ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಅಬುಧಾಬಿಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ. ಇದು 27 ಎಕರೆ ಭೂಮಿಯಲ್ಲಿ ನಿರ್ಮಿಸಲಾದ ಈ ದೇವಾಲಯ ಅಬುಧಾಬಿಯ (Abu Dhabi) ಮೊದಲ ಹಿಂದೂ ಕಲ್ಲಿನ ದೇವಾಲಯವಾಗಿದ್ದು, ಭಾರತೀಯ ಸಂಸ್ಕೃತಿಯ ವಿಶಿಷ್ಟ ಮಿಶ್ರಣ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಗುರುತನ್ನು ಹೊಂದಿದೆ.
ಅಬುಧಾಬಿಯ ಹಿಂದೂ ದೇವಾಲಯದಲ್ಲಿ ಪ್ರಧಾನಿ ʼನಮೋʼ.
ಇಬ್ಬರು ಹಿರಿಯ ಸ್ವಾಮೀಜಿಗಳ ಜೊತೆ ʼನಮೋʼ.
ಹಿಂದೂ ದೇವಾಲಯ ಉದ್ಘಾಟನೆಗೂ ಮುನ್ನ ಯುಎಇ ಅಧ್ಯಕ್ಷ ಹಾಗೂ ಇತರ ಗಣ್ಯರ ಜೊತೆ ಪ್ರಧಾನಿ ನರೇಂದ್ರ ಮೋದಿ.
ಸ್ವಾಮಿನಾರಾಯಣ ದೇವರ ಮುಂದೆ ತಲೆಬಾಗಿ ನಮಿಸಿದ ಪ್ರಧಾನಿ.
ಸ್ವಾಮೀಜಿಗಳ ಜೊತೆ ದೇವರಿಗೆ ಆರತಿ ಬೆಳಗಿ ʼನಮೋʼ.
ಹಿರಿಯ ಸ್ವಾಮೀಜಿಗೆ ತಲೆಬಾಗಿ ನಮಸ್ಕರಿಸಿ, ಅಪ್ಪುಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ.
ದುಬೈ: UAE ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ (Mohammed bin Zayed Al Nahyan) ಅವರಿಗೆ ಎದ್ದು ನಿಂತು ಗೌರವ ಸಲ್ಲಿಸುವಂತ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮನವಿ ಮಾಡಿಕೊಂಡರು.
ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ಹಿಂದೂ ದೇಗುಲ (Hindu Temple Abudhabi) ಉದ್ಘಾಟಿಸಿ ಮಾತನಾಡಿದ ಅವರು, ಈ ದೇವಾಲಯವು ಏಕತೆ ಮತ್ತು ಸೌಹಾರ್ದತೆಯ ಸಂಕೇತವಾಗಲಿದೆ. ದೇವಾಲಯದ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದರು.
ಇಲ್ಲಿಯವರೆಗೆ ಬುರ್ಜ್ ಖಲೀಫಾ, ಫ್ಯೂಚರ್ ಮ್ಯೂಸಿಯಂ, ಶೇಖ್ ಜಾಯೆದ್ ಮಸೀದಿ ಮತ್ತು ಇತರ ಹೈಟೆಕ್ ಕಟ್ಟಡಗಳಿಗೆ ಹೆಸರುವಾಸಿಯಾಗಿದ್ದ ಯುಎಇ ಈಗ ಮತ್ತೊಂದು ಸಾಂಸ್ಕೃತಿಕ ಅಧ್ಯಾಯವನ್ನು ಸೇರಿಸಿದೆ. ಮುಂಬರುವ ದಿನಗಳಲ್ಲಿ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂಬುದಾಗಿ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ
ಇನ್ನು ಮುಂದೆ ಯುಎಇಗೆ ಬರುವವರ ಸಂಖ್ಯೆಯೂ ಹೆಚ್ಚುತ್ತದೆ. ಈ ಮೂಲಕ ಜನರ ಸಂಪರ್ಕವೂ ಹೆಚ್ಚುತ್ತದೆ. ಈ ಹಿನ್ನೆಲೆಯಲ್ಲಿ ಇಂದು ನಾನು ಪ್ರಪಂಚದಾದ್ಯಂತ ವಾಸಿಸುವ ಲಕ್ಷಾಂತರ ಭಾರತೀಯರ ಪರವಾಗಿ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹಾಗೂ ಯುಎಇ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಯುಎಇ ಉಪ-ರಾಷ್ಟ್ರಪತಿ ಭಾರತೀಯ ಕಾರ್ಮಿಕರ ಆಸ್ಪತ್ರೆ ನಿರ್ಮಾಣಕ್ಕಾಗಿ ದುಬೈನಲ್ಲಿ ಭೂಮಿಯನ್ನು ನೀಡುವುದಾಗಿ ಘೋಷಿಸಿದ್ದಾರೆ ಎಂದು ಇದೇ ವೇಳೆ ಮೋದಿ ತಿಳಿಸಿದರು.
ಅಬುಧಾಬಿ: ಇಂದು (ಫೆ.14) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ಅಥವಾ ಬಿಎಪಿಎಸ್ (BAPS) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು (Hindu Temple) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನದ ಅರಬ್ ಪ್ರವಾಸದಲ್ಲಿ ಈ ದೇವಾಲಯದ ಉದ್ಘಾಟನೆಯನ್ನು ಮಾಡಲಿದ್ದಾರೆ. ಇದು ಯುಎಇಯಲ್ಲಿ ಉದ್ಘಾಟನೆಗೊಂಡ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯವಾಗಿದೆ. ಮಾರ್ಚ್ 1 ರಂದು ಸಾರ್ವಜನಿಕರಿಗೆ ತೆರೆಯಲಾಗುವ ದೇವಾಲಯದ ಸಮರ್ಪಣೆ ಸಮಾರಂಭಕ್ಕೂ ಪ್ರಧಾನಿ ಮೋದಿ ನೇತೃತ್ವ ವಹಿಸಲಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 5 ವರ್ಷ: 2019ರ ಫೆ.14 ರಂದು ನಡೆದಿದ್ದು ಏನು?
2024ರ ವರ್ಷ ಹಿಂದೂಗಳಿಗೆ ಹರ್ಷ ತಂದಿದೆ. ಹೊಸ ವರ್ಷದ ಮೊದಲ ತಿಂಗಳಲ್ಲೇ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂತಸ ಒಂದುಕಡೆಯಾದರೆ, 2ನೇ ತಿಂಗಳಲ್ಲಿ ಮುಸ್ಲಿಮರ ನೆಲದಲ್ಲಿ ಮೊಟ್ಟ ಮೊದಲ ಐತಿಹಾಸಿಕ ಹಿಂದೂ ದೇವಾಲಯ ಲೋಕಾರ್ಪಣೆ ಕಣ್ತುಂಬಿಕೊಳ್ಳುವ ಸೌಭಾಗ್ಯ ಹಿಂದೂಗಳಿಗೆ ಒಲಿದು ಬಂದಿದೆ. ಇದನ್ನೂ ಓದಿ: ಹೃದಯದ ಮೌನ.. ಹೃದಯಕೆ ಸೀದಾ.. ತಲುಪುವ ಹಾಗೆ ಮಾತಾಡು ನೀ…….
ಮುಸ್ಲಿಮರ ನೆಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಮೊದಲ ಬಿಎಪಿಎಸ್ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಈ ದೇವಾಲಯ ಪಾತ್ರವಾಗಲಿದೆ. ಈ ದೇವಾಲಯವು ಭಾರತದ ಹೊರಗಿನ ಅತ್ಯಂತ ದೊಡ್ಡ ಮತ್ತು ಅತ್ಯಂತ ಸುಂದರವಾದ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವೂ ಹೌದು. ಇದನ್ನೂ ಓದಿ: ಉಡುಪಿಯಲ್ಲಿ ನಾಲ್ವರ ಹತ್ಯೆ ಕೇಸ್ – ಆಯ್ನಾಜ್ ಮೇಲಿನ ವಿಪರೀತ ವ್ಯಾಮೋಹವೇ ಕೊಲೆಗೆ ಕಾರಣ
ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ನಿರ್ಮಾಣಗೊಂಡಿರೋ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಪ್ರಧಾನಿ ಮೋದಿ (Narendra Modi) ಫೆ.14ರಂದು (ಬುಧವಾರ) ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.13 ಮತ್ತು 14ರಂದು ಎರಡು ದಿನಗಳ ಕಾಲ ಮೋದಿ ಯುಎಇ ಪ್ರವಾಸ ಕೈಗೊಂಡಿದ್ದಾರೆ.
Over the next two days, I will be visiting UAE and Qatar to attend various programmes, which will deepen India’s bilateral relations with these nations.
My visit to UAE will be my seventh since assuming office, indicating the priority we attach to strong India-UAE friendship. I…
ಈಗಾಗಲೇ ಮಂದಿರ (Hindu Mandir) ಉದ್ಘಾಟನೆಗೆ ಭಾರೀ ತಯಾರಿ ಆರಂಭವಾಗಿದ್ದು, ಮಾ.1ರಿಂದ ಮಂದಿರವು ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ. ಯುಎಇಯ ಬಿಎಪಿಎಸ್ ಸ್ವಾಮಿ ನಾರಾಯಣ ಸಂಸ್ಥೆ ಅಬುಧಾಬಿಯಲ್ಲಿ 27 ಎಕರೆ ಪ್ರದೇಶದಲ್ಲಿ ಬೃಹತ್ ಹಿಂದೂ ದೇವಸ್ಥಾನವೊಂದನ್ನು ನಿರ್ಮಿಸಿದೆ. ಇಲ್ಲಿ ಕೃಷ್ಣ-ರಾಧೆ, ಶಿವ- ಪಾರ್ವತಿ ಮತ್ತು ರಾಮ-ಸೀತೆ, ಲಕ್ಷ್ಮಣ ಹಾಗೂ ಹನುಮಂತ ಸೇರಿ ಬಹುತೇಕ ಎಲ್ಲ ಹಿಂದೂ ದೇವರರನ್ನ ಪೂಜಿಸಲಾಗುತ್ತದೆ. ಮಂದಿರವು 108 ಅಡಿ ಎತ್ತರ, 262 ಅಡಿ ಉದ್ದ, 180 ಅಡಿ ಅಗಲವಿದೆ.
65,000ಕ್ಕೂ ಹೆಚ್ಚು ನೋಂದಣಿ:
ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಅವರು ಅಬುಧಾಬಿಯಲ್ಲಿ ನಡೆಯಲಿರುವ ‘ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆಗೆ ವ್ಯಕ್ತವಾಗಿದೆ. 65,000ಕ್ಕೂ ಹೆಚ್ಚು ಮಂದಿ ನೋಂದಣಿಯಾಗಿದ್ದಾರೆ. ಈ ಕುರಿತು ಯುಎಇನಲ್ಲಿರುವ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಮತ್ತು ‘ಅಹ್ಲಾನ್ ಮೋದಿ’ ಉಪಕ್ರಮದ ನಾಯಕ ಜಿತೇಂದ್ರ ವೈದ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಇದು ಅತ್ಯಂತ ವಿಶಿಷ್ಟ ಕಾರ್ಯಕ್ರಮ, ಏಕೆಂದರೆ ಈ ಕಾರ್ಯಕ್ರಮವನ್ನು ಯಾವುದೇ ಒಂದು ಸಂಸ್ಥೆ ನಡೆಸುತ್ತಿಲ್ಲ. ಇಡೀ ಸಮುದಾಯ ಆಯೋಜಿಸುತ್ತಿದೆ. ಅಲ್ಲದೇ ಮೋದಿ ಅವರ ಹೆಸರು ಬಂದಾಗ, ಅಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುತ್ತಾರೆ. ಇದು ಮೋದಿ ಅವರ ಮೇಲೆ ಜನರಿಗೆ ಇರುವ ಪ್ರೀತಿ ಎಂದು ಶ್ಲಾಘಿಸಿದ್ದಾರೆ.
ಸಾಂಸ್ಕೃತಿಕ ವೈಭವಕ್ಕೆ ಸಿದ್ಧತೆ:
ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಂದು ಸಾಂಸ್ಕೃತಿಕ ಕಾಯ್ರಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸುಮಾರು 700 ಕಲಾವಿದರು ವಿವಿಧ ಕಲಾ ಪ್ರಕಾರಗಳನ್ನ ಪ್ರದರ್ಶಿಸಲಿದ್ದಾರೆ. ಈ ಮೂಲಕ ಭಾರತೀಯ ಕಲೆಗಳಿಗೆ ಜೀವತುಂಬುವ ಕೆಲಸ ಮಾಡಲಿದ್ದಾರೆ ಎಂದು ಜಿತೇಂದ್ರ ತಿಳಿಸಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವು ಕೋಮು ಸೌಹಾರ್ದತೆಯನ್ನು ಸಾಕಾರಗೊಳಿಸುವ ಉದ್ದೇಶ ಹೊಂದಿದೆ ಎಂದು ಕಾರ್ಯಕ್ರಮ ಸಮಿತಿ ತಿಳಿಸಿದೆ.
ಯುಎಇ ಭೇಟಿಗೆ ಮೋದಿ ಉತ್ಸುಕ:
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ಏಳನೆಯದ್ದಾಗಿದೆ. ಇದು ಭಾರತ-ಯುಎಇ ಬಲವಾದ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ ಮೊಹಮ್ಮದ್ ಬಿನ್ ಝಾಯೆದ್ ಅವರನ್ನು ಭೇಟಿ ಮಾಡಲು ನಾನು ಉತ್ಸುಕನಾಗಿದ್ದೇನೆ. ಅದರಲ್ಲೂ ಯುಎಇಯಲ್ಲಿ ಮೊದಲ ಹಿಂದೂ ಮಂದಿರ ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
2024 ರ ವರ್ಷ ಹಿಂದೂಗಳಿಗೆ ಹರ್ಷ ತಂದಿದೆ. ಹೊಸ ವರ್ಷದ ಮೊದಲ ತಿಂಗಳಲ್ಲೇ ಅಯೋಧ್ಯೆ ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠಾಪನೆಯ ಸಂತಸ ಒಂದುಕಡೆಯಾದರೆ, 2ನೇ ತಿಂಗಳಲ್ಲಿ ಮುಸ್ಲಿಮರ ನೆಲದಲ್ಲಿ ಮೊಟ್ಟ ಮೊದಲ ಐತಿಹಾಸಿಕ ಹಿಂದೂ ದೇವಾಲಯ ಲೋಕಾರ್ಪಣೆ ಕಣ್ತುಂಬಿಕೊಳ್ಳುವ ಸೌಭಾಗ್ಯ ಹಿಂದೂಗಳಿಗೆ ಒಲಿದು ಬಂದಿದೆ.
ಹೌದು, ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ನಡೆದ ವಾರಗಳ ನಂತರ, ಫೆಬ್ರವರಿ 14 ರಂದು ಹೊರದೇಶದಲ್ಲಿ ಮತ್ತೊಂದು ಮಹತ್ವದ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮುಸ್ಲಿಮರ ನೆಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಮೊದಲ ಬಿಎಪಿಎಸ್ ಹಿಂದೂ ದೇವಾಲಯ (BAPS Hindu Temple) ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ದೇವಾಲಯವು ಭಾರತದ ಹೊರಗಿನ ಅತ್ಯಂತ ದೊಡ್ಡ ಮತ್ತು ಅತ್ಯಂತ ಸುಂದರವಾದ ಹಿಂದೂ ದೇವಾಲಯಗಳಲ್ಲಿ ಒಂದಾಗಿದೆ. ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವೂ ಹೌದು. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಕನ್ನಡದ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಹಾಡು ಪ್ರಸಾರ
ಅಷ್ಟಕ್ಕೂ ಅದು ಯಾವ ದೇವಾಲಯ? ಉದ್ಘಾಟನೆಗೊಳ್ಳುತ್ತಿರುವುದು ಎಲ್ಲಿ? ದೇವಾಲಯದ ವೈಶಿಷ್ಟ್ಯವೇನು ಎಂಬ ಬಗ್ಗೆ ಇಲ್ಲಿ ವಿವರಿಸಲಾಗಿದೆ.
ಇಂದಿರಾ ಗಾಂಧಿ ಬಳಿಕ ಯುಎಇಗೆ ಭೇಟಿ ನೀಡಿದ ಮೊದಲ ಪ್ರಧಾನಿ
2015 ರಲ್ಲಿ ಪ್ರಧಾನಿ ಮೋದಿಯವರು ಯುಎಇಗೆ ಮೊದಲ ಭೇಟಿ ನೀಡಿದ ಸಂದರ್ಭದಲ್ಲಿ, ಯುಎಇ ಅಬುಧಾಬಿಯಲ್ಲಿ (Abu Dhabi) ದೇವಾಲಯವನ್ನು ನಿರ್ಮಿಸಲು ಜಾಗ ಮಂಜೂರು ಮಾಡಲು ನಿರ್ಧರಿಸಲಾಯಿತು. ಪ್ರಧಾನಮಂತ್ರಿಯವರ ಭೇಟಿಯು ರಾಜತಾಂತ್ರಿಕವಾಗಿ ನಿರ್ಣಾಯಕವಾಗಿತ್ತು. ಏಕೆಂದರೆ ಅವರು ಇಂದಿರಾ ಗಾಂಧಿಯವರ ನಂತರ 34 ವರ್ಷಗಳಲ್ಲಿ ಈ ಕೊಲ್ಲಿ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ.
700 ಕೋಟಿ ರೂ. ವೆಚ್ಚ
ಫೆಬ್ರವರಿ 2018 ರಲ್ಲಿ ಪ್ರಧಾನ ಮೋದಿ ಅವರು ದೇವಾಲಯದ ಯೋಜನೆ ಉದ್ಘಾಟಿಸಿದ್ದರು. ಡಿಸೆಂಬರ್ 2019 ರಲ್ಲಿ ನಿರ್ಮಾಣ ಪ್ರಾರಂಭವಾಯಿತು. ದೇವಾಲಯವನ್ನು 5.4 ಹೆಕ್ಟೇರ್ ಭೂಮಿ ಜಾಗದಲ್ಲಿ ನಿರ್ಮಿಸಲಾಗುತ್ತಿದೆ. 700 ಕೋಟಿ ರೂ. ವೆಚ್ಚದಲ್ಲಿ ದೇವಾಲಯ ನಿರ್ಮಿಸಲಾಗಿದೆ.
ದೇವಸ್ಥಾನದ ವೈಶಿಷ್ಟ್ಯ ಏನು?
ವಿಶಾಲವಾದ ಸಂಕೀರ್ಣದಲ್ಲಿ ದೇವಾಲಯ ಅಷ್ಟೇ ಅಲ್ಲ, ದೊಡ್ಡ ಆಂಫಿಥಿಯೇಟರ್, ಗ್ಯಾಲರಿ, ಗ್ರಂಥಾಲಯ, ಫುಡ್ ಕೋರ್ಟ್, ಮಜ್ಲಿಸ್ ಮತ್ತು 5,000 ಜನರಿಗೆ ಸ್ಥಳಾವಕಾಶವಿರುವ ಎರಡು ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಉದ್ಯಾನಗಳು ಮತ್ತು ಮಕ್ಕಳಿಗಾಗಿ ಆಟದ ಮೈದಾನ ಕೂಡ ಮಾಡಲಾಗಿದೆ. ಇದು ಸಂಕೀರ್ಣವಾಗಿ ವಿನ್ಯಾಸಗೊಳಿಸಲಾದ ಗುಲಾಬಿ ಮರಳುಗಲ್ಲು ಮತ್ತು ಅಮೃತಶಿಲೆಯ ಮುಂಭಾಗವನ್ನು ಏಳು ಗೋಪುರಗಳೊಂದಿಗೆ ಸಂಯೋಜಿಸುತ್ತದೆ. ಅದು ದೇಶದ ಪ್ರತಿಯೊಂದು ಎಮಿರೇಟ್ಸ್ ಅನ್ನು ಪ್ರತಿನಿಧಿಸುತ್ತದೆ. ದೇವಾಲಯವನ್ನು 40,000 ಕ್ಯೂಬಿಕ್ ಮೀಟರ್ ಅಮೃತಶಿಲೆ, 1,80,000 ಘನ ಮೀಟರ್ ಮರಳುಗಲ್ಲು ಮತ್ತು 18 ಲಕ್ಷ ಇಟ್ಟಿಗೆಗಳನ್ನು ಬಳಸಿ ನಿರ್ಮಿಸಲಾಗಿದೆ. ಇದನ್ನೂ ಓದಿ: ಸರಯೂ ನದಿ ತಟದಲ್ಲಿ 1008 ಯಜ್ಞ ಮಂಟಪ ನಿರ್ಮಾಣ – 21 ಸಾವಿರ ಯತಿಗಳಿಂದ ರಾಮನಾಮ ಮಹಾ ಯಜ್ಞ
ದೇವಾಲಯದ ವಿನ್ಯಾಸವು ವೈದಿಕ ವಾಸ್ತುಶಿಲ್ಪ ಮತ್ತು ಶಿಲ್ಪಗಳಿಂದ ಸ್ಫೂರ್ತಿ ಪಡೆದಿದೆ. ಅನೇಕ ಪ್ರತಿಮೆಗಳು ಮತ್ತು ಕೆತ್ತನೆಗಳನ್ನು ಭಾರತದ ಕುಶಲಕರ್ಮಿಗಳು ಮಾಡಿದ್ದಾರೆ. ಅವುಗಳನ್ನು ಅಬುಧಾಬಿಗೆ ರವಾನಿಸಲಾಗಿದೆ. 2024 ರ ಫೆಬ್ರುವರಿ 14 ರಂದು ಪವಿತ್ರವಾದ ವಸಂತ ಪಂಚಮಿಯಂದು ದೇವಾಲಯದ ಪವಿತ್ರೀಕರಣವನ್ನು ನಿಗದಿಪಡಿಸಲಾಗಿದೆ.
ಬಿಎಪಿಎಸ್ ಎಂದರೇನು?
ಬಿಎಪಿಎಸ್ ಎಂದರೆ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್). 1700 ರ ದಶಕದ ಉತ್ತರಾರ್ಧದಲ್ಲಿ ವಾಸಿಸುತ್ತಿದ್ದ ಧಾರ್ಮಿಕ ಮುಖಂಡ ಭಗವಾನ್ ಸ್ವಾಮಿನಾರಾಯಣ ಅವರ ಹೆಸರನ್ನು ಈ ಸಂಸ್ಥೆಗೆ ಇಡಲಾಗಿದೆ. ಇದು ವೇದಗಳಲ್ಲಿ ಬೇರುಗಳನ್ನು ಹೊಂದಿರುವ ಸಾಮಾಜಿಕ-ಆಧ್ಯಾತ್ಮಿಕ ಹಿಂದೂ ನಂಬಿಕೆಯಾಗಿದೆ. ಇದನ್ನು 18 ನೇ ಶತಮಾನದ ಕೊನೆಯಲ್ಲಿ ಭಗವಾನ್ ಸ್ವಾಮಿನಾರಾಯಣ (1781-1830) ಪ್ರವರ್ತಿಸಿದರು. 1907 ರಲ್ಲಿ ಶಾಸ್ತ್ರೀಜಿ ಮಹಾರಾಜ್ (1865-1951) ಸ್ಥಾಪಿಸಿದರು.
ಬಿಎಪಿಎಸ್ ಪ್ರಪಂಚದಾದ್ಯಂತ 3,850 ಕೇಂದ್ರಗಳನ್ನು ಹೊಂದಿದೆ. ಆ ಮೂಲಕ 1,100 ದೇವಾಲಯಗಳನ್ನು ನಡೆಸುತ್ತಿದೆ. ಈ ಸಂಸ್ಥೆಯು ನ್ಯೂಜೆರ್ಸಿಯ ರಾಬಿನ್ಸ್ವಿಲ್ಲೆಯಲ್ಲಿರುವ ಅಕ್ಷರಧಾಮದ ಹಿಂದೆಯೂ ಇತ್ತು. ಇದು ಭಾರತದ ಹೊರಗೆ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವಾಗಿದೆ. ಇದನ್ನೂ ಓದಿ: ಅಯೋಧ್ಯೆಗೆ ತಲುಪಿತು 2,400 ಕೆ.ಜಿಯ ದೇಶದ ಅತೀ ದೊಡ್ಡ ಘಂಟೆ
ನ್ಯೂಯಾರ್ಕ್ ನಗರದ ದಕ್ಷಿಣಕ್ಕೆ 99 ಕಿಲೋಮೀಟರ್ ದೂರದಲ್ಲಿರುವ ಅಕ್ಷರಧಾಮ ಮಹಾಮಂದಿರವು ನ್ಯೂಜೆರ್ಸಿಯಲ್ಲಿ 185 ಎಕರೆ ಪ್ರದೇಶದಲ್ಲಿದೆ. ಅಲ್ಲದೇ 191 ಅಡಿ ಎತ್ತರವಿದೆ. ಬಲ್ಗೇರಿಯಾ, ಇಟಲಿ, ಗ್ರೀಸ್, ಟರ್ಕಿ ಮತ್ತು ಭಾರತ ಸೇರಿದಂತೆ ಪ್ರಪಂಚದಾದ್ಯಂತ 29 ಕ್ಕೂ ಹೆಚ್ಚು ವಿವಿಧ ಸ್ಥಳಗಳಿಂದ 1.9 ಮಿಲಿಯನ್ ಘನ ಅಡಿ ಕಲ್ಲುಗಳನ್ನು ತಂದು ದೇವಾಲಯ ನಿರ್ಮಿಸಲಾಯಿತು. ದೆಹಲಿ ಮತ್ತು ಗುಜರಾತ್‌ನಲ್ಲಿರುವ ಅಕ್ಷರಧಾಮ ದೇವಾಲಯಗಳನ್ನು ಸಹ ಬಿಎಪಿಎಸ್ ಸಂಸ್ಥೆ ನಡೆಸುತ್ತಿದೆ.
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Mohamed bin Zayed Al Nahyan) ಅವರು ಜನವರಿ 9 ರಂದು ಅಹಮದಾಬಾದ್‌ನಲ್ಲಿ (Ahmedabad) ರೋಡ್ ಶೋ (Road Show) ನಡೆಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಯುಎಇ ಅಧ್ಯಕ್ಷ ಜನವರಿ 9 ರಂದು ನಗರಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ. ನಂತರ ಉಭಯ ನಾಯಕರು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ (SVPI) ವಿಮಾನ ನಿಲ್ದಾಣದಿಂದ ಸಬರಮತಿ ಆಶ್ರಮದವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ 20 ನಿಮಿಷಗಳ ಕಾಲ ನಡೆಯುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲಕ್ಷದ್ವೀಪದ ಬೀಚ್‌ನಲ್ಲಿ ಮೋದಿ ಕೂಲ್; ಇಲ್ಲಿದೆ ನೋಡಿ PHOTOS
ಜನವರಿ 10ರಿಂದ 12ರವರೆಗೆ ಗಾಂಧಿನಗರದಲ್ಲಿ ನಡೆಯಲಿರುವ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯಲ್ಲಿ (Vibrant Gujarat Global Summit) ಪಾಲ್ಗೊಳ್ಳುವ ಮುಖ್ಯಸ್ಥರಲ್ಲಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಕೂಡ ಭಾಗವಹಿಸಲಿದ್ದಾರೆ. ಜನವರಿ 10ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!
ಅಬುಧಾಬಿ: ದುಬೈನಲ್ಲಿ ನಡೆಯಲಿರುವ 28ನೇ ಕಾನ್ಫರೆನ್ಸ್ ಆಫ್ ದಿ ಪಾರ್ಟೀಸ್ (COP28) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ (PM Modi UAE Visit) ತೆರಳಿದ್ದು, ದುಬೈನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ.
#WATCH | Dubai, UAE: Members of the Indian diaspora sing ‘Saare Jahan Se Achha’, raise slogans of ‘Bharat Mata Ki Jai’ and ‘Vande Mataram’ ahead of PM Modi’s visit to Dubai for 28th Conference of the Parties (COP28) at the UN Climate Change Conference (UNCC) pic.twitter.com/YdwoLPfq8N
ಮೋದಿ ಅವರು ದುಬೈ ತಲುಪುತ್ತಲೇ ಯುಎಇನಿಂದ ಸಾಂಪ್ರದಾಯಿಕವಾಗಿ ಸ್ವಾಗತ ದೊರೆಯಿತು. ಇದಾದ ಬಳಿಕ ಅನಿವಾಸಿ ಭಾರತೀಯರು ನರೇಂದ್ರ ಮೋದಿ ಅವರನ್ನು ಸಾಂಸ್ಕೃತಿಕವಾಗಿ ಸ್ವಾಗತಿಸಿದರು. ಮಹಿಳೆಯರು ಸಾರೇ ಜಹಾಂಸೆ ಅಚ್ಚಾ ಹಿಂದೂಸ್ತಾನ್ ಹಮಾರಾ ಗೀತೆ ಹಾಡುವ ಜೊತೆಗೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂಬ ಉದ್ಘೋಷಗಳನ್ನು ಮೊಳಗಿಸಿದರು. ಇದನ್ನೂ ಓದಿ: 41 ಕಾರ್ಮಿಕರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ತೆರಳಬಹುದು: ಏಮ್ಸ್
ನರೇಂದ್ರ ಮೋದಿ ಅವರನ್ನು ಕಂಡು ಅನಿವಾಸಿ ಭಾರತೀಯರು ಪುಳಕಿತರಾದರು. ನಾನು ದುಬೈನಲ್ಲಿ 20 ವರ್ಷಗಳಿಂದ ನೆಲೆಸಿದ್ದೇನೆ. ನನ್ನ ಸಂಬಂಧಿಕರೇ ಇಲ್ಲಿಗೆ ಬರುತ್ತಿದ್ದಾರೆ ಎಂದು ಭಾಸವಾಗಿದೆ, ನಮಗೆ ಅಷ್ಟು ಸಂತೋಷವಾಗಿದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡರು. ಇನ್ನೂ ಕೆಲವರು ತ್ರಿವರ್ಣ ಧ್ವಜ ಬೀಸುವ ಮೂಲಕ ಮೋದಿ ಅವರನ್ನು ಸ್ವಾಗತಿಸಿದರು. ಅನಿವಾಸಿ ಭಾರತೀಯರ ಸ್ವಾಗತಕ್ಕೆ ಮೋದಿ ಅವರೂ ಮನ ಸೋತರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಗೆಲುವು – ಇದು ಟುಡೇಸ್ ಚಾಣಕ್ಯ ಭವಿಷ್ಯ
ಕಾನ್ಫರೆನ್ಸ್ ಆಫ್ ದಿ ಪಾರ್ಟೀಸ್ (COP28) ಶೃಂಗಸಭೆಯಲ್ಲಿ ಪ್ರಮುಖವಾಗಿ ಹವಾಮಾನ ಬದಲಾವಣೆ ಕುರಿತು ಚರ್ಚಿಸಲಾಗುತ್ತದೆ. ಅದರಲ್ಲೂ, ಹವಾಮಾನ ಬದಲಾವಣೆಯ ಕ್ರಿಯಾಯೋಜನೆ ರೂಪಿಸಲು ಇದು ಪ್ರಮುಖವಾಗಿದೆ ಎಂದು ತಿಳಿದುಬಂದಿದೆ. ಅಭುದಾಬಿಯ ಶೇಖ್ ಮೊಹಮ್ಮದ್ ಬಿನ್ ಅಲ್ ನಹ್ಯಾನ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ಅಬುಧಾಬಿಗೆ ತೆರಳಿದ್ದಾರೆ. ಸುಮಾರು 200 ದೇಶಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 200 ರಾಷ್ಟ್ರಗಳು ಪ್ರತಿನಿಧಿಸಿರುವ ಐತಿಹಾಸಿಕ ಸಭೆಯಲ್ಲಿ ಮಹತ್ವದ ಒಪ್ಪಂದಗಳು ಏರ್ಪಡಲಿವೆ. ಇದೇ ವೇಳೆ ಪ್ರಧಾನಿಯು ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಟೆಲ್ ಅವಿವ್: ಇಸ್ರೇಲಿಗಳ (Israel) ಮೇಲೆ ಹಮಾಸ್ ಬಂಡುಕೋರರು (Hamas) ನಡೆಸುತ್ತಿರುವ ದಾಳಿಯನ್ನು ಯುಎಇ (ಸಂಯುಕ್ತ ಅರಬ್ ಒಕ್ಕೂಟ) ಖಂಡಿಸಿದೆ. ಹಮಾಸ್ ದಾಳಿಯನ್ನು ಖಂಡಿಸಿದ ಮೊದಲ ಮುಸ್ಲಿಂ ರಾಷ್ಟ್ರವಾಗಿದೆ.
ಜನಸಂಖ್ಯಾ ಕೇಂದ್ರಗಳ ಮೇಲೆ ಸಾವಿರಾರು ರಾಕೆಟ್‌ಗಳ ಹಾರಾಟ ಸೇರಿದಂತೆ ಗಾಜಾ ಪಟ್ಟಿಯ ಸಮೀಪವಿರುವ ಇಸ್ರೇಲಿ ಪಟ್ಟಣಗಳು ಮತ್ತು ಹಳ್ಳಿಗಳ ಮೇಲೆ ಹಮಾಸ್‌ನ ದಾಳಿಗಳು ಗಂಭೀರ ಸ್ವರೂಪದ್ದಾಗಿವೆ. ಇಸ್ರೇಲಿ ನಾಗರಿಕರನ್ನು ಅವರ ಮನೆಗಳಿಂದ ಒತ್ತೆಯಾಳುಗಳಾಗಿ ಅಪಹರಿಸಿರುವುದು ಕಳವಳಕಾರಿಯಾಗಿದೆ. ಎರಡೂ ಕಡೆಯ ನಾಗರಿಕರು ಅಂತಾರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ಸಂಪೂರ್ಣ ರಕ್ಷಣೆ ಹೊಂದಿರಬೇಕು. ಎಂದಿಗೂ ಯಾರೂ ಸಂಘರ್ಷಕ್ಕೆ ಗುರಿಯಾಗಬಾರದು ಎಂದು ದಾಳಿಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಯುಎಇ ವಿದೇಶಾಂಗ ಸಚಿವಾಲಯ ಖಂಡನೆ ವ್ಯಕ್ತಪಡಿಸಿದೆ. ಇದನ್ನೂ ಓದಿ: ಯುವತಿ ಅಪಹರಿಸಿ ಒತ್ತೆಯಾಳಾಗಿರಿಸಿಕೊಂಡ ಹಮಾಸ್ ಉಗ್ರರು
The UAE expressed its condolences to the families of the victims and urges all diplomatic efforts to prevent a wider regional confrontation.⁰Furthermore, @mofauae deeply mourns the loss of Israeli and Palestinian lives as a result of the outbreak of violence, and calls on both…
— حسن سجواني ???????? Hassan Sajwani (@HSajwanization) October 8, 2023
ದಾಳಿಯ ಬಲಿಪಶುಗಳ ಕುಟುಂಬಗಳಿಗೆ ಯುಎಇ ತನ್ನ ಸಂತಾಪ ವ್ಯಕ್ತಪಡಿಸುತ್ತದೆ. ಎರಡೂ ಕಡೆಯ ಈ ಮುಖಾಮುಖಿಯನ್ನು ತಡೆಗಟ್ಟಲು ರಾಜತಾಂತ್ರಿಕ ಪ್ರಯತ್ನಗಳ ಅಗತ್ಯವಿದೆ. ಹಿಂಸಾಚಾರದಿಂದ ಆಗಿರುವ ಜೀವಹಾನಿಗೆ ತೀವ್ರವಾಗಿ ದುಃಖಿಸುತ್ತದೆ. ನಾಗರಿಕ ಜೀವನ ಮತ್ತು ಸೌಲಭ್ಯಗಳ ಮೇಲೆ ಪರಿಣಾಮ ಬೀರುತ್ತಿರುವ ಹಿಂಸಾಚಾರ ಕೊನೆಗಾಣಿಸಬೇಕು ಎಂದು ಎರಡೂ ಕಡೆಯವರಿಗೆ ಯುಎಇ ಸಲಹೆ ನೀಡಿದೆ.
ಎಲ್ಲಾ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಪಾಲುದಾರರೊಂದಿಗೆ ಯುಎಇ ನಿಕಟ ಸಂಪರ್ಕದಲ್ಲಿದೆ. ಪರಿಸ್ಥಿತಿಯನ್ನು ತ್ವರಿತವಾಗಿ ತಗ್ಗಿಸಿ ಶಾಂತಿ ಪುನಃಸ್ಥಾಪಿಸಲು, ಪ್ಯಾಲೆಸ್ಟೀನಿಯನ್ನರು ಮತ್ತು ಇಸ್ರೇಲಿಗಳು ಶಾಂತಿ ಮಾತುಕತೆಗೆ ಮರಳಬೇಕು. ಪ್ರತಿಯೊಬ್ಬರೂ ಶಾಂತಿ ಮತ್ತು ಘನತೆಯಿಂದ ಬದುಕಲು ಅರ್ಹರು ಎಂದು ಒತ್ತಿ ಹೇಳಿದೆ. ಇದನ್ನೂ ಓದಿ: ಯುದ್ಧ ನಾವು ಆರಂಭಿಸಿಲ್ಲ ಆದ್ರೆ ಮುಗಿಸುತ್ತೇವೆ – ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುಡುಗು
ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದರು. ದೇಶದ ದಕ್ಷಿಣ ಮತ್ತು ಮಧ್ಯ ಭಾಗಗಳಿಗೆ ರಾಕೆಟ್‌ಗಳ ಸುರಿಮಳೆ ಸುರಿಸಿ 700 ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲಾಯಿತು.
ನವದೆಹಲಿ: ಜಿ20 ಶೃಂಗಸಭೆಯ (G20 Summit) ಹಿನ್ನೆಲೆ ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಬೆಂಗಾವಲು ವಾಹನ ಪಡೆಯ ಚಾಲಕನೊಬ್ಬ ಶಿಷ್ಟಾಚಾರ (ಪ್ರೋಟೋಕಾಲ್) ಉಲ್ಲಂಘಿಸಿದ್ದರಿಂದಾಗಿ ದೆಹಲಿಯಲ್ಲಿ ವಶಕ್ಕೆ ಪಡೆಯಲಾಯಿತು.
G-20 ಶೃಂಗಸಭೆ ಹಿನ್ನೆಲೆಯಲ್ಲಿ UAE ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯ ಕಾರು ಪ್ರವೇಶಿಸಿದ ನಂತರ ಈ ಘಟನೆ ನಡೆದಿದೆ. ವಾಹನ ಚಾಲನೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದಾಗಿ ಚಾಲಕನನ್ನ ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ನಂತರ ಆತನನ್ನ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Aditya-L1: ಮತ್ತೊಂದು ಎತ್ತರದ ಕಕ್ಷೆ ಸೇರಿದ ಆದಿತ್ಯ ನೌಕೆ – ಸೂರ್ಯನಿಗೆ ಇನ್ನಷ್ಟು ಹತ್ತಿರ
ಬೆಂಗಾವಲು ವಾಹನದಲ್ಲಿ ಹಲವು ಸ್ಟಿಕರ್‌ಗಳಿರುವುದಾಗಿಯೂ ಭದ್ರತಾ ಸಿಬ್ಬಂದಿ ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಕಾರು ಚಾಲಕನು ಜೋ ಬೈಡನ್ ತಂಗಿದ್ದ ಐಟಿಸಿ ಮೌರ್ಯ ಹೋಟೆಲ್‌ಗೆ ಬೆಳಗ್ಗೆ 9:30ಕ್ಕೆ ಬರಬೇಕಿತ್ತು. ಆದರೆ ಚಾಲಕ ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯನ್ನ ತಾಜ್‌ಗೆ ಬಿಡಬೇಕಾಗಿದ್ದರಿಂದ ತಾಜ್ ಹೋಟೆಲ್‌ಗೆ ಅದೇ ಕಾರಿನಲ್ಲಿ ಬಂದಿದ್ದ. ಆತನಿಗೆ ಪ್ರೋಟೋಕಾಲ್ (ಶಿಷ್ಟಾಚಾರ) (Protocol) ಬಗ್ಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಆತನನ್ನ ವಿಚಾರಣೆ ನಡೆಸಿದ ನಂತರ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: G20 Summit: ವಿಶ್ವ ನಾಯಕರಿಂದ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ
ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು, ಪ್ರತಿನಿಧಿಗಳು ಮಹಾತ್ಮ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸ್ಯಾಂಡಲ್ ವುಡ್ ಹೆಸರಾಂತ ನಟ ನೀನಾಸಂ ಸತೀಶ್ (Satish Ninasam), ಜಗತ್ತಿನ ಅತೀ ಉದ್ದವಾದ ಜಿಪ್ ಲೈನ್ (Zip line) ನಲ್ಲಿ ಸಾಹಸ ಪ್ರದರ್ಶನ ಮಾಡುವ ಮೂಲಕ ಹೊಸ ಅನುಭವಕ್ಕೆ ಸಾಕ್ಷಿಯಾಗಿದ್ದಾರೆ. ಆ ವಿಡಿಯೋವನ್ನು ಅವರು ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿಗೆ ಜಿಪ್ ಲೈನ್ ನಲ್ಲಿ ಅವರು ಚಲಿಸಿದ್ದು ಆ ಅನುಭವ ಮರೆಯಲಾರದ್ದು ಎಂದಿದ್ದಾರೆ.
ಜಗತ್ತಿನ ಅತೀ ಉದ್ದವಾದ ಜಿಪ್ ಲೈನ್ ಇರುವುದು ಯುಎಇನಲ್ಲಿ (UAE). ಕೇಬಲ್ ಮಾರ್ಗವು 2.8 ಕಿಮೀ ಉದ್ದವಾಗಿದೆ. ಇದು ಸಮುದ್ರ ಮಟ್ಟದಿಂದ 1680 ಮೀಟರ್ ಎತ್ತರದಲ್ಲಿದೆ. ಜಿಪ್ ಲೈನ್ 28 ಫುಟ್ ಬಾಲ್ ಪಿಚ್ ಗಳಿಗಿಂತ ಉದ್ದವಾಗಿ ಮತ್ತು ದುಬೈನ ಅತೀ ಎತ್ತರದ ಗಗನಚುಂಬಿ ಕಟ್ಟಡವಾದ ಬುರ್ಜ್ ಖಲೀಫಾಕ್ಕಿಂತ ಮೂರು ಹೆಚ್ಚು ಹೆಚ್ಚು ಉದ್ದವಾಗಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ:ಕುಟುಂಬದೊಂದಿಗೆ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ನಿಖಿಲ್
ಈ ಜಿಪ್ ಲೈನ್ ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸುತ್ತದೆ. ಅಲ್ಲದೇ, ಯುಎಇನ ಅತೀ ಎತ್ತರದ ಪರ್ವತವಾದ ಜೆಬೆಲ್ ಜೈಸ್ ಪರ್ವತದಲ್ಲಿ ಇದನ್ನು ಅಳವಡಿಸಲಾಗಿದೆ. ಅಲ್ಲದೇ ದಿನಕ್ಕೆ 250 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಇಂಥದ್ದೊಂದು ರೋಚಕ ಅನುಭವವನ್ನು ನೀನಾಸಂ ಸತೀಶ್ ಪಡೆದುಕೊಂಡಿದ್ದಾರೆ.
ಆಗಾಗ್ಗೆ ಸತೀಶ್ ಇಂತಹ ಸಾಹಸವನ್ನು ಮಾಡುತ್ತಲೇ ಇರುತ್ತಾರೆ. ಈ ಬಾರಿ ಅತೀ ಉದ್ದದ ಜಿಪ್ ಲೈನ್ ಗೆ ತೆರಳಿ ಅಲ್ಲಿ ಒಂದಷ್ಟು ಸಮಯವನ್ನು ಕಳೆದಿದ್ದಾರೆ. ಆ ಅನುಭವವನ್ನು ವಿಡಿಯೋದಲ್ಲಿ ದಾಖಲಿಸಿದ್ದಾರೆ. ಆ ವಿಡಿಯೋವನ್ನು ತಮ್ಮ ಸತೀಶ್ ಆಡಿಯೋ ಹೌಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.