Tag: UdaipurHorror

  • ನೂಪುರ್ ಶರ್ಮಾ ಪ್ರಕರಣ – ಸುಪ್ರೀಂಕೋರ್ಟ್ ಅಭಿಪ್ರಾಯದ ವಿರುದ್ಧ ಬಹಿರಂಗ ಪತ್ರ

    ನೂಪುರ್ ಶರ್ಮಾ ಪ್ರಕರಣ – ಸುಪ್ರೀಂಕೋರ್ಟ್ ಅಭಿಪ್ರಾಯದ ವಿರುದ್ಧ ಬಹಿರಂಗ ಪತ್ರ

    ನವದೆಹಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರು ವ್ಯಕ್ತಪಡಿಸಿದ ಅಭಿಪ್ರಾಯದ ವಿರುದ್ಧ ಬಹಿರಂಗ ಪತ್ರ ಬರೆಯಲಾಗಿದ್ದು, ಸುಪ್ರೀಂಕೋರ್ಟ್ `ಲಕ್ಷ್ಮಣ ರೇಖೆಯನ್ನು’ ಮೀರಿದ್ದು ತುರ್ತಾಗಿ ಸರಿಪಡಿಸುವ ಅವಶ್ಯಕತೆಯಿದೆ ಎಂದು ಉಲ್ಲೇಖಿಸಲಾಗಿದೆ.

    ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜೆ.ಬಿ.ಪರ್ದಿವಾಲಾ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ಬಳಿಕ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಟೀಕಿಸಿ 15 ಮಂದಿ ನಿವೃತ್ತ ನ್ಯಾಯಾಧೀಶರು, 77 ಐಎಎಸ್ ಅಧಿಕಾರಿಗಳು 25 ಮಂದಿ ವಿವಿಧ ವಲಯದ ಅನುಭವಿಗಳು ಈ ಬಹಿರಂಗ ಪತ್ರವನ್ನು ಬರೆದಿದ್ದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ನಾಯಿಕಚ್ಚಿ ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಸಾವು

    ಪತ್ರದಲ್ಲಿ, ಇತ್ತಿಚೆಗೆ ನ್ಯಾಯಾಧೀಶರು ವ್ಯಕ್ತಪಡಿಸಿದ್ದ ಭಿನ್ನಾಭಿಪ್ರಾಯಗಳು ದುರದೃಷ್ಟಕರವಾಗಿದೆ. ಇದು ಪ್ರಜಾಪ್ರಭುತ್ವದ ನ್ಯಾಯಂಗ ವ್ಯವಸ್ಥೆಯ ಮೇಲೂ ಅಳಿಸಲಾಗದ ಗಾಯವನ್ನುಂಟುಮಾಡಿದೆ. ದೇಶದ ಭದ್ರತೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ತುರ್ತಾಗಿ ಸರಿಪಡಿಸುವ ಅಗತ್ಯವಿದೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸಿಕ್ಕಿಬಿದ್ದ ಮಹಿಳೆಗೆ ಗಂಡನನ್ನು ಹೆಗಲ ಮೇಲೆ ಹೊತ್ತು ನಡೆಯೋ ಶಿಕ್ಷೆ!

    ಬಾಂಬೆ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ಕ್ಷಿತಿಜ್ ವ್ಯಾಸ್, ಗುಜರಾತ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಎಸ್.ಎಂ.ಸೋನಿ, ರಾಜಸ್ಥಾನ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಆರ್.ಎಸ್.ರಾಥೋಡ್ ಮತ್ತು ಪ್ರಶಾಂತ್ ಅಗರ್ವಾಲ್ ಹಾಗೂ ದೆಹಲಿ ಹೈಕೋರ್ಟ್ ಮಾಜಿ ನ್ಯಾಯಾಧೀಶ ಎಸ್.ಎನ್.ಧಿಂಗ್ರಾ, ಮಾಜಿ ಐಎಎಸ್ ಅಧಿಕಾರಿಗಳಾದ ಆರ್.ಎಸ್.ಗೋಪಾಲನ್ ಮತ್ತು ಎಸ್.ಕೃಷ್ಣ ಕುಮಾರ್, ರಾಯಭಾರಿ (ನಿವೃತ್ತ) ನಿರಂಜನ್ ದೇಸಾಯಿ, ಮಾಜಿ ಡಿಜಿಪಿಗಳಾದ ಎಸ್ಪಿ ವೈದ್ ಮತ್ತು ಬಿಎಲ್ ವೋಹ್ರಾ, ಲೆಫ್ಟಿನೆಂಟ್ ಜನರಲ್ ವಿ.ಕೆ.ಚತುರ್ವೇದಿ (ನಿವೃತ್ತ) ಮತ್ತು ಏರ್ ಮಾರ್ಷಲ್ (ನಿವೃತ್ತ) ಎಸ್.ಪಿ.ಸಿಂಗ್ ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

    ಈಚೆಗಷ್ಟೇ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ಪೀಠವು ಉದಯಪುರನಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆಗೆ, ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ನೂಪುರ್‌ ಶರ್ಮಾ ಅವರೇ ನೇರ ಕಾರಣ. ಅವರು ದೇಶದ ಕ್ಷಮೆ ಕೇಳಬೇಕು ಎಂದು ಹೇಳಿತ್ತು.

    Live Tv
    [brid partner=56869869 player=32851 video=960834 autoplay=true]

  • ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್

    ತುಂಬಾ ಒಳ್ಳೇ ಕೆಲಸ ಮಾಡಿದ್ದೀಯಾ ಸಹೋದರ – ಕನ್ಹಯ್ಯ ಹತ್ಯೆ ಬೆಂಬಲಿಸಿದ ಮುಸ್ಲಿಂ ವ್ಯಕ್ತಿ ಅರೆಸ್ಟ್

    ಲಕ್ನೋ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ಟೈಲರ್ ಹತ್ಯೆಯ ನೈಜ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆಗೆದುಹಾಕಲಾಗಿದೆ.

    ಇದಕ್ಕೂ ಮುನ್ನ ಕನ್ಹಯ್ಯಾಲಾಲ್ ಹತ್ಯೆಯ ವೀಡಿಯೋವನ್ನು ಲೈಕ್ ಮಾಡಿದ್ದಲ್ಲದೇ, ಹತ್ಯೆಯನ್ನು ಹೊಗಳಿ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಛಪ್ರೌಲಿ ನಿವಾಸಿಯನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್

    ಕನ್ಹಯ್ಯಾಲಾಲ್ ಶಿರಚ್ಛೇದನದ ವಿಡಿಯೋ ಕುರಿತು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಆರೋಪಿ ಯೂಸುಫ್ ಖಾನ್ ವಿರುದ್ಧ ಐಪಿಸಿ ಸೆಕ್ಷನ್‌ 505(2)/295ಂ (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆಗಳು ಹಾಗೂ ಅಪರಾಧಿಕ ಭಯೋತ್ಪಾದನೆಗೆ ದಂಡನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಯೂಸುಫ್‌ಖಾನ್ ಫೇಸ್‌ಬುಕ್‌ನಲ್ಲಿ ವೀಡಿಯೋವನ್ನು ಲೈಕ್ ಮಾಡಿದ್ದು, `ತುಂಬಾ ಒಳ್ಳೆ ಕೆಲಸ ಮಾಡಿದ್ದೀಯಾ ನನ್ನ ಸಹೋದರ’ ಎಂದು ಕಾಮೆಂಟ್ ಮಾಡಿದ್ದಾನೆ. ಇದನ್ನು ವಿರೋಧಿಸಿ ಅದೇ ಗ್ರಾಮದ ನಿವಾಸಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವೀಡಿಯೋ ಕುರಿತು ಕಾಮೆಂಟ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬಾಗ್ಪತ್ ಜಿಲ್ಲೆಯ ಛಪ್ರೌಲಿ ಗ್ರಾಮದ ನಿವಾಸಿಗಳು ಆರೋಪಿ ಬಗ್ಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ನೋಯ್ಡಾ ವಲಯ ಎಡಿಸಿಪಿ ರಣವಿಜಯ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ

    ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ: ನಗರದ ವಾತಾವರಣ ಪರಿಶೀಲಿಸಲು ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ವಹಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಪ್ರಚೋದನಕಾರಿ ಸಂದೇಶಗಳು ಮತ್ತು ವೀಡಿಯೋಗಳಿಗೆ ಗಮನ ಕೊಡಬೇಡಿ ಎಂದೂ ಸಹ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

    Live Tv

  • ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    ತಿರುವನಂತಪುರಂ: ರುಂಡ ಕತ್ತರಿಸಬೇಕು ಎನ್ನುವುದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಇದೇ ಕಾನೂನನ್ನು ಮದರಸಾಗಳಲ್ಲಿ ಮಕ್ಕಳಿಗೆ ಬೋಧಿಸಲಾಗುತ್ತಿದೆ ಎಂದು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಿಡಿ ಕಾರಿದ್ದಾರೆ.

    ರಾಜಾಸ್ಥಾನದ ಉದಯಪುರದಲ್ಲಿ ಹಿಂದೂ ವ್ಯಕ್ತಿಯ ರುಂಡ ಕತ್ತರಿಸಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಪ್ರಮುಖ ಸಿನಿ ತಾರೆಯರೂ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಕೇರಳದ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಖಂಡನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬುದ್ದಿ ಹೇಳಲು ಬಂದವರಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಉದಯಪುರದಂತಹ ಘಟನೆಗಳಿಗೆ ಮದರಸಾ ಶಿಕ್ಷಣವೇ ಕಾರಣ. ಇಂತಹ ಶಿಕ್ಷಣ ಮಕ್ಕಳಿಗೆ ಅಗತ್ಯವಿಲ್ಲ. ಮುಸ್ಲಿಂ ಲಾ(ಮುಸ್ಲಿಂ ಕಾನೂನು), ಖುರಾನ್‌ನಲ್ಲಿಯೂ ರುಂಡ ಕತ್ತರಿಸಬೇಕೆಂಬ ಕಾನೂನು ಇಲ್ಲ. ಇದು ಮುಸ್ಲಿಂ ದೊರೆಗಳು ಮಾಡಿದ ಕಾನೂನು. ಆಗ ಮುಸ್ಲಿಂ ಧರ್ಮಕ್ಕೆ ವಿರುದ್ಧವಾಗಿ ನಡೆದರೆ ರುಂಡ ಕತ್ತರಿಸುವ ಅಧಿಕಾರ ಇತ್ತು. ಇದೇ ಕಾನೂನನ್ನು ಮದರಸಾಗಳಲ್ಲಿ ಬೋಧಿಸಲಾಗುತ್ತದೆ ಎಂದು ಮದರಸಾ ಶಿಕ್ಷಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮದರಸಾ ಶಿಕ್ಷಣವು ಸಂಕುಚಿತ ಹಾಗೂ ಧರ್ಮಾಧಾರಿತ ಶಿಕ್ಷಣವಾಗಿದೆ. ಮಕ್ಕಳಲ್ಲಿ ವಿಷಬೀಜ ಬಿತ್ತುವ ಕೆಲಸವನ್ನೂ ಮಾಡುತ್ತಿದೆ. ಇಲ್ಲಿ ಧರ್ಮಾಂಧತೆ ಬೋಧಿಸಲಾಗುತ್ತಿದೆ. ಇದರ ಪರಿಣಾಮವೇ ಉದಯಪುರದಲ್ಲಿ ನಡೆದ ಹತ್ಯೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

    ಆಧುನಿಕ ಶಿಕ್ಷಣ ಮಕ್ಕಳ ಹಕ್ಕು: ಚಿಕ್ಕ ಮಕ್ಕಳಲ್ಲೇ ವಿಷ ಬೀಜ ಬಿತ್ತುವುದರಿಂದ ಅವರ ಮನಸ್ಸಿನಲ್ಲಿ ಗಾಢ ಪರಿಣಾಮ ಬೀರುತ್ತಿದೆ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ನೀಡುವ ವಿದ್ಯಾಭ್ಯಾಸವು ಧರ್ಮಾಧಾರಿತ ಆಗಿರಬಾರದು. ಇದು ಮಕ್ಕಳ ಹಕ್ಕಾಗಿದೆ. ಆಧುನಿಕ ಶಿಕ್ಷಣ ಪಡೆಯುವುದು ಅವರ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

    Live Tv