Tag: Udayagiri Police Station

  • ಮುಸ್ಲಿಮರು ಪುರುಸೊತ್ತಿಲ್ಲದೆ ಮಕ್ಕಳು ಹುಟ್ಟಿಸುತ್ತಾರೆ ಅನ್ನೋದು ಪ್ರಚೋದನೆನಾ? – ಪ್ರತಾಪ್‌ ಸಿಂಹ

    ಮುಸ್ಲಿಮರು ಪುರುಸೊತ್ತಿಲ್ಲದೆ ಮಕ್ಕಳು ಹುಟ್ಟಿಸುತ್ತಾರೆ ಅನ್ನೋದು ಪ್ರಚೋದನೆನಾ? – ಪ್ರತಾಪ್‌ ಸಿಂಹ

    – ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೇ ಮಕ್ಕಳು ಹುಟ್ಟಿಸುತ್ತಿದ್ದಾರೆ
    – ಶಾರುಖ್‌ಗೆ 3, ಸೈಫ್ ಅಲಿ ಖಾನ್‌ಗೆ 4 ಮಕ್ಕಳು; ಮಾಜಿ ಸಂಸದ

    ಮೈಸೂರು: ಉದಯಗಿರಿ ಗಲಭೆ ನಡೆದ ದಿನ ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ. ಒಬ್ಬ ಮುಲ್ಲಾ ಪ್ರಚೋದನೆ ಮಾಡಿದ್ರೂ ಯಾಕೆ ಅರೆಸ್ಟ್ ಮಾಡಿಲ್ಲ ಅಂತ ಕೇಳಿದ್ದೇನೆ. ಮುಸ್ಲಿಮರು (Muslims) ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಪ್ರಶ್ನೆ ಮಾಡಿದ್ದಾರೆ.

    ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರನ್ನ ಭೇಟಿಯಾದ ಪ್ರತಾಪ ಸಿಂಹ – ಕುತೂಹಲ ಮೂಡಿಸಿದ ವಿಜಯೇಂದ್ರ ಭೇಟಿ

    ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದ್ರು. ಈ ಘಟನೆ ನಡೆದ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಇದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್‌ಐಆರ್‌ (FIR) ಮಾಡಿದ್ದಾರೆ. ಈಗ ಉದಯಗಿರಿ ಠಾಣೆಯಲ್ಲಿ ಆಗಿದೆ. ಈ ರೀತಿ ಸಾಲು ಸಾಲು ಎಫ್‌ಐಆರ್‌ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಅಂತ ಉದ್ದೇಶದಿಂದ ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಮಹಾ ಕುಂಭಮೇಳ: ತ್ರಿವೇಣಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಪುಣ್ಯಸ್ನಾನ

    ಆ ದಿನ ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ಮಾಡಿಲ್ಲ. ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದ್ರೆ ಗೊತ್ತಾಗುತ್ತೆ. ನಿಮ್ಮ ಮನೆಯಲ್ಲಿ 1-2 ಮಕ್ಕಳಿರೋ ಎಷ್ಟು ಜನ ಇದ್ದಾರೆ ಹೇಳಿ. ನಾನು ಸತ್ಯ ಹೇಳಿದ್ದೇನೆ. ಶಾರುಖ್‌ ಖಾನ್‌ಗೆ ಮೂರು ಮಕ್ಕಳಿದ್ದಾರೆ. ಸೈಫ್ ಅಲಿ ಖಾನ್‌ಗೆ 4 ಮಕ್ಕಳಿದ್ದಾರೆ, ನಿಮ್ಮ ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೆ ಮಕ್ಕಳು ಹುಟ್ಟಿಸುತ್ತಿದ್ದಾರೆ. ಜನೋತ್ಪಾದನೆಯಲ್ಲಿ ತೊಡಗಿದ್ದೀರಿ ಎಂದು ಹೇಳಿದ್ದೇನೆ. ಮುಸ್ಲಿಮರು ಮಕ್ಕಳನ್ನ ದೇವರು ಕೊಟ್ಟ ಅಂತ ಹೇಳ್ತೀರಾ.. ನಿಮ್ಮಮಕ್ಕಳನ್ನ ದೇವರೆ ನೋಡಿಕೊಳ್ಳಲಿ.. ಸರ್ಕಾರ ಯಾಕೆ ನೋಡಿಕೊಳ್ಳಬೇಕು? ಸರ್ಕಾರ ಯಾಕೆ ಪುಕ್ಕಟೆ ನೋಡಿಕೊಳ್ಳಬೇಕು ಎಂದು ಲೇವಡಿ ಮಾಡಿದ್ದಾರೆ.

    ಅತಿಹೆಚ್ಚು ತೆರಿಗೆ ಕಟ್ಟುವವರು ಹಿಂದೂಗಳು. ಆದ್ರೆ ಸೌಲಭ್ಯ ನಿಮಗೆ ಸಿಗುತ್ತಿದೆ. ಸಂಖ್ಯೆ ಬಲ ಹೆಚ್ಚು ಮಾಡಿ ತೊಂದರೆ ಕೊಡ್ತಿದ್ದೀರಿ. ಭಯದ ವಾತಾವರಣ ಸೃಷ್ಟಿ ಮಾಡಿಸುತ್ತಿದ್ದೀರಿ ಅಂತ ಹೇಳಿದ್ದೇನೆ. ಸ್ವಾತಂತ್ರ‍್ಯ ಬಂದಾಗ ಜನಸಂಖ್ಯೆ ಎಷ್ಟಿತ್ತು.. ಈಗ ಎಷ್ಟಿದ್ದೀರಿ? ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗಿದೆ. ಸತ್ಯ ಹೇಳಿರೋದು ಪ್ರಚೋದನೆ ಹೇಗಾಗುತ್ತೆ? ನಿಯಂತ್ರಣದಿಂದ ಮಕ್ಕಳು ಹುಟ್ಟಿಸಿ ಅವರಿಗೆ ವಿದ್ಯಾಭ್ಯಾಸ ಕೊಡಿಸಿ ಅಂತ ಕಿವಿ ಮಾತು ಹೇಳಿದ್ದೇನೆ. ನಿಮ್ಮ ಶಕ್ತಿಗನುಸಾರವಾಗಿ ಮಕ್ಕಳು ಹುಟ್ಟಿಸಿ ಅಂತ ಹೇಳಿದ್ದೇನೆ. ಇದು ಪ್ರಚೋದನಕಾರಿ ಹೇಳಿಕೆಯಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೊಜ್ಜು ವಿರುದ್ಧ ಅಭಿಯಾನ – ಒಮರ್ ಅಬ್ದುಲ್ಲಾ, ಆನಂದ್ ಮಹೀಂದ್ರಾ ಸೇರಿ 10 ಗಣ್ಯರ ನಾಮ ನಿರ್ದೇಶನ ಮಾಡಿದ ಮೋದಿ 

  • ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

    ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ – ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

    – ಯುವ ಕಾಂಗ್ರೆಸ್‌ ಮುಖಂಡನಿಂದ ದೂರು

    ಮೈಸೂರು: ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ (Muslims) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ( Pratap Simha) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ:  ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

    ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯರ ಭವಿಷ್ಯ, ಅದೃಷ್ಟ ಎರಡೂ ಗಟ್ಟಿಯಾಗಿದೆ: ಸಿಎಂ ಪರ ಜಿ.ಟಿ ದೇವೇಗೌಡ ಬ್ಯಾಟಿಂಗ್

    ಮೈಸೂರು ಉದಯಗಿರಿ ಪೊಲೀಸ್‌ ಠಾಣೆ (Udayagiri Police Station) ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್‌ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: MUDA Case | ಸಿಎಂ ಸೇಫ್, ಸೈಟ್ ಮಾಡಿಕೊಟ್ಟ ಅಧಿಕಾರಿಗಳು ಲಾಕ್ – ಇನ್ವೆಸ್ಟಿಗೇಷನ್ ಚಾಪ್ಟರ್-2

  • ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

    ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

    ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ದಾಂಧಲೆ ಪ್ರಕರಣ ಸಂಬಂಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ (Moulvi) ಮುಸ್ತಾಕ್ ಮಕ್ಬೋಲಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ (Court) ಆದೇಶ ನೀಡಿದೆ.

    2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಆರೋಪಿಯನ್ನು ಸಿಸಿಬಿ ಪೊಲೀಸರು ಮೈಸೂರು ಜೈಲಿನತ್ತ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಪುತಿನ, ಕೆಎಸ್‌ನ ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರದ ನೆರವು: ಸಚಿವ ಚಲುವರಾಯಸ್ವಾಮಿ

    ಫೆ. 10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಇದಕ್ಕೂ ಮುನ್ನ ಆರೋಪಿ ಮೌಲ್ವಿ ಮುಫ್ತಿ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಇದನ್ನೂ ಓದಿ: ಸ್ಟಾರ್ಕ್‌ ದಾಖಲೆ ಉಡೀಸ್‌ – ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ ಪಡೆದು ಶಮಿ ರೆಕಾರ್ಡ್‌

    ಪ್ರಕರಣ ನಡೆದ 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್ ಪೇಪರ್ ಬಿಡುಗಡೆ: ಬೊಮ್ಮಾಯಿ

  • ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್‌

    ಮೈಸೂರಿನ ಉದಯಗಿರಿ ಠಾಣೆ ಗಲಭೆ ಕೇಸ್‌ – ಪ್ರಚೋದನೆ ನೀಡಿದ್ದ ಮೌಲ್ವಿ 11 ದಿನಗಳ ಬಳಿಕ ಅರೆಸ್ಟ್‌

    ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಯನ್ನ ಸಿಸಿಬಿ ಪೊಲೀಸರು (CCB Police) ಕೊನೆಗೂ ಬಂಧಿಸಿದ್ದಾರೆ.

    ಗಲಭೆ ನಡೆದ 11 ದಿನಗಳ ಬಳಿಕ ಮೌಲ್ವಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಮುಂಜಾಗ್ರತ ಕ್ರಮವಾಗಿ ಉದಯಗಿರಿ ಪೊಲೀಸ್ ಠಾಣೆಗೆ ಬಿಗಿ ಬಂದೂಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಚಿನ್ನದಂಗಡಿ ದೋಚಿ ಸಲೀಸಾಗಿ ನಾಕಬಂದಿ ದಾಟಿದ ಕಳ್ಳರು – ಮೂವರು ಪೊಲೀಸರು ಸಸ್ಪೆಂಡ್

    ಉದ್ರಿಕ್ತ ಭಾಷಣ ಮಾಡಿದ್ದ ಮೌಲ್ವಿ:
    ಇದೇ ಫೆ.10ರಂದು ಉದಯಗಿರಿ (Udayagiri) ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸುವುದಕ್ಕೂ ಮುನ್ನವೇ ಮೌಲ್ವಿ (Moulvi) ಮುಫ್ತಿ ಮುಷ್ತಾಕ್ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಈತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ಮುಡಾ ಕೇಸ್‌, ಸಿಎಂಗೆ ಕ್ಲೀನ್‌ ಚಿಟ್‌ – 11,200 ಪುಟಗಳ ತನಿಖಾ ವರದಿ ಸಲ್ಲಿಕೆ

    ಮೌಲ್ವಿ ಭಾಷಣದಲ್ಲಿ ಹೇಳಿದ್ದೇನು?
    ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ. ಧರ್ಮ ರಕ್ಷಣೆಯ ಬದ್ಧತೆ ನಿನ್ನೆನೂ ಇತ್ತು, ಇವತ್ತೂ ಇದೆ. ಎಲ್ಲಾ ಘೋಷಣೆ ಕೂಗಿ ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ. ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು, ಮರಣದಂಡನೆ ವಿಧಿಸಬೇಕು ಎಂದು ಮೌಲ್ವಿ ಮಾತನಾಡಿದ್ದ.

    ನಿಮ್ಮ ಇಚ್ಚೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುದು. ಮೈಸೂರಿನ ಎಲ್ಲಾ ಮುಸ್ಲಿಮರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ. ಅವಶ್ಯಕತೆ ಬಂದರೆ ನಮ್ಮ ತಲೆ ಬೇಕಾದರೂ ಕತ್ತರಿಸಿಕೊಳ್ಳುತ್ತೇವೆ. ನಮ್ಮ ಮಕ್ಕಳನ್ನ ಬೇಕಾದ್ರೂ ಬಲಿಕೊಡುತ್ತೇವೆ ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದ. ಇದನ್ನೂ ಓದಿ: ಚಿನ್ನದಂಗಡಿ ದೋಚಿ ಸಲೀಸಾಗಿ ನಾಕಬಂದಿ ದಾಟಿದ ಕಳ್ಳರು – ಮೂವರು ಪೊಲೀಸರು ಸಸ್ಪೆಂಡ್

  • ಮೈಸೂರು ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್‌ – ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಗೆ ಜಾಮೀನು

    ಮೈಸೂರು ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್‌ – ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಗೆ ಜಾಮೀನು

    ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

    ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್‌ (Mysuru Court) ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು. ಇದನ್ನೂ ಓದಿ: ವಿದ್ಯಾರ್ಥಿಗಳ 13.4 ಲಕ್ಷ ಹೆಚ್ಚುವರಿ ಶುಲ್ಕ ವಾಪಸ್ ಕೊಡಿಸಿದ ಶುಲ್ಕ ನಿಯಂತ್ರಣ ಸಮಿತಿ

    ಆರೋಪಿ ಸತೀಶ್ ಪರ ವಕೀಲ ಹಾ.ಮಾ.ಭಾಸ್ಕರ್ ವಾದ ಮಂಡಿಸಿದ್ದರು. ಬಂಧನ ಸಂಬಂಧ ಕೋರ್ಟ್‌ಗೆ ಪೊಲೀಸರು ಸರಿಯಾದ ಸಾಕ್ಷ್ಯಾದಾರ ಸಲ್ಲಿಸಿಲ್ಲ, ಯಾವ ಕಾರಣದಿಂದ ಒಂದು ಧರ್ಮದ ಭಾವನೆಗೆ ಧಕ್ಕೆ ಆಗುತ್ತೆ ಎಂಬುದನ್ನು ತಿಳಿಸಿಲ್ಲ. ಪೊಲೀಸರು ಈಗಾಗಲೇ ಆರೋಪಿಯ ವಿಚಾರಣೆ ಮುಗಿಸಿದ್ದಾರೆ. ಪೋಸ್ಟ್ ಹಾಕಲಾಗಿದೆ ಎನ್ನಲಾದ ಫೋನ್ ಕೂಡ ಸೀಜ್ ಮಾಡಿದ್ದಾರೆ. ಹಾಗಾಗಿ ಸತೀಶ್‌ಗೆ ಜಾಮೀನು ನೀಡುವಂತೆ ವಾದ ಮಂಡಿಸಿದ್ದರು. ವಾದ – ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ವಿಚಾರಣೆ ಮುಂದೂಡಿತ್ತು. ಇಂದು ಆದೇಶ ಪ್ರಕಟಿಸಿದೆ.

    ಏನಿದು ಕೇಸ್‌?
    ಇದೇ ಫೆಬ್ರವರಿ 10ರಂದು ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ದಾಳಿಯಲ್ಲಿ ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಗಾಯಗಳಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂ ಆಗಿದ್ದವು. ತನಿಖೆ ಆರಂಭಿಸಿದ್ದ ಪೊಲೀಸರು 1000ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

    ಅವಹೇಳನಕಾರಿ ಪೋಸ್ಟ್ ಹಾಕಿದ್ದ ಸತೀಶ್‌ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದರು. ಇದನ್ನೂ ಓದಿ: ಗ್ಯಾರಂಟಿಗಳಿಗೆ ಮೀಸಲಿಟ್ಟ ಹಣ ಯಾರು ನುಂಗುತ್ತಿದ್ದಾರೆ? – ರಾಜ್ಯ ಸರ್ಕಾರಕ್ಕೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

    ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ:
    ಪೊಲೀಸರ ಎಫ್‌ಐಆರ್‌ ಮಾಹಿತಿ ಪ್ರಕಾರ, ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧನ ಮಾಡಿ ಠಾಣೆಯಲ್ಲಿ ಪೊಲೀಸರು ಇರಿಸಿದ್ದರು. 9ನೇ ತಾರೀಕು ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್‌ ಸತೀಶ್‌ನನ್ನು ಠಾಣೆಗೆ ಕರೆತರಲಾಗಿತ್ತು. ರಾತ್ರಿ 8:30 ಗಂಟೆಗೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿದರು. ಆರೋಪಿಯನ್ನು ನಮ್ಮ ವಶಕ್ಕೆ ಕೊಡಿ, ನಮ್ಮ ಧರ್ಮದ ಬಗ್ಗೆ ಮಾತನಾಡಿದ್ದಾನೆ ಎಂದು ಯುವಕರ ಕೂಗಾಟ ಆರಂಭಿಸಿದ್ದಾರೆ. 9:15 ಗಂಟೆಗೆ ಏಕಾಏಕಿ 1,000 ಜನ ಮುಸ್ಲಿಂ ಯುವಕರ ಗುಂಪು ಜಮಾವಣೆ ಆಗಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೂಗಾಟ ಮಾಡಿದರು.

    ಪೊಲೀಸರು ಎಷ್ಟೇ ಹೇಳಿದರೂ ಕೇಳದ ಗುಂಪು ಏಕಾಏಕಿ ಪೊಲೀಸರ ಮೇಲೆ, ಠಾಣೆಯ ಮೇಲೆ ಕಲ್ಲು ತೂರಾಟ ಮಾಡಿದರು. ಕಲ್ಲು ತೂರಾಟಕ್ಕೆ ಪೊಲೀಸ್ ಠಾಣೆಯ ಗಾಜು, ಕಿಟಕಿ ಪುಡಿ ಪುಡಿ ಆಗಿದೆ. ಬಂದೋಬಸ್ತ್‌ನಲ್ಲಿದ್ದ ಪೊಲೀಸರ ಮೇಲೆಯೂ ಕಲ್ಲು ತೂರಾಟ ಮಾಡಿದರು. ರಸ್ತೆ ಮೇಲೆ ವಾಹನ ಓಡಾಟ ಮಾಡದಂತೆ ಬೆಂಕಿ ಹಚ್ಚಿ ಪುಂಡಾಟ ಮಾಡಿದರು. ಪೊಲೀಸರ ಮೇಲೆ ಮನಬಂದಂತೆ ಕಲ್ಲು ತೂರಾಟ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಹಲವರು ಪೊಲೀಸರಿಗೆ ಗಾಯವಾದವು. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಫರ್ನಿಚರ್ ಅಂಗಡಿ, ಗೋಡೌನ್‌ಗೆ ಬೆಂಕಿ – 1.50 ಕೋಟಿ ರೂ. ಮೌಲ್ಯದ ವಸ್ತುಗಳು ಭಸ್ಮ

    ಕಲ್ಲು ತೂರಾಟದಿಂದ ಸಾರ್ವಜನಿಕರಿಗೂ ಗಾಯವಾಗಿದೆ. ಡಿಸಿಪಿ ಸೇರಿದಂತೆ ಅನೇಕ ಪೊಲೀಸ್ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ಮಾಡಿದರು. ಬಳಿಕ ಹೆಚ್ಚಿನ ಪೊಲೀಸ್ ಸಿಬ್ಬಂದಿ ಕರೆಸಿ ಬಲವಂತವಾಗಿ ಮುಸ್ಲಿಂ ಯುವಕರ ಗುಂಪು ಚದುರಿಸಲಾಯಿತು. ಅಧಿಕಾರಿಗಳ ಮೇಲೆ ಹಲ್ಲೆ ನಿಂದನೆ, ಸರ್ಕಾರಿ ಆಸ್ತಿ ವಾಹನಗಳ ಜಖಂ ಸೇರಿ ಆಸ್ತಿಪಾಸ್ತಿ ಹಾನಿಯಾಗಿದೆ. ಅಕ್ರಮ ಗುಂಪು ಕಟ್ಟಿ ಹಾನಿಯುಂಟು ಮಾಡಿದ ಮುಸ್ಲಿಂ ಯುವಕರ ಗುಂಪಿನ ಮೇಲೆ ಕ್ರಮಕ್ಕೆ ಎಂದು ಉದಯಗಿರಿ ಠಾಣೆಯ ಪಿಎಸ್‌ಐ ಸುನೀಲ್ ದೂರು ನೀಡಿದ್ದರು ಎಂದು ಉಲ್ಲೇಖಿಸಲಾಗಿದೆ.

  • ʻಉದಯಗಿರಿ ಗಲಭೆʼಯಲ್ಲಿ ಬೇಯ್ತಿದೆ ರಾಜಕೀಯ ಬೇಳೆ – ಬುರ್ಖಾ ಧರಿಸಿ ಆರ್‌ಎಸ್‌ಎಸ್‌ನಿಂದ ಕೃತ್ಯವೆಂದ ಹರಿಪ್ರಸಾದ್

    ʻಉದಯಗಿರಿ ಗಲಭೆʼಯಲ್ಲಿ ಬೇಯ್ತಿದೆ ರಾಜಕೀಯ ಬೇಳೆ – ಬುರ್ಖಾ ಧರಿಸಿ ಆರ್‌ಎಸ್‌ಎಸ್‌ನಿಂದ ಕೃತ್ಯವೆಂದ ಹರಿಪ್ರಸಾದ್

    – ಮುಸ್ಲಿಮರ ತುಷ್ಠೀಕರಣ ಅಂತ ಬಿಜೆಪಿ ಕೌಂಟರ್

    ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಸಂಬಂಧ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಆರ್‌ಎಸ್‌ಎಸ್, ಬಿಜೆಪಿ ಕಾರ್ಯಕರ್ತರೇ ಮುಸ್ಲಿಮರ ವೇಷದಲ್ಲಿ ಕಲ್ಲು ತೂರಿದ್ದರು ಅಂತ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಮಾಡಿರುವ ಆರೋಪದ ಕಿಡಿ ಇನ್ನೂ ಮಾಸಿಲ್ಲ. ಅದಾಗಲೇ ಕಾಂಗ್ರೆಸ್ ಎಂಎಲ್‌ಸಿ ಬಿಕೆ ಹರಿಪ್ರಸಾದ್ ಕೂಡ ತುಪ್ಪ ಸುರಿದಿದ್ದಾರೆ. ‌

    ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ, ಆರ್‌ಎಸ್‌ಎಸ್ ಕೃಪಾಪೋಷಿತ ಕೃತ್ಯ. ಸಂಘ ಪರಿವಾರದವರು ಕೆಲವು ಕಡೆ ಬುರ್ಖಾ ಹಾಕೊಂಡು ಗಲಾಟೆ ಮಾಡೋಕೆ ಹೋಗಿಬಿಡ್ತಾರೆ. ಇದೇನು ಹೊಸದಲ್ಲ. ನನ್ನ ಹತ್ತಿರ ವಿಡಿಯೋ ಇದೆ. ಶಾಂತಿ ಕದಡುವ ಯತ್ನ ಇವರೇ ಮಾಡ್ತಿದ್ದಾರೆ. ತನಿಖೆ ಮಾಡಿಸಿ ಅಂತ ಗೃಹ ಸಚಿವರಿಗೆ ಹರಿಪ್ರಸಾದ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

    ಇದಕ್ಕೆ ಸಂಸದ ಶೆಟ್ಟರ್ ಕೌಂಟರ್ ಕೊಟ್ಟಿದ್ದು, ಇದೆಲ್ಲಾ ಮುಸ್ಲಿಮರ ತುಷ್ಠೀಕರಣಕ್ಕಾಗಿ ಅಂತ ಕಿಡಿಕಾರಿದ್ದಾರೆ. ಸಂಸದ ಬೊಮ್ಮಾಯಿ ಕೂಡ ಪೊಲೀಸರು ರಾಜಕೀಯ ಒತ್ತಡದಲ್ಲಿದ್ದಾರೆ ಅಂತ ಆರೋಪಿಸಿದ್ದಾರೆ. ಇದನ್ನೂ ಓದಿ: ಮೈಸೂರು ಉದಯಗಿರಿ ಗಲಭೆ ಕೇಸ್‌ – ಘಟನೆಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೇ ಬಂಧಿಸಿ: ಸಿಎಂ ಸೂಚನೆ

  • ಉದಯಗಿರಿ ದಾಂಧಲೆ ಕೇಸ್; ಸಾವಿರಕ್ಕಿಂತ ಹೆಚ್ಚು ಜನ ಠಾಣೆಗೆ ನುಗ್ಗಿ ಧ್ವಂಸಕ್ಕೆ ಯತ್ನ

    ಉದಯಗಿರಿ ದಾಂಧಲೆ ಕೇಸ್; ಸಾವಿರಕ್ಕಿಂತ ಹೆಚ್ಚು ಜನ ಠಾಣೆಗೆ ನುಗ್ಗಿ ಧ್ವಂಸಕ್ಕೆ ಯತ್ನ

    – ಗಲಾಟೆ ದಿನ ಪೊಲೀಸರ ಜೀವ ಉಳಿದಿದ್ದೇ ಪವಾಡ

    ಮೈಸೂರು: ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಬಳಿ ದಾಂಧಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಗಲಾಟೆ ದಿನದ ಭಯಾನಕ ದೃಶ್ಯದ ವೀಡಿಯೋ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ.

    ಒಂದು ಕ್ಷಣ ಪೊಲೀಸರು ಎಚ್ಚರ ತಪ್ಪಿದ್ದರೂ ಅಲ್ಲಿ ಬೇರೆಯದ್ದೇ ಕಥೆಯಾಗುತ್ತಿತ್ತು. ಇದಕ್ಕೆ ಸಾಕ್ಷಿ ಎಂಬಂತಿದೆ ಭಯಾನಕ ವೀಡಿಯೋ. ಒಂದೇ ಕ್ಷಣದಲ್ಲಿ ಸಾವಿರ ಸಂಖ್ಯೆಯಲ್ಲಿ ಪುಂಡರು ಠಾಣೆ ಮುಂದೆ ತುಂಬಿಕೊಂಡಿರುವ ದೃಶ್ಯ ವೀಡಿಯೋದಲ್ಲಿದೆ. ಇದನ್ನೂ ಓದಿ: ಮೈಸೂರು ಉದಯಗಿರಿ ಗಲಭೆ ಕೇಸ್‌ – ಘಟನೆಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೇ ಬಂಧಿಸಿ: ಸಿಎಂ ಸೂಚನೆ

    ವೀಡಿಯೋದಲ್ಲಿ ಪುಂಡರ ಗುಂಪನ್ನು ಡಿಸಿಪಿ ಮುತ್ತುರಾಜು ಸಮಾಧಾನ ಮಾಡಲು ಯತ್ನಿಸಿ ವಿಫಲರಾಗಿರುವುದು ಕಂಡುಬಂದಿದೆ. ಪೊಲೀಸ್ ಜೀಪ್ ಹತ್ತಿ, ಪರಿ ಪರಿಯಾಗಿ ಕೇಳಿಕೊಂಡರೂ ಪುಂಡರ ಗುಂಪು ಸುಮ್ಮನಾಗಿಲ್ಲ. ಸಾವಿರಾರು ಪುಂಡರ ಗುಂಪಿನಲ್ಲಿ ಬೆರಳೆಣಿಕೆಯಷ್ಟು ಪೊಲೀಸರು ಮಾತ್ರ ನಿಂತು ಕೆಲಸ ಮಾಡುತ್ತಿರುವ ವೀಡಿಯೋದಲ್ಲಿ ಸೆರೆಯಾಗಿದೆ.

    ಪೊಲೀಸರು ಸ್ವಲ್ಪ ಯಾಮಾರಿದ್ದರೂ ಮೈಸೂರಲ್ಲಿ ಕೆಜೆ ಹಳ್ಳಿ, ಡಿಜೆ ಹಳ್ಳಿ ಪ್ರಕರಣ ಮರುಕಳುಸುವ ಸಾಧ್ಯತೆ ಹೆಚ್ಚಿತ್ತು. ಗಲಾಟೆ ದಿನ ಪೊಲೀಸರ ಜೀವ ಉಳಿದಿದ್ದೇ ಪವಾಡ ಎನ್ನುವಂತಹ ಸನ್ನಿವೇಶ ನಿರ್ಮಾಣವಾಗಿತ್ತು.

    ಸಾವಿರಕ್ಕಿಂತ ಅಧಿಕ ಮಂದಿ ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಲು ಯತ್ನಿಸಿದ್ದರು. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

  • ಮೈಸೂರು ಉದಯಗಿರಿ ಗಲಭೆ ಕೇಸ್‌ – ಘಟನೆಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೇ ಬಂಧಿಸಿ: ಸಿಎಂ ಸೂಚನೆ

    ಮೈಸೂರು ಉದಯಗಿರಿ ಗಲಭೆ ಕೇಸ್‌ – ಘಟನೆಯಲ್ಲಿ ಭಾಗಿಯಾದವರನ್ನ ಮುಲಾಜಿಲ್ಲದೇ ಬಂಧಿಸಿ: ಸಿಎಂ ಸೂಚನೆ

    ಬೆಂಗಳೂರು: ಮೈಸೂರು ಉದಯಗಿರಿ ಪೊಲೀಸ್ ಠಾಣೆ (Udayagiri Police Station) ದಾಳಿ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಮೈಸೂರು ಡಿಸಿ, ಎಸ್ಪಿ ಹಾಗೂ ಮೈಸೂರು ಪೊಲೀಸ್‌ ಆಯುಕ್ತರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿದ್ದಾರೆ.

    ಡಿಜಿ, ಐಜಿ, ಡಿಸಿ, ಎಸ್‌ಪಿ ಹಾಗೂ ಕಮೀಷನರ್ ರಿಂದ ಇಡಿ ಘಟನೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು ಕೆಲವೊಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಇಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ. ಘಟನೆಯಲ್ಲಿ ಭಾಗಿ ಆದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

    ಪೋಸ್ಟ್ ಮಾಡಿದ ವ್ಯಕ್ತಿ ಮೇಲೆ ಎಫ್‌ಐಆರ್ ದಾಖಲು ಮಾಡುವಾಗ ತಡವಾಗಿತ್ತು ಎಂಬ ವಿಚಾರದ ಬಗ್ಗೆಯೂ ಸಿಎಂ ವಿವರಣೆ ಕೇಳಿದ್ದಾರೆ. ಪೊಲೀಸ್ ಲೋಪ ಆಗಿದೆ ಎಂಬ ಆರೊಪದ ಬಗ್ಗೆಯೂ ವಿವರಣೆ ಕೇಳಿದ ಸಿಎಂ ಅದೆಲ್ಲದರ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ. ಇಲಾಖೆ ಮಟ್ಟದಲ್ಲಿ ಆಗಲಿ ಘಟನೆಗೆ ಕಾರಣ ಆದವರಾಗಲಿ ಯಾರು ತಪ್ಪು ಮಾಡಿದ್ದರು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉದಯಗಿರಿಯಲ್ಲಿ ಸಲ್ಪ ಯಾಮಾರಿದ್ರೂ ಬೀಳುತಿತ್ತು ಪೊಲೀಸರ ಹೆಣಗಳು – ಎಫ್‌ಐಆರ್‌ನಲ್ಲಿದೆ ಸ್ಫೋಟಕ ವಿಚಾರ

    ಸಭೆಯಲ್ಲಿ ಸಿಎಂ ಸೂಚನೆಗಳು
    * ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು.
    * ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.
    * ಅಮಾಯಕರಿಗೆ ತೊಂದರೆ ಕೊಡಬಾರದು.
    * ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು.
    * ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು.
    * ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ.

  • ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

    ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

    ಮೈಸೂರು: ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದಲ್ಲಿ ದಾಂಧಲೆಗೆ ಬುಲ್ಡೋಜರ್‌ ಕ್ರಮ ಈದೆ. ಕರ್ನಾಟಕದಲ್ಲೂ ಆ ಪರಿ ಸ್ಥಿತಿ ಬಂದರೆ ನೋಡೋಣ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G Parameshwar) ಎಚ್ಚರಿಕೆ ಕೊಟ್ಟಿದ್ದಾರೆ.

    ಮೈಸೂರಿನ‌ ಉದಯಗಿರಿ ಪೊಲೀಸ್ ಠಾಣಾ (Udayagiri Police Station) ವ್ಯಾಪ್ತಿಯಲ್ಲಿ ಗಲಭೆ ನಡೆದು 4 ದಿನಗಳ ಬಳಿಕ ಉದಯಗಿರಿ ಪೊಲೀಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ್ದಾರೆ. ಬಳಿಕ ಪೊಲೀಸರೊಂದಿಗೆ ಸಭೆ ನಡೆಸಿದ ಸಚಿವರು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ಸೇರಿದಂತೆ ಇನ್ಸ್‌ಪೆಕ್ಟರ್‌ಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: Prayagraj Kumbh Mela | 1500 ಕೋಟಿ ರೂ. ಖರ್ಚು ಮಾಡಿದ್ದಕ್ಕೆ UP ಆರ್ಥಿಕತೆಗೆ 3 ಲಕ್ಷ ಕೋಟಿ ಲಾಭ: ಯೋಗಿ

    ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಈ ಘಟನೆ ಯಾಕಾಯ್ತು? ಯಾರಿಂದ ಆಯ್ತು ಎಂಬ ಮಾಹಿತಿ ಪಡೆದಿದ್ದೇನೆ. ಘಟನೆ ಸಂಬಂಧ ತಪ್ಪಿತಸ್ಥರ ಮೇಲೆ ಕಠಿಣ ಕ್ರಮಕ್ಕೆ ಸೂಚಿಸಿದ್ದೇವೆ. ಸಿಸಿಟಿವಿ ದೃಶ್ಯ ಆಧಾರಿಸಿ ಆರೋಪಿಗಳನ್ನ ಬಂಧನ ಮಾಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಬಿಡಲ್ಲ. ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನಸಿನೊಡತಿ ಜೊತೆಗಿನ ಪ್ರತಿ ಕ್ಷಣವೂ ಪ್ರೇಮಿಗಳ ದಿನವೇ!

    ವ್ಯಕ್ತಿ ತಪ್ಪು ಮಾಡಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲು ಪೊಲೀಸರು ಇದ್ದಾರೆ. ಬೇರೆ ಯಾರಿಗೂ ಅದಕ್ಕೆ ಅವಕಾಶ ಕೊಡಲ್ಲ. ಪೊಲೀಸ್ ಇಲಾಖೆಗೆ ಪಕ್ಷ ಮುಖ್ಯ ಅಲ್ಲ. ಕಾನೂನು ಕಾಪಾಡುವುದು ಅಷ್ಟೆ ಮುಖ್ಯ. ಇಂತಹ ಘಟನೆ ವೇಳೆ ಕೇಳಿ ಬರುವ ಹೇಳಿಕೆ ನಿಲ್ಲಿಸಲು ಸಾಧ್ಯ ವಿಲ್ಲ. ಏಕೆಂದರೆ ಎಲ್ಲರಿಗೂ ವಾಕ್ ಸ್ವಾತಂತ್ರ‍್ಯವಿದೆ. ರಾಜಕೀಯ ಹೇಳಿಕೆಗಳಿಂದ ಪೊಲೀಸರ ನೈತಿಕತೆ ಕುಗ್ಗಿಸಲು ಸಾಧ್ಯವಿಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸಲು ಯಾರ ಕೈಯಲ್ಲೂ ಆಗಲ್ಲ. ಇಂತಹ ದಾಂಧಲೆಗೆ ಯುಪಿ, ಮಧ್ಯ ಪ್ರದೇಶದಲ್ಲಿ ಬುಲ್ಡೋಜರ್ ಹತ್ತಿಸುವ ಕ್ರಮ ಇದೆ. ಕರ್ನಾಟಕದಲ್ಲೂ ಆ ಪರಿ ಸ್ಥಿತಿ ಬಂದರೆ ನೋಡೋಣ… ಈಗ ಅಂತಹ ಪರಿಸ್ಥಿತಿ ಕರ್ನಾಟಕದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.

    ಎನ್.ಆರ್ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೊಂದು ಠಾಣೆಗೆ ಪ್ರಸ್ತಾವನೆ ಇದೆ, ಇದರ ಬಗ್ಗೆ ಕ್ರಮ ಕೈಗೊಳ್ತಿವಿ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ಘಟನೆ ದಿನ ಪೊಲೀಸರು ಪರಿಸ್ಥಿತಿಯನ್ನು ಸಮರ್ಥವಾಗಿಯೇ ನಿಭಾಯಿಸಿದ್ದಾರೆ. ಪೊಲೀಸರ ಬಗ್ಗೆ ವಿವಿಧ ರೀತಿಯ ಹೇಳಿಕೆ ಕೊಡುವವರಿಗೆ ಸಮಯ ಬಂದಾಗ ತಿಳುವಳಿಕೆ ಹೇಳ್ತಿನಿ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 389 ರೂ. ಕೊಟ್ರೆ ಪ್ರೇಮಿಗಳ ದಿನಕ್ಕೆ ಬಾಡಿಗೆ ಬಾಯ್ ಫ್ರೆಂಡ್ – ಏನಿದು ಆಫರ್?

  • ಮೈಸೂರು ಉದಯಗಿರಿ ಕಲ್ಲು ತೂರಾಟ ಪ್ರಕರಣ – ಇಂದು ಅಧಿಕಾರಿಗಳೊಂದಿಗೆ ಸಿಎಂ ಸಭೆ

    ಮೈಸೂರು ಉದಯಗಿರಿ ಕಲ್ಲು ತೂರಾಟ ಪ್ರಕರಣ – ಇಂದು ಅಧಿಕಾರಿಗಳೊಂದಿಗೆ ಸಿಎಂ ಸಭೆ

    ಬೆಂಗಳೂರು: ಮೈಸೂರಿನ (Mysuru) ಉದಯಗಿರಿ ಪೊಲೀಸ್ ಠಾಣೆಗೆ (Udayagiri Police Station) ಕಲ್ಲು ತೂರಾಟ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 12:45 ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

    ಸಭೆಯಲ್ಲಿ ಸರ್ಕಾರದ ಎಸಿಎಸ್, ಗೃಹ ಇಲಾಖೆ ಅಧಿಕಾರಿಗಳು, ಡಿಜಿಪಿ ಅಲೋಕ್ ಮೋಹನ್, ಎಡಿಜಿಪಿ, ಮೈಸೂರು ಡಿಸಿ ಹಾಗೂ ಕಮಿಷನರ್ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಉದಯಗಿರಿಯಲ್ಲಿ ಸಲ್ಪ ಯಾಮಾರಿದ್ರೂ ಬೀಳುತಿತ್ತು ಪೊಲೀಸರ ಹೆಣಗಳು – ಎಫ್‌ಐಆರ್‌ನಲ್ಲಿದೆ ಸ್ಫೋಟಕ ವಿಚಾರ

    ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ಪೊಲೀಸರ ವೈಫಲ್ಯ ಕಂಡು ಬಂದಿತ್ತು. ಕಾನೂನು ಸುವ್ಯವಸ್ಥೆ ಹದ್ದಗೆಟ್ಟ ಬಗ್ಗೆ ವರದಿಯಾಗಿತ್ತು. ಕೋಮು ಗಲಭೆಗೆ ಕಾರಣರಾದವರ ವಿರುದ್ಧ ಕ್ರಮಕೈಗೊಂಡಿರುವ ಬಗ್ಗೆ, ಎಷ್ಟು ಮಂದಿ ಆರೋಪಿಗಳ ಬಂಧನ ಆಗಿದೆ. ಘಟನೆ ನಡೆಯಲು ಕಾರಣವಾದ ಅಂಶ ಯಾವುದು? ಡಿಸಿಪಿ ಕಾರಿನ ಮೇಲೆ ಕಲ್ಲು ತೂರಾಟ ಮಾಡಲು ಕಾರಣವೇನು? ಕಲ್ಲು ಸಂಗ್ರಹ ಮಾಡಿದವರು ಯಾರು? ಎಂಬ ಮಾಹಿತಿಯನ್ನು ಸಿಎಂ ಪಡೆಯಲಿದ್ದಾರೆ.

    ಪ್ರಕರಣದ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಲಿದ್ದಾರೆ. ಮುಂದೆ ಇಂತಹ ಘಟನೆ ನಡೆಯದಂತೆ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ಮೈಸೂರಿನ ಉದಯಗಿರಿ ಗಲಾಟೆ – ಕಲ್ಲು ತೂರಿದ 1,000 ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ಎಫ್‌ಐಆರ್‌