದ ಹಿರಿಯ ಸಚಿವರಾದ ರಾಜನಾಥ್ ಸಿಂಗ್‍ರವರು, ರಾಷ್ಟ್ರ ಮತ್ತು ಪಕ್ಷಕ್ಕೆ ಹಲವಾರು ಸೇವೆ ಸಲ್ಲಿಸಿದ್ದಾರೆ ಮತ್ತು ತಮ್ಮ ಕರ್ತವ್ಯವನ್ನು ಸಂಪೂರ್ಣವಾಗಿ ಅಚ್ಚು-ಕಟ್ಟಿನಿಂದ ನಿರ್ವಹಿಸುತ್ತಾರೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಮತ್ತೊರ್ವ ಕ್ಯಾಬಿನೆಟ್ ಸಹೋದೋಗ್ಯಿ ಪ್ರಕಾಶ್ ಜಾವಡೇಕರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡರವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಹಾಗೂ ದೀರ್ಘಯುಷ್ಯ ದೊರೆಯಲಿ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

    ಸದಾನಂದ ಗೌಡರು ಬೆಂಗಳೂರು ಉತ್ತರ ಕ್ಷೇತ್ರದಿಂದ ಗೆದ್ದು ಲೋಕಸಭೆಗೆ ಆಯ್ಕೆ ಆಗಿದ್ದಾರೆ. ಈ ಮುನ್ನ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಅಲ್ಲದೆ 2016ರಲ್ಲಿ ಕಾನೂನು ಹಾಗೂ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.

  • ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರಿನಲ್ಲಿ ಭಾರತದ ಮೊದಲ ಎಸಿ ರೈಲ್ವೆ ನಿಲ್ದಾಣ

    ಬೆಂಗಳೂರು: ರೈಲ್ವೆ ಸಚಿವ ಪಿಯೂಷ್ ಗೋಯಲ್ ನಗರದಲ್ಲಿ ನಿರ್ಮಾಣವಾಗುತ್ತಿರುವ 314 ಕೋಟಿ ರೂ ವೆಚ್ಚದ ರೈಲ್ವೆ ನಿಲ್ದಾಣವು ದೇಶದ ಮೊದಲ ಹವಾನಿಯಂತ್ರಿತ(ಏಸಿ)  ರೈಲ್ವೇ ನಿಲ್ದಾಣವಾಗಲಿದೆ  ಎಂದು ತಿಳಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಭಾರತದ ಮೊಟ್ಟ ಮೊದಲ ಕೇಂದ್ರೀಕೃತ ಹವಾನಿಯಂತ್ರಿತ ರೈಲ್ವೆ ನಿಲ್ದಾಣಕ್ಕೆ ಆದಷ್ಟು ಬೇಗ ಚಾಲನೆ ನೀಡಲಾಗುತ್ತದೆ ಎಂದು ಕ್ಯಾಪ್ಷನ್ ಹಾಕಿದ್ದಾರೆ.

    ಬೈಯಪ್ಪನಹಳ್ಳಿಯ ಹೊಸ ಟರ್ಮಿನಲ್‍ಗೆ 2015-16ರಂದು ಅನುಮತಿ ನೀಡಲಾಗಿದ್ದು, ಈ ರೈಲ್ವೆ ನಿಲ್ದಾಣ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ನಿರ್ಮಿಸಲಾಗಿದೆ. ಅಲ್ಲದೆ ಪ್ಲಾಟ್‍ಫಾರಂಗಳು, ಶೌಚಾಲಯ, ವಿಶ್ರಾಂತಿ ಕೋಣೆ, ಪಾರ್ಕಿಂಗ್, ಬಸ್‍ಬೇ ಹೀಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದ್ದು, ವಿಮಾನ ನಿಲ್ದಾಣದ ಮಾದರಿಯಲ್ಲಿಯೇ ರೈಲ್ವೆ ನಿಲ್ದಾಣವನ್ನು ನಿರ್ಮಿಸಲಾಗಿದೆ. ಇದನ್ನೂ ಓದಿ: ಒಂದು ಹನಿ ನೀರು ಹೊರ ಬೀಳಲ್ಲ – ಮೈಸೂರು, ಬೆಂಗಳೂರು ಹಳಿ ನಿರ್ವಹಣೆಗೆ ಗೋಯಲ್‌ ಮೆಚ್ಚುಗೆ

    ಮೆಜಿಸ್ಟಿಕ್‍ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಯಶವಂತಪುರ ರೈಲು ನಿಲ್ದಾಣದ ಬಳಿಕ ಬೈಯಪ್ಪನಹಳ್ಳಿಯ ಟರ್ಮಿನಲ್ ನಗರದ ಮೂರನೇ ರೈಲ್ವೆ ನಿಲ್ದಾಣವಾಗಿದೆ. ಜೊತೆಗೆ 4200 ಚದರ ಮೀಟರ್ ವ್ಯಾಪ್ತಿ ಇರುವ ಈ ನಿಲ್ದಾಣದಲ್ಲಿ ಏಳು ಪ್ಲಾಟ್‍ಫಾರಂ, ಏಳು ಸ್ಲಾಬಿಂಗ್ ಲೈನ್, ಮೂರು ಪಿನ್‍ಲೈನ್‍ಗಳಿವೆ ಹಾಗೂ ಎಲ್ಲಾ ಕಡೆ ಎಲ್‍ಇಡಿ ಲೈಟ್‍ಗಳನ್ನು ಅಳವಡಿಸಲಾಗಿದೆ.

    ವಿಐಪಿ ಲಾಂಚ್, ಫುಡ್‍ಕೋರ್ಟ್, ಎಸ್ಕಲೇಟರ್, ಲಿಫ್ಟ್, ಫ್ಲಾಟ್‍ಫಾರಂ ಹಾಗೂ ಸಬ್ ವೇಗಳನ್ನು ನಿರ್ಮಿಸಲಾಗಿದ್ದು, 50 ರೈಲು ಸಂಚರಿಸುವ ವ್ಯವಸ್ಥೆ, ಸಾವಿರಕ್ಕೂ ಅಧಿಕ ದ್ವಿಚಕ್ರ ವಾಹನ, 250ಕ್ಕೂ ಹೆಚ್ಚು ಕಾರುಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಕೊಡಲಾಗಿದೆ.

  • ಅಭಿಮಾನಿಗಳ ಅಭಿಮಾನಕ್ಕಿದು ಮಾದರಿಯಾಗದಿರಲಿ – ಯಶ್

    ಅಭಿಮಾನಿಗಳ ಅಭಿಮಾನಕ್ಕಿದು ಮಾದರಿಯಾಗದಿರಲಿ – ಯಶ್

    ಬೆಂಗಳೂರು: ಅಂತ್ಯಕ್ರಿಯೆಯಲ್ಲಿ ಯಶ್ ಭಾಗವಹಿಸಬೇಕೆಂಬ ಕೋರಿಕೆಯೊಂದಿಗೆ ಮಂಡ್ಯ ಜಿಲ್ಲೆಯ ಕೃಷ್ಣ ಎಂಬ ಅಭಿಮಾನಿ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಈ ಕುರಿತಂತೆ ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಘಟನೆ ವಿಚಾರವಾಗಿ ಯಶ್, ಅಭಿಮಾನಿಗಳ ಅಭಿಮಾನವೇ ನಮ್ಮ ಬದುಕು, ಜೀವನ, ಹೆಮ್ಮೆ. ಆದರೆ ಮಂಡ್ಯದ ರಾಮಕೃಷ್ಣನ ಅಭಿಮಾನಕ್ಕೆ ಹೆಮ್ಮೆಪಡಲು ಸಾಧ್ಯವೇ? ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ. ಕೋಡಿ ದೊಡ್ಡಿ ರಾಮಕೃಷ್ಣನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

    ನಿನ್ನೆ ಮಂಡ್ಯ ಜಿಲ್ಲೆಯ ಕೆರಗೋಡು ಹೋಬಳಿಯ ಕೋಡಿದೊಡ್ಡಿ ಗ್ರಾಮದ ಕೃಷ್ಣ ತನ್ನ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಹಾಗೂ ಯಶ್ ಭಾಗವಹಿಸಬೇಕೆಂದು ಪತ್ರ ಬರೆದಿಟ್ಟು ಆತ್ಮಹ್ಯೆಗೆ ಶರಣಾಗಿದ್ದನು. ಅಭಿಮಾನಿಯ ಈ ಕೋರಿಕೆ ಈಡೇರಿಸಲು ಸಿದ್ದರಾಮಯ್ಯರವರು ಕೋಡಿದೊಡ್ಡಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಹಾಗೂ ಯಶ್ ಟ್ವೀಟರ್ ಮೂಲಕ ಅಭಿಮಾನಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

  • ಮೋದಿ ಗೋಬ್ಯಾಕ್ ಎಂದು ಸಂಕಷ್ಟಕ್ಕೆ ಸಿಲುಕಿದ ಒವಿಯಾ

    ಮೋದಿ ಗೋಬ್ಯಾಕ್ ಎಂದು ಸಂಕಷ್ಟಕ್ಕೆ ಸಿಲುಕಿದ ಒವಿಯಾ

    ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಬರುವ ಹಿನ್ನೆಲೆಯಲ್ಲಿ#GOBackModi ಹ್ಯಾಷ್ ಟ್ಯಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‍ನಲ್ಲಿತ್ತು. ಇದೀಗ ಬಹುಭಾಷಾ ನಟಿ ಒವಿಯಾ ಕೂಡಾ ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

    ತಮಿಳು, ಮಲಯಾಳಂ ಮತ್ತು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಒವಿಯಾ#GOBackModi ಎಂದು ಟ್ವೀಟ್ ಮಾಡಿದ್ದರು. ಈ ವಿಚಾರವಾಗಿ ತಮಿಳುನಾಡಿನ ಬಿಜೆಪಿ ಕಾನೂನು ವಿಭಾಗದ ಸದಸ್ಯ ಅಲೆಕ್ಸೆಸ್ ಸುಧಾಕರ್ ನಟಿ ಮಣಿ ವಿರುದ್ಧ ಕೇಸ್ ದಾಖಲಿಸಿದ್ದಾರೆ.

    ದೂರು ನೀಡಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಸರಿ ಪಡೆ ಓವಿಯಾಗೆ ಕ್ಷಮೆ ಕೇಳುವಂತೆ ಹೇಳಿದೆ. ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಡಿ ಅಲೆಕ್ಸಿಸ್ ಸುಧಾಕರ್ ಅವರು ಎಸ್‍ಪಿ, ಸಿಬಿ-ಸಿಐಡಿಗೆ ದೂರು ನೀಡಿದ್ದು, ಸಾರ್ವಜನಿಕವಾಗಿ ಅಗೌರವ ತೋರಿದ್ದಕ್ಕಾಗಿ ಓವಿಯಾ ವಿರುದ್ಧ ಕ್ರಮ ಕೈಗೊಳ್ಳಿ ಮತ್ತು ನಟಿಯ ಈ ಹಿಂದಿನ ಉದ್ದೇಶದ ಕುರಿತು ತನಿಖೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

    ಓವಿಯಾ ಟ್ವೀಟ್‍ನಿಂದ ಏನಾಯ್ತು?
    ಓವಿಯಾ ಅವರ ಟ್ವೀಟ್‍ನಿಂದ ಅನೇಕರು ಗುಂಪು ಸೃಷ್ಟಿ ಮಾಡಿದ್ದಾರೆ, ಸಾರ್ವಜನಿಕವಾಗಿ ಕಲಹ ಉಂಟಾಗಿದೆ. 19 ಸಾವಿರಕ್ಕೂ ಅಧಿಕ ಮಂದಿ ಈ ಟ್ವೀಟ್‍ನ್ನು ರೀಟ್ವೀಟ್ ಮಾಡಿದ್ದಾರೆ. 59 ಸಾವಿರಕ್ಕೂ ಅಧಿಕ ಲೈಕ್ಸ್ ಓವಿಯಾ ಟ್ವೀಟ್‍ಗೆ ಬಂದಿದೆ. ಈ ನಟಿಗೆ ವಿದೇಶಗಳಿಗೆ ಯಾವುದಾದರೂ ಲಿಂಕ್ ಇದೆಯಾ ಎಂಬುದನ್ನು ಪತ್ತೆ ಹಚ್ಚಿ ಎಂದು ಒತ್ತಾಯಿಸಿದ್ದಾರೆ.

  • ಪಟಾಕಿ ಸ್ಫೋಟಕ್ಕೆ 16 ಮಂದಿ ಬಲಿ – ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

    ಪಟಾಕಿ ಸ್ಫೋಟಕ್ಕೆ 16 ಮಂದಿ ಬಲಿ – ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

    – ಪ್ರಧಾನಿ ಮೋದಿ ಸಂತಾಪ

    ತಮಿಳುನಾಡು: ಫೆಬ್ರವರಿ 13ರಂದು ತಮಿಳುನಾಡಿನ ವಿರುಧುನಗರದ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 16 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡಿದ್ದಾರೆ. ಪ್ರಕರಣ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಆಘಾತಕಾರಿಯಾಗಿದೆ. ನಾನು ಕುಟುಂಬಸ್ಥರ ದುಃಖದಲ್ಲಿ ಭಾಗಿಯಾಗಿದ್ದೇನೆ. ಘಟನೆ ವೇಳೆ ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ. ಸದ್ಯ ಅನಾಹುತದಲ್ಲಿ ಗಾಯಗೊಂಡವರಿಗೆ ಅಧಿಕಾರಿಗಳು ಸಹಾಯ ಮಾಡುವಲ್ಲಿ ಕಾರ್ಯ ನಿರತರಾಗಿದ್ದಾರೆ ಎಂದು ಮೋದಿ ಸಂತಾಪ ಸೂಚಿಸಿದ್ದಾರೆ.

    ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪಿಎಮ್‍ಎನ್‍ಆರ್‍ಎಫ್ ವತಿಯಿಂದ 2 ಲಕ್ಷ ರೂ. ಮತ್ತು ಗಂಭೀರವಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

    ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ರಾಸಾಯನಿಕಗಳನ್ನು ಬೆರೆಸುವಾಗ ಉಂಟಾದ ಘರ್ಷಣೆಯಿಂದ ಅವಘಡ ಸಂಭವಿಸಿದೆ. ಬೆಂಕಿ ನಾಂದಿಸಲು ವಿವಿಧ ಸ್ಥಳಗಳಿಂದ ಹತ್ತು ಅಗ್ನಿ ಶಾಮಕ ದಳವನ್ನು ಸ್ಥಳಕ್ಕೆ ಧಾವಿಸಿತ್ತು. ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮೃತಪಟ್ಟ ಕುಟುಂಬಸ್ಥರಿಗೆ 3 ಲಕ್ಷ ರೂ.ವನ್ನು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ 1 ಲಕ್ಷರೂ ಪರಿಹಾರ ಘೋಷಿಸಿದ್ದಾರೆ.

  • ವಾವ್ಹ್… ಅದ್ಭುತ – ಹಳ್ಳಿ ಹುಡುಗಿ ಡಾನ್ಸ್ ಮೆಚ್ಚಿದ ಮಾಧುರಿ ದೀಕ್ಷಿತ್

    ವಾವ್ಹ್… ಅದ್ಭುತ – ಹಳ್ಳಿ ಹುಡುಗಿ ಡಾನ್ಸ್ ಮೆಚ್ಚಿದ ಮಾಧುರಿ ದೀಕ್ಷಿತ್

    ಮುಂಬೈ: ಹಳ್ಳಿ ಹುಡುಗಿ ಪ್ರತಿಭೆಯನ್ನು ಕಂಡು ಬಾಲಿವುಡ್ ಬೆಡಗಿ ಮಾಧುರಿ ದೀಕ್ಷಿತ್ ಮೆಚ್ಚಿ ಟ್ವೀಟ್ ಮಾಡಿದ್ದಾರೆ.

    ಯುವತಿಯೊಬ್ಬಳು ಕೃಷಿ ಜಮೀನಿನಲ್ಲಿ ಕುಣಿದು ಕುಪ್ಪಳಿಸಿದ್ದಾಳೆ. ಅದ್ಭುತವಾದ ಸ್ಟೆಪ್ ಹಾಕಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವೀಡಿಯೋವನ್ನು ನೋಡಿದ ಮಾಧುರಿ ದೀಕ್ಷಿತ್ ಪ್ರತಿಕ್ರಿಯಿಸಿದ್ದಾರೆ.

    1975ರಲ್ಲಿ ಮಾಧುರಿ ನಟಿಸಿರುವ ಘೂಂಗಟ್ ನಹೀ ಖೋಲು ಸೈಯ್ಯಾ ತೆರೆ ಆಗೆ ಎನ್ನುವ ಹಾಡಿಗೆ ಯುವತಿ ಹಚ್ಚಹಸಿರಿನಿಂದ ಕೂಡಿರುವ ಕೃಷಿ ಭೂಮಿಯಲ್ಲಿ ನಿಂತು ನೃತ್ಯ ಮಾಡಿದ್ದಾಳೆ. ನರ್ತಕರಿಗೆ ಹಾರಲು ರೆಕ್ಕೆಗಳ ಅಗತ್ಯವಿಲ್ಲ. ನೀವು ಹಳ್ಳಿ ಹುಡುಗಿಯ ನೃತ್ಯದಲ್ಲಿ ಕಾಣಬಹುದು ಎಂದು ಬರೆದು ವೀಡಿಯೋವನ್ನು ಟ್ವೀಟ್ ಮಾಡಲಾಗಿತ್ತು. ಈ ವಿಡಿಯೋ ಎಲ್ಲೆಡೆ ಸುದ್ದಿಯಲ್ಲಿತ್ತು. ಈ ವಿಡಿಯೋವನ್ನು ಮಾಧುರಿ ಮೆಚ್ಚುಕೊಂಡಾಡಿದ್ದಾರೆ.

    ಟ್ವೀಟ್ ನಲ್ಲಿ ಏನಿದೆ?
    ವಾವ್ಹ್… ಅದ್ಭುತ! ಈಕೆ ತುಂಬಾ ಸುಂದರವಾಗಿ ನೃತ್ಯ ಮಾಡಿದ್ದಾಳೆ. ಇಂಥಹ ಮತ್ತಷ್ಟು ಪ್ರತಿಭೆಗಳು ಬೆಳಕಿಗೆ ಬರಲಿ, ನಾವು ಕಾಯುತ್ತಿದ್ದೇವೆ ಎಂದು ಬರೆದುಕೊಂಡು ವಿಡಿಯೋವನ್ನು ಮಾಧುರಿ ದೀಕ್ಷಿತ್ ಶೇರ್ ಮಾಡಿದ್ದಾರೆ.