Tag: UKG

  • LKG-UKG ದಾಖಲಾತಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

    LKG-UKG ದಾಖಲಾತಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

    ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯ ಆಗುವಂತೆ ಒಂದನೇ ತರಗತಿಗೆ ಮಾತ್ರ ದಾಖಲಾತಿ ವಯಸ್ಸಿನ ಮಿತಿ (Age Limit) ಸಡಿಲ ಮಾಡಲಾಗಿದೆ. ಎಲ್‌ಕೆಜಿ-ಯುಕೆಜಿಗೆ ವಯಸ್ಸಿನ ಮಿತಿ ಸಡಿಲ ಇಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ಆದೇಶ ಹೊರಡಿಸಿದೆ.

    ಇತ್ತೀಚಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಒಂದನೇ ತರಗತಿ ದಾಖಲಾತಿ ಮಿತಿಯನ್ನು 5 ವರ್ಷ 5 ತಿಂಗಳಿಗೆ ಕಡಿತ ಮಾಡಿ ಆದೇಶ ಮಾಡಿದ್ದರು. ಈ ಆದೇಶ ಎಲ್‌ಕೆಜಿ-ಯುಕೆಜಿ (LKG-UKG) ಮಕ್ಕಳ ದಾಖಲಾತಿಗೆ ಗೊಂದಲ ಉಂಟು ಮಾಡಿಸಿತ್ತು. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆ (Education Department), ವಯಸ್ಸಿನ ಮಿತಿ ಸಡಿಲ ಒಂದನೇ ತರಗತಿಗೆ ಈ ವರ್ಷಕ್ಕೆ ಮಾತ್ರ ಅನ್ವಯ. 2025-26ನೇ ಸಾಲಿಗೆ ಎಲ್‌ಕೆಜಿ-ಯುಕೆಜಿಗೆ ದಾಖಲಾತಿ ಆಗುವ ಮಕ್ಕಳಿಗೆ ಈ ನಿಯಮ ಅನ್ವಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನೂ ಓದಿ: ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ದಕ್ಷಿಣ ಕನ್ನಡ ಜಿಪಂ ಸಿಇಒ

    ಎಲ್‌ಕೆಜಿಗೆ ದಾಖಲಾಗಲು 4 ವರ್ಷ, ಯುಕೆಜಿಗೆ ದಾಖಲಾಗಲು 5 ವರ್ಷ ಕಡ್ಡಾಯವಾಗಿ ತುಂಬಿರಬೇಕು ಎಂದು ಆದೇಶ ಹೊರಡಿಸಿದೆ. ಸರ್ಕಾರದ ಆದೇಶವನ್ನು ಎಲ್ಲಾ ಜಿಲ್ಲೆಯ ಡಿಡಿಪಿಐಗಳು, ಬಿಇಒಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪಾಕ್‌ ವಿರುದ್ಧ ಜಲಯುದ್ಧ – ಚೆನಾಬ್‌ ನದಿಯ ನೀರಿನ ಮಟ್ಟ ಭಾರೀ ಇಳಿಕೆ

  • ಇನ್ನು ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG – ಮಾಂಟೆಸ್ಸರಿಗಳಾಗಿ ಪರಿವರ್ತನೆ

    ಇನ್ನು ಮುಂದೆ ಅಂಗನವಾಡಿ ಕೇಂದ್ರಗಳಲ್ಲೇ LKG, UKG – ಮಾಂಟೆಸ್ಸರಿಗಳಾಗಿ ಪರಿವರ್ತನೆ

    – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

    ಬೆಂಗಳೂರು: ಅಂಗನವಾಡಿ ಕೇಂದ್ರಗಳನ್ನು (Anganwadi Centres) ಮಾಂಟೆಸ್ಸರಿಗಳನ್ನಾಗಿ (Montessori) ಮೇಲ್ದರ್ಜೆಗೆ ಏರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಇಂದು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಯಿತು.

    ಸಭೆ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ಮಾಡುತ್ತಿದ್ದಾರೆ. ಈ ಸಂಬಂಧ ಶಿಕ್ಷಣ ಇಲಾಖೆ, ನಮ್ಮ ಇಲಾಖೆ ಜತೆ ಸಿಎಂ ಸಭೆ ಮಾಡಿದರು. ಗುಣಮಟ್ಟದ ಶಿಕ್ಷಣ ಕೊಡಲು ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ ಮಾಡಲಾಗ್ತಿದೆ. ಇದು ಅಂಗನವಾಡಿ ಕಾರ್ಯಕರ್ತರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಜೊತೆ ಸಭೆ ಮಾಡಿದ್ದು ಈಗ ಆದೇಶ ಹೊರಡಿಸಿರುವ ಶಾಲೆಗಳಲ್ಲಿ ಬಿಟ್ಟು ಹೊಸದಾಗಿ LKG, UKG ಪ್ರಾರಂಭ ಮಾಡದಂತೆ ಮಾತುಕತೆ ನಡೆದಿದೆ. ಮುಂದಿನ ಪ್ರಕ್ರಿಯೆ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುತ್ತಿದೆ ಎಂದರು.

    ಅಂಗನವಾಡಿಗಳನ್ನು ಅಪ್ ಗ್ರೇಡ್ ಮಾಡಲು ಸಿಎಂ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಿಎಂ ಇದಕ್ಕೆ ಒಪ್ಪಿದ್ದಾರೆ. ಅಂಗನವಾಡಿಗಳನ್ನ ಇನ್ನು ಮುಂದೆ ಸರ್ಕಾರಿ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲಾಗುತ್ತದೆ. ಇಲ್ಲಿ LKG, UKG ತರಗತಿಗಳನ್ನು ಕನ್ನಡ, ಇಂಗ್ಲಿಷ್ ಮಾಧ್ಯಮಗಳಲ್ಲಿ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ಮೊದಲ ಹಂತದಲ್ಲಿ 9 ಸಾವಿರ ಅಂಗನವಾಡಿಗಳನ್ನ ಮಾಂಟೆಸ್ಸರಿಗಳಾಗಿ ಅಪ್ ಗ್ರೇಡ್ ಮಾಡಲು ತೀರ್ಮಾನ ಮಾಡಲಾಗಿದೆ. ಮಾಂಟೆಸ್ಸರಿಗಳಲ್ಲಿ ಸಮವಸ್ತ್ರ, ಶೂ, ಬ್ಯಾಗ್‌ಗಳನ್ನು ನೀಡಲಾಗುತ್ತದೆ. ಎಲ್ಲಾ ಸಿದ್ದತೆ ಮಾಡಿಕೊಂಡು ಆರ್ಥಿಕ ಇಲಾಖೆ ಜೊತೆ ಮಾತನಾಡಲಾಗುವುದು ಎಂದು ಹೇಳಿದರು.

    ಅಂಗನವಾಡಿ ಕಾರ್ಯಕರ್ತೆಯರ ಜೊತೆ ಈಗಾಗಲೇ ಮಾತುಕತೆ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ LKG, UKG ಪ್ರಾರಂಭ ಮಾಡಿದರೂ ಅಂಗನವಾಡಿ ಕಾರ್ಯಕರ್ತೆಯರನ್ನ ಕೆಲಸದಿಂದ ತೆಗೆಯುವುದಿಲ್ಲ. ಅಂಗನವಾಡಿಗಳನ್ನ ರೀ ಡೆಸಿಗ್ನೇಷನ್ ಮಾಡೋದಾಗಿ ಹೇಳಿದ್ದು ಅದಕ್ಕೂ ಅಂಗನವಾಡಿ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ. ಅಂಗನವಾಡಿಗಳನ್ನ ಅಪ್ ಗ್ರೇಡ್ ಮಾಡುವ ಬೇಡಿಕೆ ಇತ್ತು. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ. ಗುಣಮಟ್ಟದ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

     

  • UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆ ಎಡವಟ್ಟು- ಸುರೇಶ್ ಕುಮಾರ್ ಕಿಡಿ

    UKG ಮಗುವನ್ನು ಫೇಲ್ ಮಾಡಿ ಶಿಕ್ಷಣ ಸಂಸ್ಥೆ ಎಡವಟ್ಟು- ಸುರೇಶ್ ಕುಮಾರ್ ಕಿಡಿ

    ಆನೇಕಲ್: ತಾಲೂಕಿನ ಹುಸ್ಕೂರು ಗೇಟ್ ಸಮೀಪದ ಬಳಿ ಇರುವ ಸೆಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಎಡವಟ್ಟು ಮಾಡಿದೆ. ಯುಕೆಜಿ ಓದುತ್ತಿದ್ದ ಮಗುವನ್ನು ಶಿಕ್ಷಣ ಸಂಸ್ಥೆ ಫೇಲ್ ಮಾಡಿ ಫಜೀತಿಗೆ ಸಿಲುಕಿದೆ.

    ಹೌದು. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿಯನ್ನು ಸಂಸ್ಥೆ ಫೇಲ್ ಮಾಡಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಈ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ (Suresh Kumar) ಟ್ವೀಟ್ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಕೂಡ ಸರಣಿ ಟ್ವೀಟ್ (Tweet) ಮಾಡಿ ಕಿಡಿಕಾರಿದ್ದಾರೆ.

    ಸುರೇಶ್ ಕುಮಾರ್ ಹೇಳಿದ್ದೇನು..? ಮಗುವನ್ನು ಫೇಲ್ ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ ಹೃದಯ ಮೊದಲೇ ಇಲ್ಲ. ಈ ಮಹಾಕೃತ್ಯ ಗೊತ್ತಾದ ಕೂಡಲೇ ಆನೇಕಲ್ ತಾಲೂಕು ಶಿಕ್ಷಣ ಇಲಾಖೆಗೆ ಮಾಹಿತಿ ತಿಳಿಸಿದ್ದೇನೆ. ನಾನು ಕೂಡ ಒಮ್ಮೆ ಈ ಶಾಲೆಗೆ ಸದ್ಯದಲ್ಲೇ ಭೇಟಿ ನೀಡಿ ಪಾವನಾಗಲು ಬಯಸಿದ್ದೇನೆ ಎಂದು ಮಾಜಿ ಸಚಿವರು ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದಿನಿಂದ ರಾಜ್ಯಾದ್ಯಂತ ಅಂಗನವಾಡಿ, ಎಲ್‍ಕೆಜಿ, ಯುಕೆಜಿ ಓಪನ್

    ಇಂದಿನಿಂದ ರಾಜ್ಯಾದ್ಯಂತ ಅಂಗನವಾಡಿ, ಎಲ್‍ಕೆಜಿ, ಯುಕೆಜಿ ಓಪನ್

    ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಲ್‍ಕೆಜಿ-ಯುಕೆಜಿ ತರಗತಿಗಳ ಜೊತೆಗೆ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದೆ.

    ಕಳೆದ ಎರಡು ವರ್ಷಗಳಿಂದ ಕೊರೊನಾ ಆತಂಕದ ಹಿನ್ನೆಲೆ ತರಗತಿಗಳನ್ನು ಮುಚ್ಚಲಾಗಿತ್ತು. ಇದೀಗ ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಇದನ್ನೂ ಓದಿ: ಇಂದು ಪುನೀತ್ 11ನೇ ದಿನದ ಪುಣ್ಯಾರಾಧನೆ – ಮಧ್ಯಾಹ್ನವರೆಗೆ ಅಭಿಮಾನಿಗಳಿಗೆ ಸಮಾಧಿಗೆ ನಿರ್ಬಂಧ

    ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಎಲ್‍ಕೆಜಿ-ಯುಕೆಜಿ ಅಂಗನವಾಡಿ ಪ್ರಾರಂಭಿಸಲು ಸಂಪೂರ್ಣ ಸಿದ್ದಗೊಳಿಸಿದೆ. ಕೊರೊನಾ ನಿಯಮಗಳ ಅಡಿ ತರಗತಿಗಳನ್ನು ನಡೆಸಲು ಸರ್ಕಾರ ಆದೇಶ ನೀಡಿದೆ. ಪೂರ್ವ ಪ್ರಾಥಮಿಕ ತರಗತಿಗಳು ತೆರೆಯುವುದಕ್ಕೆ ಶಿಕ್ಷಣ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಕಡ್ಡಾಯವಾಗಿ ಕೊರೊನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ. ಇದನ್ನೂ ಓದಿ: ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಎಲ್‍ಕೆಜಿ-ಯುಕೆಜಿ ಪ್ರಾರಂಭಕ್ಕೆ ಮಾರ್ಗಸೂಚಿಗಳು:

    * ಶಾಲೆಗೆ ಆಗಮಿಸೋ ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.
    * ನಿತ್ಯ ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.
    * ಸೋಮವಾರದಿಂದ ಶುಕ್ರವಾರದ ಒಳಗೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ವರೆಗೆ ತರಗತಿ ನಡೆಸಬೇಕು.
    * 2% ಒಳಗೆ ಕೊರೊನಾ ಕೇಸ್ ಇರುವ ತಾಲೂಕುಗಳಲ್ಲಿ ಮಾತ್ರ ತರಗತಿ ಪ್ರಾರಂಭ ಮಾಡಬೇಕು.
    * ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.
    * ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
    * ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು.
    * ನಿತ್ಯ ಶಾಲಾ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಬೇಕು.
    * ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ಕೊಡಬೇಕು.
    * ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
    * ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಕುಟುಂಬದವರಿಗೆ ಆರೋಗ್ಯ ಸಮಸ್ಯೆ ಇದ್ದರೆ ಅಂತಹ ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಅವಕಾಶ ನೀಡಬಾರದು.
    * ಶಾಲಾ ಆವರಣ ಮತ್ತು ಶಾಲೆಯ ಒಳಗೆ ವಿದ್ಯಾರ್ಥಿಗಳನ್ನ ಕೂರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
    * ವಿದ್ಯಾರ್ಥಿಯ ಆರೋಗ್ಯದ ಮೇಲೆ ನಿತ್ಯ ಶಾಲೆಯವರು ನಿಗಾ ಇಡಬೇಕು.
    * ವಿದ್ಯಾರ್ಥಿಗೆ ಸೋಂಕು ಬಂದ ಕೂಡಲೇ ಶಾಲೆ ಕ್ಲೋಸ್ ಮಾಡಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ತಪಾಸಣೆ ನಡೆಸಬೇಕು.
    * ಸಂದರ್ಶಕರು ಅಥವಾ ಮೂರನೇ ವ್ಯಕ್ತಿಗಳಿಗೆ ಶಾಲೆಗೆ ಪ್ರವೇಶ ನೀಡಬಾರದು.
    * ಸೋಂಕು ಕಂಡು ಬಂದ ಶಾಲೆ ಕ್ಲೋಸ್ ಮಾಡಿಸಿ ಬಳಿಕ ಸ್ಥಳೀಯ ಆರೋಗ್ಯ ಅಧಿಕಾರಿಗಳ ಸೂಚನೆ ಮೇರೆಗೆ ಕೊಠಡಿ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಪ್ರಾರಂಭ ಮಾಡಬೇಕು.

  • ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ

    ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚಿರುವ ಬಗ್ಗೆ ನಿನ್ನೆಯಷ್ಟೇ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ.

    ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ ನೀಡಲು ಕ್ಯಾಬಿನೆಟ್ ಸಭೆ ನಿರ್ಧರಿಸಿದೆ. ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಆರಂಭಿಸಲು ತೀರ್ಮಾನಿಸಿದ್ದೇವೆ. 430 ಪ್ರಥಮ ದರ್ಜೆ ಕಾಲೇಜು, 87 ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜನಿಯರಿಂಗ್ ಕಾಲೇಜುಗಳಿದ್ದು, ಇದಕ್ಕಾಗಿ 35 ಕೋಟಿ ರೂ. ನೀಡಲು ಒಪ್ಪಿಗೆ ನೀಡಲಾಗಿದೆ. ಜೊತೆಗೆ ಬಿಬಿಎಂಪಿಯ 198 ವಾರ್ಡ್‍ಗಳನ್ನು 225ಕ್ಕೆ ಹೆಚ್ಚಿಸುವ ಚರ್ಚೆ ಆಗಿದೆ. ನಾಳೆ ಈ ಬಗ್ಗೆ ನಿರ್ಧಾರವಾಗುತ್ತೆ ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು. ಇನ್ನೂ ಆಂಬುಲೆನ್ಸ್ ವ್ಯವಸ್ಥೆಗೆ ಇದ್ದ ಕಿಲೋ ಮೀಟರ್ ರೂಲ್ಸ್ ತೆಗೆಯಲು ಸಂಪುಟ ತೀರ್ಮಾನಿಸಿದೆ. ರಾಯಚೂರಿನ ಅರಕೇರಾವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ.

  • ಬೆಂಗ್ಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ರಜೆ ಘೋಷಣೆ

    ಬೆಂಗ್ಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ರಜೆ ಘೋಷಣೆ

    ಬೆಂಗಳೂರು: ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಣೆ ಮಾಡಲಾಗಿದೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

    ಚೀನಾದ ವುಹಾ ನಗರದಲ್ಲಿ ಕೊರೊನಾ ವೈರಸ್ ಏಕಾಏಕಿ ವಿವಿಧ ದೇಶಗಳಲ್ಲಿ ಹರಡಿದೆ. ಅಲ್ಲಿ ಕೊಕೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದು ದೃಢಪಟ್ಟಿರುವುದು ವರದಿಯಾಗಿದೆ. ಕೇರಳ, ತೆಲಂಗಾಣ ಮತ್ತು ತಮಿಳುನಾಡಿನ ನೆರೆ ರಾಜ್ಯಗಳಲ್ಲಿ ಸಹ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ವ್ಯಾಪ್ತಿ ಪ್ರಿ-ಎಲ್‍ಕೆಜಿ, ಎಲ್‍ಕೆಜಿ ಹಾಗೂ ಯುಕೆಜಿ ಶಾಲೆಗಳಿಗೆ ರಜೆ ಘೋಷಿಸಿ, ತಕ್ಷಣದಿಂದ ಜಾರಿಗೆ ತರಬೇಕು. ಕೊರೊನಾ ವೈರಸ್ ಹರಡುವುದನ್ನು ತಡೆಯಲು ಈ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

    ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರ ಸಲಹೆ ಮೇರೆಗೆ ಸಚಿವರು ಈ ಸುತ್ತೋಲೆ ಹೊರಡಿಸಿದ್ದಾರೆ.

  • ಚಾಕ್ಲೇಟ್ ಆಸೆ ತೋರಿಸಿ ಶಾಲಾ ಸಿಬ್ಬಂದಿಯಿಂದಲೇ ಯುಕೆಜಿ ವಿದ್ಯಾರ್ಥಿನಿ ರೇಪ್!

    ಚಾಕ್ಲೇಟ್ ಆಸೆ ತೋರಿಸಿ ಶಾಲಾ ಸಿಬ್ಬಂದಿಯಿಂದಲೇ ಯುಕೆಜಿ ವಿದ್ಯಾರ್ಥಿನಿ ರೇಪ್!

    ಹೈದರಾಬಾದ್: ಚಾಕ್ಲೇಟ್ ನೀಡುವುದಾಗಿ ಹೇಳಿ ಐದು ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆ ಆವರಣದಲ್ಲಿಯೇ ಅತ್ಯಾಚಾರ ಎಸಗಿದ ಅಮಾವನೀಯ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

    ಶನಿವಾರ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಚಾಕ್ಲೇಟ್ ನೀಡುತ್ತೇನೆ ಎಂದು ಹೇಳಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಮಗಳನ್ನು ಶಾಲೆಯ ಸಿಬ್ಬಂದಿಯೊಬ್ಬ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆವರಣದಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಗೆ ನುಗ್ಗಿ, ಪೀಠೋಪಕರಣ, ಕಟ್ಟದ ಸೇರಿದಂತೆ ವಿವಿಧ ವಸ್ತುಗಳನ್ನು ದ್ವಂಸಗೊಳಿಸಿದ್ದಾರೆ. ಗಲಾಟೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

    ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಕುರಿತು ಪೋಕ್ಸೋ ಕಾಯ್ದೆ ಅಡಿ ಗೋಲ್ಕೊಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv