Tag: udupi college

  • ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಬೆಂಗಳೂರು/ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ (Udupi Video Case) ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾರ್ಥಿನಿಯರ ಮೊಬೈಲ್‌ ಅನ್ನು ಗುಜರಾತ್‌ನ ವಿಧಿವಿಜ್ಞಾನ ಪ್ರಯೋಗಾಲಯ (FSL)ಗೆ ರವಾನೆ ಮಾಡಲಾಗಿದೆ.

    ರಾಜ್ಯ ಎಫ್‌ಎಸ್‌ಎಲ್‌ ನಿಂದ ಮೊಬೈಲ್‌ನಲ್ಲಿ ಯಾವುದೇ ಫೋಟೋ ರಿಟ್ರೀವ್ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ತಲುಪಿಸಲಾಗಿದ್ದು, CID ತಂಡ ವರದಿಗಾಗಿ ಕಾದು ಕುಳಿತಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    ಉಡುಪಿ ಖಾಸಗಿ ಕಾಲೇಜೊಂದರ ಲೇಡಿಸ್‌ ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣ ಕೆಲ ದಿನಗಳ ಹಿಂದೆ ಬೆಳಕಿಗೆ ಬಂದಿದ್ದು, ಮೊಬೈಲ್‌ನಲ್ಲಿ ಯಾವುದೇ ವಿಡಿಯೋ, ಫೋಟೋಗಳು ಲಭ್ಯವಾಗಿಲ್ಲ. ಪೊಲೀಸರು ವಶಕ್ಕೆ ಪಡೆದಿದ್ದ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನೆ ಮಾಡಲಾಗಿತ್ತು. ಆದ್ರೆ ಈವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. ಹಾಗಾಗಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ರವಾನಿಸಲಾಗಿದೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಈ ನಡುವೆ ವಿದ್ಯಾರ್ಥಿನಿಯರು ಐ-ಫೋನ್ (iPhone) ಅಲ್ಲಿ ದೃಶ್ಯಾವಳಿ ಸೆರೆ ಹಿಡಿದಿದ್ರು ಎಂದೂ ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿ ಡಿಲೀಟ್ ಮಾಡಿದ್ದರೂ ಐ-ಕ್ಲೌಡ್‌ನಲ್ಲಿ ದೃಶ್ಯಾವಳಿ ಇರುತ್ತೆ. ಕೋರ್ಟ್ ನ ಅನುಮತಿ ಪಡೆದು, ಸಂಬಂಧಪಟ್ಟ ಮೊಬೈಲ್ ಕಂಪನಿಯಿಂದ ಮಾಹಿತಿ ಹೊರ ತೆಗೆಯಬಹುದು ಎಂದು ತಜ್ಞರು ಹೇಳಿದ್ದಾರೆ. ಸದ್ಯ ಮೊಬೈಲ್‌ನ ಎಫ್‌ಎಸ್‌ಎಲ್‌ ರಿಟ್ರೀವ್ ಮಾಡ್ತಾರಾ? ಮೊಬೈಲ್‌ನಲ್ಲಿ ದೃಶ್ಯಾವಳಿ ಇದ್ಯಾ? ಅನ್ನೋದು ತನಿಖೆಯ ಕುತೂಹಲ ಆಗಿದೆ. ಈಗಾಗಲೇ ಆರೋಪಿತ ಯುವತಿಯರಿಂದ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ

    ಉಡುಪಿ ವೀಡಿಯೋ ಪ್ರಕರಣ ಸಿಐಡಿ ತನಿಖೆಗೆ

    ಉಡುಪಿ: ನಗರದ ಖಾಸಗಿ ಕಾಲೇಜಿನಲ್ಲಿ (Udupi College) ನಡೆದಿದ್ದ ವೀಡಿಯೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ (CID) ವಹಿಸಿದೆ.

    ಮೂವರು ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜಿನ ಟಾಯ್ಲೆಟ್‍ನಲ್ಲಿ ಮೊಬೈಲ್ ಇರಿಸಿ ಹಿಂದೂ ಯುವತಿಯ ವಿಡೀಯೋ ಚಿತ್ರಿಕರಿಸಿದ್ದರು. ಈ ವಿಚಾರವಾಗಿ ಕಾಲೇಜಿನ ಆಡಳಿತ ಮಂಡಳಿ ಮಂಡಳಿ ವಿದ್ಯಾರ್ಥಿನಿಯರಿಗೆ ಎಚ್ಚರಿಕೆ ನೀಡಿ ಕ್ರಮ ಕೈಗೊಂಡಿತ್ತು. ಬಳಿಕ ಈ ವಿಚಾರ ಬೆಳಕಿಗೆ ಬಂದಿದ್ದು ಮಲ್ಪೆ ಪೊಲೀಸ್ (Police) ಠಾಣೆಯಲ್ಲಿ ಜು.26ರಂದು ಸುಮೋಟೋ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: 8 ಲಕ್ಷ ಲಂಚಕ್ಕೆ ಬೇಡಿಕೆ – ಮಂಡ್ಯ ಕೃಷಿ ಅಧಿಕಾರಿಗಳಿಂದ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ

    ಜುಲೈ 18 ರಂದು ನಡೆದಿದ್ದ ಘಟನೆ ರಾಜ್ಯದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಈ ಸಂಬಂಧ ರಾಜ್ಯಾದ್ಯಂತ ಬಿಜೆಪಿ, ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಗಳು ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ನಡೆಸಿದ್ದವು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಸಲಾಗಿತ್ತು. ಈ ಪ್ರಕರಣವನ್ನು ಎಸ್‍ಐಟಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು.

    ಆರಂಭದಲ್ಲಿ ಪ್ರಕರಣವನ್ನು ಮಲ್ಪೆ ವೃತ್ತ ನಿರೀಕ್ಷಕ ಮಂಜುನಾಥ ಗೌಡ ತನಿಖೆ ನಡೆಸುತ್ತಿದ್ದರು. ಬಳಿಕ ತನಿಖಾಧಿಕಾರಿಯ ಬದಲಾವಣೆ ಮಾಡುವಂತೆ ಒತ್ತಡಗಳು ಬಂದಿದ್ದವು. ಬಳಿಕ ಪ್ರಕರಣವನ್ನು ಅವರಿಂದ ಕುಂದಾಪುರ ಡಿವೈಎಸ್‍ಪಿ ಬೆಳ್ಳಿಯಪ್ಪ ಅವರಿಗೆ ಹಸ್ತಾಂತರಿಸಲಾಗಿತ್ತು. ಈಗ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಟ್ರಕ್‌ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು – 22ರ ಯುವತಿ ದುರ್ಮರಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಂ ಹೆಣ್ಣುಮಕ್ಕಳ ಮಾನಸಿಕತೆಯೂ ಜಿಹಾದಿ ಕಡೆಗೆ ಹೊರಟಿರೋದು ಸಮಾಜಕ್ಕೆ ಮಾರಕ: ಸುನೀಲ್ ಕುಮಾರ್

    ಮುಸ್ಲಿಂ ಹೆಣ್ಣುಮಕ್ಕಳ ಮಾನಸಿಕತೆಯೂ ಜಿಹಾದಿ ಕಡೆಗೆ ಹೊರಟಿರೋದು ಸಮಾಜಕ್ಕೆ ಮಾರಕ: ಸುನೀಲ್ ಕುಮಾರ್

    ಬೆಂಗಳೂರು: ಮುಸ್ಲಿಂ ಹೆಣ್ಣುಮಕ್ಕಳ (Muslim Girls) ಮಾನಸಿಕತೆಯೂ ಜಿಹಾದಿ ಕಡೆಗೆ ಹೊರಟಿದೆ ಅಂದ್ರೆ ಅದು ಸಮಾಜಕ್ಕೆ ಮಾರಕ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ (V Sunil Kumar) ಆತಂಕ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಜಬ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ (Supreme Court) ತನಕ ಹೋಗುವ ಧೈರ್ಯ ಬರುತ್ತೆ ಅಂದ್ರೆ ಯಾರ ಕೈವಾಡ ಇತ್ತು ಆಗ? ಈಗಲೂ ಕಾಲೇಜಿನ ಟಾಯ್ಲೆಟ್ ಒಳಗೆ ವೀಡಿಯೋ ಮಾಡಿದ್ದಾರೆ ಅಂದ್ರೆ ಎಷ್ಟು ಧೈರ್ಯ ಇರಬೇಕು. ಇದರ ಹಿಂದೆ ಯಾರದ್ದೋ ಕೈವಾಡ ಇದೆ ಎಂದು ಸಂಶಯಪಟ್ಟಿದ್ದಾರೆ. ಇದನ್ನೂ ಓದಿ: ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಮುಸ್ಲಿಂ ಹೆಣ್ಣುಮಕ್ಕಳ ಮಾನಸಿಕತೆಯೂ ಜಿಹಾದಿ ಕಡೆಗೆ ಹೊರಟಿದೆ ಅಂದ್ರೆ ಅದು ಸಮಾಜಕ್ಕೆ ಮಾರಕ. ವೀಡಿಯೋ ಮಾಡಿದ ಮೂವರು ಹೆಣ್ಣುಮಕ್ಕಳ ಪೋಷಕರನ್ನ ಕರೆಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

    ಮುಸ್ಲಿಂ ಹುಡುಗಿಯರು ಭಾಗಿಯಾಗಿದ್ದಾರೆ ಅನ್ನೋ ಕಾರಣಕ್ಕೆ ಸರ್ಕಾರವೇ ಪ್ರಕರಣ ಮುಚ್ಚಿಹಾಕುತ್ತಿದೆಯಾ? ಯಾರದ್ದಾದರೂ ದೊಡ್ಡಮಟ್ಟದ ಒತ್ತಡ ಇದೆಯಾ? ಅಂತ ಉಡುಪಿ ಜನ ಕೇಳುತ್ತಿದ್ದಾರೆ. ಉಡುಪಿ ಕಾಲೇಜುವೊಂದರ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನ ಸರ್ಕಾರವೇ ಮುಚ್ಚಿಹಾಕುವ ಪ್ರಯತ್ನ ಮಾಡ್ತಿದೆ. ಆ ಮೂವರು ಮುಸ್ಲಿಂ ಹೆಣ್ಣುಮಕ್ಕಳ ಪೋಷಕರನ್ನ ಕರೆಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಡುಪಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಬೆಂಗ್ಳೂರು FSLಗೆ ಮೊಬೈಲ್ ರವಾನೆ

    ಘಟನೆ ಬಗ್ಗೆ ಟ್ವೀಟ್ ಮಾಡಿದ ಹೆಣ್ಣುಮಗಳ ಮನೆಗೆ ಪೊಲೀಸರು 24 ಗಂಟೆಯಲ್ಲಿ ಹೋಗಿ ವಿಚಾರಣೆ ಮಾಡ್ತಾರೆ. ವೀಡಿಯೋ ಚಿತ್ರೀಕರಣ ಮಾಡಿದವರ ಮನೆಗೆ ಪೊಲೀಸರು ಹೋಗಿ ವಿಚಾರಣೆ ನಡೆಸಿಲ್ಲ. ವೀರಾವೇಶದ ಭಾಷಣ ಮಾಡುವ ಸಿದ್ದರಾಮಯ್ಯ ಅವರ ತಾಕತ್ತು ವಿಡಿಯೋ ಮಾಡಿದವರ ಮನೆಗೆ ಹೋಗಲು ಇಲ್ಲವಾ? ದಮ್ಮು, ತಾಕತ್ತು ಈ ಸರ್ಕಾರಕ್ಕೆ ಇಲ್ಲವಾ? ಮೊಬೈಲ್ ವರ್ಗಾವಣೆ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೆಣ್ಣುಮಕ್ಕಳ ಘನತೆ ಕಾಪಾಡಬೇಕಾದ ಸರ್ಕಾರ ಇದೊಂದು ತಮಾಷೆ ಅಂತಾ ಕೈ ಬಿಡಬಾರದು. ಯಾವುದೇ ಒತ್ತಡಕ್ಕೆ ಮಣಿದು ಪೊಲೀಸರು ಸುಮ್ಮನಾದ್ರೆ ಮುಂದಿನ ದಿನಗಳಲ್ಲಿ ನಮ್ಮ ಎರಡು ಜಿಲ್ಲೆಗಳು ಅಪಾಯಕ್ಕೆ ಸಿಲುಕುತ್ತವೆ ಎಂದು ಎಚ್ಚರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲೇಜುಗಳಿಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಆರಗ ಜ್ಞಾನೇಂದ್ರ

    ಕಾಲೇಜುಗಳಿಗೆ ಯಾರೂ ಹಿಜಬ್, ಕೇಸರಿ ಶಾಲು ಧರಿಸಿ ಬರುವಂತಿಲ್ಲ: ಆರಗ ಜ್ಞಾನೇಂದ್ರ

    ಬೆಂಗಳೂರು: ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಬ್ ಗೊಂದಲ ವಿಚಾರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮದ ಪೂಜೆ ಮಾಡಲು ದೇವಾಲಯ, ಮಸೀದಿ, ಚರ್ಚ್ ಇವೆ. ಅಲ್ಲಿ ಬೇಕಾದಾರೆ ಇದನ್ನು ಮಾಡಲಿ. ಆದರೆ ಶಾಲಾ, ಕಾಲೇಜಿನ ವಾತಾವರಣದಲ್ಲಿ ಇಂತಹ ಸಂಘರ್ಷಗಳು ಆಗಬಾರದು. ಎಲ್ಲರೂ ಸೇರಿ ಭಾರತ ಮಾತೆಯ ಮಕ್ಕಳು ಎಂದು ವ್ಯಾಸಂಗಕ್ಕೆ ಬರಬೇಕು ಎಂದು ಸಲಹೆ ನೀಡಿದರು.

    ಈಗಾಗಲೇ ಶಿಕ್ಷಣ ಸಚಿವರು ಈ ಬಗ್ಗೆ ಶಾಲೆಯಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶವನ್ನು ಹೊರಡಿಸಿದ್ದಾರೆ. ಇದರಿಂದಾಗಿ ಶಾಲೆ ಕಾಲೇಜಿಗೆ ಯಾರೂ ಹಿಜಬ್ ಹಾಗೂ ಕೇಸರಿ ಶಾಲುಗಳನ್ನು ಧರಿಸಿ ಬರಬಾರದು. ಜೊತೆಗೆ ಶಾಲೆಯಲ್ಲಿ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಓದಬೇಕು ಎಂದು ತಿಳಿಹೇಳಿದರು. ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‍ನಲ್ಲೇ ತಡೆದ ಪ್ರಿನ್ಸಿಪಾಲ್

    ಶಾಲಾ – ಕಾಲೇಜುಗಳಲ್ಲಿ ಎಲ್ಲರೂ ಭಾರತ ಮಕ್ಕಳು ಎಂದು ಓದುವುದರ ಜೊತೆಗೆ ಶೈಕ್ಷಣಿಕ ವಾತಾವರಣದಲ್ಲಿ ದೇಶದ ಐಕ್ಯತೆ, ಸಮಾನತೆ ಬಗ್ಗೆ ಕಲಿಬೇಕು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕಲಿತು ನಾವೆಲ್ಲರೂ ಭಾರತ ಮಾತೆಯ ಮಕ್ಕಳು ಎಂಬ ಸಂಸ್ಕಾರವನ್ನು ಪಡೆಯಬೇಕು ಎಂದರು. ಇದನ್ನೂ ಓದಿ: ಇಟಲಿಯ ತಾಯಿ, ಭಾರತದ ತಂದೆ – ರಾಹುಲ್ ಗಾಂಧಿ ವಿರುದ್ಧ ಅನಿಲ್ ವಿಜ್ ಕಿಡಿ

    ಶಾಲೆಗಳಲ್ಲಿ ಮಕ್ಕಳು ದೇಶದ ಐಕ್ಯತೆ ಬಗ್ಗೆ ಸಂಸ್ಕಾರ ಪಡೆಯದಿದ್ದರೆ ಏನಾಗಬುದು ಎಂಬುದನ್ನು ಎಲ್ಲರೂ ಯೋಚನೆ ಮಾಡಬೇಕು. ರಾಷ್ಟ್ರ ಒಗ್ಗಟ್ಟಾಗಬೇಕು ಎಂಬುದಕ್ಕೆ ಅಡ್ಡಗಾಲಾಗುವವರನ್ನು ಸರಿ ಮಾಡುವ ಕೆಲಸ ನಾವು ಮಾಡಬೇಕಾಗುತ್ತದೆ. ಉಡುಪಿಯ ಹಿಜಬ್ ಗೊಂದಲದ ವಿಚಾರದ ಹಿಂದೆ ಮತೀಯ ಸಂಘಟನೆಗಳ ಇದ್ದರೆ ಈ ಬಗ್ಗೆ ನಿಗಾ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.