ಹುಬ್ಬಳ್ಳಿ: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿನಿ ಚೈತ್ರಾ ಸಂಶಿ ಮನೆಗೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಭೇಟಿ ನೀಡಿ ಅವರ ಪಾಲಕರಿಗೆ ಧೈರ್ಯ ತುಂಬಿದ್ದಾರೆ.
ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಯುವತಿ ಚೈತ್ರಾ ಕಳೆದ ಮೂರು ವರ್ಷಗಳಿಂದ ಉಕ್ರೇನ್ ನಲ್ಲಿ ಎಂಬಿಬಿಎಸ್ ಅಭ್ಯಾಸ ಮಾಡುತ್ತಿದ್ದಾರೆ. ಯುದ್ಧ ಭೀತಿಯಿಂದ ದೇಶಕ್ಕೆ ವಾಪಸ್ ಆಗಲು ಟಿಕೆಟ್ ಬುಕ್ ಸಹ ಮಾಡಿದ್ದರು. ಆದರೆ ರಷ್ಯಾದ ಏಕಾಏಕಿ ದಾಳಿಯಿಂದ ವಿಮಾನ ಹಾರಾಟ ನಿಂತಿರುವ ಹಿನ್ನೆಲೆ ಸದ್ಯ ಉಕ್ರೇನ್ ನಲ್ಲಿಯೆ ಚೈತ್ರ ಸಿಲುಕಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!
ಇದರಿಂದಾಗಿ ಆಕೆ ಕುಟುಂಬ ಆತಂಕಗೊಂಡಿದೆ. ಚೈತ್ರಾಳ ಬರುವಿಕೆಗಾಗಿ ಎದುರು ನೋಡುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೈತ್ರಾ ಮನೆ ಭೇಟಿ ನೀಡಿ, ಅವರನ್ನು ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಕರೆತರುವುದಾಗಿ ಭರವಸೆ ನೀಡಿ ಪಾಲಕರಿಗೆ ಧೈರ್ಯ ತುಂಬಿದ್ದಾರೆ.
ಮಾಸ್ಕೋ: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾ ಸಿಕ್ಕ ಸಿಕ್ಕಲ್ಲಿ ರಕ್ತಪಾತ ಆರಂಭಿಸಿದೆ. ಉಕ್ರೇನ್ ಸೈನಿಕರ ಯೂನಿಫಾರ್ಮ್ ಧರಿಸಿ ರಷ್ಯಾದ ಮಿಲಿಟರಿ ಪಡೆ ಕೀವ್‍ನತ್ತ ಎಂಟ್ರಿ ಕೊಟ್ಟಿರುವ ಬಗ್ಗೆ ವರದಿಯಾಗಿದೆ.
ರಷ್ಯಾದ ಮಿಲಿಟರಿ ಪಡೆಯ ಸೈನಿಕರು ಉಕ್ರೇನ್ ಸೈನ್ಯವನ್ನು ಹೊಳುವ ಯೂನಿಫಾರ್ಮ್ ಧರಿಸಿ ರಷ್ಯಾದ ಕೀವ್‍ಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ತಕ್ಷಣ ಕಾರ್ಯಪ್ರವೃತರಾದ ಉಕ್ರೇನ್ ಮಿಲಿಟರಿ ಪಡೆ ಉಕ್ರೇನ್ ಸೈನಿಕರನ್ನು ವಶಕ್ಕೆ ಪಡೆದು ಮಿಲಿಟರಿ ವಾಹನವನ್ನು ವಶಕ್ಕೆ ಪಡೆದಿದೆ ಎಂದು ಉಕ್ರೇನ್‍ನ ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ
ಕ್ಷಣ ಕ್ಷಣಕ್ಕೂ ಉಕ್ರೇನ್ ಮೇಲೆ ರಷ್ಯಾ ದಾಳಿ ತೀವ್ರಗೊಳಿಸುತ್ತಿದ್ದು, ಸಿಕ್ಕ ಸಿಕ್ಕಲ್ಲಿ ಉಕ್ರೇನ್ ಯೋಧರ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರು ಬರಲಾರಂಭಿಸಿದ್ದಾರೆ. ಉಕ್ರೇನ್‍ನ ಕೀವ್‍ನತ್ತ ರಷ್ಯಾದ ಯುದ್ಧ ಬಂಕರ್‌ಗಳು ಸೇನಾ ವಾಹನದಲ್ಲಿ ಪ್ರವೇಶಿಸುತ್ತಿದ್ದು, ಉಕ್ರೇನ್ ಸೈನಿಕರು ಮತ್ತು ರಷ್ಯಾ ಸೈನಿಕರ ಮಧ್ಯೆ ಗುಂಡಿನ ದಾಳಿ ಕೂಡ ನಡೆಯುತ್ತಿದೆ. ಈಗಾಗಲೇ ಉಕ್ರೇನ್‍ನ ಕಾಖೋವ್ಕಾದ ಜಲವಿದ್ಯುತ್ ಸ್ಥಾವರವನ್ನು ರಷ್ಯಾ ಸೇನೆ ವಶಕ್ಕೆ ಪಡೆದುಕೊಂಡು ರಷ್ಯಾ ಧ್ವಜವನ್ನು ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿದೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್ ಮಹಿಳೆ ಛೀಮಾರಿ – ವೀಡಿಯೋ ವೈರಲ್
ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಈಗಾಗಲೇ ಯುರೋಪ್ ಸೇರಿದಂತೆ ಹಲವು ದೇಶಗಳಿಂದ ವಿರೋಧ ವ್ಯಕ್ತವಾಗಿದೆ. ಈ ನಡುವೆ ಉಕ್ರೇನ್ ಮೇಲೆ ಸೈನ್ಯ ದಾಳಿ ನಡೆಸಿರುವ ರಷ್ಯಾ ಕೈವಾದಲ್ಲಿ ವಾಯು ನೆಲೆ ವಶಪಡಿಸಿಕೊಂಡಿದ್ದು, ಕೈವಾ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಸಾಧ್ಯತೆ ಇದೆ. ಈ ನಡುವೆ ಉಕ್ರೇನ್‍ಗೆ ಹಲವು ದೇಶಗಳಿಂದ ನೆರವು ಘೋಷಣೆ ಸಾಧ್ಯತೆ ಇದ್ದು, ಉಕ್ರೇನ್‍ಗೆ ಇತರ ದೇಶಗಳಿಂದ ಸೇನಾ ಬೆಂಬಲ ಘೋಷಣೆಯಾದರೇ ಯುದ್ಧ ಮತ್ತೊಂದು ಸ್ವರೂಪ ಪಡೆಯಲಿದೆ. ಇದನ್ನೂ ಓದಿ: ಉಕ್ರೇನ್ ಪವರ್ ಪ್ಲಾಂಟ್‍ನಲ್ಲಿ ರಷ್ಯಾದ ಧ್ವಜ ಹಾರಿಸಿದ ಮಿಲಿಟರಿ ಪಡೆ
ಚೆನ್ನೈ: ಉಕ್ರೇನ್‍ನಲ್ಲಿ ಸಿಲುಕಿರುವ 5 ಸಾವಿರ ವಿದ್ಯಾರ್ಥಿಗಳ ಪ್ರಯಾಣದ ವೆಚ್ಚ ನಾವೇ ಕೋಡುತ್ತೇವೆ. ವಿದ್ಯಾರ್ಥಿಗಳನ್ನು ಅಲ್ಲಿಂದ ಕರೆದು ತನ್ನಿ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಇದರಿಂದಾಗಿ ಅನೇಕ ಭಾರತೀಯರು ಕೂಡ ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ. ಇದರಿಂದಾಗಿ ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತಮಿಳುನಾಡಿನ ಸುಮಾರು 5,000 ವಿದ್ಯಾರ್ಥಿಗಳ ವಾಪಸ್ ಕರೆತರುವ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ಇದನ್ನೂ ಓದಿ: ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?
ಒಂದೇ ಭಾರತ್ ಮಿಷನ್‌ನಂತೆ ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿ. ದೇಶಕ್ಕೆ ಕರೆದು ತನ್ನಿ ಎಂದು ವಿದೇಶಾಂಗ ಸಚಿವ ಎಸ್.ಜಯಶಂಕರ್ ಅವರಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ತಮಿಳುನಾಡಿನ ಸುಮಾರು 5,000 ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವೃತ್ತಿಪರ ಕೋರ್ಸ್‍ಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ 916 ವಿದ್ಯಾರ್ಥಿಗಳು ಇಂದು ಬೆಳಗ್ಗೆಯ ವೇಳೆಗೆ ತಮಿಳುನಾಡು ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದಾರೆ. ಉಕ್ರೇನ್‍ನಲ್ಲಿ ಸಿಕ್ಕಿಬಿದ್ದವರ ಕುಟುಂಬದ ಸದಸ್ಯರು ಮತ್ತು ಪೋಷಕರಿಂದ ರಾಜ್ಯ ಸರ್ಕಾರಕ್ಕೆ ಸಾಕಷ್ಟು ಕರೆಗಳು ಬರುತ್ತಿದೆ. ತಮಿಳುನಾಡು ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಿಸಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.
ರಷ್ಯಾ ಗುರುವಾರ ಸಂಜೆ ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಕ್ರೇನ್‍ನ ಹಲವು ನಗರಗಳಲ್ಲಿ ಸ್ಫೋಟದ ಸದ್ದು ಪ್ರತಿಧ್ವನಿಸಿದೆ. ರಷ್ಯಾದ ಸೇನೆಯು ಇದುವರೆಗೆ ಉಕ್ರೇನ್‍ನ 137 ಜನರನ್ನು ಹತ್ಯೆ ಮಾಡಿದೆ. ನೂರಾರು ಜನರು ಗಾಯಗೊಂಡಿದ್ದಾರೆ. ರಷ್ಯಾ ನಿರಂತರವಾಗಿ ಉಕ್ರೇನ್ ಮೇಲೆ ಬಾಂಬ್ ದಾಳಿ ನಡೆಸುತ್ತಿದೆ. ಶುಕ್ರವಾರ ಬೆಳಗ್ಗೆಯಿಂದ ಕೀವ್‍ನಲ್ಲಿ 6 ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟಗಳನ್ನು ಕ್ರೂಸ್ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿಗಳಿಂದ ನಡೆಸಲಾಗಿದೆ. ಉಕ್ರೇನ್‍ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳ ರಕ್ಷಣೆಗೆ ಭಾರತೀಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ.
ಕೀವ್: ರಷ್ಯಾ ಉಕ್ರೇನ್ ಮೇಲೆ ಎರಗಿ ಬಾಂಬುಗಳ ಸುರುಮಳೆಗೈದಿದೆ. ಮಿಲಿಟರಿ ನೆಲೆ ನಾಶವಾಗಿ ನೂರಾರು ಸೈನಿಕರು ಈಗಾಗಲೇ ಹತರಾಗಿದ್ದಾರೆ. ಅದೆಷ್ಟೋ ಸೈನಿಕರು ಇನ್ನೂ ತಮ್ಮ ಉಸಿರನ್ನು ಬಿಗಿ ಹಿಡಿದು ದೇಶದ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ.
13 ಸೆಕೆಂಡುಗಳ ವೀಡಿಯೋದಲ್ಲಿ ಉಕ್ರೇನ್ ಸೈನಿಕ ತನ್ನ ತಂದೆ-ತಾಯಿಗೆ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಭಾವುಕನಾಗಿ ಹೇಳುವುದನ್ನು ನೋಡಬಹುದಾಗಿದೆ. ಯೋಧನ ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕೂಡ ಯೋಧನ ಸ್ಥಿತಿಗೆ ಮರುಗಿದ್ದಾರೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಯೋಧನಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಒಬ್ಬರು ಪ್ರತಿಕ್ರಿಯಿಸಿದರೆ, ವಯಸ್ಸು ಯಾವುದೇ ಇರಲಿ. ಯಾರೊಬ್ಬರಿಗೂ ಇಂತಹ ಸ್ಥಿತಿ ಬರಬಾರದು ಎಂದು ಇನ್ನೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!
ವೀಡಿಯೋ ಮಾಡಿರುವ ಯೋಧ ಯಾರು ಏನು ಎಂಬುದರ ಬಗ್ಗೆ ಮಾಹಿತಿಯಿಲ್ಲ. ಆದರೆ ವಿಶ್ವದಾದ್ಯಂತ ನೆಟ್ಟಿಗರು ಅವರ ಸ್ಥಿತಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಕೀವ್: ದಾಳಿ ನಡೆಸುತ್ತಾ ಉಕ್ರೇನ್ ಗಡಿ ದಾಟಿ ಒಳಪ್ರವೇಶಿಸಿದ ರಷ್ಯಾ ಸೈನಿಕನಿಗೆ ಉಕ್ರೇನ್ ಮಹಿಳೆ ಛೀಮಾರಿ ಹಾಕಿದ್ದಾರೆ. ರಷ್ಯಾ ಸೈನಿಕನೆದುರು ಧೈರ್ಯವಾಗಿ ನಿಂತ ಉಕ್ರೇನ್ ಮಹಿಳೆ, ನಿಮ್ಮ ದೇಶಕ್ಕೆ ವಾಪಸ್ ಹೋಗಿ ಎಂದು ಕೂಗಾಡಿದ್ದಾರೆ.
ಉಕ್ರೇನ್ ಗಡಿ ಪ್ರವೇಶಿಸಿದ ಶಸಸ್ತ್ರಧಾರಿ ಸೈನಿಕನ ವಿರುದ್ಧ ಮಹಿಳೆ ಕೂಗಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿರುವ ಮಹಿಳೆಯನ್ನು ʼನಿರ್ಭಯಾʼ ಎಂದು ಕರೆಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!
ಗಡಿ ಪ್ರವೇಶಿಸಿದ ಸೈನಿಕನಿಗೆ, ನೀನು ಯಾರು ಎಂದು ಮಹಿಳೆ ಪ್ರಶ್ನಿಸಿದ್ದಾರೆ. ಅದಕ್ಕೆ ಸೈನಿಕ, ನಾವು ಇಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದೇವೆ. ದಯವಿಟ್ಟು ನೀವು ಇಲ್ಲಿಂದ ಹೊರಡಿ ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡು ಮಾತನಾಡಿರುವ ಮಹಿಳೆ, ನೀವಿಲ್ಲಿ ಏನು ಮಾಡುತ್ತಿದ್ದೀರಾ? ನೀವ್ಯಾರು ನಮಗೆ ಬೇಡ ಎಂದು ಗರಂ ಆಗಿದ್ದಾರೆ.
ಮಿಷನ್ ಗನ್ ಹಿಡಿದಿದ್ದ ಸೈನಿಕ ಮಹಿಳೆಯನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾನೆ. ಅದಕ್ಕೆ ಸುಮ್ಮನಾಗದ ಮಹಿಳೆ, ನೀನೊಬ್ಬ ಆಕ್ರಮಣಕಾರಿ, ನೀನು ಸರ್ವಾಧಿಕಾರಿ. ಶಸಸ್ತ್ರಗಳನ್ನು ಹಿಡಿದುಕೊಂಡು ನಮ್ಮ ದೇಶದಲ್ಲಿ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ಈ ಸೂರ್ಯಕಾಂತಿ ಬೀಜಗಳನ್ನು ತೆಗೆದುಕೊಳ್ಳಿ. ಅವನ್ನು ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳಿ. ನೀವೆಲ್ಲ ಇಲ್ಲಿ ಮಲಗಿದಾಗ ಕನಿಷ್ಠ ಪಕ್ಷ ಸೂರ್ಯಕಾಂತಿಯಾದರೂ ಬೆಳೆಯುತ್ತದೆ ಎಂದು ಸೈನಿಕನ ವಿರುದ್ಧ ಮಹಿಳೆ ಮಾರ್ಮಿಕವಾಗಿ ನುಡಿದಿದ್ದಾರೆ. ಸೂರ್ಯಕಾಂತಿ ಹೂ ಉಕ್ರೇನ್ ದೇಶದ ರಾಷ್ಟ್ರೀಯ ಹೂ ಆಗಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ ಬೆಳಗ್ಗೆ ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸಿದರು. ದಾಳಿಯಿಂದಾಗಿ ಉಕ್ರೇನ್‌ನಲ್ಲಿ ಈವರೆಗೆ 137 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ. ರಷ್ಯಾ ದಾಳಿಗೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ರಷ್ಯಾ ತನ್ನ ಕಾರ್ಯಾಚರಣೆ ಮುಂದುವರಿಸಿದೆ.
ಬೆಂಗಳೂರು: ಉಕ್ರೇನ್‍ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ. ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್‍ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ ಎಂದು ಟ್ವೀಟ್ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಒತ್ತಾಯ ಮಾಡಿದ್ದಾರೆ.
2
ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ.
ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ.
ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್‍ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ.
ಉಕ್ರೇನ್ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ.ಕೇಂದ್ರ ಸರ್ಕಾರ ಭಾರತೀಯರ ಯೋಗಕ್ಷೇಮದ ಕಾಳಜಿ ವಹಿಸುವ ಬದಲು ನಿಮ್ಮ ರಕ್ಷಣೆ ನಿಮ್ಮ ಜವಾಬ್ದಾರಿ ಎಂಬ ಧೋರಣೆ ಅನುಸರಿಸುತ್ತಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ವಿದೇಶಾಂಗ ಇಲಾಖೆ ಏನು ಕ್ರಮ ತೆಗೆದುಕೊಂಡಿದೆ? ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದಾರೆ.
ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷದಿಂದ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇಲೆ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನಿನ್ನೆ ರಾತ್ರಿಯಿಂದ ನಾವು ಕೆಲಸ ಮಾಡುತ್ತಿದ್ದೇವೆ. 281 ಕನ್ನಡಿಗರ 27 ಜಿಲ್ಲೆಗಳ ವಿದ್ಯಾರ್ಥಿಗಳು ರಿಪೋರ್ಟ್ ಆಗಿದ್ದಾರೆ. ಅವರು ನಮಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ನಾವು ಕೇಂದ್ರ ಮತ್ತು ಉಕ್ರೇನ್ ರಾಯಭಾರಿ ಕಚೇರಿಗೂ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.
ವಾಷಿಂಗ್ಟನ್: ರಷ್ಯಾ ಉಕ್ರೇನ್ ವಿರುದ್ಧ ನಿನ್ನೆಯಿಂದ ದಾಳಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಷ್ಯಾ ಸರ್ಕಾರದ ವಿರುದ್ಧ ವಿಶ್ವದಾದ್ಯಂತ ಟೆಕ್ಕಿಗಳು `ಸೈಬರ್ ವಾರ್’ ಘೋಷಣೆ ಮಾಡಿದ್ದಾರೆ.
ಅನಾನಿಮಸ್ ಹ್ಯಾಕಿಂಗ್ ಗ್ರೂಪ್, ರಷ್ಯಾ ಸರ್ಕಾರದ ವಿರುದ್ಧ ಸೈಬರ್ ವಾರ್ ಮಾಡುವುದಾಗಿ ನಿನ್ನೆ ರಾತ್ರಿ ಘೋಷಿಸಿದೆ. ಬ್ರಿಟನ್‍ನಲ್ಲಿ ಪ್ರಸಾರವಾಗುವ ಕ್ರೆಮ್ಲಿನ್ ಬೆಂಬಲಿತ ಟಿವಿ ಚಾನೆಲ್ RT ವೆವ್ ಸೆಟ್ ಅನ್ನು ಹ್ಯಾಕ್ ಮಾಡಿದೆ. ಸಂಬಂಧಪಟ್ಟವರು ವೆವ್ ಸೆಟ್ ಪ್ರವೇಶಿಸಲು ಪ್ರಯತ್ನಿಸಿದಾಗ, ಇನ್‍ಆಕ್ಷೆಸಬಲ್ ಆಗಿದೆ. ಅಲ್ಲದೇ ವೆವ್ ಸೆಟ್ ಎರರ್ ಎಂದು ತೋರಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ಪುಟಿನ್ ಸರ್ಕಾರದ ವಿರುದ್ಧ ‘ಅನಾನಿಮಸ್’ ಸೈಬರ್ ವಾರ್ ಘೋಷಣೆ ಮಾಡಿದ್ದು, ರಷ್ಯಾದ ಪ್ರಚಾರ ಕೇಂದ್ರ RT ನ್ಯೂಸ್ ವೆವ್ ಸೆಟ್ ತೆಗೆದುಕೊಳ್ಳಲಾಗಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ. ‘ಅನಾನಿಮಸ್’ ಈ ಹಿಂದೆ ಕು ಕ್ಲುಕ್ಸ್ ಕ್ಲಾನ್ ಮತ್ತು ಇಸ್ಲಾಮಿಕ್ ಉಗ್ರಗಾಮಿಗಳ ಗುಂಪಿಗೆ ಸೇರಿದವರನ್ನು ಗುರಿಯಾಗಿಸಿಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಜನರು ಈ ಕುರಿತು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನೆಟ್ಟಿಗರೊಬ್ಬರು, ಥ್ಯಾಂಕ್ಸ್ `ಅನಾನಿಮಸ್’, ಅವರ ಹಣಕಾಸು ಬರಿದಾಗುತ್ತೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀವು ಅದ್ಭುತ, ಧನ್ಯವಾದಗಳು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಥ್ಯಾಂಕ್ಸ್, ಲವ್ ಯೂ, ಇದು ನಿಜವಾಗಿಯೂ ಖುಷಿಯಾದ ವಿಷಯ ಎಂದು ಹೇಳಿದ್ದಾರೆ.
ಪ್ರಸ್ತುತ ಈ ಹ್ಯಾಕರ್ಸ್ ‘ಅನಾನಿಮಸ್’ ಎಂದು ಹೆಸರಿಟ್ಟುಕೊಂಡಿದ್ದಾರೆ. ಅವರನ್ನು ಗೈ ಫಾಕ್ಸ್ ಮುಖವಾಡಗಳಿಂದ ಗುರುತಿಸಲಾಗುತ್ತದೆ. ಕಳೆದ ವರ್ಷ ಜುಲೈನಲ್ಲಿ, ಟೆಸ್ಲಾ ಸಂಸ್ಥಾಪಕ ಎಲೋನ್ ಮಸ್ಕ್ ಅವರಿಗೂ ಹ್ಯಾಕರ್‍ಗಳು ಎಚ್ಚರಿಕೆ ನೀಡಿದ್ದರು. ಕ್ರಿಪ್ಟೋಕರೆನ್ಸಿ ಮಾರುಕಟ್ಟೆಗಳ ಮೇಲೆ ಹೆಚ್ಚಿನ ಅಧಿಕಾರವನ್ನು ಹೊಂದಿದ್ದೇವೆ ಎಂಬ ಮಸ್ಕ್ ಹೇಳಿಕೆಯನ್ನು ಗುರಿಯಾಗಿಸಿಕೊಂಡು ಅನಾನಿಮಸ್ ಎಚ್ಚರಿಕೆ ನೀಡಿತ್ತು. ಇದನ್ನೂ ಓದಿ: ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?
ಸೈಬರ್ ಯುದ್ಧ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ರಷ್ಯಾವನ್ನು ವ್ಯವಸ್ಥಿತ ಹ್ಯಾಕಿಂಗ್ ಪ್ರಯತ್ನಗಳಿಗೆ ಒಳಪಡಿಸುವ ನಿರೀಕ್ಷೆಯನ್ನು ಹುಟ್ಟುಹಾಕಲಾಗಿದೆ.
ಮಾಸ್ಕ್: ಉಕ್ರೇನ್ ಮೇಲೆ ಯುದ್ಧ ಸಾರಿರುವ ರಷ್ಯಾ ತನ್ನ ರಾಷ್ಟ್ರ ಧ್ವಜವನ್ನು ಉಕ್ರೇನ್‍ನಲ್ಲಿರುವ ಕಾಖೋವ್ಕಾ ಜಲವಿದ್ಯುತ್ ಸ್ಥಾವರದ ಮೇಲೆ ಹಾರಿಸಿರುವ ವೀಡಿಯೋ ಒಂದು ವೈರಲ್ ಆಗುತ್ತಿದೆ.
ಉಕ್ರೇನ್‍ನ ಕಾಖೋವ್ಕಾದಲ್ಲಿರುವ ಡ್ನೀಪರ್ ನದಿಗೆ ಅಡ್ಡಲಾಗಿ ಡ್ಯಾಮ್ ಕಟ್ಟಿ ಜಲ ವಿದ್ಯತ್ ಸ್ಥಾವರವನ್ನು ಸ್ಥಾಪಿಸಿತ್ತು. ಈ ವಿದ್ಯುತ್ ಸ್ಥಾವರದಿಂದ ಉಕ್ರೇನ್‍ನ ಸಾಕಷ್ಟು ಭಾಗಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತಿತ್ತು. ಇದೀಗ ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ಮಿಲಿಟರಿ ಪಡೆ ಪವರ್ ಪ್ಲಾಂಟ್ ವಶಪಡಿಸಿಕೊಂಡು ರಷ್ಯಾದ ರಾಷ್ಟ್ರ ಧ್ವಜವನ್ನು ಹಾರಿಸಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ತಮ್ಮ ದೇಶದ ಮೇಲೆ ರಷ್ಯಾದ ಆಕ್ರಮಣದಿಂದಾಗಿ ಇದುವರೆಗೆ ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸೇರಿ 137 ಮಂದಿ ಹತರಾಗಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಬಿಡುಗಡೆ ಮಾಡಿದ ವೀಡಿಯೋದಲ್ಲಿ ಈ ಯುದ್ಧದ ಸ್ಥಿತಿಗತಿ ಕುರಿತು ಮಾತನಾಡಿದ ಅವರು, ಮೃತರನ್ನು ಹೀರೋಗಳು ಎಂದು ಕರೆದಿದ್ದಾರೆ. ರಷ್ಯಾ ದಾಳಿ ಪರಿಣಾಮವಾಗಿ ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ದಾಳಿ ಜಗತ್ತನ್ನೇ ತಲ್ಲಣಗೊಳಿಸಿದೆ. ಉಕ್ರೇನ್ ಮೇಲೆ ವಿಪರೀತ ದಾಳಿ ನಡೆದಿದ್ದರಿಂದ ಅಲ್ಲಿ ವಾಸವಿರುವ ಕನ್ನಡಿಗರು ಆತಂಕದಿಂದ ದಿನಗಳೆಯುತ್ತಿದ್ದಾರೆ. ಅವರನ್ನು ಕರೆತರಲು ಏನೆಲ್ಲ ಪ್ರಯತ್ನಗಳು ನಡೆದರೂ, ಅವು ಫಲಕಾರಿ ಆಗುತ್ತಿಲ್ಲ. ಹಾಗಾಗಿ ಉಕ್ರೇನ್ ನಲ್ಲಿ ನೆಲೆಸಿರುವ ಕನ್ನಡಿಗರು ವಿಡಿಯೋ ಮತ್ತು ಫೋನ್ ಕರೆಗಳ ಮೂಲಕ ತಮ್ಮನ್ನು ರಕ್ಷಿಸುವಂತೆ ಮೊರೆಯಿಡುತ್ತಿದ್ದಾರೆ. ಇದನ್ನೂ ಓದಿ : ತಾಯಿಯ ಸಾವಿನ ನೋವಲ್ಲೂ ವೃತ್ತಿ ಪರತೆ ಮೆರೆದ ರಘು ದೀಕ್ಷಿತ್
ಈ ಕುರಿತು ನಟಿ, ಮಾಜಿ ಸಂಸದೆ ರಮ್ಯಾ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಟ್ವಿಟ್ ಮಾಡಿದ್ದಾರೆ. “ಕರ್ನಾಟಕದ ವಿದ್ಯಾರ್ಥಿಗಳ ರಕ್ಷಣೆ ಹೇಗೆ? ಅವರನ್ನು ಹೇಗೆ ಕರೆತರುತ್ತೀರಿ? ಮತ್ತು ಯಾವಾಗ ಕರೆತರುತ್ತೀರಿ?” ಎಂದು ಪ್ರಶ್ನೆ ಕೇಳಿದ್ದಾರೆ. ಇದನ್ನೂ ಓದಿ : ಪುನೀತ್ ನಿರ್ಮಾಣದ ಫ್ಯಾಮಿಲಿ ಪ್ಯಾಕ್ ಚಿತ್ರ ನಿರ್ದೇಶಕನಿಗೆ ಟಾಲಿವುಡ್ ನಿಂದ ಮೆಗಾ ಆಫರ್
ಇತ್ತೀಚಿನ ದಿನಗಳಲ್ಲಿ ರಮ್ಯಾ ಸಿನಿಮಾಗಿಂತಲೂ ಸಿನಿಮಾದಾಚೆಗಿನ ಸುದ್ದಿಗಳಿಂದಾಗಿ ಸದ್ದು ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ನ್ಯಾಯಾಂಗ ಬಂಧನದಲ್ಲಿರುವ ಚೇತನ್ ಪರ ರಮ್ಯಾ ಬ್ಯಾಟ್ ಬೀಸಿದ್ದರು. ಅಲ್ಲದೇ, ಬೀದಿ ನಾಯಿಯ ಮೇಲೆ ಕಾರು ಹಾಯಿಸಿದ ವ್ಯಕ್ತಿಯ ವಿರುದ್ಧ ಹೋರಾಡಿದ್ದರು. ಶಿವಮೊಗ್ಗದ ಹರ್ಷ ಹತ್ಯೆಯಾದಾಗಲೂ ಅದನ್ನು ಖಂಡಿಸಿದ್ದರು. ಈಗ ಉಕ್ರೇನ್ ವಿದ್ಯಾರ್ಥಿಗಳ ರಕ್ಷಣೆಯ ವಿಷಯದಲ್ಲಿ ಪ್ರಶ್ನೆ ಮಾಡಿದ್ದಾರೆ.
ಬೆಳಗಾವಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಹಿತಿ ಕೊಟ್ಟರು.
ಉಕ್ರೇನ್‍ನಲ್ಲಿ ಸಿಕ್ಕಿಕೊಂಡಿರುವ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬೆಳಗಾವಿ ಜಿಲ್ಲೆಯ 7 ವಿದ್ಯಾರ್ಥಿಗಳಿದ್ದಾರೆ. ರಾಜ್ಯದ 125ಕ್ಕೂ ಹೆಚ್ಚು ಜನ ಉಕ್ರೇನ್ ನಲ್ಲಿ ಇದ್ದಾರೆ. ದೇಶದ 20 ಸಾವಿರ ಜನ ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಇಲ್ಲಿ ಕರೆತಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ರಾಜ್ಯ ಸರ್ಕಾರದಿಂದ ವೆಬ್ ಪೋರ್ಟಲ್ ಪ್ರಾರಂಭ
ಯುದ್ಧ ನಿಲ್ಲಿಸಲು ಮೋದಿಯಿಂದ ರಷ್ಯಾದ ಪ್ರಧಾನಿಗೆ ಮನವಿ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನೋಡಲ್ ಅಧಿಕಾರಿಯನ್ನು ಸಹ ನೇಮಕ ಮಾಡಲಾಗಿದೆ. ಸುರಕ್ಷಿತವಾಗಿ ಭಾರತೀಯರನ್ನು ಕರೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿಯೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಇವತ್ತೆ ನನ್ನ ಹೆಸರು ಬರೆದಿಟ್ಟುಕೊಳ್ಳಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರುತ್ತೆ. 2024ಕ್ಕೆ ಮೋದಿ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಕಾಂಗ್ರೆಸ್ ಮುಗಿದು ಹೋದ ಪಕ್ಷ, ಅಲ್ಲೊಂದು ಇಲ್ಲೊಂದು ಕಾಂಗ್ರೆಸ್ ಪುಡಾರಿಗಳಿದ್ದಾರೆ. ಹಾಳಾದ ಊರಿಗೆ ಉಳಿದವನೇ ಗೌಡ ಅಂತಾ ಉತ್ತರ ಕರ್ನಾಟಕದಲ್ಲಿ ನಾಣ್ಣುಡಿ ಇದೆ. ಅದೇ ಪರಿಸ್ಥಿತಿಯಲ್ಲಿ ಕಾಂಗ್ರೆಸ್‍ಗೆ ಇದೆ ಎಂದು ಆಕ್ರೋಶ ಹೊರಹಾಕಿದರು.
ಅರವಿಂದ್ ಪಾಟೀಲ್ ಬಿಜೆಪಿ ಸೇರ್ಪಡೆಗೆ ವಿರೋಧ ಕುರಿತು ಮಾತನಾಡಿದ ಅವರು, ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ನಿನ್ನೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ ಯಾರೇ ಸೇರ್ಪಡೆಯಾದರೂ ಆಶ್ವಾಸನೆ ಕೊಡಲ್ಲ. ಬಿಜೆಪಿ ನಿಂತ ನೀರಲ್ಲ, ಹರಿಯುವ ನೀರು, ಯಾರೂ ಬಂದರೂ ಸ್ವಾಗತ ಮಾಡಿದ್ದೇವೆ. ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಹೊರಟ್ಟಿ ನಮ್ಮ ಊರಿನವರೇ ನಮ್ಮ ಆತ್ಮೀಯರು. ಅವರು ಬರ್ತೀವಿ ಅಂತಾನೂ ಹೇಳಿಲ್ಲ. ಇಲ್ಲ ಅಂತಾನೂ ಹೇಳಿಲ್ಲ. ಅವರು ಬಂದ್ರೆ ಸ್ವಾಗತ ಮಾಡ್ತೀವಿ ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ಬೆಳಗಾವಿ ಕೆಡಿಪಿ ಸಭೆಯಲ್ಲಿ ಮೂವರು ಕಂದಮ್ಮಗಳ ಸಾವು ಪ್ರಕರಣ ಪ್ರಸ್ತಾಪವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ, ಮಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಇದರಿಂದ ತುಂಬಾ ನೋವಾಗಿದೆ. ಈ ಕುರಿತು ಮೂರು ದಿನಗಳಲ್ಲಿ ಪ್ರಕರಣದ ಸಮರ್ಪಕ ವರದಿ ನೀಡಬೇಕು. ಇಲ್ಲವಾದರೆ ನಾಲ್ಕನೇ ದಿನಕ್ಕೆ ಕೆಲಸ ಬಿಡಿ ಎಂದು ಖಡಕ್ ಎಚ್ಚರಿಕೆ ಕೊಟ್ಟರು.