Tag: Udhav Thackeray

  • ಮಕ್ಕಳೊಂದಿಗೆ ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ

    ಮಕ್ಕಳೊಂದಿಗೆ ದೇವಾಲಯಕ್ಕೆ ಭೇಟಿ ಕೊಟ್ಟ ಉದ್ಧವ್ ಠಾಕ್ರೆ

    ಮುಂಬೈ: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮಕ್ಕಳಾದ ಆದಿತ್ಯ ಠಾಕ್ರೆ ಮತ್ತು ತೇಜಸ್ ಠಾಕ್ರೆಯೊಂದಿಗೆ ಮುಂಬೈನ ದೇವಸ್ಥಾನಕ್ಕೆ ಭೇಟಿ ನೀಡಿದರು.

    ಜೂನ್ 21ರಂದು ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವಾರು ಬಂಡಾಯ ಶಾಸಕರು ಸೂರತ್‍ಗೆ ತೆರಳಿದರು. ಸುಮಾರು 8 ದಿನಗಳ ರಾಜಕೀಯ ಬಿಕ್ಕಟ್ಟು ಉದ್ಧವ್ ಠಾಕ್ರೆ ಅವರ ರಾಜೀನಾಮೆಯೊಂದಿಗೆ ಅಂತ್ಯಗೊಂಡಿದೆ. ಇದನ್ನೂ ಓದಿ: ನಾಳೆ ಬಿಜೆಪಿ-ಶಿಂಧೆ ಸರ್ಕಾರ ರಚನೆ ಸಾಧ್ಯತೆ- ಹೊಸ ಸರ್ಕಾರ ರಚನೆ ಉಸ್ತುವಾರಿ ಹೊತ್ತ ಸಿ.ಟಿ ರವಿ

    ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್‍ಸಿಪಿ ಮತ್ತು ಕಾಂಗ್ರೆಸ್‍ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದ್ದಾರೆ.

    ಗುರುವಾರ ಉದ್ಧವ್ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸಬೇಕು ಎಂದು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಆದೇಶ ನೀಡಿದ್ದರು. ವಿಶೇಷ ಅಧಿವೇಶನ ಕರೆದು ಸಂಜೆ ಐದು ಗಂಟೆಯೊಳಗೆ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ವಿಧಾನಸಭೆ ಕಾರ್ಯದರ್ಶಿಗೆ ಖಡಕ್ಕಾಗಿ ಆದೇಶ ನೀಡಿದ್ದರು. ಈ ಹಿನ್ನೆಲೆ ವಿಶ್ವಾಸಮತಯಾಚನೆಗೂ ಮುನ್ನವೇ ಸಿಎಂ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದಾರೆ.

    Live Tv

  • ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

    ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ : ಉದ್ಧವ್ ಠಾಕ್ರೆ

    ನವದೆಹಲಿ: ಕೇಂದ್ರ ಸರ್ಕಾರದ ಅಧಿಕೃತ ಆದೇಶಕ್ಕೂ ಮುನ್ನ ಮಹಾರಾಷ್ಟ್ರ ರಾಜ್ಯ ಸರ್ಕಾರ ಲಾಕ್‍ಡೌನ್ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ದೇಶದಲ್ಲಿ ಲಾಕ್‍ಡೌನ್ ವಿಸ್ತರಿಸಿದ ರಾಜ್ಯವಾಗಿದೆ.

    ಪ್ರಧಾನಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ಮಾತನಾಡಿರುವ ಸಿಎಂ ಉದ್ಧವ್ ಠಾಕ್ರೆ ತಮ್ಮ ಲಾಕ್‍ಡೌನ್ ವಿಸ್ತರಣೆ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಇದೇ ವೇಳೆ ಈ ಕಠಿಣ ಸಂದರ್ಭದಲ್ಲಿ ದೇಶಕ್ಕೆ ನಾವು ಮಾದರಿಯಾಗಲು ಬಯಸುತ್ತೇವೆ ಎಂದು ಠಾಕ್ರೆ ಹೇಳಿದ್ದಾರೆ.

    ರಾಜ್ಯದಲ್ಲಿ ಸೋಂಕು ಕಾಣಿಸಿಕೊಂಡು ಸೋಮವಾರಕ್ಕೆ ಐದು ವಾರಗಳಾಗಲಿದೆ. ಸೋಂಕು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಸಭೆಯಲ್ಲೂ ಉದ್ಧವ್ ಠಾಕ್ರೆ ಲಾಕ್‍ಡೌನ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು. ಲಾಕ್‍ಡೌನ್ ತೆರವು ಮಾಡುವುದರಿಂದ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಹೆಚ್ಚು ಸೋಂಕು ಕಾಣಿಸಿಕೊಂಡಿದ್ದು ಪರಿಸ್ಥಿತಿ ಕೈ ಮೀರಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದರು.