ಟ್ವೀಟ್‍ನಲ್ಲೇನಿದೆ..?; ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ (Congress) ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನಾವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರದಿಂದ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: 5 ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಲು ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
5 ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಮಾಧ್ಯಮಗಳು ಈ ಹಿಂದೆ ಹಲವು ಬಾರಿ ಸರ್ಕಾರವನ್ನು ಪ್ರಶ್ನಿಸಿದ್ದವು. ಆದರೆ ಇಂದು ಸಿದ್ದರಾಮಯ್ಯ ಈ ಯೋಜನೆಗೆ ಅಂದಾಜು ವೆಚ್ಚವನ್ನು ತಿಳಿಸಿದ್ದಾರೆ. ಆದರೆ ಇಷ್ಟೊಂದು ಹಣವನ್ನು ಹೇಗೆ ಹೊಂದಾಣಿಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇದನ್ನೂ ಓದಿ: ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್
ಟ್ವೀಟ್‌ನಲ್ಲಿ ಏನಿದೆ?
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ.
ಬಿಜೆಪಿ (BJP) ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.
ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.
ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು.
ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್ (Congress) ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.
ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.
ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ
ಭುವನೇಶ್ವರ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಭೀಕರ ರೈಲು ಅಪಘಾತ (Train Accident) ನಡೆದಿದ್ದು, ಅಪಘಾತದ ನಂತರ ಗಾಯಾಳುಗಳಿಗೆ ರಕ್ತದಾನ (Blood Donation) ಮಾಡುವ ಸಲುವಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡು ಬಾಲಸೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜನರು ಸ್ವಯಂಪ್ರೇರಿತರಾಗಿ ಗಾಯಾಳುಗಳಿಗೆ ರಕ್ತದಾನ ಮಾಡಲು ಕ್ಯೂನಲ್ಲಿ ನಿಂತಿದ್ದಾರೆ. ಅಪಘಾತದ ಸುದ್ದಿ ಹೊರಬೀಳುತ್ತಿದ್ದಂತೆ ರಾತ್ರಿಯಿಂದಲೇ ಸ್ಥಳೀಯ ನಿವಾಸಿಗಳು, ಅದರಲ್ಲೂ ಯುವಕರು ರಕ್ತದಾನ ಮಾಡಲು ಆಸ್ಪತ್ರೆಗೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ
ಸುಮಾರು 25 ಸ್ವಯಂಸೇವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಬಂದಿದ್ದೇವೆ. ನಮ್ಮ ರಕ್ತ ಒಬ್ಬರ ಜೀವ ಉಳಿಸಿದರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ ಎಂದು ಸರತಿ ಸಾಲಿನಲ್ಲಿ ನಿಂತಿದ್ದ ಸ್ವಯಂ ಸೇವಕರೊಬ್ಬರು ಹೇಳಿದ್ದಾರೆ. ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ (Pradeep Kumar Jena) ಕೂಡ ಇಂತಹ ದುರಂತದ ಸಮಯದಲ್ಲಿ ರಕ್ತದಾನ ಮಾಡಿದ ಸ್ವಯಂಸೇವಕರಿಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ
ಬಾಲಾಸೋರ್‌ನಲ್ಲಿ ರಾತ್ರಿಯಿಡೀ 500 ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ 900 ಯೂನಿಟ್ ದಾಸ್ತಾನು ಇದೆ. ಇದು ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ರಕ್ತದಾನ ಮಾಡಿದ ಎಲ್ಲಾ ಸ್ವಯಂಸೇವಕರಿಗೆ ನಾನು ವೈಯಕ್ತಿಕವಾಗಿ ಋಣಿಯಾಗಿದ್ದೇನೆ ಮತ್ತು ಕೃತಜ್ಞನಾಗಿದ್ದೇನೆ ಎಂದು ಜೆನಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ
ಬೆಂಗಳೂರು: ದಿ. ಪ್ರವೀಣ್ ನೆಟ್ಟಾರು (Praveen Nettaru) ಅವರ ಪತ್ನಿಯನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ ಎಂದು ಬಿಜೆಪಿ (BJP) ನಾಯಕರು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಮರು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಹೊಸ ಸರ್ಕಾರ ಆಡಳಿತಕ್ಕೆ ಬಂದಮೇಲೆ ಹಲವಾರು ತಾತ್ಕಾಲಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಅದರಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿ ಕೂಡಾ ಒಬ್ಬರು. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಬೊಮ್ಮಾಯಿ ಸರ್ಕಾರ ಇವರಿಗೆ ಸಿ ಗ್ರೂಪ್ ಹುದ್ದೆ ನೀಡಿತ್ತು. ಇದೀಗ ಅವರನ್ನು ಕೆಲಸದಿಂದ ವಜಾಗೊಳಿಸಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಟ್ವೀಟ್ (Tweet) ಮಾಡುವ ಮೂಲಕ ನೂತನ ಕುಮಾರಿ (Nuthana Kumari) ಅವರನ್ನು ಮರು ನೇಮಕ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಇನ್ನೂ ಖಾತೆ ಹಂಚಿಕೆ ಆಗಿಲ್ಲ; ನಕಲಿ ಪಟ್ಟಿ ಹಂಚಿಕೊಳ್ಳಬೇಡಿ – ಕಾಂಗ್ರೆಸ್ ಸ್ಪಷ್ಟನೆ
ಟ್ವೀಟ್‌ನಲ್ಲಿ ಏನಿದೆ?
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನೂ ಓದಿ: ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಸಚಿವದ್ವಯರ ಆಗಮನ
ಬೆಂಗಳೂರು: ಸಮ್ಮಿಶ್ರ ಸರ್ಕಾರದ (Coalition Government) ಪತನದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?
2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.
2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಮಾನ್ಯ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು.
ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು.
ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ
ಕೀವ್: ಉಕ್ರೇನ್‌ನ ರಕ್ಷಣಾ ಸಚಿವಾಲಯ (Ukraine Defense Ministry) ಹಿಂದೂ ದೇವತೆ ಕಾಳಿಯನ್ನು (Kali) ವಿಕೃತವಾಗಿ ಚಿತ್ರಿಸಿ ಅದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಭಾರತ (India) ಹಾಗೂ ಹಿಂದೂ (Hindu) ಸಮುದಾಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿವಾದಿತ ಕಾಳಿ ದೇವಿಯ ಚಿತ್ರವನ್ನು ಹಂಚಿಕೊಂಡಿದ್ದಕ್ಕೆ ಉಕ್ರೇನ್‌ನ ಉಪ ವಿದೇಶಾಂಗ ಸಚಿವೆ ಎಮಿನ್ ಝಾಪರೋವಾ (Emine Dzhaparova) ಕ್ಷಮೆ ಕೇಳಿದ್ದಾರೆ.
ಕಾಳಿ ದೇವಿಯನ್ನು ಈ ರೀತಿಯಾಗಿ ಚಿತ್ರಿಸಿರುವುದಕ್ಕೆ ಉಕ್ರೇನ್ ವಿಷಾದಿಸುತ್ತದೆ. ಯುರೋಪಿಯನ್ ದೇಶ ಭಾರತದ ವಿಶಿಷ್ಟ ಸಂಸ್ಕೃತಿಯನ್ನು ಗೌರವಿಸುತ್ತದೆ. ಭಾರತದ ಸಹಾಯವನ್ನು ಪ್ರಶಂಸಿಸುತ್ತದೆ ಎಂದು ತಿಳಿಸಿದ್ದಾರೆ.
ಏಪ್ರಿಲ್ 30 ರಂದು ಉಕ್ರೇನ್‌ನ ರಕ್ಷಣಾ ಸಚಿವಾಲಯ ‘ವರ್ಕ್ ಆಫ್ ಆರ್ಟ್’ ಎಂಬ ಶೀರ್ಷಿಕೆಯೊಂದಿಗೆ ಕಾಳಿ ದೇವಿಯನ್ನು ಹೋಲುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿತ್ತು. ಸ್ಫೋಟದ ಹೊಗೆಯಲ್ಲಿ ಹಾಗೂ ಅಮೆರಿಕದ ನಟಿ ಮರ್ಲಿನ್ ಮನ್ರೋ ಅವರ ‘ಫ್ಲೈಯಿಂಗ್ ಸ್ಕರ್ಟ್’ ಭಂಗಿಯಲ್ಲಿ ದೇವಿಯನ್ನು ಹೋಲುವ ಚಿತ್ರವನ್ನು ಬರೆಯಲಾಗಿತ್ತು. ಈ ಚಿತ್ರವನ್ನು ಉಕ್ರೇನ್‌ನ ಕಲಾವಿದ ಮ್ಯಾಕ್ಸಿಮ್ ಪಲೆಂಕೊ ಅವರು ರಚಿಸಿದ್ದರು. ಇದನ್ನೂ ಓದಿ: ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು
We regret @DefenceU depicting #Hindu goddess #Kali in distorted manner. #Ukraine &its people respect unique #Indian culture&highly appreciate????????support.The depiction has already been removed.????????is determined to further increase cooperation in spirit of mutual respect&????friendship.
ಈ ಚಿತ್ರವನ್ನು ಉಕ್ರೇನ್‌ನ ರಕ್ಷಣಾ ಸಚಿವಾಲಯ ಪೋಸ್ಟ್ ಮಾಡಿದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ಉಂಟಾಗಿತ್ತು. ಟ್ವಿಟ್ಟರ್ ಬಳಕೆದಾರರು ಕಾಳಿ ದೇವಿಗೆ ಅವಮಾನ ಮಾಡಲಾಗಿದೆ. ಭಾರತೀಯರು ಹಾಗೂ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಕಿಡಿಕಾರಿದ್ದರು.
ನಟ ಕಿಚ್ಚ ಸುದೀಪ್ (Sudeep) ಬಗ್ಗೆ ಕೊಳ್ಳೇಗಾಲ (Kollegala) ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಪುತ್ರ ಲೋಕೇಶ್ (Lokesh) ಅವಹೇಳನಕಾರಿಯಾಗಿ (Contempt) ಆಡಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕಿಚ್ಚನ ಬಗ್ಗೆ ಲೋಕೇಶ್ ಹಗುರವಾಗಿ ಮಾತನಾಡಿದ್ದಕ್ಕಾಗಿ ಅವರ ಅಭಿಮಾನಿಗಳು ಬೇಸರಗೊಂಡಿದ್ದರು. ತಮ್ಮ ನೆಚ್ಚಿನ ನಟನ ಕುರಿತು ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆ ಮಾಡುವುದಾಗಿಯೂ ಎಚ್ಚರಿಸಿದ್ದರು.
ಈ ಎಚ್ಚರಿಕೆಯ ಹಿನ್ನೆಲೆಯಲ್ಲಿ ಲೋಕೇಶ್ ಮತ್ತೊಂದು ವಿಡಿಯೋ ಮಾಡಿ, ‘ಸುದೀಪ್ ಅವರು ನನಗೆ ಕರೆ ಮಾಡಿದ್ದರು. ನಮ್ಮವರು ಅವರೆಲ್ಲ ಕ್ಷಮೆ ಕೇಳಿ ಎಂದು ಹೇಳಿದ್ದರು. ಹಾಗಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ’ ಎನ್ನುವ ವಿಡಿಯೋ ಅಪ್ ಲೋಡ್ ಮಾಡಿದ್ದರು. ಅದು ಕೂಡ ವೈರಲ್ ಆಗಿತ್ತು. ಈ ವಿಡಿಯೋ ಕುರಿತಂತೆ ಸುದೀಪ್ ಬೇಸರ ವ್ಯಕ್ತ ಪಡಿಸಿದ್ದಾರೆ. ಆ ಕುರಿತು ಅವರು ಟ್ವೀಟ್ ಕೂಡ ಮಾಡಿದ್ದಾರೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ
‘ನಾನು ಯಾರಿಗೂ ಕರೆ ಮಾಡಿಲ್ಲ. ಕ್ಷಮೆ ಕೇಳುವುದನ್ನು ನಾನು ಹೆಮ್ಮೆ ಪಡುವುದಿಲ್ಲ. ಪ್ರತಿಯೊಂದು ಕ್ರಿಯೆಗೂ ಪ್ರತಿಕ್ರಿಯೆ ಇರುತ್ತದೆ ಎನ್ನುವುದು ಹಳೆಯ ಸಿದ್ಧಾಂತ. ನಾನು ಹೇಳಿಲ್ಲ’ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಲೋಕೇಶ್ ತಮ್ಮ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಪರೋಕ್ಷವಾಗಿ ಅಭಿಮಾನಿಗಳಿಗೆ ಹೇಳಿದ್ದಾರೆ.
ಏನಿದು ವಿವಾದ?
ಬಿಜೆಪಿ ಪರವಾಗಿ ಪ್ರಚಾರ ಮಾಡಲು ಕಿಚ್ಚ ಕೊಳ್ಳೇಗಾಲಕ್ಕೆ ಬರಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾತನ್ನು ಶಾಸಕ ಎನ್. ಮಹೇಶ್ ಪದೇ ಪದೇ ಹೇಳುತ್ತಿದ್ದಾರಂತೆ. ಇವರಿಗೆ ಟಾಂಗ್ ಕೊಡುವುದಕ್ಕಾಗಿಯೇ ಲೋಕೇಶ್ ನಾಲಿಗೆ ಹರಿಬಿಟ್ಟಿದ್ದರು.
ಕಾಂಗ್ರೆಸ್ ಪಕ್ಷದ ಪ್ರಚಾರದ ವೇಳೆ ಮಾತನಾಡಿರುವ ಲೋಕೇಶ್, ‘ಎನ್.ಮಹೇಶ್ ಅವರು ಪದೇ ಪದೇ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ಯಾರೇ ಬಂದರೂ ಊಟ ಮಾಡ್ಕೊಂಡು, ಜೇಬಿಗೆ ಹಾಕ್ಕೊಂಡು ಹೋಗ್ತಾ ಇರ್ತಾರೆ’ ಎಂದು ಮಾತನಾಡಿದ್ದಾರೆ. ಈ ಮಾತುಗಳು ಸುದೀಪ್ ಅಭಿಮಾನಿಗಳನ್ನು ಕೆರಳಿಸಿವೆ. ಹಾಗಾಗಿ ಲೋಕೇಶ್ ಕ್ಷಮೆ ಕೇಳಬೇಕು ಎಂದು ಅಭಿಮಾನಿಗಳು ಪಟ್ಟ ಹಿಡಿದಿದ್ದರು.
ಈ ಕುರಿತು ಮಾತನಾಡಿರುವ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸರಗೂರು ಶಿವು, ‘ಲೋಕೇಶ್ ಕೂಡಲೇ ಸುದೀಪ್ ಅವರಿಗೆ ಕ್ಷಮೆ ಕೇಳಬೇಕು. ಕೇಳದೇ ಇದ್ದರೆ, ಪ್ರತಿಭಟನೆ ಮಾಡಲಾಗುವುದು. ಇದು ಕೇವಲ ಸುದೀಪ್ ಅವರಿಗೆ ಮಾಡಿರುವ ಅವಮಾನವಲ್ಲ, ಅಭಿಮಾನಿಗಳಿಗೂ ಮಾಡಿರುವ ಅಪಮಾನ’ ಎಂದಿದ್ದರು.
ಬೆಂಗಳೂರು: ಲಿಂಗಾಯತರೆಲ್ಲಾ (Lingayat) ಭ್ರಷ್ಟರು ಎಂದು ನಾನು ಹೇಳಲೇ ಇಲ್ಲ. ಅದೆಲ್ಲಾ ಬಿಜೆಪಿ (BJP) ಸೃಷ್ಟಿಸಿದ ಸುಳ್ಳುಗಳಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ (Tweet) ಮುಖಾಂತರ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. 1/5 pic.twitter.com/zBsimHxs4t
ಟ್ವೀಟ್‌ನಲ್ಲಿ ಏನಿದೆ?
ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲಾ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು. ಇದನ್ನೂ ಓದಿ: ರಮ್ಯಾರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ: ಅಶೋಕ್
ಅಲ್ಲದೇ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗಿಸುತ್ತಿದ್ದಾರೆ. ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲಾ ಭ್ರಷ್ಟರು ಎಂದು ನಾನು ಹೇಳಿಲ್ಲ. ವೀರೇಂದ್ರ ಪಾಟೀಲ್‌ರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲ್‌ರು, ಬಿ.ಡಿ.ಜತ್ತಿ, ಎಸ್.ಆರ್ ಕಂಠಿಯಂತಹ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ ಹಾಗೂ ಅಭಿಮಾನವಿದೆ ಎಂದರು. ಇದನ್ನೂ ಓದಿ: ಇಂದು ಕೂಡಲಸಂಗಮಕ್ಕೆ ರಾಹುಲ್ ಗಾಂಧಿ – ಬಸವ ಜಯಂತಿಯಲ್ಲಿ ‘ಕೈ’ ನಾಯಕರು ಭಾಗಿ
ವೀರಶೈವ-ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೆಟ್ ಅನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52-53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ. ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ. ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡು ಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ
ಬೆಂಗಳೂರು: ಮೋದಿ ಸಫಾರಿ ಕುರಿತು ವರದಿಯೊಂದನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಗಿ ಟ್ವೀಟ್ (Tweet) ಮಾಡಿದ್ದಾರೆ.
ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ಬಂಡೀಪುರಕ್ಕೆ (Bandipur) ಆಗಮಿಸಿದ್ದಾರೆ. ಈ ವೇಳೆ 22 ಕಿಲೋಮೀಟರ್ ಸಫಾರಿ (Safari) ನಡೆಸಿ ಬಂಡೀಪುರದ ಪ್ರಾಣಿ ಪಕ್ಷಿಗಳನ್ನು ವೀಕ್ಷಣೆ ಮಾಡಿದರು. ಇದನ್ನು ಓದಿ: ದೇಶದಲ್ಲಿ ಇದೆ 3167 ಹುಲಿಗಳು – ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ: ಮೋದಿ
ಮೋದಿ ಸಫಾರಿ ವೇಳೆ ಹುಲಿ ಗೋಚರಿಸಲಿಲ್ಲ ಎಂದು ತಿಳಿಸುವ ಮಾಧ್ಯಮ ವರದಿಯನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.
ಹಿಡಿದು ಮಾರಿಬಿಡುತ್ತಾರೆ ಎನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕುಳಿತಿದೆಯೋ ಅಯ್ಯೋ ಪಾಪ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಎಂದು ಬರೆದು ನರೇಂದ್ರ ಮೋದಿಯವರಿಗೆ ಟ್ಯಾಗ್ (Tag) ಮಾಡಿದ್ದಾರೆ. ಇದನ್ನು ಓದಿ: ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು
ಬೆಂಗಳೂರು: ಮಹಾರಾಷ್ಟ್ರದಲ್ಲಿರುವ (Maharashtra) ಬಿಜೆಪಿ (BJP) ಡಬಲ್ ಎಂಜಿನ್ ಸರ್ಕಾರ ಪದೇ ಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಇದನ್ನೆಲ್ಲಾ ನೋಡಿಕೊಂಡು ಮೌನವಾಗಿದೆ. ಇದು ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಕಾರಣವಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (H.D.Kumaraswamy) ಎಚ್ಚರಿಕೆ ನೀಡಿದ್ದಾರೆ.
ಗಡಿ ಹಳ್ಳಿಗಳ ಜನರಿಗೆ ವಿಮಾ (Insurance) ಯೋಜನೆ ಜಾರಿ ಮಾಡುವ ಮಹಾರಾಷ್ಟ್ರ ಸರ್ಕಾರದ ವಿವಾದಾಸ್ಪದ ಕ್ರಮಕ್ಕೆ ಸರಣಿ ಟ್ವೀಟ್ (Tweet) ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮಹಾರಾಷ್ಟ್ರದ ನಡೆ ಹಾಗೂ ಕೇಂದ್ರ ಸರ್ಕಾರದ ಮೌನ ಒಕ್ಕೂಟ ವ್ಯವಸ್ಥೆಯ ಒಡಕಿಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ನಟ ಸುದೀಪ್ ಪ್ರಚಾರಕ್ಕೆ ಮಹತ್ವ ಕೊಡಬೇಕಿಲ್ಲ, ನಟರನ್ನ ನಾನು ದುರುಪಯೋಗಪಡಿಸಿಕೊಳ್ಳಲ್ಲ: ಹೆಚ್‌ಡಿಕೆ
ಮಹಾರಾಷ್ಟ್ರದಲ್ಲಿರುವ @BJP4India ಡಬಲ್ ಎಂಜಿನ್ ಸರಕಾರ ಪದೇಪದೆ ಕಾಲುಕೆರೆದು ಕಿತಾಪತಿ ಮಾಡುತ್ತಿದೆ. ಚೀನಾ ಮನಸ್ಥಿತಿಯ ಆ ರಾಜ್ಯವು ಕರ್ನಾಟಕವನ್ನು ಶತ್ರು ದೇಶದಂತೆ ನೋಡುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಇದೆಲ್ಲಾ ನೋಡಿಕೊಂಡು ಮೌನವಾಗಿದೆ, ಒಕ್ಕೂಟ ವ್ಯವಸ್ಥೆಯ ಅವಸಾನಕ್ಕೆ ಇದೇ ಕಾರಣವಾಗಬಹುದು.1/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2023
ಒಂದೆರಡಲ್ಲ, ಪ್ರತಿಯೊಂದು ವಿಷಯದಲ್ಲೂ ಮಹಾರಾಷ್ಟ್ರ ಕರ್ನಾಟಕವನ್ನು ಕೆರಳಿಸುತ್ತದೆ. ರಾಜ್ಯದ ಗಡಿಯೊಳಗಿರುವ 865 ಗ್ರಾಮಗಳ ಜನರಿಗೆ ಆರೋಗ್ಯ ವಿಮೆ ಜಾರಿ ಮಾಡಿದ ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ನೇರ, ಧೂರ್ತ ಪ್ರಯತ್ನ ಎಂದು ಹರಿಹಾಯ್ದರು.
ಒಕ್ಕೂಟ ವ್ಯವಸ್ಥೆಯ ಎಲ್ಲೆಗಳನ್ನು ಮೀರಿ ಮಹಾರಾಷ್ಟ್ರ ಅಹಂಕಾರದಿಂದ ವರ್ತಿಸುತ್ತಿದೆ. ಕೇಂದ್ರದ ಬಿಜೆಪಿ ಸರ್ಕಾರ ಶಿಂಧೆ ಸೂತ್ರದ ರಾಜಕಾರಣಕ್ಕೆ ಕರ್ನಾಟಕವನ್ನು ಬಲಿ ಕೊಡಲು ಹೊರಟಿದೆಯಾ ಎನ್ನುವ ಅನುಮಾನ ನನ್ನದು. ಇಲ್ಲವಾದರೆ, ಮಹಾರಾಷ್ಟ್ರ ಈ ಪರಿಯ ಉದ್ಧಟತನ ತೋರುತ್ತಿದ್ದರೂ ಮೋದಿ (Narendra Modi) ಸರ್ಕಾರದ ಮೌನವೇಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬಿಜೆಪಿಯದ್ದು ಹಳಿ ತಪ್ಪಿದ ಡಬ್ಬಾ ಇಂಜಿನ್ ಸರ್ಕಾರ: ಸಲೀಂ ಅಹ್ಮದ್
ಕರ್ನಾಟಕದಲ್ಲಿ ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕಮಾರಿಯವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹುಯ್ಯುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ.4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 5, 2023
ಕರ್ನಾಟಕದಲ್ಲಿ (Karnataka) ಇಡೀ ಭಾರತವೇ ಅಡಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತಿನಿಂದ ಒಡಿಶಾವರೆಗೆ ಎಲ್ಲ ಕಡೆಯಿಂದಲೂ ಅನ್ನ ಅರಸಿಕೊಂಡು ಬಂದವರಿಗೆ ಕರ್ನಾಟಕ ಆಶ್ರಯ ನೀಡಿದೆ. ಆ ಅನ್ನಕ್ಕೆ ಮಣ್ಣು ಹಾಕುವ ಹೀನ ಕೆಲಸವನ್ನು ಮಹಾರಾಷ್ಟ್ರ ಎಗ್ಗಿಲ್ಲದೆ ಮಾಡುತ್ತಿದೆ. ಕನ್ನಡಿಗರು ಸುಮ್ಮನಿರುವ ಕಾಲ ಮುಗಿದಿದೆ ಎಂದು ಸ್ಪಷ್ಟವಾಗಿ ಹೇಳಿದರು.