Tag: ujire

  • ದೂರು ನೀಡಿದ್ದಕ್ಕೆ ಯುವತಿಯರಿಬ್ಬರ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

    ದೂರು ನೀಡಿದ್ದಕ್ಕೆ ಯುವತಿಯರಿಬ್ಬರ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ

    ಮಂಗಳೂರು: ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದೂರು ನೀಡಿದ್ರು ಎಂದು ಕಾಮುಕನೊರ್ವ ಯುವತಿಯರಿಬ್ಬರ ಅತ್ಯಾಚಾರ ಮಾಡಿ ಕೊಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಯಲ್ಲಿ ನಡೆದಿದೆ. ಈ ಮೊದಲು ಸಹ ಆರೋಪಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದನು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಗಂಡಿಬಾಗಿಲು ನಿವಾಸಿ ಥಾಮಸ್ ವಿರುದ್ಧ ಕೆಲ ದಿನಗಳ ಹಿಂದೆ ಅಕ್ಕ-ತಂಗಿಯರಿಬ್ಬರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು. ಇದರಿಂದ ಕೋಪಗೊಂಡಿದ್ದ ಥಾಮಸ್ ಸೇಡು ತೀರಿಸಿಕೊಳ್ಳಲು ಯತ್ನಿಸಿದ್ದಾನೆ.

    ಉಜಿರೆ ಪಟ್ಟಣದಿಂದ ಕೆಲಸ ಮುಗಿಸಿ ಯುವತಿಯರು ಮನೆ ಕಡೆಗೆ ಆಟೋ ಹತ್ತಿದ್ದಾರೆ. ಆರೋಪಿ ಥಾಮಸ್ ಪಿಕ್ ಅಪ್ ವಾಹನ ಮೂಲಕ ಯುವತಿಯರಿದ್ದ ಆಟೋ ವನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಆಟೋ ಗಂಡಿಬಾಗಿಲು ಬಳಿ ಬರುತ್ತಿದ್ದಂತೆಯೇ ಥಾಮಸ್ ಪಿಕ್ ಅಪ್ ವಾಹನವನ್ನು ಆಟೋಗೆ ಡಿಕ್ಕಿ ಹೊಡೆಸಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಯುವತಿಯರಿಬ್ಬರೂ ಆಟೋದಿಂದ ಹೊರಗೆ ಬಿದ್ದಿದ್ದು, ಥಾಮಸ್ ಹುಡುಗಿಯರಿಗೆ ಮನಬಂದಂತೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆಟೋ ಚಾಲಕ ಪೊಲೀಸರಿಗೆ ಕರೆ ಮಾಡುತ್ತಿದ್ದಂತೆಯೇ ಥಾಮಸ್ ಪರಾರಿಯಾಗಿದ್ದಾನೆ.

    ಸಂತ್ರಸ್ತ ಯುವತಿಯರಿಬ್ಬರು ಧರ್ಮಸ್ಥಳ ಠಾಣೆಯಲ್ಲಿ ಅತ್ಯಾಚಾರ ಯತ್ನ ಮತ್ತು ಕೊಲೆ ಯತ್ನ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಥಾಮಸ್ ಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆಟೋ ಚಾಲಕನಿಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಆಟೋ ಚಾಲಕನ ಬಳಿ ವಿಚಾರಿಸಿಕೊಂಡಿದ್ದಾರೆ.

  • ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

    ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

    ಮಂಗಳೂರು: ತುಳುವನ್ನು 8 ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿದ್ದಾರೆ.

    ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುತ್ತಿರೋ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದು, ಈ ವೇಳೆ ತುಳು ಭಾಷೆಯಲ್ಲಿಯೇ ಪ್ರಧಾನಿಯವರನ್ನು ಸ್ವಾಗತಿಸಿದ ವೀರೇಂದ್ರ ಹೆಗ್ಗಡೆಯವರು ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

    ಬಳಿಕ ಸಂಸದ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರು ಮೈಸೂರು ಪೇಟ ತೊಡಿಸಿ, ಧರ್ಮಾಧಿಕಾರಿಯ ಪರವಾಗಿ ಪ್ರಾದೇಶಿಕ ಕ್ರೀಡೆ ಕಂಬಳದ ನೊಗದ ಮಾದರಿಯನ್ನು ಸಮರ್ಪಣೆ ಮಾಡಿದ್ರು. ವೀರೇಂದ್ರ ಹೆಗಡೆ ಅವರು ಪ್ರಧಾನಿಯನ್ನು ಶಾಲು ಹೊದಿಸಿ ಸನ್ಮಾನಿಸಿ, ಓಂ ನಮೋ ಶ್ರೀ ಮಂಜುನಾಥಃ ನಮೋ ನಮಃ ಎಂದು ಹೇಳುವ ಮೂಲಕ ಸ್ವಾಗತ ಕೋರಿದ್ರು.

    ಉಜಿರೆಯ ಜನ್ ಧನ್ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದು, ಡಾ. ವಿರೇಂದ್ರ ಹೆಗಡೆ ಅವರ 50 ನೇ ವರ್ಷದ ಧರ್ಮಾಧಿಕಾರಿ ಪೂರೈಸಿದ ಅವಧಿಯಲ್ಲಿ ಆಗಮಿಸಿರುವ ಮೋದಿ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆಯವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದ್ರು.

    ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯವರು ಬಳಿಕ ಅಲ್ಲಿಂದ ನೇರವಾಗಿ ಧರ್ಮಸ್ಥಳಕ್ಕೆ ಬಂದು ಅಲ್ಲಿ ಶ್ರೀ ದೇವರ ದರ್ಶನ ಪಡೆದು, ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸೇವಿಸಿದ್ದಾರೆ. ಈ ವೇಳೆ ಪ್ರಧಾನಿ ಜೊತೆ ವೀರೇಂದ್ರ ಹೆಗ್ಗಡೆಯವರು ಮಾತನಾಡುತ್ತಾ ಆರೋಗ್ಯದ ಬಗ್ಗೆ ಗಮನಹರಿಸುವಂತೆ ಕೇಳಿಕೊಂಡ್ರು. ಇದಕ್ಕುತ್ತರಿಸಿದ ಪ್ರಧಾನಿ ನನಗೆ ಕೆಲಸ ಮಾಡುವುದು ಅಭ್ಯಾಸವಾಗಿದೆ ಅಂತ ಹೇಳಿದ್ರು.

    ನಂತರ ಪ್ರಧಾನಿಯವರು ಅಲ್ಲಿಂದ ಉಜಿರೆಯ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದತ್ತ ಆಗಮಿಸುತ್ತಿದ್ದಂತೆ ನೆರೆದಿದ್ದ ಜನರ ಮೋದಿ…ಮೋದಿ… ಎಂದು ಹರ್ಷದ್ಗೊರ ಎಲ್ಲಡೆಯಿಂದ ಕೇಳಿ ಬಂತು.