Tag: Ugadi Fair

  • ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ – 3 ದಿನ ಬೆಟ್ಟಕ್ಕೆ ವಾಹನ ನಿಷೇಧ

    ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ – 3 ದಿನ ಬೆಟ್ಟಕ್ಕೆ ವಾಹನ ನಿಷೇಧ

    ಚಾಮರಾಜನಗರ: ಜಿಲ್ಲೆಯ ಹನೂರು (Hanuru) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ಯುಗಾದಿ ಜಾತ್ರೆ ಹಿನ್ನಲೆಯಲ್ಲಿ 3 ದಿನ ಕಾಲ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನಿಷೇಧ ಹೇರಲಾಗಿದೆ.

    ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಮಾ. 29ರಿಂದ ಮಾ. 31ರವರೆಗೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭೂಕಂಪ – 144ಕ್ಕೇರಿದ ಸಾವಿನ ಸಂಖ್ಯೆ; ತುರ್ತು ಪರಿಸ್ಥಿತಿ ಘೋಷಣೆ

    ಹನೂರು ತಾಲೂಕಿನ ಕೌದಳ್ಳಿ (Cowdalli) ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಅಮಾವಾಸ್ಯೆ ಪೂಜೆ ಹಾಗೂ ಭಾನುವಾರ ಯುಗಾದಿ ರಥೋತ್ಸವ ಹಿನ್ನಲೆ ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಧೋನಿಗೆ ಏಜ್‌ ಆಗಿದೆ ಅಂದವರ್ಯಾರು? – ಮತ್ತೆ ರಾಕೆಟ್‌ ಸ್ಪೀಡ್‌ನಲ್ಲಿ ಸ್ಟಂಪ್‌, ಸಾಲ್ಟ್‌ ಸ್ಟನ್‌!

  • ಕೊರೊನಾ ಭೀತಿ – ಮಾದಪ್ಪನ ಯುಗಾದಿ ಜಾತ್ರೆ ಸಂಭ್ರಮ ಸರಳ

    ಕೊರೊನಾ ಭೀತಿ – ಮಾದಪ್ಪನ ಯುಗಾದಿ ಜಾತ್ರೆ ಸಂಭ್ರಮ ಸರಳ

    ಚಾಮರಾಜನಗರ: ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈಗ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಯುಗಾದಿ ಜಾತ್ರೆಗೂ ಅದರ ಬಿಸಿ ತಟ್ಟಿದೆ.

    ಕೊರೊನಾ ವೈರಸ್ ಭೀತಿಯಿಂದ ಮಾದಪ್ಪನ ಯುಗಾದಿ ಜಾತ್ರೆ ಸರಳವಾಗಿ ಆಚರಣೆ ಮಾಡಲಾಗುತ್ತಿದೆ. ಇದೇ ತಿಂಗಳ 21ರಿಂದ 25ರವರೆಗೆ ನಡೆಯುವ ಮಾದಪ್ಪನ ಯುಗಾದಿ ಜಾತ್ರೆಯು, ಈ ವರ್ಷ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಸರಳವಾಗಿ ಆಚರಿಸಲು ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ನಿಶ್ಚಯಿಸಿದೆ. ಈ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಜೈವಿಭವಸ್ವಾಮಿ ಅವರು ತಿಳಿಸಿದ್ದಾರೆ.

    ಕೊಠಡಿಗಳು, ವಸತಿಗೃಹಗಳನ್ನು ಬರುವ ಭಕ್ತಾದಿಗಳಿಗೆ ಕೊಡದಿರಲು ಪ್ರಾಧಿಕಾರ ತೀರ್ಮಾನಿಸಿದ್ದು, ರಂಗಮಂದಿರ ಸಮೀಪ ಸಾವಿರಾರು ಮಂದಿ ಟೆಂಟ್ ಹಾಕುವುದಕ್ಕೂ ಬ್ರೇಕ್ ಹಾಕಲಾಗಿದೆ. ರಸ್ತೆಬದಿಯಲ್ಲಿ, ಮಾದಪ್ಪನ ಬೆಟ್ಟದ ಸಮೀಪದ ಸ್ಥಳಗಳಲ್ಲಿ ಸಹಸ್ರಾರು ಮಂದಿ ತಂಗಲು-ವಾಸ್ತವ್ಯ ಹೂಡಲು ಪ್ರಾಧಿಕಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಲಕ್ಷಾಂತರ ಮಂದಿ ಸೇರುತ್ತಿದ್ದ ಯುಗಾದಿ ಜಾತ್ರೆಗೆ ಈ ಬಾರಿ ಕೊರೊನಾ ಕರಿಛಾಯೆ ಆವರಿಸಿದ್ದು, ಪ್ರಾಧಿಕಾರದ ಆದಾಯಕ್ಕೂ ಕತ್ತರಿ ಬೀಳಲಿದೆ.