ನವದೆಹಲಿ: ನಾವು ತಟಸ್ಥವಾಗಿಲ್ಲ, ಶಾಂತಿ ಕಡೆ ಇದ್ದೇವೆ ಎಂದು ಯುದ್ಧಪೀಡಿತ ಉಕ್ರೇನ್‌ಗೆ (Ukraine) ಐತಿಹಾಸಿಕ ಭೇಟಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮಾತನಾಡಿದ್ದಾರೆ.
ಕೆಲವು ಸಮಯದ ಹಿಂದೆ ನಾನು ಸಮರ್ಕಂಡ್‌ನಲ್ಲಿ ಅಧ್ಯಕ್ಷ ಪುಟಿನ್ ಅವರನ್ನು ಭೇಟಿಯಾದಾಗ, ಇದು ಯುದ್ಧದ ಯುಗವಲ್ಲ ಎಂದು ನಾನು ಅವರಿಗೆ ಹೇಳಿದ್ದೆ. ಕಳೆದ ತಿಂಗಳು ನಾನು ರಷ್ಯಾಕ್ಕೆ ಹೋದಾಗ, ಯಾವುದೇ ಸಮಸ್ಯೆಗೆ ಪರಿಹಾರವು ಯುದ್ಧಭೂಮಿಯಲ್ಲಿ ಎಂದಿಗೂ ಸಿಗುವುದಿಲ್ಲ ಎಂದು ಸ್ಪಷ್ಟವಾದ ಮಾತುಗಳಲ್ಲಿ ಹೇಳಿದ್ದೆ ಎಂದು ತಿಳಿಸಿದ್ದಾರೆ.
1991 ರಲ್ಲಿ ರಷ್ಯಾದ ಭಾಗವಾಗಿದ್ದ ರಾಜ್ಯ ಸ್ವತಂತ್ರವಾದ ನಂತರ ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ವಿಶೇಷ ರೈಲಿನಲ್ಲಿ ಕೈವ್‌ಗೆ ಭೇಟಿ ನೀಡಿದ್ದರು.
ಕೈವ್: ಕಳೆದ ಎರಡೂವರೆ ವರ್ಷಗಳಿಂದ ಯುದ್ಧದ ಕುಲುಮೆಯಲ್ಲಿ ಬೇಯುತ್ತಿರುವ ಉಕ್ರೇನ್‌ಗೆ ಇದೀಗ ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ. ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ನಮೋ (Narendra Modi) ಶುಕ್ರವಾರ (ಆ.23) ಅಧ್ಯಕ್ಷ ವ್ಲಾಡಮಿರ್ ಝೆಲೆನ್ಸ್ಕಿ (Volodymyr Zelensky) ಅವರನ್ನು ಭೇಟಿಯಾಗಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಕೈವ್‌ನ ರೈಲ್ವೆ ನಿಲ್ದಾಕ್ಕೆ ಬಂದಿಳಿಯುತ್ತಿದ್ದಂತೆ ಅಲ್ಲಿನ ಭಾರತೀಯರು ಆತ್ಮೀಯವಾಗಿ ಸ್ವಾಗತ ಕೋರಿದ್ದಾರೆ.
Bharat Health Initiative for Sahyog Hita & Maitri (BHISHM) is a unique effort which will ensure medical facilities in a rapidly deployable manner. It consists of cubes which contain medicines and equipment for medical care. Today, presented BHISHM cubes to President @ZelenskyyUa. pic.twitter.com/gw3DjBpXyA
ನಂತರ ಕೈವ್‌ನಲ್ಲಿ (Kyiv) ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಪ್ರಧಾನಿ ಉಕ್ರೇನ್‌ಗೆ ಭೇಟಿ (PM Modi In UKraine) ನೀಡಿದ ಫೋಟೋ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ನೇಪಾಳದಲ್ಲಿ ನದಿಗೆ ಉರುಳಿತು 40 ಭಾರತೀಯರಿದ್ದ ಬಸ್ಸು – 14 ಮಂದಿ ಸಾವು
ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ.
ನಂತರ ಮುನ್ನ ರಷ್ಯಾ ದಾಳಿಯಲ್ಲಿ ಹುತಾತ್ಮರಾದವರಿಗೆ ಮೋದಿ ನಮನ ಸಲ್ಲಿಸಿದ್ರು. ಉಕ್ರೇನ್‌ನ ಇತಿಹಾಸದ ಮ್ಯೂಸಿಯಂ ವೀಕ್ಷಿಸಿದ್ರು. ಹುತಾತ್ಮರ ಸ್ಮಾರಕದ ಬಳಿ ಮೋದಿ ಅವರನ್ನು ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ತಬ್ಬಿಕೊಂಡ್ರು. ನಂತರ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗಾಣಿಸುವ ಸಂಬಂಧ ಉಭಯ ನಾಯಕರು ಮಹತ್ವದ ಚರ್ಚೆ ನಡೆಸಿದ್ರು. ರಷ್ಯಾ ಹಾಗೂ ಉಕ್ರೇನ್ ಸಂಘರ್ಷ ಮಕ್ಕಳಿಗೆ ವಿನಾಶಕಾರಿ ಎಂದ ಮೋದಿ, ಶಾಂತಿ ಮರುಸ್ಥಾಪನೆ ಅಗತ್ಯವನ್ನು ಒತ್ತಿ ಹೇಳಿದ್ರು. ಇದನ್ನೂ ಓದಿ: ಮಾಜಿ ಪ್ರಧಾನಿ ಶೇಖ್ ಹಸೀನಾ, ಬಾಂಗ್ಲಾದ ಆಲ್‌ರೌಂಡರ್ ಶಕೀಬ್ ವಿರುದ್ಧ ಕೊಲೆ ಪ್ರಕರಣ ದಾಖಲು
ಇದೇ ವೇಳೆ, ಉಭಯ ದೇಶಗಳ ಮಧ್ಯೆ 4 ಒಪ್ಪಂದಗಳಾದವು. ಇದಕ್ಕೂ ಮುನ್ನ, ಮಹಾತ್ಮ ಗಾಂಧಿ ವಿಗ್ರಹಕ್ಕೆ ಪುಷ್ಪ ನಮನ ಸಲ್ಲಿಸಿದ ಮೋದಿ, ಬಾಪೂಜಿ ಆಶಯಗಳು ವಿಶ್ವವ್ಯಾಪಿಯಾಗಿವೆ. ಕೋಟ್ಯಂತರ ಮಂದಿಗೆ ಸ್ಪೂರ್ತಿಯಾಗಿದೆ ಎಂದು ಬಣ್ಣಿಸಿದ್ರು. ಗಾಂಧಿ ತೋರಿಸಿದ ಹಾದಿಯಲ್ಲಿ ನಡೆಯಬೇಕೆಂದು ಮೋದಿ ಕರೆ ಕೊಟ್ಟರು. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದರು.
ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನ ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಧನ್ಯವಾದ ಅರ್ಪಿಸಿದರು. ಇದನ್ನೂ ಓದಿ: ನಮ್ಮ ಸಂಸ್ಕೃತಿಯಲ್ಲಿ ಮಾನವೀಯತೆಯೇ ಮೊದಲು, ಯುದ್ಧದ ಸಮಯವಲ್ಲ: ಪೋಲೆಂಡ್‍ನಲ್ಲಿ ಮೋದಿ ಶಾಂತಿ ಮಂತ್ರ
ವಾರ್ಸಾ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಉಕ್ರೇನ್ (Ukraine) ಹಾಗೂ ಪೋಲೆಂಡ್ (Poland) ಪ್ರವಾಸದ ಮೊದಲ ಹಂತದಲ್ಲಿ ಪೋಲೆಂಡ್‍ಗೆ ಭೇಟಿ ನೀಡಿದ್ದಾರೆ.
ವಾರ್ಸಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಅವರು ಮಾತನಾಡಿದ್ದಾರೆ. ಈ ವೇಳೆ, ಭಾರತವು ಭಗವಾನ್ ಬುದ್ಧನ ಪರಂಪರೆಯ ನಾಡು. ಆದ್ದರಿಂದ, ಭಾರತವು ಜಗತ್ತಿನ ಎಲ್ಲೆಡೆ ಶಾಶ್ವತ ಶಾಂತಿಯನ್ನು ಪ್ರತಿಪಾದಿಸಿಸುತ್ತದೆ. ಇದು ಯುದ್ಧದ ಯುಗವಲ್ಲ. ಭಾರತವು ಯಾವಾಗಲೂ ಸಂಘರ್ಷವನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬಲವಾಗಿ ನಂಬುತ್ತದೆ. ನಾವು ಇಡೀ ಜಗತ್ತನ್ನು ಒಂದೇ ಕುಟುಂಬವೆಂದು ಪರಿಗಣಿಸಿದ್ದೇವೆ ಮತ್ತು ಇದು ಇಂದಿನ ಭಾರತದ ನೀತಿಗಳು ಮತ್ತು ನಿರ್ಧಾರಗಳಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ ಎಂದಿದ್ದಾರೆ.
ಇಂದಿನ ಭಾರತವು ಎಲ್ಲರೊಂದಿಗೆ ಸಂಪರ್ಕ ಹೊಂದಲು ಬಯಸುತ್ತದೆ. ಈ ಮೂಲಕ ಎಲ್ಲರ ಅಭಿವೃದ್ಧಿ ಹಾಗೂ ಹಿತಾಸಕ್ತಿಗಳ ಬಗ್ಗೆ ಯೋಚಿಸುತ್ತದೆ. ಕೋವಿಡ್ ಬಂದಾಗ, ಭಾರತ ಮಾನವೀಯತೆಯೇ ಮೊದಲು ಎಂದು ಹೇಳಿತ್ತು. ನಾವು ವಿಶ್ವದ 150 ಕ್ಕೂ ಹೆಚ್ಚು ದೇಶಗಳಿಗೆ ಔಷಧಗಳು ಮತ್ತು ಲಸಿಕೆಗಳನ್ನು ಕಳುಹಿಸಿದ್ದೇವೆ. ಎಲ್ಲಿ ಭೂಕಂಪ ಅಥವಾ ಯಾವುದೇ ವಿಪತ್ತು ಸಂಭವಿಸಿದರೂ ಭಾರತಕ್ಕೆ ಮಾನವೀಯತೆ ಒಂದೇ ಮೊದಲ ಮಂತ್ರ ಎಂದು ಶಾಂತಿಯ ಸಂದೇಶ ಸಾರಿದ್ದಾರೆ.
ಭಾರತ ಮತ್ತು ಫೋಲೆಂಡ್ ಬಹಳಷ್ಟು ಸಾಮ್ಯತೆಗಳನ್ನು ಹೊಂದಿವೆ. ಅವುಗಳಲ್ಲಿ ಒಂದು ಪ್ರಜಾಪ್ರಭುತ್ವವಾಗಿದೆ. ಭಾರತವು ಪ್ರಜಾಪ್ರಭುತ್ವದ ತಾಯಿ, ನಮ್ಮ ದೇಶದ ಜನರು ಪ್ರಜಾಪ್ರಭುತ್ವದಲ್ಲಿ ಹೆಚ್ಚಿನ ವಿಶ್ವಾಸ ಹೊಂದಿದ್ದಾರೆ ಮತ್ತು ಇದು ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಅದು ಸ್ಪಷ್ಟವಾಗಿದೆ ಎಂದಿದ್ದಾರೆ.
ಬಳಿಕ 2022 ರಲ್ಲಿ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದಾಗ ಭಾರತೀಯ ವಿದ್ಯಾರ್ಥಿಗಳಿಗೆ ನೀಡಿದ ಬೆಂಬಲಕ್ಕಾಗಿ ಮೋದಿ ಧನ್ಯವಾದ ಅರ್ಪಿಸಿದರು. ಕಳೆದ 45 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡಿರುವುದು ಇದಾಗಿದೆ.
ಕಿವ್: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡು ದಿನಗಳ ಕಾಲ ವಿದೇಶ ಪ್ರವಾಸ ಕೈಗೊಂಡಿದ್ದು, ಪೋಲೆಂಡ್‌ನಲ್ಲಿ (Poland) ಲ್ಯಾಂಡ್ ಆಗಿದ್ದಾರೆ. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡಿದ್ದಾರೆ. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ರೈಲಿನ ವಿಶೇಷತೆಗಳು:
ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ (Ukraine) ರಾಜಧಾನಿ ಕೀವ್‌ಗೆ (Kyiv) ‘ಟ್ರೇನ್ ಫೋರ್ಸ್ ಒನ್’ (Train Force One) ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಇದಕ್ಕೂ ಮುನ್ನ ಅಮೆರಿಕಾ ಅಧ್ಯಕ್ಷ ಜೋ ಬೈಡನ್ (Joe Biden) ಹಾಗೂ ಫ್ರೆಂಚ್ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ (Emmanuel Macron) ಅವರು ಕೀವ್ ಭೇಟಿ ವೇಳೆ ಈ ರೈಲಿನಲ್ಲಿ ಪ್ರಯಾಣಿಸಿದ್ದರು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರು ತಮ್ಮ ಅಂತರರಾಷ್ಟ್ರೀಯ ಪ್ರವಾಸಗಳಿಗಾಗಿ ಈ ರೈಲಿನಲ್ಲಿ ಪ್ರಯಾಣಿಸುತ್ತಾರೆ.
ಈ ರೈಲು ಮರದ ಫಲಕದಿಂದ ಸಿದ್ಧಪಡಿಸಿದ ಕ್ಯಾಬಿನ್‌ಗಳನ್ನು ಹೊಂದಿದೆ. ಅತಿಥಿಗಳೊಂದಿಗೆ ಸಭೆ ಕೈಗೊಳ್ಳಲು ಟೇಬಲ್, ಸೋಫಾ, ಟಿವಿ ಹಾಗೂ ಅಚ್ಚುಕಟ್ಟಾದ ಮಲಗುವ ವ್ಯವಸ್ಥೆಯನ್ನು ಈ ರೈಲು ಒಳಗೊಂಡಿದೆ.
2014ರಲ್ಲಿ ಮೂಲತಃ ಕ್ರೈಮಿಯಾದಲ್ಲಿ ಪ್ರವಾಸಿಗರಿಗಾಗಿ ಈ ರೈಲನ್ನು ನಿರ್ಮಿಸಲಾಯಿತು. ಯುದ್ಧದ ಸಂದರ್ಭದಲ್ಲಿ ರಷ್ಯಾದ ವಿದ್ಯುತ್ ಜಾಲಗಳು ಮತ್ತು ವಿದ್ಯುತ್ ಉತ್ಪಾದನಾ ಸೌಲಭ್ಯಗಳ ಮೇಲೆ ಗಮನಾರ್ಹ ಸಮಸ್ಯೆಯಿಂದಾಗಿ ಉಕ್ರೇನ್ ರೈಲುಗಳನ್ನು ವಿದ್ಯುತ್ ಇಂಜಿನ್‌ನಿಂದ ಡೀಸೆಲ್ ಇಂಜಿನ್‌ಗಳಾಗಿ ಪರಿವರ್ತನೆ ಮಾಡಲಾಗಿದೆ. ಈ ಪರಿವರ್ತನೆಯಿಂದಾಗಿ ಪೋಲೆಂಡ್ ಗಡಿಯಿಂದ ಕೀವ್‌ಗೆ ರೈಲು ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ.ಇದನ್ನೂ ಓದಿ: ಪ್ರಧಾನಿ ಮೋದಿ ವಿದೇಶಿ ಪ್ರವಾಸ – ಪೋಲೆಂಡ್ ಮತ್ತು ಉಕ್ರೇನ್‌ಗೆ ಭೇಟಿ
ಯುದ್ಧದ ಸಂದರ್ಭದಲ್ಲಿ ಹಾನಿಗೊಳಗಾದ ದೇಶದ ಮೂಲಕ ವಿಶ್ವ ನಾಯಕರು ಮತ್ತು ವಿಐಪಿಗಳನ್ನು ಸಾಗಿಸಲು ಈ ಐಷಾರಾಮಿ ರೈಲನ್ನು ಮರು ರೂಪಿಸಲಾಯಿತು. ರಷ್ಯಾ ಆಕ್ರಮಣದ ಸಮಯದಲ್ಲಿಯೂ ಲಕ್ಷಾಂತರ ಜನರನ್ನು, ಅನೇಕ ನಾಯಕರನ್ನು ಈ ರೈಲಿನ ಮೂಲಕ ಸ್ಥಳಾಂತರಿಸಲಾಗಿದೆ. ರಷ್ಯಾ ಆಕ್ರಮಣದ ಹೊರತಾಗಿಯೂ ದೇಶದ ಸಾರಿಗೆ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಈಗಲೂ ಈ ರೈಲು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ.
ಜೂನ್‌ನಲ್ಲಿ ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯ (G7 Summit) ಸಂದರ್ಭದಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದರು. ಅದಾದ ಬಳಿಕ ಆಗಸ್ಟ್ 23 ರಂದು ಉಕ್ರೇನ್ ಭೇಟಿ ನೀಡುವ ಮೂಲಕ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
– 40 ವರ್ಷಗಳ ಬಳಿಕ ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಭಾರತದ ಮೊದಲ ಪ್ರಧಾನಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಎರಡು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಮೊದಲು ಅವರು ಪೋಲೆಂಡ್‌ಗೆ ತೆರಳಲಿದ್ದಾರೆ. 45 ವರ್ಷಗಳ ಬಳಿಕ ಪೋಲೆಂಡ್‌ಗೆ ಭಾರತದ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿದ್ದಾರೆ. ಪ್ರವಾಸದಲ್ಲಿ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ದುಡಾ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ.
ತಮ್ಮ ನಿರ್ಗಮನಕ್ಕೂ ಪ್ರಧಾನಿ ಕಚೇರಿಯಿಂದ ಹೇಳಿಕೆ ಬಿಡುಗಡೆಯಾಗಿದ್ದು ಹೇಳಿಕೆಯಲ್ಲಿ, ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳಿಗೆ 70 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪೋಲೆಂಡ್‌ಗೆ ಭೇಟಿ ನೀಡುತ್ತಿದ್ದೇನೆ. ಮಧ್ಯ ಯೂರೋಪಿನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಮುಂದೆ ಜಪಾನ್‌ಗೆ ಭಾರತದಿಂದ ಹಸಿರು ಅಮೋನಿಯಾ ರಫ್ತು
ರೈಲಿನಲ್ಲಿ ಉಕ್ರೇನ್ ಭೇಟಿ
ಪೋಲೆಂಡ್‌ನಿಂದ (Poland) ಪ್ರಧಾನಿ ಮೋದಿ ಆಗಸ್ಟ್ 23 ರಂದು ಐಷಾರಾಮಿ ‘ಟ್ರೇನ್ ಫೋರ್ಸ್ ಒನ್’ ನಲ್ಲಿ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಉಕ್ರೇನ್ ಯುದ್ಧದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.
ಪೋಲೆಂಡ್‌ನಿಂದ ನಾನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್‌ಕಿಯವರ ಆಹ್ವಾನದ ಮೇರೆಗೆ ಉಕ್ರೇನ್‌ಗೆ ಭೇಟಿ ನೀಡಲಿದ್ದೇನೆ. ಇದು ಭಾರತದ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಅಧ್ಯಕ್ಷ ಝೆಲೆನ್ಸ್‌ಕಿ ಅವರೊಂದಿಗೆ ಮಾತುಕತೆ ಅವಕಾಶವನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಅವರು ತಮ್ಮ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಾಕ್ಷ್ಯ ನೀಡಿದ್ರೆ ಝಾಕೀರ್ ನಾಯ್ಕ್ ಭಾರತಕ್ಕೆ ಹಸ್ತಾಂತರ – ಮಲೇಷ್ಯಾ ಪ್ರಧಾನಿ ಇಬ್ರಾಹಿಂ
ಉಕ್ರೇನ್ ಅನ್ನು ‘ಸ್ನೇಹಿತ’ ಮತ್ತು ‘ಪಾಲುದಾರ’ ಎಂದು ಕರೆದಿರುವ ಮೋದಿ ಶಾಂತಿ ಮತ್ತು ಸ್ಥಿರತೆ ಶೀಘ್ರದಲ್ಲೇ ಮರಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಭಾರತ ಉಕ್ರೇನ್ ಸಂಬಂಧ ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ರಷ್ಯಾ ಆಕ್ರಮಣದ ಬಳಿಕ ಉಕ್ರೇನ್‌ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಈ ತಿಂಗಳ ಅಂತ್ಯಕ್ಕೆ ಭೇಟಿ ನೀಡಲಿದ್ದಾರೆ.
ರಷ್ಯಾ (Russia) ಜೊತೆಗಿನ ಯುದ್ಧದ ನಂತರ ಉಕ್ರೇನ್‌ಗೆ (Ukraine) ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಆ.22 ಅಥವಾ ಆ.23 ರಂದು ಮೋದಿ ಉಕ್ರೇನ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಉಕ್ರೇನ್ ಭೇಟಿಯನ್ನು ವಿದೇಶಾಂಗ ಸಚಿವಾಲಯ (External Affairs Ministry) ಅಧಿಕೃತವಾಗಿ ತಿಳಿಸಿದ್ದು ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಪ್ರವಾಸದ ವಿವರಗಳನ್ನು ನಂತರ ತಿಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಉಲ್ಲೇಖಿಸಿದೆ.ಇದನ್ನೂ ಓದಿ: ತ್ರಿವಳಿ ತಲಾಖ್ ಪದ್ಧತಿಯಿಂದ ಮುಸ್ಲಿಂ ಮಹಿಳೆಯರ ಸ್ಥಿತಿ ದಯನೀಯವಾಗಿದೆ: ಕೇಂದ್ರ
ಮಾಸ್ಕೋದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಭೇಟಿಯಾದ ಸುಮಾರು ಒಂದು ತಿಂಗಳ ನಂತರ ಉಕ್ರೇನ್‌ಗೆ ಭೇಟಿ ನೀಡುತ್ತಿದ್ದಾರೆ. ಉಕ್ರೇನ್‌ಗೆ ಭೇಟಿ ನೀಡಿದ ಬಳಿಕ ಮೋದಿ ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಪುಟಿನ್ ಅವರ ಆಹ್ವಾನದ ಮೇರೆಗೆ ಜುಲೈ 8 ರಂದು ಎರಡು ದಿನಗಳ ಭೇಟಿಗಾಗಿ ಮಾಸ್ಕೋಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು ಒಪ್ಪಿಕೊಂಡಿದ್ದವು.ಇದನ್ನೂ ಓದಿ: ವಯನಾಡು ದುರಂತ ಹೇಗಾಯ್ತು? – ಭಯಾನಕ ಜಲಪ್ರಳಯದ ಸಿಸಿಟಿವಿ ದೃಶ್ಯ ನೋಡಿ
ಭೇಟಿ ವೇಳೆ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಗೌರವವನ್ನು ಪುಟಿನ್ ನೀಡಿ ಗೌರವಿಸಿದ್ದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್ 23 ರಂದು ಉಕ್ರೇನ್‌ಗೆ (Ukraine) ಭೇಟಿ ನೀಡುವ ಸಾಧ್ಯತೆಯಿದೆ.
ರಷ್ಯಾ (Russia) ಜೊತೆಗಿನ ಯುದ್ಧದ ನಂತರ ಉಕ್ರೇನ್‌ಗೆ ಮೊದಲ ಬಾರಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 22 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಪುಟಿನ್ (Vladimir Putin) ಅವರ ಆಹ್ವಾನದ ಮೇರೆಗೆ ಜುಲೈ 8 ರಂದು ಎರಡು ದಿನಗಳ ಭೇಟಿಗಾಗಿ ಮಾಸ್ಕೋಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ಪರಮಾಣು ಶಕ್ತಿ ಮತ್ತು ಹಡಗು ನಿರ್ಮಾಣ ಸೇರಿದಂತೆ ವಿವಿಧ ವಲಯಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಎರಡೂ ದೇಶಗಳು ಒಪ್ಪಿಕೊಂಡಿದ್ದವು. ಈ ವೇಳೆ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಗೌರವವನ್ನು ಪುಟಿನ್ ನೀಡಿ ಗೌರವಿಸಿದ್ದರು.
ರಷ್ಯಾಗೆ ಭೇಟಿ ನೀಡಿದ ಒಂದೇ ತಿಂಗಳ ಅಂತರದಲ್ಲಿ ಮೋದಿ ಅವರು ಉಕ್ರೇನ್ ಭೇಟಿ ನೀಡುತ್ತಿರುವುದು ಕುತೂಹಲ ಮೂಡಿಸಿದೆ.
– ಕಿಮ್ ಭೇಟಿಯಾಗಿದ್ಯಾಕೆ ಪುಟಿನ್? – ಉತ್ತರ ಕೊರಿಯಾ, ರಷ್ಯಾ ನಡುವೆ ಆದ ಒಪ್ಪಂದವೇನು?
24 ವರ್ಷಗಳ ಬಳಿಕ ಉತ್ತರ ಕೊರಿಯಾಗೆ (North Korea) ಭೇಟಿ ನೀಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಇನ್ನಷ್ಟು ಬಲ ಭೀಮನಾಗಿ ವಾಪಸ್ ಆಗಿದ್ದಾರೆ. ಉಕ್ರೇನ್ (Ukraine) ಮೇಲೆ ಯುದ್ಧ ಸಾರಿದಾಗ, ಹತ್ತಾರು ದೇಶಗಳ ನ್ಯಾಟೊ ಒಕ್ಕೂಟವೇ ತಿರುಗಿಬಿದ್ದರೂ ಎದೆಗುಂದದೇ ರಷ್ಯಾ ಏಕಾಂಗಿ ಹೋರಾಟ ನಡೆಸಿತ್ತು. ಆಗ ರಷ್ಯಾ ಬೆಂಬಲಕ್ಕೆ ನಿಂತ ರಾಷ್ಟ್ರ ಉತ್ತರ ಕೊರಿಯಾ. ಉಕ್ರೇನ್ ಮೇಲಿನ ಯುದ್ಧಕ್ಕೆ ರಷ್ಯಾಗೆ ಅಗತ್ಯ ಶಸ್ತ್ರಾಸ್ತ್ರ ನೆರವು ನೀಡಿ ಹೆಗಲು ಕೊಟ್ಟಿತ್ತು. ಈಗ ತನ್ನ ಆಪದ್ಭಾಂಧವ ರಾಷ್ಟ್ರಕ್ಕೆ ಪುಟಿನ್ ಭೇಟಿ ಕೊಟ್ಟರು. ಕೊರಿಯಾ ನಾಯಕ ಕಿಮ್ ಜಾಂಗ್ ಉನ್ (Kim Jong Un) ಅಷ್ಟೇ ಖುಷಿಯಿಂದ ಬರಮಾಡಿಕೊಂಡರು. ಉಭಯ ದೇಶಗಳ ನಾಯಕರು ಪರಸ್ಪರ ಹ್ಯಾಂಡ್‌ಶೇಕ್ ಮಾಡಿದರು. ನೆನಪಿನ ಕಾಣಿಕೆಗಳ ವಿನಿಮಯವಾಯಿತು. ಸಶಸ್ತ್ರ ನೆರವು ಒಪ್ಪಂದಕ್ಕೆ ಸಹಿ ಹಾಕಿದರು. ದಶಕಗಳ ನಂತರ ರಷ್ಯಾ ಅಧ್ಯಕ್ಷನ ಆ ಒಂದು ಭೇಟಿ ಅಮೆರಿಕ ನೇತೃತ್ವದ ಪಾಶ್ಚಿಮಾತ್ಯ ರಾಷ್ಟ್ರಗಳ ನಿದ್ದೆಗೆಡಿಸಿದೆ.
ರಷ್ಯಾವಾಗಲಿ ಅಥವಾ ಉಕ್ರೇನ್ ಆಗಲಿ ಹೊರಗಡೆಯಿಂದ ಸಶಸ್ತ್ರ ಆಕ್ರಮಣವನ್ನು ಎದುರಿಸಿದರೆ ಪರಸ್ಪರರು ತಕ್ಷಣದ ಮಿಲಿಟರಿ ನೆರವು ನೀಡುವ ಒಪ್ಪಂದಕ್ಕೆ ಪುಟಿನ್ ಮತ್ತು ಕಿಮ್ ಸಹಿ ಹಾಕಿದ್ದಾರೆ. ಜೊತೆಗೆ ಉತ್ತರ ಕೊರಿಯಾಗೆ ಸಶಸ್ತ್ರಗಳನ್ನು ನೀಡಲಾಗುವುದು ಎಂದು ರಷ್ಯಾ ಅಧ್ಯಕ್ಷರು ಒಪ್ಪಂದದಲ್ಲಿ ತಿಳಿಸಿದ್ದಾರೆ. ಉಭಯ ದೇಶಗಳು ಒಪ್ಪಂದವು ಅಮೆರಿಕಗೆ ಆತಂಕ ಮೂಡಿಸಿದೆ. ರಷ್ಯಾ-ಕೊರಿಯಾ ನಡುವಿನ ಈ ಒಪ್ಪಂದ ಈಗ ಏಕೆ ಮಹತ್ವದ್ದು? ಇದನ್ನೂ ಓದಿ: 24 ವರ್ಷಗಳ ಬಳಿಕ ಉತ್ತರ ಕೊರಿಯಾಗೆ ಪುಟಿನ್ ಭೇಟಿ – ರಷ್ಯಾ ಅಧ್ಯಕ್ಷನಿಗೆ ಭವ್ಯ ಸ್ವಾಗತ
ರಷ್ಯಾ-ಉ.ಕೊರಿಯಾ ಸ್ನೇಹದ ಒಂದು ಹಿನ್ನೋಟ
ಎರಡನೆಯ ಮಹಾಯುದ್ಧದ ನಂತರ, ಹಿಂದಿನ ಸೋವಿಯತ್ ಒಕ್ಕೂಟವು ಕೊರಿಯಾದಲ್ಲಿ ಕಮ್ಯುನಿಸ್ಟ್ ಆಡಳಿತವನ್ನು ಸ್ಥಾಪಿಸಲು ಬಯಸಿತು. ಕೊರಿಯನ್ ಯುದ್ಧದ ಸಮಯದಲ್ಲಿ ಉತ್ತರ ಕೊರಿಯಾದ ಸಂಸ್ಥಾಪಕ ಕಿಮ್ ಇಲ್ ಸುಂಗ್‌ಗೆ ಗಮನಾರ್ಹ ಮಿಲಿಟರಿ ಸಹಾಯವನ್ನು ನೀಡಿತು. ಯುದ್ಧಗಳು ಕೊನೆಗೊಂಡ ನಂತರ ಯುಎಸ್ಎಸ್ಆರ್, ಚೀನಾದೊಂದಿಗೆ ಕಮ್ಯುನಿಸ್ಟ್ ಉತ್ತರಕ್ಕೆ ಗಮನಾರ್ಹ ಮಿಲಿಟರಿ ಮತ್ತು ಇತರ ಸಹಾಯವನ್ನು ಒದಗಿಸಿತು. 1961 ರಲ್ಲಿ ಉಭಯ ರಾಷ್ಟ್ರಗಳು ತಮ್ಮ ಮೈತ್ರಿಯನ್ನು ಗಟ್ಟಿಗೊಳಿಸಿದವು. ರಷ್ಯಾ-ಉತ್ತರ ಕೊರಿಯಾ ಸ್ನೇಹ, ಸಹಕಾರ ಮತ್ತು ಪರಸ್ಪರ ಸಹಾಯದ ಒಪ್ಪಂದಕ್ಕೆ ಸಹಿ ಹಾಕಿದವು. ಇದು ಇತ್ತೀಚಿನ ಒಪ್ಪಂದದಂತೆ ಪರಸ್ಪರ ರಕ್ಷಣಾ ಒಪ್ಪಂದವನ್ನು ಹೊಂದಿದೆ. 1991 ರಲ್ಲಿ ಸೋವಿಯತ್ ಒಕ್ಕೂಟದ ವಿಸರ್ಜನೆಯ ನಂತರ, ಈ ಒಪ್ಪಂದವನ್ನು ರದ್ದುಗೊಳಿಸಲಾಯಿತು. ಪರಿಣಾಮವಾಗಿ ಸಂಬಂಧಗಳು ತಾತ್ಕಾಲಿಕವಾಗಿ ಹದಗೆಟ್ಟವು.
ಹೀಗಿದ್ದರೂ, 2000 ರ ದಶಕದ ಆರಂಭದಿಂದಲೂ ಪುಟಿನ್ ಆಡಳಿತದ ರಷ್ಯಾವು ಕಿಮ್ ಸರ್ವಾಧಿಕಾರದ ಉತ್ತರ ಕೊರಿಯಾಕ್ಕೆ ಹತ್ತಿರವಾಗಿದೆ. 2022 ರಲ್ಲಿ ಉಕ್ರೇನ್ ಮೇಲಿನ ಯುದ್ಧದಿಂದಾಗಿ ಪಾಶ್ಚಿಮಾತ್ಯ ರಾಷ್ಟ್ರಗಳ ಆರ್ಥಿಕ ನಿರ್ಬಂಧಕ್ಕೆ ರಷ್ಯಾ ಗುರಿಯಾಯಿತು. ಆಗ ರಷ್ಯಾಗೆ ಬೆಂಬಲವಾಗಿ ನಿಂತಿದ್ದು ಉತ್ತರ ಕೊರಿಯಾ. ರಷ್ಯಾ ಮತ್ತು ಉತ್ತರ ಕೊರಿಯಾವು ಪಾಶ್ಚಿಮಾತ್ಯ ಉದಾರವಾದಿ ಕ್ರಮದ ವಿರುದ್ಧ ಒಟ್ಟಾಗಿ ಈಗಲೂ ನಿಂತಿವೆ. ಇದನ್ನೂ ಓದಿ: ಕುರಾನ್‌ಗೆ ಅಪಮಾನ – ಠಾಣೆಗೆ ನುಗ್ಗಿ ಆರೋಪಿಯನ್ನ ಗುಂಡಿಕ್ಕಿ ಕೊಂದ ಉದ್ರಿಕ್ತ ಗುಂಪು!
ಈಗಿನ ಒಪ್ಪಂದ ಏನು?
ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ಒಪ್ಪಂದವು ಪರಸ್ಪರ ಮಿಲಿಟರಿ ಬೆಂಬಲ ಮತ್ತು ತಾಂತ್ರಿಕ ನೆರವು ನೀಡುವುದು. ಪರಸ್ಪರ ರಕ್ಷಣಾ ನಿಬಂಧನೆಗಳು ಈ ಒಪ್ಪಂದದಲ್ಲಿ ನಿರ್ಣಾಯಕವಾಗಿದೆ. ಉದಾಹರಣೆಗೆ, ಉತ್ತರ ಕೊರಿಯಾ ಮೇಲೆ ಬೇರೊಂದು ರಾಷ್ಟ್ರ ಸಶಸ್ತ್ರ ಆಕ್ರಮಣ ನಡೆಸಿದರೆ ರಷ್ಯಾ ತಕ್ಷಣ ಕೊರಿಯಾಗೆ ಮಿಲಿಟರಿ ರಕ್ಷಣೆ ನೀಡುತ್ತದೆ. ಅದೇ ರೀತಿ, ರಷ್ಯಾ ಮೇಲೆ ಬೇರೊಂದು ರಾಷ್ಟ್ರ ಆಕ್ರಮಣ ಮಾಡಿದರೆ ಉತ್ತರ ಕೊರಿಯಾ ತಕ್ಷಣದ ಮಿಲಿಟರಿ ನೆರವು ನೀಡಬೇಕು. ಇದು ಉಭಯ ರಾಷ್ಟ್ರಗಳ ನಡುವೆ ಆಗಿರುವ ಪ್ರಮುಖ ಒಪ್ಪಂದ. ಇಬ್ಬರ ಈ ಒಪ್ಪಂದವು ಎರಡು ರಾಷ್ಟ್ರಗಳ ನಡುವಿನ 1961 ರ ಒಪ್ಪಂದವನ್ನು ಪ್ರತಿಧ್ವನಿಸುತ್ತದೆ ಎಂದು ಕೌನ್ಸಿಲ್ ಫಾರ್ ಫಾರಿನ್ ರಿಲೇಶನ್ಸ್‌ನಲ್ಲಿ ಕೊರಿಯಾ ಅಧ್ಯಯನಕಾರ ಫೆಲೋ ಸ್ಯೂ ಮಿ ಟೆರ್ರಿ ತಿಳಿಸಿದ್ದಾರೆ.
ಜಪಾನ್-ದಕ್ಷಿಣ ಕೊರಿಯಾಗೆ ನಡುಕ
ರಷ್ಯಾ ಮತ್ತು ಉತ್ತರ ಕೊರಿಯಾ ಮಿಲಿಟರಿ ಒಪ್ಪಂದದಿಂದ ದಕ್ಷಿಣ ಕೊರಿಯಾ ಮತ್ತು ಜಪಾನ್‌ಗೆ ನಡುಕ ಹುಟ್ಟಿದೆ. ಈ ಒಪ್ಪಂದವು ತಮಗೆ ನೇರ ಭದ್ರತಾ ಬೆದರಿಕೆ ಎಂದು ಎರಡೂ ರಾಷ್ಟ್ರಗಳು ಭಾವಿಸಿದಂತಿದೆ. ಉತ್ತರ ಕೊರಿಯಾದ ಪರಮಾಣು ಕಾರ್ಯಕ್ರಮ ಮತ್ತು ಮಿಲಿಟರಿ ಸಾಮರ್ಥ್ಯದ ಬಗ್ಗೆ ಎರಡೂ ದೇಶಗಳು ಬಹಳ ಹಿಂದಿನಿಂದಲೂ ಆತಂಕ ವ್ಯಕ್ತಪಡಿಸಿವೆ. ಹೀಗಾಗಿ ಜಪಾನ್ ಮತ್ತು ದಕ್ಷಿಣ ಕೊರಿಯಾ ರಾಷ್ಟ್ರಗಳು ತಮ್ಮ ರಕ್ಷಣಾ ವ್ಯವಸ್ಥೆ ಬಲಪಡಿಸುವ ಮತ್ತು ಭದ್ರತಾ ನೀತಿಗಳನ್ನು ಪರಾಮರ್ಶಿಸುವ ಕಡೆಗೆ ಮತ್ತೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಜಪಾನ್ ಈಗಾಗಲೇ ತನ್ನ ದೀರ್ಘಕಾಲದ ಶಾಂತಿವಾದಿ ವಿದೇಶಾಂಗ ನೀತಿಯಿಂದ ದೂರ ಸರಿದಿದೆ. ತನ್ನ ಮಿಲಿಟರಿ ಶಕ್ತಿಯನ್ನು ನಿರ್ಮಿಸುವ ಪ್ರಕ್ರಿಯೆಯಲ್ಲಿದೆ. ಇತ್ತ ದಕ್ಷಿಣ ಕೊರಿಯಾ ತನ್ನ ರಾಷ್ಟ್ರೀಯ ಭದ್ರತಾ ಮಂಡಳಿಯ ತುರ್ತು ಸಭೆಯನ್ನು ಕರೆದಿದೆ. ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವ ವಿಚಾರವನ್ನು ಈಗ ಪರಿಗಣಿಸುವುದಾಗಿ ಹೇಳಿದೆ. ಇದು ಇಲ್ಲಿಯವರೆಗೆ ಅದನ್ನು ವಿರೋಧಿಸಿತ್ತು. ಇದನ್ನೂ ಓದಿ: ಸಮುದ್ರದ ಮಧ್ಯೆ ಚೀನಾ-ಫಿಲಿಪ್ಪೈನ್ಸ್ ಸೇನೆಗಳ ನಡುವೆ ಜಟಾಪಟಿ
ರಷ್ಯಾ-ಉತ್ತರ ಕೊರಿಯಾ ಒಪ್ಪಂದವು ಇತರೆಡೆಗಳಲ್ಲಿ, ವಿಶೇಷವಾಗಿ ಇರಾನ್‌ನೊಂದಿಗೆ ಇದೇ ರೀತಿಯ ಪಾಲುದಾರಿಕೆಯನ್ನು ಪ್ರೋತ್ಸಾಹಿಸಬಹುದು. ಪಾಶ್ಚಿಮಾತ್ಯರಿಗೆ ಇವುಗಳು ದೊಡ್ಡ ಬೆದರಿಕೆ ನೀಡುವುದು ಗ್ಯಾರಂಟಿ. ಉತ್ತರ ಕೊರಿಯಾದ ಸಾಂಪ್ರದಾಯಿಕ ಮಿತ್ರ ಚೀನಾ. ಒಪ್ಪಂದವು ಏಷ್ಯಾದಲ್ಲಿ ಪಾಶ್ಚಿಮಾತ್ಯ ವಿರೋಧಿ ಭದ್ರಕೋಟೆಯನ್ನು ಬಲಪಡಿಸುತ್ತದೆ. ಆದರೆ, ಉತ್ತರ ಕೊರಿಯಾದೊಂದಿಗೆ ರಷ್ಯಾದ ಮಿಲಿಟರಿ ಸಹಯೋಗದ ಬಗ್ಗೆ ಚೀನಾ ಜಾಗರೂಕತೆಯಿಂದ ಇರಬೇಕಾಗುತ್ತದೆ. ಈ ಒಪ್ಪಂದವು ಉತ್ತರ ಕೊರಿಯಾದ ಪ್ಯೊಂಗ್ಯಾಂಗ್ ಮೇಲೆ ಚೀನಾದ ಭೌಗೋಳಿಕ ರಾಜಕೀಯ ಪ್ರಭಾವವನ್ನು ದುರ್ಬಲಗೊಳಿಸಬಹುದು.
ನ್ಯಾಟೊ ಎದೆಯಲ್ಲಿ ಢವಢವ
ದಕ್ಷಿಣ ಕೊರಿಯಾ ಮತ್ತು ಜಪಾನ್ ಈಗ ಯುನೈಟೆಡ್ ಸ್ಟೇಟ್ಸ್ ಜೊತೆಗಿನ ತಮ್ಮ ಮೈತ್ರಿಯನ್ನು ಮತ್ತಷ್ಟು ಗಟ್ಟಿಗೊಳಿಸಲಿವೆ. ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಈಗಾಗಲೇ ತನ್ನ ಮಿತ್ರರಾಷ್ಟ್ರಗಳಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದೆ. NATO ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಕೂಡ, ರಷ್ಯಾ-ಉತ್ತರ ಕೊರಿಯಾ ಒಪ್ಪಂದದ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ. ‘ಈ ಒಪ್ಪಂದ ಜಾಗತಿಕ ಭದ್ರತೆಗೆ ಅಪಾಯಕಾರಿ ಮತ್ತು ಹೆಚ್ಚಿದ ಪರಮಾಣು ಬಳಕೆಯ ಸಾಧ್ಯತೆಯನ್ನು ಎತ್ತಿ ತೋರುತ್ತಿದೆ. ನಾವು ಹಿಂದೆಂದೂ ನೋಡಿರದ ರೀತಿಯಲ್ಲಿ ಸರ್ವಾಧಿಕಾರಿ ಶಕ್ತಿಗಳು ಹೆಚ್ಚೆಚ್ಚು ಪಡೆಗಳನ್ನು ಸೇರುತ್ತಿವೆ. ಪರಸ್ಪರ ಬೆಂಬಲಿಸುತ್ತಿವೆ’ ಎಂದಿದ್ದಾರೆ. ಇದನ್ನೂ ಓದಿ: ಹಜ್ ಯಾತ್ರೆಗೆ ತೆರಳಿದ್ದ ಬೆಂಗ್ಳೂರಿನ ಇಬ್ಬರು ಸಾವು – ಕರ್ನಾಟಕದ 10,000ಕ್ಕೂ ಹೆಚ್ಚು ಮಂದಿ ಸೇಫ್!
ರಷ್ಯಾ-ಉಕ್ರೇನ್ ಯುದ್ಧದ ಮೆಲುಕು
ಉತ್ತರ ಕೊರಿಯಾ ಜೊತೆಗಿನ ರಷ್ಯಾ ಒಪ್ಪಂದಕ್ಕೆ ಉಕ್ರೇನ್ ಮೇಲಿನ ಯುದ್ಧವೂ ಒಂದು ಕಾರಣ. ರಷ್ಯಾ ಮತ್ತು ಉಕ್ರೇನ್ ನಡುವಿನ ಪ್ರಸ್ತುತ ಬಿಕ್ಕಟ್ಟಿಗೆ ಮುಖ್ಯ ಕಾರಣ ನ್ಯಾಟೊ (ಉತ್ತರ ಅಟ್ಲಾಂಟಿಕ್ ಒಪ್ಪಂದ ಸಂಸ್ಥೆ). ಇದು ಯುಎಸ್, ಯುಕೆ, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ 30 ದೇಶಗಳ ಗುಂಪುಗಳನ್ನು ಒಳಗೊಂಡ ಸಂಸ್ಥೆಯಾಗಿದೆ. ಉಕ್ರೇನ್ ನ್ಯಾಟೊ ಸಂಸ್ಥೆಗೆ ಸೇರಲು ಬಯಸಿತ್ತು. NATO ಕೂಡ ಉಕ್ರೇನ್ ಅನ್ನು ತನ್ನ ಸದಸ್ಯರನ್ನಾಗಿ ಮಾಡಿಕೊಳ್ಳುವ ಬಗ್ಗೆ ಮುಕ್ತವಾಗಿತ್ತು. ಆದರೆ ಉಕ್ರೇನ್ ನಿರ್ಧಾರಕ್ಕೆ ರಷ್ಯಾ ವಿರೋಧ ವ್ಯಕ್ತಪಡಿಸಿತ್ತು. ನ್ಯಾಟೊ ಸೇರಿದಂತೆ ಯಾವುದೇ ಅಂತರರಾಷ್ಟ್ರೀಯ ಒಕ್ಕೂಟಕ್ಕೆ ಉಕ್ರೇನ್ ಸೇರಬಾರದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಸಿದ್ದರು. ಆದರೆ ಅವರ ಮಾತನ್ನು ಉಕ್ರೇನ್ ಕೇಳದೇ ನ್ಯಾಟೊ ಸೇರಲು ಮುಂದಾಯಿತು. ಇದರ ಪರಿಣಾಮದಿಂದ ರಷ್ಯಾ ಯುದ್ಧವನ್ನು ಎದುರಿಸಬೇಕಾಯಿತು.
ಉಕ್ರೇನ್ ನ್ಯಾಟೊ ಸೇರಲು ಪುಟಿನ್ ವಿರೋಧ ಯಾಕೆ?
ಉಕ್ರೇನ್ NATOದಲ್ಲಿ ತನ್ನ ಸದಸ್ಯ ಸ್ಥಾನ ಪಡೆಯಲು ರಷ್ಯಾ ಬಯಸುವುದಿಲ್ಲ. ಏಕೆಂದರೆ NATO ಸದಸ್ಯ ರಾಷ್ಟ್ರವು ಯಾವುದೇ ಬಾಹ್ಯ ದಾಳಿಯ ಸಂದರ್ಭದಲ್ಲಿ ಎಲ್ಲಾ ಸದಸ್ಯರ ಸಾಮೂಹಿಕ ಬೆಂಬಲಕ್ಕೆ ಅರ್ಹವಾಗಿರುತ್ತದೆ. ಹೀಗಾಗಿ ಉಕ್ರೇನ್ ಅನ್ನು NATOದಲ್ಲಿ ಸದಸ್ಯನಾಗಲು ರಷ್ಯಾ ಒಪ್ಪುತ್ತಿಲ್ಲ. ಉಕ್ರೇನ್ ನ್ಯಾಟೊ ಸೇರಿದರೆ ಅದರ ಒಕ್ಕೂಟ ರಾಷ್ಟ್ರಗಳ ಸೇನೆಯು, ಉಕ್ರೇನ್‌ನ ಗಡಿಯಲ್ಲಿ ಪಡೆಗಳನ್ನು ನಿಯೋಜಿಸುತ್ತವೆ. ಉಕ್ರೇನ್ ಮತ್ತು ರಷ್ಯಾ ಗಡಿಗೆ ನ್ಯಾಟೊ ಒಕ್ಕೂಟ ರಾಷ್ಟ್ರಗಳ ಸೇನೆ ನಿಯೋಜನೆ ಸಾಧ್ಯವಾಗಬಾರದು ಎಂಬುದು ಪುಟಿನ್ ನಿಲುವು. ಹೀಗಾಗಿ ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೆಕ್ಕಾದಲ್ಲಿ ಮೃತಪಟ್ಟ 645 ಹಜ್ ಯಾತ್ರಿಕರ ಪೈಕಿ 68 ಮಂದಿ ಭಾರತೀಯರು!
ನವದೆಹಲಿ: ರಷ್ಯಾ – ಉಕ್ರೇನ್ ಯುದ್ಧವನ್ನು ನಿಲ್ಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದಾರೆ.
ಎಐಸಿಸಿ (AICC) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃಸಂಸ್ಥೆ ಆರ್‌ಎಸ್‌ಎಸ್ (RSS) ವಶಪಡಿಸಿಕೊಂಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.
ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿಲ್ಲ “ನಿರ್ದಿಷ್ಟ ಸಂಸ್ಥೆ” ಯೊಂದಿಗೆ ಅವರ ಸಂಪರ್ಕದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಈ ಸಂಘಟನೆ ಮತ್ತು ಬಿಜೆಪಿ ಸೇರಿ ನಮ್ಮ ಶಿಕ್ಷಣ ವ್ಯವಸ್ಥೆಗೆ ನುಗ್ಗಿ ನಾಶ ಮಾಡುತ್ತಿದೆ. ನೋಟು ಅಮಾನ್ಯೀಕರಣದ ಮೂಲಕ ಆರ್ಥಿಕತೆ ನಾಶ ನರೇಂದ್ರ ಮೋದಿ ಈಗ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದರು. ಇದನ್ನೂ ಓದಿ: ನೀಟ್ ಪರೀಕ್ಷೆ ಹಿಂದಿನ ದಿನ ನನಗೆ ಪ್ರಶ್ನೆ ಪತ್ರಿಕೆ ಸಿಕ್ಕಿತ್ತು: ಪೊಲೀಸರ ಬಳಿ ತಪ್ಪೊಪ್ಪಿಕೊಂಡ ಬಂಧಿತ ವಿದ್ಯಾರ್ಥಿ
ಮೋದಿ (Narendra Modi) ಮಾನಸಿಕವಾಗಿ ಕುಸಿದು ಹೋಗಿದ್ದಾರೆ. ದೇಶದಲ್ಲಿ ಏನಾದರೂ ಆಗಲಿ ಅವರಿಗೆ ಸರ್ಕಾರ ಉಳಿಯಬೇಕು ಎನ್ನುವಂತಾಗಿದೆ. ಸದ್ಯ ತಮ್ಮ ಪರವಾದ ಸ್ಪೀಕರ್ ಆಯ್ಕೆ ಮಾಡುವುದರಲ್ಲಿ ಮೋದಿ ತಲ್ಲಿನರಾಗಿದ್ದಾರೆ. ದೇಶದ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಮೋದಿಯವರ ಬಗ್ಗೆ ಇದ್ದ ಭಯ ಕಡಿಮೆಯಾಗಿದೆ. ವಾರಣಾಸಿಯಲ್ಲಿ ಮೋದಿಯವರತ್ತ ಚಪ್ಪಲಿ ತೂರಲಾಗಿದೆ. ಚುನಾವಣೆಗೂ ಮೊದಲು ಮೋದಿ ಕಡೆ ಚಪ್ಪಲಿ ತೂರುವ ಕೆಲಸ ಮಾಡುತ್ತಿರಲಿಲ್ಲ. ಬಿಜೆಪಿ ಒಳಗೂ ಮೋದಿ ಬಗ್ಗೆ ಈಗ ಯಾವುದೇ ಭಯ ಇಲ್ಲ ಗೌರವವೂ ಇಲ್ಲ ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಲೀಕ್ ಆಗುವ ಬಗ್ಗೆ ಸಂಸತ್ ನಲ್ಲಿ ಪ್ರಸ್ತಾಪಿಸಲಾಗುವುದು. ಸೂಕ್ತ ಕಾನೂನು ಜಾರಿಯಾಗಬೇಕಿದೆ. ಅದಕ್ಕೂ ಮುನ್ನ ಬಿಜೆಪಿ ಮಾತೃಸಂಸ್ಥೆ ಕಪಿ ಮುಷ್ಠಿಯಿಂದ ಶಿಕ್ಷಣ ವ್ಯವಸ್ಥೆಯನ್ನು ಹೊರ ತರಬೇಕಿದೆ. ಭಾರತ್ ಜೋಡೋ ಯಾತ್ರೆ ವೇಳೆ ಸಾಕಷ್ಟು ಯುವಕರು ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ದೂರಿದ್ದಾರೆ ಎಂದು ರಾಗಾ ಹೇಳಿದರು.
ನ್ಯೂಯಾರ್ಕ್: ರಷ್ಯಾ ಮತ್ತು ಉಕ್ರೇನ್ (Russia- Ukraine) ನಡುವೆ ಯುದ್ಧ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ರಷ್ಯಾದಿಂದ ಉಕ್ರೇನ್ ಮೇಲೆ ಕ್ಷಿಪ್ರ ದಾಳಿ ನಡೆಸಲಾಗುತ್ತಿದೆ. ಉಕ್ರೇನ್ ಮದ್ದುಗುಂಡುಗಳ ತೀವ್ರ ಕೊರತೆಯನ್ನು ಹೊಂದಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ಉಕ್ರೇನ್‌ಗೆ ಸಹಾಯ ಮಾಡಲು ಅಮೆರಿಕ ಮತ್ತೆ ಮುಂದೆ ಬಂದಿದೆ.
ಅಧಿಕಾರಿಗಳ ಪ್ರಕಾರ, ಈ ಯುದ್ಧದಲ್ಲಿ ಉಕ್ರೇನ್‌ಗೆ ಬೆಂಬಲವನ್ನು ನೀಡಲು ಅಮೆರಿಕ ತಯಾರಿ ನಡೆಸುತ್ತಿದೆ. ಅಮೆರಿಕ ಈಗ ಉಕ್ರೇನ್‌ಗೆ 275 ಮಿಲಿಯನ್ ಡಾಲರ್‌ಗಳ ಮಿಲಿಟರಿ ನೆರವು ಪ್ಯಾಕೇಜ್ ನೀಡಲು ಸಿದ್ಧತೆ ನಡೆಸಿದೆ. ಇದರಲ್ಲಿ 155 ಎಂಎಂ ಫಿರಂಗಿ ಶೆಲ್‌ಗಳು, ನಿಖರವಾದ ವಾಯು ಯುದ್ಧಸಾಮಗ್ರಿಗಳು ಮತ್ತು ವಾಹನಗಳು ಸೇರಿವೆ ಎನ್ನಲಾಗಿದೆ.
ಇತ್ತ ರಷ್ಯಾದ ಭೂ ದಾಳಿಯ ನಂತರ ಈಶಾನ್ಯ ಉಕ್ರೇನ್‌ನಲ್ಲಿ ಸಾವಿರಾರು ಮಂದಿ ನಾಗರಿಕರು ಪ್ರದೇಶವನ್ನು ತೊರೆದಿದ್ದಾರೆ. ರಷ್ಯಾ ಫಿರಂಗಿ, ಪಟ್ಟಣಗಳು ಮತ್ತು ಹಳ್ಳಿಗಳನ್ನು ಗುರಿಯಾಗಿಸಿದೆ. ರಷ್ಯಾದ ಸೇನೆಯು ಗಡಿಯ ಬಹುಭಾಗದ ಮೇಲೆ ಹಿಡಿತ ಸಾಧಿಸಿದೆ. ಇದನ್ನೂ ಓದಿ: ಕತ್ತು ಹಿಸುಕಿ, ಚರ್ಮ ಸುಲಿದು ಬಾಂಗ್ಲಾ ಸಂಸದನ ದೇಹವನ್ನು ಕತ್ತರಿಸಿ ಹಾಕಿದ್ರು!