Tag: Ullal

  • ಮಂಗಳೂರು | ಎದುರಾಳಿ ವಿರುದ್ಧ ಸಂಚು ಮಾಡ್ತಿದ್ದಾಗ್ಲೇ ನಟೋರಿಯಸ್ ರೌಡಿಶೀಟರ್ ಅರೆಸ್ಟ್!

    ಮಂಗಳೂರು | ಎದುರಾಳಿ ವಿರುದ್ಧ ಸಂಚು ಮಾಡ್ತಿದ್ದಾಗ್ಲೇ ನಟೋರಿಯಸ್ ರೌಡಿಶೀಟರ್ ಅರೆಸ್ಟ್!

    ಮಂಗಳೂರು: ಎದುರಾಳಿ ತಂಡದ ವಿರುದ್ಧ ಸಂಚು ರೂಪಿಸುತ್ತಿದ್ದಾಗಲೇ ನಟೋರಿಯಸ್ ರೌಡಿಶೀಟರ್ ಒಬ್ಬನನ್ನು ಸಿಸಿಬಿ ಪೊಲೀಸರು (Police) ಬಂಧಿಸಿದ ಘಟನೆ ಉಳ್ಳಾಲದಲ್ಲಿ (Ullal) ನಡೆದಿದೆ.

    ಬಂಧಿತ ಆರೊಪಿಯನ್ನು, ದಾವುದ್ (43) ಎಂದು ಗುರುತಿಸಲಾಗಿದೆ. ಆರೋಪಿ ಉಳ್ಳಾಲದ ಧರ್ಮನಗರದ ಆತನ ಮನೆಯಲ್ಲಿ ಎದುರಾಳಿ ತಂಡದ ವಿರುದ್ಧ ಸಂಚು ಮಾಡುತ್ತಿದ್ದ. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಆತನನ್ನು ಬಂಧಿಸಿದ್ದಾರೆ.

    ಬಂಧನದ ವೇಳೆ ಸಿಸಿಬಿ ಪೊಲೀಸರ ಮೇಲೆ ಆರೋಪಿ ಮಚ್ಚಿನಿಂದ ದಾಳಿ ಮಾಡಲು ಮುಂದಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದಾವುದ್ ವಿರುದ್ಧ ಟಾರ್ಗೆಟ್ ಇಲ್ಯಾಸ್ ಕೊಲೆ ಸೇರಿದಂತೆ 10 ಪ್ರಕರಣಗಳಿವೆ.

  • ಮಂಗಳೂರಿನಲ್ಲಿ ವಿದ್ಯಾರ್ಥಿನಿ ನಾಪತ್ತೆ – ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ ಶಂಕೆ?

    ಮಂಗಳೂರಿನಲ್ಲಿ ವಿದ್ಯಾರ್ಥಿನಿ ನಾಪತ್ತೆ – ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ ಶಂಕೆ?

    ಮಂಗಳೂರು: ಇಲ್ಲಿನ (Mangaluru) ವಿದ್ಯಾರ್ಥಿನಿಯೋರ್ವಳು (Student) ನಾಪತ್ತೆಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪುತ್ತೂರಿನ ಪುರುಷರ ಕಟ್ಟೆಯ ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಆಕೆಯ ಪತ್ತೆಗೆ ಪೊಲೀಸರು (Police) ಹುಡುಕಾಟ ಆರಂಭಿಸಿದ್ದಾರೆ.

    ವಿದ್ಯಾರ್ಥಿನಿಯ ತಂದೆ ಸಾವನ್ನಪ್ಪಿದ್ದು, ಮಂಗಳೂರಿನ ಕದ್ರಿಯಲ್ಲಿರುವ ಆಕೆಯ ದೊಡ್ಡಪ್ಪ ಶಿಕ್ಷಣದ ಜವಾಬ್ದಾರಿ ಹೊತ್ತಿದ್ದರು. ಮಾಡೂರು ಎಂಬಲ್ಲಿನ ಪಿಜಿಯಲ್ಲಿ ತಂಗಲು ಯುವತಿಗೆ ವ್ಯವಸ್ಥೆ ಮಾಡಿದ್ದರು. ಪಿಜಿಗೆ ಅನ್ಯಕೋಮಿನ ಯುವಕನೋರ್ವ ಬರುತ್ತಿದ್ದು ಆತ ಡ್ರಗ್ಸ್ ಚಟ ಹತ್ತಿಸಿದ್ದ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಜರಂಗದಳ ಕಾರ್ಯಕರ್ತರು ಯುವತಿಯ ದೊಡ್ಡಪ್ಪನಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಜೀವ ಬೆದರಿಕೆ – ಆರೋಪಿ ಅರೆಸ್ಟ್

    ಇದಾಗ ಬಳಿಕ ಆಕೆ ತನ್ನ ಸ್ಕೂಟರ್‌ನೊಂದಿಗೆ ನಾಪತ್ತೆಯಾಗಿದ್ದು, ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆಕೆಯ ಖಾತೆಯಿಂದ ಸುರತ್ಕಲ್‍ನ ಎಟಿಎಂ ಒಂದರಲ್ಲಿ ಹಣ ವಿಥ್ ಡ್ರಾ ಮಾಡಿದ್ದಾಳೆ. ಯುವತಿಯ ಅಕೌಂಟ್‍ನಲ್ಲಿ ಲಕ್ಷಾಂತರ ರೂ. ಹಣ ಇದ್ದು, ಇದೀಗ ಪೊಲೀಸರು ಅಕೌಂಟ್ ಬ್ಲಾಕ್ ಮಾಡಿದ್ದಾರೆ.

    ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅನ್ಯಕೋಮಿನ ಯುವಕನೊಬ್ಬನ ಜೊತೆ ಬೆಂಗಳೂರಿಗೆ ಯುವತಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಉಳ್ಳಾಲ (Ullal) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿ ಜೊತೆ ಸಲುಗೆಯಿಂದ ಇದ್ದಿದ್ದಕ್ಕೆ ಪೊಲೀಸರಿಗೆ ಹಣ ಕೊಟ್ಟು ಹಲ್ಲೆ ಮಾಡಿಸಿದ ಆರೋಪ – ಡಿವೈಎಸ್‍ಪಿಗೆ ದೂರು

  • ಹದಿಹರೆಯದವರ ಮದ್ಯ ನಶೆಗೆ ಅಡ್ಡಾದಿಡ್ಡಿ ಓಡಿದ ಕಾರ್ – ಎಂಟು ಬೈಕ್‌ಗಳು ಜಖಂ

    ಹದಿಹರೆಯದವರ ಮದ್ಯ ನಶೆಗೆ ಅಡ್ಡಾದಿಡ್ಡಿ ಓಡಿದ ಕಾರ್ – ಎಂಟು ಬೈಕ್‌ಗಳು ಜಖಂ

    ಬೆಂಗಳೂರು: ಕಂಠಪೂರ್ತಿ ಕುಡಿದು ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಎಂಟು (Eight) ಬೈಕ್‌ಗಳು (Bike) ಸಂಪೂರ್ಣ ಜಖಂಗೊಂಡಿರುವ ಘಟನೆ ಉಲ್ಲಾಳು (Ullal) ಬಳಿಯ ಕೆಎಲ್‌ಇ ಲಾ ಕಾಲೇಜು ಬಳಿ ನಡೆದಿದೆ.

    ಭರತ್ ಎಂಬ ಯುವಕ ತನ್ನ ಕಾರಿನಲ್ಲಿ ನಾಲ್ವರು ಸ್ನೇಹಿತರನ್ನ ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ್ದಾನೆ. ಸ್ನೇಹಿತ ಗುರುದೀಪ್‌ಗೆ ಕಾರು ಚಲಾಯಿಸಲು ಕೊಟ್ಟು ಡ್ರೈವ್‌ ಹೋಗಿದ್ದಾರೆ. ಪೋಷಕರು ತಮ್ಮ ಮಕ್ಕಳು ಚೆನ್ನಾಗಿ ಇರಲಿ ಎಂದು ಒಡಾಡಲು ಕಾರು ಕೊಡಿಸಿದ್ದರು. ಪಾಕೆಟ್ ಮನಿ ಅದೂ ಇದು ಅಂತಾ ಉಳಿಸಿದ್ದರಲ್ಲಿ ಕಂಠಪೂರ್ತಿ ಕುಡಿದು ಕಾರಿನಲ್ಲಿ ಮೋಜಿನ ರೈಡ್ ಹೋಗಿ ಈ ಅಪಘಾತವೆಸಗಿದ್ದಾರೆ. ಇದನ್ನೂ ಓದಿ: ಯುಪಿಎ Vs ಎನ್‌ಡಿಎ – ಯಾರ ಅವಧಿಯಲ್ಲಿ ಎಷ್ಟು ಸಾಧನೆ? ಶ್ವೇತ ಪತ್ರದಲ್ಲಿ ಏನಿದೆ? ಇಲ್ಲಿದೆ ಸಂಖ್ಯಾ ಮಾಹಿತಿಗಳು

    ಮದ್ಯದ ನಶೆಯಲ್ಲಿ ಕೆಎಲ್‌ಇ ಲಾ ಕಾಲೇಜಿನ ಬಳಿ ವೇಗವಾಗಿ ಕಾರು ಚಲಾಯಿಸಿಕೊಂಡು ಗುರುದೀಪ್ ಬಂದಿದ್ದಾನೆ. ಬಳಿಕ ಕಾರು ನಿಯಂತ್ರಣ ತಪ್ಪಿ ಬೇಕರಿ ಬಳಿ ನಿಂತಿದ್ದ ಬೈಕ್‌ಗಳ ಮೇಲೆ ಹರಿದಿದೆ. ಕಾರು ಗುದ್ದಿದ ರಭಸಕ್ಕೆ ಎಂಟು ಬೈಕುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಪ್ರೀತಿಗೆ ಹೆತ್ತವರು ವಿರೋಧ- ಮನನೊಂದು ಅಪ್ರಾಪ್ತೆ ನೇಣಿಗೆ ಶರಣು

    ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭರತ್ ಹಾಗೂ ಗುರುದೀಪ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಿಮ್ಸ್‌ನ  ಜೂನಿಯರ್ ವೈದ್ಯನಿಂದ ಹೆಚ್‍ಓಡಿಗೆ ಲೈಂಗಿಕ ಕಿರುಕುಳ ಆರೋಪ

  • ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

    ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

    ಮಂಗಳೂರು: ಪತ್ನಿಗೆ (Wife) ಅನೈತಿಕ ಸಂಬಂಧ ಇದೆ ಎಂದು ಅನುಮಾನ ಹೊಂದಿದ್ದ ಪತಿ (Husband) ಆಕೆಯನ್ನು ಕೊಂದು ತಾನೂ ನೇಣಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಉಳ್ಳಾಲ (Ullal) ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಪಿಲಾರ್‌ನಲ್ಲಿ ನಡೆದಿದೆ.

    ಕೊಲೆಯಾದ ಮಹಿಳೆಯನ್ನು ಶೋಭಾ (46) ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರಾದ ಶೋಭಾ ಹಾಗೂ ಶಿವಾನಂದ (55) ದಂಪತಿಯ ನಡುವೆ ಮದುವೆಯಾದಾಗಿನಿಂದಲೂ ವಿರಸವಿತ್ತು. ಪತ್ನಿಗೆ ಅಕ್ರಮ ಸಂಬಂಧವಿದೆ ಎಂಬ ಅನುಮಾನ ಶಿವಾನಂದನನ್ನು ಎಂದಿಗೂ ಕಾಡುತ್ತಿತ್ತು.

    ಪುತ್ರಿಯನ್ನು ವಿವಾಹ ಮಾಡಿಕೊಟ್ಟಿದ್ದ ಶೋಭಾ ಹಾಗೂ ಶಿವಾನಂದ ದಂಪತಿ ತಮ್ಮ ಪುತ್ರನ ಜೊತೆಯಲ್ಲಿ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಪುತ್ರ ಕಾರ್ತಿಕ್ ಕೆಲಸಕ್ಕೆ ತೆರಳಿದ ಬಳಿಕ ಘನಘೋರ ದುರಂತವೊಂದು ಸಂಭವಿಸಿದೆ. ಪತ್ನಿಯ ಜೊತೆ ಬೆಳ್ಳಂಬೆಳಗ್ಗೆ ಜಗಳ ಶುರುವಿಟ್ಟುಕೊಂಡಿದ್ದ ಶಿವಾನಂದ, ಈ ಜಗಳ ವಿಕೋಪಕ್ಕೆ ತಿರುಗಿದ್ದೇ ತಡ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಪತ್ನಿಯ ಸಂಬಂಧಿಕರಿಗೆ ಕರೆ ಮಾಡಿ, ನಾನು ಸಾಯುತ್ತೇನೆ. ನನ್ನ ಶವಕ್ಕೆ ಮುಡಿಸಲು ಹೂವು ತನ್ನಿ ಎಂದು ಹೇಳಿ ಕಾಲ್ ಇಟ್ಟವನೇ ಅಲ್ಲೇ ಇದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಸಗುಲ್ಲ ಖಾಲಿಯಾಗಿದ್ದಕ್ಕೆ ವಧು-ವರನ ಕುಟುಂಬದ ಮಧ್ಯೆ ಡಿಶುಂ ಡಿಶುಂ – ಯುವಕ ಸಾವು

    crime

    ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಉಳ್ಳಾಲ ಠಾಣಾ ಪೊಲೀಸರು ಮೃತ ದಂಪತಿಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಒಟ್ಟಿನಲ್ಲಿ ಮಕ್ಕಳ ಪ್ರಗತಿಯನ್ನು ನೋಡುತ್ತಾ ಜೊತೆಯಾಗಿ ಬಾಳಬೇಕಿದ್ದ ದಂಪತಿ ಈ ರೀತಿ ದಾರುಣ ಅಂತ್ಯ ಕಂಡಿದ್ದು ದುರಂತವೇ ಸರಿ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಯುವತಿಯ ಮದುವೆ ಮಾಡಿದ ಉಳ್ಳಾಲದ ಮುಸ್ಲಿಂ ಕುಟುಂಬ

    ಹಿಂದೂ ಯುವತಿಯ ಮದುವೆ ಮಾಡಿದ ಉಳ್ಳಾಲದ ಮುಸ್ಲಿಂ ಕುಟುಂಬ

    ಮಂಗಳೂರು: ಮಂಗಳೂರು ಅತ್ಯಂತ ಕೋಮುಸೂಕ್ಷ್ಮ ಪ್ರದೇಶ. ಇಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ ತರುವ ಪ್ರಯತ್ನಗಳು ನಿರಂತರ ನಡೆಯುತ್ತಿರುತ್ತವೆ. ಇವೆಲ್ಲದರ ನಡುವೆಯೂ ಕೋಮು ಸೌಹಾರ್ದತೆ ಸಾರುವ ಪ್ರಕರಣಗಳೂ ನಡೆಯುತ್ತಿರುತ್ತವೆ. ಅಂತಹುದೇ ಒಂದು ಸಂತಸದ ವಿಚಾರ ಕೋಮುಸೂಕ್ಷ್ಮ ಪ್ರದೇಶ ಎಂದೇ ಗುರುತಿಸಿಕೊಂಡಿರುವ ಉಳ್ಳಾಲದಲ್ಲಿ ನಡೆದಿದೆ. ಹೌದು, ಉಳ್ಳಾಲದಲ್ಲೊಂದು ಸೌಹಾರ್ದ ಕಂಕಣಭಾಗ್ಯ ನಡೆದ ಅಪರೂಪದ ಘಟನೆ ನಡೆದಿದೆ. ಆರ್ಥಿಕ ಅಶಕ್ತ ಹೆಣ್ಣುಮಗಳ ಮದುವೆಯೊಂದನ್ನು ಮುಸ್ಲಿಂ ಸಹೋದರರ ಕುಟುಂಬವೊಂದು ನೆರವೇರಿಸಿ ಸೌಹಾರ್ದತೆಯನ್ನು ಸಾರಿದೆ.

    ಮೂಲತಃ ಮಂಗಳೂರಿನ ಶಕ್ತಿನಗರದವರಾದ ಕವನ ಅವರ ಕುಟುಂಬ ಆರ್ಥಿಕವಾಗಿ ಅಶಕ್ತವಾದ ಕುಟುಂಬ. ವಿಧವೆ ತಾಯಿ ಗೀತಾರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಅವಿವಾಹಿತೆ ಕವನಳಿಗೆ ಸಂಬಂಧ ಕೂಡಿಬಂದಿತ್ತು. ಜುಲೈ 11 ಮದುವೆಗೆ ದಿನ ನಿಗದಿಯಾಗಿತ್ತು. ಆದರೆ ಇವರಲ್ಲಿ ಆರ್ಥಿಕ ಸಂಪನ್ಮೂಲ ಏನೂ ಇಲ್ಲದ ಕಾರಣ ಅಕ್ಷರಶಃ ಮದುವೆ ನಿಲ್ಲುವ ಹಂತಕ್ಕೆ ತಲುಪಿತ್ತು. ಈ ವಿಷಯವನ್ನರಿತ ಸಂಬಂಧಿ ಸುರೇಶ್ ಎಂಬವರು ಆತ್ಮೀಯ ಗೆಳೆಯ ಎಂ.ಕೆ. ರಝಾಕ್ ಎಂಬವರೊಂದಿಗೆ ನೋವು ಹಂಚಿಕೊಂಡಿದ್ದರು. ಆನಂತರ ನಡೆದದ್ದೇ ಬೇರೆ. ಕವನಳ ಬಾಳಿಗೆ ಎಂ.ಕೆ.ಕುಟುಂಬ ಅಭಯಹಸ್ತ ನೀಡುವ ಮೂಲಕ ಮದುವೆ ಸುಸೂತ್ರವಾಗಿ ನಡೆಯಿತು.

    ಪ್ರಾರಂಭದಲ್ಲಿ ಎಂ.ಕೆ. ರಝಾಕ್ ಮತ್ತು ಎಂ.ಕೆ. ರಿಯಾಝ್ ಅವರು ಕವನಾ ಅವರ ಮನೆಗೆ ಗ್ಯಾಸ್, ರೇಶನ್ ವ್ಯವಸ್ಥೆ ಮಾಡಿದ್ದರು. ನಂತರ ಮದುವೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಇವರು ಎಂ.ಕೆ. ಗ್ರೂಪಿನ ಅಧ್ಯಕ್ಷರಾದ ಯು.ಎಚ್. ಅಬ್ದುರ್ರಹ್ಮಾನ್ ಹಾಗೂ ಎಂ.ಕೆ. ಹಂಝ ಅವರ ಮುತುವರ್ಜಿಯೊಂದಿಗೆ ಎಂ.ಕೆ. ಗ್ರೂಪ್ ಮ್ಯಾರೇಜ್ ಫಂಡ್ ನಿಂದ ಬಡ ಹಿಂದೂ ಹುಡುಗಿಗೆ ಸಹಾಯಹಸ್ತ ಚಾಚುತ್ತಾರೆ. ಮದುಮಗಳಿಗೆ ಎಂ.ಕೆ.ಕುಟುಂಬವು ಬಂಗಾರದ ಕಾಲು ಮತ್ತು ಕೈ ಉಂಗುರ, ಬೆಂಡೋಲೆ ಮತ್ತಿತರ ಬೆಳ್ಳಿ ವಸ್ತುಗಳನ್ನು ನೀಡಿದ್ದಾರೆ.

    ಜೊತೆಗೆ ಸ್ಥಳೀಯ ಶಾಸಕರಾದ ಯು.ಟಿ. ಖಾದರ್ ಅವರೂ ಈ ಕುಟುಂಬದ ಪರಿಸ್ಥಿತಿ ಅರಿತು ದೊಡ್ಡ ಮೊತ್ತದ ಧನಸಹಾಯ ಮಾಡಿ ಶುಭ ಹಾರೈಸಿದ್ದಾರೆ. ಇನ್ನಿತರ ದಾನಿಗಳೂ ತಮ್ಮ ಉದಾರತೆ ತೋರಿದ್ದಾರೆ. ಇದನ್ನೂ ಓದಿ: ಹಿಂದೂಗಳ ಅಂಗಡಿ ರಕ್ಷಿಸಿದ ಮುಸ್ಲಿಂ, ಮುಸ್ಲಿಮರ ಜೀವ ಉಳಿಸಿದ ಹಿಂದೂ- ಘರ್ಷಣೆಯಲ್ಲೂ ಸೌಹಾರ್ದ ಗೀತೆ

    ಶನಿವಾರ ಕವನಾ ಅವರ ಮೆಹಂದಿ ಕಾರ್ಯಕ್ರಮವು ಎಂ.ಕೆ. ಹಂಝ ಅವರ ಮನೆಯಲ್ಲಿ ಸಡಗರದಿಂದ ನಡೆಯಿತು. ವಿವಾಹವು ಭಾನುವಾರ ವರ ರಂಜಿತ್ ಜೊತೆಗೆ ತಲಪಾಡಿಯ ದೇವಿನಗರದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕುಟುಂಬಿಕರ ಸಮ್ಮುಖದಲ್ಲಿ ನಡೆಯಿತು. ಈ ಮೂಲಕ ಅಪರೂಪದ, ಸೌಹಾರ್ದಯುತ ಮದುವೆಗೆ ಕರಾವಳಿಯು ಸಾಕ್ಷಿಯಾಯಿತು. ಇದನ್ನೂ ಓದಿ: ಮಂಗ್ಳೂರಲ್ಲಿ ಹಿಂದೂ- ಮುಸ್ಲಿಮ್ ಸೌಹಾರ್ದಕ್ಕೆ ಸಾಕ್ಷಿಯಾಯ್ತು ವಿಶೇಷ ದೋಣಿ ಸೇತುವೆ!

  • ಉಳ್ಳಾಲದ ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ : ಉಸ್ತಾದ್ ಬಂಧನ

    ಉಳ್ಳಾಲದ ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ : ಉಸ್ತಾದ್ ಬಂಧನ

    ಮಂಗಳೂರು: ಚೈಲ್ಡ್ ಕೇರ್ ಕೇಂದ್ರದಲ್ಲಿ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಘಟನೆ ಹಿರಿಯ ಪೊಲೀಸ್ ಅಧಿಕಾರಿಗಳು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಒಂದು ಚೈಲ್ಡ್ ಕೇರ್ ಕೇಂದ್ರದಲ್ಲಿ 14 ವರ್ಷದ ಅಪ್ರಾಪ್ತ ಬಾಲಕನಿಗೆ ಕೇಂದ್ರದ ಉಸ್ತಾದ್ ನಿಂದಲೇ ಕಿರುಕುಳ ಆಗಿದೆ. ಕಿರುಕುಳ ನೀಡಿದ ಕೋಣಾಜೆ ಮೂಲದ ಆರೋಪಿ ಉಸ್ತಾದ್ ಆಯೂಬ್ ಮೇಲೆ ಪೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

    ಚೈಲ್ಡ್ ಕೇರ್ ಸೆಂಟರ್‌ಗಳಲ್ಲಿ ತಂದೆ ತಾಯಿಯಿಲ್ಲದ ಅನಾಥ ಮಕ್ಕಳು, ಕೌಟುಂಬಿಕ ಸಮಸ್ಯೆಗಳಿಂದ ಅನಾಥರಾಗಿರುವ ಮಕ್ಕಳು ಇರುತ್ತಾರೆ. ಈ ಮಕ್ಕಳನ್ನು ಜವಾಬ್ದಾರಿಯುತವಾಗಿ ಚೈಲ್ಡ್ ಕೇರ್ ಸೆಂಟರ್ಗಳು ಆರೈಕೆ ಮಾಡಬೇಕಾಗುತ್ತದೆ.

    ಚೈಲ್ಡ್ ಕೇರ್ ಕೇಂದ್ರದಲ್ಲಿ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ  ಖಚಿತ ಮಾಹಿತಿ ಕಮೀಷನರ್ ಶಶಿಕುಮಾರ್ ಅವರಿಗೆ ಬಂದಿತ್ತು. ಇದಕ್ಕಾಗಿ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು. ಅರಿವು ನೆರವು ಎಂಬ ಕೋವಿಡ್ ಸೋಂಕಿನ ಬಗ್ಗೆ ಜಾಗೃತಿ ಕಾರ್ಯಕ್ರಮದ ಹೆಸರಲ್ಲಿ ಚೈಲ್ಡ್ ಕೇರ್ ಸೆಂಟರಿನ ಮಕ್ಕಳನ್ನು ಕರೆಸಿಕೊಳ್ಳಲಾಯಿತು. ಈ ಕಾರ್ಯಾಗಾರದಲ್ಲಿ ಮನೋವೈದ್ಯರು, ಮಕ್ಕಳ ವೈದ್ಯರನ್ನು ಬಳಸಿಕೊಳ್ಳಲಾಯಿತು.

    ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗೆಗೆ ಮಕ್ಕಳಿಂದ ಮಾಹಿತಿ ಸಂಗ್ರಹಿಸಲಾಯಿತು. ಒಂದಷ್ಟು ಪ್ರಶ್ನೋತ್ತರಗಳ ಪತ್ರಿಕೆಯನ್ನು ನೀಡಿ ಮಕ್ಕಳಿಂದ ಉತ್ತರ ಪಡೆಯಲಾಯಿತು. ಮಕ್ಕಳಿಂದ ಬಂದ ಉತ್ತರದ ಬಳಿಕ ಚೈಲ್ಡ್ ಕೇರ್ ಸೆಂಟರ್‍ನಲ್ಲಿ ನಡೆಯುತ್ತಿದ್ದ ಕರ್ಮಕಾಂಡಗಳು ಗೊತ್ತಾಗಿದೆ.

    ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಚೈಲ್ಡ್ ಕೇರ್ ಸೆಂಟರ್ ಇದ್ದು ಸುಮಾರು 500 ಮಕ್ಕಳು ಇದ್ದಾರೆ. ಇಡೀ ಜಿಲ್ಲೆಯಲ್ಲಿ 60ಕ್ಕೂ ಹೆಚ್ಚು ಈ ರೀತಿಯ  ಸೆಂಟರ್‌ಗಳಿದ್ದು 1,024 ಮಕ್ಕಳಿದ್ದಾರೆ. ಸದ್ಯ ಮಂಗಳೂರು ವ್ಯಾಪ್ತಿಯ ನಿಗಾ ಘಟಕಗಳ ಮಕ್ಕಳ ಪರೀಕ್ಷೆ ನಡೆಸಲಾಗಿದ್ದು, ಕಿರುಕುಳ ನೀಡುತ್ತಿದ್ದ  ಸೆಂಟರ್‌ಗಳಿಗೆ ನೋಟಿಸ್ ನೀಡಲಾಗಿದೆ.

  • ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

    ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

    – ಕೊರಗಜ್ಜನೇ‌ ಶಿಕ್ಷೆ ನೀಡಲಿ‌ ಎಂದು ಪ್ರಾರ್ಥಿಸಿದ ಭಕ್ತರು

    ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ.

    ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ‌ ಸಾರ್ವಜನಿಕ‌ ಶ್ರೀ‌ಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ‌ ಹುಂಡಿಯಲ್ಲಿ‌ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ‌ ಹುಂಡಿಯ ಹಣ ಎಣಿಕೆ ಕಾರ್ಯ ನಡೆಯುತ್ತದೆ. ಈ ಬಾರಿ ಮಾತ್ರ ತಡವಾಗಿ ಕಾಣಿಕೆ‌ಹುಂಡಿಯನ್ನು ಎಣಿಕೆಗೆ ತೆಗೆಯಲಾಗಿದೆ.

    ಎಣಿಕೆಯ ವೇಳೆ ಕಾಂಡೋಮ್‌ಗಳು ಹಾಗೂ ಸಿಎಂ ಬಿಬಿಸ್ ಯಡಿಯೂರಪ್ಪ‌ ಸೇರಿದಂತೆ ಬಿಜೆಪಿ ನಾಯಕರ ಭಾವ ಚಿತ್ರಗಳನ್ನು ವಿರೋಪಗೊಳಿಸಿ,ಅವಹೇಳನಕಾರಿ ಬರಹಗಳನ್ನು ಬರೆದು ಕಾಣಿಕೆ‌ ಹುಂಡಿಗೆ ಹಾಕಿದ್ದಾರೆ. ಬಳಕೆ ಮಾಡಿದ ಎರಡು ಕಾಂಡೋಮ್‌ ಹಾಕಿದ್ದ ಕಿಡಿಗೇಡಿಗಳು ಅದರ ಜೊತೆಗೆ ಬೆಂಗಳೂರಿನ ಕೆ.ಆರ್‌. ಐಡಿಯಲ್‌ ನಿಗಮಾಧ್ಯಕ್ಷರಾದ ಎಂ ರುದ್ರೇಶ್‌ ಅವರಿಗೆ ಶುಭಕೋರಿದ ಒಂದು ಪೋಸ್ಟರ್ ಹಾಕಿದ್ದಾರೆ. ಪೋಸ್ಟರ್‌ನಲ್ಲಿರುವ ಸಿಎಂ ಬಿಎಸ್‌ವೈ, ಅವರ ಪುತ್ರ ವಿಜಯೇಂದ್ರ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಫೋಟೋವನ್ನು ವಿರೂಪಗೊಳಿಸಲಾಗಿದೆ.

    ಇದೇ ಪೋಸ್ಟರ್ ನಲ್ಲಿ ”ರಾಜಕಾರಣಿಗಳನ್ನು ಹೊಡೆದು ಕೊಲ್ಲಬೇಕು, ದೇವ ಲೋಕದಿಂದ ಹೊರ ಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು, ವಿಗ್ರಹಗಳ ಮೂಲಕ ಭೂ ಲೋಕದ ಜನರನ್ನು ಭ್ರಷ್ಟರನ್ನಾಗಿಸಿ, ನಕಲಿ ದೇವರಾಗಿ ಅನಾಧಿಕಾಲದಿಂದ ಮೆರೆಯಲ್ಪಡುತ್ತಿದೆ. ಎಚ್ಚರ, ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ ಬಾಚಿ ತಿಂದು ತೇಗುವ ಈ ಅಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹಿಡಿದು ಕೊಲ್ಲಬೇಕಾಗಿದ್ದು, ಜನರು ಸಿದ್ದರಾಗಬೇಕು” ಎಂದು ಪ್ರಚೋದನಕಾರಿಯಾಗಿ ಬರೆಯಲಾಗಿದೆ.

    ಕಿಡಿಗೇಡಿಗಳ ಈ ಕೃತ್ಯದ ವಿರುದ್ಧ ಕೊರಗಜ್ಜ ಸೇವಾ ಸಮಿತಿಯವರು ಉಳ್ಳಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಕೊರಗಜ್ಜ, ಗುಳಿಗಜ್ಜನ ಸನ್ನಿಧಿಯಲ್ಲಿ ನೂರಾರು ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ಈ ವಿಕೃತಿ ಮೆರೆದ ಕಿಡಿಗೇಡಿಗಳ ವಿರುದ್ದ ಕ್ಷೇತ್ರದ ಕಾರ್ಣಿಕ ಶಕ್ತಿಗಳಾದ ಗುಳಿಗಜ್ಜ ಮತ್ತು ಕೊರಗಜ್ಜ ಶಿಕ್ಷೆಸಬೇಕು ಎಂದು ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು.

    ಕೆಲ ದಿನಗಳ‌ ಹಿಂದೆ ಮಂಗಳೂರಿನ ಕೊಟ್ಟಾರದ ಬಬ್ಬುಸ್ವಾಮಿ ಹಾಗೂ ಅತ್ತಾವರದ ಬಾಬುಗುಡ್ಡೆಯ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯಲ್ಲಿ ಕೂಡಾ ಇದೇ ರೀತಿಯ ಅವಹೇಳನಕಾರಿ ಬರಹದ ಪತ್ರಗಳು ಪತ್ತೆಯಾಗಿದ್ದು, ಅದೇ ತಂಡ ಈ ಕೃತ್ಯ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ‌ ಬೀಸಿದ್ದಾರೆ.

  • ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿ ಸಾವು

    ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿ ಸಾವು

    – ಮಂಗ್ಳೂರಿನ ಉಳ್ಳಾಲ ಉಳಿಯ ಬಳಿ ದುರಂತ

    ಮಂಗಳೂರು: ನೇತ್ರಾವತಿ ನದಿಯಲ್ಲಿ ದೋಣಿ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ಉಳ್ಳಾಲ ಸಮೀಪದ ಉಳಿಯಲ್ಲಿ ನಡೆದಿದೆ.

    ಮಂಜೇಶ್ವರ ಮಿಯಪದವು ನಿವಾಸಿ ರೆನಿಟಾ (18) ಮೃತ ಯುವತಿ. ಈ ದುರ್ಘಟನೆ ಕಲಬುರಗಿ ಜಿಲ್ಲೆಯ ನಿವಾಸಿ ಕಾವ್ಯ (20) ನೀರಿಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ. ಉಳಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ತೊಕ್ಕೊಟ್ಟು ಚರ್ಚ್ ನ ವಾರ್ಷಿಕೋತ್ಸವಕ್ಕೆಂದು ಮಂಗಳೂರಿನ ಉಳ್ಳಾಲ ಉಳಿಯದಲ್ಲಿರುವ ಸ್ಥಳೀಯ ನಿವಾಸಿ ಜಾರ್ಜ್ ಎಂಬವರ ಮನೆಗೆ ಯುವತಿಯರ ತಂಡವೊಂದು ಬಂದಿದ್ದತ್ತು. ಭಾನುವಾರ ಜಾರ್ಜ್ ಅವರ ದೋಣಿಯಲ್ಲಿ ಉಲ್ಲಾಳದ ಉಳಿಯ ದ್ವೀಪಕ್ಕೆಂದು ಸಾಗುತ್ತಿದ್ದರು. ಈ ವೇಳೆ ಆಯ ತಪ್ಪಿ ದೋಣಿ ಪಲ್ಟಿಯಾಗಿದ್ದು ದೋಣಿಯಲ್ಲಿದ್ದ 6 ಮಂದಿ ಯುವತಿಯರು ನದಿ ನೀರಿಗೆ ಬಿದ್ದಿದ್ದರು. ತಕ್ಷಣ ದೋಣಿಯ ಅಂಬಿಗ ಎಲ್ಲರನ್ನೂ ಬಚಾವ್ ಮಾಡುವ ಪ್ರಯತ್ನ ಮಾಡಿದ್ದರೂ ರೆನಿಟಾ ಸಾವನ್ನಪ್ಪಿದ್ದಾರೆ.

    ಯುವತಿ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನ ಸಮೀಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಅಂಬಿಗನ ಸಮಯ ಪ್ರಜ್ಞೆಯಿಂದ ನಾಲ್ವರು ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಸಿಎಎ ಪರ ಭಿತ್ತಿಪತ್ರ ಹಂಚಿಕೆ: ಬಿಜೆಪಿಗರಿಗೆ ತಟ್ಟಿದ ಗೋ ಬ್ಯಾಕ್ ಬಿಸಿ

    ಸಿಎಎ ಪರ ಭಿತ್ತಿಪತ್ರ ಹಂಚಿಕೆ: ಬಿಜೆಪಿಗರಿಗೆ ತಟ್ಟಿದ ಗೋ ಬ್ಯಾಕ್ ಬಿಸಿ

    ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ ಪರ ಭಿತ್ತಿಪತ್ರ ಹಂಚಿಕೆ ವೇಳೆ ಬಿಜೆಪಿಗರನ್ನು ಗೋಬ್ಯಾಕ್ ಎಂದು ಓಡಿಸಿದ ಪ್ರಸಂಗ ಮಂಗಳೂರಿನ ಉಳ್ಳಾಲ ಸಮೀಪದ ತೊಕ್ಕೊಟ್ಟಿನಲ್ಲಿ ನಡೆದಿದೆ.

    ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು, ಹಿಂಸಾಚಾರಗಳು ನಡೆಯುತ್ತಲೇ ಇದೆ. ಮಂಗಳೂರಿನಲ್ಲಿ ಈ ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಇಬ್ಬರು ಗೋಲಿಬಾರ್ ಗೆ ಸಾವನ್ನಪ್ಪಿದ್ದರು. ಇದೀಗ ರಾಜ್ಯದ ಎಲ್ಲೆಡೆ ಬಿಜೆಪಿ ಸಿಎಎ ಪರವಾಗಿ ಜಾಗೃತಿ ಮಾಡಿಸುತ್ತಿದ್ದೆ. ಅದರಂತೆ ಮಂಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಕಾಯ್ದೆಯ ಪರವಾಗಿ ಬುಧವಾರ ಜಾಗೃತಿ, ಪ್ರಚಾರವನ್ನು ನಡೆಸಿದರು.

    ತೊಕ್ಕೊಟ್ಟಿನಲ್ಲಿ ಪೌರತ್ವ ಕಾಯ್ದೆಯ ಪರವಾಗಿ ಭಿತ್ತಿಪತ್ರಗಳನ್ನು ಉಳ್ಳಾಲ ವ್ಯಾಪ್ತಿಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಂಚುತ್ತಿದ್ದರು. ತೊಕ್ಕೊಟ್ಟಿನ ವಾಣಿಜ್ಯ ಮಳಿಗೆಗಳ ಕಟ್ಟಡಕ್ಕೆ ಬಿಜೆಪಿ ತಂಡ ಭೇಟಿ ನೀಡಿದಾಗ ಕೆಲ ಸಮುದಾಯದ ಅಂಗಡಿಯ ಮಾಲೀಕರು ಈ ತಂಡವನ್ನು ತಡೆದು ನಮಗೆ ಸಿಎಎ, ಎನ್‌ಆರ್‌ಸಿ ಬಗ್ಗೆ ಬೇಕಾದಷ್ಟು ಮಾಹಿತಿ ಇದೆ. ನಿಮ್ಮ ಮೂಲಕ ನಮಗೆ ಮಾಹಿತಿಯ ಅಗತ್ಯತೆ ಇಲ್ಲ. ನಿಮ್ಮ ಕರ ಪತ್ರಗಳನ್ನು ಹಿಡಿದುಕೊಂಡು ವಾಪಸ್ ಹೋಗಿ ಎಂದು ವಾಗ್ವಾದ ನಡೆಸಿದರು. ಬಳಿಕ ಗೋಬ್ಯಾಕ್ ಗೋಬ್ಯಾಕ್ ಎಂದು ಘೋಷಣೆ ಕೂಗಿ ಬಿಜೆಪಿಗರ ತಂಡವನ್ನು ಓಡಿಸಿದರು.

    ಬಿಜೆಪಿಗರು ಹಾಗೂ ಮುಸ್ಲಿಮರ ಮಧ್ಯೆ ಮಾತಿಗೆ ಮಾತು ಬೆಳೆದು ಕೆಲ ಹೊತ್ತು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.