Tag: UAPA

  • ಕಾಶ್ಮೀರದಲ್ಲಿ ಪಿಒಕೆ ಮೂಲದ ಉಗ್ರನ ಭೂಮಿ ವಶ

    ಕಾಶ್ಮೀರದಲ್ಲಿ ಪಿಒಕೆ ಮೂಲದ ಉಗ್ರನ ಭೂಮಿ ವಶ

    ಶ್ರೀನಗರ: ಕಾಶ್ಮೀರದ (Jammu and Kashmir) ರಾಂಬನ್ ಜಿಲ್ಲೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (PoK) ಕಾರ್ಯನಿರ್ವಹಿಸುತ್ತಿದ್ದ ಉಗ್ರನಿಗೆ ಸೇರಿದ್ದ ಭೂಮಿಯನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಧರಮ್‌ಕುಂಡ್‌ನ ಸುಂಬರ್ ಗ್ರಾಮದಲ್ಲಿ ಪಿಒಕೆಯಲ್ಲಿರುವ ಉಗ್ರ ಅಲಿ ಮೊಹಮ್ಮದ್ ಅಲಿಯಾಸ್ ಇಬ್ರಾಹಿಂ ಶೇಖ್ ಒಡೆತನದ ಕೃಷಿ ಭೂಮಿಯನ್ನು ಜಪ್ತಿ ಮಾಡಲಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉಗ್ರರನ್ನು ಮಟ್ಟಹಾಕುವಲ್ಲಿ ಇದು ಮಹತ್ವದ ನಡೆಯಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ಆಪರೇಷನ್ ಸಿಂಧೂರದ ಸೂಕ್ಷ್ಮ ಮಾಹಿತಿ ಹಂಚಿಕೆ – ಪಂಜಾಬ್ ವ್ಯಕ್ತಿ ಅರೆಸ್ಟ್

    ಜಪ್ತಿ ಮಾಡಲಾದ ಆಸ್ತಿಯನ್ನು ಕಂದಾಯ ದಾಖಲೆಗಳಲ್ಲಿ ಸರಿಯಾಗಿ ಗುರುತಿಸಲಾಗಿದೆ. ಅದರ ಮಾರಾಟ ಅಥವಾ ವರ್ಗಾವಣೆಯನ್ನು ನಿಷೇಧಿಸುವ ನೋಟಿಸ್‌ಗಳನ್ನು ನೀಡಲಾಗಿದೆ. 2024ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಬೆದರಿಕೆ ಹಾಕುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದನ್ನು ಮುಂದುವರೆಸುತ್ತೇವೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜಸ್ಥಾನದ ಮೂವರು ಸಚಿವರಿದ್ದ ಹೋಟೆಲ್‌ಗೆ ಬಾಂಬ್ ಬೆದರಿಕೆ ಸಂದೇಶ

  • ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ಕಾಶ್ಮೀರದಲ್ಲಿ ದೇಶವಿರೋಧಿ ಕೃತ್ಯಕ್ಕೆ ಸಾಥ್‌ – ತೆಹ್ರೀಕ್-ಎ-ಹುರಿಯತ್‌ಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

    ನವದೆಹಲಿ: ಜಮ್ಮು ಕಾಶ್ಮೀರದ (Jammu Kashmir) ತೆಹ್ರೀಕ್-ಎ-ಹುರಿಯತ್ (Tehreek-e-Hurriyat)  ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

    ಈ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿ ಕಾನೂನುಬಾಹಿರ ಸಂಘಟನೆ ಎಂದು ಅಮಿತ್‌ ಶಾ (Amit Shah) ಘೋಷಣೆ ಮಾಡಿದ್ದಾರೆ.

    ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ ಅಮಿತ್‌ ಶಾ ಅವರು,ತೆಹ್ರೀಕ್-ಎ-ಹುರಿಯತ್ ಸಂಘಟನೆ ಭಾರತದಿಂದ ಜಮ್ಮು ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ನಿಷೇಧಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಈ ಗುಂಪು ಭಾರತ-ವಿರೋಧಿ ಪ್ರಚಾರವನ್ನು ಹರಡುತ್ತಿದೆ. ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದವನ್ನು ಉತ್ತೇಜಿಸಿ, ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ಪ್ರಧಾನಿ ನರೇಂದ್ರಮೋದಿ ಅವರು ಭಯೋತ್ಪಾದನೆಯ ವಿರುದ್ಧ ಶೂನ್ಯ-ಸಹಿಷ್ಣು ನೀತಿಯನ್ನು ಪಾಲಿಸುತ್ತಿದ್ದಾರೆ. ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಯನ್ನು ತಕ್ಷಣವೇ ತಡೆಯುತ್ತೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

    ಭಾನುವಾರ ಗೃಹ ಸಚಿವಾಲಯದ ಗೆಜೆಟೆಡ್ ಅಧಿಸೂಚನೆಯಲ್ಲಿ ಹೊರಡಿಸಿ ಈ ನಿರ್ಧಾರ ಕೈಗೊಂಡಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ನಿರಂತರ ಕಲ್ಲು ತೂರಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಪಾಕಿಸ್ತಾನ ಮತ್ತು ವಿವಿಧ ಇತರ ಮೂಲಗಳಿಂದ ಹಣವನ್ನು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ನಾಯಕರು ಮತ್ತು ಸದಸ್ಯರು ತೊಡಗಿಸಿಕೊಂಡಿದ್ದಾರೆ. ಈ ಸಂಘಟನೆಯ ಸದಸ್ಯರು ಸಾಂವಿಧಾನಿಕ ಸ್ಥಾಪನೆಗೆ ಸಂಪೂರ್ಣ ಅಗೌರವವನ್ನು ತೋರಿಸಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಕಾಶ್ಮೀರದ ಪ್ರತ್ಯೇಕವಾದಿ ನಾಯಕ ಸೈಯ್ಯದ್‌ ಶಾ ಗಿಲಾನಿ (Syed Ali Shah Geelani)ಅವರು ಆಗಸ್ಟ್‌ 07, 2004ರಂದು ತೆಹ್ರೀಕ್-ಎ-ಹುರಿಯತ್ ಸಂಘಟನೆ ಸ್ಥಾಪಿಸಿದ್ದರು.

  • ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ನವದೆಹಲಿ: ಸಂಸತ್‌ನಲ್ಲಿ (Parliament) ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ (Security Breach) ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರ ನಿವಾಸಿ ಎಂಜಿನಿಯರಿಂಗ್ ಪದವೀಧರ ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ, ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶಿಸಿದ್ದಾರೆ. ಇದನ್ನೂ ಓದಿ: ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ

    ಘಟನೆಯಲ್ಲಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್‌ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್‌ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ವಿಶಾಲ್ ಇತರೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: 45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

    ದೆಹಲಿ ಪೊಲೀಸರ ಈವರೆಗಿನ ತನಿಖೆಯಲ್ಲಿ ಎಲ್ಲಾ ಆರೋಪಿಗಳು ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ ಎಂಬ ಗ್ರೂಪ್‌ನಲ್ಲಿ ಸಂಪರ್ಕ ಹೊಂದಿದ್ದು, ಒಂದೂವರೆ ವರ್ಷಗಳ ಹಿಂದೆಯೇ ಮೈಸೂರಿನಲ್ಲಿ ಭೇಟಿಯಾಗಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

    ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಯಿಂದ ನಾವು ಬೇಸತ್ತಿದ್ದೇವೆ. ಈ ಕಾರಣಕ್ಕೆ ಕೃತ್ಯವನ್ನು ನಡೆಸಿದ್ದೇವೆ ಎಂದು ಆರೋಪಿ ಅಮೋಲ್ ಶಿಂಧೆ ವಿಚಾರಣಾ ಸಮಯದಲ್ಲಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಇನ್ನೋರ್ವ ಆರೋಪಿ ಮಹಿಳೆ ನೀಲಂ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ನಾವು ನಮ್ಮ ಹಕ್ಕುಗಳಿಗೆ ಧ್ವನಿ ಎತ್ತಿದಾಗ ನಮ್ಮನ್ನು ಜೈಲಿಗೆ ಹಾಕುತ್ತಾರೆ. ಹೀಗೆ ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಯಾವುದೇ ಸಂಸ್ಥೆಗೆ ಸೇರಿಲ್ಲ. ನಾವು ನಿರುದ್ಯೋಗಿಗಳು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

  • ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ- 7 ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ UAPA ಅಡಿ ಕೇಸ್‌

    ಭಾರತ ಸೋತಿದ್ದಕ್ಕೆ ಸಂಭ್ರಮಾಚರಣೆ- 7 ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ UAPA ಅಡಿ ಕೇಸ್‌

    ಶ್ರೀನಗರ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ (World Cup Cricket) ಭಾರತ ಸೋತ ನಂತರ ಸಂಭ್ರಮಾಚರಣೆ ನಡೆಸಿದ 7 ಮಂದಿ ಕಾಶ್ಮೀರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ (Kashmir University Students) ವಿರುದ್ಧ ಯುಎಪಿಎ (UAPA) ಅಡಿ ಕೇಸ್‌ ದಾಖಲಾಗಿದೆ.

    ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ 7 ಮಂದಿ ವಿದ್ಯಾರ್ಥಿಗಳು ಭಾರತ ಸೋತ ನಂತರ ಪಾಕಿಸ್ತಾನ (Pakistan) ಪರ ಘೋಷಣೆ ಕೂಗಿದ್ದರು. ವಿಶ್ವವಿದ್ಯಾನಿಲಯದಲ್ಲಿ ಬಿವಿಎಸ್‌ಸಿ ಕೋರ್ಸ್ ಓದುತ್ತಿರುವ ಪಂಜಾಬ್ ನಿವಾಸಿ ಸಚಿನ್ ಬೈನ್ಸ್ ಅವರ ದೂರಿನ ಮೇರೆಗೆ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ

     

    ಆಗಸ್ಟ್ 17ರಂದು ಭಾರತ ಸೋತ ನಂತರ ಪಾಕ್‌ ಪರ ಘೋಷಣೆ ಕೂಗಿದರು. ನಮ್ಮ ದೇಶದ ಬೆಂಬಲಿಗ ಎಂದು ಹೇಳಿ ನನ್ನನ್ನು ಗುರಿಯಾಗಿಸಿ ನಿಂದಿಸಲು ಪ್ರಾರಂಭಿಸಿದರು. ಪ್ರಶ್ನೆ ಮಾಡಿದ್ದಕ್ಕೆ ಸುಮ್ಮನಿರುವಂತೆ ಹೇಳಿದರು. ಸುಮ್ಮನಿರದಿದ್ದರೆ ಗುಂಡಿಕ್ಕಿ ಕೊಲ್ಲುತ್ತೇವೆ ಎಂದು ಬೆದರಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಕಾಶ್ಮೀರ ಮೂಲದ ಏಳು ವಿದ್ಯಾರ್ಥಿಗಳ ಮೇಲೆ ಯುಎಪಿಎ ಸೆಕ್ಷನ್ 13 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 ಮತ್ತು 506 ಅಡಿಯಲ್ಲಿ ಗಂಡರ್‌ಬಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

     

  • ಚೀನಾದಿಂದ ಅಕ್ರಮ ಹೂಡಿಕೆ – ನ್ಯೂಸ್‌ಕ್ಲಿಕ್ ಸಂಪಾದಕ, HR 7 ದಿನ ಪೊಲೀಸ್ ಕಸ್ಟಡಿಗೆ – ಏನಿದು ಪ್ರಕರಣ?

    ಚೀನಾದಿಂದ ಅಕ್ರಮ ಹೂಡಿಕೆ – ನ್ಯೂಸ್‌ಕ್ಲಿಕ್ ಸಂಪಾದಕ, HR 7 ದಿನ ಪೊಲೀಸ್ ಕಸ್ಟಡಿಗೆ – ಏನಿದು ಪ್ರಕರಣ?

    ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಮಾಧ್ಯಮವಾದ ನ್ಯೂಸ್‌ಕ್ಲಿಕ್ (News Click) ಸಂಪಾದಕ ಪ್ರಬೀರ್ ಪುರ್ಯಕಸ್ಥ (Prabir Purkayastha) ಮತ್ತು ಅದರ ಮಾನವ ಸಂಪನ್ಮೂಲ ಮುಖ್ಯಸ್ಥ ಅಮಿತ್ ಚಕ್ರವರ್ತಿ (Amit Chakravarty) ಅವರನ್ನು ದೆಹಲಿ ನ್ಯಾಯಾಲಯವು ಮಂಗಳವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

    ಭಾರತದಲ್ಲಿ ಚೀನೀ (China) ಪ್ರಚಾರವನ್ನು ಹೆಚ್ಚಿಸಲು ನ್ಯೂಸ್‌ಕ್ಲಿಕ್‌ಗೆ ಹಣ ಪಾವತಿಸಲಾಗುತ್ತಿದೆ ಎಂದು ನ್ಯೂಯಾರ್ಕ್ ಟೈಮ್ಸ್ (The New York Times) ಈ ಹಿಂದೆ ವರದಿ ಮಾಡಿತ್ತು. ಆಗಸ್ಟ್‌ನಲ್ಲಿ ನ್ಯೂಯಾರ್ಕ್ ಟೈಮ್ಸ್ ತನಿಖೆಯು ನ್ಯೂಸ್‌ಕ್ಲಿಕ್ ಅನ್ನು ಚೀನೀ ಪ್ರಚಾರವನ್ನು ಉತ್ತೇಜಿಸಲು ಅಮೆರಿಕದ ಶತಕೋಟ್ಯಧಿಪತಿ ನೆವಿಲ್ಲೆ ರಾಯ್ ಸಿಂಘಮ್‌ನೊಂದಿಗೆ (Neville Roy Singham) ಸಂಪರ್ಕ ಹೊಂದಿದ ನೆಟ್‌ವರ್ಕ್‌ನಿಂದ ಹಣ ಪಡೆದಿದೆ ಎಂದು ಆರೋಪಿಸಿತ್ತು.  ಇದನ್ನೂ ಓದಿ: ನಟಿ ಗಾಯತ್ರಿ ಜೋಶಿ ಕಾರು ಅಪಘಾತ: ವೃದ್ಧ ದಂಪತಿ ಸಾವು

    ನೆವಿಲ್ಲೆ ರಾಯ್ ಸಿಂಘಮ್‌
    ನೆವಿಲ್ಲೆ ರಾಯ್ ಸಿಂಘಮ್‌

    ಯುಎಪಿಎ ಪ್ರಕರಣದ ಹೊರತಾಗಿ ನ್ಯೂಸ್‌ಕ್ಲಿಕ್ ವಿರುದ್ಧ ಈ ಹಿಂದೆ ದಾಖಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣವೂ (Money Laundering Case) ಬಾಕಿ ಉಳಿದಿದೆ. ನ್ಯೂಸ್ ಪೋರ್ಟಲ್‌ನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ (ED) ಕಂಪನಿಗೆ ಹೂಡಿಕೆ ಮಾಡಿದವರ ಬಗ್ಗೆ ತನಿಖೆ ಆರಂಭಿಸಿತ್ತು. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿಜಿಟಲ್ ಮೀಡಿಯಾ ವೆಬ್‌ಸೈಟ್ ವಿರುದ್ಧ ಮಾಡಲಾದ ಆರೋಪಗಳಲ್ಲಿ ಷೇರುಗಳ ಅತಿಯಾದ ಮೌಲ್ಯವರ್ಧನೆ, ವಿದೇಶಿ ನೇರ ಹೂಡಿಕೆ ನಿಯಮಗಳ ಉಲ್ಲಂಘನೆಯ ಸೇರಿದೆ.

    ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಮ್ಮ ವಿರುದ್ಧ ಇಡಿ ಸಲ್ಲಿಸಿದ ಎನ್‌ಫೋರ್ಸ್‌ಮೆಂಟ್ ಕೇಸ್ ಮಾಹಿತಿ ವರದಿಯ (ಇಸಿಐಆರ್) ನಕಲನ್ನು ಕೋರಿ ದೆಹಲಿ ಹೈಕೋರ್ಟ್‌ಗೆ ನ್ಯೂಸ್‌ಕ್ಲಿಕ್ ಸಂಪಾದಕ ಪ್ರಬೀರ್ ಪುರ್ಯಕಸ್ಥ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವೆಬ್‌ಸೈಟ್ ಮತ್ತು ಅದರ ಸಂಸ್ಥಾಪಕರ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ಇಡಿಗೆ ನಿರ್ದೇಶಿಸಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ

    ಕೇರಳ ರೈಲಿಗೆ ಬೆಂಕಿ – ಇಸ್ಲಾಮಿಕ್ ಮತೀಯವಾದ ಬೆಳೆಸಿಕೊಂಡಿದ್ದ ಆರೋಪಿ

    ತಿರುವನಂತನಪುರಂ: ಇತ್ತೀಚೆಗೆ ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿ ಮಗು ಸೇರಿ ಮೂರು ಜನರ ಸಾವಿಗೆ ಕಾರಣನಾದ ಆರೋಪಿ ಶಾರುಖ್ ಸೈಫಿ ತೀವ್ರ ಮತೀಯವಾದ (Radicalised) ಬೆಳೆಸಿಕೊಂಡಿದ್ದ ಎಂದು ಎಸ್‍ಐಟಿ (SIT) ಮುಖ್ಯಸ್ಥ ಎಡಿಜಿಪಿ (ADGP) ಎಂ.ಆರ್ ಅಜಿತ್ ಕುಮಾರ್ ಸೋಮವಾರ ತಿಳಿಸಿದ್ದಾರೆ.

    ಆರೋಪಿ ವಿವಾದಾತ್ಮಕ ಇಸ್ಲಾಮಿಕ್ ಬೋಧಕ ಝಾಕೀರ್ ನಾಯ್ಕ್ (Zakeer Naik) ವೀಡಿಯೊಗಳನ್ನು ವೀಕ್ಷಿಸುತ್ತಿದ್ದ. ಕೃತ್ಯ ಎಸಗಲು ಸಂಚು ರೂಪಿಸಿ ರಾಜ್ಯಕ್ಕೆ ಬಂದಿದ್ದ. ಆರೋಪಿ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆಗಟ್ಟುವ ಕಾಯ್ದೆಯಡಿ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಆತನ ವಿರುದ್ಧ ಯುಎಪಿಎಯ (UAPA) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ – ಓರ್ವ ಯೋಧನ ಬಂಧನ

    CRIME

    ತನಿಖಾ ತಂಡ ವಿವಿಧ ರಾಜ್ಯಗಳಿಗೆ ತೆರಳಿ ವೈಜ್ಞಾನಿಕ ಪುರಾವೆಗಳು, ಸಾಕ್ಷ್ಯಚಿತ್ರ ಮತ್ತು ಮೌಖಿಕ ಮಾಹಿತಿಯನ್ನು ಸಂಗ್ರಹಿಸಿದೆ. ಪ್ರಕರಣದ ಸಮಗ್ರ ತನಿಖೆ ನಡೆಸಿದ್ದೇವೆ. ಆತನಿಗೆ ಬೇರೆಯವರಿಂದ ಏನಾದರೂ ಸಹಾಯ ಸಿಕ್ಕಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಆರೋಪಿಗೆ 27 ವರ್ಷ ವಯಸ್ಸಾಗಿದ್ದು, ನ್ಯಾಷನಲ್ ಓಪನ್ ಸ್ಕೂಲ್‍ನಲ್ಲಿ ಶಿಕ್ಷಣ ಪೂರೈಸಿದ್ದಾನೆ. ತನಿಖೆ ವೇಳೆ ತಾನು ಮಾಡಿದ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏ.2ರ ರಾತ್ರಿ ಅಲಪ್ಪುಳ-ಕಣ್ಣೂರು ಎಕ್ಸ್‍ಪ್ರೆಸ್ ರೈಲಿನಲ್ಲಿ (Alappuzha-Kannur Executive Express train) ಪ್ರಯಾಣಿಸುವಾಗ ಕೋಝಿಕ್ಕೋಡ್‍ನ ಎಲತ್ತೂರ್ ಬಳಿಯ ಕೊರಾಪುಝ ಸೇತುವೆಯ (Korapuzha Bridge) ಬಳಿ ಸೈಫಿ ತನ್ನ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ್ದ. ಘಟನೆಯಲ್ಲಿ ಎರಡು ವರ್ಷದ ಮಗು ಸೇರಿದಂತೆ ಮೂವರು ಸಾವಿಗೀಡಾಗಿದ್ದರು. ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿತ್ತು. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ತಲೆಗೆ 1, ದೇಹಕ್ಕೆ 8 ಗುಂಡೇಟು

  • PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

    PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

    ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ (Karnataka HighCourt) ವಜಾಗೊಳಿಸಿದೆ.

    ಅರ್ಜಿವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ. ಇದನ್ನೂ ಓದಿ: ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಕರ್ನಾಟಕದ ಪಿಎಫ್‌ಐ (PFI) ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ (Central Government) ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಆತ್ಮಹತ್ಯಾ ಸ್ಫೋಟ – ಪೊಲೀಸ್, ಮಗು ಸಾವು, 24 ಮಂದಿಗೆ ಗಾಯ

    ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಪಿಎಫ್‌ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದ್ದು, ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಸಂಘಟನೆಯ ಕಾರ್ಯಕರ್ತರು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್‌ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

    ಹೈಕೋರ್ಟ್ ನ.28ಕ್ಕೆ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಪಿಎಫ್ಐ ಬ್ಯಾನ್‌ – ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

    ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(UAPA) ಅಡಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು ಹೈಕೋರ್ಟ್‌(High Court) ತೀರ್ಪು ಕಾಯ್ದಿರಿಸಿದೆ.

    ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸಿರ್ ಅಲಿ ನಿಷೇಧವನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರ್ಕಾರ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣ ನಿಷೇಧಕ್ಕೆ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಕ್ರೈಂ ಸ್ಟೋರಿ- ಪತಿಯನ್ನು ತುಂಡರಿಸಿ ಫ್ರಿಜ್‌ನಲ್ಲಿಟ್ಟ ಪತ್ನಿ!

    ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ಪಿಎಫ್ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದ್ದು, ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಸಂಘಟನೆಯ ಕಾರ್ಯಕರ್ತರು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸಕಾರಣವಾಗಿಯೇ ಪಿಎಫ್ಐ ನಿರ್ಬಂಧಿಸಲಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    ನವದೆಹಲಿ: ನಿಷೇಧಿತ ಪಿಎಫ್‌ಐ (PFI) ಸಂಘಟನೆಯೊಂದಿಗೆ ಎಸ್‌ಡಿಪಿಐ (SDPI) ಯಾವುದೇ ಸಂಬಂಧ ಹೊಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗ (Election Commission) ಸ್ಪಷ್ಟನೆ ನೀಡಿದೆ.

    ಸೆಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಪಿಎಫ್‌ಐ (PFI) ಸಂಘಟನೆಯನ್ನು ನಿಷೇಧಿಸಿತು. ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವಿಕೆ ಕಾಯ್ದೆ (UAPA) ಅಡಿಯಲ್ಲಿ ಪಿಎಫ್‌ಐ ಹಾಗೂ ಅದರ 8 ಅಂಗ ಸಂಸ್ಥೆಗಳನ್ನು ನಿಷೇಧಿಸಿತು. ಇದನ್ನೂ ಓದಿ: ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ

    ಎಸ್‌ಡಿಪಿಐ ಎಲ್ಲಾ ಅಗತ್ಯ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ಪಿಎಫ್‌ಐ ನೊಂದಿಗೆ ಯಾವುದೇ ನಂಟಿರುವುದು ಕಂಡುಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ (Rajiv Kumar) ತಿಳಿಸಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಪಿಎಫ್‌ಐ ನಂತೆಯೇ RSSನ್ನೂ ಬ್ಯಾನ್‌ ಮಾಡಿ: ಕೇರಳ ವಿಪಕ್ಷಗಳ ಒತ್ತಾಯ

    ಈ ಕುರಿತು ಮಾತನಾಡಿರುವ ಅವರು, ಪಿಎಫ್‌ಐ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ನಮಗೆ ತಿಳಿದಿದೆ. ಆದರೆ ಎಸ್‌ಡಿಪಿಐ ಎಲ್ಲಾ ರೀತಿಯ ಅಗತ್ಯ ದಾಖಲೆ ಸಲ್ಲಿಸಿದ್ದು, ಈವರೆಗೂ ಪಿಎಫ್‌ಐನೊಂದಿಗೆ ಯಾವುದೇ ಸಂಪರ್ಕ ಹೊಂದಿರುವುದು ಕಂಡುಬಂದಿಲ್ಲ. ಎಸ್‌ಡಿಪಿಐ ಕಡೆಯಿಂದ ಲೋಪವಾಗಿಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

    2009ರ ಜೂನ್ 21ರಂದು ಎಸ್‌ಡಿಪಿಐ ಅಸ್ತಿತ್ವಕ್ಕೆ ಬಂದಿದ್ದು, 2010 ಏಪ್ರಿಲ್ 13ರಂದು ಭಾರತದ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಂಡಿದೆ. ಇಲ್ಲಿಯವರೆಗೆ ಎಸ್‌ಡಿಪಿಐ ಕರ್ನಾಟಕ, ಕೇರಳ, ತಮಿಳುನಾಡು, ರಾಜಸ್ಥಾನ, ಬಿಹಾರ, ಪಶ್ಚಿಮ ಬಂಗಾಳ ಆಂಧ್ರಪ್ರದೇಶಗಳಲ್ಲಿ ಸದಸ್ಯರನ್ನು ಹೊಂದಿದ್ದು ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಆದಿವಾಸಿಗಳು ಸೇರಿದಂತೆ ಎಲ್ಲ ವರ್ಗದ ನಾಗರಿಕರ ಪ್ರಗತಿಗಾಗಿ ಶ್ರಮಿಸುತ್ತಿದೆ ಎಂದು ಪಕ್ಷ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • PFI ಹೆಸರಲ್ಲಿ ಸಭೆ ನಡೆಸಿದ್ರೆ ಬೀಳುತ್ತೆ ಕೇಸ್‌- ಶಂಕೆ ಬಂದರೆ ಅರೆಸ್ಟ್‌

    PFI ಹೆಸರಲ್ಲಿ ಸಭೆ ನಡೆಸಿದ್ರೆ ಬೀಳುತ್ತೆ ಕೇಸ್‌- ಶಂಕೆ ಬಂದರೆ ಅರೆಸ್ಟ್‌

    ಬೆಂಗಳೂರು: ಇನ್ನು ಮುಂದೆ ದೇಶದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಸಂಘಟನೆ ಹೆಸರನ್ನು ಬಳಸಿಕೊಂಡು ಯಾವುದೇ ಕೆಲಸ ಮಾಡುವಂತಿಲ್ಲ.

    ಸಂಘಟನೆಯ ಉದ್ದೇಶವೇ ಕಾನೂನು ಬಾಹಿರ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಕೃತವಾಗಿ ತಿಳಿಸಿದ ಹಿನ್ನೆಲೆಯಲ್ಲಿ ಪಿಎಫ್‌ಐ ಅಡಿ ಏನೇ ಕೆಲಸ ಮಾಡಿದರೂ ಕಾನೂನುಬಾಹಿರ ಚಟುವಟಿಕೆಗಳ (ನಿರ್ಬಂಧ) ಕಾಯ್ದೆ (UAPA)ಅಡಿ ಪ್ರಕರಣ ದಾಖಲಾಗುತ್ತದೆ.

    ಯಾವ ಹೊಸ ಕಾರ್ಯಕರ್ತರೂ ಈ ಸಂಘಟನೆಯನ್ನು ಸೇರುವಂತಿಲ್ಲ. ಹಾಗೇನಾದರೂ ಸಂಘಟನೆಗೆ ಸೇರುವ ಪ್ರಯತ್ನ ಮಾಡಿದರೆ ಅವರ ವಿರುದ್ಧ ಯುಎಪಿಎ ಅಡಿ ಕೇಸ್‌ ಹಾಕಿ ಬಂಧನ ಮಾಡಲಾಗುತ್ತದೆ. ಇದನ್ನೂ ಓದಿ: ಸಂಪೂರ್ಣ ನಿಷೇಧವಾಗುತ್ತಾ PFI – ಕೇಂದ್ರ ಸರ್ಕಾರದ ಮುಂದಿನ ಪ್ಲ್ಯಾನ್ ಏನು?

    ಈಗಾಗಲೇ ಸಂಘಟನೆ ಸೇರಿರುವ ಉಳಿದ ಮುಖಂಡರು ಪಿಎಫ್‌ಐ ಹೆಸರಲ್ಲಿ ಯಾವುದೇ ಕಾರ್ಯಕ್ರಮ, ಪ್ರತಿಭಟನೆ, ಹಣ ಸಂಗ್ರಹಣೆ ಮಾಡುವಂತಿಲ್ಲ. ಪಿಎಫ್‌ಐ ಹೆಸರೇಳಿದರೆ ಅವರ ವಿರುದ್ಧ ಕೇಸ್‌ ಹಾಕಲಾಗುತ್ತದೆ. ಪಿಎಫ್ಐ ಹೆಸರಲ್ಲಿ ಮನೆಯಲ್ಲಿ ನಾಲ್ಕು ಜನ ಸಭೆ ಮಾಡಿದರೂ ಕೇಸ್‌ ದಾಖಲಾಗುತ್ತದೆ.


    ಪಿಎಫ್ಐಗೆ ಸೇರಿದ ಬ್ಯಾಂಕುಗಳ ಈಗಾಗಲೇ ಜಪ್ತಿಯಾಗಿದ್ದು, ಕಚೇರಿಗಳಿಗೆ ಬೀಗಮುದ್ರೆ ಬೀಳಲಿದೆ. ಸಂಘಟನೆ ಹೆಸರಿನಲ್ಲಿ ಅಥವಾ ಇನ್ಯಾವುದೇ ಸ್ವರೂಪದ ಕಾರ್ಯಕ್ರಮಗಳ ಮೇಲೆ ಪೊಲೀಸ್‌ ಮತ್ತು ಗುಪ್ತಚರ ಇಲಾಖೆ ನಿಗಾ ಇಡಲಿದೆ. ಯುಎಪಿಎ ಅಡಿಯಲ್ಲಿ ನಿಷೇಧ ಆದ್ದರಿಂದ ಸಂಘಟನೆಯಲ್ಲಿ ಗುರುತಿಸಿಕೊಂಡವರಿಗೆ ಸಂಕಷ್ಟವಾಗಲಿದೆ. ಸಣ್ಣ ಮಟ್ಟದ ಶಂಕೆ ಬಂದರೂ ಅವರು ಬಂಧನಕ್ಕೆ ಒಳಗಾಗಬಹುದು. ಸಂಘಟನೆಗೆ ಸಹಾನುಭೂತಿ ತೋರಿಸುವುದು ಬೆಂಬಲಿಸುವುದು ಕೂಡ ಅಪರಾಧ ಎಂದೇ ಪರಿಗಣಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]