Tag: ukraine mayor

  • ಉಕ್ರೇನ್‍ನ ಮತ್ತೊಬ್ಬ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ

    ಉಕ್ರೇನ್‍ನ ಮತ್ತೊಬ್ಬ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ

    ಕೀವ್: ರಷ್ಯಾ ಸೈನಿಕರು ಝಪೊರಿಝಿಯಾ ಪ್ರದೇಶದ ಡ್ನಿಪ್ರೊರುಡ್ನೆ ನಗರದ ಮೇಯರ್‌ನನ್ನು ಅಪಹರಿಸಿದ್ದಾರೆ ಎಂದು ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೊ ಕುಲೆಬಾ ತಿಳಿಸಿದ್ದಾರೆ.

    ಯೆವ್ಹೆನ್ ಮ್ಯಾಟ್ವೀವ್ ಅಪಹರಣರಾದ ಮೇಯರ್. ಇವರನ್ನು ರಷ್ಯಾ ಸೈನಿಕರು ಅಪಹರಿಸಿದ್ದಾರೆ ಎಂದು ಜಪೋರಿಝಿಯಾ ಪ್ರದೇಶದ ರಾಜ್ಯ ಆಡಳಿತದ ಮುಖ್ಯಸ್ಥ ಒಲೆಕ್ಸಾಂಡರ್ ಸ್ಟಾರುಖ್ ಭಾನುವಾರ ಬೆಳಿಗ್ಗೆ ಫೇಸ್‌ಬುಕ್‌ನಲ್ಲಿ ತಿಳಿಸಿದ್ದಾರೆ.

    ಉಕ್ರೇನ್ ಮೇಲೆ ರಷ್ಯಾ ದಾಳಿ ಅಧಿಕವಾಗುತ್ತಿದೆ. ದ್ನಿಪ್ರೊರುಡ್ನೆಯ ಮೇಯರ್ ಅವರನ್ನು ಅಪಹರಿಸಲಾಗಿದೆ. ರಷ್ಯಾದ ವಿರುದ್ಧ ಸ್ಥಳೀಯ ನಾಗರಿಕರು ತಿರುಗಿಬಿದ್ದರುವುದಕ್ಕೆ ರಷ್ಯಾ ಸೈನಿಕರು ಈ ರೀತಿ ಮಾಡುತ್ತಿದ್ದಾರೆ. ಉಕ್ರೇನ್ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ, ರಷ್ಯಾ ಹನಡೆಸುತ್ತಿರುವ ಇಂತಹ ಕೃತ್ಯವನ್ನುಉ ನಿಲ್ಲಿಸಲು ಎಲ್ಲರೂ ಒಗ್ಗೂಡಬೇಕು ಎಂದು ಸ್ಟಾರುಖ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಶನಿವಾರ ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ಮಿಲಿಟರಿಯೊಂದಿಗೆ ಸಹಕರಿಸಲು ನಿರಾಕರಿಸಿದ ನಂತರ ದಕ್ಷಿಣ ಉಕ್ರೇನ್‌ನ ಮೆಲಿಟೊಪೋಲ್‌ನ ಮೇಯರ್ ಅವರನ್ನು ರಷ್ಯಾದ ಸೈನಿಕರು ಅಪಹರಿಸಿತ್ತು. ಈ ಬಗ್ಗೆ ಉಕ್ರೇನ್ ಸಂಸತ್ ಟ್ವೀಟ್‌ ಮಾಡಿ, ೧೦ ಆಕ್ರಮಿತರ ಗುಂಪು ಮೆಲಿಟೊಪೋಲ್‌ನ ಮೇಯರ್ ಇವಾನ್ ಫೆಡೋರೊವ್ ಅವರನ್ನು ಅಪಹರಿಸಿದೆ. ಇದರಿಂದಾಗಿ ರಷ್ಯಾ ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದೆ ಎಂದು ಆರೋಪಿಸಿತ್ತು. ಇದನ್ನೂ ಓದಿ: ರಾಹುಲ್ ಗಾಂಧಿ ಕಾಂಗ್ರೆಸ್ ಮುಖ್ಯಸ್ಥರಾಗಬೇಕು: ಅಶೋಕ್ ಗೆಹ್ಲೋಟ್

  • ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಕೀವ್‌: ದಕ್ಷಿಣ ಉಕ್ರೇನ್‌ನ ಮೆಲಿಟೊಪೋಲ್‌ನ ಮೇಯರ್‌ ಅವರನ್ನು ರಷ್ಯಾದ ಸೈನಿಕರು ಅಪಹರಿಸಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ತಿಳಿಸಿದ್ದಾರೆ.

    10 ಆಕ್ರಮಿತರ ಗುಂಪು ಮೆಲಿಟೊಪೋಲ್‌ನ ಮೇಯರ್‌ ಇವಾನ್‌ ಫೆಡೋರೊವ್‌ ಅವರನ್ನು ಅಪಹರಿಸಿದೆ ಎಂದು ಉಕ್ರೇನ್‌ ಸಂಸತ್‌ ಟ್ವಿಟ್ಟರ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ನಾನೊಬ್ಬ ಅಧ್ಯಕ್ಷ, ಆದರೆ ಅದಕ್ಕೂ ಮೊದಲು 2 ಮಕ್ಕಳ ತಂದೆ: ಉಕ್ರೇನ್ ಅಧ್ಯಕ್ಷ

    ಮೇಯರ್‌ ಅವರು ನಗರದ ಬಿಕ್ಕಟ್ಟಿನ ಕೇಂದ್ರದಲ್ಲಿ ಮೂಲಸೌಕರ್ಯ ಪೂರೈಕೆಯಲ್ಲಿನ ಸಮಸ್ಯೆಗಳ ಬಗ್ಗೆ ವ್ಯವಹರಿಸುತ್ತಿದ್ದಾಗ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ. ಶುಕ್ರವಾರ ತಡರಾತ್ರಿ ವೀಡಿಯೋ ಸಂದೇಶವೊಂದರಲ್ಲಿ ಝೆಲೆನ್‌ಸ್ಕಿ ಅಪಹರಣವನ್ನು ದೃಢಪಡಿಸಿದ್ದಾರೆ.

    ಇದು ನಿಸ್ಸಂಶಯವಾಗಿ ಆಕ್ರಮಣಕಾರರ ದೌರ್ಬಲ್ಯದ ಸಂಕೇತವಾಗಿದೆ. ಅವರು ಕಾನೂನುಬದ್ಧ ಸ್ಥಳೀಯ ಉಕ್ರೇನಿಯನ್‌ ಅಧಿಕಾರಿಗಳ ಪ್ರತಿನಿಧಿಗಳನ್ನು ಹಿಂಸಿಸುವ ಪ್ರಯತ್ನಿಸುತ್ತಿರುವ ಭಯೋತ್ಪಾದನೆಯ ಹೊಸ ಹಂತಕ್ಕೆ ತಲುಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾ ಉಕ್ರೇನ್ ಮೇಲೆ ವ್ಯಾಕ್ಯೂಮ್ ಬಾಂಬ್ ಹಾಕುವುದು ಖಚಿತ ಎಂದ ಬ್ರಿಟನ್

    ಮೇಯರ್‌ ಅಪಹರಣವು ನಿರ್ದಿಷ್ಟ ವ್ಯಕ್ತಿ, ಸಮುದಾಯ, ಉಕ್ರೇನ್‌ ವಿರುದ್ಧ ಮಾತ್ರವಲ್ಲ. ಪ್ರಜಾಪ್ರಭುತ್ವದ ವಿರುದ್ಧ ಎಸಗಿದ ಅಪರಾಧವಾಗಿದೆ. ರಷ್ಯಾದ ಆಕ್ರಮಣಕಾರಕ ಕೃತ್ಯಗಳು ಇಸ್ಲಾಮಿಕ್‌ ಸ್ಟೇಟ್‌ ಭಯೋತ್ಪಾದಕರಂತಿದೆ ಎಂದು ಟೀಕಿಸಿದ್ದಾರೆ.