Tag: Ujjain

  • Nag Panchami: ವರ್ಷಕೊಮ್ಮೆ ನಾಗಪಂಚಮಿಯಂದು ಮಾತ್ರ ತೆರೆಯುತ್ತೆ ನಾಗಚಂದ್ರೇಶ್ವರ ದೇವಾಲಯ

    Nag Panchami: ವರ್ಷಕೊಮ್ಮೆ ನಾಗಪಂಚಮಿಯಂದು ಮಾತ್ರ ತೆರೆಯುತ್ತೆ ನಾಗಚಂದ್ರೇಶ್ವರ ದೇವಾಲಯ

    ದೇಶಾದ್ಯಂತ ನಾಗಪಂಚಮಿ (Nagara Panchami) ಹಬ್ಬದ ಸಂಭ್ರಮ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ನಾಗಪಂಚಮಿ ಆಚರಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಸರ್ಪಗಳನ್ನು ಶಿವನ ಆಭರಣ ಎಂದು ಪರಿಗಣಿಸಲಾಗಿದೆ. ನಾಗದೇವರಿಗೆ ಭಕ್ತರು ಹಾಲೆರೆದು, ಪೂಜೆ-ಪುನಸ್ಕಾರಗಳ ಮೂಲಕ ಹಬ್ಬ ಆಚರಿಸುತ್ತಾರೆ. ಶಿವಲಿಂಗ ಪೂಜೆ ಕೂಡ ನೆರವೇಸುತ್ತಾರೆ. ದೇವಾಲಯಗಳಿಗೆ ಭೇಟಿ ನೀಡಿ ಭಕ್ತಿ-ಭಾವ ಮೆರೆಯುತ್ತಾರೆ. ಭಾರತದಲ್ಲಿ ಅನೇಕ ಸರ್ಪ ದೇವಾಲಯಗಳಿವೆ. ಅವುಗಳಲ್ಲಿ ಒಂದು ಉಜ್ಜಯಿನಿಯ (Ujjain) ನಾಗಚಂದ್ರೇಶ್ವರ ದೇವಾಲಯ (Nagchandreshwar Temple). ಇದು ಪ್ರಸಿದ್ಧ ಮಹಾಕಾಳ ದೇವಾಲಯದ ಮೂರನೇ ಮಹಡಿಯಲ್ಲಿದೆ. ಈ ದೇವಾಲಯವು ವರ್ಷಕ್ಕೊಮ್ಮೆ ನಾಗಪಂಚಮಿಯಂದು ಮಾತ್ರ 24 ಗಂಟೆಗಳ ಕಾಲ ತೆರೆದಿರುತ್ತದೆ.

    ಈ ದೇವಾಲಯದಲ್ಲಿ ನಾಗರಾಜ ತಕ್ಷಕ ಸ್ವತಃ (ನಾಗರ ರಾಜ) ವಾಸಿಸುತ್ತಾನೆ ಎಂದು ನಂಬಲಾಗಿದೆ. ನಾಗಚಂದ್ರೇಶ್ವರ ದೇವಾಲಯದಲ್ಲಿ 11 ನೇ ಶತಮಾನದ ಅದ್ಭುತ ಪ್ರತಿಮೆಯಿದೆ. ಇದರಲ್ಲಿ ಶಿವ ಮತ್ತು ಪಾರ್ವತಿಯರು ಹೆಡೆ ಬಿಚ್ಚಿದ ಹಾವಿನ ಆಸನದ ಮೇಲೆ ಕುಳಿತಿರುವ ಭಂಗಿ ಇದೆ. ಈ ಪ್ರತಿಮೆಯನ್ನು ನೇಪಾಳದಿಂದ ಇಲ್ಲಿಗೆ ತರಲಾಗಿದೆ ಎಂದು ಹೇಳಲಾಗುತ್ತದೆ. ಉಜ್ಜಯಿನಿ ಹೊರತುಪಡಿಸಿ, ಜಗತ್ತಿನಲ್ಲಿ ಎಲ್ಲಿಯೂ ಅಂತಹ ಪ್ರತಿಮೆ ಇಲ್ಲ. ಅದರ ದರ್ಶನಕ್ಕಾಗಿ, ಸೋಮವಾರ ರಾತ್ರಿ 12 ಗಂಟೆಗೆ ದೇವಾಲಯದ ದ್ವಾರಗಳನ್ನು ತೆರೆಯಲಾಗುತ್ತದೆ. ಮಂಗಳವಾರ ಮಧ್ಯರಾತ್ರಿ 12 ಗಂಟೆಗೆ, ದೇವಾಲಯದ ಬಾಗಿಲುಗಳನ್ನು ಮತ್ತೆ ಒಂದು ವರ್ಷದವರೆಗೆ ಮುಚ್ಚಲಾಗುತ್ತದೆ. ಇದನ್ನೂ ಓದಿ: ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?

    ಸರ್ಪ ರಾಜ ತಕ್ಷಕನು ತೀವ್ರ ತಪಸ್ಸು ಮಾಡಿದನು. ಭೋಲೆನಾಥನು ಅವನ ತಪಸ್ಸಿನಿಂದ ಸಂತಸಗೊಂಡು ಹಾವುಗಳ ರಾಜ ತಕ್ಷಕ ನಾಗನಿಗೆ ಅಮರತ್ವದ ವರವನ್ನು ನೀಡಿದನು. ಅಂದಿನಿಂದ ತಕ್ಷಕ ರಾಜನು ಭಗವಂತನ ಸಹವಾಸದಲ್ಲಿ ವಾಸಿಸಲು ಪ್ರಾರಂಭಿಸಿದನು ಎಂದು ನಂಬಲಾಗಿದೆ. ಆದರೆ ಮಹಾಕಾಳ ಕಾಡಿನಲ್ಲಿ ವಾಸಿಸುವ ಮೊದಲು, ಅವನ ಏಕಾಂತತೆಯಲ್ಲಿ ಯಾವುದೇ ತೊಂದರೆ ಉಂಟಾಗಬಾರದು ಎಂಬುದು ಅವನ ಉದ್ದೇಶವಾಗಿತ್ತು. ಆದ್ದರಿಂದ ಅವನು ನಾಗಪಂಚಮಿಯ ದಿನದಂದು ಮಾತ್ರ ದರ್ಶನಕ್ಕೆ ಲಭ್ಯವಿರುತ್ತಾನೆ ಎಂಬುದು ನಂಬಿಕೆಯಾಗಿದೆ.

    4 ಲಕ್ಷ ಭಕ್ತರು ಭೇಟಿ
    ಮಂಗಳವಾರ ನಾಗಪಂಚಮಿಯ ಸಂದರ್ಭದಲ್ಲಿ 4 ಲಕ್ಷಕ್ಕೂ ಹೆಚ್ಚು ಭಕ್ತರು ನಾಗಚಂದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಧ್ಯರಾತ್ರಿ 12 ಗಂಟೆಗೆ ದೇವಾಲಯದ ದ್ವಾರಗಳು ತೆರೆದವು. ಭಕ್ತರು ಪೂಜೆ ಸಲ್ಲಿಸಿದ್ದರು. ಇಂದು ರಾತ್ರಿ 12 ಗಂಟೆಯವರೆಗೆ ದೇವಾಲಯವು ದರ್ಶನಕ್ಕಾಗಿ ತೆರೆದಿರುತ್ತದೆ. ಮಂಗಳವಾರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸುಮಾರು 4 ಲಕ್ಷ ಭಕ್ತರು ಇಲ್ಲಿ ದರ್ಶನ ಪಡೆದಿದ್ದಾರೆ. ಇಂದು ಮಧ್ಯರಾತ್ರಿ 12 ಗಂಟೆಗೆ ಬಾಗಿಲು ಮುಚ್ಚುವ ಹೊತ್ತಿಗೆ ಕನಿಷ್ಠ 10 ಲಕ್ಷ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ. ಇದನ್ನೂ ಓದಿ: ಮಲೆನಾಡು – ಪ್ರಕೃತಿಯ ಆರಾಧನೆಯ ಭಾಗವಾಗಿ ನಾಗರ ಪಂಚಮಿ

    ಶಿವ, ಪಾರ್ವತಿ ಮತ್ತು ಸರ್ಪ ದೇವರು ಒಟ್ಟಿಗೆ ಕುಳಿತಿರುವ ದೇವಾಲಯದ ವಿಶಿಷ್ಟ ವಿಗ್ರಹವು ಭಕ್ತರಿಗೆ ಪ್ರಬಲ ಆಕರ್ಷಣೆಯ ಕೇಂದ್ರವಾಗಿದೆ. ದೇವಾಲಯದಲ್ಲಿ ಪೂಜೆ ಮಾಡುವುದರಿಂದ ಜಾತಕದಲ್ಲಿನ ಕಾಳಸರ್ಪ ದೋಷ ಮತ್ತು ಇತರ ಸರ್ಪ ದೋಷಗಳಿಂದ ಪರಿಹಾರ ಸಿಗುತ್ತದೆ ಎಂದು ನಂಬಲಾಗಿದೆ.

  • ಉಜ್ಜಯಿನಿಯ ರಸ್ತೆ ಬದಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ – ವೀಡಿಯೋ ವೈರಲ್

    – ಆರೋಪಿಯೊಬ್ಬನನ್ನು ಬಂಧಿಸಿದ ಪೊಲೀಸರು

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿ (Ujjain) ನಗರದಲ್ಲಿ ಮಹಿಳೆ ಮೇಲೆ ಅತ್ಯಾಚಾರವಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸದಾ ಜನ ಜಂಗುಳಿಯಿಂದ ಕೂಡಿರುವ ಉಜ್ಜಯಿನಿಯ ರಸ್ತೆಯ ಪಕ್ಕದಲ್ಲಿಯೇ ಮಹಿಳೆಯೊಬ್ಬಳ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ದಾರಿಹೋಕರು ತಮ್ಮ ಮೊಬೈಲ್‌ನಲ್ಲಿ ಇದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಕೆಲವೇ ಕ್ಷಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂತ ಕೇಳಿದ್ದ ರೇಣುಕಾ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

    ಈ ಘಟನೆಯೂ ಬುಧವಾರ (ಸೆ.4) ಮಧ್ಯಾಹ್ನ ಕೊಯ್ಲಾ ಪಾಠಕ್ ಎನ್ನುವ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲೋಕೇಶ್ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.

    ಲೋಕೇಶ್ ಆ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಮಹಿಳೆಯು ಮದ್ಯ ಸೇವನೆ ಮಾಡಿ ಅಮಲಿನಲ್ಲಿರುವುದನ್ನು ಕಂಡ ಆತ ಆಕೆಯನ್ನು ರಸ್ತೆ ಪಕ್ಕಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಬೆದರಿಸಿದ್ದಾನೆ. ಇದನ್ನು ದಾರಿಹೋಕರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಪ್ಲಾಸ್ಟಿಕ್ ಆಯುವವರು ಅವತ್ತಿನ ದಿವಸ ಲೋಕೇಶ್‌ನನ್ನು ಆ ಪ್ರದೇಶದಲ್ಲಿ ನೋಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ವೀಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಲೋಕೇಶ್‌ನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

    ಘಟನೆಯನ್ನು ವಿರೋಧಿಸಿದ ಕಾಂಗ್ರೆಸ್ ಪಕ್ಷ ಬಿಜೆಪಿಯ ಆಡಳಿತದಲ್ಲಿ ಸಂಪೂರ್ಣವಾಗಿ ಕಾನೂನು ಹದಗೆಟ್ಟಿದೆ ಎಂದು ದೂರಿದೆ. ಉಜ್ಜಯಿನಿ ನಗರ ಒಂದು ಪವಿತ್ರ ಸ್ಥಳ. ಇಂತಹ ಘಟನೆಯಿಂದಾಗಿ ನಾಚಿಕೆಯಾಗಬೇಕು. ಇಂತಹ ಹೀನ ಘಟನೆಯಿಂದ ನಾಚಿಕೆಯಾಗಿ ಅಧಿಕಾರದಲ್ಲಿರುವವರು ರಾಜೀನಾಮೆ ನೀಡಬೇಕು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

    ಉಜ್ಜಯಿನಿಯಂತಹ ಪವಿತ್ರ ಸ್ಥಳದಲ್ಲಿ, ಜನನಿಬಿಡ ಪ್ರದೇಶದಲ್ಲಿ ಅತ್ಯಾಚಾರ ನಡೆಯುತ್ತಿದೆ. ಇದರಿಂದ ತಿಳಿಯುವುದೆನೆಂದರೆ ಈ ಸರ್ಕಾರದಲ್ಲಿ ಕಾನೂನು ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗೊತ್ತಾಗುತ್ತದೆ. ಮುಖ್ಯಮಂತ್ರಿಗಳ ತವರಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಜೀತು ಪಟ್ವಾರಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಗರ್ಲ್‍ಫ್ರೆಂಡ್ ಭೇಟಿಗೆ ಬಂದು ಪೊಲೀಸರ ಬಲೆಗೆ ಬಿದ್ದ ನಕ್ಸಲ

  • ಮದುವೆಯಾಗ್ತೀನಿ ಅಂತಾ ಎಣ್ಣೆ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುರುಳ

    – ಕೃತ್ಯದ ವೀಡಿಯೋ ವೈರಲ್‌; ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ

    ಭೋಪಾಲ್: ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ನಡೆದಿದೆ.

    ರಸ್ತೆಯಲ್ಲೇ ದುರುಳ ಮಹಿಳೆ ಮೇಲೆ ಅತ್ಯಾಚಾರ ನಡೆಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ. ಲೈಂಗಿಕ ದೌರ್ಜನ್ಯ ಎಸಗುವ ಮುನ್ನ ವ್ಯಕ್ತಿ ಕುಡಿದಿದ್ದ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಲೆ ಅಬ್ಬರಕ್ಕೆ ಸಮುದ್ರದಲ್ಲಿ ಸಿಲುಕಿಕೊಂಡ ಮಲ್ಪೆ ಬೋಟ್

    ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ ವ್ಯಕ್ತಿ ಆಕೆಗೆ ಮದ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರು ತಿಳಿಸಿದರೆ ಕೊಲೆ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದ.

    ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರ ಅಪರಾಧದ ಬಗ್ಗೆ ತಿಳಿದುಬಂದಿದ್ದು, ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇವ್ನನ್ನು ಉಳಿಸಬೇಡಿ, ಕೊಂದು ಎಸೆದು ಬಿಡಿ – ಶೆಡ್‌ನಲ್ಲಿ ಪವಿತ್ರಾ ಹೇಳಿದ್ದೇನು?

    ಆರೋಪಿಯು ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದ. ಆಕೆ ಮದ್ಯ ಸೇವಿಸುವಂತೆ ಮಾಡಿ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

  • ಹೋಳಿ ಹಬ್ಬದಂದು ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಾರೀ ಅಗ್ನಿ ದುರಂತ – 14 ಅರ್ಚಕರಿಗೆ ಗಾಯ

    ಹೋಳಿ ಹಬ್ಬದಂದು ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಭಾರೀ ಅಗ್ನಿ ದುರಂತ – 14 ಅರ್ಚಕರಿಗೆ ಗಾಯ

    – ಗಯಾಳುಗಳು ಶೀಘ್ರ ಗುಣಮುಖರಾಗಲಿ: ಪ್ರಾರ್ಥಿಸಿದ ಅಮಿತ್‌ ಶಾ

    ಚಂಡೀಗಢ: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ (Mahakaleswar Temple) ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಅರ್ಚಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹೋಳಿ ಹಬ್ಬದ ಪ್ರಯುಕ್ತ ದೇವಾಲಯದ ಗರ್ಭಗುಡಿಯಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಹೋಳಿ ಆಚರಿಸಲು ಗುಲಾಲ್ ಎಸೆಯಲಾಗುತ್ತಿತ್ತು. ಈ ವೇಳೆ ಕೆಲ ಗುಲಾಲ್‌, ಕರ್ಪೂರವನ್ನು ಹೊಂದಿದ್ದ ಪೂಜೆಯ ತಾಲಿಯ ಮೇಲೆ ಬಿದ್ದವು. ಕರ್ಪೂರ ನೆಲದ ಮೇಲೆ ಬಿದ್ದು ಬೆಂಕಿ ವ್ಯಾಪಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಗೆ ಸೇರಿದ್ದ ದುಬಾರಿ ಕಾರು ಕಳ್ಳತನ!

    14 ಪುರೋಹಿತರಿಗೆ ಸುಟ್ಟ ಗಾಯಗಳಾಗಿವೆ. ಕೆಲವರು ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟು ಮಂದಿ ಇಂದೋರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಮೃಣಾಲ್ ಮೀನಾ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅನುಕೂಲ್ ಜೈನ್ ಅವರು ತನಿಖೆ ನಡೆಸಿ ವರದಿ ನೀಡುತ್ತಾರೆ. ಮೂರು ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ತಿಳಿದುಬಂದಿದೆ.

    ಕೆಲವು ವಿವಿಐಪಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಜನರು ದೇವಾಲಯದಲ್ಲಿ ಉಪಸ್ಥಿತರಿದ್ದರು. ಆದರೆ ಯಾವುದೇ ಭಕ್ತರು ಗಾಯಗೊಂಡಿಲ್ಲ. ದೇವಾಲಯದ ಸಿಬ್ಬಂದಿ ಮತ್ತು ಸಂಜಯ್ ಗುರುಗಳ ಮುಖ್ಯ ಅರ್ಚಕ ಸೇರಿದಂತೆ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವಾಣಿಜ್ಯೋದ್ಯಮಿ ಪಲ್ಲವಿ ಡೆಂಪೊಗೆ ಟಿಕೆಟ್‌ – ಗೋವಾ ಇತಿಹಾಸದಲ್ಲೇ ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಮೊದಲ ಮಹಿಳೆ

    ಘಟನೆ ದುರದೃಷ್ಟಕರ. ಆದರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕೆಲವು ಅರ್ಚಕರು ಗಾಯಗೊಂಡಿದ್ದಾರೆ. ಅವರನ್ನು ಇಂದೋರ್ ಮತ್ತು ಉಜ್ಜಯಿನಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾನು ಅಲ್ಲಿಗೆ ಹೋಗುತ್ತಿದ್ದೇನೆ. ನಾನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

    ಘಟನೆ ಸಂಬಂಧ ವಿಷಾದ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸ್ಥಳೀಯ ಆಡಳಿತವು ಗಾಯಾಳುಗಳಿಗೆ ನೆರವು ಮತ್ತು ಚಿಕಿತ್ಸೆ ನೀಡುತ್ತಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಬಾಬಾ ಮಹಾಕಾಳನಲ್ಲಿ ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಕೈತಪ್ಪಿದ ಟಿಕೆಟ್ – ಕೀಟನಾಶಕ ಸೇವಿಸಿ ತಮಿಳುನಾಡಿನ ಸಂಸದ ಆತ್ಮಹತ್ಯೆಗೆ ಯತ್ನ

  • ಉಜ್ಜಯಿನಿಯಲ್ಲಿ ಸ್ಟಾರ್ ಸಿಸ್ಟರ್ಸ್: ದೇವರ ಮಹಿಮೆ ಅಪಾರ ಎಂದ ನಟಿಯರು

    ಉಜ್ಜಯಿನಿಯಲ್ಲಿ ಸ್ಟಾರ್ ಸಿಸ್ಟರ್ಸ್: ದೇವರ ಮಹಿಮೆ ಅಪಾರ ಎಂದ ನಟಿಯರು

    ಸ್ಟಾರ್ ಸಹೋದರಿಯರು ಎಂದೇ ಹೆಸರುವಾಸಿಯಾಗಿರುವ ಸೋನು ಗೌಡ (Sonu Gowda) ಮತ್ತು ಅವರ ಸಹೋದರಿ ನೇಹಾ ಗೌಡ (Neha Gowda) ಶೂಟಿಂಗ್ ನಿಂದ ಕೊಂಚ ಬ್ರೇಕ್ ತೆಗೆದುಕೊಂಡು ಟೆಂಪ್ ರನ್ ಮಾಡುತ್ತಿದ್ದಾರೆ. ಸದ್ಯ ಅವರು ಉಜ್ಜಯಿನಿ (Ujjain) ಮತ್ತು ಓಂಕಾರೇಶ್ವರ ಯಾತ್ರೆಯಲ್ಲಿದ್ದು, ದೇವರ ದರ್ಶನ ಪಡೆದಿದ್ದಾರೆ.

    ಕುಟುಂಬ ಸಮೇತ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಸಹೋದರಿಯರು, ಆ ಧಾರ್ಮಿಕ ಕ್ಷೇತ್ರಗಳ ಮಹಿಮೆಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಜೊತೆಗೆ ಅಲ್ಲಿನ ಫೋಟೋಗಳನ್ನೂ ಅವರು ಶೇರ್ ಮಾಡಿದ್ದಾರೆ. ಓಂಕಾರೇಶ್ವರ ಮತ್ತು ಮಹಾಕಾಳನ ಮಹಿಮೆಯನ್ನು ಕೊಂಡಾಡಿದ್ದಾರೆ.

     

    ದೇವರ ಸನ್ನಿಧಾನದಲ್ಲಿ ವಿಶ್ವಾಸ, ಶಾಂತಿ, ನಂಬಿಕೆಗಳು ಇಮ್ಮಡಿಯಾಗುತ್ತವೆ ಎಂದು ಸೋನು ಗೌಡ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ನಂಬಿಕೆಗಳ ಬಗ್ಗೆ ಮಾತನಾಡಿದ್ದಾರೆ. ಭಕ್ತಿ, ಪರ್ವತ, ನದಿಗಳ ಬಗ್ಗೆಯೂ ಅವರು ಹೇಳಿಕೊಂಡಿದ್ದು, ಅದೊಂದು ಪುಣ್ಯ ಸ್ಥಳ ಎಂದಿದ್ದಾರೆ.

  • ಉಜ್ಜಯಿನಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ಐವರು ಅರೆಸ್ಟ್

    ಭೋಪಾಲ್: ಉಜ್ಜಯಿನಿಯ (Ujjain) 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆಟೋ ಚಾಲಕ ಸೇರಿದಂತೆ ಐವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ಕುರಿತು ಶಂಕಿತರ ವಿಚಾರಣೆ ನಡೆಸಲಾಗುತ್ತಿದೆ ಎಂದು ಉಜ್ಜಯಿನಿಯ ಎಸ್‍ಪಿ ಸಚಿನ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಬಾಲಕಿ ಸತ್ನಾದಿಂದ ಬಂದಿದ್ದಾಳೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಪೋಷಕರನ್ನು ಗುರುತಿಸಲಾಗಿದೆ. ಅತ್ಯಾಚಾರದ ಬಳಿಕ ಬಾಲಕಿ ಸಹಾಯಕ್ಕಾಗಿ 8 ಕಿಲೋಮೀಟರ್ ದೂರ ನಡೆದಿದ್ದಾಳೆ ಎಂದು ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದು ಬಂದಿದೆ. ಅಲ್ಲದೇ ಆಕೆ ಸಹಾಯಕ್ಕಾಗಿ ಮನೆ ಮನೆಗೆ ತೆರಳುತ್ತಿರುವುದು, ಈ ವೇಳೆ ವ್ಯಕ್ತಿಯೊಬ್ಬ ಆಕೆಯನ್ನು ಓಡಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಮಧ್ಯಪ್ರದೇಶದ (Madhya Pradesh) ಉಜ್ಜಯಿನಿ ನಗರದಲ್ಲಿ ಅತ್ಯಾಚಾರಕ್ಕೊಳಗಾಗಿ ತೀವ್ರ ರಕ್ತಸ್ರಾವದಿಂದ ಬಾಲಕಿ ಸಹಾಯಕ್ಕಾಗಿ ರಸ್ತೆಯಲ್ಲಿ ಓಡಾಡಿದ್ದಳು. ಬಳಿಕ ಆಕೆಯನ್ನು ಆಶ್ರಮವೊಂದರ ಅರ್ಚಕರು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನೀಡಿತ್ತು. ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಆದರೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ.

    ಭಾರೀ ಜನಾಕ್ರೋಶದ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‍ಐಟಿ) ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಅಪ್ರಾಪ್ತೆ ಮೇಲೆ ಅತ್ಯಾಚಾರ – ಅರೆಬೆತ್ತಲಾಗಿ ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

    ಭೋಪಾಲ್: ಅತ್ಯಾಚಾರದ ಬಳಿಕ ತೀವ್ರ ರಕ್ತಸ್ರಾವದಿಂದ 12 ವರ್ಷದ ಬಾಲಕಿ ಸಹಾಯಕ್ಕಾಗಿ ಅರೆಬೆತ್ತಲಾಗಿ ಮನೆಯಿಂದ ಮನೆಗೆ ಅಲೆದಾಡಿದ ಪ್ರಕರಣ ಉಜ್ಜಯಿನಿಯಲ್ಲಿ (Ujjain) ನಡೆದಿದೆ. ಈ ವೇಳೆ ಸಂತ್ರಸ್ತೆಯನ್ನು ನೋಡಿದ ಜನ ಸಹಾಯ ಮಾಡದೆ ನಿರಾಕರಿಸಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಬಳಿಕ ಬಾಲಕಿ ಆಶ್ರಮ ಒಂದಕ್ಕೆ ತೆರಳಿದ್ದಾಳೆ. ಅಲ್ಲಿನ ಅರ್ಚಕರೊಬ್ಬರು ಆಕೆಗೆ ಬಟ್ಟಿ ನೀಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ಬಳಿಕ ಹೆಚ್ಚಿನ ಚಿಕಿತ್ಸೆಗೆ ಬಾಲಕಿಯನ್ನು ಇಂದೋರ್‌ಗೆ ರವಾನಿಸಲಾಗಿದೆ. ಆಕೆಗೆ ರಕ್ತದ ಅವಶ್ಯಕತೆ ಇದ್ದು, ಪೊಲೀಸ್ (Police) ಸಿಬ್ಬಂದಿ ರಕ್ತದಾನ ಮಾಡಿದ್ದಾರೆ. ಆಕೆಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಸಂಬಂಧ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ಬಾಲಕಿ ಮಾತನಾಡುವ ಆಧಾರದ ಮೇಲೆ ಆಕೆಯನ್ನು ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನವಳೆಂದು ಅಂದಾಜಿಸಲಾಗಿದೆ ಎಂದು ಉಜ್ಜಯಿನಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದವರಿಗೆ ನಟಿ ಸಾರಾ ಹೇಳಿದ್ದೇನು?

    ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದವರಿಗೆ ನಟಿ ಸಾರಾ ಹೇಳಿದ್ದೇನು?

    ಹಿಂದೂ ದೇವಾಲಯಕ್ಕೆ (Temple) ಭೇಟಿ ನೀಡಿದರು ಎನ್ನುವ ಕಾರಣಕ್ಕಾಗಿ ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ (Saif Ali Khan) ಪುತ್ರಿ ಸಾರಾ ಅಲಿಖಾನ್ ಅವರನ್ನು ಕೆಲ ಸಂಪ್ರದಾಯವಾದಿಗಳು ತರಾಟೆಗೆ ತಗೆದುಕೊಂಡಿದ್ದರು. ನೀನು ಮುಸ್ಲಿಂ ಸಮುದಾಯಕ್ಕೆ ಕಳಂಕ ಎಂದು ಟೀಕಿಸಿದ್ದರು. ಪದೇ ಪದೇ ಹಿಂದೂ ದೇವಾಲಯಗಳಿಗೆ ಭೇಟಿ ನೀಡುತ್ತಿರುವುದನ್ನು ಆಕ್ಷೇಪಿಸಿದ್ದರು. ಇಂಥವರಿಗೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಸಾರಾ.

    ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿಚಾರವಾಗಿ ತಮ್ಮನ್ನು ಟ್ರೋಲ್ ಮಾಡುತ್ತಿದ್ದವರಿಗೆ ಸರಿಯಾಗಿಯೇ ಮಾತಿನ ಪೆಟ್ಟು ಕೊಟ್ಟಿರುವ ಸಾರಾ, ನೀವು ಎಷ್ಟೇ ಟ್ರೋಲ್ ಮಾಡಿದರೂ ನಾನು ಪದೇ ಪದೇ ದೇವಸ್ಥಾನಕ್ಕೆ ಹೋಗುತ್ತಲೇ ಇರುತ್ತೇನೆ ಎಂದಿದ್ದಾರೆ. ಇಂತಹ ಟ್ರೋಲ್ ಗಳಿಗೆ ಕೇರ್ ಮಾಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ನಾನು ಎಲ್ಲಿಗೆ ಹೋಗಬೇಕು ಅಥವಾ ಹೋಗಬಾರದು ಎಂದು ನಿರ್ಧರಿಸೋಕೆ ನೀವ್ಯಾರು ಎಂದು ಸಾರಾ ಮರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ನಿರಾಶ್ರಿತರ ಜೊತೆ ನಿಂತುಕೊಂಡು ನಟ ಕಿರಣ್ ರಾಜ್

    ಸಾರಾ ಅಲಿ ಖಾನ್ (Sara Ali Khan) ಮೊನ್ನೆ ಉಜ್ಜಯಿನಿಯಲ್ಲಿನ ಮಹಾಕಾಳೇಶ್ವರ ದೇವಸ್ಥಾನಕ್ಕೆ (Ujjain Mahakaleshwar) ಭೇಟಿ ನೀಡಿದ್ದರು. ವಿಕ್ಕಿ ಕೌಶಲ್, ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ರಿಲೀಸ್ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ತಮ್ಮ ಚಿತ್ರಕ್ಕೆ ಗೆಲುವು ತಂದುಕೊಡುವಂತೆ ಅವರು ಪ್ರಾರ್ಥಿಸಿದ್ದರು. ಸೈಫ್ ಪುತ್ರಿ ಸಾರಾ ಅವರು ಆಗಾಗ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಹೀಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಕೆಲವೇ ದಿನಗಳ ಹಿಂದೆಯಷ್ಟೇ ಅವರು ಕೇದಾರನಾಥಕ್ಕೆ ಹೋಗಿದ್ದರು.

     

    ಸಾರಾ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿರೋದ್ದಕ್ಕೆ ಕೆಲವರು ತಕರಾರು ತೆಗೆದು, ಇದೆಲ್ಲ ಪ್ರಚಾರದ ಗಿಮಿಕ್ ಎಂದು ವ್ಯಂಗ್ಯವಾಡಿದ್ದರು. ಸಾರಾ ಅಲಿ ಖಾನ್ ಹಿಂದೂ ಧರ್ಮಕ್ಕೆ ಬಂದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಇಂಥವರಿಗೆ ತಿರುಗೇಟು ನೀಡಿ ತಮ್ಮ ಪಾಡಿಗೆ ತಾವು ಸಿನಿಮಾ ಪ್ರಚಾರದಲ್ಲಿ ತೊಡಗಿದ್ದಾರೆ.

  • ಜೈ ಶ್ರೀರಾಮ್ ಶಾಲು ಧರಿಸಿ ಉಜ್ಜಯಿನಿಯಲ್ಲಿ ಡಿಕೆಶಿ

    ಜೈ ಶ್ರೀರಾಮ್ ಶಾಲು ಧರಿಸಿ ಉಜ್ಜಯಿನಿಯಲ್ಲಿ ಡಿಕೆಶಿ

    ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮಧ್ಯಪ್ರದೇಶದಲ್ಲಿರುವ ಉಜ್ಜಯಿನಿ (Ujjain) ಮಹಾಕಾಲೇಶ್ವರನ ಮೊರೆ ಹೋಗಿದ್ದಾರೆ. ಉಜ್ಜಯಿನಿಗೆ ಕುಟುಂಬ ಸಮೇತರಾಗಿ ತೆರಳಿ ಮಹಾಕಾಲೇಶ್ವರನ ದರ್ಶನ ಪಡೆದಿದ್ದಾರೆ.

    ಉಜ್ಜಯಿನಿಗೆ ಕುಟುಂಬ ಸಮೇತವಾಗಿ ತೆರಳಿದ ಡಿಕೆಶಿ ರುದ್ರಾಭಿಷೇಕ, ವಿಶೇಷ ಹೋಮ ನೆರವೇರಿಸಿ ದೇವರ ದರ್ಶನ ಪಡೆದಿದ್ದಾರೆ. ಡಿಕೆಶಿ ಉಜ್ಜಯಿನಿಯಿಂದ ನಾಳೆ ದೆಹಲಿಗೆ ತೆರಳಿ ಇಡಿ (ED) ವಿಚಾರಣೆಗೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಬಾದಾಮಿಯಲ್ಲಿ ಸ್ಪರ್ಧೆ ಇಲ್ಲ: ಸಿದ್ದರಾಮಯ್ಯ ಅಧಿಕೃತ ಘೋಷಣೆ

    ಉಜ್ಜಯಿನಿ ಮಹಾಕಾಲೇಶ್ವರನ ದರ್ಶನ ಪಡೆದ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದು, ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾ ಕಾಲಭೈರವೇಶ್ವರ ದೇವಸ್ಥಾನಕ್ಕೆ ಇಂದು ಕುಟುಂಬ ಸಮೇತವಾಗಿ ಭೇಟಿ ನೀಡಿ ದರ್ಶನ ಪಡೆದೆ. ಪುರಾಣದಿಂದ ಹಿಡಿದು ಕಾಳಿದಾಸನ ಮೇಘ ಸಂದೇಶದಲ್ಲೂ ಉಜ್ಜಯಿನಿಯ ಉಲ್ಲೇಖವಿದೆ. ಶಿವನು ಇಲ್ಲಿ ವಾಸಿಸುತ್ತಿದ್ದ ಎಂದು ಪುರಾಣಗಳು ಹೇಳುತ್ತವೆ ಎಂದು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಡಿಕೆಶಿ ಧರಿಸಿರುವ ಶಾಲಿನಲ್ಲಿ ಜೈ ಶ್ರೀರಾಮ್ ಎಂದು ಬರೆದುಕೊಂಡಿರುವುದಕ್ಕೆ ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಮೆಕಾಲೆ ಶಿಕ್ಷಣ ಪದ್ಧತಿ ಗುಲಾಮಗಿರಿಗೆ ದೂಡಿತ್ತು: ಬಿ.ಸಿ ನಾಗೇಶ್

    Live Tv
    [brid partner=56869869 player=32851 video=960834 autoplay=true]

  • ಉಜ್ಜಯಿನಿ ದೇವಾಲಯದಲ್ಲಿ ರೀಲ್ಸ್ ಮಾಡಿದ್ದ ಯುವತಿಗೆ ಕಂಟಕ – ಕ್ರಮಕ್ಕೆ ಸೂಚಿಸಿದ ಗೃಹ ಸಚಿವ

    ಉಜ್ಜಯಿನಿ ದೇವಾಲಯದಲ್ಲಿ ರೀಲ್ಸ್ ಮಾಡಿದ್ದ ಯುವತಿಗೆ ಕಂಟಕ – ಕ್ರಮಕ್ಕೆ ಸೂಚಿಸಿದ ಗೃಹ ಸಚಿವ

    ಭೋಪಾಲ್: ಉಜ್ಜಯಿನಿಯ ದೇವಸ್ಥಾನದ ಆವರಣದಲ್ಲಿ ಇನ್‍ಸ್ಟಾಗ್ರಾಮ್ ರೀಲ್ ( Instagram reel) ಮಾಡಿದ್ದ ಯುವತಿಯ ಬಗ್ಗೆ ಕ್ರಮ ಕೈಗೊಳ್ಳುವಂತೆ ಮಧ್ಯಪ್ರದೇಶದ (Madhya Pradesh) ಗೃಹ ಸಚಿವ ನರೋತ್ತಮ್ ಮಿಶ್ರಾ (Home Minister Narottam Mishra) ಸೂಚಿಸಿದ್ದಾರೆ.

    ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದ ಗರ್ಭಗುಡಿ ಮತ್ತು ದೇವಸ್ಥಾನದ ಆವರಣದಲ್ಲಿ ಬಾಲಿವುಡ್ ಹಾಡಿಗೆ ಯುವತಿಯೊಬ್ಬಳು ಇನ್‍ಸ್ಟಾಗ್ರಾಮ್ ರೀಲ್ಸ್ ಮಾಡಿದ್ದಳು. ನಂತರ ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಳು. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ನರೋತ್ತಮ್ ಮಿಶ್ರಾ ಅವರ ಗಮನಕ್ಕೆ ಬಂದಿದೆ.

    ಈ ಸಂಬಂಧ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಮತ್ತು ಎಸ್‍ಪಿಗೆ ಸೂಚಿಸಿದ್ದೇನೆ. ಅಲ್ಲದೇ ಯಾವುದೇ ರೀತಿಯ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟಾಗುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 7 ತಿಂಗಳು ಕಳೆದರೂ ಸ್ಮಾರ್ಟ್, ಹೈಟೆಕ್ ಮೀನು ಮಾರುಕಟ್ಟೆಗೆ ಸಿಕ್ಕಿಲ್ಲ ಉದ್ಘಾಟನೆ ಭಾಗ್ಯ

    ಯುವತಿ ಮಹಾಕಾಲ್ ದೇವಸ್ಥಾನದ ಗರ್ಭಗುಡಿಯಲ್ಲಿ ಜಲಾಭಿಷೇಕ ಮಾಡುವುದನ್ನು ರೀಲ್ಸ್ ಮಾಡಿದ್ದಳು. ಅಲ್ಲದೇ ದೇವಸ್ಥಾನದ ಆವರಣದಲ್ಲಿ ಸುತ್ತುತ್ತಾ ರೀಲ್ಸ್ ಮಾಡಿರುವುದನ್ನು ಕಾಣಬಹುದಾಗಿದೆ. ಈ ಎರಡು ವೀಡಿಯೋಗಳನ್ನು ಮತ್ತೋರ್ವ ಯುವತಿ ಚಿತ್ರೀಕರಿಸಿದ್ದಾಳೆ. ಇದನ್ನೂ ಓದಿ: ಕಾಲ್ಕೆರೆಯುತ್ತಾ ಜಗಳಕ್ಕೆ ಬಂದವನನ್ನು ಚಲಿಸುತ್ತಿದ್ದ ರೈಲಿನಿಂದ ಹೊರ ತಳ್ಳಿದ ಸಹ ಪ್ರಯಾಣಿಕ

    ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಯುವತಿಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾಕಾಲ್ ದೇವಸ್ಥಾನದ ಅರ್ಚಕ ಮಹೇಶ್ ಗುರು ಒತ್ತಾಯಿಸಿದ್ದಾರೆ. ಈ ವೀಡಿಯೋ ಅವಹೇಳನಕಾರಿ ಮತ್ತು ಸನಾತನ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಈ ರೀತಿಯ ವೀಡಿಯೊವು ದೇವಾಲಯದ ಪಾವಿತ್ರ್ಯತೆಯನ್ನು ಹಾಳುಮಾಡಿದೆ. ಮಹಾಕಾಲ್ ದೇವಾಲಯದ ನೌಕರರು ತಮ್ಮ ಕಾರ್ಯವನ್ನು ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]