Tag: Ukraine

  • ರಷ್ಯಾದಿಂದ ಅಗ್ಗದ ದರದಲ್ಲಿ ಎಲ್‌ಎನ್‌ಜಿ ಖರೀದಿಸಿದ ಭಾರತ

    ರಷ್ಯಾದಿಂದ ಅಗ್ಗದ ದರದಲ್ಲಿ ಎಲ್‌ಎನ್‌ಜಿ ಖರೀದಿಸಿದ ಭಾರತ

    ನವದೆಹಲಿ: ಕಚ್ಚಾ ತೈಲವನ್ನು ಅಗ್ಗದ ದರದಲ್ಲಿ ರಷ್ಯಾದಿಂದ ಖರೀದಿ ಮಾಡುತ್ತಿರುವ ಭಾರತ ಈಗ ದ್ರವೀಕೃತ ನೈಸರ್ಗಿಕ ಅನಿಲವನ್ನು(LNG) ಕಡಿಮೆ ದರದಲ್ಲಿ ಖರೀದಿ ಮಾಡಿದೆ.

    ಗುಜರಾತ್ ಸ್ಟೇಟ್ ಪೆಟ್ರೋಲಿಯಂ ಕಾರ್ಪೊರೇಷನ್(ಜಿಎಸ್‌ಪಿಸಿ) ಮತ್ತು ಗೇಲ್ ಇಂಡಿಯಾ ಲಿಮಿಟೆಡ್ ಸೇರಿದಂತೆ ಕಂಪನಿಗಳು ಇತ್ತೀಚೆಗೆ ರಷ್ಯಾದಿಂದ ಹಲವಾರು ಎಲ್‌ಎನ್‌ಜಿ ಸ್ಪಾಟ್ ಶಿಪ್‌ಮೆಂಟ್‌ಗಳನ್ನು ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ – ತನ್ನ ಹಳೆಯ ಪ್ರಸ್ತಾಪವನ್ನು ಮುಂದಿಟ್ಟ ರಷ್ಯಾ

    ಈ ವಿಚಾರದ ಬಗ್ಗೆ ತಿಳಿದ ವ್ಯಕ್ತಿಗಳು ಮಾಹಿತಿ ನೀಡಿದ್ದು, ಮತ್ತಷ್ಟು ಖಾಸಗಿ ಮಾಹಿತಿಗಳನ್ನು ಅವರು ನೀಡಲು ನಿರಾಕರಿಸಿದ್ದಾರೆ. ಜಿಎಸ್‌ಪಿಸಿ, ಗೇಲ್‌ ಮತ್ತು ಭಾರತದ ಪೆಟ್ರೋಲಿಯಂ ಸಚಿವಾಲಯಕ್ಕೆ ಈ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಮತ್ತಷ್ಟು ಕಡಿಮೆ ಬೆಲೆಯಲ್ಲಿ ತೈಲ ನೀಡಿ – ರಷ್ಯಾ ಜೊತೆ ಭಾರತ ಚೌಕಾಶಿ

    ಎಲ್‌ಎನ್‌ಜಿ ಮೇಲೆ ಯಾವುದೇ ನೇರ ನಿರ್ಬಂಧಗಳಿಲ್ಲ. ಆದರೆ ಜಪಾನ್ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಕೆಲ ದೇಶಗಳು ಭವಿಷ್ಯದ ದೃಷ್ಟಿಯನ್ನು ಇಟ್ಟುಕೊಂಡು ರಷ್ಯಾದಿಂದ ಎಲ್‌ಎನ್‌ಜಿ ಖರೀದಿಯನ್ನು ಸ್ಥಗಿತಗೊಳಿಸಿದೆ.

  • 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

    1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ

    ಮಾಸ್ಕೋ: ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ಸೋಲಿನ 77ನೇ ವಾರ್ಷಿಕೋತ್ಸವವನ್ನು ರಷ್ಯಾ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಸೋವಿಯತ್ ರಾಷ್ಟ್ರಗಳಿಗೆ ಅಭಿನಂದನೆ ಸಲ್ಲಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ‘1945 ರಲ್ಲಿದ್ದಂತೆ, ಗೆಲುವು ನಮ್ಮದೇ ಎಂದು ಉಕ್ರೇನ್ ವಿರೋಧ ಭಾನುವಾರ ಪ್ರತಿಜ್ಞೆ ಮಾಡಿದರು.

    ಎರಡನೇ ಮಹಾಯುದ್ಧದ ಜಯವನ್ನು ಕುರಿತು ಸಭೆಯನ್ನು ಉದ್ದೇಶಿ ಮಾತನಾಡಿದ ಪುಟಿನ್, ಸೈನಿಕರು 1945ರಲ್ಲಿ ಹೋರಾಟ ಮಾಡಿದಂತೆ ಈಗ ನಮ್ಮ ಸೈನಿಕರು ಗೆಲುವು ನಮ್ಮದೇ ಎಂಬ ವಿಶ್ವಾಸದಿಂದ ಉಕ್ರೇನ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ. ನಮ್ಮ ಭೂಮಿಯನ್ನು ನಾಜಿ ಎಂಬ ಕೆಟ್ಟಶಕ್ತಿಗಳಿಂದ ಮುಕ್ತಗೊಳಿಸಲು ಸೈನಿಕರು ಹೋರಾಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಹೇಳಿದರು.

    ವಿವಿಧ ದೇಶಗಳ ಜನರಿಗೆ ನೋವುಂಟು ಮಾಡಿದ ನಾಜಿಸಂ ಮರುಹುಟ್ಟು ತಡೆಯುವುದು ನಮ್ಮ ಕರ್ತವ್ಯವಾಗಿದೆ. ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿ ನಮ್ಮ ಸೈನ್ಯವು ನಾಜಿಸಂ ಅನ್ನು ಹೊಡೆದುರುಳಿಸಿದೆ. ಆದರೆ ಈಗ ಮತ್ತೆ ಅದು ತಲೆ ಎತ್ತುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು- ಶಾಲೆಯ ಮೇಲೆ ರಷ್ಯಾ ಬಾಂಬ್ ದಾಳಿ, 60 ಮಂದಿ ಸಾವು

    ಎರಡನೇ ಮಹಾಯುದ್ಧದಲ್ಲಿ ಸೋತವರನ್ನು ಮತ್ತೆ ತಲೆ ಎತ್ತದಂತೆ ಮಾಡುವುದು ನಮ್ಮ ಪವಿತ್ರ ಕರ್ತವ್ಯವಾಗಿದೆ. ಇದು ಮಾಸ್ಕಾದ ಮಹಾನ್ ದೇಶಭಕ್ತಿಯ ಯುದ್ಧವಾಗಿದೆ ಎಂದರು.

    ಈ ವೇಳೆ ಅವರು, ಉಕ್ರೇನ್‍ನ ಎಲ್ಲ ನಿವಾಸಿಗಳು ಶಾಂತಿಯುತ ಮತ್ತು ನ್ಯಾಯಯುತ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಎಂದು ನಾನು ಬಯಸುತ್ತೇನೆ ಎಂದು ತಿಳಿಸಿದರು.

  • ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು

    ಲಂಡನ್: ಯುದ್ಧಪೀಡಿತ ಉಕ್ರೇನ್‌ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್(12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ಬ್ರಿಟನ್ ಭರವಸೆ ನೀಡಿದೆ. ಭಾನುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಗ್ರೂಪ್ ಆಫ್ ಸೆವೆನ್ ಸಂಪರ್ಕಕ್ಕೆ ಮುಂದಾಗಿರುವುದಾಗಿ ವರದಿಗಳು ತಿಳಿಸಿವೆ.

    ಫೆಬ್ರವರಿ 24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಉಕ್ರೇನ್ ಬೆಂಬಲಕ್ಕೆ ನಿಂತವರಲ್ಲಿ ಬ್ರಿಟನ್ ಅಧ್ಯಕ್ಷ ಬೋರಿಸ್ ಜಾನ್ಸನ್ ಒಬ್ಬರು. ಅಂದಿನಿಂದ ಜಾನ್ಸನ್ ಉಕ್ರೇನ್‌ಗೆ ಕ್ಷಿಪಣಿ, ವಾಯು ರಕ್ಷಣಾ ವ್ಯವಸ್ಥೆ ಹಾಗೂ ಇತರ ಶಸ್ತ್ರಾಸ್ತ್ರಗಳನ್ನು ಕಳುಹಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

    ಬ್ರಿಟನ್ ಉಕ್ರೇನ್‌ಗೆ ಕಳೆದ ಬಾರಿ ನೀಡಿದ ಸಹಾಯಕ್ಕಿಂತಲೂ ಈ ಬಾರಿ ದ್ವಿಗುಣ ಪ್ರಮಾಣದಲ್ಲಿ ನೀಡಿದೆ. ಇದು ಇರಾಕ್ ಹಾಗೂ ಅಫ್ಘಾನಿಸ್ತಾನಗಳಲ್ಲಿ ನಡೆದ ಯುದ್ಧದ ವೆಚ್ಚಕ್ಕಿಂತಲೂ ಅತ್ಯಧಿಕ ದರವಾಗಿದೆ ಎಂದು ಬ್ರಿಟನ್ ಸರ್ಕಾರ ತಿಳಿಸಿದೆ. ಆದರೆ ಬ್ರಿಟನ್ ಸರಿಯಾದ ಲೆಕ್ಕಾಚಾರದ ವಿವರಗಳನ್ನು ನೀಡಿಲ್ಲ.

    ಕಳೆದ ವಾರ ಜಾನ್ಸನ್ ಉಕ್ರೇನ್ ಸಂಸತ್ತಿನಲ್ಲಿ ಭಾಷಣ ಮಾಡಿ, ಉಕ್ರೇನ್ ಮೇಲಿನ ರಷ್ಯಾದ ದಾಳಿ ವಿವರಿಸಲು ಅಸಾಧ್ಯವಾದ ವಿನಾಶವನ್ನೇ ಮಾಡುತ್ತಿದೆ. ಇದು ಯುರೋಪಿನಾದ್ಯಂತ ಶಾಂತಿ ಹಾಗೂ ಭದ್ರತೆಗೆ ಬೆದರಿಕೆಯೂ ಆಗಿದೆ ಎಂದು ಹೇಳಿದರು. ಈ ಮೂಲಕ ಜಾನ್ಸನ್ ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭವಾದ ಬಳಿಕ ಅಲ್ಲಿನ ಸಂಸತ್ತಿನಲ್ಲಿ ಮಾತನಾಡಿದ ಮೊದಲ ಪಾಶ್ಚಿಮಾತ್ಯ ನಾಯಕರಾದರು. ಇದನ್ನೂ ಓದಿ: ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ

    ಬ್ರಿಟನ್ ಉಕ್ರೇನ್‌ಗೆ ಭಾರೀ ಪ್ರಮಾಣದ ಮಿಲಿಟರಿ ನೆರವು ನೀಡಿರುವುದರೊಂದಿಗೆ ನಾಗರಿಕರಿಗೆ ಆಶ್ರಯವನ್ನೂ ನೀಡಿದೆ. ಇದುವರೆಗೆ ಸುಮಾರು 86,000 ಉಕ್ರೇನಿಯನ್ನರಿಗೆ ವೀಸಾಗಳನ್ನು ಒದಗಿಸಿದ್ದು, ಅದರಲ್ಲಿ ಸುಮಾರು 27,000 ಜನರು ಬ್ರಿಟನ್‌ಗೆ ತಲುಪಿದ್ದಾರೆ ಎಂದು ಬ್ರಿಟಿಷ್ ಸರ್ಕಾರ ಶನಿವಾರ ತಿಳಿಸಿದೆ.

  • ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ನಮಗೆ ನಿಮ್ಮ ಸಲಹೆ ಬೇಡ: ನೆದರ್ಲೆಂಡ್‌ಗೆ ತಿರುಗೇಟು ನೀಡಿದ ಭಾರತ

    ವಾಷಿಂಗ್ಟನ್: ವಿಶ್ವಸಂಸ್ಥೆಯ ಭಾರತೀಯ ರಾಯಭಾರಿ ಟಿಎಸ್ ತಿರುಮೂರ್ತಿ ಶುಕ್ರವಾರ ಬ್ರಿಟನ್‌ನಲ್ಲಿರುವ ನೆದರ್ಲೆಂಡ್ ರಾಯಭಾರಿ ಕೆರೆಲ್ ವ್ಯಾನ್ ಒಸ್ಟೆರೋಮ್ ರೊಂದಿಗೆ ಟ್ವಿಟರ್‌ನಲ್ಲಿ ವಾಗ್ವಾದ ನಡೆಸಿದ್ದಾರೆ.

    ಉಕ್ರೇನ್ ಬಗೆಗಿನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತ ಗೈರುಹಾಜರಾಗಬಾರದಿತ್ತು ಎಂದು ಕೆರೆಲ್ ವ್ಯಾನ್ ಒಸ್ಟೆರೋಮ್ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ತಿರುಮೂರ್ತಿ, ನಮಗೆ ನಿಮ್ಮ ಸಲಹೆ ಬೇಡ. ನಮಗೆ ಏನು ಮಾಡಬೇಕೆಂಬುದು ತಿಳಿದಿದೆ ಎಂದು ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: 2024ರಲ್ಲಿ ಶುಕ್ರಯಾನಕ್ಕೆ ISRO ಸಜ್ಜು- ಇಲ್ಲಿದೆ ಶುಕ್ರಗ್ರಹದ ಸ್ವಾರಸ್ಯಕರ ಸಂಗತಿ

    ರಷ್ಯಾ-ಉಕ್ರೇನ್ ಯುದ್ಧದ ಕುರಿತು ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ತಿರುಮೂರ್ತಿ ಹೇಳಿಕೆ ಬಗ್ಗೆ ವಿವರಣೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕರೇಲ್ ವ್ಯಾನ್ ಒಸ್ಟೆರೊಮ್ ಸಾಮಾನ್ಯ ಸಭೆಯಲ್ಲಿ ನೀವು ಗೈರಾಗಬಾರದಿತ್ತು. ವಿಶ್ವಸಂಸ್ಥೆಯ ನಿಯಮಗಳನ್ನು ಗೌರವಿಸಬೇಕಿತ್ತು ಎಂದಿದ್ದರು. ಇದನ್ನೂ ಓದಿ: ರಷ್ಯಾದ ಜನರಲ್‌ಗಳನ್ನು ಕೊಲ್ಲಲು ಉಕ್ರೇನ್‌ಗೆ ಅಮೆರಿಕ ಗುಪ್ತಚರ ಸಹಾಯ

    ಈ ವರ್ಷ ಜನವರಿಯಿಂದ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ಸಾಮಾನ್ಯ ಸಭೆ ಹಾಗೂ ಉಕ್ರೇನ್-ರಷ್ಯಾದ ಆಕ್ರಮಣದ ಬಗ್ಗೆ ಮಾನವ ಹಕ್ಕುಗಳ ಮಂಡಳಿಯಲ್ಲಿನ ಕಾರ್ಯವಿಧಾನದ ಮತ ಹಾಗೂ ಕರಡು ನಿರ್ಣಯಗಳಿಂದ ಭಾರತ ದೂರ ಉಳಿದಿತ್ತು. ಈ ಹಿನ್ನೆಲೆಯಲ್ಲಿ ನೆದರ್ಲೆಂಡ್‌ನ ರಾಯಭಾರಿ ಭಾರತವನ್ನು ಟೀಕಿಸಿದ್ದರು.

  • ರಷ್ಯಾದ ಜನರಲ್‌ಗಳನ್ನು ಕೊಲ್ಲಲು ಉಕ್ರೇನ್‌ಗೆ ಅಮೆರಿಕ ಗುಪ್ತಚರ ಸಹಾಯ

    ರಷ್ಯಾದ ಜನರಲ್‌ಗಳನ್ನು ಕೊಲ್ಲಲು ಉಕ್ರೇನ್‌ಗೆ ಅಮೆರಿಕ ಗುಪ್ತಚರ ಸಹಾಯ

    ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧದಲ್ಲಿ ರಷ್ಯಾದ ಜನರಲ್‌ಗಳನ್ನು ಕೊಲ್ಲಲು ಉಕ್ರೇನ್ ಪಡೆಗಳಿಗೆ ಅಮೆರಿಕದ ಗುಪ್ತಚರರು ಸಹಾಯ ಮಾಡಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

    ರಷ್ಯಾ ಪಡೆಗಳ ಚಲನವಲನ, ಸ್ಥಳ ಹಾಗೂ ರಷ್ಯಾದ ಮಿಲಿಟರಿ ಪ್ರಧಾನ ಕಚೇರಿಗಳ ಬಗೆಗಿನ ವಿವರಗಳನ್ನು ವಾಷಿಂಗ್ಟನ್ ಉಕ್ರೇನ್‌ಗೆ ಒದಗಿಸಿದೆ. ರಷ್ಯಾದ ಅಧಿಕಾರಿಗಳ ಮೇಲೆ ಫಿರಂಗಿ ಹಾಗೂ ಇತರ ದಾಳಿಗಳನ್ನು ನಡೆಸಲು ಅಮೆರಿಕ ಗುಪ್ತಚರರು ಸಹಾಯ ಮಾಡಿರುವುದಾಗಿ ವರದಿ ತಿಳಿಸಿದೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ

    ಯುದ್ಧದಲ್ಲಿ ಉಕ್ರೇನ್ ಪಡೆಗಳು ರಷ್ಯಾದ 12 ಜನರಲ್‌ಗಳನ್ನು ಕೊಂದಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ಗುಪ್ತಚರರ ಸಹಾಯದಿಂದ ಎಷ್ಟು ಜನರಲ್‌ಗಳನ್ನು ಕೊಲ್ಲಲಾಗಿದೆ ಎಂಬುದನ್ನು ತಿಳಿಸಲು ಅಮೆರಿಕ ನಿರಾಕರಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ಬ್ಯಾನ್ ಮಾಡಿದ ತಾಲಿಬಾನ್

     

  • ಉಕ್ರೇನ್ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್- ಡಾಕ್ಟರ್ ಆಗುವ ಕನಸಿಗೆ ನೀರೆರದ ಸಿದ್ದಗಂಗಾ

    ಉಕ್ರೇನ್ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್- ಡಾಕ್ಟರ್ ಆಗುವ ಕನಸಿಗೆ ನೀರೆರದ ಸಿದ್ದಗಂಗಾ

    ತುಮಕೂರು: ರಷ್ಯಾ ಉಕ್ರೇನ್ ಯುದ್ಧದಿಂದಾಗಿ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ತಾಯ್ನಾಡಿಗೆ ವಾಪಸ್ ಆದ ವಿದ್ಯಾರ್ಥಿಗಳ ನೆರವಿಗೆ ಸಿದ್ದಗಂಗಾ ಮಠ ಮುಂದಾಗಿದೆ. ಮೆಡಿಕಲ್ ವ್ಯಾಸಂಗ ಅರ್ಧಕ್ಕೆ ಮೊಟುಕುಗೊಳಿಸಿ ಬಂದ ವಿದ್ಯಾರ್ಥಿಗಳಿಗೆ ಮಠದ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಉಚಿತವಾಗಿ ಪ್ರಾಕ್ಟಿಕಲ್ ವ್ಯಾಸಂಗ ಮಾಡಲು ತಾತ್ಕಾಲಿಕ ಅವಕಾಶ ಕಲ್ಪಿಸಲಾಗಿದೆ.

    ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಸಾವಿರಾರು ವೈದ್ಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟಂತಾಗಿದೆ. ವೈದ್ಯರಾಗುವ ಕನಸು ಕಂಡಿದ್ದ ಸಾವಿರಾರು ವಿದ್ಯಾರ್ಥಿಗಳು ಮುಂದೇನು ಎಂಬ ಚಿಂತೆಯಲ್ಲಿದ್ದಾರೆ. ಈ ನಡುವೆ ತುಮಕೂರಿನ ಸಿದ್ದಗಂಗಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ನೆರವಿಗೆ ಧಾವಿಸಿದೆ.

    ತುಮಕೂರು ಜಿಲ್ಲೆಯ 27 ವೈದ್ಯ ವಿದ್ಯಾರ್ಥಿಗಳ ಕನಸು ನನಸು ಮಾಡಲು ಮುಂದಾಗಿದೆ. 5 ಮತ್ತು 6ನೇ ಸೆಮಿಸ್ಟರ್‍ನ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಲ್ಲಿನ ಶೈಕ್ಷಣಿಕ ಪಠ್ಯಕ್ಕೆ ತಕ್ಕಂತೆ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಕ್ಲಾಸ್‍ಗಳಲ್ಲಿ ಪಾಲ್ಗೊಳ್ಳಲು ಹಾಗೂ ರೋಗಿಗಳನ್ನು ಪ್ರಾಯೋಗಿಕವಾಗಿ ಪರೀಕ್ಷಿಸಲು ಅವಕಾಶ ನೀಡಲಾಗಿದೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ನುಡಿಸುವುದು ಒಂದು ದಿನದ ವಿಷಯವಲ್ಲ, ಅದು ಮುಂದುವರಿಯಬೇಕು: ರಾಜ್ ಠಾಕ್ರೆ

    ಉಕ್ರೇನ್‍ನಿಂದಲೂ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ಮಾಡಲಾಗ್ತಿದೆ. ಆದರೆ ವಿದ್ಯಾರ್ಥಿಗಳು ಪ್ರಾಕ್ಟಿಲ್ ಕ್ಲಾಸ್ ಮಿಸ್ ಮಾಡಿಕೊಳ್ತಿದ್ದಾರೆ. ಇದೀಗ ಸಿದ್ದಗಂಗಾ ಮೆಡಿಕಲ್ ಕಾಲೇಜು ಈ ಕೊರಗನ್ನ ನೀಗಿಸಿದೆ. ವಿದ್ಯಾರ್ಥಿಗಳು ಮಧ್ಯಾಹ್ನದವರೆಗೂ ಆನ್‍ಲೈನ್ ತರಗತಿಯಲ್ಲಿ ಪಾಲ್ಗೊಂಡು ಮಧ್ಯಾಹ್ನದ ನಂತರ ಸಿದ್ದಗಂಗಾ ಮೆಡಿಕಲ್ ಕಾಲೇಜಿನಲ್ಲಿ ಪ್ರಾಕ್ಟಿಕಲ್ ತರಗತಿಗೆ ಹಾಜರಾಗಬಹುದಾಗಿದೆ. ಆರಂಭದ ಮೂರು ತಿಂಗಳು ಉಚಿತವಾಗಿ ಪ್ರಾಕ್ಟಿಕಲ್ ವ್ಯಾಸಾಂಗಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ದಗಂಗಾ ಆಸ್ಪತ್ರೆ ಎಂ.ಡಿ.ಡಾ. ಪರಮೇಶ್ ತಿಳಿಸಿದ್ದಾರೆ.

    ಇಲ್ಲಿ ಪ್ರಾಕ್ಟಿಕಲ್ ಕ್ಲಾಸ್‍ನಲ್ಲಿ ಕಲಿಯುವ ವಿದ್ಯಾರ್ಥಿಗಳು, ಉಕ್ರೇನ್‍ನಲ್ಲೇ ಪರೀಕ್ಷೆ ಬರೆಯಬೇಕಾಗಿದೆ. ಆದ್ರೆ ಅದು ಅಸಾಧ್ಯ. ಹೀಗಾಗಿ ಸ್ಥಳೀಯವಾಗಿಯೇ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಬೇಕಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

  • 11 ಲಕ್ಷ ಪ್ರಜೆಗಳು ಇದೀಗ ರಷ್ಯಾದ ಒತ್ತೆಯಾಳುಗಳು: ಉಕ್ರೇನ್ ಆರೋಪ

    11 ಲಕ್ಷ ಪ್ರಜೆಗಳು ಇದೀಗ ರಷ್ಯಾದ ಒತ್ತೆಯಾಳುಗಳು: ಉಕ್ರೇನ್ ಆರೋಪ

    ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ 70ನೇ ದಿನವನ್ನು ಪ್ರವೇಶಿಸಿದೆ. ಆದರೆ ಯುದ್ಧದ ಅಂತ್ಯ ಸದ್ಯದಲ್ಲಂತೂ ಸಾಧ್ಯವಿಲ್ಲ ಎಂಬುದು ತೋರುತ್ತಿದೆ.

    ರಷ್ಯಾ ಇಂದಿಗೂ ಉಕ್ರೇನ್ ಮೇಲೆ ನಿರಂತರವಾಗಿ ಕ್ಷಿಪಣಿ ಹಾಗೂ ಬಾಂಬ್ ದಾಳಿ ನಡೆಸುತ್ತಿದೆ. ಈ ವೇಳೆ ಮಕ್ಕಳು ಸೇರಿದಂತೆ ಲಕ್ಷಾಂತರ ಉಕ್ರೇನಿಯನ್ನರನ್ನು ರಕ್ಷಿಸಿ ತಮ್ಮ ದೇಶಕ್ಕೆ ಕರೆತಂದಿರುವುದಾಗಿ ರಷ್ಯಾ ಹೇಳಿಕೊಂಡಿದೆ. ಆದರೆ ಉಕ್ರೇನ್ ಸುಮಾರು 2 ಲಕ್ಷ ಮಕ್ಕಳನ್ನು ಬಲವಂತವಾಗಿ ರಷ್ಯಾ ತನ್ನ ದೇಶಕ್ಕೆ ಕರೆದುಕೊಂಡು ಹೋಗುತ್ತಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಉಕ್ರೇನ್ ಕದನ ವಿರಾಮಕ್ಕೆ ಪ್ರಧಾನಿ ಮೋದಿ ಕರೆ

    ರಷ್ಯಾ ಉಕ್ರೇನ್ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ ಆಕ್ರಮಿತ ಡಾನ್‌ಬಾಸ್‌ನಿಂದ 1,96,356 ಮಕ್ಕಳು ಸೇರಿದಂತೆ ಒಟ್ಟು 10,92,137 ಉಕ್ರೇನಿಯನ್ನರನ್ನು ರಷ್ಯಾಗೆ ಕರೆತರಲಾಗಿದೆ ಎಂದು ಹೇಳಿದೆ. ಆದರೆ ಈ ಎಲ್ಲಾ ಉಕ್ರೇನಿಯನ್ನರನ್ನು ರಷ್ಯಾ ಸೈನಿಕರು ಒತ್ತೆಯಾಳಾಗಿಸಿಕೊಂಡಿದೆ ಎಂದು ಕೀವ್ ಇಂಡಿಪೆಂಡೆಂಟ್ ವರದಿ ತಿಳಿಸಿದೆ.

    ಕೀವ್ ಅಧಿಕಾರಿಗಳ ಸಮನ್ವಯವಿಲ್ಲದೆ ಸೋಮವಾರ 1,847 ಮಕ್ಕಳು ಸೇರಿದಂತೆ 11,500 ಕ್ಕೂ ಹೆಚ್ಚು ಜನರನ್ನು ಉಕ್ರೇನ್‌ನಿಂದ ರಷ್ಯಾಗೆ ಸ್ಥಳಾಂತರಿಸಲಾಗಿದೆ. ಉಕ್ರೇನಿಯನ್ನರ ಕೋರಿಕೆಯ ಮೇರೆಗೆ ಅವರನ್ನು ಸ್ಥಳಾಂತರಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ಆದರೆ ಇದು ಬಲವಂತದ ಸ್ಥಳಾಂತರ ಎಂದು ಉಕ್ರೇನ್ ಆರೋಪಿಸುತ್ತಿದೆ. ಇದನ್ನೂ ಓದಿ: ಪುಟಿನ್‌ಗೆ ಕ್ಯಾನ್ಸರ್‌ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

    ಫೆಬ್ರವರಿ 24ರಿಂದ ಇಲ್ಲಿ ವರೆಗೆ 3,153 ಉಕ್ರೇನ್ ಪ್ರಜೆಗಳು ರಷ್ಯಾ ದಾಳಿಯಿಂದ ಸಾವನ್ನಪ್ಪಿದ್ದಾರೆ ಹಾಗೂ 3,316 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

    ಇತ್ತೀಚೆಗೆ ರಷ್ಯಾ ಪಡೆ ಮಾರಿಯುಪೋಲ್ ಅನ್ನು ಸುತ್ತುವರಿದಿದ್ದು, ಅಲ್ಲಿನ ಅಜೋವ್‌ಸ್ಟಾಲ್ ಉಕ್ಕಿನ ಸ್ಥಾವರದ ಮೇಲೆ ಶೆಲ್ ದಾಳಿ ನಡೆಸಿದೆ. ದಾಳಿಗೂ ಮುನ್ನ ಸುಮಾರು 100 ನಾಗರಿಕರನ್ನು ಹತ್ತಿರದ ಜಪೋರಿಜಿಯಾಗೆ ಸ್ಥಳಾಂತರಿಸಲಾಗಿದೆ.

  • ಉಕ್ರೇನ್ ಕದನ ವಿರಾಮಕ್ಕೆ ಪ್ರಧಾನಿ ಮೋದಿ ಕರೆ

    ಉಕ್ರೇನ್ ಕದನ ವಿರಾಮಕ್ಕೆ ಪ್ರಧಾನಿ ಮೋದಿ ಕರೆ

    ಕೋಪನ್‌ಹೇಗನ್: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್‌ನಲ್ಲಿ ನಡೆಯುತ್ತಿರುವ ನಾಗರಿಕರ ಹತ್ಯೆಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ್ದು, ಉಭಯ ರಾಷ್ಟ್ರಗಳು ಬಿಕ್ಕಟ್ಟು ಪರಿಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

    narendra modi Denmark (1)

    ಉಕ್ರೇನ್‌ನಲ್ಲಿ ತಕ್ಷಣ ಕದನ ವಿರಾಮ ಘೋಷಿಸಿ ಉಭಯ ದೇಶಗಳು ಮಾತುಕತೆಯ ಮೂಲಕ ಬಿಕ್ಕಟ್ಟು ಪರಿಹರಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಇದೇ ವೇಳೆ ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟುಗಳ ಬಗ್ಗೆ ಚರ್ಚೆ ನಡೆಸಿ, ವಿಶ್ವಸಂಸ್ಥೆಯ ಚಾರ್ಟರ್‌ನಲ್ಲಿ ತಿಳಿಸಿದಂತೆ ಮಾತುಕತೆಯ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶಗಳು ಮುಂದಾಗಬೇಕು ಎಂದು ಕರೆ ನೀಡಿದರು.

    ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾವುದೂ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಿದೆ. ಇದು ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಬೆಳವಣಿಗೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಗಂಭೀರ ವಿಚಾರವಾಗಿದೆ ಎಂದು ಆತಂಕಪಟ್ಟಿದ್ದರು.

  • ಪುಟಿನ್‌ಗೆ ಕ್ಯಾನ್ಸರ್‌ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

    ಪುಟಿನ್‌ಗೆ ಕ್ಯಾನ್ಸರ್‌ – ಯುದ್ಧದ ವೇಳೆ ಅಧಿಕಾರ ಹಸ್ತಾಂತರ ಸಾಧ್ಯತೆ!

    ಮಾಸ್ಕೋ: ಉಕ್ರೇನ್‌ ಮೇಲೆ ಸತತ ಎರಡು ತಿಂಗಳಿಂದ ಯುದ್ಧ ನಡೆಸುತ್ತಿದ್ದರೂ, ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪುಟಿನ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಪುಟಿನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಯುಎಸ್‌ನ ನ್ಯೂಯಾರ್ಕ್ ಪೋಸ್ಟ್‌ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

    ಪುಟಿನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕೆಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ರಷ್ಯಾದ ಮಾಜಿ ವಿದೇಶಿ ಗುಪ್ತಚರ ಸೇವೆಯ ಲೆಫ್ಟಿನೆಂಟ್ ಜನರಲ್ ನಡೆಸುತ್ತಿದ್ದ ಟೆಲಿಗ್ರಾಮ್ ಚಾನೆಲ್ ಅನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

    ರಷ್ಯಾದ ಅಧ್ಯಕ್ಷರು ಕ್ಯಾನ್ಸರ್ ಮತ್ತು ಪಾರ್ಕಿನ್ಸನ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ವದಂತಿಗಳಿವೆ. ನಿರೀಕ್ಷಿತ ಶಸ್ತ್ರಚಿಕಿತ್ಸೆ ಮತ್ತು ಚೇತರಿಕೆಯು ಪುಟಿನ್ ಅವರನ್ನು ಕೆಲ ಕಾಲ ಅಸಮರ್ಥಗೊಳಿಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ರಷ್ಯಾ ಮುತ್ತಿಗೆ – ಮರಿಯುಪೋಲ್‌ನಿಂದ ನೂರಾರು ಜನರ ಸ್ಥಳಾಂತರ

    ಆದರೆ, ಈ ವರದಿಯನ್ನು ದೃಢೀಕರಿಸುವ ಯಾವುದನ್ನೂ ನಾವು ನೋಡಿಲ್ಲ ಎಂದು ಪೆಂಟಗನ್ ವಕ್ತಾರ ಜಾನ್ ಕಿರ್ಬಿ ಹೇಳಿರುವುದಾಗಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

    ಕೆಲವು ದಿನಗಳ ಹಿಂದೆ ಪುಟಿನ್, ನಿಕೊಲಾಯ್ ಪಟ್ರುಶೆವ್ ಅವರೊಂದಿಗೆ ಎರಡು ಗಂಟೆಗಳ ಕಾಲ ತುಂಬಾ ಆತ್ಮೀಯವಾದ ಸಂಭಾಷಣೆ ನಡೆಸಿದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿಯು ಟೆಲಿಗ್ರಾಮ್ ಪೋಸ್ಟ್ ಅನ್ನು ಉಲ್ಲೇಖಿಸಿ ಹೇಳಿದೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    Vladimir Putin

    ಇತ್ತೀಚಿನ ದಿನಗಳಲ್ಲಿ ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಅನೇಕ ಚರ್ಚೆಗಳಾಗುತ್ತಿವೆ. ವಿಶೇಷವಾಗಿ ಕಳೆದ ತಿಂಗಳು ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಅವರೊಂದಿಗಿನ ಭೇಟಿಯ ಸಮಯದಲ್ಲಿ ಪುಟಿನ್, ಮೇಜನ್ನು ಗಟ್ಟಿಯಾಗಿ ಹಿಡಿದಿದ್ದರು ಎಂದು ಹೇಳಲಾಗಿತ್ತು. ಇಂತಹ ಹಲವು ಸನ್ನಿವೇಶಗಳ ಮೂಲಕ ಪುಟಿನ್‌ ಆರೋಗ್ಯದ ಬಗ್ಗೆ ನಾನಾ ಪ್ರಶ್ನೆಗಳು ಉದ್ಭವಿಸುತ್ತಿವೆ.

  • ರಷ್ಯಾ ಮುತ್ತಿಗೆ – ಮರಿಯುಪೋಲ್‌ನಿಂದ ನೂರಾರು ಜನರ ಸ್ಥಳಾಂತರ

    ರಷ್ಯಾ ಮುತ್ತಿಗೆ – ಮರಿಯುಪೋಲ್‌ನಿಂದ ನೂರಾರು ಜನರ ಸ್ಥಳಾಂತರ

    ಕೀವ್: ಉಕ್ರೇನ್ ಪೂರ್ವಭಾಗದಲ್ಲಿರುವ ಮರಿಯುಪೋಲ್‌ಗೆ ರಷ್ಯಾ ಪಡೆ ಮುತ್ತಿಗೆ ಹಾಕಿರುವ ಹಿನ್ನೆಲೆ ಅಲ್ಲಿನ ಉಕ್ಕಿನ ಸ್ಥಾವರದಿಂದ ನೂರಾರು ನಾಗರಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

    ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಮೇಲೆ ದಾಳಿ ಪ್ರಾರಂಭಿಸಿದಾಗಿನಿಂದ ನಗರದ ಅಜೋವ್‌ಸ್ಟಾಲ್ ಸ್ಥಾವರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿಶ್ವಸಂಸ್ಥೆ ತಿಳಿಸಿತ್ತು. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

    ಕೀವ್ ಆಡಳಿತ ನಿಯಂತ್ರಿಸುತ್ತಿರುವ ಪ್ರದೇಶಗಳಿಗೆ ತೆರಳಲು ಬಯಸುವವರನ್ನು ವಿಶ್ವಸಂಸ್ಥೆ ಹಾಗೂ ಇಂಟರ್‌ನ್ಯಾಷನಲ್ ಕಮಿಟಿ ಆಫ್ ರೆಡ್‌ಕ್ರಾಸ್(ಐಸಿಆರ್‌ಸಿ) ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಗುವುದು ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ. 80 ಜನರನ್ನು ಸ್ಥಳಾಂತರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿ ಮುಟ್ಟಿದ್ರೆ, ಗುಜರಾತ್ ಹೋಗುತ್ತೆ, ಹಿಂದುತ್ವಕ್ಕೆ ಹಾನಿಯಾಗುತ್ತೆ – ಅಡ್ವಾಣಿಗೆ ಬಾಳ್ ಠಾಕ್ರೆ ನೀಡಿದ್ರು ಸಲಹೆ

    ರಷ್ಯಾ ಆಕ್ರಮಣದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದು, ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ. ರಷ್ಯಾ ಮುತ್ತಿಗೆ ಹಾಕಿರುವ ಮರಿಯುಪೋಲ್‌ನಲ್ಲಿನ ಪರಿಸ್ಥಿತಿ ಜಗತ್ತನ್ನೇ ಗಾಬರಿಗೊಳಿಸಿದೆ. ಈಗಾಗಲೇ ರಷ್ಯಾ ಮರಿಯುಪೋಲ್‌ನಲ್ಲಿರುವ ಉಕ್ಕಿನ ಸ್ಥಾವರದ ಮೇಲೆ ಶೆಲ್ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.