Tag: Ukraine

  • ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

    ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

    ನವದೆಹಲಿ: ರಷ್ಯಾದಿಂದ(Russia) ರಿಯಾಯಿತಿ ದರದಲ್ಲಿ ಕಚ್ಚಾ ತೈಲವನ್ನು(Crude Oil) ಖರೀದಿ ಮಾಡಿದ್ದರಿಂದ ಭಾರತ(India) 35 ಸಾವಿರ ಕೋಟಿ ರೂ. ಗಳಿಕೆ ಮಾಡಿದೆ.

    ಉಕ್ರೇನ್‌ Ukraine) ಮೇಲೆ ಯುದ್ಧ ಸಾರಿದ ಬಳಿಕ ರಷ್ಯಾದಿಂದ ತೈಲ ಖರೀದಿ ಮಾಡದಂತೆ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಇದ್ದರೂ ಯಾವುದಕ್ಕೂ ಬಗ್ಗದ ಭಾರತ ಈಗಲೂ ಆಮದು ಮುಂದುವರಿಸಿದೆ.

    ರಷ್ಯಾದಿಂದ ಕಡಿಮೆ ದರದಲ್ಲಿ ತೈಲ ಖರೀದಿ ಮಾಡಿದ ಬಳಿಕ ದೇಶೀಯ ತೈಲ ಕಂಪನಿಗಳು ಸಂಸ್ಕರಿಸಿ  ವಿದೇಶಗಳಿಗೆ ಮಾರಿತ್ತು. ಈ ವಿಚಾರ ಮನಗಂಡ ಕೇಂದ್ರ ಸರ್ಕಾರ ವಿದೇಶಗಳಿಗೆ ರಫ್ತು ಮಾಡುವ ತೈಲಗಳಿಗೆ ವಿಂಡ್‌ಫಾಲ್‌ ತೆರಿಗೆ(Windfall Tax) ಹೆಚ್ಚಿತ್ತು. ಈ ತೆರಿಗೆಯಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬಂದಿದೆ. ಇದನ್ನೂ ಓದಿ: ಷರತ್ತು ವಿಧಿಸಿ ಭಾರತಕ್ಕೆ ಇನ್ನಷ್ಟು ಡಿಸ್ಕೌಂಟ್ ದರದಲ್ಲಿ ತೈಲ ನೀಡಲು ಮುಂದಾದ ರಷ್ಯಾ

    ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ತೈಲ ಪೂರೈಕೆ ದೇಶಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಸೌದಿ ಮೂರನೇ ಸ್ಥಾನಕ್ಕೆ ಕುಸಿದರೆ ರಷ್ಯಾ ಎರಡನೇ ಸ್ಥಾನಕ್ಕೆ ಜಿಗಿದಿತ್ತು. ಈಗ ಮತ್ತೆ ಸ್ಥಾನ ಬದಲಾಗಿದ್ದು ಇರಾಕ್‌ ಮೊದಲ ಸ್ಥಾನಲ್ಲಿದ್ದರೆ ಸೌದಿ ಎರಡನೇ, ರಷ್ಯಾ ಮೂರನೇ ಸ್ಥಾನಲದಲ್ಲಿದೆ

    ವಾಣಿಜ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ ಏಪ್ರಿಲ್‌ ಜುಲೈ ಅವಧಿಯಲ್ಲಿ 1.3 ಶತಕೋಟಿ ಡಾಲರ್‌ ಮೌಲ್ಯದ ತೈಲವನ್ನು ಆಮದು ಮಾಡಿಕೊಂಡಿದ್ದರೆ ಈ ಬಾರಿ ಈ ಅವಧಿಯಲ್ಲಿ ರಷ್ಯಾದಿಂದ 11.2 ಶತಕೋಟಿ ಡಾಲರ್‌ ಮೌಲ್ಯದ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ.

    ಈ ಹಿಂದೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(Jaishankar) ಅವರು, ರಷ್ಯಾದಿಂದ ಭಾರತ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಸಮರ್ಥಿಸಿಕೊಂಡು ಇದೊಂದು ʼಬೆಸ್ಟ್‌ ಡೀಲ್‌ʼ ಎಂದು ಬಣ್ಣಿಸಿದ್ದರು. ಬೆಲೆಗಳು ದುಬಾರಿಯಾಗಿರುವ ಸಮಯದಲ್ಲಿ ಪ್ರತಿಯೊಂದು ದೇಶವೂ ತನ್ನ ಪ್ರಜೆಗಳಿಗೆ ಸಾಧ್ಯವಾದಷ್ಟು ಕಡಿಮೆ ಬೆಲೆಯಲ್ಲಿ ತೈಲ ನೀಡಲು ಪ್ರಯತ್ನ ಮಾಡುತ್ತದೆ. ಈಗ ಅದನ್ನೇ ನಾವು ಮಾಡುತ್ತಿದ್ದೇವೆ ಎಂದು ಜೈಶಂಕರ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ನಮ್ಮದು ಬೆಸ್ಟ್‌ ಡೀಲ್‌ – ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ್‌ ಸಮರ್ಥನೆ

    ಕೋವಿಡ್ 19 ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಇಳಿಕೆ ಕಂಡಿತ್ತು. ಈ ಸಂದರ್ಭದಲ್ಲಿ ಭಾರತ ಕಡಿಮೆ ದರದಲ್ಲಿ ತೈಲವನ್ನು ಖರೀದಿಸಿ ಈ ಸಂಗ್ರಹಾಗಾರದಲ್ಲಿ ಸಂಗ್ರಹಿಸಿ ಭರ್ತಿ ಮಾಡಿತ್ತು. ಇದರಿಂದಾಗಿ ಒಟ್ಟು 5 ಸಾವಿರ ರೂ. ಕೋಟಿ ರೂ. ವಿದೇಶಿ ವಿನಿಮಯ ಉಳಿತಾಯವಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿತ್ತು.

    ಕೋವಿಡ್19 ಬರುವುದಕ್ಕೆ ಮೊದಲು ಮಂಗಳೂರು, ಪಾದೂರು ಅರ್ಧ ತುಂಬಿದ್ದರೆ, ವಿಶಾಖಪಟ್ಟಣದಲ್ಲಿ ಸ್ವಲ್ಪ ಜಾಗ ಉಳಿದಿತ್ತು. ದರ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೌದಿ ಅರೇಬಿಯಾ, ಯುಎಇ ಮತ್ತು ಇರಾಕ್ ನಿಂದ ತೈಲವನ್ನು ಖರೀದಿಸಿ ಭರ್ತಿ ಮಾಡಿತ್ತು. ಇದನ್ನೂ ಓದಿ: ಕೋವಿಡ್ 19 ವೇಳೆಯಲ್ಲಿ ದೇಶಕ್ಕೆ ಸಾವಿರಾರು ಕೋಟಿ ಉಳಿಸಿದ ಮಂಗಳೂರು

    Live Tv
    [brid partner=56869869 player=32851 video=960834 autoplay=true]

  • ಇದು ಯುದ್ಧದ ಸಮಯವಲ್ಲ – ಪುಟಿನ್‌ಗೆ ಪ್ರಧಾನಿ ಮೋದಿ ಸಲಹೆ

    ಇದು ಯುದ್ಧದ ಸಮಯವಲ್ಲ – ಪುಟಿನ್‌ಗೆ ಪ್ರಧಾನಿ ಮೋದಿ ಸಲಹೆ

    ಸಮರ್‌ಕಂಡ್: ಉಜ್ಬೇಕಿಸ್ತಾನ ಶಾಂಘೈ ಸಹಕಾರ ಸಂಘಟನೆ (SCO) ದೇಶಗಳ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಉಲ್ಲೇಖಿಸಿ, ಪುಟಿನ್ (Vladimir Putin) ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

    ಮಾಸ್ಕೋದ ಪಡೆಗಳು ಉಕ್ರೇನ್ (Russia Vs Ukraine War) ಅನ್ನು ಆಕ್ರಮಿಸಿದ ನಂತರ ಉಭಯ ನಾಯಕರು ಮೊದಲಬಾರಿಗೆ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಪ್ರಧಾನಿ ಅವರು `ಇದು ಯುದ್ಧದ ಸಮಯವಲ್ಲ’ ಎಂದು ಪುಟಿನ್‌ಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: Breaking: ಓಟಿಟಿ ಟಾಪರ್ ಆಗಿ ಬಿಗ್ ಬಾಸ್ ಸೀಸನ್ 9ಕ್ಕೆ ಎಂಟ್ರಿ ಪಡೆದ ರೂಪೇಶ್ ಶೆಟ್ಟಿ

    ಬಳಿಕ ಪ್ರತಿಕ್ರಿಯಿಸಿದ ರಷ್ಯಾ ಅಧ್ಯಕ್ಷ (Russia President) ವ್ಲಾಡಿಮಿರ್ ಪುಟಿನ್, ಕಳೆದ ಫೆಬ್ರುವರಿಯಲ್ಲಿ ಪ್ರಾರಂಭವಾದ ಉಕ್ರೇನ್ (Ukraine) ವಿರುದ್ಧದ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸಲು ಬಯಸಿದ್ದೇನೆ. ಈ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತದ ಕಳವಳ ಅರ್ಥವಾಗುತ್ತಿದೆ. ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ನಿಮ್ಮ ನಿಲುವು, ನಿಮ್ಮ ಕಾಳಜಿಗಳು ನನಗೆ ಅರ್ಥವಾಗುತ್ತಿದೆ. ಇದನ್ನು ಆದಷ್ಟು ಬೇಗ ಕೊನೆಗೊಳಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

    ಎದುರಾಳಿ ತಂಡ, ಉಕ್ರೇನ್ ನಾಯಕತ್ವ, ಸಂಧಾನ ಪ್ರಕ್ರಿಯೆಯನ್ನು ತಿರಸ್ಕರಿಸುವುದಾಗಿ ಘೋಷಿಸಿತು ಮತ್ತು ಯುದ್ಧಭೂಮಿಯಲ್ಲಿ ಮಿಲಿಟರಿ ವಿಧಾನಗಳ ಮೂಲಕ ತನ್ನ ಗುರಿಗಳನ್ನು ಸಾಧಿಸಲು ಬಯಸುವುದಾಗಿ ಹೇಳಿದೆ ಎಂದು ಪುಟಿನ್ ತಿಳಿಸಿದ್ದಾರೆ.

    ಬಳಿಕವೇ ಮಾತನಾಡಿದ ಪ್ರಧಾನಿ ಮೋದಿ `ಇದು ಯುದ್ಧದ ಸಮಯವಲ್ಲ’ ಎಂದು ಮನವರಿಕೆ ಮಾಡಿಕೊಟ್ಟದ್ದಾರೆ. ಇದನ್ನೂ ಓದಿ: ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನಾ ನಿಯೋಗಕ್ಕಿಲ್ಲ ಅನುಮತಿ

    SCO ಅಧ್ಯಕ್ಷ ಸ್ಥಾನ ಭಾರತಕ್ಕೆ ಹಸ್ತಾಂತರ: ಉಜ್ಬೇಕಿಸ್ತಾನ ಎಸ್‌ಸಿಒ ಅಧ್ಯಕ್ಷ ಸ್ಥಾನವನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಯಿತು. ಉಜ್ಬೇಕಿಸ್ತಾನ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರು ಸಮರ್ಕಂಡ್‌ನಲ್ಲಿ 22ನೇ ಎಸ್‌ಸಿಒ ಶೃಂಗಸಭೆ ಅಧ್ಯಕ್ಷತೆ ವಹಿಸಿದ್ದರು. 2023ರಲ್ಲಿ ಭಾರತ ಎಸ್‌ಸಿಒ ಶೃಂಗಸಭೆ ಆಯೋಜಿಸುತ್ತದೆ. ಈ ಜವಾಬ್ದಾರಿಯುತ ಕಾರ್ಯಕ್ರಮ ಅನುಷ್ಠಾನದಲ್ಲಿ ಭಾರತಕ್ಕೆ ಸಹಾಯ ಮಾಡಲು ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದು ಉಜ್ಬೇಕಿಸ್ತಾನ ವಿದೇಶಾಂಗ ಸಚಿವ ವ್ಲಾಡಿಮಿರ್ ನೊರೊವ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ

    ಮಾಸ್ಕೋ: ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ (Vladimir Putin) ಹತ್ಯೆಗೆ ಯತ್ನ ನಡೆದಿದ್ದು, ಪುಟಿನ್ ಪ್ರಯಾಣಿಸುತ್ತಿದ್ದ ಕಾರ್ ಮೇಲೆ ಬಾಂಬ್ ದಾಳಿ (Bomb Attack) ನಡೆದಿದೆ.

    ಅದೃಷ್ಟವಶಾತ್ ಪುಟಿನ್ ಅಪಾಯದಿಂದ ಪಾರಾಗಿದ್ದಾರೆ. ಪುಟಿನ್ ತಮ್ಮ ನಿವಾಸಕ್ಕೆ ವಾಪಸ್ ಆಗುವಾಗ, ಅವರು ಪ್ರಯಾಣಿಸುತ್ತಿದ್ದ ಲಿಮೋಸಿನ್ ಕಾರ್‌ನ (Car) ಮುಂದಿನ ಎಡಗಡೆಯ ಚಕ್ರ ಸ್ಫೋಟಗೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ (Security Guard) ಅಧ್ಯಕ್ಷರನ್ನು ಕಾರಿಂದ ಹೊರಗೆ ಎಳೆದು, ಬೆಂಗಾವಲು ಪಡೆಯಲ್ಲಿದ್ದ ಹೆಚ್ಚುವರಿ ಕಾರಿನಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ಇದನ್ನೂ ಓದಿ: ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ – ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು

    ಅಧ್ಯಕ್ಷರ ಭದ್ರತೆ ವಿಚಾರದಲ್ಲಿ ರಾಜಿಯಾದ ಆರೋಪದ ಮೇಲೆ ಪುಟಿನ್ ಭದ್ರತಾ ಪಡೆಯ ಕೆಲವರನ್ನು ಬಂಧಿಸಲಾಗಿದೆ. ಇನ್ನೂ ಕೆಲವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೇರೊಬ್ಬನ ಜೊತೆ ಸಂಗ – ಪ್ರಿಯಕರನಿಂದ ಮಹಿಳೆ ಹತ್ಯೆ

    ಇದೇ ಹೊತ್ತಲ್ಲಿ, ಕಾಕತಾಳಿಯ ಎಂಬಂತೆ ಉಕ್ರೇನ್ ಅಧ್ಯಕ್ಷರ ಕಾರು ಅಪಘಾತಕ್ಕೀಡಾಗಿದೆ. ಅಧ್ಯಕ್ಷರ ಕಾರಿಗೆ ಪ್ಯಾಸೆಂಜರ್ ಕಾರೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸಣ್ಣ ಪುಟ್ಟ ಗಾಯಗಳೊಂದಿಗೆ ಝೆಲೆನ್ಸ್ಕಿ (Volodymyr Zelensky) ಪಾರಾಗಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‌ನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಸೀಟ್‌ ನೀಡಲು ಸಾಧ್ಯವಿಲ್ಲ: ಕೇಂದ್ರ

    ಉಕ್ರೇನ್‌ನಲ್ಲಿ ಓದಿದ ವಿದ್ಯಾರ್ಥಿಗಳಿಗೆ ಭಾರತದಲ್ಲಿ ವೈದ್ಯಕೀಯ ಸೀಟ್‌ ನೀಡಲು ಸಾಧ್ಯವಿಲ್ಲ: ಕೇಂದ್ರ

    ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆಯಲ್ಲಿ ಅವಕಾಶವಿಲ್ಲದ ಕಾರಣದಿಂದಾಗಿ ಉಕ್ರೇನ್‌ನಿಂದ(Ukraine) ಹಿಂದಿರುಗಿದ ವೈದ್ಯಕೀಯ(Medical) ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾನಿಲಯಗಳಲ್ಲಿ ವಸತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ (Union Government) ಸುಪ್ರೀಂಕೋರ್ಟ್‌ಗೆ(Supreme Court) ತಿಳಿಸಿದೆ.

    ಈ ಬಗ್ಗೆ ಅಫಿಡವಿಟ್(Affidavit) ಸಲ್ಲಿಸಿರುವ ಕೇಂದ್ರ ಸರ್ಕಾರ, ಇಂತಹ ಸಡಿಲಿಕೆಗಳಿಂದ ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಉಕ್ರೇನ್, ರಷ್ಯಾ(Russia) ಯುದ್ಧದಿಂದ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದರು. ತಮ್ಮ ಶಿಕ್ಷಣ ಅರ್ಧಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ(India) ಮುಂದುವರಿಸಲು ಅವಕಾಶ ನೀಡುವಂತೆ ಕೋರಿ ಹಲವು ವಿದ್ಯಾರ್ಥಿಗಳು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ನೋಟಿಸ್ ಜಾರಿ ಮಾಡಿ ಈ ಬಗ್ಗೆ ಉತ್ತರಿಸಲು ಸೂಚಿಸಿತ್ತು.

    ಕೋರ್ಟ್ ನೋಟಿಸ್ ಹಿನ್ನೆಲೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ನೀಟ್‌ನಲ್ಲಿ (NEET) ಕಳಪೆ ಅರ್ಹತೆ ಮತ್ತು ಸುಲಭದಲ್ಲಿ ವೈದ್ಯಕೀಯ ಸೀಟುಗಳು ಕೈಗೆಟುಕುವ ಕಾರಣಗಳಿಂದ ವಿದ್ಯಾರ್ಥಿಗಳು ವಿದೇಶಗಳಿಗೆ ಹೋಗಿದ್ದಾರೆ. ಭಾರತದ ಪ್ರಧಾನ ವೈದ್ಯಕೀಯ ಕಾಲೇಜುಗಳಲ್ಲಿ ಕಳಪೆ ಮೆರಿಟ್ ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ಭವಿಷ್ಯದಲ್ಲಿ ಸಮಸ್ಯೆಗೆ ಕಾರಣವಾಗಬಹುದು ಎಂದು ಅಫಿಡವಿಟ್‌ನಲ್ಲಿ ಸರ್ಕಾರ ಉಲ್ಲೇಖಿಸಿದೆ. ಇದನ್ನೂ ಓದಿ: ಲವರ್ ಜೊತೆ ಪತ್ನಿಯ ಜಾಲಿ ರೈಡ್ – ಸ್ಕೂಟಿಯನ್ನು ಚೇಸ್ ಮಾಡಿ ಪ್ರಿಯಕರನಿಗೆ ಕಪಾಳಮೋಕ್ಷ ಮಾಡಿದ ಪತಿ

    ಯುದ್ಧದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಅವರಿಗೆ ಭಾರತದ ಕಾಲೇಜುಗಳಲ್ಲಿ ಸೀಟುಗಳನ್ನು ನೀಡಲು ಸಾಧ್ಯವಾಗುವುದಿಲ್ಲ. ಸರ್ಕಾರ ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕಿದೆ ಎಂದು ಉಲ್ಲೇಖಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾದ ತೈಲ ಸಂಸ್ಥೆ ಅಧ್ಯಕ್ಷ ಆಸ್ಪತ್ರೆಯ ಕಿಟಕಿಯಿಂದ ಬಿದ್ದು ಸಾವು

    ರಷ್ಯಾದ ತೈಲ ಸಂಸ್ಥೆ ಅಧ್ಯಕ್ಷ ಆಸ್ಪತ್ರೆಯ ಕಿಟಕಿಯಿಂದ ಬಿದ್ದು ಸಾವು

    ಮಾಸ್ಕೋ: ಆಸ್ಪತ್ರೆಯ ಕಿಟಕಿಯಿಂದ ಬಿದ್ದು ರಷ್ಯಾದ ತೈಲ ಸಂಸ್ಥೆ ಅಧ್ಯಕ್ಷ ರವಿಲ್‌ ಮಗನೋವ್‌ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

    ಅಧ್ಯಕ್ಷ ರವಿಲ್ ಮಗನೋವ್ ಅವರು ತೀವ್ರ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಷ್ಯಾದ ಇಂಧನ ಸಂಸ್ಥೆ ಲುಕೋಯಿಲ್ ಗುರುವಾರ ತಿಳಿಸಿತ್ತು. ಇದನ್ನೂ ಓದಿ: ಏಳು ತಿಂಗಳಿಂದ ಸಂಬಳ ನೀಡಿಲ್ಲ – ಉದ್ಯೋಗಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ರವಿಲ್ ಮಗನೋವ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿಷಾದಿಸುತ್ತೇವೆ ಎಂದು ಲುಕೋಯಿಲ್ ಸಂಸ್ಥೆ ಸಂತಾಪ ಸೂಚಿಸಿದೆ.

    ಫೆಬ್ರವರಿಯಲ್ಲಿ ರಷ್ಯಾ ತನ್ನ ಸೈನ್ಯವನ್ನು ಉಕ್ರೇನ್‌ಗೆ ಕಳುಹಿಸಿ ದಾಳಿ ನಡೆಸಲಾರಂಭಿಸಿತು. ಈ ದಾಳಿಗೆ ಪಾಶ್ಚಿಮಾತ್ಯ ಅನೇಕ ರಾಷ್ಟ್ರಗಳು ಸೇರಿದಂತೆ ರಷ್ಯಾ ಶಾಂತಿಪ್ರಿಯರು ವಿರೋಧ ವ್ಯಕ್ತಪಡಿಸಿದರು. ದಾಳಿ ಕೊನೆಗೊಳಿಸಲು ಕರೆ ನೀಡಿದ ಕೆಲವು ಪ್ರಮುಖ ರಷ್ಯಾದ ಕಂಪನಿಗಳಲ್ಲಿ ಲುಕೋಯಿಲ್ ಕೂಡ ಒಂದಾಗಿದೆ. ಇದನ್ನೂ ಓದಿ: ಗೋ ಮೂತ್ರದಲ್ಲಿ ಸ್ನಾನ ಮಾಡೋದು ನೀವೇ ಅಲ್ವಾ- ಅಮೆರಿಕದಲ್ಲಿ ಭಾರತೀಯರ ಮೇಲೆ ಜನಾಂಗೀಯ ನಿಂದನೆ

    ಮಾಸ್ಕೋದ ಸೆಂಟ್ರಲ್ ಕ್ಲಿನಿಕಲ್ ಆಸ್ಪತ್ರೆಯ ಆರನೇ ಮಹಡಿಯ ಕಿಟಕಿಯಿಂದ ಹೊರಗೆ ಬಿದ್ದು ಮಗನೋವ್ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಮಗನೋವ್ 1954 ರಲ್ಲಿ ಜನಿಸಿದರು. ಅವರು 1993 ರಿಂದ ಲುಕೋಯಿಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 2020ರಲ್ಲಿ ಅವರು ಸಂಸ್ಥೆಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

    ಫಸ್ಟ್‌ ಟೈಂ ರಷ್ಯಾ ವಿರುದ್ಧ ಮತ ಚಲಾಯಿಸಿದ ಭಾರತ

    ನ್ಯೂಯಾರ್ಕ್: ಇದೇ ಮೊದಲ ಬಾರಿಗೆ ಭಾರತ ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮತದಾನ ಮಾಡಿದೆ.

    ಉಕ್ರೇನ್‌ನ 31ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಉಕ್ರೇನ್-ರಷ್ಯಾ ಯುದ್ಧಕ್ಕೆ 6 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸಭೆ ಆಯೋಜಿಸಿತ್ತು.

    ಒಟ್ಟು 15 ಸದಸ್ಯ ದೇಶಗಳ ಪೈಕಿ ಚೀನಾ ಮತದಾನಕ್ಕೆ ಗೈರಾದರೆ, ರಷ್ಯಾ ವಿಟೋ ಚಲಾಯಿಸಿತು. ಭಾರತ ಸೇರಿ 13 ದೇಶಗಳು ಉಕ್ರೇನ್ ಪರ ಮತ ಚಲಾಯಿಸಿದವು.  ಇದನ್ನೂ ಓದಿ: ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ಸಭೆ ಪ್ರಾರಂಭವಾಗುತ್ತಿದ್ದಂತೆ, ವಿಶ್ವಸಂಸ್ಥೆಯ ರಷ್ಯಾದ ರಾಯಭಾರಿ ವಾಸಿಲಿ ಎ ನೆಬೆಂಜಿಯಾ ಅವರು ವೀಡಿಯೊ ಟೆಲಿ-ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಉಕ್ರೇನಿಯನ್ ಅಧ್ಯಕ್ಷರ ಭಾಗವಹಿಸುವಿಕೆಯ ಬಗ್ಗೆ ಕಾರ್ಯವಿಧಾನದ ಮತವನ್ನು ಕೇಳಿದರು. ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸಲು ಭಾರತ ಬೆಂಬಲ ಸೂಚಿಸಿತು.

    ಈ ಹಿಂದೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹಾಗೂ ಸಾಮಾನ್ಯ ಸಭೆಯಲ್ಲಿ ರಷ್ಯಾ ವಿರುದ್ಧದ ನಿರ್ಣಯದಿಂದ ಭಾರತ ದೂರ ಉಳಿದಿತ್ತು. ಮಾತುಕತೆ ಮೂಲಕ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳುವಂತೆ ಸಲಹೆ ನೀಡಿತ್ತು. ಇದನ್ನೂ ಓದಿ: ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಮೆರಿಕ, ಇಂಗ್ಲೆಂಡ್‌, ರಷ್ಯಾ, ಚೀನಾ, ಫ್ರಾನ್ಸ್‌ ಖಾಯಂ ದೇಶಗಳಾಗಿದ್ದರೆ 10 ರಾಷ್ಟ್ರಗಳು 2 ವರ್ಷಗಳ ಕಾಲ ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿರುತ್ತದೆ. ಶಾಶ್ವತವಲ್ಲದ ಸದಸ್ಯ ರಾಷ್ಟ್ರವಾಗಿರುವ ಭಾರತದ ಅಧಿಕಾರಾವಧಿಯು 2021ರ ಜನವರಿ 1ರಿಂದ ಆರಂಭವಾಗಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಪುಟಿನ್‌ ಬ್ರೈನ್‌ ಎಂದೇ ಹೆಸರಾಗಿದ್ದ ರಷ್ಯಾ ನಾಯಕನ ಪುತ್ರಿ ಕಾರ್‌ ಬಾಂಬ್‌ ಸ್ಫೋಟದಿಂದ ಸಾವು

    ಪುಟಿನ್‌ ಬ್ರೈನ್‌ ಎಂದೇ ಹೆಸರಾಗಿದ್ದ ರಷ್ಯಾ ನಾಯಕನ ಪುತ್ರಿ ಕಾರ್‌ ಬಾಂಬ್‌ ಸ್ಫೋಟದಿಂದ ಸಾವು

    ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಪ್ತ ʼಪುಟಿನ್‌ ಬ್ರೈನ್‌ʼ ಎಂದೇ ಹೆಸರಾಗಿದ್ದ ರಷ್ಯಾದ ಸಿದ್ಧಾಂತವಾದಿ ಅಲೆಕ್ಸಾಂಡರ್ ಡುಗಿನ್ ಅವರ ಮಗಳು ಮಾಸ್ಕೋದ ಹೊರವಲಯದಲ್ಲಿ ಕಾರ್ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉಕ್ರೇನ್‌ ಮೇಲಿನ ರಷ್ಯಾ ದಾಳಿಗೆ ಡುಗಿನ್‌ ಬೆಂಬಲಿಗರಾಗಿದ್ದರು. ಡುಗಿನ್‌ ಅವರನ್ನು ಹತ್ಯೆಗೆ ಟಾರ್ಗೆಟ್‌ ಮಾಡಲಾಗಿತ್ತು. ಆದರೆ ಸ್ಫೋಟಕ್ಕೆ ಕೆಲವು ಕ್ಷಣಗಳ ಮುಂಚೆ ಡುಗಿನ್‌ ಅವರ ಕಾರನ್ನು ಪುತ್ರಿ ಪಡೆದುಕೊಂಡಿದ್ದರು. ನಂತರ ಕಾರ್‌ ಬಾಂಬ್‌ ಸ್ಫೋಟಕ್ಕೆ ಬಲಿಯಾಗಿದ್ದಾರೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ನದಿ, ಕೆರೆಗಳಲ್ಲಿ ಸ್ನಾನ ಮಾಡೋ ಮುನ್ನ ಹುಷಾರ್ – ವಿದೇಶದಲ್ಲಿ ಪತ್ತೆಯಾಗಿದೆ ಮೆದುಳು ತಿನ್ನುವ ಡೆಡ್ಲಿ ವೈರಸ್

    1992 ರಲ್ಲಿ ಜನಿಸಿದ ಡೇರಿಯಾ ಡುಗಿನಾ, ಮಾಸ್ಕೋದ ಹೊರವಲಯದಲ್ಲಿ ಸುಮಾರು 40 ಕಿಲೋಮೀಟರ್ ದೂರದಲ್ಲಿದ್ದ ಬೊಲ್ಶಿ ವೈಝೋಮಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ತನ್ನ ಟೊಯೊಟಾ ಲ್ಯಾಂಡ್ ಕ್ರೂಸರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾಳೆ ಎಂದು ರಷ್ಯಾದ ತನಿಖಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

    ಡುಗಿನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 900 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಕ್ಸಿಯೋಮಿ

    ಡೇರಿಯಾ ಡುಗಿನಾ ತಂದೆ ಅಲೆಗ್ಸಾಂಡರ್‌ ಡುಗಿನ್‌ ಅವರು ‌ʻಪುಟಿನ್‌ ಬ್ರೈನ್ʼ (ಪುಟಿನ್‌ ಮಿದುಳು) ಎಂದೇ ಹೆಸರಾದವರು. ರಷ್ಯಾ ಮಾತನಾಡುವ ಪ್ರದೇಶಗಳ ಏಕೀಕರಣವನ್ನು ಡುಗಿನ್‌ ನಿರಂತರವಾಗಿ ಪ್ರತಿಪಾದಿಸುತ್ತಿದ್ದವರು. ಉಕ್ರೇನ್‌ನಲ್ಲಿ ಮಾಸ್ಕೋದ ಕಾರ್ಯಾಚರಣೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು.

    ಉಕ್ರೇನಿಯನ್ ಆಡಳಿತ ಭಯೋತ್ಪಾದಕರು ಅಲೆಕ್ಸಾಂಡರ್ ಡುಗಿನ್ ಅವರ ಹತ್ಯೆಗೆ ಪ್ರಯತ್ನಿಸಿದ್ದರು. ಆದರೆ ಅವರ ಮಗಳು ಬಲಿಯಾಗಿದ್ದಾಳೆ ಎಂದು ಡಿಎನ್‌ಆರ್‌ ಮುಖ್ಯಸ್ಥ ಡೆನಿಸ್ ಪುಶಿಲಿನ್ ಟೆಲಿಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾಸ್ಕೋದಲ್ಲಿ NSA ದೋವಲ್‌ – ರಷ್ಯಾ, ಉಕ್ರೇನ್‌ ಮಧ್ಯೆ ಸಂಧಾನ?

    ಮಾಸ್ಕೋದಲ್ಲಿ NSA ದೋವಲ್‌ – ರಷ್ಯಾ, ಉಕ್ರೇನ್‌ ಮಧ್ಯೆ ಸಂಧಾನ?

    ಮಾಸ್ಕೋ: ರಷ್ಯಾ ಉಕ್ರೇನ್‌ ಮೇಲೆ ಯುದ್ಧ ಸಾರಿ 176 ದಿನ ಕಳೆದಿದೆ. ಈಗ ಈ ಯುದ್ಧ ನಿಲ್ಲಿಸಲು ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಈ ವರ್ಷದ ಫೆಬ್ರವರಿ 20ರಿಂದ ಆರಂಭಗೊಂಡ ಯುದ್ಧವನ್ನು ನಿಲ್ಲಿಸಲು ಹಲವು ದೇಶಗಳು ಪ್ರಯತ್ನ ಮಾಡುತ್ತಿದ್ದರೂ ರಷ್ಯಾ ಬಗ್ಗುತ್ತಿಲ್ಲ. ಈಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ರಷ್ಯಾಗೆ ಭೇಟಿ ನೀಡಿದ್ದರಿಂದ ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಅಜಿತ್‌ ದೋವಲ್‌ ಅವರು ರಷ್ಯಾದ ಭದ್ರತಾ ಸಲಹೆಗಾರ ನಿಕೊಲಾಯ್ ಪಟ್ರುಶೆವ್(Nikolai Patrushev) ಜೊತೆ ಮಾತುಕತೆ ನಡೆಸಲಿದ್ದಾರೆ. ನಿಕೊಲಾಯ್ ಪಟ್ರುಶೆವ್ ಅಲ್ಲದೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅಲ್ಲದೇ ಹಲವು ನಾಯಕರ ಜೊತೆ ಉಕ್ರೇನ್‌ ವಿಚಾರದ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ.

    ಎರಡು ದೇಶಗಳ ಮಧ್ಯೆ ಆರಂಭವಾದ ಯುದ್ಧದಿಂದ ವಿಶ್ವದೆಲ್ಲೆಡೆ ಸಮಸ್ಯೆ ಸೃಷ್ಟಿಯಾಗಿದ್ದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಅದರಲ್ಲೂ ಯುರೋಪಿಯನ್‌ ದೇಶಗಳಲ್ಲಿ ಹಣದುಬ್ಬರ ಭಾರೀ ಏರಿಕೆಯಾಗಿದೆ. ಹೀಗಾಗಿ ಈ ರಾಷ್ಟ್ರಗಳು ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಮೇಲೆ ಯುದ್ಧ ನಿಲ್ಲಿಸುವಂತೆ ಒತ್ತಡ ಹೇರುತ್ತಿವೆ. ಇದನ್ನೂ ಓದಿ: ಧೋವಲ್‌ ಸಂಧಾನ – ಗಡಿಯಿಂದ ಪೂರ್ಣ ಸೇನೆ ವಾಪಸ್‌ಗೆ ಚೀನಾ ಒಪ್ಪಿಗೆ

    ಇಂಗ್ಲೆಂಡ್‌, ಫ್ರಾನ್ಸ್‌, ಜರ್ಮನಿ, ಅಮೆರಿಕ ದೇಶಗಳು ರಷ್ಯಾ ಜೊತೆ ಮಾತುಕತೆ  ನಡೆಸಿ ಯುದ್ಧ ನಿಲ್ಲಿಸುವಂತೆ ಮನವೊಲಿಸಿ ಎಂದು ಭಾರತದ ಜೊತೆ ಕೇಳಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಜಿತ್‌ ದೋವಲ್‌ ರಷ್ಯಾ ಪ್ರವಾಸ ಭಾರೀ ಮಹತ್ವ ಪಡೆದುಕೊಂಡಿದೆ.

    ರಷ್ಯಾ ಭಾರತದ ಶಸ್ತ್ರಾಸ್ತ್ರ ಸರಬರಾಜು ದೇಶ ಅಲ್ಲದೇ ಸದ್ಯ ಕಚ್ಚಾ ತೈಲವನ್ನೂ ಪೂರೈಸುತ್ತಿದೆ. ಈ ಭೇಟಿಯ ವೇಳೆ ಕಚ್ಚಾ ತೈಲ ಬೆಲೆಯನ್ನು ಮತ್ತಷ್ಟು ಕಡಿಮೆ ದರದಲ್ಲಿ ನೀಡುವಂತೆ ಭಾರತ ರಷ್ಯಾದ ಜೊತೆ ಮಾತುಕತೆ ನಡೆಸಲಿದೆ ಎನ್ನಲಾಗಿದೆ.

    ಯಾಕೆ ಒತ್ತಡ?
    ಯುದ್ಧ ನಿಲ್ಲಿಸುವಂತೆ ಹಲವು ರಾಷ್ಟ್ರಗಳು ಮನವಿ ಮಾಡುತ್ತಿದ್ದರೂ ಎರಡು ದೇಶಗಳು ಹಿಂದಕ್ಕೆ ಸರಿಯುತ್ತಿಲ್ಲ. ಉಕ್ರೇನ್‌ ಮತ್ತು ರಷ್ಯಾದಲ್ಲಿ ಗೋಧಿಯನ್ನು ಹೆಚ್ಚು ಬೆಳೆಯಲಾಗುತ್ತದೆ. ರಷ್ಯಾ ಯುರೋಪ್‌ಗೆ ಗ್ಯಾಸ್‌ ವಿತರಣೆ ಮಾಡುತ್ತಿದೆ. ಯುದ್ಧದಿಂದಾಗಿ ವಸ್ತುಗಳ ಬೆಲೆಗಳು ಭಾರೀ ಏರಿಕೆಯಾಗಿದೆ.

    ಯುರೋಪ್‌ನಲ್ಲಿ ಚಳಿಗಾಲ ಆರಂಭವಾದರೆ ಗ್ಯಾಸ್‌ ಬಳಕೆ ಹೆಚ್ಚಾಗಲಿದೆ. ಒಂದು ವೇಳೆ ರಷ್ಯಾ ಏನಾದರೂ ಕಡಿತ ಮಾಡಿದರೆ ಜನರಿಗೆ ಯರೋಪ್‌ ದೇಶಗಳಿಗೆ ಭಾರೀ ಸಮಸ್ಯೆಯಾಗಲಿದೆ. ಈಗಾಗಲೇ ಯುದ್ಧದ ನೇರ ಪರಿಣಾಮವನ್ನು ಅಲ್ಲಿನ ಜನತೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುರೋಪ್‌ ದೇಶಗಳು ಹೇಗಾದರೂ ಮಾಡಿ ಯುದ್ಧ ನಿಲ್ಲಿಸಲು ಒತ್ತಡ ಹೇರುತ್ತಿವೆ. ಇದನ್ನೂ ಓದಿ: ನಮ್ಮದು ಬೆಸ್ಟ್‌ ಡೀಲ್‌ – ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ್‌ ಸಮರ್ಥನೆ

    ಭಾರತ ತಟಸ್ಥ ನೀತಿಯನ್ನು ಅನುಸರಿಸುತ್ತಿದ್ದು ಎರಡು ದೇಶಗಳ ಜೊತೆ ಉತ್ತಮ ಸಂಬಂಧವನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾರೂ ಕೂಡ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಈ ಯುದ್ಧದಲ್ಲಿ ಯಾರು ವಿಜೇತರಾಗಿರುವುದಿಲ್ಲ ಮತ್ತು ಇದರಿಂದಾಗಿ ಎಲ್ಲರೂ ನಷ್ಟವನ್ನು ಅನುಭವಿಸಿರುತ್ತಾರೆ. ಆದ್ದರಿಂದ ನಾವು ಶಾಂತಿಯ ಪರವಾಗಿದ್ದೇವೆ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ನ್ಯೂಕ್ಲಿಯರ್ ಘಟಕದ ಮೇಲೆ ರಾಕೆಟ್ ದಾಳಿ, 14 ಮಂದಿ ದುರ್ಮರಣ – ಭಾರತಕ್ಕೂ ಆತಂಕ

    ಉಕ್ರೇನ್ ನ್ಯೂಕ್ಲಿಯರ್ ಘಟಕದ ಮೇಲೆ ರಾಕೆಟ್ ದಾಳಿ, 14 ಮಂದಿ ದುರ್ಮರಣ – ಭಾರತಕ್ಕೂ ಆತಂಕ

    ಕೈವ್: ಉಕ್ರೇನಿನ ಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರದ ಸಮೀಪವೇ ರಷ್ಯಾ ರಾಕೆಟ್ ದಾಳಿ ನಡೆಸಿದ್ದು, 14 ಜೀವಗಳು ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ರಷ್ಯಾ ಮೇಲಿನ ನಿಯಂತ್ರಣವು ಇತರ ದೇಶಗಳಿಗೂ ಅಪಾಯವನ್ನುಂಟುಮಾಡುತ್ತವೆ ಎಂದು G7 ರಾಷ್ಟ್ರಗಳು ಎಚ್ಚರಿಸಿವೆ.

    ರಷ್ಯಾ-ಉಕ್ರೇನ್ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಹಾಗೂ ಭದ್ರತೆಗೆ ಗಮನ ನೀಡಬೇಕು ಎಂದು ಕರೆ ನೀಡಿದೆ. ಇದನ್ನೂ ಓದಿ: ಮನೆ ಬಾಡಿಗೆದಾರರಿಗೆ ಶಾಕ್ – ಹೊಸ ನಿಯಮಗಳ ಪ್ರಕಾರ ಶೇ.18 ರಷ್ಟು ತೆರಿಗೆ ಬರೆ

    ಈ ಸಂಬಂಧ ಚರ್ಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿನ್ನೆಯಷ್ಟೇ ತುರ್ತು ಸಭೆ ಕರೆದಿತ್ತು. ಈ ವೇಳೆ ವಿಶ್ವಸಂಸ್ಥೆಯು ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್, ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆ ಉದ್ದೇಶದಿಂದ ಘಟಕದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

    ಉಭಯ ದೇಶಗಳ ದಾಳಿಯಿಂದ ಉಂಟಾಗುವ ಯಾವುದೇ ಹಾನಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿ ನಿತೀಶ್? – ದೂರವಾಣಿ ಕರೆಗಳ ಬಗ್ಗೆ ಸಿಎಂ ಹೇಳಿದ್ದೇನು?

    ರಷ್ಯಾ ರಾಕೆಟ್ ದಾಳಿಯಿಂದ 14 ಮಂದಿ ದುರ್ಮರಣಕ್ಕೀಡಾಗಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಐವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಈ ಉದ್ವಿಗ್ನತೆಯು 1986ರ ಸೋವಿಯತ್ ಉಕ್ರೇನ್‌ನಲ್ಲಿ ನಡೆದ ಭೀರಕ ಪರಮಾಣು ದುರಂತದ ನೆನಪುಗಳನ್ನು ಪುನರುಜ್ಜೀವನಗೊಳಿಸಿದೆ. ಸೋವಿಯತ್‌ನಲ್ಲಿ ನಡೆದಿದ್ದ ಶೆಲ್ ದಾಳಿ ನೂರಾರು ಜನರನ್ನು ಕೊಂದಿತ್ತು. ಯುರೂಪ್‌ನ ಅನೇಕ ಭಾಗಗಳಲ್ಲಿ ವಿಕಿರಣದ ಮಾಲಿನ್ಯವನ್ನುಂಟುಮಾಡಿತ್ತು ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ಯುದ್ಧದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವೀಡಿಯೋ ಶೇರ್ ಮಾಡಿದ ರಷ್ಯಾ

    ಉಕ್ರೇನ್ ಯುದ್ಧದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವೀಡಿಯೋ ಶೇರ್ ಮಾಡಿದ ರಷ್ಯಾ

    ಮಾಸ್ಕ್: ಉಕ್ರೇನ್‍ನ ಮೇಲೆ ನಡೆಯುತ್ತಿರುವ ಆಕ್ರಮಣದ ಸಮಯದಲ್ಲಿ ವಶಪಡಿಸಿಕೊಂಡ ಯುಎಸ್ ಶಸ್ತ್ರಾಸ್ತ್ರಗಳು ಮತ್ತು ಯುದ್ಧದ ಇತರ ವಸ್ತುಗಳನ್ನು ಟ್ರೋಫಿಗಳಂತೆ ರಷ್ಯಾ ವೀಡಿಯೋದಲ್ಲಿ ಪ್ರದರ್ಶಿಸುತ್ತಿದೆ.

    ಉಕ್ರೇನಿಯನ್ ಪಡೆಗಳಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಫೋಟೋಗಳನ್ನು ರಷ್ಯಾದ ರಕ್ಷಣಾ ಸಚಿವಾಲಯವು ತನ್ನ ಅಧಿಕೃತ ಚಾನೆಲ್‍ವೊಂದರಲ್ಲಿ ಶೇರ್ ಮಾಡಿಕೊಂಡಿದೆ. 2 ನಿಮಿಷ 15 ಸೆಕೆಂಡುಗಳ ಕ್ಲಿಪ್‍ನಲ್ಲಿ, ರಷ್ಯಾದ ಸೈನಿಕನು ಯುಎಸ್, ಯುಕೆ, ಪೋಲೆಂಡ್ ಮತ್ತು ಸ್ವೀಡನ್‍ನಲ್ಲಿ ತಯಾರಿಸಿದ ಟ್ಯಾಂಕ್ ವಿರೋಧಿ ಗ್ರೆನೇಡ್ ಲಾಂಚರ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಮಾತನಾಡುವುದನ್ನು ಕಾಣಬಹುದು. ವೀಡಿಯೋದಲ್ಲಿ, ಆಯುಧಗಳನ್ನು ಸೈನಿಕರು ಟ್ರೋಫಿಗಳ ರೀತಿ ತೋರಿಸುತ್ತಿದ್ದರು. ಇದನ್ನೂ ಓದಿ:  10ರ ಮಗಳು, ತಾಯಿ ಪ್ರತ್ಯೇಕ ಕೋಣೆಯಲ್ಲಿ ನೇಣಿಗೆ ಶರಣು – ಪ್ರೀತಿಸಿ ಮದ್ವೆಯಾಗಿದ್ದ ವೈದ್ಯ ದಂಪತಿ 

    ವಿಶೇಷ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಪಡೆದ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳು, ಮಷಿನ್ ಗನ್ ಮತ್ತು ಉಕ್ರೇನಿಯನ್ ಸೈನಿಕರ ಆಯುಧ, ಸೋವಿಯತ್ ಮೂಲದ ಶಸ್ತ್ರಾಸ್ತ್ರಗಳನ್ನು ಸಹ ಒಳಗೊಂಡಿದೆ.

    ಶಸ್ತ್ರಾಸ್ತ್ರಗಳು ಮುಖ್ಯವಾಗಿ ವಿದೇಶಿ ಉತ್ಪಾದನೆಗಳಾಗಿವೆ. ಜಾವೆಲಿನ್, ಗ್ರೇಟ್ ಬ್ರಿಟನ್, ಯುಎ, ಪೋಲೆಂಡ್, ಸ್ವೀಡನ್‍ನಲ್ಲಿ ತಯಾರಿಸಿದ ಹ್ಯಾಂಡ್-ಹೆಲ್ಡ್ ಆಂಟಿ-ಟ್ಯಾಂಕ್ ಗ್ರೆನೇಡ್ ಲಾಂಚರ್‌ಗಳು, ಜೊತೆಗೆ ಹೆವಿ ಮೆಷಿನ್ ಗನ್‍ಗಳು ಮತ್ತು ಸೋವಿಯತ್ ನಿರ್ಮಿತ ಸಣ್ಣ ಶಸ್ತ್ರಾಸ್ತ್ರಗಳನ್ನು ಉಕ್ರೇನಿಯನ್ ರಾಷ್ಟ್ರೀಯವಾದಿಗಳು ಬಿಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಪೋಸ್ಟ್ ತಿಳಿಸಿದೆ. ಇದನ್ನೂ ಓದಿ: ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ 

    Live Tv
    [brid partner=56869869 player=32851 video=960834 autoplay=true]