Tag: Udupi Video Case

  • ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಉಡುಪಿ ಕಾಲೇಜು ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಗುಜರಾತ್ FSLಗೆ ಮೊಬೈಲ್ ರವಾನೆ

    ಬೆಂಗಳೂರು/ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದಲ್ಲಿ (Udupi Video Case) ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾರ್ಥಿನಿಯರ ಮೊಬೈಲ್‌ ಅನ್ನು ಗುಜರಾತ್‌ನ ವಿಧಿವಿಜ್ಞಾನ ಪ್ರಯೋಗಾಲಯ (FSL)ಗೆ ರವಾನೆ ಮಾಡಲಾಗಿದೆ.

    ರಾಜ್ಯ ಎಫ್‌ಎಸ್‌ಎಲ್‌ ನಿಂದ ಮೊಬೈಲ್‌ನಲ್ಲಿ ಯಾವುದೇ ಫೋಟೋ ರಿಟ್ರೀವ್ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ತಲುಪಿಸಲಾಗಿದ್ದು, CID ತಂಡ ವರದಿಗಾಗಿ ಕಾದು ಕುಳಿತಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಸ್ಪೈ ಕ್ಯಾಮೆರಾ ಇಟ್ಟಿಲ್ಲ, ಮೊಬೈಲ್‌ನಲ್ಲಿ ಫೋಟೋ-ವೀಡಿಯೋ ಸಿಕ್ಕಿಲ್ಲ: ಖುಷ್ಬು ಸುಂದರ್

    ಉಡುಪಿ ಖಾಸಗಿ ಕಾಲೇಜೊಂದರ ಲೇಡಿಸ್‌ ಟಾಯ್ಲೆಟ್‌ನಲ್ಲಿ ವಿದ್ಯಾರ್ಥಿನಿಯರು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣ ಕೆಲ ದಿನಗಳ ಹಿಂದೆ ಬೆಳಕಿಗೆ ಬಂದಿದ್ದು, ಮೊಬೈಲ್‌ನಲ್ಲಿ ಯಾವುದೇ ವಿಡಿಯೋ, ಫೋಟೋಗಳು ಲಭ್ಯವಾಗಿಲ್ಲ. ಪೊಲೀಸರು ವಶಕ್ಕೆ ಪಡೆದಿದ್ದ ಮೊಬೈಲ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನೆ ಮಾಡಲಾಗಿತ್ತು. ಆದ್ರೆ ಈವರೆಗೆ ಯಾವುದೇ ಫಲಿತಾಂಶ ಬಂದಿಲ್ಲ. ಹಾಗಾಗಿ ಗುಜರಾತ್‌ನ ಪ್ರಯೋಗಾಲಯಕ್ಕೆ ಮೊಬೈಲ್‌ಗಳನ್ನ ರವಾನಿಸಲಾಗಿದೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ

    ಈ ನಡುವೆ ವಿದ್ಯಾರ್ಥಿನಿಯರು ಐ-ಫೋನ್ (iPhone) ಅಲ್ಲಿ ದೃಶ್ಯಾವಳಿ ಸೆರೆ ಹಿಡಿದಿದ್ರು ಎಂದೂ ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿ ಡಿಲೀಟ್ ಮಾಡಿದ್ದರೂ ಐ-ಕ್ಲೌಡ್‌ನಲ್ಲಿ ದೃಶ್ಯಾವಳಿ ಇರುತ್ತೆ. ಕೋರ್ಟ್ ನ ಅನುಮತಿ ಪಡೆದು, ಸಂಬಂಧಪಟ್ಟ ಮೊಬೈಲ್ ಕಂಪನಿಯಿಂದ ಮಾಹಿತಿ ಹೊರ ತೆಗೆಯಬಹುದು ಎಂದು ತಜ್ಞರು ಹೇಳಿದ್ದಾರೆ. ಸದ್ಯ ಮೊಬೈಲ್‌ನ ಎಫ್‌ಎಸ್‌ಎಲ್‌ ರಿಟ್ರೀವ್ ಮಾಡ್ತಾರಾ? ಮೊಬೈಲ್‌ನಲ್ಲಿ ದೃಶ್ಯಾವಳಿ ಇದ್ಯಾ? ಅನ್ನೋದು ತನಿಖೆಯ ಕುತೂಹಲ ಆಗಿದೆ. ಈಗಾಗಲೇ ಆರೋಪಿತ ಯುವತಿಯರಿಂದ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ವೀಡಿಯೋ ಚಿತ್ರೀಕರಣ ಕೇಸ್‌ – ತನಿಖಾಧಿಕಾರಿ ಬದಲಾವಣೆ

    ಉಡುಪಿ ವೀಡಿಯೋ ಚಿತ್ರೀಕರಣ ಕೇಸ್‌ – ತನಿಖಾಧಿಕಾರಿ ಬದಲಾವಣೆ

    ಉಡುಪಿ: ಖಾಸಗಿ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಯನ್ನು ಉಡುಪಿ (Udupi) ಎಸ್‌ಪಿ ಬದಲಾಯಿಸಿದ್ದಾರೆ.

    ಮಲ್ಪೆ ಸರ್ಕಲ್ ಇನ್‌ಸ್ಪೆಕ್ಟರ್‌ ಮಂಜುನಾಥ್ ಗೌಡ ಈವರಿಗೆ ತನಿಖಾಧಿಕಾರಿಯಾಗಿದ್ದರು. ತನಿಖಾಧಿಕಾರಿಯನ್ನು ಬದಲು ಮಾಡಿ ಎಂದು ಎಬಿವಿಪಿಯಿಂದ ಒತ್ತಡ ಬಂದಿತ್ತು. ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾಗಿತ್ತು. ಇದನ್ನೂ ಓದಿ: ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ ಎಸ್‌ಪಿ ಅಕ್ಷಯ್ ನಿರ್ಧರಿಸಿದ್ದಾರೆ.

    ಉಡುಪಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಆಗ್ರಹಿಸಿದೆ. ಇದನ್ನೂ ಓದಿ: ಉಡುಪಿ ಕಾಲೇಜಿನ ಲೇಡಿಸ್‌ ಟಾಯ್ಲೆಟ್‌ನಲ್ಲಿ ವೀಡಿಯೋ ಚಿತ್ರೀಕರಣ ಕೇಸ್‌ – ಬೆಂಗ್ಳೂರು FSLಗೆ ಮೊಬೈಲ್ ರವಾನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತಾಡ್ತಾರೆ, ಇಡೀ ಸರ್ಕಾರಕ್ಕೆ ನಾಚಿಕೆಯಾಗ್ಬೇಕು: ಬೊಮ್ಮಾಯಿ ಕಿಡಿ

    ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತಾಡ್ತಾರೆ, ಇಡೀ ಸರ್ಕಾರಕ್ಕೆ ನಾಚಿಕೆಯಾಗ್ಬೇಕು: ಬೊಮ್ಮಾಯಿ ಕಿಡಿ

    ಹಾವೇರಿ: ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

    ಹಾವೇರಿಯಲ್ಲಿ (Haveri) ಮಾತನಾಡಿದ ಅವರು, ಹೆಣ್ಣುಮಕ್ಕಳ ಬಗ್ಗೆ ಸರ್ಕಾರಕ್ಕೆ ಏನು ಗೌರವವಿದೆ. ತನಿಖೆಗೂ ಮೊದಲೇ ಏನೂ ಆಗಿಲ್ಲ ಅಂದ್ರೆ ಪೊಲೀಸರು ಉಡುಪಿ ಪ್ರಕರಣವನ್ನ ಮುಚ್ಚಿ ಹಾಕುತ್ತಾರೆ. ಪ್ರಕರಣದಲ್ಲಿ ಏನು ಇಲ್ಲಾ ಅಂದ್ರೆ, ವಾರ ಬಿಟ್ಟು ಎಫ್‌ಐಆರ್ ಯಾಕೆ ಹಾಕಿದ್ರು? ಎಲ್ಲಾ ಮುಚ್ಚಿ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಉಡುಪಿ ವೀಡಿಯೋ ಕೇಸ್‌ – ಸಿಎಂ ವಿರುದ್ಧ ಆಕ್ಷೇಪಾರ್ಹ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

    ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿ ಪ್ರಕರಣ ಬೇರೆ. ಹೋರಾಟಗಾರರ ಪ್ರಕರಣಗಳು ಬೇರೆ. ಓಲೈಕೆ ರಾಜಕಾರಣಕ್ಕಾಗಿ ದಂಗೆಕೋರರನ್ನ ಕೈಬಿಡುತ್ತೀರಿ ಅಂದ್ರೆ ಯಾರ ಪರವಾಗಿದೆ ಸರ್ಕಾರ ಎಂದು ಅಸಮಾಧಾನ ಹೊರಹಾಕಿದರು.

    ಸೂಚ್ಯಂಕದಲ್ಲಿ ಹಾವೇರಿ ಜಿಲ್ಲೆ ಹಿಂದಿದೆ. ಸಿಎಂ ಆಡಳಿತ ಮಾಡಿರುವ ಜಿಲ್ಲೆ ಎಂದು ಸಿದ್ದರಾಮಯ್ಯ ನವರು ಹಾವೇರಿಗೆ ಬಂದಾಗ ಹೇಳಿದ್ದಾರೆ. ಹಿಂದೆ ನೀವು 2013 ರಲ್ಲಿ ಸಿಎಂ ಆಗಿದ್ದಾಗ ಹಾವೇರಿಗೆ ಬಂದಿದ್ದ ಮೆಡಿಕಲ್ ಕಾಲೇಜನ್ನು ಗದಗ ಜಿಲ್ಲೆಗೆ ಕೊಟ್ಟಿರಿ. ಹಾವೇರಿಗೆ ಇಂಜಿನಿಯರ್ ಕಾಲೇಜು, ಮೆಡಿಕಲ್ ಕಾಲೇಜು ಕೊಟ್ಟಿದ್ದು ನಾವು. ನೀರಾವರಿ ಯೋಜನೆ ಕೊಟ್ಟಿದ್ದು ನಮ್ಮ ಸರ್ಕಾರ. ಜಿಲ್ಲೆಯ ಅಭಿವೃದ್ಧಿಗೆ ನಾನು ಎಲ್ಲವನ್ನೂ ಮಾಡಿದ್ದೇನೆ. ಜಿಲ್ಲೆಯಲ್ಲಿ ನಡೆದಿರುವ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಇಲಾಖೆಯ ಕಾಮಗಾರಿಯಲ್ಲಿ ಹಗರಣ ಆಗಿದ್ರೆ, ಎಸ್‌ಐಟಿ ತನಿಖೆಗೆ ಕೊಡಲಿ. ಸದನದಲ್ಲಿಯೂ ಇದರ ಬಗ್ಗೆ ಹೇಳಿದ್ದೇನೆ. ಎಸ್‌ಐಟಿ ತನಿಖೆಗೆ ಕೊಡಲಿ, ಏನೂ ತೊಂದರೆಯಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಮೊದಲ ದಿನದಿಂದಲೂ ಈ ಸರ್ಕಾರ ಗೊಂದಲದಲ್ಲಿದೆ ಎಂದು ಟೀಕಿಸಿದರು. ಇದನ್ನೂ ಓದಿ: ವೀಡಿಯೋ ಹಲವು ಬಾರಿ ಫಾರ್ವರ್ಡ್ ಆಗಿದೆ: ಯಶ್‍ಪಾಲ್ ಸುವರ್ಣ ಹೊಸ ಬಾಂಬ್

    ಶಾಸಕರು-ಮಂತ್ರಿಗಳ ನಡುವೆ ಸಮನ್ವಯ ಇಲ್ಲದಿರುವುದು ಸ್ಷಷ್ಟವಾಗಿದೆ. ತೇಪೆ ಹಚ್ಚುವ ಕೆಲಸವನ್ನು ಸಿಎಂ ಮಾಡಿದ್ದಾರೆ. ಗೊಂದಲ ಇರುವುದರಿಂದ ಮೀಟಿಂಗ್ ಮಾಡಿದ್ದಾರೆ. ಎಲ್ಲವೂ ಸರಿಯಿದ್ದಿದ್ದರೆ ಹೈಕಮಾಂಡ್ ಯಾಕೆ ಬುಲಾವ್ ಮಾಡ್ತಿತ್ತು? ನಿನ್ನೆ ಮೀಟಿಂಗ್‌ನಲ್ಲಿ ಯಾವುದಕ್ಕೂ ಪರಿಹಾರ ಸಿಕ್ಕಿಲ್ಲ. ಅನುದಾನ ಕೊಡುವುದರಲ್ಲಿ ಗೊಂದಲ, ಗ್ಯಾರಂಟಿ ಅನುಷ್ಠಾನದಲ್ಲಿ ಗೊಂದಲ, ಆಡಳಿತದಲ್ಲಿ ಗೊಂದಲ, ಸರ್ಕಾರ ಗೊಂದಲದಲ್ಲಿದೆ. ಬಹಳ ದೊಡ್ಡ ಭಿನ್ನಾಭಿಪ್ರಾಯ ಇದೆ. ಶಾಸಕರನ್ನ ಸಮಾಧಾನ ಮಾಡುವ ಕೆಲಸ ಸಿಎಂ ಮಾಡಿದ್ದಾರೆ. ಈ ಸರ್ಕಾರ ಪ್ರಾರಂಭದಿAದಲೂ ಗೊಂದಲದಲ್ಲಿದೆ. ಮತ್ತಷ್ಟು ಗೊಂದಲ ಮಾಡುತ್ತಿದೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು

    ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು

    ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯ ಖಾಸಗಿ ಕಾಲೇಜು ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ.

    ವಿವಿಧ ಸೆಕ್ಷನ್‌ಗಳಡಿ ಕಾಲೇಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 509 (ಮಹಿಳೆಯನ್ನು ಅವಮಾನಿಸುವ ಉದ್ದೇಶದಿಂದ ಮಾಡಿರುವ ಕೃತ್ಯ, 204 (ಅರಿವಿಗೆ ಬಾರದಂತೆ ವಿಡಿಯೋ ಮಾಡುವ ಕೃತ್ಯ), ಜೊತೆಗೆ ದಾಖಲೆ ನಾಶ ವಿಚಾರ, ಸಾಕ್ಷ್ಯ ನಾಶ, 175 (ಉದ್ದೇಶ ಪೂರ್ವಕವಾಗಿ ಸೂಕ್ತ ದಾಖಲೆ ನೀಡದಿರುವುದು), 34 (ಸಾಮೂಹಿಕವಾಗಿ ಮಾಡಿರುವ ಕೃತ್ಯ) ಆರೋಪದಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಚಿತ್ರೀಕರಣ – ಧ್ವನಿ ಎತ್ತಿದ ಯುವತಿಗೆ ಪೊಲೀಸರಿಂದ ಕಿರುಕುಳ ಆರೋಪ

    ಖಾಸಗಿತನಕ್ಕೆ ಧಕ್ಕೆ ಆಗುವ ವಿಡಿಯೋ ಚಿತ್ರೀಕರಣ ಆಗಿದೆ. ವಿಷಯ ತಿಳಿದು ವೀಡಿಯೋ ಡಿಲೀಟ್ ಮಾಡಿರುವುದಾಗಿ ಆಡಳಿತ ಮಂಡಳಿ ಹೇಳಿದೆ. ಇದೊಂದು ಗಂಭೀರವಾದ ಅಪರಾಧ ಕೃತ್ಯವಾಗಿದೆ. ವಿಡಿಯೋ ಮಾಡಿ ತಪ್ಪೊಪ್ಪಿಕೊಂಡಿರುವ ಬಗ್ಗೆ ಆಡಳಿತ ಮಂಡಳಿ ಹೇಳಿದೆ. ಸತ್ಯಾಸತ್ಯತೆ ಪತ್ತೆ ಹಚ್ಚುವ ಉದ್ದೇಶದಿಂದ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಲ್ಪೆ ಎಸ್‌ಐ ಸುಷ್ಮಾ ಜಿ.ಬಿ ತಿಳಿಸಿದ್ದಾರೆ.

    ಎಫ್‌ಐಆರ್‌ನಲ್ಲಿ ಏನಿದೆ?
    ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಇದರ ಅನುದಾನದ ಅಡಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ಪ್ಯಾರಾ ಮೆಡಿಕಲ್‌ಗೆ ಸಂಬಂಧಿಸಿ ಡಿಪ್ಲೊಮಾ ಮತ್ತು ಡಿಗ್ರಿ ತರಗತಿಗಳನ್ನು ನಡೆಸುತ್ತಿರುತ್ತದೆ. ಜು.20 ರಂದು ಮಧ್ಯಾಹ್ನ 12:30 ಗಂಟೆಗೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿತು. ನಾನು ಅಲ್ಲಿಗೆ ತೆರಳಿ ವಿಚಾರಿಸಿದಾಗ ನನಗೆ ತಿಳಿದು ಬಂದ ಅಂಶವೇನೆಂದರೆ, ಜು.18 ರಂದು ಮಧ್ಯಾಹ್ನ 02:30 ರಿಂದ 03:00 ಗಂಟೆಯ ಮಧ್ಯದ ಅವಧಿಯಲ್ಲಿ ಎರಡನೇ ವರ್ಷದ ಡಿಪ್ಲೊಮಾ ಇನ್ ಆಪರೇಶನ್ ಥಿಯೇಟರ್ ಕೋರ್ಸ್ ವಿದ್ಯಾರ್ಥಿನಿಯೊಬ್ಬರು ಕಾಲೇಜಿನ ಶೌಚಾಲಯಕ್ಕೆ ಹೋದರು. ಆಗ ಇತರೆ ವಿದ್ಯಾರ್ಥಿನಿಯರು ಈಕೆಯ ವಿಡಿಯೋ ಮಾಡಲು ಹೋಗಿ ಆಕಸ್ಮಿಕವಾಗಿ ಬೇರೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿದ್ದಾರೆ. ಇದನ್ನೂ ಓದಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ

    ಇದು ವಿದ್ಯಾರ್ಥಿನಿ ಗಮನಕ್ಕೆ ಬಂದ ಕೂಡಲೇ ಅವರ ಸಮಕ್ಷಮದಲ್ಲಿಯೇ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿರುತ್ತಾರೆ. ನಂತರ ಜು.19 ರಂದು ವಿದ್ಯಾರ್ಥಿನಿಯರಿಂದ ಮೂರು ಮೊಬೈಲ್‌ಗಳನ್ನು ಕಾಲೇಜು ಆಡಳಿತ ಮಂಡಳಿಯವರು ತಮ್ಮ ವಶಕ್ಕೆ ಪಡೆದುಕೊಂಡಿರುವುದಾಗಿಯೂ ತಿಳಿದು ಬಂದಿದೆ. ಆದರೆ ಈ ಘಟನೆಯ ಬಗ್ಗೆ ಪ್ರಕರಣ ದಾಖಲಿಸಲು ಯಾರೂ ಸಹ ದೂರನ್ನು ನೀಡಿರುವುದಿಲ್ಲ. ಸತ್ಯಾಂಶದ ಬಗ್ಗೆ ಸಂಪೂರ್ಣ ಮಾಹಿತಿ ಇರುವುದಿಲ್ಲ. ಜು.25 ರಂದು ಅಡಳಿತ ಮಂಡಳಿಯವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಾವು ವಿಡಿಯೋ ಮಾಡಿದ್ದೇವೆ ಎಂದು ಮಕ್ಕಳು ತಪ್ಪೊಪ್ಪಿಗೆ ನೀಡಿರುತ್ತಾರೆ. ಆ ಉದ್ದೇಶಕ್ಕೆ ಅವರನ್ನು ಅಮಾನತು ಮಾಡಿರುತ್ತೇವೆ ಎಂದು ತಿಳಿಸಿದ ಬಗ್ಗೆ ವರದಿಯಾಗಿರುತ್ತದೆ. ಇದು ನನ್ನ ಗಮನಕ್ಕೆ ಬಂದಿದ್ದು, ಇದೊಂದು ಸಂಜ್ಷೇಯ ಅಪರಾಧ ಆಗಿರುವುದರಿಂದ, ಮಹಿಳೆಯ ಮಾನ ಮತ್ತು ಗೌರವಕ್ಕೆ ಧಕ್ಕೆ ಉಂಟಾಗುವ ರೀತಿಯಲ್ಲಿ ಅವಳ ಖಾಸಗಿತನದ ವಿಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿ, ವಿಷಯ ತಿಳಿದ ಕೂಡಲೇ ಡಿಲೀಟ್ ಮಾಡಿರುವ ವಿದ್ಯಾರ್ಥಿನಿಯರ ವಿರುದ್ಧ ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ದೂರನ್ನು ನೀಡುತ್ತಿದ್ದೇನೆ. ಇದನ್ನು ಸ್ವೀಕರಿಸಿ, ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಮಲ್ಪೆ ಎಸ್‌ಐ ಸುಷ್ಮಾ ದೂರು ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]