Tag: Udupi Sri Krishna matha

  • ಉಡುಪಿ ಕಡೆಗೋಲು ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

    ಉಡುಪಿ ಕಡೆಗೋಲು ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

    ಉಡುಪಿ: ಶ್ರೀಕೃಷ್ಣ ಮಠಕ್ಕೆ (Udupi Sri Krishna Matha) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭೇಟಿ ನೀಡಿ, ಕಡೆಗೋಲು ಶ್ರೀಕೃಷ್ಣ ದೇವರ ದರ್ಶನ ಪಡೆದರು.

    ಪತ್ನಿ ಜ್ಯೋತಿ ಜೋಶಿ ಜೊತೆ ಕೃಷ್ಣಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್ ಜೋಶಿಗೆ ಗೌರವ ಸಮರ್ಪಿಸಲಾಯಿತು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾದರು. ಮಠದಲ್ಲೇ ಅನ್ನಪ್ರಸಾದ ಸ್ವೀಕಾರಿಸಿದರು.

    pralhad joshi udupi krishna matha 1

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರವಾಗಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಅಧಿಕಾರಿಗಳು ಆರೋಪಿಗೆ ಎಸ್ಕಾರ್ಟ್ ಕೊಟ್ಟಿದ್ದಾರೆ. ಪ್ರೋಟೊಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೆ ಬಿಟ್ಟಿದ್ದಾರೆ. ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರು ಕೇಳಿಬರುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೊದಲು ಸಿಐಡಿ ತನಿಖೆಗೆ ಕೊಟ್ಟರು. ರಾಮಚಂದ್ರ ರಾವ್ ಡಿಜಿಐ ಆಗಿರುವುದರಿಂದ ಅಡಿಷನಲ್ ಚೀಫ್ ಸೆಕ್ರೆಟರಿಗೆ ಕೊಟ್ಟಿದ್ದೇವೆ ಎಂದರು. ಕಸ್ಟಮ್ ತಪ್ಪಿಸಿ ಪ್ರೋಟೊಕಾಲ್ ಮೂಲಕ ಹೇಗೆ ಕರೆತರಲಾಯಿತು? ಭಾರತ ಸರ್ಕಾರದ ಇಂಟೆಲಿಜೆನ್ಸ್ ಬರುವವರೆಗೆ ನಿಮ್ಮ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು? ಈ ಥರದ ಹಲವಾರು ಪ್ರಶ್ನೆಗಳಿವೆ. ಈ ಥರದ ದುಡ್ಡು ಬಂಗಾರಗಳು ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆಯಾಗುತ್ತದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

    ರೂಪಾಯಿ ಚಿಹ್ನೆ ನಿರಾಕರಿಸಿದ ಡಿಎಂಕೆ ಸಿಎಂ ಸ್ಟಾಲಿನ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿ ಮಾಡಿರುವುದು ದುರ್ದೈವವೇ ಸರಿ. ಇದು ರಾಷ್ಟ್ರೀಯ ಹಿತಾಸಕ್ತಿಯ ವಿಚಾರ. ರೂಪಾಯಿ ಸಿಂಬಲ್ ಮೋದಿ ಮಾಡಿದ್ದಾ? ಬಿಜೆಪಿ ಮಾಡಿದ್ದಾ? ಕಾಂಗ್ರೆಸ್ ಸರ್ಕಾರ ಇರುವಾಗ ಆಗಿದ್ದಲ್ವಾ? ಇವರೆಲ್ಲ ಆಗ ಮಂತ್ರಿಗಳಾಗಿದ್ದರು. ಎ.ರಾಜ, ದಯಾನಿಧಿ ಮಾರನ್, ಎಲ್ಲರೂ ಸರ್ಕಾರದಲ್ಲಿದ್ದರು. ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ? ಕಾಂಗ್ರೆಸ್‌ನ ಚಿದಂಬರA ವಿತ್ತ ಸಚಿವರಾಗಿದ್ದರು. ಹಾಗಾದ್ರೆ ಸಿಂಬಲ್ ಅನ್ನು ಮಾಡಿದ್ದು ಯಾರು? ಕಾಂಗ್ರೆಸ್ ಮತ್ತು ಅವರ ಸ್ನೇಹಿತ ಪಕ್ಷಗಳು ರಾಜಕೀಯವನ್ನು ಈ ಮಟ್ಟಕ್ಕೆ ತೆಗೆದುಕೊಂಡು ಹೋಗಿವೆ. ತಥಾಕಥಿತ ಇಂಡಿ ಘಟಬಂಧನ್ ಮಾಡೋದೇ ಹೀಗೆ. ನೀವು ಮಾಡಿದ ಸಿಂಬಲ್‌ಗೆ ನಮ್ಮ ಅಭ್ಯಂತರ ಏನೂ ಇರಲಿಲ್ಲ. ಈ ಚಿಹ್ನೆಯನ್ನು ಡಿಸೈನ್ ಮಾಡಿದ್ದು ಕೂಡ ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಕಿಡಿಕಾರಿದರು.

    ಡಿಎಂಕೆ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಈ ರೀತಿ ಮಾತನಾಡುತ್ತೀರಿ. ರೂಪಾಯಿ ಬದಲಿಸುತ್ತೀರಿ. ತ್ರಿಭಾಷಾ ಸೂತ್ರ ಮಾಡಿರೋದು ಯಾರು? ನೆಹರೂ ಕಾಲದಿಂದ ಇದೆ. ಹೊಸ ಎನ್‌ಇಪಿಯಲ್ಲಿ ತ್ರಿಭಾಷಾ ಸೂತ್ರ ಮಾಡಲು ಹೇಳಿದ್ದೇವೆ. ನಾವು ಹಿಂದಿ ಇರಬೇಕು ಅಂತ ಹೇಳಿದ್ದೇವೆವಾ? ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿ ವಂಚನೆ ಮಾಡಿ ತಮ್ಮ ವೈಫಲ್ಯತೆಯನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಟೀಕಿಸಿದರು.

  • ಉಡುಪಿ ಕೃಷ್ಣಮಠಕ್ಕೆ ಮಾಲಾಶ್ರೀ, ಪುತ್ರಿ ಆರಾಧನಾ ಭೇಟಿ

    ಉಡುಪಿ ಕೃಷ್ಣಮಠಕ್ಕೆ ಮಾಲಾಶ್ರೀ, ಪುತ್ರಿ ಆರಾಧನಾ ಭೇಟಿ

    ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯೆ ಮಾಲಾಶ್ರೀ (Malashree), ಉಡುಪಿ ಶ್ರೀಕೃಷ್ಣ ಮಠಕ್ಕೆ (Udupi Sri Krishna Matha) ಶುಕ್ರವಾರ ಭೇಟಿ ನೀಡಿದರು.

    ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು. ಇದನ್ನೂ ಓದಿ: ಸಿಎಂ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಆಗುವ ಆಸೆಯಿದೆ: ಸತೀಶ್ ಜಾರಕಿಹೊಳಿ ಇಂಗಿತ

    ಈ ಪರ್ಯಾಯದಲ್ಲಿ ಕೋಟಿಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

    ಕಾಟೇರಾ ಸಿನಿಮಾದ ಸಕ್ಸಸ್ ನಂತರ ನಟಿ ಆರಾಧನಾ ಚಿತ್ರರಂಗದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ. ಕಾಟೇರಾ ಸಿನಿಮಾದಲ್ಲಿ ನಟ ದರ್ಶನ್ ಜೊತೆಗೆ ನಾಯಕಿಯಾಗಿ ಆರಾಧನಾ ನಟಿಸಿದ್ದರು. ಇದನ್ನೂ ಓದಿ: ಒಳ್ಳೆಯ ರಾಜಕಾರಣದ ಬಗ್ಗೆ ಮಾನ ಮರ್ಯಾದೆ ಇರುವವರ ಬಳಿ ಪ್ರಶ್ನೆ ಕೇಳಿ – ಯತ್ನಾಳ್ ಟಾಂಗ್

  • ಕೃಷ್ಣ ಮಠದ ಸ್ವಾಧೀನಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್

    ಕೃಷ್ಣ ಮಠದ ಸ್ವಾಧೀನಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿತ್ತು: ಪ್ರಮೋದ್ ಮಧ್ವರಾಜ್

    ಉಡುಪಿ: ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದರು. ಈ ಸ್ಫೋಟಕ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಆಗಿದೆ. ಇದನ್ನೂ ಓದಿ: ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್

    ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ.  ಇದನ್ನೂ ಓದಿ: ಬೂಸ್ಟರ್ ಡೋಸ್ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಮೋದಿ ಸೂಚನೆ

    ಈ ವಿಷಯ ನನ್ನ ಒಳಗೇ ಇತ್ತು. ಇದನ್ನು ಹೇಳುವುದಿಲ್ಲ ಎಂದುಕೊಂಡಿದ್ದೆ. ಆದರೆ ಇವತ್ತು ಹೇಳಬೇಕಾಯಿತು ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿರುವ ಪ್ರಮೋದ್ ಮಧ್ವರಾಜ್, ಪದ್ಮ ಪ್ರಶಸ್ತಿ ನೀಡುವ ಸಂದರ್ಭ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದರು. ಆಗಲೂ ರಾಜಕೀಯ ವಲಯದಲ್ಲಿ ಚರ್ಚೆಗೆ ಈಡಾಗಿದ್ದರು. ಈಗ ಮತ್ತೆ ತಮ್ಮ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆದಕುವ ಮೂಲಕ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಟೋಕನೈಸೇಶನ್ ಜಾರಿ 6 ತಿಂಗಳು ವಿಳಂಬ: RBI