ಬೆಂಗಳೂರು: ಯುಜಿಸಿಇಟಿ-2024ರ (UGCET-2024) ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದೆ. ಶುಲ್ಕ ಪಾವತಿಸಿ ಸಂಬಂಧಪಟ್ಟ ಎಂಜಿನಿಯರಿಂಗ್ ಕಾಲೇಜುಗಳಿಗೆ ವರದಿ ಮಾಡಿಕೊಳ್ಳದ ಒಟ್ಟು 2,348 ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA), ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಪ್ರತಿಷ್ಠಿತ ಕಾಲೇಜುಗಳು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಈ ಅಭ್ಯರ್ಥಿಗಳು ವರದಿ ಮಾಡಿಕೊಳ್ಳದ ಕಾರಣ ಅವರ ನಂತರದ ಮೆರಿಟ್ ವಿದ್ಯಾರ್ಥಿಗಳಿಗೆ ಈ ಸೀಟುಗಳು ಸಿಗದೆ ಅನ್ಯಾಯ ಮಾಡಿದಂತಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.
ಈ ಅಭ್ಯರ್ಥಿಗಳ ನೋಂದಾಯಿತ ಇ-ಮೇಲ್‌ಗೆ ನೋಟಿಸ್ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ಅವರು ಸಮಜಾಯಿಸಿ ನೀಡಬೇಕು. ಇಲ್ಲದಿದ್ದರೆ, ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸೀಟು ಹಂಚಿಕೆ ನಂತರ ಶುಲ್ಕ ಕಟ್ಟದವರು, ಶುಲ್ಕ ಕಟ್ಟಿಯೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳದವರು ಹಾಗೂ ಅಪೂರ್ಣ ಶುಲ್ಕ ಕಟ್ಟಿದವರು- ಹೀಗೆ ಒಟ್ಟು ಮೂರು ವಿಭಾಗಗಳನ್ನು ಮಾಡಿಕೊಂಡು, ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿಗಳು ನೀಡುವ ಉತ್ತರ ನೋಡಿಕೊಂಡು ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ವಿವಿಧ ಕಾಲೇಜುಗಳಲ್ಲಿ ಸೀಟು ಹಂಚಿಕೆಯಾಗಿದ್ದರೂ ಒಟ್ಟು 2,208 ಮಂದಿ ಶುಲ್ಕ ಪಾವತಿಸಿಲ್ಲ. 95 ಮಂದಿ ಶುಲ್ಕ ಪಾವತಿಸಿದ್ದರೂ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜುಗಳಿಗೆ ಹೋಗಿಲ್ಲ. 45 ಮಂದಿ ಅಲ್ಪಸ್ವಲ್ಪ ಶುಲ್ಕ ಪಾವತಿಸಿದ್ದಾರೆ. ಇಷ್ಟೂ ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ತನ್ನ ಪೋರ್ಟಲ್‌ನಲ್ಲಿ ಯುಜಿಸಿಇಟಿ-2024 (UGCET 2024) ಅಭ್ಯರ್ಥಿಗಳ ಮಾಹಿತಿಯನ್ನು ಜೂನ್ 29ರಂದು ಪ್ರಕಟಿಸಿದ್ದು, ಇದರಲ್ಲಿ ಯಾವುದೇ ತಪ್ಪು ಕಂಡುಬಂದಿದ್ದರೆ ಅಂತಹ ಅಭ್ಯರ್ಥಿಗಳು ಜುಲೈ 4ರಿಂದ 6ರ ಒಳಗೆ ಇಲ್ಲಿನ ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಸರಿಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಯುಜಿಸಿಇಟಿ ಅರ್ಜಿಯಲ್ಲಿ ತಪ್ಪುಗಳನ್ನು ಎಸಗಿದ್ದರಿಂದ ವ್ಯತ್ಯಾಸಗಳಾಗಿರುವುದನ್ನು ಗಣನೆಗೆ ತೆಗೆದುಕೊಂಡು ಈ ಅಂತಿಮ ಆವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ತೇಜೋವಧೆಗೆ ಸದನ ಬಳಸಿಕೊಳ್ತಿರೋದು ಸರಿಯಲ್ಲ- ರಾಗಾ ವಿರುದ್ಧ ವಿಜಯೇಂದ್ರ ಕಿಡಿ
ಒಂದು ಲಕ್ಷಕ್ಕಿಂತ ಒಳಗಿನ ರ‍್ಯಾಂಕ್‌ನವರು ಜುಲೈ 4ರಂದು, 1.8 ಲಕ್ಷಕ್ಕಿಂತ ಒಳಗಿನ ರ‍್ಯಾಂಕ್‌ನವರು ಜುಲೈ 5ರಂದು ಹಾಗೂ 1.8 ಲಕ್ಷಕ್ಕಿಂತ ಮೇಲ್ಪಟ್ಟ ರ‍್ಯಾಂಕ್‌ನವರು ಜುಲೈ 6ರಂದು ವೆಬ್‌ಸೈಟಿನಲ್ಲಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ ಖುದ್ದು ಹಾಜರಾಗಬೇಕು ಎಂದು ವಿವರಿಸಲಾಗಿದೆ.
ಆನ್‌ಲೈನ್ ಪೋರ್ಟಲ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಲ್ಲಿ ವ್ಯತ್ಯಾಸ ಗುರುತಿಸಿರುವ ಅಭ್ಯರ್ಥಿಗಳು ಯುಜಿಸಿಇಟಿ-2024ಕ್ಕೆ ಸಲ್ಲಿಸಿದ್ದ ಅರ್ಜಿ ಪ್ರತಿ, ಪ್ರವೇಶ ಪತ್ರ, ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬರಬೇಕು ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಹೀರೋ ತುಳಸಿ ಹೆಗಡೆ ಯಕ್ಷಗಾನದಲ್ಲಿ ವಿಶ್ವ ದಾಖಲೆ
ಎಲ್ಲಾ ಮಾಹಿತಿ ಸರಿ ಇರುವವರು ಕೆಇಎಗೆ ಬರುವ ಅಗತ್ಯವಿಲ್ಲ. ಇಂತಹ ಅಭ್ಯರ್ಥಿಗಳು ಕಚೇರಿಗೆ ಬಂದು ವೃಥಾ ಸಮಯ ಹಾಗೂ ಶ್ರಮ ವ್ಯರ್ಥ ಮಾಡಿಕೊಳ್ಳಬಾರದು. ಅಂಥವರಿಗೆ ವೆರಿಫಿಕೇಶನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಸದ್ಯದಲ್ಲಿಯೇ ಕೆಇಎ ವೆಬ್‌ಸೈಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಹೆಚ್.ಪ್ರಸನ್ನ ಹೇಳಿದ್ದಾರೆ.
ಅಭ್ಯರ್ಥಿಗಳು ಅರ್ಜಿಯಲ್ಲಿ ಸಲ್ಲಿಸಿದ್ದ ವಿವರಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ವೆಬ್‌ಸರ್ವಿಸ್ ಮೂಲಕ ಪಡೆದ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಪ್ರಕಟಿಸಿ ಪರಿಶೀಲಿಸಿಕೊಳ್ಳಲು ಜೂನ್ 29ರಿಂದ ಅವಕಾಶ ನೀಡಲಾಗಿತ್ತು.
ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ ಸೇರಿದಂತೆ ಇನ್ನಿತರ ವೃತ್ತಿಪರ ಕೋರ್ಸ್ ಸೇರಲು ಬಯಸಿ, ಅಭ್ಯರ್ಥಿಗಳು ಯುಜಿಸಿಇಟಿ-2024 (UGCET-2024) ಆನ್‌ಲೈನ್ ಅರ್ಜಿಯಲ್ಲಿ ಕ್ಲೇಮ್ ಮಾಡಿದ್ದ ವಿವಿಧ ಮೀಸಲಾತಿಗಳನ್ನು ಪರಿಗಣಿಸಿ ಆನ್‌ಲೈನ್ ಮೂಲಕ ಪರಿಶೀಲನೆ ನಡೆಸಲಾಗಿದೆ. ಈ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ನಮೂದಿಸಿದ SATS (ಸ್ಯಾಟ್ಸ್) ಸಂಖ್ಯೆ ಆಧರಿಸಿ ಅಭ್ಯರ್ಥಿಗಳ ವ್ಯಾಸಂಗ, ಕನ್ನಡ ಮಾಧ್ಯಮ, ಗ್ರಾಮೀಣ ವ್ಯಾಸಂಗದ ವಿವರಗಳನ್ನು ಪರಿಶೀಲಿಸಲಾಗಿದೆ. ಅದೇ ರೀತಿಯಾಗಿ, RD (ಆರ್‌ಡಿ) ಸಂಖ್ಯೆ ಆಧರಿಸಿ ಮೀಸಲಾತಿ (ಎಸ್‌ಸಿ, ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ) 371(ಜೆ), ಧಾರ್ಮಿಕ ಅಲ್ಪಸಂಖ್ಯಾತ, ಎನ್‌ಸಿಎಲ್‌ಸಿ (Non Creamy Layer Certificate) ಮತ್ತು ಇತರೆ ಮಾಹಿತಿಯನ್ನು ಆಯಾ ಇಲಾಖೆಯ ವೆಬ್‌ಸರ್ವೀಸ್ ಮೂಲಕ ಪರಿಶೀಲಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಅಕ್ರಮ ವರ್ಗಾವಣೆ ಬಯಲಿಗೆ
ಅರ್ಹತಾ ಕಂಡಿಕೆ ಇ, ಎಫ್, ಜಿ, ಹೆಚ್ ಮತ್ತು ಒ ಕ್ಲಾಸ್ ಗಳಿಗೆ ಅನ್ವಯಿಸುವಂತೆ ಆಯಾ ಇಲಾಖೆಯವರು ಪರಿಶೀಲನೆ ನಂತರ ನೀಡಿದ ಅರ್ಹತೆಯನ್ನು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
SATS ಮತ್ತು RD ಸಂಖ್ಯೆ ಆಧರಿಸಿ ಮಾಡಲಾಗಿರುವ ಪರಿಶೀಲನೆಯ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ಲಿಂಕ್‌ನಲ್ಲಿ ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ವಿವರಗಳನ್ನು ನೋಡಬಹುದು. ವೆರಿಫಿಕೇಶನ್ ಸ್ಲಿಪ್ ಡೌನ್ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್‌ನ್ನು ಸದ್ಯದಲ್ಲಿಯೇ ಸಕ್ರಿಯಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂದಿನ ಹಂತಗಳು: ಅಭ್ಯರ್ಥಿಗಳು ಪ್ರಕಟಿಸಲಾಗುವ ವೇಳಾಪಟ್ಟಿಯ ಅನುಸಾರ ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಆದ್ಯತಾ ಕ್ರಮದಲ್ಲಿ ಆಸಕ್ತಿ ಇರುವ ಕಾಲೇಜು ಮತ್ತು ಕೋರ್ಸ್‌ಗಳ ಪಟ್ಟಿ ಮಾಡಿಕೊಳ್ಳಬೇಕು. ಮೊದಲನೇ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದ ನಂತರ ಪ್ರಾಧಿಕಾರದ ವೆಬ್‌ಸೈಟ್‌ನ ಲಿಂಕ್‌ನಲ್ಲಿ ಆಯ್ಕೆ (options) ಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಬಹುದು.
ಅರ್ಹತಾ ಕಂಡಿಕೆಗಳಾದ ಬಿ, ಸಿ, ಡಿ, ಐ, ಜೆ, ಕೆ, ಎಲ್, ಎಮ್, ಎನ್, ಜೆಡ್, ಗಳನ್ನು ನಮೂದಿಸಿರುವ ಅಭ್ಯರ್ಥಿಗಳಿಗೆ ಆಫ್‌ಲೈನ್ ಪರಿಶೀಲನೆಗೆ ಹಾಜರಾಗಲು ಪ್ರತ್ಯೇಕ ವೇಳಾಪಟ್ಟಿ ನೀಡಿ ಪರಿಶೀಲನೆ ಮಾಡಲಾಗಿರುತ್ತದೆ. ಅರ್ಹ ಅಭ್ಯರ್ಥಿಗಳಿಗೆ ವೆರಿಫಿಕೇಶನ್ ಸ್ಲಿಪ್ ನೀಡಲಾಗಿದೆ. ಈ ಅಭ್ಯರ್ಥಿಗಳು ಮೇಲಿನ ಲಿಂಕ್‌ನ್ನು ಪರಿಶೀಲಿಸಬೇಕಾಗಿಲ್ಲ. ಆಫ್‌ಲೈನ್ ಪರಿಶೀಲನೆಗೆ ಗೈರು ಹಾಜರಾಗಿರುವ ಅಭ್ಯರ್ಥಿಗಳು ಸೀಟು ಹಂಚಿಕೆಗೆ ಅರ್ಹತೆ ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಡಿಸಿಇಟಿ-2024 ಫಲಿತಾಂಶ ಪ್ರಕಟ: ಡಿಸಿಇಟಿ-24ರ ಫಲಿತಾಂಶವನ್ನು ಕೆಇಎ ಶನಿವಾರ ಮಧ್ಯಾಹ್ನ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಒಟ್ಟು 17,483 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.
ಡಿಪ್ಲೊಮಾ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಹೊಂದಿದ್ದು, ಡಿಸಿಇಟಿ ಪರೀಕ್ಷೆಗೆ ಹಾಜರಾಗಿ ರ‍್ಯಾಂಕ್ ಪ್ರಕಟವಾಗಿರದಿದ್ದರೆ ಅಂತಹ ಅಭ್ಯರ್ಥಿಗಳು ಡಿಪ್ಲೊಮಾ ಅಂಕ ಮತ್ತು ಅಂಕಪಟ್ಟಿಯನ್ನು ಪಿಡಿಎಫ್ ಫಾರ್ಮ್ಯಟ್‌ನಲ್ಲಿ ಪ್ರಾಧಿಕಾರದ ಇಮೇಲ್ keaugcet24@gmail.com ಸಲ್ಲಿಸಿದಲ್ಲಿ ಅರ್ಹತೆಯನ್ನು ಪರಿಶೀಲಿಸಿ, ನಿಯಮಾನುಸಾರ ರ‍್ಯಾಂಕ್ ನೀಡಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ ಇತಿಹಾಸದಲ್ಲಿ ಎರಡು ಬಲಿಷ್ಠ ತಂಡಗಳ ಮಧ್ಯೆ ಫೈನಲ್ ಪಂದ್ಯ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 12ನೇ ತರಗತಿಯನ್ನು ಸಿಬಿಎಸ್‌ಇ, (ಜಮ್ಮು ಮತ್ತು ಕಾಶ್ಮೀರ ಸೇರಿದಂತೆ) ಸಿಐಎಸ್‌ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡ್‌ಗಳಲ್ಲಿ 2024ರಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಮೇ 14ರಿಂದ 20ರವರೆಗೆ ಆನ್‌ಲೈನ್ ಪೋರ್ಟಲ್ ಲಿಂಕ್ ಅನ್ನು ಸಕ್ರಿಯಗೊಳಿಸಲಿದೆ.
ಈ ಮೇಲೆ ತಿಳಿಸಿದ ಎಲ್ಲಾ ಅಭ್ಯರ್ಥಿಗಳು ಮೇ 20ರ ಒಳಗೆ ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್ ಪ್ರತಿಯನ್ನು ತಪ್ಪದೇ ಅಪ್‌ಲೋಡ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಹೇಮಂತ್ ಸೊರೆನ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂ
2024ಕ್ಕಿಂತ ಹಿಂದಿನ ವರ್ಷಗಳಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿಯನ್ನು ಉತ್ತೀರ್ಣರಾಗಿರುವವರೂ ಅಂಕಗಳನ್ನು ದಾಖಲಿಸಬೇಕು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮಾವಿಗೆ ಬಿಸಿಲಿನ ಶಾಪ – ಬರೋಬ್ಬರಿ 400 ಕೋಟಿ ಮೌಲ್ಯದ ಮಾವು ನಷ್ಟ
ಅರ್ಹತಾ ಕಂಡಿಕೆ Ckause-Y ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳೂ ಸಹ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕು. ಕರ್ನಾಟಕ ದ್ವಿತೀಯ ಪಿಯುಸಿ 2024ರ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟ ಗೆದ್ದರೇ ಮರುದಿನವೇ ಜೈಲಿನಿಂದ ಹೊರಬರುವೆ: ಕೇಜ್ರಿವಾಲ್
ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024ರ ‘ನಾಟಾ’ ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಲು ಕೋರಿದೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ ಮೂವರು ನಕ್ಸಲರ ಹತ್ಯೆ