ಮಾಸ್ಕೋ: ನಾವು ಉಕ್ರೇನ್ (Ukraine) ಮೇಲೆ ಹೆಚ್ಚಿನ ದಾಳಿ ನಡೆಸುತ್ತಿದ್ದರೂ ನಾವಿದನ್ನು ನಿಲ್ಲಿಸಲು ಉಕ್ರೇನ್‌ನೊಂದಿಗೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಹೇಳಿಕೆ ನೀಡಿದ್ದಾರೆ.
ಭಾನುವಾರ ದೂರದರ್ಶನ ಸಂದರ್ಶನವೊಂದರಲ್ಲಿ ಮಾತನಾಡಿದ ಪುಟಿನ್, ನಾವು ಉಕ್ರೇನ್‌ನೊಂದಿಗೆ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸಲು ಮಾತುಕತೆಗೆ ಸಿದ್ಧರಾಗಿದ್ದೇವೆ. ಮಾತುಕತೆಗೆ ಮುಂದಾಗುವ ಎಲ್ಲರೊಂದಿಗೂ ನಾವು ಸ್ವೀಕಾರಾರ್ಹ ಫಲಿತಾಂಶದ ಬಗ್ಗೆಯೇ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಾತುಕತೆಯನ್ನು ನಿರಾಕರಿಸುತ್ತಿರುವುದು ನಾವಲ್ಲ, ಬದಲಿಗೆ ಅವರೇ. ನಾವು ಸರಿಯಾದ ಮಾರ್ಗದಲ್ಲೇ ಸಾಗುತ್ತಿದ್ದೇವೆ ಎಂಬುದನ್ನು ನಾವು ನಂಬುತ್ತೇವೆ. ನಾವು ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳನ್ನು, ನಮ್ಮ ನಾಗರಿಕರು, ನಮ್ಮ ಜನರ ಹಿತಾಸಕ್ತಿಗಳನ್ನು ರಕ್ಷಿಸುತ್ತಿದ್ದೇವೆ ಎಂದು ಪುಟಿನ್ ಹೇಳಿದರು.
10 ತಿಂಗಳುಗಳಿಂದ ಉಕ್ರೇನ್‌ನಲ್ಲಿ ನಡೆಸುತ್ತಿರುವ ಆಕ್ರಮಣವನ್ನು ಶೀಘ್ರವೇ ನಿಲ್ಲಿಸುವುದಾಗಿ ಕೆಲ ದಿನಗಳ ಹಿಂದೆ ಪುಟಿನ್ ಹೇಳಿದ್ದರು. ಉಕ್ರೇನ್‌ನೊಂದಿಗಿನ ನಮ್ಮ ಸಂಘರ್ಷವನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ನಾವು ಶ್ರಮಿಸುತ್ತೇವೆ. ಆದಷ್ಟು ಬೇಗ ಎಲ್ಲವನ್ನೂ ಕೊನೆಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದರು. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ

ಈ ವರ್ಷ ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿತ್ತು. 10 ತಿಂಗಳುಗಳಿಂದ ರಷ್ಯಾ ನಿರಂತರವಾಗಿ ಉಕ್ರೇನ್ ಮೇಲೆ ದಾಳಿ ನಡೆಸುತ್ತಿದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ರಷ್ಯಾ ತನ್ನ ಆಕ್ರಮಣದ ವೇಗವನ್ನು ಕಡಿಮೆಗೊಳಿಸುತ್ತಿರುವುದಾಗಿ ಹೇಳಿದೆ. ಇದನ್ನೂ ಓದಿ: ಬೆಂಗಳೂರು-ತುಮಕೂರು ದಶಪಥ ಹೆದ್ದಾರಿ 2025ರ ಆಗಸ್ಟ್ ವೇಳೆಗೆ ಸಿದ್ಧ: ಗಡ್ಕರಿ
























