Tag: Ukraine

  • ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ಮಾಸ್ಕೋ: ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದಾಗಿನಿಂದ ವಿದೇಶೀ ವಿನಿಮಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಷ್ಯಾ ಸೆಂಟ್ರಲ್ ಬ್ಯಾಂಕ್ ತನ್ನ ಆರ್ಥಿಕತೆಯನ್ನು ಕಾಪಾಡಲು ಬಡ್ಡಿ ದರದಲ್ಲಿ ಭಾರೀ ಏರಿಕೆ ಮಾಡಿದೆ.

    ರಷ್ಯಾ ಸೆಂಟ್ರಲ್ ಬ್ಯಾಂಕ್‍ನ ಬಡ್ಡಿ ದರ ಈ ಹಿಂದೆ ಶೇ.9.5 ಇದ್ದು, ಇದೀಗ ಶೇ.20 ಕ್ಕೆ ಏರಿಕೆ ಮಾಡಿದೆ. ಈ ಮೂಲಕ ರಷ್ಯಾ ತನ್ನ ಹೂಡಿಕೆದಾರರನ್ನು ಕಾಪಾಡಲು ಪ್ರಯತ್ನಿಸುತ್ತಿದೆ.

    ರಷ್ಯಾ ಸೆಂಟ್ರಲ್ ಬ್ಯಾಂಕ್ ಸೋಮವಾರ ಪ್ರಮುಖ ಬಡ್ಡಿ ದರವನ್ನು ಶೇ.9.5 ರಿಂದ ಶೇ.20ಕ್ಕೆ ಏರಿಸುವುದಾಗಿ ಘೋಷಿಸಿದೆ. ರಷ್ಯಾದಲ್ಲಿ ಯುದ್ಧದ ಹಿನ್ನೆಲೆ ವಿದೇಶೀ ವಹಿವಾಟು ಕುಂಠಿತಗೊಂಡಿದ್ದು, ರೂಬೆಲ್(ರಷ್ಯಾ ಕರೆನ್ಸಿ) ಬೆಲೆ ಕುಸಿಯುತ್ತಿದೆ. ಈ ಹಣದುಬ್ಬರವನ್ನು ಸರಿದೂಗಿಸಲು ಬಡ್ಡಿ ದರದಲ್ಲಿ ಏರಿಕೆ ಮಾಡಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ

    ರಷ್ಯಾದಲ್ಲಿ ಸಂಭವಿಸುತ್ತಿರುವ ನಾಟಕೀಯ ಬೆಳವಣಿಗೆಯಿಂದ ಜನರು ಭಯಬೀತರಾಗಿ ತಮ್ಮ ಹಣವನ್ನು ಹಿಂಪಡೆಯಲು ಎಟಿಎಂನಲ್ಲಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಬೆಳವಣಿಗೆಯಿಂದ ರಷ್ಯಾ ಹೂಡಿಕೆದಾರರು ಕೈಜಾರಿ ಹೋಗಬಾರದೆಂಬ ಕಾರಣಕ್ಕೆ ಬಡ್ಡಿ ದರವನ್ನು ದ್ವಿಗುಣಗೊಳಿಸಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ


    ಯುದ್ಧ ಪ್ರಾರಂಭವಾದಾಗಿನಿಂದ ರೂಬೆಲ್ ಮೌಲ್ಯ ಕುಸಿಯತೊಡಗಿದೆ. ಪ್ರತಿ ಡಾಲರ್‍ಗೆ ರೂಬೆಲ್ ಬೆಲೆ 119.50 ರಷ್ಟು ಕುಸಿದಿದೆ. ಶುಕ್ರವಾರದ ದಿಂದ ರೂಬೆಲ್ ಬೆಲೆ ಶೇ.30% ರಷ್ಟು ಕಡಿಮೆಯಾಗಿದೆ.

  • ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ: ಕೆ.ಜಿ ಬೋಪಯ್ಯ

    ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ: ಕೆ.ಜಿ ಬೋಪಯ್ಯ

    ಮಡಿಕೇರಿ: ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ ಎಂದು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಉಕ್ರೇನ್ ಹಾಗೂ ರಷ್ಯಾದ ನಡುವೆ ನಡೆಯುತ್ತಿರುವ ಯುದ್ದ ಹಿನ್ನೆಲೆ ಉಕ್ರೇನ್‍ನಲ್ಲಿ ಸಿಲುಕಿಕೊಂಡು ಇರುವ ಭಾರತೀಯರಿಗೆ ಅಹಾರ ಕೊರತೆ ಎದುರಾಗಿದ್ದು, ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಎಷ್ಟು ಜನರು ಭಾರತೀಯರು ಉಕ್ರೇನ್ ನಲ್ಲಿ ಸಿಲುಕಿಕೊಂಡು ಇದ್ದಾರೆ. ವಿದ್ಯಾರ್ಥಿಗಳು ಸಾರ್ವಜನಿಕರು ಅವರು ಎಲ್ಲಾರನ್ನು ಹೋಸ ಯೋಜನೆಯನ್ನೆ ಮಾಡಿ ಏರ್‌ಲಿಫ್ಟ್‌ ಮಾಡುವ ಕೆಲಸಗಳು ಅಗತ್ತ ಇದೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ : ಕೋಟಾ ಶ್ರೀನಿವಾಸ್ ಪೂಜಾರಿ

    ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ದದಿಂದ ಅಲ್ಲಿಯ ಗಡಿಭಾಗದಲ್ಲಿ ಇರುವವರನ್ನು ಕರೆತರುವ ಕೆಲಸ ವಿಳಂಬ ಆಗಿದೆ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲೇ ಸಿಲುಕಿರುವುದರಿಂದ ಜನಪ್ರತಿನಿಧಿಯಾಗಿ ನಾವು ಹೆಚ್ಚು ಗಮನ ಹರಿಸಬೇಕಿದೆ. ಸಂಬಂಧಪಟ್ಟ ಕರ್ನಾಟಕ ಆದಿಕಾರಿಗಳ ಜೊತೆಯು ದೂರವಾಣಿ ಸಂಪರ್ಕ ಮಾಡಿ ವ್ಯವಸ್ಥೆಗಳನ್ನು ಮಾಡವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್

    ವಿದ್ಯಾರ್ಥಿಗಳಿಗೆ ಅಹಾರದ ಕೊರತೆ ಎದುರಾಗಿದೆ. ಮಾನವೀಯತೆ ಇಲ್ಲದ ಪರಿಸ್ಥಿತಿ ರಷ್ಯಾದಿಂದ ಅಗುತ್ತಿದೆ ಅದು ಅಗಬರದಾಗಿತ್ತು.ಅದ್ರೆ ಅವರು ಮಾಡುತ್ತಿದ್ದಾರೆ. ಸದ್ಯದಲ್ಲೇ ಬೇಗಾ ಏರ್‍ಲಿಪ್ಟ್ ಮಾಡುವ ಕೆಲಸ ಅದಷ್ಟು ಬೇಗಾ ಅಗುತ್ತದೆ ಎಂದು ನನ್ನ ಆಶಾಭಾವನೆಯಾಗಿದೆ. ದೇವರ ಕೃಪೆ ಇರಬೇಕು ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ

    ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ

    ನವದೆಹಲಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಸಮಸ್ಯೆ ಹಾಗೂ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಟಿಬೆಟಿಯನ್ ಗುರು ದಲೈ ಲಾಮಾ ಸಲಹೆ ನೀಡಿದರು.

    ಈ ಬಗ್ಗೆ ಟ್ವೀಟ್ ಮಾಡಿದ ಅವರು ಉಕ್ರೇನ್‍ನಲ್ಲಿನ ಸಂಘರ್ಷದಿಂದ ತುಂಬಾ ಬೇಸರವಾಗಿದೆ. ನಮ್ಮ ಪ್ರಪಂಚವು ಪರಸ್ಪರ ಅವಲಂಬಿತವಾಗಿದೆ. ಆದರೆ ಎರಡು ದೇಶಗಳ ನಡುವಿನ ಹಿಂಸಾತ್ಮಕ ಸಂಘರ್ಷವು ಅನಿವಾರ್ಯವಾಗಿ ಉಳಿದ ದೇಶಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಯುದ್ಧವು ಹಳೆದಾಗಿದ್ದು, ಅಹಿಂಸೆಯೊಂದೇ ಏಕೈಕ ಮಾರ್ಗವಾಗಿದೆ. ಇತರರನ್ನು ಸಹೋದರ, ಸಹೋದರಿಯರಂತೆ ಪರಿಗಣಿಸುವ ಮೂಲಕ ನಾವು ಏಕತೆಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಸಮಸ್ಯೆಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಉತ್ತಮವಾಗಿ ಪರಿಹರಿಸಲಾಗುತ್ತದೆ. ಪರಸ್ಪರ ತಿಳುವಳಿಕೆ ಮತ್ತು ಯೋಗಕ್ಷೇಮವನ್ನು ಗೌರವಿಸದರೆ ಮಾತ್ರ ನಿಜವಾದ ಶಾಂತಿ ಸಿಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಉಕ್ರೇನ್‍ನಲ್ಲಿ ಶಾಂತಿ ಶೀಘ್ರದಲ್ಲಿ ಮರುಸ್ಥಾಪಿಸಲಿ ಎಂದ ಅವರು, ನಾವು ಈ ಬಗ್ಗೆ ಭರವಸೆ ಕಳೆದುಕೊಳ್ಳಬಾರದು. 20ನೇ ಶತಮಾನವು ಯುದ್ಧ ಮತ್ತು ರಕ್ತಪಾತದ ಶತಮಾನವಾಗಿತ್ತು. ಆದರೆ 21ನೇ ಶತಮಾನವು ಸಂಭಾಷಣೆಯ ಶತಮಾನವಾಗಿರಬೇಕು ಎಂದರು. ಇದನ್ನೂ ಓದಿ:  ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದೆ ಇಡೀ ಕುಟುಂಬ ಕಣ್ಣೀರು

  • ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದು ಇಡೀ ಕುಟುಂಬ ಕಣ್ಣೀರು

    ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದು ಇಡೀ ಕುಟುಂಬ ಕಣ್ಣೀರು

    ಹುಬ್ಬಳ್ಳಿ: ಉಕ್ರೇನ್ ಯುದ್ಧ ಭೂಮಿಯಿಂದ ಮಗಳು ಇನ್ನೂ ಬಾರದ ಹಿನ್ನೆಲೆ ಆಕೆಯನ್ನು ನೆನೆದು ಇಡೀ ಕುಟುಂಬ ಕಣ್ಣೀರು ಹಾಕುತ್ತಿದೆ. ಮಗಳ ಪೋಟೋ ಹಿಡಿದು ತಂದೆ-ತಾಯಿ, ಅಜ್ಜಿ-ತಾತ ತೀವ್ರ ಚಿಂತೆಗೆ ಒಳಗಾಗಿದ್ದಾರೆ.

    ಉಕ್ರೇನ್ ಯುದ್ಧ ಪೀಡಿತ ಪ್ರದೇಶ ಖಾರ್ಕೀವ್‍ನಲ್ಲಿ ಹುಬ್ಬಳ್ಳಿಯ ವಿದ್ಯಾರ್ಥಿನಿ ಚೈತ್ರ ಸಂಶಿ ಸಿಲುಕಿದ್ದಾರೆ. ಖಾರ್ಕಿವ್‍ನಲ್ಲಿ ಎಂಬಿಬಿಎಸ್ ಓದುತ್ತಿದ್ದ ಚೈತ್ರ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ನಿವಾಸಿ. ನಿನ್ನೆ ಮಧ್ಯಾಹ್ನದಿಂದ ಚೈತ್ರ ಮೊಬೈಲ್ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಚೈತ್ರ ಕುಟುಂಬ, ಎರಡು ದಿನದಿಂದ ನಮ್ಮ ಮಗಳು ಊಟ ಮಾಡಿಲ್ಲ. ಅಲ್ಲಿ ನೀರು ಸಹ ಸಿಗುತ್ತಿಲ್ಲ. ಮೊಬೈಲ್ ಸಂಪರ್ಕ ಕಡಿತಗೊಂಡಿದೆ. ದಯವಿಟ್ಟು ನಮ್ಮ ಮಗಳನ್ನು ಹಾಗೂ ರಾಜ್ಯದ ವಿದ್ಯಾರ್ಥಿಗಳನ್ನು ಬೇಗ ಕರೆತನ್ನಿ ಎಂದು ಕೈಮುಗಿದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಬಾಂಬ್ ಸ್ಫೋಟವಾಗುತ್ತಿವೆ: ಪೋಷಕರ ಕಣ್ಣೀರು

  • ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಬೀದರ್: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ಪ್ರಧಾನಿ ಮೋದಿ ಸರ್ಕಾರ ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಬೀದರ್‍ನಲ್ಲಿ ಕೇಂದ್ರ ಸಚಿವ ಭಗವಂತ್ ಖೂಬಾ ತಿಳಿಸಿದ್ದಾರೆ.

    ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಈಗಾಗಲೇ ನಮ್ಮ ಭಾರತೀಯರನ್ನು ಏರ್‍ಲಿಫ್ಟ್ ಮೂಲಕ ಕರೆತರಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಷ್ಯಾ ಹಾಗೂ ಉಕ್ರೇನ್ ಜೊತೆ ಮಾತಾನಾಡಿ ಎಲ್ಲ ನಮ್ಮ ನಾಗರಿಕರನ್ನು ತರುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.

    ಯುದ್ಧ ನಡೆಯುವ ಸ್ಥಳದಲ್ಲಿ ಏರ್‍ಲಿಫ್ಟ್ ಮಾಡಲು ಕೆಲ ಸಮಸ್ಯೆಗಳು ಆಗುತ್ತವೆ. ಅದಕ್ಕೆ ನಮ್ಮ ಭಾರತೀಯರ ಸುರಕ್ಷಿತೆಗಾಗಿ ಭಾರತ ಸರ್ಕಾರ ಅಲ್ಲಿನ ಸರ್ಕಾರದ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದೆ. ಯಾವುದೇ ಜೀವಕ್ಕೆ ಹಾನಿಯಾಗದಂತೆ ಈ ಸಮಯದಲ್ಲಿ ಯಾವ ನೀತಿಗಳನ್ನು ಅನುಸರಿಸಬೇಕು, ಅವುಗಳನ್ನು ಅನುಸರಿಸಿ ಭಾರತೀಯರನ್ನು ಕರೆತರುತ್ತೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ನಮ್ಮ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿಯನ್ನು ವಿದೇಶಾಂಗ ಕಾರ್ಯಾಲಯಕ್ಕೆ ಕಳುಹಿಸಲಾಗಿದೆ. ನಾನು ವಿದೇಶಾಂಗ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದು, ನಾವು ಎಲ್ಲ ಭಾರತೀಯರ ಕಾಳಜಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

  • ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಬಾಂಬ್ ಸ್ಫೋಟವಾಗುತ್ತಿವೆ: ಪೋಷಕರ ಕಣ್ಣೀರು

    ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಬಾಂಬ್ ಸ್ಫೋಟವಾಗುತ್ತಿವೆ: ಪೋಷಕರ ಕಣ್ಣೀರು

    ಬೀದರ್: ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಕ್ಷಿಪಣಿಗಳು ಹಾಗೂ ಬಾಂಬ್ ಗಳು ಸ್ಫೋಟವಾಗುತ್ತಿದ್ದು, ನಮ್ಮ ಮಕ್ಕಳು ಆತಂಕದಲ್ಲಿ ಇದ್ದಾರೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

    ಸದ್ಯ ಯುದ್ಧ ನಡೆಯುತ್ತಿರುವ ಖಾರ್ಕಿವ್‍ನಲ್ಲಿ ಬೀದರ್ ಮೂಲದ 6 ಜನ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಪ್ರತಿ ಕ್ಷಣ ಭಯದಲ್ಲಿ ಬದುಕುತ್ತಿದ್ದಾರೆ. ವಿದ್ಯಾರ್ಥಿ ಅಮಿತ್ ಮೆಟ್ರೋ ಸ್ಟೇಷನ್ ಬಂಕರ್‍ನಲ್ಲಿ ರಕ್ಷಣೆ ಪಡೆಯುತ್ತಿದ್ದರೆ ಉಳಿದ ಐದು ಜನ ಹಾಸ್ಟೆಲ್ ಬಂಕರ್‍ನಲ್ಲಿ ವಾಸವಾಗಿ ರಕ್ಷಣೆ ಪಡೆಯುತ್ತಿದ್ದಾರೆ. ಆದರೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರು ಸಿಗದೇ ನಗರದ ವಿದ್ಯಾರ್ಥಿಗಳು ಕ್ಷಣ ಕ್ಷಣಕ್ಕೂ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಇದನ್ನೂ ಓದಿ : ಉಪಗ್ರಹವಾದ ಪುನೀತ್ ರಾಜ್ ಕುಮಾರ್: 100 ಸಾಹಸಿ ಮಕ್ಕಳ ಕೆಲಸವಿದು

    ನಮ್ಮ ಮಕ್ಕಳು ವಾಸವಿರುವ ಬಿಲ್ಡಿಂಗ್ ಮೇಲೆ ಕ್ಷಿಪಣಿಗಳು, ಬಾಂಬ್‍ಗಳು ಸ್ಪೋಟವಾಗುತ್ತಿವೆ. ಖಾರ್ಕಿವ್‍ನಲ್ಲಿರುವ ನಮ್ಮ ಮಕ್ಕಳು ಕಷ್ಟದಲ್ಲಿದ್ದು ಸರ್ಕಾರ ಮೊದಲು ಅವರನ್ನು ಭಾರತಕ್ಕೆ ಕರೆಸಿಕೊಳ್ಳಲಿ. ಖಾರ್ಕಿವ್‍ನಲ್ಲಿ ಸದ್ಯ ಪರಿಸ್ಥಿತಿ ಭಯಾನಕವಾಗಿದ್ದು, ಅಷ್ಟೇ ಭಯಂಕರವಾಗಿದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

  • ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕರೆತರಲು ನೋಡಲ್ ಅಧಿಕಾರಿಗಳ ನೇಮಕ: ಗೋವಿಂದ ಕಾರಜೋಳ

    ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಕರೆತರಲು ನೋಡಲ್ ಅಧಿಕಾರಿಗಳ ನೇಮಕ: ಗೋವಿಂದ ಕಾರಜೋಳ

    ಬೆಳಗಾವಿ: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ವಿದ್ಯಾರ್ಥಿಗಳ ರಕ್ಷಣೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಮುಖ್ಯಸ್ಥ ಪ್ರವೀಣ್ ಬಾಗೇವಾಡಿ ಹಾಗೂ ಬೆಳಗಾವಿ ಎಸಿ ರವಿ ಕರಲಿಂಗಣ್ಣವರ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಬ್ಬರು ನೋಡಲ್ ಅಧಿಕಾರಿಗಳನ್ನು ಮುಂಬೈಗೆ ಕಳುಹಿಸಿಕೊಟ್ಟಿದ್ದು, ಈಗಾಗಲೇ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.

    ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ. ಪ್ರಧಾನಿ ಮೋದಿಯವರು ಸತತವಾಗಿ ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಸುರಕ್ಷಿತವಾಗಿ ನಮ್ಮ ರಾಜ್ಯಕ್ಕೆ ಅವರನ್ನು ಕರೆತರಲು ಪ್ರಯತ್ನ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

    ಈಗಾಗಲೇ ಹಲವು ವಿದ್ಯಾರ್ಥಿಗಳು ಆಯಾ ರಾಜ್ಯಗಳಿಗೆ ಸೇರಿದ್ದಾರೆ. ಉಕ್ರೇನ್‍ನಲ್ಲಿ ಕೆಲವರಿಗೆ ನೀರು, ಊಟದ ಸಮಸ್ಯೆಯಾಗಿದೆ. ಜೀವದ ಭಯದಲ್ಲಿದ್ದಾರೆ. ಹೀಗಾಗಿ, ಇಲ್ಲಿನ ತಂದೆ, ತಾಯಿ, ಬಂಧು, ಬಳಗದವರು ನೋವಿನಲ್ಲಿದ್ದಾರೆ. ಯಾರೂ ಆತಂಕ ಪಡಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

  • ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

    ಉಕ್ರೇನ್‍ನಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತೆ: ಪ್ರಹ್ಲಾದ್ ಜೋಶಿ

    ಬೆಳಗಾವಿ: ಸರ್ಕಾರ ಸಂಪೂರ್ಣ ವೆಚ್ಚ ಭರಿಸಿ ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ಭಾರತೀಯ ಪ್ರಜೆಗಳನ್ನು ಸಮೀಪದ ಏರ್‌ಪೋರ್ಟ್‍ಗೆ ಕರೆದುಕೊಂಡು ಬರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭರವಸೆ ನೀಡಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಅಕ್ಕಪಕ್ಕದ ದೇಶಗಳ ಜೊತೆ ಮಾತುಕತೆ ಮಾಡಲಾಗುತ್ತಿದೆ. ಅವರ ಸಹಯೋಗ ಸಹಕಾರ ಪಡೆದು ಕೆಲಸ ಮಾಡುತ್ತಿದ್ದೇವೆ. ದೆಹಲಿ, ಮುಂಬೈ ಯಾವುದಾದರೂ ಪ್ರಮುಖ ನಗರ ಆಯ್ಕೆ ಮಾಡಿ ಭಾರತ ಸರ್ಕಾರ ಸಂಪೂರ್ಣ ಮುಕ್ತವಾಗಿ ಕರೆದುಕೊಂಡು ಬರುತ್ತಿದೆ ಎಂದರು.

    ಉಕ್ರೇನ್‍ನಲ್ಲಿ ಈಗಿನ ವಾಸ್ತವಿಕ ಚಿತ್ರಣ, ಅಲ್ಲಿಂದ ಬರುವ ವೀಡಿಯೋಗಳು ಎಲ್ಲಾ ಸತ್ಯವೋ ಸುಳ್ಳೋ ಎನ್ನುವುದು ಪರಿಶೀಲನೆ ಆಗುತ್ತಿಲ್ಲ. ಸದ್ಯ ಪ್ರಧಾನಿ ಮಾರ್ಗದರ್ಶನ ನೇತೃತ್ವದಲ್ಲಿ ಟಾಪ್ ಪ್ರಿಯಾರಿಟಿಯಿಂದ ನಾವು ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ಕೊಟ್ಟಿದ್ದೇವೆ ಎಂದು ಹೇಳಿದರು.

    ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಇಂತಹ ವಿಷಮ ಪರಿಸ್ಥಿತಿಯಲ್ಲಿ ನಿನ್ನೆ ಮೂರು ವಿಮಾನಗಳಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲಾಗಿದೆ. ನಮ್ಮ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

    ಇದು ಅತ್ಯಂತ ಕಠಿಣ ಕ್ಲಿಷ್ಟಕರ ಸನ್ನಿವೇಶವಾಗಿದೆ. ಉಕ್ರೇನ್ ಜೊತೆಯೂ ನಮ್ಮ ಮಾತುಕತೆ ನಡೆಯುತ್ತಿದೆ. ನಾನು ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ವಿದೇಶಾಂಗ ರಾಜ್ಯ ಸಚಿವರ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕ್ಲಿಷ್ಟಕರ ಸನ್ನಿವೇಶ ಇರುವುದರಿಂದ ರಷ್ಯಾದ ಜೊತೆಯೂ ಮಾತನಾಡಬೇಕಾಗುತ್ತದೆ. ಉಕ್ರೇನ್ ಜೊತೆಯೂ ಮಾತನಾಡಬೇಕಾಗುತ್ತದೆ. ನಮ್ಮ ನಾಗರಿಕರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಆದ್ಯತೆ. ಇದು ಬಹುದೊಡ್ಡ ಚಾಲೆಂಜ್ ಎಂದರು.

    ಹಿಂದೆ ಇರಾಕ್ ಅಫ್ಘಾನಿಸ್ತಾನದಲ್ಲಿ ಸಮಸ್ಯೆಯಾದ ಸಂದರ್ಭದಲ್ಲಿ ಯಶಸ್ವಿಯಾಗಿ ಸ್ಥಳಾಂತರ ಮಾಡಿದ್ದೇವು. ಆದರೆ ಉಕ್ರೇನ್‍ನಲ್ಲಿ ನಿರೀಕ್ಷೆಗಿಂತ ಬೇಗ ಯುದ್ಧ ಶುರುವಾಗಿರುವುದರಿಂದ ಸಮಸ್ಯೆ ಆಗಿದೆ. ಭೌಗೋಳಿಕವಾಗಿ ಉಕ್ರೇನ್ ಬಹಳ ವಿಶಾಲವಾಗಿದೆ. ಇಂದೂ ಸಹ ವಿಮಾನಗಳು ಭಾರತಕ್ಕೆ ಬರುತ್ತಿವೆ. ಕೇಂದ್ರ ಸರ್ಕಾರ ಅತ್ಯಂತ ಸಂವೇದನಾಶೀಲವಾಗಿ ಪ್ರಯತ್ನ ಮಾಡ್ತಿದ್ದೇವೆ. ಕಷ್ಟ ಇದೆ ನಾವು ಏನು ಆಗೇ ಇಲ್ಲ ಅಂತಾ ಹೇಳುತ್ತಿಲ್ಲ. ಆದರೆ ಸುರಕ್ಷಿತವಾಗಿ ಮಕ್ಕಳನ್ನು ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

    ಉಕ್ರೇನ್‍ನ ಕೀವ್, ಖಾರ್ಕೀವ್‍ನಲ್ಲಿ ಕನ್ನಡಿಗ ವಿದ್ಯಾರ್ಥಿಗಳ ಪರದಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೀವ್ ಮತ್ತು ಖಾರ್ಕೀವ್‍ಗೆ ರೆಸ್ಕ್ಯೂಗೆ ರೀಚ್ ಆಗೋಕೆ ಆಗುತ್ತಿಲ್ಲ. ಉಕ್ರೇನ್ ಭಾರತೀಯ ರಾಯಭಾರಿ ಕಚೇರಿಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಹೆಚ್ಚಿನ ಫೋನ್‍ಗಳ ವ್ಯವಸ್ಥೆ ಮಾಡಿದ್ದೇವೆ. ಕೆಲವೊಂದು ವೇಳೆ ಎಲೆಕ್ಟ್ರಿಸಿಟಿ ಸೇರಿ ಇತರ ಸೌಲಭ್ಯ ಸಿಗಲ್ಲ. ನನಗೆ ಬಂದ ಫೋನ್‍ಗಳನ್ನು ಸ್ವೀಕರಿಸುತ್ತಿದ್ದೇನೆ. ನಮ್ಮ ಮಕ್ಕಳನ್ನು ಸುರಕ್ಷಿತವಾಗಿ ಕರೆ ತರುವುದು ನಮ್ಮ ಆದ್ಯತೆ ಎಂದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

    ಬಾಂಬ್ ದಾಳಿ, ಶೆಲ್ಲಿಂಗ್ ಆಗುತ್ತಿದೆ. ಎರಡೂ ಕಡೆ ಸೈನಿಕರು ಸುತ್ತವರೆದಿದ್ದಾರೆ. ಹೀಗಾಗಿ ರೀಚ್ ಆಗಲು ಆಗುತ್ತಿಲ್ಲ. ನಾವು ಅಲ್ಲಿ ರೀಚ್ ಆಗಲು ಆಗುತ್ತಿಲ್ಲ, ಇದು ಬಹಳ ಕಷ್ಟಕರ ಪರಿಸ್ಥಿತಿಯಾಗಿದೆ. ಕೆಲವು ಪೋಷಕರು ನನಗೂ ಫೋನ್ ಮಾಡಿ ಕಣ್ಣೀರು ಹಾಕುತ್ತಿದ್ದಾರೆ. ನಿನ್ನೆಯಿಂದ ನ್ಯೂಕ್ಲಿಯರ್ ಮಾತುಕತೆ ನಡೆಯುತ್ತಿದೆ. ಇದರಲ್ಲಿ ಸತ್ಯ ಎಷ್ಟು ಸುಳ್ಳು ಎಷ್ಟು ನನಗೆ ಗೊತ್ತಿಲ್ಲ. ಇದು ನಮಗೆ ಚಾಲೇಂಜಿಂಗ್ ಟೈಮ್. ನಮ್ಮ ನಾಗರಿಕರನ್ನು ಹೇಗಾದರೂ ಮಾಡಿ ಸುರಕ್ಷಿತವಾಗಿ ಕರೆತರೋದೆ ನಮ್ಮ ಪ್ರಥಮ ಆದ್ಯತೆಯಾಗಿದೆ. ಸ್ವತಃ ಪ್ರಧಾನಿ ಡೇ ಟು ಡೇ ಮಾನಿಟರ್ ಮಾಡ್ತಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

  • ಉಕ್ರೇನ್ ಅಧ್ಯಕ್ಷನ ಹತ್ಯೆಗೆ 400 ರಷ್ಯಾ ಸೈನಿಕರು ಸಿದ್ಧತೆ

    ಉಕ್ರೇನ್ ಅಧ್ಯಕ್ಷನ ಹತ್ಯೆಗೆ 400 ರಷ್ಯಾ ಸೈನಿಕರು ಸಿದ್ಧತೆ

    ಕೀವ್: ರಷ್ಯಾದ 400 ಸೈನಿಕರಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಹತ್ಯೆ ಮಾಡಲು ಆದೇಶಿಸಿದ್ದು, ಇದರಿಂದಾಗಿ ಅವರು ರಷ್ಯಾ ಸೈನಿಕರು ಹುಡುಕುತ್ತಿದ್ದಾರೆ ಎಂಬ ವಿಷಯ ಇದೀಗ ಬಹಿರಂಗವಾಗಿದೆ.

    400ಕ್ಕೂ ಹೆಚ್ಚು ಸೈನಿಕರನ್ನು ರಷ್ಯಾ ಆಫ್ರಿಕಾದಿಂದ ಕರೆಸಿಕೊಂಡಿದ್ದು, ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಅವರ ಸರ್ಕಾರದ ಅಧಿಕಾರಿಗಳನ್ನು ಹತ್ಯೆ ಮಾಡಲು ಯೋಜನೆ ಹಾಕಿಕೊಂಡಿದ್ದಾರೆ. ಅಧ್ಯಕ್ಷ ಪುಟಿನ್ ಅವರ ಮಿತ್ರರ ಬಳಗದಲ್ಲಿ ಒಬ್ಬರಿಂದ ನಡೆಸಲ್ಪಡುವ ವ್ಯಾಗ್ನರ್ ಗ್ರೂಪ್ ಕಂಪನಿಯು ಐದು ವಾರಗಳ ಹಿಂದೆ ಆಫ್ರಿಕಾದಿಂದ ಸೈನಿಕರಿಗೆ ಆರ್ಥಿಕ ಸಹಾಯ ಮಾಡಿ ಅದಕ್ಕೆ ಪ್ರತಿಫಲವಾಗಿ ಝೆಲೆನ್ಸ್ಕಿಯ ಶಿರಚ್ಛೇದ ಮಾಡಲು ಆದೇಶಿಸಿತ್ತು.

    ವ್ಯಾಗ್ನರ್ ಗ್ರೂಪ್‍ನ ಚಟುವಟಿಕೆಗಳ ಜ್ಞಾನವಿರುವ ಮೂಲವೊಂದು 2,000 ಮತ್ತು 4,000 ಕೂಲಿ ಸೈನಿಕರು ಜನವರಿಯಲ್ಲಿ ಉಕ್ರೇನ್‍ಗೆ ಆಗಮಿಸಿದ್ದರು ಎಂದು ಮಾಹಿತಿ ನೀಡಿದ್ದು, ಕೆಲವರನ್ನು ದೇಶದ ಪೂರ್ವದಲ್ಲಿರುವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್‍ನ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಿಗೆ ಕಳುಹಿಸಲಾಯಿತು. ಆದರೆ 400 ಸೈನಿಕರು ಝೆಲೆನ್‍ಸ್ಕಿಯನ್ನು ಹತ್ಯೆಗೈಯಲು ಬೆಲಾರಸ್‍ನಿಂದ ಕೈವ್‍ಗೆ ತೆರಳಿದ್ದರು.

    ಈ ಗುಂಪು ಉಕ್ರೇನ್‍ನ ಅಧ್ಯಕ್ಷ ಹಾಗೂ ಅವರ ಸಹೋದ್ಯೋಗಿಗಳು ಇರುವ ಸ್ಥಳವನ್ನು ತಮ್ಮ ಫೋನ್‍ಗಳ ಮೂಲಕ ಟ್ರ್ಯಾಕ್ ಮಾಡುತ್ತಿತ್ತು. ಅವರು ಯಾವ ಸಮಯದಲ್ಲಿ ಎಲ್ಲಿ ಇರುತ್ತಾರೆ ಎಂಬ ವಿವರಗಳನ್ನೆಲ್ಲಾ ತಿಳಿದುಕೊಳ್ಳುತ್ತಿತ್ತು. ಇದನ್ನೂ ಓದಿ: ಉಕ್ರೇನ್‍ಗಡಿಗೆ ತಲುಪಿದ್ದರು ಭಾರತಕ್ಕೆ ಬರಲಾಗದೆ ಪರದಾಡುತ್ತಿರುವ ರಾಯಚೂರು ವಿದ್ಯಾರ್ಥಿಗಳು

    ಈ ಹಿಂದೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಾತನಾಡಿ, ರಷ್ಯಾದ ಟಾರ್ಗೆಟ್ ನಂಬರ್ ಒನ್ ನಾನಾಗಿದ್ದೇನೆ. ರಷ್ಯಾದ ವಿಶೇಷ ಪಡೆಗಳು ಹತ್ಯೆ ಮಾಡಲು ಸಂಚು ಮಾಡುತ್ತೀವೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ತ್ರಿವರ್ಣ ಧ್ವಜ ಇದ್ದ ಬಸ್‌ಗಳನ್ನು ನೋಡಿದಾಗ ಮತ್ತೆ ಬದುಕಿದಂತಾಯ್ತು: ವಿದ್ಯಾರ್ಥಿನಿ

  • ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

    ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ

    ರಾಯಚೂರು: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್ ಬರಲು ಪರದಾಡುತ್ತಿದ್ದಾರೆ.

    ರಾಯಚೂರಿನ ಉರಗ ತಜ್ಞ ಅಫ್ಸರ್ ಮಗ ವೈದ್ಯಕೀಯ ವಿದ್ಯಾರ್ಥಿ ಮೊಹಮ್ಮದ್ ಅಸರ್ ಹುಸೇನ್ ಉಕ್ರೇನ್ ಗಡಿಗೆ ತಲುಪಿ ವಿಮಾನ ನಿಲ್ದಾಣ ಬಳಿ ಬಂದಿದ್ದರೂ ದೇಶಕ್ಕೆ ಮರಳಲು ಆಗದೆ ಪರದಾಡುತ್ತಿದ್ದಾರೆ. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

    ಲಕ್ಷ ಲಕ್ಷ ಸಾಲ ಮಾಡಿ ಮಗನನ್ನು ಓದಿಸಲು ಉಕ್ರೇನ್‍ಗೆ ಕಳುಹಿಸಿದ್ದ ಉರಗ ತಜ್ಞ ಅಫ್ಸರ್ ಮಗನ ಸ್ಥಿತಿ ಕಂಡು ಬೇಸರ ಹಾಗೂ ಆತಂಕ ವ್ಯಕ್ತಪಡಿಸಿದ್ದಾರೆ. ತಂದೆ ಅಫ್ಸರ್‍ಗೆ ಕರೆ ಮಾಡಿ ಕಣ್ಣೀರಿಟ್ಟಿರುವ ಮೊಹಮ್ಮದ್ ಹುಸೇನ್ ಉಕ್ರೇನ್ ಗಡಿ ಭಾಗ ತಲುಪಿದರೂ ವಿಮಾನ ಸಿಕ್ಕಿಲ್ಲ. ಎರ್‌ಪೋರ್ಟ್ ಬಳಿಯ ಸ್ಥಿತಿ ಆತಂಕ ವ್ಯಕ್ತಪಡಿಸಿದ್ದಾನೆ. ಒಂದು ದಿನದಿಂದ ಎರ್‌ಪೋರ್ಟ್ ಬಳಿ ಕಾದು ಕುಳಿತರ ವಿಮಾನ ಸಿಕ್ಕಿಲ್ಲ. ಉಕ್ರೇನ್ ಗಡಿಭಾಗದ ಎರ್‌ಪೋರ್ಟ್ ವ್ಯಾಪ್ತಿಯಲ್ಲಿ ಸಾವಿರಾರು ಜನ ಸೇರಿದ್ದು, ಜನಜಂಗುಳಿಯಾಗಿದೆ. ಯಾವಾಗ ವಿಮಾನ ಸಿಗುತ್ತೆ ಅಂತ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ ಎಂದು ಅಸರ್ ಹುಸೇನ್ ತಿಳಿಸಿದ್ದಾರೆ.‌ ಇದನ್ನೂ ಓದಿ: ‘ಗೆಹ್ರೈಯಾನ್’ ಸಕ್ಸಸ್ ಸೆಲೆಬ್ರೇಟ್ ಮಾಡಲು ಬೆಂಗಳೂರಿಗೆ ಬರ್ತಿದ್ದಾರೆ ದೀಪಿಕಾ!