Tag: Ukraine

  • ಉಕ್ರೇನ್ ನಿಂದ ಪಲಾಯನ ಮಾಡಿದ ಹಾಲಿವುಡ್ ಸ್ಟಾರ್

    ಉಕ್ರೇನ್ ನಿಂದ ಪಲಾಯನ ಮಾಡಿದ ಹಾಲಿವುಡ್ ಸ್ಟಾರ್

    ಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಕೋಟ್ಯಾಂತರ ಜನರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಯುದ್ಧಕ್ಕೆ ಬಡವನೂ ಒಂದೇ, ಶ್ರೀಮಂತೂ ಒಂದೇ ಎನ್ನುವಂತೆ ಸಾವಿನ ದವಡೆಯಿಂದ ಪಾರಾಗಲು ಗಣ್ಯರು, ನಟರು, ಸಾಮಾನ್ಯರು ಎನ್ನದೇ  ಉಕ್ರೇನ್ ಪ್ರಜೆಗಳು ಮತ್ತು ಅಲ್ಲಿ ವಾಸವಿರುವ ಇತರ ದೇಶಗಳ ಪ್ರಜೆಗಳು ರಾತ್ರೋರಾತ್ರಿ ಉಕ್ರೇನ್ ತೊರೆಯುತ್ತಿದ್ದಾರೆ. ಅಲ್ಲಿ ವಾಸವಿದ್ದ ಹಾಲಿವುಡ್ ನ ಸ್ಟಾರ್, ತಾವೂ ಆ ದೇಶ ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಇದನ್ನೂ ಓದಿ : ಪಟ್ಟಭದ್ರ ಹಿತಾಸಕ್ತಿಯಿಂದ ಪೆದ್ರೊ ವಂಚಿತ : ಚಿತ್ರೋತ್ಸವದ ಬಗ್ಗೆ ರಿಷಭ್ ಶೆಟ್ಟಿ ಅಸಮಾಧಾನ

    ಅಮೆರಿಕದ ನಟ ಸೀನ್ ಜಸ್ಟಿನ್ ಪೆನ್ ಕಾಲ್ನಡಿಗೆಯಲ್ಲಿ ಉಕ್ರೇನ್ ನಿಂದ ಪೋಲ್ಯಾಂಡ್ ಗಡಿಗೆ ಸಾಗಿದ್ದಾರೆ. ಆ ಚಿತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು “ಮೈಲ್ಸ್ ಟು ಪೊಲೀಸ್ ಬಾರ್ಡರ್” ಎಂದು ಬರೆದು ಟ್ವಿಟ್ ಮಾಡಿದ್ದಾರೆ. “ನನ್ನ ಕಾರನ್ನು ರಸ್ತೆ ಬದಿಯಲ್ಲೇ ನಾನು ಬಿಟ್ಟು ಬಂದೆ. ನಂತರ ನಾನು ನನ್ನ ಸಹೋದ್ಯೋಗಿಗಳು ಹಲವು ಮೈಲುಗಳನ್ನು ನಡೆದುಕೊಂಡೇ ಸಾಗಿದೆವು. ಈಗ ನಾವು ನಮ್ಮ ಗಡಿಗೆ ಬಂದು ತಲುಪಿದ್ದೇವೆ” ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : EXCLUSIVE: ಸ್ಯಾಂಡಲ್‌ವುಡ್‌ಗೆ ವಾಪಸ್ಸಾದ ಮೀಟೂ ಪರ ಧ್ವನಿ ಎತ್ತಿದ್ದ ನಟಿ ಸಂಗೀತಾ

    https://twitter.com/SeanPenn/status/1498390093375016965?cxt=HHwWisCoqbz2rMspAAAA

    ಅಮೆರಿಕಾದ ಖ್ಯಾತ ನಟ ಮತ್ತು ಚಲನಚಿತ್ರ ನಿರ್ಮಾಪಕರೂ ಆಗಿರುವ ಸೀನ್ ಜಸ್ಟಿನ್ ಪೆನ್, ಮಿಸ್ಟಿಕ್ ರಿವರ್ ಮತ್ತು ಬಯೋಪಿಕ್ ಮೀಲ್ಕ್ ಸಿನಿಮಾದ ನಟನೆಗಾಗಿ ಅವರು ಎರಡು ಬಾರಿ ಆಸ್ಕರ್ ಪ್ರಶಸ್ತಿಪಡೆದಿದ್ದಾರೆ. ಅಪರಾಧ ನಾಟಕಗಳ ಮೂಲಕ ರಂಗಭೂಮಿಯಲ್ಲೂ ಫೇಮಸ್ ಆದ ನಟ ಇವರು.

  • ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು

    ಖೆರ್ಸನ್ ನಗರ ರಷ್ಯಾ ವಶ, ಏಕಕಾಲದಲ್ಲಿ ಮೂರು ಕಡೆ ವೈಮಾನಿಕ ದಾಳಿ- 21 ಜನ ಸಾವು

    ಕೀವ್: ಉಕ್ರೇನ್‌ ನಗರವನ್ನು ಕೈವಶ ಮಾಡಲೇಬೇಕೆಂದು ಹಠಕ್ಕೆ ಬಿದ್ದಿರುವ ರಷ್ಯಾ ಈಗ ಖರ್ಸನ್‌ ನಗರವನ್ನು ವಶಕ್ಕೆ ಪಡೆದಿದೆ. ನಗರವನ್ನು ವಶ ಪಡಿಸಿಕೊಳ್ಳಲು ಈಗ ಸರ್ಕಾರಿ ಕಟ್ಟಡದ ಮೇಲೆ ಭಾರೀ ಪ್ರಮಾಣದಲ್ಲಿ ದಾಳಿ ನಡೆಸುತ್ತಿದೆ. ಹೆರಿಗೆ ಆಸ್ಪತ್ರೆ, ಕೀವ್ ಸೇನಾ ಅಕಾಡಮಿ, ಪೊಲೀಸ್ ಹೆಡ್‍ಕ್ವಾಟರ್ಸ್ ಸೇರಿ ಉಕ್ರೇನ್‍ನ ಮೇಲೆ ರಷ್ಯಾ ಏಕಕಾಲದಲ್ಲಿ ಮೂರು ಕಡೆ ದಾಳಿ ಮಾಡಿದೆ. ದಾಳಿಯಲ್ಲಿ 21 ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

    ಉಕ್ರೇನ್‍ನ ಮೇಲೆ ರಷ್ಯಾದ ಆಕ್ರಮಣ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ದಾಳಿಗೆ ಉಕ್ರೇನ್‍ನ ಪ್ರಮುಖ ರಾಜ್ಯಗಳಾದ ಕೀವ್ ಮತ್ತು ಖಾರ್ಕಿವ್ ನಲುಗಿ ಹೋಗಿವೆ. ಇಂದು ರಷ್ಯಾ ಏಕಕಾಲದಲ್ಲಿ 3 ಕಡೆ ವೈಮಾನಿಕ ದಾಳಿ ನಡೆಸಿದೆ. ಕೀವ್, ಖಾರ್ಕಿವ್, ಖೇರ್ಸನ್‍ನಲ್ಲಿ ರಾಕೆಟ್, ಕ್ಷಿಪಣಿಗಳ ದಾಳಿ ನಡೆಸಿದೆ. ಏರ್‌ಪೋರ್ಟ್, ಝಿಟೋಮಿರ್ ಹೆರಿಗೆ ಆಸ್ಪತ್ರೆ, ಮಿಲಿಟರಿ ಅಕಾಡಮಿ, ಪೊಲೀಸ್ ಹೆಡ್‍ಕ್ವಾಟರ್ಸ್‍ಗಳ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ 21ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, 112 ಜನರು ಗಾಯಗೊಂಡಿದ್ದಾರೆ. ಝಿಟೋಮಿರ್ ಹೆರಿಗೆ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 21 ಜನರಿಗೆ ಗಂಭೀರ ಗಾಯಗಳಾಗಿವೆ.

    ಖೇರ್ಸನ್ ಏರ್‌ಪೋರ್ಟ್‍ನಲ್ಲಿ ಕ್ಷಿಪಣಿ ದಾಳಿ ಹಾಗೂ ಕೀವ್ ಸೆಂಟ್ರಲ್ ರೇಲ್ವೆ ಸ್ಟೇಶನ್‍ನಲ್ಲಿ ಗುಂಡಿನ ದಾಳಿ ನಡೆದಿದೆ. ಅಷ್ಟೇ ಅಲ್ಲದೇ ಜಲ ಮಾರ್ಗದಲ್ಲೂ ದಾಳಿ ತೀವ್ರಗೊಳಿಸಿದ್ದು, ಕಪ್ಪು ಸಮುದ್ರದಲ್ಲಿ ಸೇನೆಯನ್ನು ಹೆಚ್ಚಳ ಮಾಡಿದೆ. ಇದನ್ನೂ ಓದಿ: ಪಕ್ಕದಲ್ಲಿ ಬಾಂಬ್ ಬಿದ್ದರೂ ಊಟ, ವಸತಿ ನೀಡುತ್ತಿದೆ ಭಾರತೀಯ ರೆಸ್ಟೋರೆಂಟ್

    ಈಗಾಗಲೇ ರಷ್ಯಾ ಪಡೆಗಳು ಉಕ್ರೇನ್‍ನ ಖೆರ್ಸನ್ ನಗರ ವಶಪಡಿಸಿಕೊಂಡಿದೆ. ನಗರದ ರೈಲ್ವೆ ನಿಲ್ದಾಣ ಮತ್ತು ಬಂದರು ವಶಕ್ಕೆ ಪಡೆದಿದೆ. ಇಡೀ ನಗರದ ಮೇಲೆ ಅಸ್ತಿತ್ವ ಸಾಧಿಸುತ್ತಿದ್ದಾರೆ. ಕೀವ್, ಚೆರ್ನಿಹಿವ್, ಒಬ್ಲಾಸ್ಟ್‍ನ ಪೈರಿಯಾಟಿನ್ ಮತ್ತು ಮೈರೋರೋಡ್ ನಗರಗಳಿಗೆ ರಷ್ಯಾ ಪಡೆಗಳು ಬಂಕರ್‌ಗೆ ತೆರಳುವಂತೆ ಜನರಿಗೆ ಸೈರನ್ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

  • ಪಕ್ಕದಲ್ಲಿ ಬಾಂಬ್ ಬಿದ್ದರೂ ಊಟ, ವಸತಿ ನೀಡುತ್ತಿದೆ ಭಾರತೀಯ ರೆಸ್ಟೋರೆಂಟ್

    ಕೀವ್: ರಷ್ಯಾ ಉಕ್ರೇನ್ ಮೇಲೆ ದಾಳಿಯನ್ನು ಪ್ರಾರಂಭಿಸಿ ವಾರವೇ ಕಳೆದಿದೆ. ಸಾವಿರಾರು ಸೈನಿಕರು ಹಾಗೂ ನಿವಾಸಿಗಳ ಮಾರಣ ಹೋಮದ ಬಳಿಕವೂ ರಷ್ಯಾದ ರುದ್ರತಾಂಡವ ಇನ್ನೂ ನಿಂತಿಲ್ಲ. ಈ ಸಂದರ್ಭದಲ್ಲಿ ಅಲ್ಲಿನ ಜನರು ಊಟ ವಸತಿಯಿಲ್ಲದೇ ಜೀವವನ್ನು ಕೈಯಲ್ಲಿ ಹಿಡಿದು ಬದುಕುತ್ತಿದ್ದಾರೆ.

    ರಷ್ಯಾದಿಂದ ಮಾರಣಾಂತಿ ಶೆಲ್ ದಾಳಿಯ ನಡುವೆಯೂ ಕೀವ್‍ನಲ್ಲಿ ಭಾರತೀಯ ವ್ಯಕ್ತಿಯೊಬ್ಬ ತನ್ನ ರೆಸ್ಟೋರೆಂಟ್‍ನಲ್ಲಿ ನೂರಾರು ಜನರಿಗೆ ಊಟ ವಸತಿ ನೀಡಿ ಆಶ್ರಯದಾತನಾಗಿದ್ದಾನೆ.

    ಉಕ್ರೇನ್ ರಾಜಧಾನಿ ಕೀವ್‍ನಲ್ಲಿರುವ ಸಾಥಿಯಾ ರೆಸ್ಟೋರೆಂಟ್‍ನ ಮಾಲೀಕ ಮನೀಶ್ ಡೇವ್ ಯುದ್ಧ ಪ್ರಾರಂಭವಾದಾಗಿನಿಂದ ಅನೇಕರಿಗೆ ಆಹಾರ ಆಶ್ರಯ ನೀಡಿ ಮಾನವೀಯತೆ ಮೆರೆದಿದ್ದಾನೆ. ನನ್ನಿಂದ ಸಾಧ್ಯವಾದಷ್ಟು ದಿನ ಇಲ್ಲಿ ಕಷ್ಟದಲಿರುವ ಜನರಿಗೆ ಆಹಾರ ಹಾಗೂ ಆಶ್ರಯ ನೀಡುವುದನ್ನು ಮುಂದುವರಿಸುತ್ತೇನೆ ಎಂದು ಹೇಳುತ್ತಾರೆ ಮನೀಶ್. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ಗುಜರಾತ್‍ನ ವಡೋದರಾ ಮೂಲದ ಮನೀಶ್ 2021ರಲ್ಲಿ ಕೀವ್‍ಗೆ ಬಂದಿದ್ದರು. ಕೀವ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗಾಗಿ ಮನೀಶ್ ರೆಸ್ಟೋರೆಂಟ್ ತೆರೆದಿದ್ದರು. ಇದೀಗ ಇವರ ರೆಸ್ಟೋರೆಂಟ್ ಯುದ್ಧದ ಪರಿಸ್ಥಿತಿಯಲ್ಲಿ ಜನರಿಗೆ ಆಶ್ರಯತಾಣವಾಗಿದೆ.

    ಮನೀಶ್ ಅವರ ರೆಸ್ಟೋರೆಂಟ್‍ನಲ್ಲಿ ಇದೀಗ ಮಕ್ಕಳು, ಗರ್ಭಿಣಿಯರು, ವಿದ್ಯಾರ್ಥಿಗಳು, ಮನೆ ಕಳೆದುಕೊಂಡಿರುವವರು ಹಾಗೂ ಹಿರಿಯ ನಾಗರಿಕರು ಸೇರಿದಂತೆ 130ಕ್ಕೂ ಹೆಚ್ಚು ಜನರು ಆಶ್ರಯ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ

    ಕೀವ್‍ನ ಬೊಗೊಮೆಲೆಟ್ಸ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತರಾಷ್ಟ್ರೀಯ ವಿದ್ಯಾರ್ಥಿಗಳ ಹಾಸ್ಟೆಲ್ ಬಳಿ ಇರುವ ಸಾಥಿಯಾ ರೆಸ್ಟೋರೆಂಟ್‍ನಲ್ಲಿ ಯಾವುದೇ ದೇಶದ ಜನರು ಬಂದು ಆಶ್ರಯ ಪಡೆಯಬಹುದು ಎಂದು ಮನೀಶ್ ತಿಳಿಸಿದ್ದಾರೆ.

  • ಉಕ್ರೇನ್‌ನಿಂದ ಆಗಮಿಸುವ ಭಾರತೀಯರು ಮನೆಗೆ ತಲುಪಲು ಸಕಲ ಸಿದ್ಧತೆ: ಜೀತೆಂದ್ರ ಸಿಂಗ್

    ಉಕ್ರೇನ್‌ನಿಂದ ಆಗಮಿಸುವ ಭಾರತೀಯರು ಮನೆಗೆ ತಲುಪಲು ಸಕಲ ಸಿದ್ಧತೆ: ಜೀತೆಂದ್ರ ಸಿಂಗ್

    ನವದೆಹಲಿ: ಉಕ್ರೇನ್‍ನಿಂದ ಬಂದ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ತಲುಪಲು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಜ್ಯವಾರು ಕೇಂದ್ರಗಳನ್ನು ರಚಿಸಲಾಗಿದೆ ಎಂದು ಕೇಂದ್ರ ಸಚಿವ ಜೀತೆಂದ್ರ ಸಿಂಗ್ ತಿಳಿಸಿದರು.

    ಇಂದು ಉಕ್ರೇನ್‍ನಿಂದ ಬಂದ ವಿದ್ಯಾರ್ಥಿಗಳನ್ನು ಬರಮಾಡಿಕೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಪ್ರತಿ ರಾಜ್ಯಕ್ಕೂ ಸಹಾಯ ಕೇಂದ್ರಗಳನ್ನು ರಚಿಸಿದ್ದೇವೆ. ವಿದ್ಯಾರ್ಥಿಗಳು ಆಯಾ ಸಹಾಯ ಕೇಂದ್ರಗಳನ್ನು ಸಂಪರ್ಕಿಸುತ್ತಿದ್ದಾರೆ. ಅವರಿಗೆ ಉಪಾಹಾರವನ್ನು ನೀಡಲಾಗುತ್ತಿದೆ. ಜೊತೆಗೆ ವೋಲ್ವೋ ಬಸ್‍ಗಳ ವ್ಯವಸ್ಥೆಯನ್ನು ಮಾಡಿದ್ದೇವೆ. ಇದರಿಂದ ಇತರ ರಾಜ್ಯಗಳಿಗೆ ತೆರಳುವ ವಿದ್ಯಾರ್ಥಿಗಳು ರಸ್ತೆಯ ಮೂಲಕ ಆಯಾ ಸ್ಥಳಗಳಿಗೆ ಪ್ರಯಾಣಿಸಬಹುದು. ರೈಲಿನಲ್ಲಿ ಹೋಗುವ ವಿದ್ಯಾರ್ಥಿಗಳಿಗೆ ಅತಿಥಿ ಗೃಹಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಕೆಲವು ವಿದ್ಯಾರ್ಥಿಗಳು ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ಅವರಲ್ಲಿ ಮೂವರು ಶ್ರೀನಗರಕ್ಕೆ ತೆರಳುತ್ತಿದ್ದಾರೆ. ಎಲ್ಲಾ ಸಚಿವರು ಸ್ಥಳಾಂತರಿಸಿದ ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡುವಲ್ಲಿ ತೊಡಗಿಸಿಕೊಂಡಿದ್ದಾರೆ. ಉಕ್ರೇನ್‍ನಲ್ಲಿ ಇನ್ನೂ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನಾವು ವ್ಯವಸ್ಥೆ ಮಾಡುತ್ತಿದ್ದೇವೆ ಎಂದ ಅವರು ಇಸ್ತಾನ್‍ಬುಲ್‍ನಿಂದ ಸುಮಾರು 220 ವಿದ್ಯಾರ್ಥಿಗಳು ಆಗಮಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಈಗಾಗಲೇ ಉಕ್ರೇನ್ ನೆರೆಯ ನಾಲ್ಕು ದೇಶಗಳಿಂದ ಮೂರು ದಿನಗಳಲ್ಲಿ ಸುಮಾರು 5000 ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ಪ್ಲ್ಯಾನ್ ಮಾಡಲಾಗುತ್ತಿದೆ. ಆಪರೇಷನ್ ಗಂಗಾ ಮಿಷನ್‍ಗೆ ಸಿ 17 ವಿಮಾನ ಬಳಕೆ ಮಾಡಲಾಗುತ್ತಿದೆ. ಮುಂದಿನ 3-4 ದಿನಗಳಲ್ಲಿ ಬೃಹತ್ ಕಾರ್ಯಚರಣೆ ನಡೆಯಲಿದೆ. ಕಳೆದ ಆರು ದಿನಗಳಲ್ಲಿ ಕೇವಲ ಎರಡು ಸಾವಿರ ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದ್ದು, ನವೀನ್ ಸಾವಿನ ಬೆನ್ನಲೆ ತುರ್ತು ಕಾರ್ಯಚರಣೆಗೆ ವಿದೇಶಾಂಗ ಇಲಾಖೆ ಇಳಿದಿದೆ. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

  • ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ಮಾಸ್ಕೋ: ಆಪಲ್ ಕಂಪನಿ ರಷ್ಯಾದಲ್ಲಿ ಐಫೋನ್, ಐಪ್ಯಾಡ್, ಮ್ಯಾಕ್ ಹಾಗೂ ಇತರ ಹಾರ್ಡ್‍ವೇರ್ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸಿದೆ.

    ವಾರದ ಹಿಂದೆ ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲು ಪ್ರಾರಂಭಿಸಿದಾಗಿನಿಂದ ಹಲವು ಕಂಪನಿಗಳು ಒಂದೊಂದಾಗಿಯೇ ರಷ್ಯಾದ ಕೈ ಬಿಡುತ್ತಿವೆ. ಆಪಲ್ ಹಿಂದೆ ರಷ್ಯಾದಲ್ಲಿ ಆಪಲ್ ಪೇಯನ್ನು ಸ್ಥಗಿತಗೊಳಿಸಿತ್ತು. ರಷ್ಯಾದ ಹೊರಗಿನ ದೇಶಗಳಲ್ಲಿ ಸ್ಪುಟ್ನಿಕ್ ಹಾಗೂ ಆರ್‌ಟಿ ನ್ಯೂಸ್‍ಗಳಂತಹ ಅಪ್ಲಿಕೇಶನ್‍ಗಳನ್ನೂ ಆಪ್ ಸ್ಟೋರ್‌ನಿಂದ ತೆಗೆದು ಹಾಕಲಾಗಿತ್ತು. ಇದೀಗ ಲೈವ್ ಟ್ರಾಫಿಕ್ ಅನ್ನು ನಿಷ್ಕ್ರಿಯಗೊಳಿಸುವ ಮೂಲಕ ಪರೋಕ್ಷವಾಗಿ ಉಕ್ರೇನ್‍ಗೆ ಬೆಂಬಲ ನೀಡುತ್ತಿದೆ. ಇದನ್ನೂ ಓದಿ: IGTV ಯನ್ನು ಮುಚ್ಚಲಿದೆ ಇನ್‍ಸ್ಟಾಗ್ರಾಮ್

    ಆಪಲ್ ರಷ್ಯಾದಲ್ಲಿ ಎಲ್ಲಾ ಆನ್‍ಲೈನ್ ಉತ್ಪನ್ನಗಳ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದೆ. ಆಪಲ್‍ನ ರಷ್ಯನ್ ವೆಬ್‍ಸೈಟ್ ಕಾರ್ಯನಿರ್ವಹಿಸುತ್ತಿದ್ದರೂ ಆನ್‍ಲೈನ್ ಸ್ಟೋರ್ ಅನ್ನು ರಷ್ಯಾದಲ್ಲಿ ಮುಚ್ಚಲಾಗಿದೆ ಎಂದು ಆಪಲ್ ತಿಳಿಸಿದೆ. ಇದನ್ನೂ ಓದಿ: ಕಾಲಿಂದ ಕುಡಿಕೆಯೊದ್ದ ರಾಣಾ: ಪವರ್ ಸ್ಟಾರ್ ಪವನ್ ಕಲ್ಯಾಣ್ ಸಿನಿಮಾ ವಿರುದ್ಧ ದೂರು ದಾಖಲು

    ಆಪಲ್ ಕಳೆದ ವಾರದಿಂದ ರಷ್ಯಾಗೆ ರಫ್ತುಗಳನ್ನು ನಿಲ್ಲಿಸಿದೆ. ಉಕ್ರೇನ್ ಮೇಲೆ ನಡೆಯುತ್ತಿರುವ ದಾಳಿಗೆ ವಿರೋಧವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಆಪಲ್ ತಿಳಿಸಿದೆ. ಆಪಲ್ ಮಾತ್ರವಲ್ಲದೇ ಗೂಗಲ್, ಮೆಟಾ, ಹಾಗೂ ನೆಟ್‍ಫ್ಲಿಕ್ಸ್ ನಂತಹ ದೈತ್ಯ ಟೆಕ್ ಕಂಪನಿಗಳು ರಷ್ಯಾದಲ್ಲಿ ತಮ್ಮ ಉತ್ಪನ್ನಗಳಿಗೆ ವಿವಿಧ ರೀತಿಯ ನಿರ್ಬಂಧಗಳನ್ನು ಹೇರಿವೆ.

  • ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

    ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

    ಹಾವೇರಿ: ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ಬಲಿಯಾಗಿರುವ ಹಾವೇರಿ ಮೂಲದ ನವೀನ್ ಭಾವಚಿತ್ರಕ್ಕೆ ಜನ ಹೂ ಹಾಕಿ ಪೂಜೆ ಸಲ್ಲಿಸುತ್ತಿದ್ದಾರೆ.

    ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿರೋ ನವೀನ್ ಮನೆಯಲ್ಲಿ ನೀರವ ಮೌನ ಆವರಿಸಿದೆ. ಮಗನನ್ನ ಕಳೆದುಕೊಂಡು ದಿಕ್ಕು ತೋಚದಂತೆ ತಂದೆ ಕುಳಿತಿದ್ದಾರೆ. ಇನ್ನೊಂದೆಡೆ ಸಂಬಂಧಿಕರು ಮನೆಗೆ ಧಾವಿಸುತ್ತಿದ್ದಾರೆ. ಅಲ್ಲದೆ ಮನೆಯ ಮುಂದೆ ನವೀನ್ ಫೊಟೋ ಇಡಲಾಗಿದ್ದು, ಅದಕ್ಕೆ ಹೂ ಹಾಕಿ, ಶ್ರದ್ಧಾಂಜಲಿ ಸಲ್ಲಿಸಿ, ಫೋಟೋಗೆ ಕೈಮುಗಿದು ನಮಸ್ಕರಿಸುತ್ತಿದ್ದಾರೆ.

    ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ನವೀನ್ ತಂದೆ ಶೇಖರಗೌಡ, ನಿನ್ನೆ ಪ್ರಧಾನಿಗಳು ಮಾಜಿ ಸಿಎಂ, ಹಾಲಿ ಸಿಎಂ ಎಲ್ಲರೂ ನಮ್ಮ ಜೊತೆ ಮಾತಾಡಿದ್ದಾರೆ. ಜೀವಂತವಾಗಿ ದೇಶಕ್ಕೆ ನನ್ನ ಮಗ ಬರಲಿಲ್ಲ. ಸಾವಿರಾರು ವಿದ್ಯಾರ್ಥಿಗಳನ್ನು ಸೇಫ್ ಆಗಿ ಕರೆ ತನ್ನಿ ಅಂತ ನಾನು ಮೋದಿಯವರಿಗೆ ರಿಕ್ವೆಸ್ಟ್ ಮಾಡಿದ್ದೀನಿ. ನಿನ್ನೆ ಸಾಕಷ್ಟು ಅಧಿಕಾರಿಗಳು, ಮುಖಂಡರು ಬಂದು ಮಾತಾಡಿದ್ದಾರೆ ಎಂದರು. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ಉಕ್ರೇನ್ ನಲ್ಲಿ ಬಂಕರ್ ನಲ್ಲಿ ಉಳಿದ ವಿದ್ಯಾರ್ಥಿಗಳು ಬರೋಕೆ ಹೆದರ್ತಾ ಇದ್ದಾರೆ. ಮಗನನ್ನು ಯಾವಾಗ ಕರೆಸ್ತೀರಿ ಅಂದಾಗ ಮೊದಲು ಎಲ್ಲರೂ ಕೇವಲ ಆಶ್ವಾಸನೆ ಕೊಡುತ್ತಿದ್ದರು. ಅವನು ಬರೋದು ಯಾರಿಂದ ತಪ್ಪಿತು, ಯಾರಿಂದ ಆಯ್ತು ಅಂತ ನಂಗೆ ಗೊತ್ತಾಗಲಿಲ್ಲ. ಪೋಲೆಂಡ್, ರೋಮೇನಿಯಾ ಮೂಲಕ ಅವನು ಬರಬೇಕಿತ್ತು. ಜೀವ ರಕ್ಷಣೆಗೆ ಅಂತ ಬಹಳ ಪ್ರಯತ್ನ ಮಾಡಿದ್ರು ನನ್ನ ಮಗ. ಬಂಕರ್ ನಲ್ಲಿ ಇದ್ರೂ ಕಷ್ಟ, ಹೊರ ಬಂದ್ರೂ ಕಷ್ಟ ಅಂತ ಅವರು ಒದ್ದಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಯುದ್ಧ ಆಗೋದು ಸುಳ್ಳು, ಧೈರ್ಯವಾಗಿರಿ ಅಂತ ಕಾಲೇಜಿನವರು ಹೇಳಿದ್ರಂತೆ. ಹೀಗಾಗಿ ಯುದ್ಧ ಆಗಲ್ಲ ಅನ್ನೋ ವಿಶ್ವಾಸದಲ್ಲಿ ಎಲ್ಲರೂ ಇದ್ದರು. ಇಲ್ಲಿನ ರಾಜಕೀಯ, ರಿಸರ್ವೇಶನ್, ಶಿಕ್ಷಣ ಪದ್ಧತಿ ಸರಿ ಇಲ್ಲದ ಕಾರಣ ನಮ್ಮ ಮಗ ಇಲ್ಲಿ ಓದೋಕೆ ಆಗಲಿಲ್ಲ ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

  • ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ

    ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ

    ನವದೆಹಲಿ: ಕರ್ನಾಟಕದ ವಿದ್ಯಾರ್ಥಿಯೊಬ್ಬ ನಿನ್ನೆ ಬೆಳಗ್ಗೆ ಉಕ್ರೇನ್‍ನ ಖಾರ್ಕಿವ್‍ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ ಬೆನ್ನಲ್ಲೇ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನಗಳನ್ನು ಪರೀಶಿಲಿಸಲು ಪ್ರಧಾನಿ ಮೋದಿ ಮಂಗಳವಾರ 4ನೇ ಬಾರಿಗೆ ಉನ್ನತ ಸಭೆ ಕರೆದಿದ್ದಾರೆ.

    ಪ್ರಧಾನಿ ಮೋದಿ ಕರೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ : ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

    ಮೋದಿ ಅವರು ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಉಕ್ರೇನ್-ರಷ್ಯಾ ಯುದ್ಧಕ್ಕೆ ಭಾರತದ ಪ್ರತಿಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ. ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಭಾರತದ ವಿಶೇಷ ರಾಯಭಾರಿಗಳಾಗಿ ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ರಾಷ್ಟ್ರಗಳಿಗೆ ತೆರಳಲು ಈ ಹಿಂದೆ ನಿರ್ಧರಿಸಲಾಗಿತ್ತು.

    ಉಕ್ರೇನ್‍ನ ಖಾರ್ಕಿವ್‍ನಲ್ಲಿ ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‍ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್ ಮೇಲೆ ಖಾರ್ಕಿವ್‍ನ ಬೀದಿಯಲ್ಲಿ ಶೆಲ್ ದಾಳಿ ನಡೆಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯು ಸಾವನ್ನಪ್ಪಿದ್ದಾನೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿತ್ತು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಕರ್ನಾಟಕದ ಹಾವೇರಿ ಮೂಲದ ಭಾರತೀಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಹಿನ್ನೆಲೆ ಪ್ರಧಾನಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

  • ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ನವೀನ್ ಮೃತದೇಹ ತರುವ ಪ್ರಯತ್ನ ನಡೆಯುತ್ತಿದೆ

    ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ದದಲ್ಲಿ ಸಾವನ್ನಪ್ಪಿದ ಕನ್ನಡಿಗ ನವೀನ್ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ಕುಟುಂಬಕ್ಕೆ ಪರಿಹಾರ ನೀಡುತ್ತೇವೆ. ಆದರೆ ನಮ್ಮ ಮೊದಲ ಆದ್ಯತೆ ಅವರ ಮೃತದೇಹವನ್ನು ತರಿಸುವುದಾಗಿದೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದ ಅವರು, ಕುಟುಂಬ ಕೂಡಾ ದುಃಖದಲ್ಲಿ ಇದೆ. ಶವ ತರಿಸಿಕೊಡುವಂತೆ ಅವರು ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನವೀನ್ ಶವ ಬಂದ ನಂತರ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.

    ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಡ್ರೆಸ್ ಹೋಲುವ ಫೋಟೋವನ್ನು ಅವರ ಸ್ನೇಹಿತರು ಕಳಿಸಿದ್ದಾರೆ. ಈ ಬಗ್ಗೆ ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಮಾತನಾಡುತ್ತೇನೆ. ಮೃತದೇಹವನ್ನು ತೆಗೆದುಕೊಂಡು ಬರಲು ಎಲ್ಲಾ ಪ್ರಯತ್ನವನ್ನು ನಡೆಸುತ್ತಿದ್ದೇವೆ ಎಂದರು.

    ಕನ್ನಡಿಗರು ವಾಪಸ್ ತರಲು ವೇಗ ಕೊಡುತ್ತೇವೆ. 2-3 ದಿನಗಳಲ್ಲಿ 26 ವಿಮಾನಗಳು ಬರಲಿವೆ. ಇದರಲ್ಲಿ ಕನ್ನಡಿಗರನ್ನು ಶೀಘ್ರವಾಗಿ ಕರೆಸಲು ಕ್ರಮ ತೆಗೆದುಕೊಳ್ಳುತ್ತೇವೆ. ಯುದ್ಧ ನಡೆಯುತ್ತಿರುವುದರಿಂದ ಈ ಸಮಸ್ಯೆ ಆಗುತ್ತಿದೆ. ಭಾರತ ಸರ್ಕಾರ ಪ್ಲ್ಯಾನ್ ಮಾಡಿ ವಾರ್ ಝೋನ್‍ನಿಂದ ಬೇರೆ ಬೇರೆ ಕಡೆ ಕರೆಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ನವೀನ್ ಸ್ನೇಹಿತರ ಆರೋಗ್ಯ ವಿಚಾರವಾಗಿ ಮಾತನಾಡಿದ ಅವರು, ಒಂದು ಮಾಹಿತಿ ನವೀನ್ ಜೊತೆ ಇದ್ದರು ಅಂತ ಇದೆ. ಇನ್ನೊಂದು ಮಾಹಿತಿ ಇರಲಿಲ್ಲ ಅಂತ ಇದೆ. ಇಂದು ಸಂಪೂರ್ಣ ಮಾಹಿತಿ ಈ ಬಗ್ಗೆ ಪಡೆದುಕೊಳ್ಳುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಕಾಂಗ್ರೆಸ್ ಟೀಕೆ ವಿಚಾರವಾಗಿ ಮಾತನಾಡಿ, ವಾರ್ ಝೋನ್ ಇರುವಾಗ ಕಾಂಗ್ರೆಸ್ ರಾಜಕಾರಣ ಮಾಡುತ್ತಾರೆ ಎಂದರೆ ಎಷ್ಟು ಕೆಳಗೆ ಇಳಿದ್ದಿದ್ದಾರೆ ಅಂತ ಗೊತ್ತಾಗುತ್ತದೆ. ಕಾಂಗ್ರೆಸ್ ಇದ್ದಾಗ ಎಷ್ಟೋ ಯುದ್ಧ ಆಗಿತ್ತು. ಆದರೆ ಅವರು ಒಬ್ಬರನ್ನು ಕರೆದುಕೊಂಡು ಬಂದಿಲ್ಲ. ಆದರೆ ಈಗ ಟೀಕೆ ಮಾಡುತ್ತಿದ್ದಾರೆ. ಮೋದಿ ಸರ್ಕಾರ ನಿರಂತರ ಪ್ರಕ್ರಿಯೆ ಮಾಡುತ್ತಿದೆ. 2-3 ದಿನಗಳಲ್ಲಿ 26 ವಿಮಾನಗಳು ಬರುತ್ತಿದೆ. ಆದರೆ ಕಾಂಗ್ರೆಸ್ ರಾಜಕೀಯ ಮಾತ್ರ ಮುಖ್ಯವಾಗಿದೆ. ಇದು ಕಾಂಗ್ರೆಸ್ ಎಷ್ಟು ಕೆಳಗೆ ಇಳಿದಿದೆ ಅಂತ ತೋರಿಸುತ್ತದೆ ಎಂದು ಕಿಡಿಕಾರಿದರು.

  • ಬೈಡನ್ ಭಾಷಣದ ನಂತರ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆದ ಇರಾನಿಯನ್

    ಬೈಡನ್ ಭಾಷಣದ ನಂತರ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆದ ಇರಾನಿಯನ್

    ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾ ದಾಳಿ ವಿರುದ್ಧ ಉಕ್ರೇನ್ ಅವರನ್ನು ಬೆಂಬಲಿಸಿ ಮಾತನಾಡುವಾಗ ಉಕ್ರೇನ್‍ನ ಜನರನ್ನು ತಪ್ಪಾಗಿ ಇರಾನ್‍ನ ಜನರು ಎಂದು ಉಲ್ಲೇಖಿಸಿದ್ದರು. ಇದೀಗ ಇದು ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.

    ಪುಟಿನ್ ಕೀವ್‍ನ್ನು ಟ್ಯಾಂಕ್‍ಗಳೊಂದಿಗೆ ಸುತ್ತಬಹುದು. ಆದರೆ ಅವರು ಎಂದಿಗೂ ಇರಾನ್ ಜನರ ಮನಸನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಬೈಡನ್ ಅವರು ಹೇಳಿದ್ದರು. ಇದು ರಷ್ಯಾದ ಆಕ್ರಮಣದ ವಿರುದ್ಧ ಒಗ್ಗಟ್ಟನ್ನು ಪ್ರದರ್ಶಿಸುವ ಭಾಷಣವಾಗಿತ್ತು.

    ಈ ಹೇಳಿಕೆಯಲ್ಲಿ ಉಕ್ರೇನ್‍ನ ಜನ ಎನ್ನುವ ಬದಲು ಇರಾನ್‍ನ ಜನರೆಂದು ಉಲ್ಲೇಖಿಸಿದ್ದು, ತಕ್ಷಣವೇ ಟ್ವಿಟ್ಟರ್‌ನಲ್ಲಿ ಟ್ರೇಂಡಿಂಗ್ ಆಗಿದೆ. ಟ್ವಿಟ್ಟರ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣದಲ್ಲಿ ಇರಾನಿಯನ್ ಹ್ಯಾಶ್‍ಟ್ಯಾಗ್ ಸದ್ದು ಮಾಡುತ್ತಿದೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಬೈಡನ್ ಭಾಷಣ ಮಾಡುವಾಗ ಇದೇ ಮೊದಲ ಬಾರಿಗೆ ಎಡವಟ್ಟು ಮಾಡಿಕೊಂಡಿಲ್ಲ. ಈ ರೀತಿ ಹಲವು ಬಾರಿ ಆಗಿದೆ. ಕಳೆದ ವರ್ಷ ಅವರು ತಮ್ಮ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೆ ಹ್ಯಾರಿಸ್ ಎಂದು ತಪ್ಪಾಗಿ ಕರೆದಿದ್ದರು. ಇದನ್ನೂ ಓದಿ: ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

  • ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ರಷ್ಯಾ ದಾಳಿಗೆ ಮೃತಪಟ್ಟ ಕನ್ನಡಿಗ ನವೀನ್ ಮೃತದೇಹ ಪತ್ತೆ

    ಕೀವ್: ಪುಟ್ಟ ರಾಷ್ಟ್ರ ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಕನ್ನಡಿಗ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದು, ಇದೀಗ ಅವರ ಮೃತದೇಹ ಪತ್ತೆಯಾಗಿದೆ.

    ನವೀನ್ ಮೃತದೇಹದ ಫೋಟೋವನ್ನು ಅವರ ಸ್ನೇಹಿತರಿಗೆ ಕಳುಹಿಸಲಾಗಿದೆ. ಈ ಫೋಟೋ ಇದೀಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಸದ್ಯ ಖಾರ್ಕಿವ್ ನಲ್ಲಿ ನವೀನ್ ಮೃತದೇಹ ಇದ್ದು, ಇಂದು ಭಾರತಕ್ಕೆ ಸಾಗಿಸಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಉಕ್ರೇನ್ ರಾಯಭಾರಿ ಕಚೇರಿ ಮೂಲಕ ನವೀನ್ ಪಾರ್ಥಿವ ಶರೀರ ವಾಪಸ್ ತರಲು ಯತ್ನ ಮಾಡಲಾಗುತ್ತಿದೆ. ಅಧಿಕಾರಿಗಳ ಹಂತದಲ್ಲಿ ಮಾತುಕತೆ ಈಗಾಗಲೇ ನಡೆದಿದ್ದು, ಖಾರ್ಕಿವ್ ನಿಂದ ಇಂದು ಗಡಿಗೆ ರಸ್ತೆ ಮಾರ್ಗವಾಗಿ ಮೃತ ದೇಹ ಸಾಗಿಸುವ ಸಾಧ್ಯತೆ ಇದೆ.‌ ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ರವಾನಿಸಲು ಚಿಂತನೆ ನಡೆಸಲಾಗಿದ್ದು, ದೆಹಲಿ ಮೂಲಕ ರಾಜ್ಯ ಸರ್ಕಾರಕ್ಕೆ ಒಪ್ಪಿಸಲು ಯೋಜನೆ ರೂಪಿಸಲಾಗಿದೆ.

    ರಷ್ಯಾ-ಉಕ್ರೇನ್ ನಡುವಿನ ಯುದ್ಧದ ತೀವ್ರಗೊಳ್ಳುತ್ತಿದೆ. ಆದಷ್ಟು ಬೇಗ ಉಕ್ರೇನ್ ತೊರೆಯಿರಿ ಎಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟ ಬೆನ್ನಲ್ಲೇ ರಷ್ಯಾ ಶೆಲ್ ದಾಳಿಗೆ ಕನ್ನಡಿಗ ನವೀನ್ (22) ಬಲಿಯಾಗಿದ್ದಾರೆ. ಖಾರ್ಕೀವ್‍ನಲ್ಲಿ ಮೆಡಿಕಲ್ ಓದುತ್ತಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿಯ ನವೀನ್ ದುರಂತ ಸಾವನ್ನಪ್ಪಿದ್ದಾರೆ. ಖಾರ್ಕೀವ್‍ನಲ್ಲಿ ಇವತ್ತು ಬೆಳಗ್ಗೆ 7 ಗಂಟೆಗೆ ಸೂಪರ್ ಮಾರ್ಕೆಟ್‍ಗೆ ಹೋಗಿ ಸಾಲಿನಲ್ಲಿ ನಿಂತಿದ್ದಾಗ ನವೀನ್ ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ: ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ

    ಈ ಬಗ್ಗೆ, ಖಾರ್ಕೀವ್‍ನಲ್ಲಿರುವ ನವೀನ್ ಸ್ನೇಹಿತ ಶ್ರೀಕಾಂತ್ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಬೆಳಗ್ಗೆ 7.30ಕ್ಕೆ ರೈಲ್ವೇ ನಿಲ್ದಾಣಕ್ಕೆ ಹೋಗಬೇಕಿತ್ತು. ರೈಲಿನ ಮೂಲಕ ಪೋಲೆಂಡ್ ಗಡಿ ತಲುಪಬೇಕಿತ್ತು. ನವೀನ್ ಸೇರಿ 8 ಜನರ ನಮ್ಮ ತಂಡ ರೈಲ್ವೇ ನಿಲ್ದಾಣಕ್ಕೆ ಹೊರಡಬೇಕಿತ್ತು. ಈ ವೇಳೆ ಎಲ್ಲರಿಗೂ ಊಟ ತರಲು ಬಂಕರ್‍ನಿಂದ ನವೀನ್ ಹೊರ ಹೋಗಿದ್ದ. ಸೂಪರ್ ಮಾರ್ಕೆಟ್ ಬಳಿ ತುಂಬಾ ಕ್ಯೂ ಇದೆ. ನನ್ನ ಬಳಿ ದುಡ್ಡಿಲ್ಲ, ಸ್ವಲ್ಪ ಹಣ ಹಾಕು ಅಂದ. ಅದೇ ಅವನ ಕೊನೆ ಮಾತಾಗಿತ್ತು. ನಮಗೆಂದು ಊಟ ತರಲು ಹೋದವರ ಬರಲೇ ಇಲ್ಲ ಅಂತ ಭಾವುಕರಾದರು.