Tag: Ukhrul

  • ಮಣಿಪುರದಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಗುಂಡಿನ ಚಕಮಕಿಯಲ್ಲಿ ಮೂವರು ಸಾವು, 20 ಮಂದಿಗೆ ಗಾಯ

    ಮಣಿಪುರದಲ್ಲಿ 2 ಗುಂಪುಗಳ ನಡುವೆ ಘರ್ಷಣೆ – ಗುಂಡಿನ ಚಕಮಕಿಯಲ್ಲಿ ಮೂವರು ಸಾವು, 20 ಮಂದಿಗೆ ಗಾಯ

    – ಪೊಲೀಸ್ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರಗಳ ಲೂಟಿ
    – ನಿಷೇಧಾಜ್ಞೆ ಜಾರಿ, ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

    ಇಂಫಾಲ್: ಮಣಿಪುರದಲ್ಲಿ (Manipur) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಉಖ್ರುಲ್ ಪಟ್ಟಣದಲ್ಲಿ (Ukhrul) ಎರಡು ಗುಂಪುಗಳ ನಡುವಿನ ಘರ್ಷಣೆ ಉಂಟಾಗಿದೆ. ಒಂದು ಗುಂಪು ಪೊಲೀಸ್ ಠಾಣೆಗೆ (Police Station) ನುಗ್ಗಿ ಶಸ್ತ್ರಾಸ್ತ್ರಗಳನ್ನು ದೋಚಿದೆ.

    ಬುಧವಾರ ನಡೆದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪಟ್ಟಣದ ವಿವಾದಿತ ಜಮೀನನ್ನು ಸ್ವಚ್ಛಗೊಳಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘರ್ಷಣೆ ನಡೆಯುತ್ತಿರುವ ಸಂದರ್ಭದಲ್ಲೇ ಮತ್ತೊಂದು ಗುಂಪು, ವಿನೋ ಬಜಾರ್‌ನಲ್ಲಿರುವ ಪೊಲೀಸ್ ಠಾಣೆಗೆ ನುಗ್ಗಿ, ಶಸ್ತ್ರಾಸ್ತ್ರ ದೋಚಿದೆ. ಇದನ್ನೂ ಓದಿ: Photo Gallery | ಮಂಗಳೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ – ಶಾರದಾ ಮಾತೆಗೆ ದಿವ್ಯಾಲಂಕಾರ

    ಲೂಟಿಯಾದ ಶಸ್ತ್ರಾಸ್ತ್ರಗಳಲ್ಲಿ ಎಕೆ-47, ಐಎನ್‌ಎಸ್‌ಎಸ್ ರೈಫಲ್‌ಗಳು ಸೇರಿವೆ. ಈ ಬೆನ್ನಲ್ಲೇ ಉಖ್ರುಲ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆ ಕೂಡ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: 1 ವರ್ಷ ಸೇವೆ ಮಾಡೋಕೆ ಚಾಮುಂಡಿ ಶಕ್ತಿ ಕೊಡಲಿ – ಪವರ್‌ಶೇರಿಂಗ್ ಸುಳಿವು ಕೊಟ್ರಾ ಸಿಎಂ?

  • ಮಣಿಪುರ ಹಿಂಸಾಚಾರ; ಶಸ್ತ್ರಸಜ್ಜಿತ ದುಷ್ಕರ್ಮಿಗಳೊಂದಿಗೆ ನಡೆದ ಗುಂಡಿನ ದಾಳಿಗೆ ಮತ್ತೆ 3 ಬಲಿ

    ಮಣಿಪುರ ಹಿಂಸಾಚಾರ; ಶಸ್ತ್ರಸಜ್ಜಿತ ದುಷ್ಕರ್ಮಿಗಳೊಂದಿಗೆ ನಡೆದ ಗುಂಡಿನ ದಾಳಿಗೆ ಮತ್ತೆ 3 ಬಲಿ

    ಇಂಫಾಲ: ಮಣಿಪುರದ (Manipur) ಉಖ್ರುಲ್ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದೆ.

    ಮಣಿಪುರದ ಉಖ್ರುಲ್ ಜಿಲ್ಲೆಯ ಥೋವೈ ಕುಕಿ ಗ್ರಾಮದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು ಗ್ರಾಮಸ್ಥರ ಸಾವಿಗೆ ಕಾರಣವಾಯಿತು. ಮೃತರನ್ನು ಜಮ್‌ಖೋಗಿನ್ ಹಾಕಿಪ್ (26), ತಂಗ್‌ಖೋಕೈ ಹಾಕಿಪ್ (35) ಮತ್ತು ಹೊಲೆನ್ಸನ್ ಬೈಟ್ (24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Himachal Pradesh Rain: ರಣಭೀಕರ ಮಳೆಗೆ 74 ಮಂದಿ ಸಾವು – 10 ಸಾವಿರ ಕೋಟಿ ನಷ್ಟ!

    ಇದು ಹಿಂಸಾಚಾರ-ಪೀಡಿತ ಮಣಿಪುರದ ಇತ್ತೀಚಿನ ಘಟನೆಯಾಗಿದೆ. ಮಣಿಪುರದಲ್ಲಿ ಮೇ 3 ರಿಂದ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈಥೇಯ್ ಸಮುದಾಯದ ಬೇಡಿಕೆ‌ ವಿರುದ್ಧ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಇದು ಎರಡು ಸಮುದಾಯಗಳ ನಡುವಿನ ಹಿಂಸಾಚಾರಕ್ಕೆ ಕಾರಣವಾಗಿದೆ.

    ಹಿಂಸಾಚಾರ ಭುಗಿಲೆದ್ದ ನಂತರ ಇಲ್ಲಿಯವರೆಗೆ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 3,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರ ನಿಯಂತ್ರಿಸಲು ಮತ್ತು ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಮಣಿಪುರ ಪೊಲೀಸರಲ್ಲದೆ ಸುಮಾರು 40,000 ಕೇಂದ್ರ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್‌ ಗಾರ್ಡ್‌ – ಧನ್ಯವಾದ ತಿಳಿಸಿದ ಚೀನಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]