Tag: Udupi Police

  • ಗಂಡನಿಗೆ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ಕೊಡ್ತಿದ್ದ ಖತರ್ನಾಕ್ ಸುಂದರಿ – ಸ್ಲೋ ಪಾಯ್ಸನ್ ಯಾವುದು?

    ಗಂಡನಿಗೆ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ಕೊಡ್ತಿದ್ದ ಖತರ್ನಾಕ್ ಸುಂದರಿ – ಸ್ಲೋ ಪಾಯ್ಸನ್ ಯಾವುದು?

    – ವರ್ಷ ಕಳೆಯುವ ಮೊದಲೇ ಬೆಡ್‌ರೂಮ್‌ನಲ್ಲಿ ಕೊಲೆ
    – FSL ವರದಿಗಾಗಿ ಅಧಿಕಾರಿಗಳು ವೇಯ್ಟಿಂಗ್‌

    ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಎನ್ನುತ್ತಾ ವಿಷ ಹಾಕಿ.. ಉಸಿರುಗಟ್ಟಿಸಿ ಕೊಂದ ರಿಲ್ಸ್ ರಾಣಿ (Reels Queen) ಪ್ರತಿಮಾ ಕಂಬಿ ಎಣಿಸುತ್ತಿದ್ದಾಳೆ. ಕೊಲೆ ಕೃತ್ಯದಲ್ಲಿ ಪ್ರಮುಖ ಪಾತ್ರವಹಿಸಿದ ಆಕೆಯ ಸ್ನೇಹಿತ ದಿಲೀಪ್ ಹೆಗ್ಡೆಯ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಹೊಸ ಮನೆ ಕಟ್ಟಿಸಿ ಒಂದು ವರ್ಷ ಕಳೆಯುವ ಮೊದಲೇ ಬೆಡ್‌ರೂಮ್‌ನಲ್ಲಿ ಗಂಡನ ಉಸಿರು ನಿಲ್ಲಿಸಿದ ಕಥೆ ನಿಜಕ್ಕೂ ರೋಚಕ.. ಭಯಾನಕ…

    ಉಡುಪಿ (Udupi) ಜಿಲ್ಲೆ ಕಾರ್ಕಳದ ಪ್ರತಿಮಾ ಎಂಬ ರಿಲ್ಸ್ ರಾಣಿ ತನ್ನ ಪ್ರಿಯಕರ ದಿಲೀಪ್ ಹೆಗ್ಡೆ ಜೊತೆ ಸೇರಿ, ಮುಗ್ಧ ಪತಿ ಬಾಲಕೃಷ್ಣ ಪೂಜಾರಿಯನ್ನು ಕೊಂದಿರುವ ಅಮಾನವೀಯ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಪ್ರಿಯಕರ ತಂದುಕೊಟ್ಟ ಸ್ಲೋ ಪಾಯ್ಸನನ್ನು ಸ್ವಲ್ಪ ಸ್ವಲ್ಪವೇ ಕೊಟ್ಟು, ಆರೋಗ್ಯ ಹದಗೆಡುವಂತೆ ಮಾಡಿದ ಪ್ರತಿಮಾ, ಕೊನೆಗೆ ಗೆಳೆಯನ ಜೊತೆ ಸೇರಿ ಉಸಿರುಗಟ್ಟಿಸಿ ಪತಿಯನ್ನು ಕೊಂದ ಪ್ರಕರಣವಿದು. ಇದೀಗ ಆರೋಪಿಗಳಿಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ. ತನ್ನ ಸಹೋದರನ ಮುಂದೆ ಎಲ್ಲಾ ಸತ್ಯವನ್ನು ಬಿಚ್ಚಿಟ್ಟ ಪ್ರತಿಮಾ, ಅಜೆಕಾರು ಪೊಲೀಸರ ಮುಂದೆ ತಾನೇ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನೇರವಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಕಂಬಿ ಹಿಂದೆ ಸೇರುವ ಮೊದಲೇ ಪತ್ನಿ ಪ್ರತಿಮಾ ಎಲ್ಲಾ ದುಷ್ಟ ಕೃತ್ಯವನ್ನು ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ.

    ತನ್ನ ಪ್ರಿಯತಮೆಗೆ ವಿಷ ತಂದುಕೊಟ್ಟು ಕೊಲೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಪ್ರಿಯಕರ ದಿಲೀಪ್ ಹೆಗ್ಡೆ, ಬಾಯಿಬಿಡಲು ನಕ್ರಾ ಮಾಡುತ್ತಿದ್ದಾನೆ. ಈತನಿಂದ ಸಾಕಷ್ಟು ಸತ್ಯಗಳನ್ನು ಹೊರ ತರುವುದು ಬಾಕಿ ಇದೆ. ಹಾಗಾಗಿ ಇವನನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ. ಇದನ್ನೂ ಓದಿ: ಉಡುಪಿ| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ

    ಪ್ರಕರಣದ ಕುರಿತು ಉಡುಪಿ ಎಸ್ಪಿ ಡಾ. ಅರುಣ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಪತಿ ಬಾಲಕೃಷ್ಣನಿಂದ ಇದ್ದರೆ ನಮ್ಮ ಸ್ನೇಹಕ್ಕೆ ಅಡ್ಡಿಯಾಗುತ್ತದೆ ಎಂದು ಪತ್ನಿ ಕೊಲೆ ಮಾಡಿದ್ದಾಳೆ. ಇಬ್ಬರ ಅಕ್ರಮ ಸಂಬಂಧಕ್ಕೆ ಪತಿ ಬದುಕಿರೋದೇ ಸಮಸ್ಯೆ ಎಂದು ಕೊಲೆಮಾಡಿರುವುದು ಸಾಬೀತಾಗಿದೆ. ಅಲ್ಲದೇ ಪ್ರತಿನಿತ್ಯ ಊಟದಲ್ಲಿ ಪತಿಗೆ ವಿಷ ಬೆರೆಸಿಕೊಡುತ್ತಿದ್ದ ಪತ್ನಿ ಪ್ರತಿಮಾ, ಪ್ಲ್ಯಾನ್ ಪ್ರಕಾರ ಪತಿಯನ್ನು ಸಾಯುಸಲು ಪ್ರಿಯಕರನನ್ನ ಮನೆಗೆ ಕರೆಸಿದ್ದಳು ಎಂದು ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

    1 ವರ್ಷದ ಮನೆ ಕಟ್ಟಿಸಿ ಹೆಂಡತಿ ಮಕ್ಕಳನ್ನ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ ಬಾಲಕೃಷ್ಣ ಪೂಜಾರಿಯನ್ನು ಪತ್ನಿ ಕೊಂದಿದ್ದಾಳೆ. ಮನೆ ತುಂಬಾ ಅನ್ಯೋನ್ಯವಾಗಿ ಇರುವ ಫೋಟೋಗಳನ್ನು ಜೋಡಿಸಿರುವ ಕತರ್ನಾಕ್ ಸುಂದರಿ ಗಂಡನ ಜೊತೆ ಮಲಗಿ ಸುಖ ಸಂಸಾರ ಮಾಡಿದ ಬೆಡ್ ರೂಮ್ ನಲ್ಲೆ ಉಸಿರು ನಿಲ್ಲಿಸಿ ಬಿಟ್ಟಿದ್ದಾಳೆ. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

  • ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

    ಮಾಜಿ ಶಾಸಕ ರಘುಪತಿ ಪತ್ನಿ ಆತ್ಮಹತ್ಯೆ ಕೇಸ್‌ – ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲು

    ಉಡುಪಿ: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ (Raghupathi Bhat) ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ಸಿಜೆಎಂ ಜಿಲ್ಲಾ ನ್ಯಾಯಾಲಯ (Udupi CJM Court) ಶುಕ್ರವಾರ ಆದೇಶಿಸಿದೆ.

    ಜೂನ್ 10, 2008 ರಂದು ಉಡುಪಿಯಲ್ಲಿ (Udupi) ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ರಾವ್‌ಗೆ 1 ವರ್ಷ ಜೈಲು (Jail) ಶಿಕ್ಷೆಯೊಂದಿಗೆ ದಂಡ ವಿಧಿಸಿದೆ.

    15 ವರ್ಷಗಳ ಹಿಂದೆ ನಡೆದಿದ್ದಾದ್ರೂ ಏನು?
    2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್‌, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿದೆ.

    ಕಾರನ್ನು ಅಲ್ಲೇ ಬಿಟ್ಟು ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದು ಹೋಗಿದ್ದನು. ಕುಮಟಾಕ್ಕೆ ಬೆಂಗಳೂರಿನ ಚಾಲಕನೋರ್ವನನ್ನು ಕರೆಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದನು. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ರಾವ್‌ ಬಾಡಿಗೆ ಕಾರಿನಲ್ಲಿ ಕುಮಟಾದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದನು. ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸನ್ಸ್‌ಗೆ ಪದ್ಮಪ್ರಿಯ ಅವರ ಫೋಟೋ ಅಂಟಿಸಿ, ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆದುಕೊಂಡು ಹೋಗಿದ್ದನು. ಈ ಘಟನೆ ನಡೆಯುವ ಮೊದಲು ದೆಹಲಿಗೆ ಹೋಗಿದ್ದ ಅತುಲ್ ರಾವ್‌, ಅಲ್ಲಿ ಮನೆ ಬಾಡಿಗೆ ಪಡೆದುಕೊಂಡಿದ್ದನು. ಅದಕ್ಕೆ ಬೆಂಗಳೂರಿನ ನಕಲಿ ವಿಳಾಸ ನೀಡಿ ಬಾಡಿಗೆ ಕರಾರು ಪತ್ರಕ್ಕೆ ನೀಡಿದ್ದನು. ಇದು ಅಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಾಣಿಯಾಗಿತ್ತು. ಆ ಬಾಡಿಗೆ ಕರಾರು ಪತ್ರದಿಂದಲೇ ಅತುಲ್ ರಾವ್‌ ಅಲ್ಲಿ ಬ್ಯಾಂಕ್ ಖಾತೆ ತೆರೆದಿದ್ದನು. ಅತುಲ್ ರಾವ್‌ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಕ್ಲರ್ಕ್‌ ಆಗಿದ್ದರೂ ಅಲ್ಲಿ ತನ್ನ ವಿದ್ಯಾರ್ಹತೆಯನ್ನು ಬಿಇ ಮತ್ತು ಇಂಟಲ್ ಕಂಪೆನಿಯಲ್ಲಿ ಇಂಜಿನಿಯರ್ ಎಂಬುದಾಗಿ ಉಲ್ಲೇಖ ಮಾಡಿದ್ದನು ಎಂದು ದೂರಲಾಗಿದೆ.

    ದೆಹಲಿಯಲ್ಲಿ ಬಾಡಿಗೆ ರೂಮಿಗೆ ಓಡಾಟ ನಡೆಸುತ್ತಿದ್ದಾಗ ಲಾಡ್ಜ್‌ನಲ್ಲಿಯೂ ಬೆಂಗಳೂರಿನ ನಕಲಿ ವಿಳಾಸ ನೀಡುತ್ತಿದ್ದನು. ಜೂ.10ರಂದು ದೆಹಲಿಗೆ ಹೋಗಿದ್ದ ಅತುಲ್, ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಅಲ್ಲಿಂದ ಜೂ.12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ, ರಘುಪತಿ ಭಟ್ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದನು. ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾಥಮಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಠಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರು ಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

    ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 468ಕಾಯಿದೆಯಡಿ 1 ವರ್ಷ ಜೈಲುಶಿಕ್ಷೆ ಮತ್ತು 5,000ರೂ. ದಂಡ ವಿಧಿಸಿದೆ. ಐಪಿಸಿ 417, 465, 471 ಕಾಯ್ದೆಯಡಿ ತಲಾ 6 ತಿಂಗಳು ಸಜೆ ಹಾಗೂ 5,000ರೂ. ದಂಡ ವಿಧಿಸಿದೆ. ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

  • ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    ಅಖಂಡ ಭಾರತ ಕೇಸರಿಮಯ ಆಗಲಿದೆ – ವಿಶ್ವ ಹಿಂದೂ ಪರಿಷತ್‌ ಮುಖಂಡ ಗುಡುಗು

    – ಭಗವಾಧ್ವಜ ಅಳವಡಿಸಲು 20 ಲಕ್ಷದ ಬಾಂಡ್ ಬರೆಸಿಕೊಂಡರೆಂದು ದಿನೇಶ್ ಮೆಂಡನ್ ಅಸಮಾಧಾನ

    ಉಡುಪಿ: ಇಲ್ಲಿನ ಹಿಂದೂ ಸಮಾಜೋತ್ಸವಕ್ಕೆ ನಗರದಲ್ಲಿ ಕೇಸರಿ ಪತಾಕೆ ಮತ್ತು ಭಗವಾಧ್ವಜ (Bhagwa Flag) ಅಳವಡಿಸಲು ಪೊಲೀಸ್ ಇಲಾಖೆ (Udupi Police Department) 10 ಮತ್ತು 20 ಲಕ್ಷದ ಬಾಂಡ್ ಬರೆಸಿಕೊಂಡಿದ್ದಾರೆ ವಿಶ್ವ ಹಿಂದೂ ಪರಿಷತ್‌ ಪ್ರಧಾನ ಕಾರ್ಯದರ್ಶಿ ದಿನೇಶ್ ಮೆಂಡನ್ ಅಸಮಾಧಾನ ಹೊರಹಾಕಿದ್ದಾರೆ.

    ಉಡುಪಿ (Udupi) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2024ರಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಭಗವಾಧ್ವಜ ಹಾಕುತ್ತೇವೆ. ಆಗ ಎಷ್ಟು ಲಕ್ಷ ಬಾಂಡ್‌ ಬರೆಸಿಕೊಳ್ಳುತ್ತೀರಿ..? ಎಂದು ಪ್ರಶ್ನಿಸಿದರಲ್ಲದೇ, ನಾಉ ಒಂದು ಕೋಟಿ ರೂಪಾಯಿ ಬಾಂಡ್‌ ಕೊಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಪ್ರತಿಭಟನಾ ನಿರತ ಕಾರ್ಯಕರ್ತರು ಪೊಲೀಸ್ ವಶಕ್ಕೆ – ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ

    2024ಕ್ಕೆ ಶ್ರೀರಾಮಂದಿರ (Sri Rama Mandira) ಉದ್ಘಾಟನೆಗೊಳ್ಳಲಿದೆ. ಆಗ ನಗರ ಮಾತ್ರವಲ್ಲ, ಪ್ರತಿಯೊಬ್ಬರ ಮನೆಯಲ್ಲೂ ಭಗವಾಧ್ವಜ ಹಾರಾಡುತ್ತದೆ. ಆಗ ಪೊಲೀಸ್ ಇಲಾಖೆ ಹಿಂದೂಗಳ ಮನೆ-ಮನೆಗೆ ಭೇಟಿ ನೀಡಿ 10 ಲಕ್ಷ ಅಲ್ಲ, 10 ಕೋಟಿ ರೂ. ಬಾಂಡ್ ಬರೆಸಿಕೊಂಡರೂ ನಾವು ಸಹಿ ಹಾಕಲು ಸಿದ್ಧರಿದ್ದೇವೆ. ಮುಂದೊಂದು ದಿನ ಅಖಂಡ ಭಾರತ ಕೇಸರಿಮಯ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಂಕಾ ವಿರುದ್ಧ ಮೋಸದಾಟವಾಡಿತಾ ಪಾಕ್‌? – ಮತ್ತೆ ಮತ್ತೆ ಟೀಕೆಗೆ ಗುರಿಯಾಗ್ತಿರೋದೇಕೆ?

    ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಕಿರುಕುಳ ನೀಡುತ್ತಿದೆ. ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದೆ. ವಿಹೆಚ್‌ಪಿ ಮುಖಂಡ ಶರಣ್ ಪಂಪ್ ವೆಲ್‌ಗೂ ನಿರ್ಬಂಧ ಹಾಕಿದೆ. ಹಿಂದೂಗಳನ್ನು ಕೆಣಕಿದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹೈಪರ್ ಟೆನ್ಷನ್, ಮೂಡ್ ಸ್ವಿಂಗ್ ಖಾಯಿಲೆಯಿಂದ ಬಳಲುತ್ತಿರೋ ಪತ್ನಿಯಿಂದ ಪತಿಗೆ ಕಿರುಕುಳ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸರು ನಗರದ ಹಿಂಡಲಗಾ ಗ್ರಾಂ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರಣೆಗಾಗಿ ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮತ್ತೆ ತನಿಖೆ ಚುರುಕುಗೊಳಿಸಿದೆ. ಸಂತೋಷ್ ಪಾಟೀಲ್ ಮನೆಯನ್ನು ನಾಗೇಶ್ ಮನ್ನೋಳಕರ್, ಗ್ರಾ.ಪಂ.ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಜಿಪಿಎ ಮಾಡಿಸಿಕೊಂಡಿದ್ದರು. ಇದನ್ನೂ ಓದಿ: ಭಾರತಕ್ಕೆ ಆಧ್ಯಾತ್ಮಿಕ ಪ್ರಯಾಣ – ಪ್ರಧಾನಿ ಮೋದಿ ಹೊಗಳಿದ ಡ್ವಿಟ್ ಹೊವಾರ್ಡ್

    ಜಿಪಿಎ ಮಾಡಿಸಿಕೊಂಡಿದ್ದೇಕೆ? ಜಿಪಿಎ ಮಾಡಿಸಿಕೊಂಡು ಎಷ್ಟು ಹಣ ಕೊಟ್ಟಿದ್ದರು? 108 ಕಾಮಗಾರಿ ಆರಂಭಿಸಲು ಹೇಳಿದ್ದು ಯಾರು? ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಉಡುಪಿ ಪೊಲೀಸರು ನಾಗೇಶ್ ಮನ್ನೋಳಕರ್ ಮೊಬೈಲ್‍ನ್ನು ಅನಾಲಿಸಿಸ್‍ಗೆ ಕಳಿಸಿದ್ದಾರೆ. ಹಿಂಡಲಗಾ ಗ್ರಾ.ಪಂ 35 ಸದಸ್ಯರಿಗೂ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬ ಸದಸ್ಯರನ್ನು ಪ್ರತ್ಯೇಕವಾಗಿ ಒನ್ ಟು ಒನ್ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.  ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

    ನಿಮ್ಮ ವಾರ್ಡ್‍ನಲ್ಲಿ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದಾರಾ? ಕಾಮಗಾರಿ ಮಾಡಿದ್ರೆ ಎಷ್ಟು ವೆಚ್ಚದಲ್ಲಿ ಕಾಮಗಾರಿ ಮಾಡಿದ್ದಾರೆ? ಯಾವ ಅನುದಾನದಲ್ಲಿ ಕಾಮಗಾರಿ ಮಾಡುತ್ತಿರುವುದಾಗಿ ಹೇಳಿದ್ದರು. ಸಂತೋಷ ಪಾಟೀಲ್‍ರವರೇ ಕಾಮಗಾರಿ ಮಾಡಿದ್ದಾರೋ? ಉಪಗುತ್ತಿಗೆದಾರರು ಮಾಡಿದ್ದಾರೋ? ಹೀಗೆ ಎಲ್ಲ ಮಾಹಿತಿ ಪಡೆದು ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

    ಗ್ರಾ.ಪಂ. ಮಹಿಳಾ ಸದಸ್ಯರ ವಿಚಾರಣೆಗೆ ಮಹಿಳಾ ಪೇದೆಗಳ ನಿಯೋಜನೆ ಮಾಡಲಾಗಿದೆ. ಸಂತೋಷ್ ಪಾಟೀಲ್‍ನಿಂದ ಉಪ ಗುತ್ತಿಗೆ ಪಡೆದ 12 ಉಪಗುತ್ತಿಗೆದಾರರಿಂದಲೂ ಮಾಹಿತಿ ಸಂಗ್ರಹಿಸಲಿದ್ದಾರೆ. ಉಪಗುತ್ತಿಗೆ ಪಡೆದು ಕಾಮಗಾರಿ ಮಾಡಿದ ವೆಚ್ಚ, ಕಾಮಗಾರಿಗೆ ಸಾಮಗ್ರಿ ಖರೀದಿಸಿದ್ದ ರಶೀದಿ ಸೇರಿ ಎಲ್ಲ ದಾಖಲೆ ನೀಡುವಂತೆಯೂ ಸೂಚನೆ ನೀಡಲಾಗಿದೆ.

  • ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

    ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

    ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

    ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.