ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಶಿಕ್ಷೆಯಾಗಿ ವಿದೇಶಿ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ರಷ್ಯಾದ ವಿಮಾನ ಹಾಗೂ ಹಡಗುಗಳನ್ನು ಜಾಗತಿಕವಾಗಿ ನಿಷೇಧಿಸಬೇಕು ಎಂದು ಉಕ್ರೇನ್‍ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒತ್ತಾಯಿಸಿದರು.
ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಅವರು, ನಾವು ಎಲ್ಲಾ ಬಂದರು, ಕಾಲುವೆ ಹಾಗೂ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರಷ್ಯಾ ಪ್ರವೇಶಿಸದಂತೆ ಮುಚ್ಚಬೇಕು ಎಂದು ಒತ್ತಾಯಿಸಿದ ಅವರು, ರಷ್ಯಾದ ಕ್ಷಿಪಣಿಗಳು, ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಸಂಚರಿಸದಂತೆ ನಿರ್ಬಂಧ ಹೇರಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದರು.
ರಷ್ಯಾ ಕದನ ವಿರಾಮದ ನೆಪದಲ್ಲಿ ಮಾತುಕತೆ ನಡೆಸುತ್ತಿದ್ದಾಗ ಕೀವ್‍ನ್ನು ಅತಿಕ್ರಮಿಸಲು ಉಕ್ರೇನ್ ಮೇಲೆ ಬಾಂಬ್ ದಾಳಿ ಹಾಗೂ ಗುಂಡಿನ ದಾಳಿ ಮಾಡಿದೆ ಎಂದು ಆರೋಪಿಸಿದ ಅವರು, ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಝೆಲೆನ್ಸ್ಕಿ ರಷ್ಯಾ ನಾಯಕರಿಗೆ ವೀಡಿಯೋ ಸಂದೇಶದಲ್ಲಿ ಹೇಳಿದರು. ಇದನ್ನೂ ಓದಿ:ಕಾಂಗ್ರೆಸ್ ಪಾದಯಾತ್ರೆ- ಇಂದು, ನಾಳೆ ಬೆಂಗಳೂರು ಲಾಕ್ ಪಕ್ಕಾ
ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗಿನ ಫೋನ್ ಸಂವಾದ ನಡೆಸಿದರು. ಈ ವೇಳೆ ರಷ್ಯಾದ ಗಡಿಯ ಸಮೀಪವಿರುವ ಉಕ್ರೇನ್‍ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‍ನಲ್ಲಿ ರಷ್ಯಾದ ದಾಳಿಯಿಂದ ಕನಿಷ್ಠ 11 ಜನರು ಸಾವನ್ನಪ್ಪಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಉದ್ಯೋಗ ನೀಡಲು ಸಮಾಜವಾದಿ ಪಕ್ಷ ಬದ್ಧ : ಅಖಿಲೇಶ್ ಯಾದವ್
ರಷ್ಯಾದ ದಾಳಿಗೆ ಉಕ್ರೇನ್ ತತ್ತರಿಸಿದ್ದು, ಈವರೆಗೆ 14 ಮಕ್ಕಳು ಸೇರಿದಂತೆ ರಷ್ಯಾ ದಾಳಿಯಲ್ಲಿ 350ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ.
ನವದೆಹಲಿ: ಉಕ್ರೇನ್ ಸಂಕಷ್ಟದ ಸಂದರ್ಭದಲ್ಲಿ ಭಾರತಕ್ಕೆ ಮರಳಿ ಬರುತ್ತಿರುವ ಪ್ರಯಾಣಿಕರಿಗೆ ಕೋವಿಡ್-19 ನಿರ್ಬಂಧಗಳಲ್ಲಿ ವಿನಾಯಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲು ಪ್ರಾರಂಭಿಸಿದಾಗಿನಿಂದ ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರು ತಾಯ್ನಾಡಿಗೆ ಮರಳಲು ಹಾತೊರೆಯುತ್ತಿದ್ದಾರೆ. ಈಗಾಗಲೇ ಭಾರತ ಸರ್ಕಾರ ಸಾವಿರಾರು ಭಾರತೀಯರನ್ನು ಕರೆ ತರುವ ಕೆಲಸ ಮಾಡುತ್ತಿದೆ. ಇದೇ ವೇಳೆ ಆರೋಗ್ಯ ಸಚಿವಾಲಯ ಕೋವಿಡ್ ನಿಯಮಾವಳಿಗಳಿಗೆ ಕೊಂಚ ಬ್ರೇಕ್ ನೀಡಿದೆ. ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಅರ್ಜಿ ಹಾಕಿದ ಉಕ್ರೇನ್
ತುರ್ತು ಪರಿಸ್ಥಿತಿಯಲ್ಲಿ ಉಕ್ರೇನ್‍ನಿಂದ ಭಾರತಕ್ಕೆ ಮರಳುವವರಿಗೆ ಪ್ರೀ-ಬೋರ್ಡಿಂಗ್ ಆರ್‍ಟಿಪಿಸಿಆರ್ ಪರೀಕ್ಷೆ ಹಾಗೂ ಲಸಿಕಾ ಪ್ರಮಾಣ ಪತ್ರವನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸೋಮವಾರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಮೂಲಕ ಕೋವಿಡ್ ನಿಯಮಾವಳಿಗೆ ಸ್ವಲ್ಪ ಮಟ್ಟಿನ ವಿನಾಯಿತಿ ದೊರಕಿದೆ. ಇದನ್ನೂ ಓದಿ: ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?
ಫೆಬ್ರವರಿ 28ರ ವರೆಗೆ 6 ವಿಮಾನಗಳು ಉಕ್ರೇನ್‍ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆ ತಂದಿದ್ದು, ಅದರಲ್ಲಿ ಸುಮಾರು 1,400 ಪ್ರಯಾಣಿಕರಿದ್ದರು. 1 ವಿಮಾನ ಮುಂಬೈಗೆ ಮರಳಿದ್ದು, ಉಳಿದ ವಿಮಾನಗಳು ದೆಹಲಿಗೆ ಬಂದಿಳಿದಿವೆ. ಆದರೆ ಇಲ್ಲಿ ವರೆಗೆ ಯಾರೊಬ್ಬರನ್ನೂ ಪ್ರತ್ಯೇಕವಾಗಿ ಇರಿಸಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ.
ಕೀವ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದಾರೆ.
ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಸದಸ್ಯತ್ವ ಸೇರ್ಪಡೆ ಸಹಿ ಹಾಕಿದ್ದಾರೆ ಎಂದು ಉಕ್ರೇನ್‍ನ ಪಾರ್ಲಿಮೆಂಟ್‍ನಲ್ಲಿ ಘೋಷಣೆ ಮಾಡಲಾಯಿತು. ಈ ಮೂಲಕ ರಷ್ಯಾ ತೀವ್ರ ವಿರೋಧದ ನಡುವೆ ಯುರೋಪಿಯನ್ ಒಕ್ಕೂಟಕ್ಕೆ ಸೇರುವ ನಿರ್ಧಾರವನ್ನು ಝೆಲೆನ್ಸ್ಕಿ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?
Ukraine President Volodymyr Zelenskyy has signed an application for the membership of Ukraine in the European Union, announces Parliament of Ukraine pic.twitter.com/n6JDfh1G6k
ಉಕ್ರೇನ್‍ಗೆ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ರಷ್ಯಾ ವಿರೋಧ ವ್ಯಕ್ತಪಡಿಸಿ ಯುದ್ಧ ಸಾರಿತ್ತು. ಇದೀಗ ರಷ್ಯಾ, ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್‍ಗೆ ಸದಸ್ಯತ್ವಕ್ಕೆ ಅರ್ಜಿ ಹಾಕಿರುವುದು ರಷ್ಯಾವನ್ನು ಇನ್ನಷ್ಟು ಕೆರಳಿಸಿದೆ. ಉಕ್ರೇನ್ ಯುರೋಪಿಯನ್ ಒಕ್ಕೂಟಕ್ಕೆ ಸೇರಬಾರದರು ಎಂದು ರಷ್ಯಾ ಪಟ್ಟು ಹಿಡಿದಿತ್ತು. ಇದನ್ನೂ ಓದಿ: ದಿಢೀರ್ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್ ಬ್ಯಾಕ್
ಕೀವ್: ರಷ್ಯಾ ಮೂರೂ ವಿಭಾಗಗಳಲ್ಲಿ ಶೆಲ್, ರಾಕೆಟ್, ಬಾಂಬ್ ದಾಳಿ ಮಾಡುತ್ತಿರುವ ಕಾರಣ ಉಕ್ರೇನ್‍ನಲ್ಲಿ ಮಹಾವಲಸೆ 5ನೇ ದಿನ ಇಂದು ಕೂಡ ಮುಂದುವರಿದಿದೆ.
ಇಲ್ಲಿವರೆಗೆ 4 ಲಕ್ಷ ಜನ ಉಕ್ರೇನ್ ತೊರೆದಿದ್ದು, ಪರಿಸ್ಥಿತಿ 7 ಲಕ್ಷದವರೆಗೆ ಮುಂದುವರಿಯಲಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ, ಪೋಲೆಂಡ್ -2,81,000, ಹಂಗೇರಿ – 84,586, ಮಾಲ್ಡೋವಾ – 36,398, ಯೂರೋಪ್ – 34,600, ರೊಮೇನಿಯಾ – 32,517, ಸ್ಲೋವಾಕಿಯಾ – 30,000, ಬೆಲಾರಸ್ – 311, ಲ್ಯಾಟಿವಿಯಾ – 163 ಜನ ವಲಸೆ ಹೋಗಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವು: ಅರಿಂದಮ್ ಬಾಗ್ಚಿ
ಅಧಃಪತನ ತಲುಪಿದ ರಷ್ಯಾದ ಆರ್ಥಿಕತೆ:
ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಷ್ಯಾದ ಆರ್ಥಿಕತೆ ಅಧಃಪತನ ತಲುಪುತ್ತಿದೆ. ರಷ್ಯಾದ ಯುದ್ಧ ನಡೆ ಖಂಡಿಸಿ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್, ಯೂರೋಪಿಯನ್ ಒಕ್ಕೂಟ ಸೇರಿದಂತೆ ಹಲವು ದೇಶಗಳು ವಿವಿಧ ಧಿಗ್ಬಂಧನ ವಿಧಿಸಿರೋದ್ರಿಂದ ರಷ್ಯಾಗೆ ಹೊಡೆತ ಬಿದ್ದಿದೆ. ರುಬೆಲ್ ಮೌಲ್ಯ ದಾಖಲೆಯ ಶೇ.30ರಷ್ಟು ಕುಸಿತಕಂಡಿದ್ದು, ರಫ್ತು ಕಂಪನಿಗಳಿಗೆ ವಿದೇಶಿ ಹಣ ಮಾರಾಟಕ್ಕೆ ಸಿದ್ಧವಾಗುವಂತೆ ಸೂಚನೆ ನೀಡಲಾಗಿದೆ. ಹಣದುಬ್ಬರದ ಏಕಾಏಕಿ ಜಿಗಿತ ಕಂಡಿದ್ದು, ರಷ್ಯಾ ಸೆಂಟ್ರಲ್ ಬ್ಯಾಂಕ್‍ನ ಬಡ್ಡಿದರ ದಿಢೀರ್ ಏರಿಕೆ ಆಗಿದೆ. ಶೇ. 9.5 ರಿಂದ ಶೇ.20 ರಷ್ಟು ಏರಿಕೆ (ಕೀ ಇಂಟರೆಸ್ಟ್ ರೇಟ್) ಏರಿಕೆ ಕಂಡಿದೆ.ಇದನ್ನೂ ಓದಿ: ದಿಢೀರ್ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್ ಬ್ಯಾಕ್
ಪುಟಿನ್ ನಡೆಗೆ ಕಿಡಿ:
ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನಡೆಗೆ ಪ್ರಪಂಚದ ಹಲವು ದೇಶಗಳು ಕೆಂಡಾಮಂಡಲವಾಗಿವೆ. ಝೆಕ್ ರಿಪಬ್ಲಿಕ್‍ನ ರಾಜಧಾನಿ ಪ್ರಾಗ್ಯುನಲ್ಲಿ ಬೃಹತ್ ಪ್ರತಿಭಟನೆ ನಡೀತು. ಲಕ್ಷಾಂತರ ಮಂದಿ ಕೂಡಲೇ ಯುದ್ಧವನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ರು. ಉಕ್ರೇನ್ ರಾಷ್ಟ್ರಧ್ವಜ ಹಿಡಿದು ಉಕ್ರೇನ್ ಪರ ಘೋಷಣೆ ಕೂಗಿದ್ರು. ಟೋಕಿಯೋದ ಶಿಬುಯಾದಲ್ಲೂ ಪ್ರತಿಭಟನೆ ನಡೆಸಿ ಪುಟಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇತ್ತ ರಷ್ಯಾದ ಮಾಸ್ಕೋದಲ್ಲೂ ಪುಟಿನ್ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ. ಸಾವಿರಾರು ಮಂದಿ ರಷ್ಯನ್ನರು ಯುದ್ಧ ನಿಲ್ಲಿಸುವಂತೆ ಪುಟಿನ್‍ಗೆ ಒತ್ತಾಯಿಸುತ್ತಿದ್ದಾರೆ. ಬೆಲಾರಸ್‍ನ ಅಪಾರ್ಟ್‍ಮೆಂಟ್‍ಗಳನ್ನೂ ಉಕ್ರೇನ್ ಪರ ಘೋಷಣೆ ಕೇಳಿ ಬಂತು. ಯುದ್ಧವನ್ನು ಖಂಡಿಸಿ ಯುರೋಪಿಯನ್ ದೇಶಗಳಲ್ಲಿರುವ ರಷ್ಯನ್ನರು ತಮ್ಮ ಪಾಸ್‍ಪೋರ್ಟ್‍ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ರು. ನೆದರ್‌ಲೆಂಡ್ ರಾಜಧಾನಿ ಅಮ್‍ಸ್ಟರ್‍ಡ್ಯಾಮ್‍ನಲ್ಲೂ ಉಕ್ರೇನ್ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೀತು. ಯುದ್ಧ ನಿಲ್ಲಿಸುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದ್ರು.
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ಅದರಲ್ಲೂ ವಿಶೇಷವಾಗಿ ಕೃಷಿ ವಲಯದ ರಫ್ತಿನ ಮೇಲೆ ಪರಿಣಾಮ ಬೀರುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆತಂಕ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ವ್ಯಾಪಾರ ಮತ್ತು ಉದ್ಯಮದ ನಾಯಕರೊಂದಿಗಿನ ಸಭೆ ನಡೆಸಿದ ನಂತರ ಸೀತಾರಾಮನ್ ಅವರು, ರಷ್ಯಾ-ಉಕ್ರೇನ್ ದೇಶಗಳ ಸಂಘರ್ಷ ದಿನದಿಂದ ದಿನಕ್ಕೆ ಹೇಗೆ ಭಾರತದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಚರ್ಚೆ ಮಾಡಿದ್ದಾರೆ. ನಂತರ ಈ ಕುರಿತು ಮಾತನಾಡಿದ ಅವರು, ರಷ್ಯಾ-ಉಕ್ರೇನ್ ದೇಶಗಳ ಸಂಘರ್ಷವನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದು ದೇಶದ ವ್ಯಾಪಾರದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಆರ್ಮಿ ಪಬ್ಲಿಕ್ ಶಾಲೆಯಲ್ಲಿ 1,300 ಸಸಿ ನೆಟ್ಟಿದ ಕಮಾಂಡಿಂಗ್ ಮೇಜರ್ ಜನರಲ್!
ಉಕ್ರೇನ್ ನಲ್ಲಿ ಸಿಲುಕಿರುವವರ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅವರನ್ನು ನಾವು ಕರೆದುಕೊಂಡು ಬರುತ್ತೇವೆ. ಆದರೆ ಉಕ್ರೇನ್ ಮತ್ತು ರಷ್ಯಾಕ್ಕೆ ವಿಶೇಷವಾಗಿ ಕೃಷಿ ವಲಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ರಫ್ತುದಾರರಿಗೆ ಏನಾಗಲಿದೆ ಎಂಬುದರ ಕುರಿತು ನಾನು ಹೆಚ್ಚು ಚಿಂತಿತನಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರವು ಈಗಾಗಲೇ ಉದ್ಭವಿಸಿರುವ ಪರಿಸ್ಥಿತಿಯನ್ನು ನೋಡುತ್ತಿದೆ. ಆದರೆ ನಾನು ವಿವಿಧ ಸಂಬಂಧಿತ ಸಚಿವಾಲಯಗಳ ಮೂಲಕ ಸಂಪೂರ್ಣ ಮೌಲ್ಯಮಾಪನವನ್ನು ಹೊಂದಿರಬೇಕು. ಆಗ ಮಾತ್ರ ನಾನು ಅದರ ಬಗ್ಗೆ ಪ್ರತಿಕ್ರಿಯಿಸುವ ಸ್ಥಿತಿಯಲ್ಲಿರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ
ಉಕ್ರೇನ್ ಸೂರ್ಯಕಾಂತಿ ಎಣ್ಣೆ ಬೀಜಗಳು ಮತ್ತು ರಸಗೊಬ್ಬರಗಳ ಪ್ರಮುಖ ಪೂರೈಕೆದಾರ ಆಗಿದೆ. ಈ ಯುದ್ಧದಿಂದ ಪೂರೈಕೆಯಲ್ಲಿನ ಅಡಚಣೆಯು ಖಾದ್ಯ ತೈಲದಂತಹ ಅಗತ್ಯ ಸರಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಅಗತ್ಯ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ ಎಂದರು.
ನವದೆಹಲಿ: ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವನ್ನು ಕಳುಹಿಸಲಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ಸೋಮವಾರ ತಿಳಿಸಿದ್ದಾರೆ.
ರಷ್ಯಾ ದಾಳಿಯಿಂದಾಗಿ ಉಕ್ರೇನ್ ತತ್ತರಿಸಿ ಹೋಗಿದೆ. ಸೈನಿಕರು ಮಾತ್ರವಲ್ಲದೇ ದೇಶವನ್ನು ರಕ್ಷಿಸಲು ಬಯಸುವ ನಾಗರಿಕರಿಗೂ ಉಕ್ರೇನ್ ಶಸ್ತ್ರಾಸ್ತ್ರ ನೀಡುತ್ತಿದೆ. ಇದೀಗ ಯುದ್ಧದಿಂದ ನಲುಗಿರುವ ದೇಶಕ್ಕೆ ಸಹಾಯ ಮಾಡಲು ಭಾರತ ವೈದ್ಯಕೀಯ ಹಾಗೂ ಮಾನವೀಯ ನೆರವನ್ನು ನೀಡಲು ಮುಂದಾಗಿದೆ. ಇದನ್ನೂ ಓದಿ: ಫಸ್ಟ್ ಟೈಂ ಸೆಬಿಗೆ ಮಹಿಳೆ ಬಾಸ್
ಮಾಧ್ಯಮಗಳೊಂದಿಗೆ ಮಾತನಾಡಿದ ಬಾಗ್ಚಿ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ಈಗಾಗಲೇ 6 ವಿಮಾನಗಳನ್ನು ಕಳುಹಿಸಿ 1,400 ಭಾರತೀಯರನ್ನು ಕರೆತರಲಾಗಿದೆ. ಭಾರತೀಯ ರಾಯಭಾರಿಯ ಆದೇಶ ಬರುತ್ತಿದ್ದಂತೆ ಸುಮಾರು 8,000 ಭಾರತೀಯರು ಉಕ್ರೇನ್ ತೊರೆದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದಿಢೀರ್ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್ ಬ್ಯಾಕ್
ಉಕ್ರೇನ್ ಗಡಿಯಲ್ಲಿರುವ 4 ದೇಶಗಳಿಗೆ ವಿಶೇಷ ರಾಯಭಾರಿಗಳನ್ನು ಕಳುಹಿಸಲಾಗುವುದು. ಇಂದು ರಾತ್ರಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉಕ್ರೇನ್, ಕಿರಣ್ ರಿಜಿಜು ಸ್ಲೋವೆಕಿಯಾ ಗಣರಾಜ್ಯ, ಹರ್ದೀಪ್ ಸಿಂಗ್ ಪುರಿ ಹಂಗೇರಿ ಹಾಗೂ ಜನರಲ್ ವಿಕೆ ಸಿಂಗ್ ಪೋಲೆಂಡ್‍ಗೆ ಪ್ರಯಾಣಿಸಲಿದ್ದಾರೆ ಎಂದು ಬಾಗ್ಚಿ ತಿಳಿಸಿದರು.
ಮಡಿಕೇರಿ: ಉಕ್ರೇನ್‍ನಲ್ಲಿ ಕರ್ನಾಟಕದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಹಿನ್ನೆಲೆಯಲ್ಲಿ ಅಲ್ಲಿ ಸಿಲುಕಿರುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂಜಾಗ್ರತೆ ವಹಿಸಿದೆ. ಅಲ್ಲದೆ ನಮ್ಮ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದಲೂ ಒಬ್ಬರು ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಅಂತ್ಯೋದಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್‍ನಲ್ಲಿ ಸಿಲುಕಿರುವ ನಾಗರಿಕರ ಜೊತೆಗೆ ನಿನ್ನೆಯೇ ರಾಜ್ಯದ 12 ವಿದ್ಯಾರ್ಥಿಗಳನ್ನು ಕರೆತರಲಾಗಿದೆ. ಸಂಪರ್ಕದ ಕೊರತೆ ಮತ್ತು ಏನು ಆಗುವುದಿಲ್ಲ ಎಂಬ ಮನೋಭಾವದಿಂದ ಕೆಲವು ವಿದ್ಯಾರ್ಥಿಗಳು ಅಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲದೇ ಅಲ್ಲೇ ಉಳಿದುಕೊಂಡಿರುವವರ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ವಂತ ಸಾಮಾಜಿಕ ಮಾಧ್ಯಮ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್
ನನ್ನ ಇಲಾಖೆಯಿಂದಲೂ ಒಬ್ಬರು ಅಧಿಕಾರಿಯನ್ನು ಇದಕ್ಕಾಗಿ ನೇಮಿಸಲಾಗಿದೆ. ಅಲ್ಲಿ ಒಂದಷ್ಟು ಜನರಿಗೆ ಆಹಾರದ ಕೊರತೆಯೂ ಎದುರಾಗಿದೆ. ಅದನ್ನು ನಿಭಾಯಿಸುವ ಕೆಲಸ ಆಗುತ್ತಿದೆ. ಈಗಾಗಲೇ ದೂರವಾಣಿ ಮೂಲಕ ವಿದ್ಯಾರ್ಥಿಗಳ ಜೊತೆ ಮಾತಾನಾಡಿ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.
ರಷ್ಯಾ ಹಾಗೂ ಉಕ್ರೇನ್ ಗಡಿಯ 40 ಕೀಲೋ ಮೀಟರ್‍ಗಳಲ್ಲಿ ಇರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕೇಂದ್ರ ರಾಯಭಾರಿ ಅವರೊಂದಿಗೆ ಸರ್ಕಾರ ಮಾಹಿತಿ ನೀಡುತ್ತಿದೆ. ಒಟ್ಟಿನಲ್ಲಿ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳನ್ನು ಕರೆತರುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!
ಕೀವ್: ಪಬ್ಲಿಕ್ ಬಂಕರ್‌ಗಳಲ್ಲಿ ಇರುವ ಭಾರತೀಯ ವಿದ್ಯಾರ್ಥಿಗಳನ್ನು ಒದ್ದು ವಾಪಸ್ ಅಪಾರ್ಟ್ಮೆಂಟ್‌ಗೆ ಕಳುಹಿಸುವ ಮೂಲಕ ಹಲ್ಲೆ ಎಸಗಲಾಗುತ್ತಿದೆ ಎಂದು ಉಕ್ರೇನ್‍ನಲ್ಲಿರುವ ಕರ್ನಾಟಕ ಮೂಲದ ವಿದ್ಯಾರ್ಥಿ ಬೇಸರ ವ್ಯಕ್ತಪಡಿಸಿದ್ದಾರೆ.
ಪಬ್ಲಿಕ್ ಟಿವಿ ಜೊತೆ ವಿದ್ಯಾರ್ಥಿ ಪ್ರಸಾದ್ ಮಾತನಾಡಿ, ವಿಶ್ವಸಂಸ್ಥೆಯ ಭಾರತ ಉಕ್ರೇನ್‍ಗೆ ಬೆಂಬಲ ನೀಡಿರಲಿಲ್ಲ. ಇದರಿಂದಾಗಿ ಸಿಟ್ಟಾಗಿರುವ ಸ್ಥಳೀಯ ಉಕ್ರೇನ್ ಜನತೆ ಒದ್ದು ಅಪಾರ್ಟ್ಮೆಂಟ್‌ಗೆ ತೆರಳುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನೋವನ್ನು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಸ್ವಂತ ಸಾಮಾಜಿಕ ಮಾಧ್ಯಮ ಆ್ಯಪ್ ಬಿಡುಗಡೆ ಮಾಡಿದ ಟ್ರಂಪ್
ಇಲ್ಲಿರುವ ಹಾಸ್ಟೆಲ್ ಬಂಕರ್‌ಗಳಲ್ಲಿ ವಿದ್ಯಾರ್ಥಿಗಳು ಮಾತ್ರ ಸುರಕ್ಷಿತವಾಗಿದ್ದಾರೆ. ಉಳಿದವರೆಲ್ಲರೂ ಅಪಾರ್ಟ್ಮೆಂಟ್‌ನಲ್ಲಿದ್ದಾರೆ. ಮತ್ತೊಂದು ವಿಚಾರವೆಂದರೆ ಇಲ್ಲಿ ತಿನ್ನಲು ಊಟ ಸಿಗುತ್ತಿಲ್ಲ. ಕುಡಿಯಲು ನೀರು ಸಹ ಸಿಗದೇ ಟ್ಯಾಪ್‍ನಿಂದ ಬರುವ ನೀರನ್ನು ಬಿಸಿ ಮಾಡಿಕೊಂಡು ಕುಡಿಯುತ್ತಿದ್ದೇವೆ. ಹೊರಗಡೆ ಹೋಗಲು ಕೂಡಾ ಆಗುತ್ತಿಲ್ಲ. ಏಕೆಂದರೆ ಎಲ್ಲಿ ಸ್ಥಳೀಯ ಜನರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ತಮ್ಮ ಅಳಲು ತೊಡಿಕೊಂಡರು.
ವಿದ್ಯಾರ್ಥಿ ಹೇಳಿದ್ದು ಏನು?
ಉಕ್ರೇನ್‍ನಿನ ಬಾರ್ಡರ್‍ನಲ್ಲಿಯೂ ಸಹ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುತ್ತಿದೆ ಅಂತ ಅಲ್ಲಿಯ ವಿದ್ಯಾರ್ಥಿಗಳು ನನಗೆ ವೀಡಿಯೋ ಮಾಡಿ ಬಿಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ ಯುದ್ದ ಪ್ರಾರಂಭಗೊಳ್ಳವ ಮುನ್ನ ಜನವರಿ 25ಕ್ಕೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕೃತ ಫೇಸ್ ಬುಕ್ ಪೇಜ್‍ನಿಂದ ಒಂದು ಫಾರಂ ಬಂದಿತ್ತು.
ಫಾರಂನಲ್ಲಿ ರಷ್ಯಾ ಗಡಿಯಲ್ಲಿ ಯಾವುದೇ ಯುದ್ಧ ನಡೆಯುವ ಸಂದರ್ಭ ಕಾಣುತ್ತಿಲ್ಲ. ಇಲ್ಲಿ ಪರಿಸ್ಥಿತಿ ತುಂಬಾ ಶಾಂತವಾಗಿದೆ. ಒಂದು ವೇಳೆ ಹಾಗೇನಾದರೂ ಯುದ್ಧ ನಡೆಯುವ ಸಂದರ್ಭ ಎದುರಾದರೆ ನಿಮ್ಮ ಸಹಾಯಕ್ಕೆ ನಾವು ಇದ್ದೇವೆ ಎಂದು ಹೇಳಿತ್ತು.
ಯುದ್ಧ ಪ್ರಾರಂಭವಾಗುವ ಮುನ್ನ ಭಾರತಕ್ಕೆ ಬರಬೇಕೆಂದರೆ ಆವಾಗಾಗಲೇ ಉಕ್ರೇನ್‍ನ ಎಲ್ಲ ನಾಗರಿಕ ವಿಮಾನಗಳು ಬುಕ್ ಆಗಿದ್ದವು. ಕೀವ್‍ನ ಬಾರ್ಡರ್‍ನಲ್ಲಿ ಸೇರಿರುವ ವಿದ್ಯಾರ್ಥಿಗಳನ್ನು ಹೊರಗಡೆ ಹೋಗಲಿಕ್ಕೆ ಬಿಡುತ್ತಿಲ್ಲ. ವಾಪಸ್ ಹೋಗಿ ಅಂತ ಹಲ್ಲೆ ಮಾಡುತ್ತಿದ್ದಾರೆ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ಭಾರತಕ್ಕೆ ಹೋಗಿದ್ದಾರೆ. ಕೇವಲ ಪಾಕಿಸ್ತಾನ ಮತ್ತು ನೈಜಿರೀಯಾದ ಕೆಲ ವಿದ್ಯಾರ್ಥಿಗಳು ಮಾತ್ರ ಇಲ್ಲಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!
ಕೀವ್ ಬಾರ್ಡರ್ ಬಿಟ್ಟು ಬೇರೆ ಬಾರ್ಡರ್‍ನಿಂದ ಈಗಾಗಲೇ ಕೆಲವೊಂದಿಷ್ಟು ವಿದ್ಯಾರ್ಥಿಗಳು ಪಾರಾಗಿದ್ದಾರೆ. ನಮಗೆ ಇಲ್ಲಿ ಪ್ರತೀ ಕ್ಷಣಕ್ಕೂ ಸತ್ತು ಬದುಕುತ್ತಿದ್ದೇವೆ. ಸ್ಥಳೀಯ ಜನರು ಯಾವಾಗ ನಮ್ಮ ಮೇಲೆ ದಾಳಿ ಮಾಡುತ್ತಾರೆ ಅನ್ನುವ ಭಯ ಕಾಡುತ್ತಿದೆ ಎಂದು ಭಯ ವ್ಯಕ್ತಪಡಿಸಿದರು. ?
ಉಕ್ರೇನ್ ಮೇಲೆ ರಷ್ಯಾ ದಾಳಿಯನ್ನು ಖಂಡಿಸಿ ಶನಿವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆದಿತ್ತು. ಅಮೆರಿಕ ಮತ್ತು ಆಲ್ಬೇನಿಯಾ ಸಂಯುಕ್ತವಾಗಿ ಮಂಡಿಸಿದ ನಿರ್ಣಯದ ಮೇಲೆ ಮತದಾನ ನಡೆದಿತ್ತು.
ಭಾರತ, ಚೀನಾ, ಯುಎಇ ದೇಶಗಳು ಮತದಾನದಿಂದ ದೂರ ಉಳಿದಿದ್ದರೆ ಪೆÇೀಲೆಂಡ್, ಇಟಲಿ, ನ್ಯೂಜಿಲೆಂಡ್ ಸೇರಿ 11 ದೇಶಗಳು ನಿರ್ಣಯದ ಪರವಾಗಿ ಮತ ಹಾಕಿವೆ. ರಷ್ಯಾ ದೇಶ ಊಹಿಸಿದಂತೆಯೇ ವಿಟೋ ಅಧಿಕಾರ ಚಲಾಯಿಸಿ, ನಿರ್ಣಯ ಪಾಸ್ ಆಗದಂತೆ ತಡೆದಿದೆ.
ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ಭಾರತದ ಶಾಶ್ವತ ರಾಯಭಾರಿ ತಿರುಮೂರ್ತಿ, ವಿವಾದ ಇತ್ಯರ್ಥಕ್ಕೆ ಚರ್ಚೆಯೊಂದೇ ಸಮಾಧಾನ. ಆದರೆ ಈ ಕ್ಷಣದಲ್ಲಿ ಅದು ಸಾಧ್ಯವಾಗಿಲ್ಲ. ಎರಡು ದೇಶಗಳು ರಾಜತಾಂತ್ರಿಕ ಮಾರ್ಗವನ್ನು ಕೈಬಿಟ್ಟಿದ್ದಕ್ಕೆ ವಿಷಾದವಿದೆ. ಸದ್ಯಕ್ಕೆ ಈ ಖಂಡನಾ ನಿರ್ಣಯದಿಂದ ದೂರ ಇರಲು ಭಾರತ ನಿರ್ಧರಿಸಿದೆ ಎಂದು ತಿಳಿಸಿದ್ದರು.
ನವದೆಹಲಿ: ಉಕ್ರೇನ್‍ನಲ್ಲಿ ಸಿಕ್ಕಿಕೊಂಡಿರುವ ಭಾರತೀಯ ವಿದ್ಯಾರ್ಥಿನಿ ಸಹಾಯಕ್ಕೆ ಕೇಳಿಕೊಳ್ಳುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ವಿದೇಶಾಂಗ ಸಚಿವರಿಗೆ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರಿಯಾಂಕಾ ಅವರು ಟ್ವಿಟ್ಟರ್ ನಲ್ಲಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಟ್ಯಾಗ್ ಮಾಡಿರುವ ಅವರು, ದಯವಿಟ್ಟು ಭಾರತೀಯ ಮಕ್ಕಳನ್ನು ಏನಾದರೂ ಮಾಡಿ ಸುರಕ್ಷಿತವಾಗಿ ಭಾರತಕ್ಕೆ ಕರೆತರಬೇಕು. ನಮ್ಮ ಇಡೀ ದೇಶವು ಉಕ್ರೇನಿನಲ್ಲಿ ಇರುವ ಮಕ್ಕಳು ಮತ್ತು ಕುಟುಂಬದವರ ಜೊತೆಗೆ ಇದ್ದೇವೆ. ಈ ವೀಡಿಯೋದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಬಹಳ ಆತಂಕಗೊಂಡಿರುವುದು ಕಾಣಿಸುತ್ತಿದ್ದಾಳೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ
…@narendramodi जी, @DrSJaishankar जी यूक्रेन से आ रहे भारतीय छात्र-छात्राओं के वीडियो मन को बहुत ही ज्यादा व्यथित करने वाले हैं। इन बच्चों को भारत वापस लाने के लिए जो कुछ भी बन पड़ता है , भगवान के लिए, वह करिए। पूरा देश इन छात्र-छात्राओं और इनके परिवारों के साथ है।…1/2 pic.twitter.com/PfmBw8McLY
ಪ್ರಿಯಾಂಕಾ ಅವರು ಶೇರ್ ಮಾಡಿರುವ ವೀಡಿಯೋದಲ್ಲಿ ಭಾರತೀಯ ವಿದ್ಯಾರ್ಥಿನಿ ಉಕ್ರೇನಿನಲ್ಲಿ ಸಿಕ್ಕಿಬಿದ್ದಿರುವುದಕ್ಕೆ ತುಂಬಾ ಆತಂಕಗೊಂಡಿದ್ದು, ಬಿಕ್ಕಿ-ಬಿಕ್ಕಿ ಅತ್ತಿದ್ದಾಳೆ. ದಯವಿಟ್ಟು ನಮ್ಮನ್ನು ಇಲ್ಲಿಂದ ಕೆರೆದುಕೊಂಡು ಹೋಗಿ ಎಂದು ಭಾರತೀಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾಳೆ.
ಈ ವೀಡಿಯೋದಲ್ಲಿ ಗರಿಮಾ ಮಿಶ್ರಾ ವಿದ್ಯಾರ್ಥಿನಿ, ನಾವು ಉಕ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಮಗೆ ಯಾರೂ ಸಹಾಯ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ನಂತರ ಅಳುತ್ತ ವಿದ್ಯಾರ್ಥಿನಿ, ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಹಾಯ ಮಾಡುವಂತೆ ಮನವಿ ಮಾಡಿಕೊಂಡಿದ್ದಾಳೆ. ದಯವಿಟ್ಟು ನಮಗೆ ಸಹಾಯ ಮಾಡಿ. ಜೈ ಹಿಂದ್! ಜೈ ಭಾರತ್! ಯಾರೇ ನೋಡ್ತಾ ಇದ್ರು ಈ ವೀಡಿಯೋ ಶೇರ್ ಮಾಡಿ ಎಂದು ಬಿಕ್ಕಿ-ಬಿಕ್ಕಿ ವಿದ್ಯಾರ್ಥಿನಿ ಅಳುತ್ತಿದ್ದಾಳೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಏಳು ಗಂಟೆಯಲ್ಲಿ 28 ಟನ್ ಕಬ್ಬು ಲೋಡ್ ಮಾಡಿದ ಯುವಕ!
ಕೀವ್: ರಷ್ಯಾ, ಉಕ್ರೇನ್ ವಿರುದ್ಧ ಯುದ್ಧ ಸಾರಿ ಐದು ದಿನಗಳು ಕಳೆದಿದೆ. ಇದೀಗ ರಷ್ಯಾ ಮತ್ತು ಉಕ್ರೇನ್ ಸಂಧಾನಕ್ಕೆ ಮುಂದಾಗಿದ್ದು, ರಷ್ಯಾ ಕೂಡಲೇ ಕದನ ವಿರಾಮ ಘೋಷಿಸಿ ಸೇನಾ ಪಡೆಗಳನ್ನು ಹಿಂಪಡೆಯಲಿ ಎಂದು ಉಕ್ರೇನ್ ಷರತ್ತು ವಿಧಿಸಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ದಿನಗಳಿಂದ ವಿಶ್ವದ ಇತರ ರಾಷ್ಟ್ರಗಳು ವಿರೋಧಿಸುತ್ತಿದೆ. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ಅಭಿಪ್ರಾಯಪಟ್ಟಿದೆ. ಈ ನಡುವೆ ಎರಡು ದೇಶಗಳು ಕೂಡ ಸಂಧಾನಕ್ಕೆ ಮುಂದಾಗಿದ್ದು, ಬೆಲಾರಸ್‍ನ ಗಡಿ ಪ್ರದೇಶದಲ್ಲಿ ಸಂಧಾನ ಸಭೆಗಾಗಿ ಉಭಯ ದೇಶಗಳ ಪ್ರಮುಖರು ಸೇರಿದ್ದಾರೆ. ಇದನ್ನೂ ಓದಿ: ದಿಢೀರ್ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್ ಬ್ಯಾಕ್
ಉಕ್ರೇನ್ ಷರತ್ತು:
ರಷ್ಯಾದೊಂದಿಗೆ ಸಂಧಾನ ಮಾತುಕತೆಗೆ ಒಪ್ಪಿರುವ ಉಕ್ರೇನ್ ಮೊಟ್ಟ ಮೊದಲಾಗಿ ತಕ್ಷಣ ರಷ್ಯಾ ಸೇನಾಪಡೆ ಕದನ ವಿರಾಮ ಘೋಷಿಸಿ ಉಕ್ರೇನ್‍ನಿಂದ ಹೊರನಡೆಯಬೇಕೆಂದು ಪಟ್ಟು ಹಿಡಿದಿದೆ. ಅಲ್ಲದೆ ಈಗಾಗಲೇ ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಇನ್ನಾದರೂ ಶಾಂತಿಯುತವಾಗಿ ಸಮಸ್ಯೆ ಬಗೆಹರಿಸಲು ಸಹಕರಿಸಿ ಎಂದು ಮನವಿ ಮಾಡಿಕೊಂಡಿದೆ. ಇದನ್ನೂ ಓದಿ: ಉಕ್ರೇನ್ ಅಧ್ಯಕ್ಷನ ಹತ್ಯೆಗೆ 400 ರಷ್ಯಾ ಸೈನಿಕರು ಸಿದ್ಧತೆ
ಸಂಧಾನ ಸಭೆಯಲ್ಲಿರುವ ಪ್ರಮುಖರು:
ಸರ್ವೇಂಟ್ ಆಫ್ ದಿ ಪೀಪಲ್ ಬಣದ ಅಧ್ಯಕ್ಷ ಡೇವಿಡ್ ಅರಾಖಮಿಯಾ
ಉಕ್ರೇನ್ ರಕ್ಷಣಾ ಸಚಿವ ಒಲೆಕ್ಸಿ ರೆಜ್ನಿಕೋವ್
ಉಕ್ರೇನ್ ಅಧ್ಯಕ್ಷ ಕಚೇರಿಯ ಮುಖಸ್ಥ ಮಿಖಾಯಿಲ್ ಪೊಡ್ಯೊಲ್ಯಾಕ್
ತ್ರಿಪಕ್ಷೀಯ ಸಂಪರ್ಕ ಗುಂಪಿನ ಉಕ್ರೇನಿಯನ್ ನಿಯೋಗದ ಮೊದಲ ಉಪ ಮುಖ್ಯಸ್ಥ ಆಂಡ್ರೆ ಕೋಸ್ಟಿನ್
ಸಂಸತ್ತಿನ ಸದಸ್ಯ ರುಸ್ಟೆಮ್ ಉಮೆರೋವ್
ಉಕ್ರೇನ್ ವಿದೇಶಾಂಗ ವ್ಯವಹಾರಗಳ ಉಪಮುಖ್ಯಮಂತ್ರಿ ನಿಕೊಲಾಯ್ ಟೊಚಿಟ್ಸ್ಕಿ ಸಂಧಾನ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಈ ಮೊದಲು ಉಕ್ರೇನ್ ಸೇನಾ ಪಡೆಯ ಕುರಿತು ಮಾತನಾಡಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ದೇಶವನ್ನು ರಕ್ಷಿಸಿ ನಿಮ್ಮವರ ರಕ್ಷಣೆಗಾಗಿ ಹೋರಾಡಿ. ನಾನು ಮಾತ್ರ ಈ ದೇಶದ ಅಧ್ಯಕ್ಷನಲ್ಲ ಇಲ್ಲಿರುವ ಪ್ರತಿಯೊಬ್ಬ ಪ್ರಜೆ ಕೂಡ ಅಧ್ಯಕ್ಷರೇ. ದೇಶದಲ್ಲಿರುವ ಪ್ರತಿಯೊಬ್ಬರು ಕೂಡ ಈ ದೇಶದ ಜವಾಬ್ದಾರಿಯುತ ಪ್ರಜೆಗಳಾಗಿದ್ದೀರಿ. ನಮ್ಮ ಸುಂದರ ಉಕ್ರೇನ್‍ನಲ್ಲಿ ಇದೀಗ ಅಶಾಂತಿ ಕಾಡುತ್ತಿದೆ. ಶಾಂತಿಗಾಗಿ ಎಲ್ಲಾ ಪ್ರಜೆಗಳು ಕೂಡ ಇದೀಗ ಯೋಧರಾಗಿ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ:ಉಕ್ರೇನ್‍ಗಡಿಗೆ ತಲುಪಿದ್ದರು ಭಾರತಕ್ಕೆ ಬರಲಾಗದೆ ಪರದಾಡುತ್ತಿರುವ ರಾಯಚೂರು ವಿದ್ಯಾರ್ಥಿಗಳು
ಉಕ್ರೇನ್, ರಷ್ಯಾ ಯುದ್ಧದ ಬಗ್ಗೆ ಮಾತನಾಡಿದ ಭಾರತದ ಉಕ್ರೇನ್ ರಾಯಭಾರಿ, ಈಗಾಗಲೇ ಉಕ್ರೇನ್‍ನಲ್ಲಿ ಸಾಕಷ್ಟು ಸಾವುನೋವುಗಳು ಸಂಭವಿಸಿದೆ. 16 ಪುಟ್ಟ ಮಕ್ಕಳು ರಷ್ಯಾದ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ಬಾಂಬ್ ಮತ್ತು ಕ್ಷಿಪಣಿಗಳ ಮೂಲಕ ರಷ್ಯಾ ಸೈನಿಕರು ಉಕ್ರೇನ್‍ನಲ್ಲಿ ರಕ್ತಪಾತ ನಡೆಸಿದ್ದಾರೆ. ಇದೀಗ ಸಂಧಾನಕ್ಕೆ ಮುಂದಾಗಿದ್ದು, ರಷ್ಯಾ ಕೂಡಲೇ ಉಕ್ರೇನ್‍ನಿಂದ ಹಿಂದೆ ಸರಿಯಲಿ ಎಂದು ತಿಳಿಸಿದ್ದಾರೆ.