Tag: tweet

  • ಕೈ ನಾಯಕರ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆ, ಸಿಡಿಗಳೂ ಇದೆ – ಪ್ರಿಯಾಂಕ್‍ಗೆ ಬಿಜೆಪಿ ತಿರುಗೇಟು

    ಕೈ ನಾಯಕರ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆ, ಸಿಡಿಗಳೂ ಇದೆ – ಪ್ರಿಯಾಂಕ್‍ಗೆ ಬಿಜೆಪಿ ತಿರುಗೇಟು

    ಬೆಂಗಳೂರು: ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ ಎಂದು ಟ್ವೀಟ್ ಮಾಡುವ ಮೂಲಕ ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಬಿಜೆಪಿ ತಿರಗೇಟು ನೀಡಿದೆ.

    bjP

    ಈ ಸರ್ಕಾರದಲ್ಲಿ ಹಣ ಕೊಡದೇ ಯಾವುದೇ ಕೆಲಸ ಕೊಡಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು. ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ. ಹೀಗಾಗಿ ಸದ್ಯ ರಾಜ್ಯದಲ್ಲಿರುವುದು ಲಂಚ ಹಾಗೂ ಮಂಚದ ಸರ್ಕಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರು.

    https://twitter.com/BJP4Karnataka/status/1558327420645941248

    ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ, ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ ಎಂದು ಪ್ರಶ್ನಿಸಿ ಕೂಡಲೇ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ. ಇದನ್ನೂ ಓದಿ: ಸರ್ಕಾರಿ ಕೆಲಸಕ್ಕೆ ಯುವತಿಯರು ಮಂಚ ಹತ್ತಬೇಕು – ಬಿಜೆಪಿ ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ವಿವಾದ

    ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಟಾಂಗ್ ನೀಡಿದ್ದಾರೆ.

    ಲಂಚ-ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೇ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮಳೆ ಅವಾಂತರ – ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿಯಲ್ಲಿ ಬಿರುಕು ಬಿಟ್ಟ ರಸ್ತೆ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ

    ಕಾಂಗ್ರೆಸ್ಸಿಗರ ಮನಸ್ಥಿತಿಯಲ್ಲಿ ಅತಂತ್ರವಿದೆ, ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ: ಬೊಮ್ಮಾಯಿ

    ಬೆಂಗಳೂರು: ಸಿಎಂ ಬದಲಾವಣೆ ವಿಚಾರವೆಲ್ಲಾ, ಕಾಂಗ್ರೆಸ್ಸಿಗರ ಕುತಂತ್ರ. ನಾನು ಸ್ಥಿತ ಪ್ರಜ್ಞನಾಗಿದ್ದೇನೆ ಅಂತ ಹೇಳುವ ಮೂಲಕ ಕಾಂಗ್ರೆಸ್ ನಾಯಕರ ಸಿಎಂ ಬದಲಾವಣೆ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರುಗೇಟು ನೀಡಿದ್ದಾರೆ.

    ಕೋವಿಡ್‍ನಿಂದ ಗುಣಮುಖರಾದ ಬಳಿಕ ಇಂದು ನಿತ್ಯದ ಆಡಳಿತ ಕೆಲಸಗಳನ್ನ ಪ್ರಾರಂಭ ಮಾಡಿದ ಬೊಮ್ಮಾಯಿ ಅವರು, ಸಿಎಂ ಬದಲಾವಣೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಕೊನೆಗೂ ಮೌನ ಮುರಿದಿದ್ದಾರೆ. ಇದನ್ನೂ ಓದಿ: ನೈಟ್ ಕ್ಲಬ್​ನಲ್ಲಿ ಯುವತಿಗೆಯೊಂದಿಗೆ ಅಸಭ್ಯ ವರ್ತನೆ – ಪ್ರಶ್ನಿಸಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಬೌನ್ಸರ್ಸ್ !

    ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಟ್ವೀಟ್ ಮತ್ತು ನಾಯಕರ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬದಲಾವಣೆ ಅಂತ ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡುತ್ತಿರುವುದು ಇದೇ ಮೊದಲಲ್ಲ. ಅನೇಕ ಬಾರಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ಜನತೆಗೆ ಹರಡುತ್ತಿದ್ದಾರೆ. ಆದರೆ ರಾಜ್ಯದ ಜನ ಅವರ ಮಾತು ನಂಬುವುದಿಲ್ಲ. ನಂಬುವ ಸ್ಥಿತಿಯಲ್ಲಿ ಜನರಿಲ್ಲ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಮೆಸ್ ಊಟ ಚೆನ್ನಾಗಿಲ್ಲ- ರಸ್ತೆಯಲ್ಲಿ ಊಟದ ತಟ್ಟೆ ಹಿಡಿದು ಅತ್ತ ಕಾನ್‍ಸ್ಟೇಬಲ್‍

    ನಾನು ಸ್ಥಿತ ಪ್ರಜ್ಞಾನಾಗಿದ್ದೇನೆ. ಸತ್ಯ ಏನು ಅಂತ ನನಗೆ ಗೊತ್ತಿದೆ. ಕಾಂಗ್ರೆಸ್‍ನ ಯಾವುದೇ ಮಾತಿಗೆ ಆಧಾರವಿಲ್ಲ. ಇವೆಲ್ಲ ರಾಜಕೀಯ ಪ್ರೇರಿತವಾದದ್ದು. ಕಾಂಗ್ರೆಸ್ ನವರ ಇಂತಹ ಹೇಳಿಕೆಗೆ ನಾನು ವಿಚಲಿತನಾಗುವುದಿಲ್ಲ. ನಾನು ಸ್ಥಿತ ಪ್ರಜ್ಞನಾಗಿದ್ದೇನೆ. ಇದರಿಂದ ನನ್ನ ನಿರ್ಣಯ ಇನ್ನಷ್ಟು ಗಟ್ಟಿಯಾಗಲಿವೆ. ಇನ್ನು ಮುಂದೆ ಮತ್ತಷ್ಟು ಹೆಚ್ಚಿನ ಕೆಲಸ ಮಾಡುತ್ತೇನೆ. ಇನ್ನು ಎರಡು ಗಂಟೆ ಹೆಚ್ಚು ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆ ಮತ್ತು ಜನರ ಬಳಿ ಹೋಗುವ ಕೆಲಸ ದೊಡ್ಡ ಪ್ರಮಾಣದಲ್ಲಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ಇನ್ನು ಮಾಜಿ ಶಾಸಕ ಸುರೇಶ್ ಗೌಡರ ಸಿಎಂ ಬದಲಾವಣೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕೆ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್

    ಇದು ಸ್ವತಂತ್ರ ಭಾರತ, ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಪ್ರೋತ್ಸಾಹ ಇದ್ಯಾ : ಜಮೀರ್ ವಿರುದ್ಧ ಬಿಜೆಪಿ ಟ್ವೀಟ್

    ಬೆಂಗಳೂರು: ಇದು ಸ್ವತಂತ್ರ ಭಾರತ. ಇಲ್ಲಿ ಪಾಳೇಗಾರಿಕೆ ನಡೆಸಲು ಜಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ ಎಂದು ಮಾಜಿ ಸಚಿವ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

    ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಬಳ್ಳಾರಿಯಲ್ಲಿ ಶುರುವಾಗುತ್ತಾ ಮೈನಿಂಗ್ ಚಾಪ್ಟರ್ 2? – ಅನುಮತಿ ಕೇಳಿದ ರೆಡ್ಡಿ

    ಜಮೀರ್ ಅವರ ಈ ಹೇಳಿಕೆ ವಿರುದ್ಧ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ. ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವಕ್ಕೆ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್‍ಚೌಕ್ ಆಗಿ ಪರಿವರ್ತನೆ ಆಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

    ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದರು. ರಾಷ್ಟ್ರೀಯ ಜೋಡಣೆಗೆ ಬಹುಮುಖ್ಯ ಪಾತ್ರ ವಹಿಸಿದ ಗಣೇಶ ಉತ್ಸವವನ್ನು ಮಾಡುವುದು ಬೇಡ ಎನ್ನಲು ಕಾಂಗ್ರೆಸ್ ನಾಯಕರು ಯಾರು ಎಂದು ಹರಿಹಾಯ್ದಿದ್ದಾರೆ.

    ರಿಪಬ್ಲಿಕ್ ಆಫ್ ಕನಕಪುರದ ಮಾದರಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ರಿಪಬ್ಲಿಕ್ ಆಫ್ ಚಾಮರಾಜಪೇಟೆ ಕಟ್ಟಿಕೊಂಡಿದ್ದಾರಾ? ಇದು ಸ್ವತಂತ್ರ ಭಾರತ. ಇಲ್ಲಿ ಪಾಳೇಗಾರಿಕೆ ನಡೆಸಲು ಮೀರ್ ಸಾದಿಕ್ ಅವರ ಪ್ರೋತ್ಸಾಹ ಇದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಿವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದು, ಮದುವೆಗೆ ನೋ ಅಂದ – ಪ್ರಿಯಕರನ ಕತ್ತು ಸೀಳಿ ಸೂಟ್‍ಕೇಸ್‍ನಲ್ಲಿ ತುಂಬಿದ್ಲು

    ಮತ್ತೊಂದೆಡೆ ಜಮೀರ್ ಅವರ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್ ಹಾಕಿದೆ. ಜಮೀರ್ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

    ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

    ಬೆಂಗಳೂರು: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಬುಧವಾರ ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಮಿತ್ ಶಾ ಕನ್ನಡ ಬಳಕೆ ಮಾಡದಿರುವುದಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.

     

    ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ, ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮಿತ್ ಶಾಗೆ ರಾಜಾಹುಲಿ ನೀಡಿದ ಫಸ್ಟ್ ರಿಪೋರ್ಟ್ ರಿವೀಲ್ – ಸಿದ್ದರಾಮೋತ್ಸವ ಎಫೆಕ್ಟ್!

    ಕೇಂದ್ರ ಸಚಿವ ಅಮಿತ್ ಅವರು ಭಾಗವಹಿಸಿದ್ದ ‘ಸಂಕಲ್ಸ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯದ ಬಿಜೆಪಿ ಸರ್ಕಾರ ತನ್ನ ತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

    ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ಎಂದು ಪ್ರಶ್ನಿಸಿದ್ದಾರೆ.

    ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ವ್ಯಾಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು

    10 ವರ್ಷ ದುಡಿದು SUV ಕಾರು ಖರೀದಿಸಿದ ಅಭಿಮಾನಿ – ಆನಂದ್ ಮಹೀಂದ್ರಾ ಮೆಚ್ಚುಗೆ ಮಾತು

    10 ವರ್ಷ ಕಟ್ಟಪಟ್ಟು ದುಡಿದು ಒಂದೊಂದು ರೂಪಾಯಿಯನ್ನು ಕೂಡಿ ಹಾಕಿ ಎಸ್‍ಯುವಿ ಕಾರು ಕಾರಿದಿಸಿದ ಅಭಿಮಾನಿಗೆ ಮಹೀಂದ್ರಾ ಗ್ರೂಪ್‍ನ ಅಧ್ಯಕ್ಷರಾದ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಶುಭ ಕೋರಿರುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.

    ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಾವು ಕಷ್ಟಪಟ್ಟು ಸಂಪಾದಿಸಿದ ಹಣದಿಂದ ಕಾರು, ತಮ್ಮ ಕನಸಿನ ಮನೆ ಖರೀದಿಬೇಕು ಎಂಬ ಆಸೆ ಇರುತ್ತದೆ. ಆದರೆ ಮಾಧ್ಯಮವರ್ಗದ ಎಷ್ಟೋ ಜನರಿಗೆ ಇದು ದೂರದ ಕನಸಾಗಿಯೇ ಉಳಿದು ಬಿಡುತ್ತದೆ. ನಿತ್ಯ ಜೀವನದ ಖರ್ಚುಗಳನ್ನೇ ನಿಭಾಯಿಸಲು ಪರದಾಡುವಾಗ ಲಕ್ಷಗಟ್ಟಲೆ ಹಣ ನೀಡಿ ಕಾರು (SUV) ಖರೀದಿಸುವುದು ಬಹಳಷ್ಟು ಸಲ ಅವರ ಜೀವಮಾನದ ಪೂರ್ತಿ ಉಳಿಕೆಯಾಗಿರುತ್ತದೆ. ಆದರೆ ಇಲ್ಲೊಬ್ಬ ವ್ಯಕ್ತಿ 10 ವರ್ಷ ಕಷ್ಟಪಟ್ಟು ಕೆಲಸ ಮಾಡಿ ಒಂದೊಂದು ರೂಪಾಯಿಯನ್ನು ಕೂಡಿ ಹಾಕಿ ಚಂದದೊಂದು ಎಸ್‍ಯುವಿ ಕಾರನ್ನು ಖರೀದಿಸಿ, ತಮ್ಮ ಕನಸ್ಸನ್ನು ನನಸಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಲ್‌ಖೈದಾ ಮುಖ್ಯಸ್ಥನ ಹತ್ಯೆಗೆ ಬಳಸಿದ್ದು ಬ್ಲೇಡ್ ಬಾಂಬ್ – ಇದು ಸ್ಫೋಟಿಸಲ್ಲ, ಛಿದ್ರಿಸುತ್ತೆ!

    ಹೌದು, ಅಶೋಕ್‍ಕುಮಾರ್ ಅವರು ತಮ್ಮ ಕನಸಿನ ಮಹೀಂದ್ರಾ ಎಸ್‍ಯುವಿ ಕಾರನ್ನು ಖರೀದಿಸಿದ್ದು, ಹೂವಿನ ಹಾರದಿಂದ ಅಲಂಕರಿಸಿದ್ದ ತಮ್ಮ ಹೊಚ್ಚಹೊಸ ಬಿಳಿ ಎಸ್‍ಯುವಿ ಕಾರಿನ ಪಕ್ಕ ನಿಂತು ಫೋಟೋವನ್ನು ಕ್ಲಿಕ್ಕಿಸಿಕೊಂಡು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 10 ವರ್ಷಗಳ ಕಠಿಣ ಪರಿಶ್ರಮದ ನಂತರ ಹೊಸ ಮಹೀಂದ್ರಾ ಎಕ್ಸ್‍ಯುವಿ 700 ಖರೀದಿಸಿದೆ, ಸರ್ ನನಗೆ ನಿಮ್ಮ ಆಶೀರ್ವಾದ ಬೇಕು ಎಂದು ಆನಂದ್ ಮಹೀಂದ್ರಾ ಅವರನ್ನು ಪೋಸ್ಟ್‌ನಲ್ಲಿ ಟ್ಯಾಗ್ ಮಾಡಿದ್ದರು.

    ಇದೀಗ ಈ ಪೋಸ್ಟ್‌ಗೆ ಆನಂದ್ ಮಹೀಂದ್ರಾ ಅವರು ಪ್ರತಿಕ್ರಿಯಿಸಿದ್ದು, ಅವರ ಕಂಪನಿ ನಿರ್ಮಿಸಿದ ಕಾರನ್ನು ಆಯ್ಕೆ ಮಾಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಧನ್ಯವಾದಗಳು. ನಮ್ಮ ಕಾರು ಖರೀದಿಸಿ ನೀವೇ ನಮಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಯಶಸ್ಸಿಗೆ ಅಭಿನಂದನೆಗಳು. ಅದು ಕಠಿಣ ಪರಿಶ್ರಮದಿಂದ ಬಂದಿದೆ. ಹ್ಯಾಪಿ ಮೋಟಾರಿಂಗ್ ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆರೋಗ್ಯ ಸಚಿವರಿಂದ ಛೀಮಾರಿ – ಪಂಜಾಬ್ ಮಾಜಿ ಸಿಎಂ ಅತ್ತಿಗೆ ರಾಜೀನಾಮೆ

    ಸದ್ಯ ಆನಂದ್ ಮಹೀಂದ್ರಾ ಅವರ ಟ್ವೀಟ್ ನೋಡಿ ಸಂತಸಗೊಂಡ ಅಭಿಮಾನಿ ಪ್ರತ್ಯುತ್ತರವಾಗಿ, ಮಹೀಂದ್ರಾಗೆ ತುಂಬಾ ಧನ್ಯವಾದಗಳು ಸರ್ ಎಂದು ಟ್ವೀಟ್‍ನಲ್ಲಿ ಬರೆದಿದ್ದಾರೆ. ಇದೀಗ ಅಭಿಮಾನಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಆನಂದ್ ಮಹೀಂದ್ರಾ ಅವರ ಟ್ವೀಟ್ ನೆಟ್ಟಿಗರನ್ನು ಆಕರ್ಷಿಸುತ್ತಿದೆ.

    ಮಹೀಂದ್ರಾ ಅವರು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುತ್ತಾರೆ. ಹಾಗೆಯೇ ಅವರ ಅನುಯಾಯಿಗಳೊಂದಿಗೂ ಕೂಡ ಸಂವಹನ ನಡೆಸುತ್ತಲೇ ಇರುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ಚಿಂತಕ ಚಕ್ರವರ್ತಿ ಸೂಲಿಬೆಲೆ

    ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ ಚಿಂತಕ ಚಕ್ರವರ್ತಿ ಸೂಲಿಬೆಲೆ

    ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟೀಕಿಸುವ ಭರದಲ್ಲಿ ಪುನೀತ್ ರಾಜ್ ಕುಮಾರ್ ನಿಧನವನ್ನು ಅಣಕಿಸುವ ರೀತಿಯಲ್ಲಿ ಟ್ವಿಟ್ ಮಾಡಿದ್ದಾರೆ ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಚಿಂತಕ ಚಕ್ರವತಿ ಸೂಲಿಬೆಲೆ ವಿರುದ್ಧ ಗರಂ ಆಗಿದ್ದಾರೆ. ಪುನೀತ್ ನಿಧನರಾದಾಗ ಮುಖ್ಯಮಂತ್ರಿಗಳು ಮೂರು ದಿನಗಳ ಸಮಯವನ್ನು ಅವರಿಗಾಗಿ ವ್ಯಯಿಸಿದರು ಎಂದು ಲೇವಡಿ ರೂಪದಲ್ಲಿ ಸೂಲಿಬೆಲೆ ಟ್ವಿಟ್ ಮಾಡಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದರು.

    ತಮ್ಮದೇ ಪಕ್ಷದ ಶಾಸಕರ ಫೈಲ್ಸ್ ಗೆ ಸಹಿ ಮಾಡಲು ಮುಖ್ಯಮಂತ್ರಿಗಳಿಗೆ ಸಮಯದ ಅಭಾವಿದೆ ಎಂದು ಪಕ್ಷದವರೇ ಟೀಕಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳಿಗೆ ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಮಯವಿದೆ. ಪ್ರಿಮಿಯರ್ ಶೋ ಅಟೆಂಡ್ ಮಾಡಿ, ಸಿನಿಮಾ ನೋಡಿ ಕಣ್ಣೀರು ಹಾಕಲು ಸಮಯವಿದೆ. ನಟನೊಬ್ಬನು ನಿಧನರಾದಾಗ ಮೂರು ದಿನಗಳ ಕಾಲ ಸಮಯ ಕೊಟ್ಟಿದ್ದಾರೆ. ಮುಂದೆ ವಿಕ್ರಾಂತ್ ರೋಣ ಸಿನಿಮಾವನ್ನೂ ಅವರು ನೋಡಲಿದ್ದಾರೆ ಎಂದು ಟ್ವಿಟ್ ಮಾಡಿದ್ದಾರೆ. ಇದು ಅಪ್ಪು ಅಭಿಮಾನಿಗಳನ್ನು ಕೆರಳಿಸಿತ್ತು.

    ಬಿ.ಜೆ.ಪಿ ಸರಕಾರದ ವಿರುದ್ಧ ಅಥವಾ ಬಸವರಾಜ ಬೊಮ್ಮಾಯಿ ವಿರುದ್ಧ ಚಕ್ರವತಿ ಸೂಲಿಬೆಲೆ ಅವರು ಏನಾದರೂ ಕಾಮೆಂಟ್ ಮಾಡಲಿ. ಅಪ್ಪು ನಿಧನವನ್ನು ಇಂದಿಗೂ ನಮ್ಮಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನಿಧನರಾದಾಗ ಯಾರೂ ಬರದೇ ಇದ್ದರೂ, ಅಭಿಮಾನಿಗಳು ಮೂರು ದಿನವಲ್ಲ, ನೂರು ದಿನವಾದರೂ ಅವರಿಗೆ ಗೌರವ ಸೂಚಿಸಿ ಕಳುಹಿಸಿ ಕೊಡುತ್ತಿದ್ದೆವು. ಈ ರೀತಿಯಲ್ಲಿ ಅವಮಾನ ಮಾತುಗಳನ್ನು ಕೇಳುವುದಕ್ಕೆ ಸಾಧ್ಯವಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕ ಅಭಿಮಾನಿಗಳು ಸೂಲಿಬೆಲೆಗೆ ಕಾಮೆಂಟ್ ಮಾಡಿದ್ದರು. ಕೂಡಲೇ ಎಚ್ಚೆತ್ತುಕೊಂಡ ಸೂಲಿಬೆಲೆ ಅವರು ಕ್ಷಮೆ ಕೇಳಿದ್ದಾರೆ.

    ಈ ಕುರಿತಂತೆ ವಿಡಿಯೋ ಸಮೇತ ಟ್ವಿಟ್ ಮಾಡಿರುವ ಸೂಲಿಬೆಲೆ ‘ಈ ಟ್ವಿಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವಿಟ್ ಅನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೈ ಹೌದು ಎಂದು ಬರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರು ಮಂದಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವೆ: ಸುಧಾಕರ್ ಭರವಸೆ

    ಆರು ಮಂದಿ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವೆ: ಸುಧಾಕರ್ ಭರವಸೆ

    ಚಿಕ್ಕಬಳ್ಳಾಪುರ: ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದ ಸೈಕೋಪಾತ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಗಾಯಗೊಂಡ 6 ಮಂದಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಭರವಸೆ ನೀಡಿದ್ದಾರೆ ಮತ್ತು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ರಾತ್ರಿ ನಡೆದ ಹಲ್ಲೆ ಪ್ರಕರಣದಲ್ಲಿ ದುಷ್ಕರ್ಮಿಯನ್ನು ಸಾಕ್ಷಿ ಸಮೇತ ಪತ್ತೆಹಚ್ಚಲಾಗಿದ್ದು, ತಡರಾತ್ರಿ 3 ಗಂಟೆ ಹೊತ್ತಿಗೆ ಬಂಧಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡಿದ್ದ 6 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಒಬ್ಬರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    6 ಜನ ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದು ಅವರ ಚಿಕಿತ್ಸಾ ಜವಾಬ್ದಾರಿಯನ್ನು ನಾನು ಸಂಪೂರ್ಣವಾಗಿ ವಹಿಸಲು ನಿರ್ಧರಿಸಿದ್ದೇನೆ. ದುಷ್ಕರ್ಮಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಲು ರಾತ್ರಿಯಿಡೀ ಶ್ರಮಿಸಿದ ಎಸ್‍ಪಿ ನಾಗೇಶ್, ಡಿವೈಎಸ್‍ಪಿ ವಾಸುದೇವ್, ಸರ್ಕಲ್ ಇನ್ಸ್‌ಪೆಕ್ಟರ್​ ರಾಜು ಮತ್ತು ಎಲ್ಲ ಪೊಲೀಸ್ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಚಿಕ್ಕಬಳ್ಳಾಪುರ ನಗರದ ನಿವಾಸಿ ಅರ್ಜುನ್ ನಗರದ ಬಲಮುರಿ ವೃತ್ತ ಬಜಾರ್ ರಸ್ತೆಯಲ್ಲಿ ಸಿಕ್ಕ ಸಿಕ್ಕ ಸಾರ್ವಜನಿಕರಿಗೆ ಚಾಕು ಇರಿದು ಪರಾರಿಯಾಗಿದ್ದನು. ಇದೀಗ ಸೈಕೋಪಾತ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಸಿಕ್ಕ-ಸಿಕ್ಕವರ ಮೇಲೆ ಚಾಕು ಇರಿದು ಪರಾರಿಯಾಗಿದ್ದವ ಅರೆಸ್ಟ್

    ಅರ್ಜುನ್ ಕಂದವಾರದ ಬಳಿಯ ದೇವಸ್ಥಾನವೊಂದರಲ್ಲಿ ಮಲಗುತ್ತಿದ್ದು, ಕಳೆದ 3 ದಿನಗಳ ಹಿಂದೆ ಪಕ್ಕದಲ್ಲಿ ಮಲಗಿದ್ದ ಒಬ್ಬನ ಬಳಿ ಮೊಬೈಲ್ ಕಳವು ಮಾಡಿದ್ದ ಎನ್ನಲಾಗಿದೆ. ಮೊಬೈಲ್ ವಾಪಸ್ ಕೇಳಿದ್ದಕ್ಕೆ ಮೊಬೈಲ್ ಮಾಲೀಕನಿಗೆ ಚಾಕು ತೋರಿಸಿ ಬೆದರಿಸಿದ್ದು, ತದನಂತರ ಮೊಬೈಲ್ ಮಾಲೀಕ ನಾಲ್ವರ ಸ್ನೇಹಿತರ ಜೊತೆ ಹೋಗಿ ಅರ್ಜುನ್‍ಗೆ ಹಲ್ಲೆ ಮಾಡಿ ಬೆದರಿಸಿ ಮೊಬೈಲ್ ವಾಪಸ್ ಪಡೆದುಕೊಂಡಿದ್ರಂತೆ. ಇದೇ ವಿಚಾರದಲ್ಲಿ ನಿನ್ನೆಯೂ ಸಹ ಜೂನಿಯರ್ ಕಾಲೇಜು ಬಳಿ ಗಲಾಟೆ ನಡೆದಿದ್ದು, ಅರ್ಜುನ್ ಗಲಾಟೆ ನಂತರ ಜೂನಿಯರ್ ಕಾಲೇಜು ಕಡೆಯಿಂದ ಬಲಮುರಿ ವೃತ್ತದ ಮೂಲಕ ಬಜಾರ್ ರಸ್ತೆಗೆ ಬೈಕ್ ಮೂಲಕ ಬಂದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಪರಾರಿಯಾಗಿದ್ದ. ಘಟನೆಯಲ್ಲಿ ಓರ್ವ ಮಹಿಳೆ ಸೇರಿ 6 ಮಂದಿ ಆಸ್ಪತ್ರೆ ಪಾಲಾಗಿದ್ದು, ಘಟನೆಯಿಂದ ಚಿಕ್ಕಬಳ್ಳಾಪುರ ನಗರದ ಜನತೆ ಬೆಚ್ಚಿಬಿದ್ದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮೂವರು ಕಾಂಗ್ರೆಸ್ ನಾಯಕರು ಟ್ವೀಟ್, ವೀಡಿಯೋ ಹಾಗೂ ರೀಟ್ವೀಟ್‌ಗಳನ್ನು ಮಾಡಿದ್ದು, ಅವೆಲ್ಲವನ್ನೂ 24 ಗಂಟೆಗಳ ಒಳಗೆ ಅಳಿಸಲು ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

    ಸ್ಮೃತಿ ಇರಾನಿ ಅವರ ಮಗಳು ಅಕ್ರಮ ಬಾರ್ ನಡೆಸುತ್ತಿರುವುದಾಗಿ ಆರೋಪಿಸಿರುವ ಜೈರಾಮ್ ರಮೇಶ್, ಪವನ್ ಖೇರಾ ಹಾಗೂ ನೆಟ್ಟಾ ಡಿಸೋಜಾ ವಿರುದ್ಧ ಸ್ಮೃತಿ ಇರಾನಿ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದು, ಅವರು ಆಗಸ್ಟ್ 18ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ನೈತಿಕ ಪೊಲೀಸ್ ಗಿರಿಗೆ ಬೆಂಬಲಿಸಿದ್ದೆ, ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣ: ಡಿಕೆಶಿ

    ಸ್ಮೃತಿ ಇರಾನಿ ಅವರ 18 ವರ್ಷದ ಪುತ್ರಿ ಕಿರಾತ್ ನಾಗ್ರಾ ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಹಿನ್ನೆಲೆ ಕಳೆದ ವಾರ ಸ್ಮೃತಿ ಇರಾನಿ ಮೂವರು ಕಾಂಗ್ರೆಸ್ ನಾಯಕರು ಹಾಗೂ ಅವರ ಪಕ್ಷಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದರು. ತಮ್ಮ ಮಗಳ ಮೇಲಿನ ಆರೋಪವನ್ನು ತಕ್ಷಣವೇ ಹಿಂಪಡೆಯಲು ಹಾಗೂ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದರು. ಇದನ್ನೂ ಓದಿ: ಹುಲಿಗಳ ಸಂಖ್ಯೆ ಹೆಚ್ಚಳ – ಚೆಲುವ ಚಾಮರಾಜನಗರ ಈಗ ಹುಲಿಗಳ ನಾಡು

    Live Tv
    [brid partner=56869869 player=32851 video=960834 autoplay=true]

  • ಕಳ್ಳನಾಯಕಿಯ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ – ಕಾಂಗ್ರೆಸ್ ಕಾಲೆಳೆದ ಬಿಜೆಪಿ

    ಕಳ್ಳನಾಯಕಿಯ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ – ಕಾಂಗ್ರೆಸ್ ಕಾಲೆಳೆದ ಬಿಜೆಪಿ

    ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮೌನ, ಕಾಗೆ ಬಂಗಾರ. ಕಳ್ಳನಾಯಕಿಯ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ಮಾಡಲು ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

    ನಾಳೆ ಕಾಂಗ್ರೆಸ್‍ನಿಂದ ಮೌನ ಪ್ರತಿಭಟನೆ ಹಿನ್ನೆಲೆ ಟ್ವೀಟ್ ಮಾಡುವ ಮೂಲಕ ಬಿಜೆಪಿ ಕಾಂಗ್ರೆಸ್ ಕಾಲೆಳೆದಿದೆ. ನಕಲಿ ಗಾಂಧಿ ಕುಟುಂಬ ಗುಲಾಮಗಿರಿತನ ಪ್ರದರ್ಶನ ಮಾಡಿಕೊಂಡು ಸಮಯ ಕಳೆಯುವ ಕಾಂಗ್ರೆಸ್ ನಾಯಕರಿಂದ ಈಗ ಅದೇ ನಕಲಿ ಗಾಂಧಿ ಕುಟುಂಬದವರಿಗಾಗಿ ಮೌನ ಪ್ರತಿಭಟನೆಯಂತೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಹೊತ್ತಿನಲ್ಲೂ, ದೇಶದ ಶ್ರೇಷ್ಠತೆಯ ಬಗ್ಗೆ ಸಾರುವ ಬದಲು ನಕಲಿ ಗಾಂಧಿಗಳಿಗಾಗಿ ಮೌನವಾಗಿರುವುದು ನಾಚಿಗೆಗೇಡಿನ ಸಂಗತಿ. ಪಕ್ಷದ ವಿರುದ್ಧ, ನಾಯಕರ ವಿರುದ್ಧ ಮಾತನಾಡಿದ ಕೆಲವು ನಾಯಕರಿಗೆ ನೋಟಿಸ್ ಕೂಡಾ ನೀಡಲಿಲ್ಲ, ಪ್ರಶ್ನಿಸಲಿಲ್ಲ ಎಂದು ಕಿಡಿಕಾರಿದೆ. ಇದನ್ನೂ ಓದಿ: ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿ ಅರೆಸ್ಟ್

    ಮಹಿಳಾ ನಾಯಕಿಯೊಬ್ಬರು ಪಕ್ಷದ ನಿಲುವು ಪ್ರಶ್ನಿಸಿದಾಗ ನೋಟಿಸ್ ನೀಡಿದರು. ಕಾಂಗ್ರೆಸ್ ಪಕ್ಷದಲ್ಲಿ ಮೌನ, ಕಾಗೆ ಬಂಗಾರ. ಕಳ್ಳನಾಯಕಿಯ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ ಮಾಡಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್ಸಿಗರು ದಿವ್ಯ ಮೌನಕ್ಕೆ ಶರಣಾಗುತ್ತಿರುವುದು ಹೊಸತೇನಲ್ಲ. ಈ ಹಿಂದೆ ಹಿಂದೂಗಳ ಮೇಲೆ, ದಲಿತರ ಮೇಲೆ, ಮಹಿಳೆಯರ ಮೇಲೆ, ರೈತರ ಮೇಲೆ, ಸೈನಿಕರ ಮೇಲೆ, ಬಡವರ ಮೇಲೆ ದೌರ್ಜನ್ಯವಾದಾಗ ಕಾಂಗ್ರೆಸ್ ಬಾಯಿ ಬಿಟ್ಟಿತ್ತೆ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಭಾರತದ ಗಡಿಯನ್ನು ಅಕ್ರಮವಾಗಿ ಪ್ರವೇಶಿದ್ದ ಪೋಲೆಂಡ್ ಪ್ರಜೆ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು: ಬಿಜೆಪಿ ಸರ್ಕಾರಕ್ಕೆ ಸಿದ್ದು ತರಾಟೆ

    ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು: ಬಿಜೆಪಿ ಸರ್ಕಾರಕ್ಕೆ ಸಿದ್ದು ತರಾಟೆ

    ಬೆಂಗಳೂರು: ಭ್ರಷ್ಟಾಚಾರ ವಿಚಾರವಾಗಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ನೀವೆಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ಹೇಳಿದ್ದಾರೆ.

    ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯ ಹಗರಣಗಳನ್ನು ತನಿಖೆಗೆ ಒತ್ತಾಯಿಸಿ ಸಿಎಂಗೆ ಪತ್ರ ಬರೆಯಲಿರುವ ಸಚಿವ ಅಶ್ವಥ್‌ ನಾರಾಯಣ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಇದೇ ರೀತಿ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅವರ ಮೇಲಿನ ಆರೋಪಗಳ ಬಗ್ಗೆಯೂ ತನಿಖೆಗೆ ಒತ್ತಾಯಿಸಿ ಪತ್ರ ಬರೆಯಲು ಕೇಳಿಕೊಳ್ಳುತ್ತೇನೆ ಎಂದು ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಶೀಘ್ರವೇ ಗುಣಮುಖರಾಗಿ – ಸ್ಟಾಲಿನ್‌ಗೆ ಶುಭಹಾರೈಸಿದ ಬೊಮ್ಮಾಯಿ

    ಟ್ವೀಟ್‌ನಲ್ಲೇನಿದೆ?
    ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷಗಳಾಯಿತು, ನಮ್ಮ ಸರ್ಕಾರದ ಹಗರಣಗಳ ಬಗ್ಗೆ ತನಿಖೆಗೆ ಈ ಮೂರು ವರ್ಷ ಸಾಕಾಗಲಿಲ್ಲವೇ? ನಿಮ್ಮ ತಲೆಗೆ ಹಗರಣಗಳು ಸುತ್ತಿಕೊಂಡ ಕೂಡಲೇ ನಮ್ಮ ಕಾಲದ ಹಗರಣಗಳು ನೆನಪಾಯಿತೇ?

    ರಾಜ್ಯ ಬಿಜೆಪಿ ಸರ್ಕಾರದ ಸಾಲು ಸಾಲು ಹಗರಣಗಳನ್ನು ಬಯಲಿಗೆಳೆಯದಂತೆ ತಡೆಯಲು ನೀವು ಮಾಡುತ್ತಿರುವ ಬೆದರಿಕೆ ರೂಪದ ಆರೋಪಗಳಿಗೆ ನಾವು ಬಗ್ಗುವವರಲ್ಲ. ಈ ರೀತಿಯ ಈ ಬ್ಲಾಕ್ ಮೇಲ್ ತಂತ್ರದಿಂದ ನಮ್ಮ ಬಾಯಿ ಮುಚ್ಚಿಸಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ ಅಶ್ವಥ್‌ ನಾರಾಯಣ ಅವರೇ. ಇದನ್ನೂ ಓದಿ: ಮುಸ್ಲಿಂ ಮಹಿಳೆಯರು ಶಾಂತಿ ಕೇಳುವುದರಲ್ಲಿ ತಪ್ಪಿಲ್ಲ: ಡಿ.ಕೆ ಶಿವಕುಮಾರ್

    ನಿಮ್ಮ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ತನಿಖೆಗಾಗಿ ಇಡೀ ವಿಧಾನಸೌಧವನ್ನೇ ತನಿಖಾ ಸಂಸ್ಥೆಗಳಿಗೆ ಬಿಟ್ಟುಕೊಡಬೇಕಾಗಬಹುದು. ಸಚಿವರು ಬೇರೇನೂ ಕೆಲಸ ಮಾಡದೆ ತನಿಖಾಧಿಕಾರಿಗಳ ಮುಂದೆ ನಿತ್ಯ ವಿಚಾರಣೆಗೆ ಹಾಜರಿ ಹಾಕಬೇಕಾಗಬಹುದು. ಇದಕ್ಕಿಂತ ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ಟ್ವೀಟ್‌ ಮಾಡಿ ಗುಡುಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]