Tag: twin babies

  • ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ಜಿಲ್ಲಾಸ್ಪತ್ರೆಯ ನಿರ್ಲಕ್ಷ್ಯ – ಪ್ರಸವದ ವೇಳೆ ಬಾಣಂತಿ, ಅವಳಿ ಶಿಶುಗಳು ಸಾವು

    ತುಮಕೂರು: ಪ್ರಸವ ವೇಳೆ ಅನಾಥ ಬಾಣಂತಿ ಹಾಗೂ ಅವಳಿ ಶಿಶುಗಳು (twin babies) ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ. ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆಯ (Hospital) ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ.

    ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ವಾಸವಿದ್ದ ತುಂಬು ಗರ್ಭಿಣಿ ಕಸ್ತೂರಿ (30) ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಇಲ್ಲದ ಕಾರಣಕ್ಕೆ ಕಸ್ತೂರಿಯವರನ್ನು ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಿದ್ದಾರೆ.

     

    ಇಂದು ಬೆಳಗ್ಗೆ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಆದರೆ ಸೂಕ್ತ ಚಿಕಿತ್ಸೆ ಸಿಗದೇ ಅವಳಿ ಶಿಶುಗಳ ಜೊತೆಗೆ ಬಾಣಂತಿಯೂ ಮೃತಪಟ್ಟಿದ್ದಾರೆ. ಕಸ್ತೂರಿ ಮೂಲತಃ ತಮಿಳುನಾಡಿನವರಾಗಿದ್ದು, ಕಳೆದ 1 ತಿಂಗಳಿನಿಂದ ಭಾರತಿ ನಗರದಲ್ಲಿ ವಾಸವಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಪೊಲೀಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ – 2 ವರ್ಷ ವಯೋಮಿತಿ ಸಡಿಲ

    ಇದೀಗ ಬಾಣಂತಿ ಹಾಗೂ ಅವಳಿ ಮಕ್ಕಳ ಸಾವಿಗೆ ಕಾರಣವಾಗಿರುವ ಆರೋಗ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ತಪ್ಪಿತಸ್ಥರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹೊನ್ನಾಳಿ ಚಂದ್ರು ಸಾವಿನ ಸುತ್ತ 5 ಅನುಮಾನ

    ಘಟನಾ ಸ್ಥಳಕ್ಕೆ ಡಿ.ಹೆಚ್.ಒ ಡಾ. ಮಂಜುನಾಥ್ ಹಾಗೂ ಡಾ. ವೀಣಾ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಮಂಜುನಾಥ್, ಜಿಲ್ಲಾ ಆಸ್ಪತ್ರೆ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡುಬಂದಿರುವುದರಿಂದ ಆ ವೇಳೆ ಕರ್ತವ್ಯದಲ್ಲಿದ್ದ ಡಾ.ಉಷಾ ಸೇರಿ ನರ್ಸ್ಗಳನ್ನು ಅಮಾನತುಗೊಳಿಸಲಾಗುವುದು. ತುರ್ತು ಸಂದರ್ಭದಲ್ಲಿ ದಾಖಲಾತಿ ಕೇಳುವ ಅಗತ್ಯ ಇಲ್ಲ. ಯಾವುದೇ ಮುಲಾಜಿಲ್ಲದೆ ಅವರನ್ನು ಅಮಾನತುಗೊಳಿಸಲಾಗುವುದು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಡ್ರೈವರ್- ಅವಳಿ ಮಕ್ಕಳು ಸೇರಿ ತಾಯಿ ದುರ್ಮರಣ

    ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿದ ಡ್ರೈವರ್- ಅವಳಿ ಮಕ್ಕಳು ಸೇರಿ ತಾಯಿ ದುರ್ಮರಣ

    ಹಾಸನ: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸಿ ಸರಣಿ ಅಪಘಾತ ಮಾಡಿದ ಚಾಲಕನಿಂದಾಗಿ ಇಬ್ಬರು ಮಕ್ಕಳ ಸಹಿತ ತಾಯಿ ದುರ್ಮರಣಕ್ಕೀಡಾಗಿದ್ದಾರೆ.

    ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರಣತಿ (3), ಪ್ರಣವ್(3) ಮತ್ತು ಜ್ಯೋತಿ ಮೃತರು. ಪ್ರಣತಿ, ಪ್ರಣವ್ ಇಬ್ಬರೂ ಅವಳಿ ಮಕ್ಕಳಾಗಿದ್ದಾರೆ. ತಂದೆ ಶಿವಾನಂದ್ ಹಾಗೂ ತಾಯಿ ಜ್ಯೋತಿ ಜೊತೆ ಮಕ್ಕಳು ಬೈಕಿನಲ್ಲಿ ಹೋಗುತ್ತಿದ್ದರು. ಈ ವೇಳೆ ಸುಮಾರು ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ, ಎರಡು ಪುಟ್ಟ ಮಕ್ಕಳಿದ್ದ ಬೈಕ್‍ಗೂ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಮಕ್ಕಳಿಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತಾಯಿ ಕೂಡ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಕ್ಕಳ ತಂದೆ ಶಿವಾನಂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    POLICE JEEP

    ಕುಡಿದ ಮತ್ತಿನಲ್ಲಿ ಮನಬಂದಂತೆ ಲಾರಿ ಚಲಾಯಿಸಿದ ಚಾಲಕ, ಅಪಘಾತದ ನಂತರವೂ ಲಾರಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಇದರಿಂದ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಬೈಕ್ ಅನ್ನು ಲಾರಿ ಎಳೆದುಕೊಂಡು ಹೋಗಿದೆ. ಇದರಿಂದ ಲಾರಿಯ ಟಯರ್ ನಡಿ ಸಿಲುಕಿ ಸುಮಾರು ಎರಡು ಕಿಲೋಮೀಟರ್ ದೂರದವರೆಗೂ ಸಾಗಿದ ಮಗುವಿನ ದೇಹ ಛಿದ್ರಛಿದ್ರವಾಗಿದೆ. ಘಟನೆಯಿಂದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

    ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.