Tag: tweet

  • ನಾನು ಯಾವುದೇ ಬೆಲೆ ತೆರಲು ಸಿದ್ಧ- ರಾಹುಲ್ ಗಾಂಧಿ ಫಸ್ಟ್ ರಿಯಾಕ್ಷನ್

    ನಾನು ಯಾವುದೇ ಬೆಲೆ ತೆರಲು ಸಿದ್ಧ- ರಾಹುಲ್ ಗಾಂಧಿ ಫಸ್ಟ್ ರಿಯಾಕ್ಷನ್

    ನವದೆಹಲಿ: ಸಂಸದ ಸ್ಥಾನದಿಂದ ರಾಹುಲ್ ಗಾಂಧಿ (Rahul Gandhi) ಅನರ್ಹ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೈ ನಾಯಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಈ ಸಂಬಂಧ ಟ್ವೀಟ್ ಮಡಿರುವ ರಾಗಾ, ನಾನು ಭಾರತದ ಧ್ವನಿಯಾಗಿ ಹೋರಾಡುತ್ತೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ.

    ಸಂಸದ ಸ್ಥಾನದಿಂದ ಅನರ್ಹ: ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ (Surat Court) 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಅಜ್ಜಿ ಇಂದಿರಾ ಗಾಂಧಿ ಸಹ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದರು..!

    2019ರ ಲೋಕಸಭಾ ಚುನಾವಣೆ (Loksabha Election 2019) ಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ.

    ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರ (Rahul Kolar Speech) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

    ಈ ಹೇಳಿಕೆಯನ್ನು ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

  • ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ

    ಐಫೋನ್ ಘಟಕ ಸ್ಥಾಪನೆ ಪ್ರಚಾರದ ಗಿಮಿಕ್- ಬೊಮ್ಮಾಯಿ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಐಫೋನ್ ಫ್ಯಾಕ್ಟರಿ ಕರ್ನಾಟಕದಲ್ಲಿ ಸ್ಥಾಪನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H. D. Kumaraswamy) ಇದು ಪ್ರಚಾರದ ಗಿಮ್ಮಿಕ್ ಎಂದು ಬಿಜೆಪಿ (BJP) ಸರ್ಕಾರದ ವಿರುದ್ಧ ಸರಣಿ ಟ್ವೀಟ್ (Tweet) ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ರಾಜ್ಯ ಸರ್ಕಾರದ್ದು ಪ್ರಚಾರ ಜಾಸ್ತಿ, ಫಲಿತಾಂಶ ನಾಸ್ತಿ ಎನ್ನುವ ನೀತಿ. ಇದೇ ಅದರ ಘೋಷವಾಕ್ಯ, ಧ್ಯೇಯವಾಕ್ಯ. ಜಾಹೀರಾತುಗಳಲ್ಲಿಯೇ ಜಳಕ ಮಾಡುತ್ತಿರುವ ಈ ಸರಕಾರಕ್ಕೆ ಜನರ ಕ್ಷೇಮ, ಅಭಿವೃದ್ಧಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಉದ್ಯೋಗ ಸೃಷ್ಟಿ ಬಗ್ಗೆ ಎಳ್ಳಷ್ಟೂ ದೂರದೃಷ್ಟಿ ಇಲ್ಲ. ಇದನ್ನೂ ಓದಿ: ಮಂಗಳೂರು, ಕೊಯಮತ್ತೂರು ಸ್ಫೋಟ ಮಾಡಿದ್ದು ನಾವೇ- ಐಎಸ್‍ಕೆಪಿ ಅಧಿಕೃತ ಹೇಳಿಕೆ

    ಐಫೋನ್ ತಯಾರಿಸುವ ತೈವಾನ್ ದೇಶದ ಫಾಕ್ಸ್ಕಾನ್ ಕಂಪನಿ ರಾಜ್ಯದಲ್ಲಿ ಹೂಡಿಕೆ ಮಾಡಲು ಬಂದಿದೆ ಎಂದು ಶುಕ್ರವಾರ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು ಹಾಗೂ ಇಬ್ಬರು ಸಚಿವರು ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡರು. ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೈಯ್ಯಲ್ಲಿ ಸಹಿಪತ್ರಗಳನ್ನಿಡಿದು ಮಾಧ್ಯಮಗಳಿಗೆ ಪೋಸು ಕೊಟ್ಟರು. ಇದನ್ನೂ ಓದಿ: ಮಾ.9 ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟ ಡಿಕೆಶಿ

    ಆ ಬೆನ್ನಲ್ಲೇ ತೈವಾನಿನ ತೈಪೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಂಪನಿ, “ಕರ್ನಾಟಕದಲ್ಲಿ ಹೂಡಿಕೆ ಮಾಡುವ ಯಾವುದೇ ನಿರ್ಣಾಯಕ ಒಪ್ಪಂದ ಆಗಿಲ್ಲ” ಎಂದು ಸ್ಪಷ್ಟಪಡಿಸಿದೆ. ಹಾಗಾದರೆ, ಶುಕ್ರವಾರ ಮಾನ್ಯ ಬೊಮ್ಮಾಯಿ ಅವರ ಸಮಕ್ಷಮದಲ್ಲಿ ಆಗಿದ್ದೇನು? ಅದೇನು ಒಪ್ಪಂದವೋ ಅಥವಾ ಪ್ರಚಾರದ ಗಿಮಿಕ್ಕೋ? ಜನರಿಗೆ ತಿಳಿಸಬೇಕಿದೆ. ಇದನ್ನೂ ಓದಿ: ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಮಿರ ಮಿರ ಮಿಂಚಿದ ಕಿಯಾರಾ

    ಕೋವಿಡ್ ನಂತರದ ಕಾಲದಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆಗೆ ಬಹಳ ಮಹತ್ವವಿದೆ. ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಎಡವಟ್ಟು ಮಾಡಿಕೊಂಡ ಕಾರಣಕ್ಕೆ ಓಲಾ ಕಂಪನಿ ಕರ್ನಾಟಕದ ಕೈ ಜಾರಿತು. 7,614 ಕೋಟಿ ರೂ. ಹೂಡಿಕೆ ತಮಿಳುನಾಡು ರಾಜ್ಯದ ಪಾಲಾಯಿತು. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಕರ್ಮಕಾಂಡ – ಅಂದು ಬಿಜೆಪಿ ಸರ್ಕಾರದಿಂದಲೇ ಪ್ರಶಾಂತ್‌ ಮಾಡಾಳ್‌ಗೆ ಕ್ಲೀನ್‌ಚಿಟ್‌?

    ಚುನಾವಣೆ, ಪ್ರಚಾರಕ್ಕಿಂತ ಜನರ ಬದುಕು ಮುಖ್ಯ. ಈ ಸರಕಾರಕ್ಕೆ ಅಧಿಕಾರವೇ ಮುಖ್ಯ. ಉಳಿದಿದ್ದೆಲ್ಲ ಅಮುಖ್ಯ. ಕನ್ನಡಿಗರ ಕಷ್ಟಗಳಿಗೆ ಕೊನೆ ಇಲ್ಲ ಎನ್ನುವಂತಾಗಿದೆ. ಇದನ್ನೂ ಓದಿ: ವರುಣ್ ತೇಜ್ ಜೊತೆ ಲಾವಣ್ಯ ಮದುವೆ? ಸ್ಪಷ್ಟನೆ ನೀಡಿದ ನಟಿ

  • ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ

    ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ

    ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರವನ್ನು ಮಾಜಿ ಪ್ರಧಾನಿ ದೇವೇಗೌಡರ (HD DeveGowda) ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಸತ್ಯ ಹೇಳುವ ಧಮ್ಮು, ತಾಕತ್ತು ಸಿಎಂಗೆ (Basavaraj Bommai) ಇದೆಯಾ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿಗೆ (BJP) ಜೆಡಿಎಸ್ ಪ್ರಶ್ನಿಸಿದೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್ (JDS), ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ, ಸರಿ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಕಿಡಿಕಾರಿದ್ದಾರೆ.

    ಈ ಮುನ್ನ, ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ನೀಡದೇ ಇರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಗುರುವಾರ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು. ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್‌ ಆಕ್ರೋಶ

    ಇದಕ್ಕೆ ಪ್ರತಿಯಾಗಿ ಶುಕ್ರವಾರ ಬಿಜೆಪಿ ಟ್ವೀಟ್ ಮಾಡಿದ್ದು, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಜೆಡಿಎಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿತ್ತು. ಇದನ್ನೂ ಓದಿ: ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಿ, ಖುದ್ದು ಸಿಎಂ ಕರೆ ಮಾಡಿದ್ದಾರೆ – ಬಿಜೆಪಿ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಭೋಪಾಲ್: ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ (Senior BJP leader Uma Bharti) ಅವರು ಎಲ್ಲಾ ಕೌಟುಂಬಿಕ ಸಂಬಂಧಗಳಿಂದ ದೂರವಾಗಿದ್ದು, ಇನ್ಮುಂದೆ “ದೀದಿ ಮಾ” (Didi Maa) ಎಂದು ಮಾತ್ರ ಗುರುತಿಸಿಕೊಳ್ಳಲು ಇಚ್ಛಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ರಾಷ್ಟ್ರ ರಾಜಕೀಯದಲ್ಲಿ ಬಿಜೆಪಿ ಅಭಿವೃದ್ಧಿಗೆ ಮತ್ತು ರಾಮಮಂದಿರ ಚಳುವಳಿಯಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲಿ ಉಮಾ ಭಾರತಿ ಅವರು ಕೂಡ ಒಬ್ಬರು. ಜೈನ ಗುರು ಆಚಾರ್ಯ ವಿದ್ಯಾಸಾಗರ ಮಹಾರಾಜ್ (Jain Muni Acharya Vidyasagar Maharaj ) ಅವರ ಆದೇಶದ ಮೇರೆಗೆ ತಮ್ಮ ಕುಟುಂಬದೊಂದಿಗಿನ ಎಲ್ಲಾ ಸಂಬಂಧಗಳನ್ನು ತೊರೆದಿದ್ದು, ನನ್ನನ್ನು ದೀದಿ ಮಾ ಎಂದು ಮಾತ್ರ ಗುರುತಿಸಿಕೊಳ್ಳುತ್ತೇನೆ. ಇಡೀ ವಿಶ್ವ ಸಮುದಾಯವೇ ನನ್ನ ಕುಟುಂಬವಾಗಿರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಕ್ಷ ಬಿಡ್ತಾರಾ ರಮೇಶ್ ಜಾರಕಿಹೊಳಿ? – ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ ಅಂದ್ರು ಕೈ ಮುಖಂಡ

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಉಮಾ ಭಾರತಿಯವರು,ನನ್ನ ಸನ್ಯಾಸ ದೀಕ್ಷೆಯ 30ನೇ ವರ್ಷದಲ್ಲಿ ನಾನು ಅವರ (ದೀಕ್ಷೆ ನೀಡಿದ್ದ ಸಂತರ) ಆದೇಶವನ್ನು ಪಾಲಿಸಲು ಪ್ರಾರಂಭಿಸುತ್ತೇನೆ ಎಂದು ನಾನು ನಿರ್ಧರಿಸಿದ್ದೆ. ಅದರಂತೆ 2022ರ ಮಾರ್ಚ್ 17ರಂದು ಸಾಗರ್ ಜಿಲ್ಲೆಯ ರಹಾಲಿಯಲ್ಲಿ ಎಲ್ಲ ಸಂತರ ಮುಂದೆ ಕೌಟುಂಬಿಕ ಬಾಂಧವ್ಯಗಳಿಂದ ಮುಕ್ತಳಾಗುವ ಬಗ್ಗೆ ನನಗೆ ಅವರು ಆದೇಶವನ್ನು ನೀಡಿದ್ದರು. ಇದೇ 17ರಂದು ನಾನು ಕುಟುಂಬ ಸದಸ್ಯರೊಂದಿಗಿನ ಎಲ್ಲಾ ಬಂಧನದಿಂದ ಮುಕ್ತಳಾಗುತ್ತೇನೆ. ನನ್ನ ಜಗತ್ತು ಮತ್ತು ಕುಟುಂಬದ ವ್ಯಾಪ್ತಿ ವಿಸ್ತಾರಗೊಂಡಿದೆ. ಈಗ ನಾನು ಇಡೀ ವಿಶ್ವ ಸಮುದಾಯಕ್ಕೇ ಸಹೋದರಿ ಮತ್ತು ತಾಯಿಯಾಗಿದ್ದೇನೆ. ನನಗೆ ವೈಯಕ್ತಿಕವಾಗಿ ಕುಟುಂಬ ಎಂಬುದಿಲ್ಲ ಎಂದಿದ್ದಾರೆ.

    ನನ್ನ ಕುಟುಂಬ, ನನ್ನ ಸಹೋದರರು, ಸೋದರಳಿಯರು ಮತ್ತು ಸೊಸೆಯಂದಿರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನನಗೆ ರಾಜಕೀಯದಲ್ಲಿ ಸಾಕಷ್ಟು ಬೆಂಬಲ ನೀಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಆಡಳಿತದಲ್ಲಿಯೂ ಸಾಕಷ್ಟು ಸುಳ್ಳು ಪ್ರಕರಣ, ಕಿರುಕುಳ ಮತ್ತು ಅನೇಕ ತೊಂದರೆಗಳನ್ನು ಅನುಭವಿಸಿದ್ದೇನೆ. ನನ್ನ ಪೋಷಕರು ಕಲಿಸಿದ ಉತ್ತಮ ಮೌಲ್ಯಗಳು, ನನ್ನ ಗುರುಗಳ ಸಲಹೆ, ನನ್ನ ಜಾತಿ ಮತ್ತು ಕುಲದ ಘನತೆ, ನನ್ನ ಪಕ್ಷದ ಸಿದ್ಧಾಂತ ಮತ್ತು ದೇಶಕ್ಕಾಗಿ ನನ್ನ ಜವಾಬ್ದಾರಿ ಇದ್ಯಾವುದರಿಂದಲೂ ನನಗೆ ಮುಕ್ತಿಸಿಗುವುದಿಲ್ಲ ಎಂದು ಹೀಗೆ ಕೌಟುಂಬಿಕ ಬಂಧದಿಂದ ಮುಕ್ತರಾಗುವ ಬಗ್ಗೆ ಸಾಕಷ್ಟು ಟ್ವೀಟ್ ಮಾಡಿದ್ದಾರೆ.

    ಸದ್ಯ ರಾಜಕೀಯದಿಂದ ದೂರ ಉಳಿದಿರುವ ಉಮಾಭಾರತಿ ಅವರು, ಕೊನೆಯಾದಾಗಿ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳನ್ನು ನಿಷೇಧಿಸುವ ಬಗ್ಗೆ ನಡೆದ ಚಳುವಳಿಯಲ್ಲಿ ಕಾಣಿಸಿಕೊಂಡಿದ್ದರು. ಇದನ್ನೂ ಓದಿ: ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್

    ಕರ್ನಾಟಕದವರಾದ ಜೈನ ಮುನಿ ಆಚಾರ್ಯ ವಿದ್ಯಾಸಾಗರ ಜೀ ಮಹಾರಾಜ್ ಅವರು ಈಗಲೂ ನನಗೆ ಗುರುಗಳು. ಎಲ್ಲಾ ವೈಯಕ್ತಿಕ ಸಂಬಂಧಗಳು ಮತ್ತು ಬಾಂಧವ್ಯಗಳನ್ನು ತ್ಯಜಿಸಲು ಅವರು ನನಗೆ ಆದೇಶಿಸಿದ್ದಾರೆ. ನನ್ನನ್ನು ದೀದಿ ಮಾ ಎಂದೇ ಕರೆಯಬೇಕು. ನನ್ನ ಭಾರತಿ ಹೆಸರನ್ನು ಅರ್ಥಪೂರ್ಣಗೊಳಿಸಲು ಭಾರತದ ಎಲ್ಲಾ ನಾಗರಿಕರು ಇದನ್ನು ಒಪ್ಪಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಥಳೀಯ ಪೊಲೀಸರನ್ನು ಟೆಸ್ಟ್ ಮಾಡಲು ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ – ನೆಟ್ಟಿಗರಿಂದ ಮೆಚ್ಚುಗೆ

    ಸ್ಥಳೀಯ ಪೊಲೀಸರನ್ನು ಟೆಸ್ಟ್ ಮಾಡಲು ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ – ನೆಟ್ಟಿಗರಿಂದ ಮೆಚ್ಚುಗೆ

    ಲಕ್ನೋ: ಸಾಮಾನ್ಯ ನಾಗರಿಕ ವೇಷ ಧರಿಸಿ ಉತ್ತರ ಪ್ರದೇಶದ (Uttar Pradesh) ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರೀಕ್ಷಿಸಿದ್ದು, ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಗುರುವಾರ, ಔರೈಯಾ ಜಿಲ್ಲೆಯ ಐಪಿಎಸ್ (ಭಾರತೀಯ ಪೊಲೀಸ್ ಸೇವೆ) ಅಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರಾಗಿರುವ ಚಾರು ನಿಗಮ್ ಅವರು, ದುಪಟ್ಟಾವನ್ನು ತಲೆಯ ಮೇಲೆ ಸುತ್ತಿಕೊಂಡು, ಸನ್ ಗ್ಲಾಸ್ ಹಾಗೂ ಮಾಸ್ಕ್ ಧರಿಸಿ ಮುಖವನ್ನು ಸಂಪೂರ್ಣವಾಗಿ ಮಾರೆಮಾಚಿಕೊಂಡು ಬಂದಿದ್ದರು. ಇದನ್ನೂ ಓದಿ: ಈ ಹೊತ್ತಲ್ಲಿ ಯಾಕೋ ಬಂದಿದ್ದೀಯಾ ಅಂತಾ ಚಂದ್ರುನನ್ನು ವಿನಯ್ ಗುರೂಜಿ ಪ್ರಶ್ನಿಸಿದ್ರು: ಆಶ್ರಮದ ಸಿಬ್ಬಂದಿ

    ಸುಲಿಗೆಗೆ ಒಳಗಾದ ಸಂತ್ರಸ್ತೆ ರೀತಿ ನಟಿಸಿದ ಚಾರು ನಿಗಮ್ ಅವರು, 112ಗೆ ಕರೆ ಮಾಡಿ ನನ್ನ ಹೆಸರು ಸರಿತಾ ಚೌಹಾಣ್, ದರೋಡೆಕೋರರರು ನನ್ನನ್ನು ಹಿಂಬಾಲಿಸಿಕೊಂಡು ಬಂದು ದರೋಡೆ ಮಾಡಿದ್ದಾರೆ. ಎಲ್ಲಿದ್ದರೂ ಐದು ನಿಮಿಷದಲ್ಲಿ ಬಂದು ಸಹಾಯ ಮಾಡುವಂತೆ ಮನವಿ ಮಾಡಿದರು. ಕೂಡಲೇ ಕರೆಗೆ ಸ್ಪಂದಿಸಿ ಮೂವರು ಪೊಲೀಸರು ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದರು. ಮತ್ತು ಘಟನೆ ಸಂಬಂಧ ಮಹಿಳೆಯನ್ನು ವಿಚಾರಣೆ ನಡೆಸಿದರು. ಆದರೆ ಆ ಮಹಿಳೆ ತಮ್ಮ ಬಾಸ್ ಎಂಬುವುದು ಪೊಲೀಸರಿಗೆ ತಿಳಿದಿರಲಿಲ್ಲ. ಸುಮಾರು ಒಂದು ಗಂಟೆಗಳ ಕಾಲ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ ನಂತರ ಸಂತ್ರಸ್ತ ಮಹಿಳೆ, ತಾವು ಹಿರಿಯ ಅಧಿಕಾರಿ ಎಂಬ ಸತ್ಯ ತಿಳಿದು ಸ್ಥಳೀಯ ಪೊಲೀಸರ ತಂಡ ಶಾಕ್ ಆಗಿದ್ದಾರೆ.

    ಸ್ಥಳೀಯ ಪೊಲೀಸರ ಕಾರ್ಯ ವೈಖರಿಯನ್ನು ಪರಿಶೀಲನೆ ನಡೆಸಲು ಬಂದಿದ್ದ ಚಾರು ನಿಗಮ್ ಅವರು, ಅವರ ಚಲನವಲನ, ಸಮಯಪ್ರಜ್ಞೆಯನ್ನು ನೋಡಿ ಸಮಾಧಾನರಾಗಿದ್ದಾರೆ. ಈ ವೀಡಿಯೋವನ್ನು ಔರೈಯಾ ಪೊಲೀಸರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ನಿರ್ಜನ ರಸ್ತೆಯಲ್ಲಿ ಚಾರು ನಿಗಮ್ ಫೋನ್‍ನಲ್ಲಿ ಮಾತನಾಡುತ್ತಿರುವ ಫೋಟೋ ಹಾಗೂ ವೀಡಿಯೋವನ್ನು ಕಾಣಬಹುದಾಗಿದೆ.

    ಪರೀಕ್ಷೆ ನಡೆಸಲು ಸರಿಯಾದ ಸ್ಥಳವನ್ನು ಹುಡುಕುತ್ತಿರುವ ಅಧಿಕಾರಿ ಬೈಕ್‍ನಲ್ಲಿ ಸವಾರಿ ಮಾಡುತ್ತಿರುವ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ವೀಡಿಯೋಗೆ ನೆಟ್ಟಿಗರಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಬಿಹಾರವನ್ನು ಪಾಕಿಸ್ತಾನ ಮಾಡಬೇಡಿ – ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ಗರಂ

    Live Tv
    [brid partner=56869869 player=32851 video=960834 autoplay=true]

  • ಇಸ್ರೇಲ್ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹು – ಪ್ರಧಾನಿ ಮೋದಿ ಅಭಿನಂದನೆ

    ಇಸ್ರೇಲ್ ಚುನಾವಣೆಯಲ್ಲಿ ಗೆದ್ದ ಬೆಂಜಮಿನ್ ನೆತನ್ಯಾಹು – ಪ್ರಧಾನಿ ಮೋದಿ ಅಭಿನಂದನೆ

    ಜೆರುಸಲೇಂ: ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ (Israeli General Elections) ಗೆದ್ದ ಬೆಂಜಮಿನ್ ನೆತನ್ಯಾಹು (Benjamin Netanyahu) ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ.

    ಈ ಕುರಿತಂತೆ ಹೀಬ್ರೂ (Hebrew) ಭಾಷೆಯಲ್ಲಿ ಟ್ವೀಟ್ ಮಾಡಿರುವ ಮೋದಿ ಅವರು, ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಗಾಢಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿ: ಸಚಿವೆ ಉಷಾ ಠಾಕೂರ್

    ಜೊತೆಗೆ ಭಾರತ ಮತ್ತು ಇಸ್ರೇಲ್‍ನ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನೀಡಿದ ಪ್ರಮುಖ ಕೊಡುಗೆಗಾಗಿ ಮೋದಿ ಅವರು, ನಿರ್ಗಮಿಸುತ್ತಿರುವ ಇಸ್ರೇಲಿ ಪ್ರಧಾನಿ ಯೈರ್ ಲ್ಯಾಪಿಡ್ ಅವರಿಗೆ ಕೂಡ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ “ನಮ್ಮ ಜನರ ಪರಸ್ಪರ ಪ್ರಯೋಜನಕ್ಕಾಗಿ ನಮ್ಮ ಫಲಪ್ರದ ವಿಚಾರಗಳ ವಿನಿಮಯವನ್ನು ಮುಂದುವರಿಸಲು ನಾನು ಭಾವಿಸುತ್ತೇನೆ ಎಂದು ಸಹ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ದೂದ್ ಪೇಡ ದಿಗಂತ್ ಗೆ ಜೊತೆಯಾದ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

    ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಒಕ್ಕೂಟವು 120 ಸ್ಥಾನಗಳ ಸಂಸತ್ತಿನಲ್ಲಿ ಬಹುಪಾಲು ಸ್ಥಾನಗಳನ್ನು ಗೆದ್ದಿದೆ. ಒಕ್ಕೂಟವು ಗೆದ್ದಿರುವ 120 ಸ್ಥಾನಗಳ ಸಂಸತ್ತಿನಲ್ಲಿ 64 ಸ್ಥಾನಗಳಲ್ಲಿ 32 ಸ್ಥಾನಗಳು ನೆತನ್ಯಾಹು ಅವರ ಪಕ್ಷದ್ದಾಗಿದೆ. ಈ ಮೂಲಕ ಗುರುವಾರ ಪ್ರಕಟವಾದ ಅಂತಿಮ ಚುನಾವಣಾ ಫಲಿತಾಂಶದಲ್ಲಿ ನೆತನ್ಯಾಹು ಮತ್ತು ಅವರ ಅಲ್ಟ್ರಾನ್ಯಾಶನಲಿಸ್ಟ್ ಮಿತ್ರರಾಷ್ಟ್ರಗಳನ್ನು ಮತ್ತೆ ಅಧಿಕಾರಕ್ಕೆ ತಂದಿದೆ.

    Live Tv
    [brid partner=56869869 player=32851 video=960834 autoplay=true]

  • ಅಜ್ಜಿಯ ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ: ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್

    ಅಜ್ಜಿಯ ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ: ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್

    ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ತಮ್ಮ ಅಜ್ಜಿ ಮತ್ತು ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ ಪುಣ್ಯಸ್ಮರಣೆ ಪ್ರಯುಕ್ತ ಭಾವನಾತ್ಮಕ ವೀಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅವರ ಅಖಂಡ ಭಾರತದ ಕನಸನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

    ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್‌ನಲ್ಲಿ ಇಂದಿರಾ ಗಾಂಧಿ ಅವರ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ಅಜ್ಜಿಯ ಅಂತ್ಯಕ್ರಿಯೆ ವೇಳೆ ರಾಹುಲ್ ಅಳುತ್ತಿರುವ, ಅನೇಕ ವರ್ಷಗಳು ಇಂದಿರಾಗಾಂಧಿ ಅವರು ಮಾಡಿರುವ ಭಾಷಣದ ತುಣುಕುಗಳನ್ನು ಕಾಣಬಹುದಾಗಿದೆ. ಇಂದಿರಾಗಾಂಧಿ ಅವರು ಅಖಂಡ ಭಾರತಕ್ಕಾಗಿ ಕರೆ ನೀಡುತ್ತಿರುವ ಮತ್ತು ಅದರಂತೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಂತೆ ವೀಡಿಯೋ ಮುಕ್ತಾಯಗೊಳ್ಳುತ್ತದೆ.

    ವೀಡಿಯೋ ಜೊತೆಗೆ, ಅಜ್ಜಿ, ನಾನು ನಿಮ್ಮ ಪ್ರೀತಿ ಮತ್ತು ಮೌಲ್ಯಗಳೆರಡನ್ನೂ ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ. ನೀವು ಯಾವ ಭಾರತಕ್ಕಾಗಿ ನಿಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದೀರೋ ಆ ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶಾಸಕ ಶಿವನಗೌಡ ನಾಯಕ್‍ರಿಂದ ಜೆಡಿಎಸ್ ಅಭ್ಯರ್ಥಿಗೆ ಜೀವ ಬೆದರಿಕೆ: ಎಸ್‍ಪಿಗೆ ದೂರು

    ಪ್ರಸ್ತುತ ತೆಲಂಗಾಣದಲ್ಲಿ (Telangagana) ಭಾರತ್ ಜೋಡೋ ಯಾತ್ರೆ (Bharat Jodo Yatra) ನಡೆಸುತ್ತಿರುವ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿಗೆ ಪುಷ್ಪ ನಮನ ಸಲ್ಲಿಸಿದರು. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಮತ್ತು ಪಕ್ಷದ ಇತರ ಹಿರಿಯ ನಾಯಕರು ಸಹ ಇಂದಿರಾ ಗಾಂಧಿ (Indira Gandhi) ಅವರ ಸ್ಮಾರಕಕ್ಕೆ ಇಂದು ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: ಪೊಲೀಸ್ ಹುದ್ದೆಗೆ 70-80 ಲಕ್ಷ ಹಣ – ಹೇಳಿಕೆ ನನ್ನದಲ್ಲವೆಂದು ಉಲ್ಟಾ ಹೊಡೆದ MTB

    ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು 1984ರ ಅಕ್ಟೋಬರ್ 31ರಂದು ಅವರ ಇಬ್ಬರು ಭದ್ರತಾ ಸಿಬ್ಬಂದಿಯಿಂದ ಹತ್ಯೆಗೀಡಾದರು.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ

    ಗುಜರಾತ್‍ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ, ಹಳೆಯ ಪಿಂಚಣಿ ಯೋಜನೆ ಜಾರಿಗೆ: ರಾಹುಲ್ ಗಾಂಧಿ

    ಹೈದರಾಬಾದ್: ಗುಜರಾತಿನಲ್ಲಿ (Gujrat) ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಗುತ್ತಿಗೆ ನೌಕರರಿಗೆ ಸ್ಥಿರ ಉದ್ಯೋಗಗಳನ್ನು ನೀಡಲಿದೆ, ಜೊತೆಗೆ ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮತ್ತೆ ಜಾರಿಗೆ ತರಲಿದೆ ಮತ್ತು ಸಕಾಲಕ್ಕೆ ಬಡ್ತಿ ಸಿಗುವಂತೆ ನೋಡಿಕೊಳ್ಳುತ್ತದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಗುತ್ತಿಗೆ ಕಾರ್ಮಿಕರಿಗೆ ಸ್ಥಿರ ಉದ್ಯೋಗಗಳು, ಹಳೆಯ ಪಿಂಚಣಿ ಯೋಜನೆ (Pension Scheme) ಮತ್ತು ಸಕಾಲಿಕ ಬಡ್ತಿಗಳನ್ನು ಮರಳಿ ತರಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

    ಈ ಯೋಜನೆಯನ್ನು ಈಗಾಗಲೇ ರಾಜಸ್ಥಾನದಲ್ಲಿ ಜಾರಿಗೊಳಿಸಲಾಗಿದೆ. ಈಗ ಗುಜರಾತ್‍ನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ, ತಕ್ಷಣ ನೌಕರರು ತಮ್ಮ ವೇತನವನ್ನು ಪಡೆಯಲಿದ್ದಾರೆ ಎಂದು ‘ಕಾಂಗ್ರೆಸ್ ದೇಗಿ ಪಕ್ಕಿ ನೌಕ್ರಿ’ ಹ್ಯಾಶ್‍ಟ್ಯಾಗ್ ಹಾಕಿದ್ದಾರೆ. ಇದನ್ನೂ ಓದಿ: ಯಮುನಾ ಜಲ ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ಜಲಮಂಡಳಿ ನಿರ್ದೇಶಕ

    ಇದನ್ನು ರಾಜಸ್ಥಾನದಲ್ಲಿ ಜಾರಿಗೊಳಿಸಲಾಗಿದೆ, ಈಗ ಗುಜರಾತಿನಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ನೌಕರರು ತಮ್ಮ ವೇತನವನ್ನು ಪಡೆಯುತ್ತಾರೆ ಎಂದು ರಾಹುಲ್ ಗಾಂಧಿ ಅವರು ‘ಕಾಂಗ್ರೆಸ್ ದೇಗಿ ಪಕ್ಕಿ ನೌಕ್ರಿ’ ಹ್ಯಾಶ್‍ಟ್ಯಾಗ್ ಬಳಸಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

    ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೇಕಿಲ್ಲ ಗೌರವ – ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

    ಬೆಂಗಳೂರು: ಬಿಜೆಪಿ (BJP) ಆಡಳಿತದಲ್ಲಿ ಮಹಿಳೆಯರಿಗೆ ಗೌರವ ಏಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಕಾಂಗ್ರೆಸ್ ಪ್ರಶ್ನಿಸಿದೆ.

    ಈ ಕುರಿತಂತೆ ಟ್ವೀಟ್ (Tweet) ಮಾಡಿರುವ ಕಾಂಗ್ರೆಸ್ (Congress), ಮಹಿಳೆಯರ ಮೇಲೆ ಬಿಜೆಪಿಗರ ದರ್ಪ, ದೌರ್ಜನ್ಯ ಮಿತಿ ಮೀರುತ್ತಿದೆ. ಶಾಸಕ ಅರವಿಂದ್ ಬೆಲ್ಲದ್ ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯನ್ನು ಅವಮಾನಿಸಿದ ಕಾರಣ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ತ್ರೀ ಪೀಡಕರ ಸಾಮ್ರಾಜ್ಯವಾಗಿರುವ ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಗೌರವವಿಲ್ಲವೇಕೆ ಬೊಮ್ಮಾಯಿ ಅವರೇ? ಇದರ ವಿರುದ್ದ ನಿಮ್ಮ ಕ್ರಮವೇನು ಎಂದು ಪ್ರಶ್ನಿಸಿದ್ದಾರೆ.

    ಶಾಸಕ ಅರವಿಂದ್ ಬೆಲ್ಲದ್ ಮಾಡಿದ ಅವಮಾನದಿಂದಾಗಿ ದಲಿತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಸಕರ ದುರ್ವರ್ತನೆಯೇ ಆತ್ಮಹತ್ಯೆ ಯತ್ನಕ್ಕೆ ಕಾರಣ ಎಂಬುದು ಮಹಿಳೆ ಬರೆದ ಡೆತ್‍ನೋಟ್‍ನಲ್ಲಿ ಸ್ಪಷ್ಟವಾಗಿದೆ, ಬಸವರಾಜ್ ಬೊಮ್ಮಾಯಿ ಅವರೇ, ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಿರಾ ಅಥವಾ ಸಿದ್ದು ಸವದಿ ಪ್ರಕರಣದಂತೆ ಮುಚ್ಚಿ ಹಾಕುವಿರಾ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಂಡೆ ಶ್ರೀಗೆ ಖೆಡ್ಡಾ ತೋಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅರೆಸ್ಟ್‌

    ಶಾಸಕ ಅರವಿಂದ್ ಲಿಂಬಾವಳಿಯಿಂದ ಮಹಿಳೆಗೆ ನಿಂದನೆ, ಸಚಿವ ವಿ.ಸೋಮಣ್ಣರಿಂದ ಮಹಿಳೆಯ ಮೇಲೆ ಹಲ್ಲೆ, ಶಾಸಕ ಅರವಿಂದ್ ಬೆಲ್ಲದ್‍ರಿಂದ ಮಹಿಳೆಗೆ ನಿಂದನೆ, ಇತ್ತೀಚಿನ ಕೆಲವೇ ದಿನಗಳಲ್ಲಿ ನಡೆದ ಈ ಮೂರು ಘಟನೆಗಳು ಬಿಜೆಪಿಯ ಮಹಿಳಾ ವಿರೋಧಿ ಧೋರಣೆಯನ್ನು ಬೆತ್ತಲಾಗಿಸಿವೆ. ಬೊಮ್ಮಾಯಿ ಅವರೇ ಮಹಿಳೆಯರ ಘನತೆ ನಿಮ್ಮ ಅದ್ಯತೆಯಲ್ಲವೇ ಎಂದಿದ್ದಾರೆ. ಇದನ್ನೂ ಓದಿ: ಪ್ರಭಾವಿ ವ್ಯಕ್ತಿಯಿಂದ 1.30 ಕೋಟಿ ಕಿಕ್‌ಬ್ಯಾಕ್ – ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ

    Live Tv
    [brid partner=56869869 player=32851 video=960834 autoplay=true]

  • ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ- ಬಿಜೆಪಿ ವಿರುದ್ಧ ಪ್ರಿಯಾಂಕ್ ಕಿಡಿ

    ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ- ಬಿಜೆಪಿ ವಿರುದ್ಧ ಪ್ರಿಯಾಂಕ್ ಕಿಡಿ

    ಬೆಂಗಳೂರು: ನಿಮಗೆ ಮಾನವೀಯತೆ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ ಎಂದು ಭಾರತೀಯ ಜನತಾ ಪಾರ್ಟಿ (BJP) ವಿರುದ್ಧ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

    ಈ ಸಂಬಂಧ ಮಾತನಾಡಿರುವ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಕೋಮುವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಪರೇಶ್ ಮೇಸ್ತ (Paresh Mestha) ಪ್ರಕರಣದಲ್ಲಿ ಸಾವು ಆಕಸ್ಮಿಕ ಎಂದು ಸಿಬಿಐ ವರದಿ ಹೇಳುತ್ತೆ. ಪರೇಶ್ ಮೇಸ್ತ ಕೊಲೆ ನಡೆದಿಲ್ಲ, ಬದಲಾಗಿ ಆಕಸ್ಮಿಕ ಅಥವಾ ನೀರಿಗೆ ಮುಳುಗಿದ ಕಾರಣದಿಂದ ಸಾವು ಆಗಿದೆ ಎಂದು ವರದಿಯಲ್ಲಿದೆ. ಕೋಮು ಕಾರಣದಿಂದಾಗಿ ನಡೆದ ಹತ್ಯೆ ಇದಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ ಎಂದರು. ಇದನ್ನೂ ಓದಿ: ಚಾಲೆಂಜ್ ಸೋತ ಗಡ್ಕರಿ – ಎಂಪಿಗೆ ಕೊಡಬೇಕು 32 ಸಾವಿರ ಕೋಟಿ

    ಸಿಬಿಐ (CBI) ಕೇಂದ್ರ ಸರ್ಕಾರದ ಅಧೀನದಲ್ಲಿ ಇದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ. ಹಾಗಿದ್ದರೂ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದರು. ಕೋಮುವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಬಿಜೆಪಿ ಮಾಡುತ್ತಿದೆ. ಶೋಭಾ ಕರಂದ್ಲಾಜೆ ಪರೇಶ್ ಮೇಸ್ತ ಸಾವಿಗೆ ಜಿಹಾದಿ ಶಕ್ತಿಗಳು ಕಾರಣ ಎಂದಿದ್ದರು. ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದಿದ್ದರು. ಪರೇಶ್ ಮೇಸ್ತ ಕೈ ಕಡಿಯಲಾಗಿದೆ ಎಂದು ಹೇಳಿದ್ದರು. ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಇನ್ನೆಷ್ಟು ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಬೇಕು ಎಂದು ಪ್ರಶ್ನೆ ಮಾಡಿದ್ದರು ಎಂದು ಹೇಳಿದರು.

    ಸಿಬಿಐ ವರದಿಯಲ್ಲಿ ಪರೇಶ್ ಮೇಸ್ತ ಕೈ ಮೇಲೆ ಇರುವ ಶಿವಾಜಿ ಟ್ಯಾಟೋ ಹಾಗೆ ಇದೆ. ಹಾಗಿದ್ದರೂ ಕೈ ಕಡಿಯಲಾಗಿದೆ, ಬಿಸಿ ಎಣ್ಣೆ ಕಣ್ಣಿಗೆ ಹಾಕಲಾಗಿದೆ ಎಂದೆಲ್ಲಾ ಆರೋಪ ಮಾಡಿದ್ದರು. ಹಾಗಾದರೆ ಸಿಬಿಐ ತನಿಖೆ ಆಗುವಾಗ ಈ ಘಟನೆಯ ಬಗ್ಗೆ ಏಕೆ ಸಾಕ್ಷಿ ನೀಡಿಲ್ಲ..? ಹಿಂದೂ ಕಾರ್ಯಕರ್ತರ ಮೇಲಿನ ಕಾಳಜಿ ಇದೇನಾ..? ಶವದ ಮೇಲೆ ರಾಜಕೀಯ ಮಾಡಲು ನಾಚಿಕೆ ಆಗಲ್ವಾ..? ಮಾನವೀಯತೆಯ ಇದ್ದರೆ ಪರೇಶ್ ಮೇಸ್ತ ಕುಟುಂಬದ ಕ್ಷಮೆ ಕೇಳಿ ಎಂದು ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು. ಇದನ್ನೂ ಓದಿ: ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    ಶೋಭಾ, ಈಶ್ವರಪ್ಪ, ಸಿಟಿ ರವಿ, ಅನಂತ್ ಕುಮಾರ್ ಈ ಪ್ರಕರಣದಲ್ಲಿ ತಪ್ಪು ಮಾಹಿತಿ ನೀಡಿ, ದಾರಿ ತಪ್ಪಿಸಿ ರಾಜ್ಯವನ್ನು ಬೆಂಕಿ ಹಚ್ಚಲು ಕಾರಣರಾಗಿದ್ದರು. ಇವರ ಮೇಲೆ ಕೇಸ್ ಬುಕ್ ಮಾಡಲು ಸಿಎಂಗೆ ತಾಕತ್ತು ಇದ್ಯಾ…?. 15 ದಿನಗಳ ಒಳಗೆ ಕೇಸ್ ದಾಖಲು ಮಾಡಬೇಕು. ರಾಜ್ಯ ಸರ್ಕಾರಕ್ಕೆ 15 ದಿನ ಸಮಯ ಕೊಡುತ್ತೇವೆ. ಪರೇಶ್ ಮೇಸ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿ ಗಲಭೆಗೆ ಕಾರಣರಾಗಿದ್ದ ಬಿಜೆಪಿ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಸಿಬಿಐ ಕೂಡ ಈ ವಿಚಾರದಲ್ಲಿ ಸೋ ಮೋಟೋ ಕೇಸು ಹಾಕಬೇಕು. ಇಲ್ಲದಿದ್ದರೆ ನಾವೇ 15 ದಿನ ಬಿಟ್ಟು ಸಿಬಿಐಗೆ ದೂರು ಕೊಡುತ್ತೇವೆ. ಕಾನೂನು ಪ್ರಕಾರ ಕ್ರಮಕ್ಕೆ ಆಗ್ರಹ ಮಾಡುತ್ತೇವೆ ಎಂದರು.

    Live Tv
    [brid partner=56869869 player=32851 video=960834 autoplay=true]