Tag: ujire

  • ಷಡ್ಯಂತ್ರ ಬಯಲಾದ ಬೆನ್ನಲ್ಲೇ ತಿಮರೋಡಿ ಮನೆಗೆ ಸುಜಾತ ಭಟ್‌ಗೆ ಇಲ್ಲ ಪ್ರವೇಶ

    ಷಡ್ಯಂತ್ರ ಬಯಲಾದ ಬೆನ್ನಲ್ಲೇ ತಿಮರೋಡಿ ಮನೆಗೆ ಸುಜಾತ ಭಟ್‌ಗೆ ಇಲ್ಲ ಪ್ರವೇಶ

    ಮಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಹೂಡಿದ ಷಡ್ಯಂತ್ರ ಬಯಲಾಗುತ್ತಿದ್ದಂತೆ ದೂರುದಾರೆ ಸುಜಾತ ಭಟ್‌ಗೆ (Sujatha Bhat) ಗೇಟ್‌ಪಾಸ್‌ ನೀಡಲಾಗಿದ್ದು ಮಹೇಶ್‌ ಶೆಟ್ಟಿ ತಿಮರೋಡಿ (Mahesh Shetty Thimarodi) ಗ್ಯಾಂಗ್‌ ಅಂತರ ಕಾಯ್ದುಕೊಂಡಿದೆ.

    ತಾವೇ ಸೃಷ್ಟಿಸಿದ ಅನನ್ಯಾ ಭಟ್‌ (Ananya Bhat) ಕಟ್ಟು ಕಥೆಯ ವಿಚಾರ ಬಯಲಾಗುತ್ತಿದ್ದಂತೆ ತಿಮರೋಡಿ ಮನೆಯಲ್ಲಿ ಸುಜಾತ ಭಟ್‌ಗೆ ಅವಕಾಶ ನಿರಾಕರಿಸಲಾಗಿದೆ.

    ಸದ್ಯ ಎಸ್‌ಐಟಿ ವಿಚಾರಣೆಗೆ ಹಾಜರಾಗುತ್ತಿರುವ ಸುಜಾತ ಭಟ್‌ ಈಗ ಉಜಿರೆಯ ಲಾಡ್ಜ್‌ನಲ್ಲಿ ತಂಗಿದ್ದು ಅಲ್ಲಿಂದ ರಿಕ್ಷಾದ ಮೂಲಕ ಬೆಳ್ತಂಗಡಿ ಠಾಣೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಬುರುಡೆ ಗ್ಯಾಂಗ್‌ ಹೇಳಿದಂತೆ ನಾನು ಮಾಡಿದ್ದೇನೆ ಎಸ್‌ಐಟಿ ಪ್ರಶ್ನೆಗಳಿಗೆ ಸುಜಾತ ಥಂಡಾ

     

    ಬುರುಡೆ ರಹಸ್ಯ ಬಯಲಾಗುವ ಮೊದಲು ಮಹೇಶ್‌ ಶೆಟ್ಟಿ ತಿಮರೋಡಿ ಕಡೆಯವರಿಗೆ ಸಂಬಂಧಿಸಿದ ಕಾರಿನಲ್ಲಿ ಸುಜಾತ ಭಟ್‌ ಆಗಮಿಸುತ್ತಿದ್ದರು. ಅಷ್ಟೇ ಅಲ್ಲದೇ ತಿಮರೋಡಿ ಮನೆಯಲ್ಲಿ ಉಳಿದುಕೊಂಡಿದ್ದರು ಮತ್ತು ಅಲ್ಲಿಯೇ ಕೆಲ ಯೂಟ್ಯೂಬ್‌ ವಾಹಿನಿಗಳಿಗೆ ಸಂದರ್ಶನ ನೀಡಿದ್ದರು. ಈಗ ಸುಳ್ಳಿನ ಕಥೆ ಬಯಲಾಗುತ್ತಿದ್ದಂತೆ ಮನೆಯಿಂದ ತಿಮರೋಡಿ ಸುಜಾತ ಭಟ್‌ಗೆ ಗೇಟ್‌ಪಾಸ್‌ ನೀಡಿದ್ದಾರೆ.

    ಉಡುಪಿ ಕೋರ್ಟ್‌ ಜಾಮೀನು ನೀಡಿದ ಬಳಿಕ ಪ್ರತಿಕ್ರಿಯಿಸಿದ್ದ ತಿಮರೋಡಿ, ಸುಜಾತ ಭಟ್‌ಗ್‌ ನಮಗೂ ಯಾವುದೇ ಸಂಬಂಧ ಇಲ್ಲ. ಅವರು ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು ಅಷ್ಟೇ. ನಮ್ಮದು ಸೌಜನ್ಯ ಪರವಾದ ಹೋರಾಟ ಎಂದು ಹೇಳಿದ್ದರು.

     

  • ಉಜಿರೆಯಲ್ಲಿ ಇದ್ದಿದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಲ್ಲಿ ಫುಟ್ಬಾಲ್ ಆಡಿಸ್ತಿದ್ದೆ – ಸಮೀರ್‌ಗೆ ಯಶ್‌ಪಾಲ್ ಸುವರ್ಣ ಎಚ್ಚರಿಕೆ

    ಉಜಿರೆಯಲ್ಲಿ ಇದ್ದಿದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಲ್ಲಿ ಫುಟ್ಬಾಲ್ ಆಡಿಸ್ತಿದ್ದೆ – ಸಮೀರ್‌ಗೆ ಯಶ್‌ಪಾಲ್ ಸುವರ್ಣ ಎಚ್ಚರಿಕೆ

    ಉಡುಪಿ: ನೀನು ಉಜಿರೆಯಲ್ಲಿ (Mangaluru) ಇದ್ದದ್ದಕ್ಕೆ ಬಚಾವಾದೆ, ಉಡುಪಿಯಲ್ಲಿ ಇದ್ದಿದ್ರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ಯೂಟ್ಯೂಬರ್ ಸಮೀರ್‌ಗೆ (Youtuber Sameer) ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಯೂಟ್ಯೂಬರ್ ಸಮೀರ್‌ಗೆ ನೇರ ಎಚ್ಚರಿಕೆ ಕೊಡುತ್ತೇನೆ. ನೀನು ಉಜಿರೆಯಲ್ಲಿ ಇದ್ದದ್ದಕ್ಕೆ ಬಚಾವಾದೆ. ಉಡುಪಿಯಲ್ಲಿ ಇರುತ್ತಿದ್ದರೆ ಮಲ್ಪೆ ಬೀಚಿನಲ್ಲಿ ಫುಟ್ಬಾಲ್ ಆಡಿಸುತ್ತಿದ್ದೆ. ನಿನ್ನನ್ನು ನಾವು ಫುಟ್ಬಾಲ್ ಮಾಡಿ ಆಡಿಸುತ್ತಿದ್ದೆವು. ಅಧಿವೇಶನ ಮುಗಿದ ಮೇಲೆ ಬರುತ್ತೇನೆ. ಸಮೀರ್ ಬಗ್ಗೆ ಒಳ್ಳೆಯ ಪ್ಲ್ಯಾನ್‌ ಮಾಡಿ, ಆತನನ್ನು ರಾಜ್ಯದಿಂದ ಓಡಿಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್‌ನ ಒತ್ತಡದಿಂದ ಆತ ಬಂಧನವಾಗಿಲ್ಲ. ನಮ್ಮ ಸರ್ಕಾರ ಇರಲಿ, ಇರದೇ ಇರಲಿ. ನಮ್ಮದು ಹಿಂದೂ ಸಮಾಜದ ಪರ ವಾದ. ನಮ್ಮದು ಹಿಂದುತ್ವದ ಫ್ಯಾಕ್ಟರಿ, ಹಿಂದು ಸಮಾಜವನ್ನು ಒಡೆಯಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಸುಜಾತಾ ಭಟ್‌ರನ್ನು ಮೊದಲು ಪೊಲೀಸರು ವಶಕ್ಕೆ ಪಡೆದ ವಿಚಾರಣೆ ನಡೆಸಬೇಕು: ವಾಸಂತಿ ಸಹೋದರ ಒತ್ತಾಯ

    ಅಣ್ಣಪ್ಪ ಪಂಜುರ್ಲಿ ದೈವದ ಅನುಗ್ರಹವಾಗಿದೆ. ದೇವರ ಮಧ್ಯಸ್ಥಿಕೆಯಲ್ಲಿ ಎಲ್ಲ ಇತ್ಯರ್ಥ ಆಗುತ್ತದೆ. ಬಿಜೆಪಿ ಹೋರಾಟ ಒಂದು ಭಾಗ ಮಾತ್ರ. ಅಣ್ಣಪ್ಪ ಪಂಜುರ್ಲಿ ಎಲ್ಲರ ಮನೆಯ ದೇವರು. ಮೊಗವೀರ ಸಮುದಾಯದ ಪ್ರಾರ್ಥನೆ ಫಲ ಕೊಟ್ಟಿದೆ. ಕೋಟ್ಯಂತರ ದೈವಭಕ್ತರ ಪ್ರಾರ್ಥನೆ ಫಲಿಸಿದೆ. ಪರಶುರಾಮನ ಸೃಷ್ಟಿಯಲ್ಲಿ ಧರ್ಮಕ್ಕೆ ಗೆಲುವಾಗಿದೆ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಕಣ್ಣು ಬಿಟ್ಟಿದ್ದಾರೆ. ಉಡುಪಿ ಕೃಷ್ಣ ಮುಖ್ಯಪ್ರಾಣ ಅನ್ಯಾಯಕ್ಕೆ ಶಿಕ್ಷೆ ಕೊಟ್ಟಿದ್ದಾರೆ ಎಂದು ಹೇಳಿದರು.

    ಹಿಂದೂ ಧರ್ಮದ ಷಡ್ಯಂತ್ರಕ್ಕೆ ಫಲಿತಾಂಶ ಹೊರಬೀಳಬೇಕಿದೆ. ಹಣಕಾಸಿನ ವಿಚಾರದಲ್ಲಿ ಧರ್ಮದ ಅವಹೇಳನಕ್ಕೆ ಶಿಕ್ಷೆ ಪ್ರಾಪ್ತಿಯಾಗಿದೆ. ಹಿಂದೂ ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಂಡವರು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಿಂದೆ ಬ್ರಿಟಿಷರ ದಬ್ಬಾಳಿಕೆ ನಡೆಯುತ್ತಿತ್ತು. ಈಗ ಕಮ್ಯುನಿಸ್ಟರ ಮಾನಸಿಕತೆ ದಬ್ಬಾಳಿಕೆ ಮಾಡುತ್ತಿದೆ. ಮತಾಂತರದ ದೊಡ್ಡ ಷಡ್ಯಂತ್ರವಿದು, ಸಂಸದ ಶಶಿಕಾಂತ್ ಸೆಂಥಿಲ್ ವಿರುದ್ಧ ಸಹ ವಿಚಾರಣೆಯಾಗಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭ

  • ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಜ್ ಕಾರು – ಚಾಲಕ ಸಾವು

    ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಜ್ ಕಾರು – ಚಾಲಕ ಸಾವು

    ಮಂಗಳೂರು: ನಿಯಂತ್ರಣ ಕಳೆದುಕೊಂಡ ಬೆಂಜ್ ಕಾರೊಂದು (Benz Car) ಅಪಘಾತಕ್ಕೀಡಾಗಿ ಚಾಲಕ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿಯ ಉಜಿರೆಯಲ್ಲಿ (Ujire)ನಡೆದಿದೆ.

    ಅಪಘಾತದಲ್ಲಿ ಕಾರು ಚಾಲಕ ಉಜಿರೆ ನಿವಾಸಿ ಪ್ರಜ್ವಲ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಉರುಳಿ ಬಿದ್ದಿತ್ತು. ಅಪಘಾತದ ತೀವ್ರತೆಗೆ ಐಷಾರಾಮಿ ಬೆಂಜ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್‌ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ

    ತಕ್ಷಣ ಸ್ಥಳೀಯರು ಪ್ರಜ್ವಲ್‌ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 13ನೇ ವಯಸ್ಸಿಗೆ ಬಾಲಕಿ ಗರ್ಭಿಣಿ – ಹೊಟ್ಟೆನೋವಿನಿಂದ ಸಾವು

  • 14 ವರ್ಷದ ಮಗ ಆತ್ಮಹತ್ಯೆ ಮಾಡ್ಕೊಂಡ ಬೇಸರದಲ್ಲಿ ತಂದೆಯೂ ಸೂಸೈಡ್

    14 ವರ್ಷದ ಮಗ ಆತ್ಮಹತ್ಯೆ ಮಾಡ್ಕೊಂಡ ಬೇಸರದಲ್ಲಿ ತಂದೆಯೂ ಸೂಸೈಡ್

    ಮಂಗಳೂರು: ತನ್ನ 14 ವರ್ಷದ ಮಗ (Son Suicide) ಆತ್ಮಹತ್ಯೆ ಮಾಡಿಕೊಂಡ ಬೇಸರದಲ್ಲಿ ತಂದೆಯೂ (Father Suicide) ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ.

    ಮೃತರನ್ನು ಪೆರ್ಲ ನಿವಾಸಿ ಯೊಗೀಶ್ ಪೂಜಾರಿ (41) ಎಂದು ಗುರುತಿಸಲಾಗಿದೆ. ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಯೊಗೀಶ್ ಪೂಜಾರಿ ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಮನೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ – 8 ಮಂದಿಗೆ ಗಂಭೀರ ಗಾಯ

    ಇದೇ ತಿಂಗಳ ಜನವರಿ 4 ರಂದು ಪುತ್ರ ಯಕ್ಷಿತ್ (14) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಹೀಗಾಗಿ ಮಗನ ಉತ್ತರ ಕ್ರಿಯೆ ಜನವರಿ 14 ರಂದು ಭಾನುವಾರ ನಡೆದಿತ್ತು. ಇದಾದ ಬಳಿಕ ಯೋಗೀಶ್ ಪೂಜಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದ ಭಾರತೀಯ ಮೂಲದ ವಿವೇಕ್‌ – ಟ್ರಂಪ್‌ಗೆ ಬೆಂಬಲ

    ಯಕ್ಷಿತ್, ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಕೆಲದಿನಗಳ ಹಿಂದೆ ಯಕ್ಷಿತ್ ಹಾಗೂ ಆತನ 6 ವರ್ಷದ ತಮ್ಮನ ಜೊತೆ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಯಕ್ಷಿತ್ ಹೊಟ್ಟೆ ಮೇಲೆ ತಮ್ಮ ಕಚ್ಚಿ ಗಾಯ ಮಾಡಿದ್ದ. ಈ ವಿಚಾರದಲ್ಲಿ ನೊಂದು ತಮ್ಮನ ಎದುರೇ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ. ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಮನೆಯಲ್ಲಿ ತಾಯಿಯ ಸೀರೆಯನ್ನು ತೆಗೆದುಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.


    ಈ ಎರಡೂ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಪತ್ನಿಯ ಕಣ್ಣು, ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಕಟುಕ ಪತಿ!

    ಪತ್ನಿಯ ಕಣ್ಣು, ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದ ಕಟುಕ ಪತಿ!

    – ಮಗಳ ತಲೆ ಭಾಗ, ಕಣ್ಣಿಗೆ ಹೊಡೆದ ಆರೋಪಿ

    ಮಂಗಳೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿಯನ್ನು ಶಿಶಿಲ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟ ಕೊರೊನಾ ವೈರಸ್- ಗೋವಾದಿಂದ ಬಂದಿದ್ದ ಯುವಕನಲ್ಲಿ ಸೋಂಕು ಪತ್ತೆ

    ಕಂಠಪೂರ್ತಿ ಕುಡಿದು ಬಂದಿರುವ ಸುರೇಶ್ ಗೌಡ, ಪತ್ನಿ ಜೊತೆ ಜಗಳ ತೆಗೆದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ತಾರಕಕ್ಕೇರಿ ಸುರೇಶ್ ಗೌಡನು ತನ್ನ ಪತ್ನಿಯ ಕಣ್ಣು ಹಾಗೂ ಕೆನ್ನೆಯನ್ನ ಕಚ್ಚಿ ಮಾಂಸ ಹೊರ ತೆಗೆದಿದ್ದಾನೆ. ಬಳಿಕ ಕೋಲಿನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿದ್ದಾನೆ. ಪತಿಯ ಹಲ್ಲೆಯಿಂದಾಗಿ ಪತ್ನಿಯ ಎಡ ಕಣ್ಣಿಗೆ ಸಂಪೂರ್ಣ ಹಾನಿಯಾಗಿದೆ.

    ಇತ್ತ ತಾಯಿಯ ಮೇಲಿನ ಹಲ್ಲೆ ಬಿಡಿಸಲು ಬಂದ ಮಗಳ ತಲೆ ಭಾಗ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಈ ವೇಳೆ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿ ನೆರೆ ಹೊರೆಯವರಿಗೆ ವಿಚಾರ ತಿಳಿಸಿದಳು. ಈ ಹೊತ್ತಲ್ಲೇ ಜೀವ ಉಳಿಸಿಕೊಳ್ಳಲು ಓಡಿ ಹೋಗಿ ಇಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ.

    ನೆರೆ ಹೊರೆಯವರು ಧಾಮಿಸುತ್ತಿದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ವಿಪರೀತ ಗಾಯಗೊಂಡ ತಾಯಿ-ಮಗಳಿಗೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmasthala Police Station) ಪ್ರಕರಣ ದಾಖಲಾಗಿದೆ.

  • ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ವಿದ್ಯಾರ್ಥಿ ದುರ್ಮರಣ

    ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ ವಿದ್ಯಾರ್ಥಿ ದುರ್ಮರಣ

    ಮಂಗಳೂರು: ಸವಾರರಿಗೆ ಹೆಲ್ಮೆಟ್ ಎಷ್ಟು ಇಂಪಾರ್ಟೆಂಟೋ ಬೈಕ್ ಸ್ಟ್ಯಾಂಡ್ (Bike Stand) ತೆಗೆದು ಚಲಾಯಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಯಾಕೆಂದರೆ ಇಲ್ಲೊಬ್ಬ ವಿದ್ಯಾರ್ಥಿ ಬೈಕ್ ಸ್ಟ್ಯಾಂಡ್ ತೆಗೆಯದೇ ಚಲಾಯಿಸಿ ಭಾರೀ ಅನಾಹುತವೊಂದು ನಡೆದು ಹೋಗಿದೆ.

    ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆಯಲ್ಲಿ (Ujire) ನಡೆದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿಯಾಗಿರುವ ದೀಕ್ಷಿತ್, ಉಜಿರೆ ಎಸ್‍ಡಿಎಂ ಕಾಲೇಜಿನ ವಿದ್ಯಾರ್ಥಿ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬೆಳ್ತಂಗಡಿಯ ಉಜಿರೆ ರಸ್ತೆಯಲ್ಲಿ ದೀಕ್ಷಿತ್, ಬೈಕ್ ಸ್ಟ್ಯಾಂಡ್ ತೆಗೆಯದೇ ಬೈಕ್ ಚಲಾಯಿಸಿದ್ದಾನೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೀಕ್ಷಿತ್ ಗಂಭೀರ ಗಾಯಗೊಂಡಿದ್ದಾನೆ. ಕೂಡಲೇ ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ದೀಕ್ಷಿತ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ – ಕಾರ್ಮಿಕ ಸಾವು

    ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರತಿಭಟನಾ ಸಭೆಯ ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

    ಪ್ರತಿಭಟನಾ ಸಭೆಯ ವೇದಿಕೆ ಹತ್ತಲು ಯತ್ನಿಸಿದ ಸೌಜನ್ಯ ತಾಯಿಯನ್ನು ತಡೆದ ಪೊಲೀಸರು

    ಮಂಗಳೂರು: ಧರ್ಮಸ್ಥಳದ (Dharamsthala) ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ (Sowjanya Case) ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮಾಡಲಾಗುತ್ತಿರುವ ವಿಚಾರದ ಹಿನ್ನೆಲೆ ಪ್ರತಿಭಟನಾ ಸಮಾವೇಶ ಇಂದು ನಡೆಯಿತು. ಈ ಪ್ರತಿಭಟನಾ ಸಭೆಯಲ್ಲಿ ವೇದಿಕೆ ಹತ್ತಲು ಪ್ರಯತ್ನಿಸಿದ ಸೌಜನ್ಯ ತಾಯಿ ಕುಸುಮಾವತಿಯನ್ನು ಪೊಲೀಸರು ತಡೆದಿದ್ದಾರೆ.

    ಉಜಿರೆಯಲ್ಲಿ (Ujire) ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಭಾಗದ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರತಿಭಟನಾ ಸಮಾವೇಶಕ್ಕೆ ಭಕ್ತರು ಆಗಮಿಸಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೈಕಾರ ಕೂಗಿದ್ದಾರೆ.

    ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ಜಸ್ಟೀಸ್ ಫಾಸ್ ಸೌಜನ್ಯ ಎಂದು ಭಿತ್ತಿಪತ್ರವನ್ನು ಹಿಡಿದು ತಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕೆಂದು ಆಗ್ರಹಿಸಿ ವೇದಿಕೆ ಹತ್ತಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕುಸುಮಾವತಿ, ನಾವು ಒಂದು ನ್ಯಾಯ ಕೇಳೋದಕ್ಕಾಗಿ ಬಂದಿದ್ದೆವು. ಮಗಳ ಸಾವಿಗೆ ಸಂಬಂಧಿಸಿದಂತೆ ಹೋರಾಟ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬಂದಿದ್ದೆವು. ಆದರೆ ನಮ್ಮನ್ನು ಸ್ಟೇಜ್ ಹತ್ತಲು ಬಿಡಲಿಲ್ಲ. ಮಾತ್ರವಲ್ಲದೇ ನನ್ನ ಮಗನ ಕಾಲರ್ ಅನ್ನು ಹಿಡಿದು ಇಳಿಸಿದರು. ಇದು ಧರ್ಮಸ್ಥಳದ ಧರ್ಮನಾ ಎಂದು ಪ್ರಶ್ನಿಸಿದರು.

    ಸೌಜನ್ಯ ಪರವಾಗಿ ಅವರು ಹೋರಾಟ ಮಾಡುತ್ತಿಲ್ಲ. ಇದೆಲ್ಲಾ ನೆಪವಷ್ಟೇ. ನನ್ನ ಮಗಳ ಹೆಸರನ್ನು ಬಳಸಿ ಹೋರಾಟ ಮಾಡುತ್ತಿದ್ದಾರೆ ಹೊರತು ನನ್ನ ಮಗಳ ಪರವಾಗಿ ಅಲ್ಲ. ನಾವು ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರುತನಿಖೆ ಆಗಲೇ ಬೇಕು. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ಆಗಬೇಕು ಎಂದು ಕುಸುಮಾವತಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟೋರಿ ಆಫ್ ಸೌಜನ್ಯಾ ಟೈಟಲ್ ನೋಂದಣಿ: ಸಿನಿಮಾ ರೂಪದಲ್ಲಿ ಸೌಜನ್ಯಾ ಕೇಸ್?

    ಸ್ಟೋರಿ ಆಫ್ ಸೌಜನ್ಯಾ ಟೈಟಲ್ ನೋಂದಣಿ: ಸಿನಿಮಾ ರೂಪದಲ್ಲಿ ಸೌಜನ್ಯಾ ಕೇಸ್?

    ಜಿರೆ (Ujire) ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾಳ (Soujanya) ಅತ್ಯಾಚಾರ ಮತ್ತು ಕೊಲೆ ಕೇಸ್ ಇದೀಗ ಸಿನಿಮಾ ರೂಪದಲ್ಲಿ ಬರಲಿದೆಯಾ? ಅಂಥದ್ದೊಂದು ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸೌಜನ್ಯ ಕೇಸ್ ಇಟ್ಟುಕೊಂಡು ಸಿನಿಮಾ ಮಾಡಲು ಲವ ಎನ್ನುವವರು ಹೊರಟಿದ್ದು, ಈಗಾಗಲೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ಗಾಗಿ ಅವರು ಅರ್ಜಿ ಸಲ್ಲಿಸಿದ್ದಾರೆ.

    ಜಿ.ಕೆ. ವೆಂಚರ್ಸ್ ಬ್ಯಾನರ್ ಅಡಿಯಲ್ಲಿ ಟೈಟಲ್ ಗಾಗಿ ಅರ್ಜಿ ಸಲ್ಲಿಕೆಯಾಗಿದ್ದು, ‘ಸ್ಟೋರಿ ಆಫ್ ಸೌಜನ್ಯಾ’ (Story of Soujanya) ಶೀರ್ಷಿಕೆಯನ್ನು ಕೊಡುವಂತೆ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ಸಲ್ಲಿಕೆಯಾದಂತೆ ಇದೊಂದು ಸಾಮಾಜಿಕ ಕಥಾ ಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ.

    2018ರಲ್ಲಿ ಕಾಲೇಜಿನಿಂದ ಮನೆಗೆ ಬರುತ್ತಿದ್ದ ಸೌಜನ್ಯಾ ಅಕ್ಟೋಬರ್ 9ರಂದು ಅಪಹರಣಕ್ಕೆ ಒಳಗಾಗುತ್ತಾಳೆ. ಅದೇ ದಿನ ರಾತ್ರಿಯೇ ಆಕೆ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಾಗುತ್ತದೆ. ಅಕ್ಟೋಬರ್ 10ರಂದು ಈ ಬಾಲಕಿ ಶವವಾಗಿ ಧರ್ಮಸ್ಥಳದ (Dharmasthala) ಮಣ್ಣಸಂಖದಲ್ಲಿ ಪತ್ತೆಯಾಗುತ್ತಾಳೆ. ಅತ್ಯಾಚಾರದ ನಂತರ ಈಕೆಯನ್ನು ಕೊಲೆ ಮಾಡಲಾಗಿದೆ ಎಂದು ನಂತರ ಪೊಲೀಸ್ ತನಿಖೆಯಿಂದ ತಿಳಿದು ಬರುತ್ತದೆ.

     

    ಮೊನ್ನೆಯಷ್ಟೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದ ಸಂತೋಷ್ ರಾವ್ ಎನ್ನುವವರನ್ನು ಮಾನ್ಯ ನ್ಯಾಯಾಲಯ ನಿರ್ದೋಷಿ ಎಂದು ಆದೇಶ ನೀಡಿದೆ. ಹಾಗಾಗಿ ಮತ್ತೆ ಸೌಜನ್ಯಾಳ ಸಾವು ಮುನ್ನೆಲೆಗೆ ಬಂದಿದೆ. ಈ ಪ್ರಕರಣವನ್ನು ಮರುತನಿಖೆ ನಡೆಸಬೇಕು ಎಂದು ಆಕೆಯ ಕುಟುಂಬಸ್ಥರೂ ಆಗ್ರಹಿಸಿದ್ದಾರೆ. ಈ ಬೆನ್ನಲ್ಲೇ ಸೌಜನ್ಯಾಳ ಕಥೆಯನ್ನು ಸಿನಿಮಾ ಮಾಡಲು ಚಿತ್ರತಂಡ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆ ಎಂದ ಪತಿ ಶವವಾಗಿ ಪತ್ತೆ

    ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕ್‌ನಲ್ಲಿ ಬರುತ್ತೇನೆ ಎಂದ ಪತಿ ಶವವಾಗಿ ಪತ್ತೆ

    ಚಿಕ್ಕಮಗಳೂರು: ಹೆಂಡತಿಯನ್ನು ಬಸ್ಸು ಹತ್ತಿಸಿ, ನಾನು ಹಿಂದೆ ಬೈಕಿನಲ್ಲಿ ಬರುತ್ತೇನೆ ಎಂದು ಹೇಳಿದ ಪತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ತಾಲೂಕಿನ ಹೆಬ್ಬರಿಗೆ ಗ್ರಾಮದ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದ ದಿಲೀಪ್ (40) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ (Dharmasthala) ಮುಡಿ ತೆಗೆಯುವ ಕೆಲಸ ಮಾಡುತ್ತಿದ್ದ ದಿಲೀಪ್ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಜಿರೆಯಲ್ಲಿ (Ujire) ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟಿದ್ದು, ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗುವಂತೆ ಹೇಳಿದ್ದಾರೆ. ತಾನು ಮಳೆ ನಿಂತ ಮೇಲೆ ಬೈಕಿನಲ್ಲಿ ಬರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ 

    ಮಳೆ ನಿಂತ ಮೇಲೆ ಬೈಕಿನಲ್ಲಿ ಹೊರಟ ದಿಲೀಪ್ ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಸಮೀಪದ ರಸ್ತೆ ಬದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ. ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಿಲೀಪ್ ಧರ್ಮಸ್ಥಳದಲ್ಲಿ ನೂತನವಾಗಿ ಮನೆಯೊಂದನ್ನು ನಿರ್ಮಿಸಿದ್ದರು. ಮನೆಯ ಗೃಹಪ್ರವೇಶ ಮೇ 5ರಂದು ನಡೆಯಲಿದ್ದು, ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಅಲ್ಲಿಂದ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌ 

    ದಿಲೀಪ್ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಲಿಫ್ಟ್‌ಗೆ ಸಿಲುಕಿ 26ರ ಯುವಕ ಸಾವು

  • ಅವಳಿ ಸಹೋದರಿಯರ ವಿಶೇಷ ಸಾಧನೆ – ಇಬ್ಬರಿಗೂ ಸಮಾನ ಅಂಕ

    ಅವಳಿ ಸಹೋದರಿಯರ ವಿಶೇಷ ಸಾಧನೆ – ಇಬ್ಬರಿಗೂ ಸಮಾನ ಅಂಕ

    ಮಂಗಳೂರು: ಅವಳಿ ಸಹೋದರಿಯರಿಬ್ಬರು (Twin Sisters) ಪಿಯುಸಿ (PUC) ಪರೀಕ್ಷೆಯಲ್ಲಿ ಸಮಾನವಾದ ಅಂಕಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆಗೈದಿದ್ದಲ್ಲದೇ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದ್ದಾರೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಗಂಡಿ (Belthangady) ತಾಲೂಕಿನ ನೆರಿಯ ಗ್ರಾಮದ ಅವಳಿ ಸಹೋದರಿಯರಾದ ಸ್ಪಂದನ ಮತ್ತು ಸ್ಪರ್ಶ ಪಿಯುಸಿ ಪರೀಕ್ಷೆಯಲ್ಲಿ 600ರಲ್ಲಿ 594 ಅಂಕ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಉಜಿರೆಯ (Ujire) ಎಸ್‌ಡಿಎಂ  ಕಾಲೇಜಿನ (SDM College) ದ್ವಿತೀಯ ಪಿಯುಸಿ ವಾಣಿಜ್ಯ (Commerce) ವಿಭಾಗದ ವಿದ್ಯಾರ್ಥಿನಿಯರಾದ ಇವರು ಸಮಾನವಾಗಿ 594 ಅಂಕ ಪಡೆದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಇದನ್ನೂ ಓದಿ: ಪಿಯು ಪರೀಕ್ಷಾ ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್‌, ಉಡುಪಿ ಸೆಕೆಂಡ್‌ 

    ಸ್ಪಂದನ ಮತ್ತು ಸ್ಪರ್ಶ ಇಂಗ್ಲಿಷ್ (English) ಮತ್ತು ಅರ್ಥಶಾಸ್ತ್ರ (Economics) ವಿಷಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಷಯಗಳಲ್ಲಿ ಸಮಾನವಾದ ಅಂಕಗಳನ್ನು ಪಡೆದಿದ್ದಾರೆ. ಸ್ಪಂದನ ಇಂಗ್ಲಿಷ್‌ನಲ್ಲಿ 98 ಹಾಗೂ ಸ್ಪರ್ಶ 97 ಅಂಕಗಳನ್ನು ಪಡೆದಿದ್ದಾರೆ. ಅರ್ಥಶಾಸ್ತ್ರದಲ್ಲಿ ಸ್ಪಂದನ 98 ಅಂಕಗಳನ್ನು ಪಡೆದಿದ್ದರೆ, ಸ್ಪರ್ಶ 99 ಅಂಕಗಳನ್ನು ಪಡೆದಿದ್ದಾರೆ. ಹಿಂದಿಯಲ್ಲಿ (Hindi) ಇಬ್ಬರೂ 98 ಅಂಕಗಳನ್ನು ಪಡೆದು ಉಳಿದೆಲ್ಲಾ ವಿಷಯಗಳಲ್ಲಿ 100 ಅಂಕಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: 2nd PUC Result: ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಅನನ್ಯಾ ರಾಜ್ಯಕ್ಕೆ ಪ್ರಥಮ ಸ್ಥಾನ