Tag: umashree

  • ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ

    ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ

    – ವೈಯಕ್ತಿವಾಗಿ ಯಾರು ಎಷ್ಟೇ ದೊಡ್ಡವರಿದ್ದರೂ ಚೌಕಟ್ಟಿನಲ್ಲಿ ಇರಬೇಕು
    – ಅಭಿಮಾನಿಗಳು ಶಾಂತವಾಗಿ ಇರಿ ಎಂದು ನಟಿ ಸಲಹೆ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಮತ್ತೆ ಜೈಲುಪಾಲಾದ ಬಗ್ಗೆ ಹಿರಿಯ ನಟಿ ಉಮಾಶ್ರೀ (Umashree) ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆ ಕೊಟ್ಟಿದ್ದಾರೆ. ಅವರ ಬಂಧನ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ನಟಿ ಹೇಳಿಕೆ ನೀಡಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಉಮಾಶ್ರೀ, ಸುಪ್ರೀಂ ಕೋರ್ಟ್‌ನ ಬೆಳವಣಿಗೆಯನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸಬೇಕು. ನಮಗು ಕೂಡ ಅದು ಅನಿವಾರ್ಯ. ನಾನು ಅವತ್ತು ಕೂಡ ಹೇಳಿದ್ದೆ, ಇವತ್ತೂ ಹೇಳುತ್ತೇನೆ. ನಾವು ಕಲಾವಿದರು, ಸಮಾಜದ ಸ್ವತ್ತು. ನಮ್ಮನ್ನ ಗಮನಿಸುತ್ತಿರುತ್ತಾರೆ. ಹಾಗಾಗಿ, ನಮ್ಮ ಪ್ರತಿಯೊಂದು ಮಾತು, ಕೃತಿ ಚೌಕಟ್ಟಿನಲ್ಲಿ ಇರುವುದನ್ನ ನಿರೀಕ್ಷೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌

    ರಮ್ಯಾಗೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ವಿಚಾರವಾಗಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯ ಇದೆ. ಟೀಕೆ-ಪ್ರಶಂಸೆಗಳು ಸಹಜವಾಗಿ ನಡೆಯುತ್ತಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ಅಭಿವ್ಯಕ್ತಿ ಪಡಿಸುವಲ್ಲಿ ಪರ-ವಿರುದ್ಧ ಮಾತನಾಡುವಾಗ, ಸಂಯಮ ಕಳೆದುಕೊಂಡಾಗ ಈ ರೀತಿ ಘಟನೆಗಳು ನಡೆಯುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

    ನಾನು ನನ್ನ ಅನುಭವದಲ್ಲಿ ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಎಲ್ಲರ ಅಭಿಮಾನಿಗಳನ್ನು ನೋಡಿದ್ದೇನೆ. ಆಗ ಸೋಶಿಯಲ್ ಮೀಡಿಯಾ ಇರಲಿಲ್ಲ. ಬಹಳ ಎಂದರೆ ಕೂಗಾಡುತ್ತಿದ್ದರು, ಕಿರುಚಾಡುತ್ತಿದ್ದರು. ಆ ಮೂಲಕ ಅಭಿಮಾನ ವ್ಯಕ್ತಪಡಿಸುತ್ತಿದ್ದರು, ಅಲ್ಲಿಗೆ ಮುಗಿಯುತ್ತಿತ್ತು. ಸೋಷಿಯಲ್ ಮೀಡಿಯಾ ಬಂದ ನಂತರ ಅಭಿಮಾನಿಗಳ ಜೊತೆ ಹೊಸ ಪೀಳಿಗೆಯ ಅಭಿಮಾನಿಗಳು ಇದ್ದಾರೆ. ಅವರು ಪ್ರಬುದ್ಧವಾದ ಚಿಂತನೆ ಇಟ್ಟುಕೊಂಡಿದ್ದರೆ ಸಾಮಾಜಿಕ ಆರೋಗ್ಯಕ್ಕೆ ಬಹಳ ಒಳ್ಳೆಯದು ಅಂತ ನನ್ನ ಅಭಿಪ್ರಾಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?

    ದರ್ಶನ್ ವ್ಯಾಪಾರ ಜಗತ್ತಿನಲ್ಲಿ ಒಳ್ಳೆಯ ಕೊಡುಗೆಯನ್ನ ಕೊಟ್ಟಿದ್ದಾನೆ. ಇದರಿಂದ ಚಿತ್ರರಂಗಕ್ಕೆ ಬಹಳ ಒಳ್ಳೆಯದು ಆಗಿದೆ. ಇಲ್ಲ ಅಂತ ಹೇಳೋಕೆ ಆಗಲ್ಲ. ಈಗಿನ ಬೆಳವಣಿಗೆಯಿಂದ ನಷ್ಟವೂ ಕೂಡ ಆಗಿದೆ. ಅವನಿಂದ ಬಹಳಷ್ಟು ಒಳ್ಳೆಯ ಕೆಲಸ ಆಗೋದಿತ್ತು. ಇದು ಇಷ್ಟಕ್ಕೆ ಮುಗಿದು ಹೋಗುತ್ತೆ ಅಂತ ಅನ್ನಿಸ್ತ ಇಲ್ಲ. ಇನ್ನೂ ಕೇಸ್ ಆಗಬೇಕು. ಕೋರ್ಟ್ನಲ್ಲಿ ತೀರ್ಮಾನ ಆಗಬೇಕು. ಏನು ಆಗುತ್ತೋ ಗೊತ್ತಿಲ್ಲ. ಇಷ್ಟಕ್ಕೆ ನಿರಾಸೆ ಆಗೋದು ಬೇಡ. ಯಾರೋ ಒಬ್ಬರಿಗೆ ನ್ಯಾಯ ಅಂತು ಸಿಗಬೇಕಲ್ಲ. ಅಭಿಮಾನಿಗಳಿಗೆ ಹೇಳೋದು ಇಷ್ಟೆ. ಸ್ವಲ್ಪ ಶಾಂತವಾಗಿ ಇರಿ ಎಂದು ಸಲಹೆ ನೀಡಿದ್ದಾರೆ.

    ಸಮಾಜ ನಮ್ಮನ್ನ ನೋಡ್ತಾ ಇರುತ್ತೆ. ನಮ್ಮ ನಡೆ-ನುಡಿ, ಉಡುಗೆ-ತೊಡಿಗೆ ಎಲ್ಲವನ್ನು ಬಹಳ ಅಭಿಮಾನದಿಂದ ಕಾಣ್ತಾ ಇರ್ತಾರೆ. ವೈಯುಕ್ತಿಕವಾಗಿ ಅವರು ಎಷ್ಟೇ ದೊಡ್ಡವರಾದರೂ ಚೌಕಟ್ಟಿನಲ್ಲಿ ಇರಬೇಕು. ರಾಜ್‌ಕುಮಾರ್, ವಿಷ್ಣುವರ್ಧನ್, ಸರೋಜಾ ದೇವಿ ಹೇಗಿದ್ದರು ಎಂದು ಉಮಾಶ್ರೀ ಮಾತನಾಡಿದರಲ್ಲದೇ, ಇದು ನೋವಿನ ಸಂಗತಿ. ಈ ರೀತಿ ಆಗಬಾರದಿತ್ತು. ಹೀಗೆ ಆಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.

  • ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

    ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ – ಭಾವುಕರಾದ ಉಮಾಶ್ರೀ

    ರೋಜಮ್ಮ ನಮ್ಮ ಜೊತೆ ಇರಬೇಕಿತ್ತು ಹಿರಿಯ ಜೀವವನ್ನು ಕಳ್ಕೊಂಡಿದ್ದೇವೆ, ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ (Umashree) ಭಾವುಕರಾಗಿದ್ದಾರೆ.

    ಬಿ.ಸರೋಜಾದೇವಿಯವರ ಅಂತಿಮ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಭಾರತ ದೇಶದಲ್ಲಿ ಅತ್ಯಂತ ಪ್ರಬುದ್ಧವಾದಂತಹ, ದಕ್ಷಿಣದ ಧ್ರುವ ತಾರೆಯೆಂದೇ ಪ್ರಸಿದ್ಧಿಯಾಗಿದ್ದ ಮೇರು ನಟಿ ಇಂದು ನಮ್ಮ ಜೊತೆಗಿಲ್ಲ ಎನ್ನುವುದು ತುಂಬಾ ದುಃಖದ ಸಂಗತಿ. ಅವರು ವೈಯಕ್ತಿಕ ಜೀವನ, ವೃತ್ತಿ ಜೀವನ, ಅವರು ನಡೆದು ಬಂದ ರೀತಿ ಮುಂದಿನ ಎಲ್ಲ ಪೀಳಿಗೆಗೂ ಮಾದರಿ. ಹೇಗೆ ಶಿಸ್ತುಬದ್ದವಾಗಿ ಇರಬೇಕು ಎನ್ನುವುದು ಸರೋಜಮ್ಮನನ್ನು ನೋಡಿ ಕಲಿಬೇಕು ಎಂದರು.ಇದನ್ನೂ ಓದಿ: ಕೋಲಾರ | KSRTC ನೌಕರ ಹೃದಯಾಘಾತದಿಂದ ಸಾವು

    ಬಣ್ಣದ ಜಗತ್ತಿಗೆ ಕಾಲಿಟ್ಟು ಸುಮಾರು 70 ವರ್ಷಗಳಾಗಿದೆ. 2019ರ ತೆರೆಕಂಡ ನಟ ಸಾರ್ವಭೌಮ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಅವರ ರೀತಿಯ ಸಾಧನೆ ಯಾರಿಗೂ ಮಾಡೋಕೆ ಆಗಲ್ಲ. ಹಿರಿಯ ಜೀವ, ನಮ್ಮ ಜೊತೆ ಇರಬೇಕಿತ್ತು. ಆದರೆ ಕಳ್ಕೊಂಡಿದ್ದೇವೆ. ಕನ್ನಡ ಚಿತ್ರರಂಗ ಹಿರಿಯರಿಲ್ಲದ ಮನೆಯಾಗುತ್ತಿದೆ. ಭಾರತ ದೇಶದ ಪ್ರತಿಯೊಂದು ಭಾಷೆಯವರು ಗೌರವದಿಂದ ಕಾಣುತ್ತಿದ್ದ ಖ್ಯಾತ ಕಲಾವಿದೆ ಸರೋಜಾದೇವಿಯವರು.

    ನಮ್ಮ ಕನ್ನಡ ಚಿತ್ರರಂಗದಲ್ಲಿ ಪದ್ಮಭೂಷಣ, ಪದ್ಮವಿಭೂಷಣ, ಬೇರೆ ಬೇರೆ ರಾಜ್ಯಗಳ ಪ್ರಶಸ್ತಿ, ಡಾಕ್ಟರೇಟ್ ಹಾಗೂ ಇತರೇ ಸಾಧನೆಗಳನ್ನು ಮಾಡಿದವರಲ್ಲಿ ನನಗೆ ಗೊತ್ತಿರುವವರು ಇವರೇ ಮೊದಲಿಗರು ಅನಿಸುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಕುಟುಂಬಸ್ಥರಿಗೆ, ಎಲ್ಲರಿಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪಾರ್ಥಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿ 62.6 ಕೋಟಿ ಮೌಲ್ಯದ ಕೊಕೇನ್ ವಶಕ್ಕೆ – ಭಾರತೀಯ ಮಹಿಳೆ ಅರೆಸ್ಟ್

  • ದುನಿಯಾ ವಿಜಯ್ ನಿರ್ದೇಶನದ ಸಿನಿಮಾದಲ್ಲಿ ಉಮಾಶ್ರೀ

    ದುನಿಯಾ ವಿಜಯ್ ನಿರ್ದೇಶನದ ಸಿನಿಮಾದಲ್ಲಿ ಉಮಾಶ್ರೀ

    ದುನಿಯಾ ವಿಜಯ್ (Duniya Vijay) ಅವರು ಸದ್ಯ ನಟನೆ ಮತ್ತು ನಿರ್ದೇಶನ ಎರಡರಲ್ಲೂ ತೊಡಗಿಸಿಕೊಂಡಿದ್ದಾರೆ. ಮಗಳು ಮೋನಿಷಾ ನಟನೆಯ ‘ಸಿಟಿ ಲೈಟ್ಸ್’ (City Lights) ಸಿನಿಮಾಗೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಹೀಗಿರುವಾಗ ಈ ಚಿತ್ರತಂಡಕ್ಕೆ ಹಿರಿಯ ನಟಿ ಉಮಾಶ್ರೀ ಸೇರಿಕೊಂಡಿದ್ದಾರೆ. ಇದನ್ನೂ ಓದಿ:ಅಂದು ಹೈದರಾಬಾದ್‌ನವಳು, ಇಂದು ಕರ್ನಾಟಕ: ರಶ್ಮಿಕಾ ಮಂದಣ್ಣ ಹೇಳಿಕೆ ವೈರಲ್

    ನಟಿ ಉಮಾಶ್ರೀಗೆ ವಿಜಯ್‌ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ. ವಿಭಿನ್ನ ಕಥೆ ಹೇಳಲು ಹೊರಟಿರುವ ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರಕ್ಕೆ ಉಮಾಶ್ರೀ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪವರ್‌ಫುಲ್ ಪಾತ್ರದಲ್ಲಿ ಅವರು ಕಾಣಿಸಿಕೊಳ್ತಿದ್ದಾರೆ. ಇದನ್ನೂ ಓದಿ: ನನ್ನ ಕೈಲಾದಷ್ಟು ಸಹಾಯ ಮಾಡಿದ್ದೀನಿ, ನೀವು ಕೈಜೋಡಿಸಿ- ಅಭಿಮಾನಿಗಳಿಗೆ ಕಿಚ್ಚ ಮನವಿ

    ಚಿತ್ರದ ನಾಯಕನಾಗಿ ವಿನಯ್ ರಾಜ್‌ಕುಮಾರ್ ಕಾಣಿಸಿಕೊಳ್ತಿದ್ರೆ, ನಾಯಕಿಯಾಗಿ ಮೋನಿಷಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ವಿಜಯ್ ಅವರು ವಿಶೇಷ ಸಮುದಾಯದ ಕಥೆಯೊಂದನ್ನು ಹೇಳಲು ಹೊರಟಿದ್ದಾರೆ.

    ಲ್ಯಾಂಡ್‌ಲಾರ್ಡ್, ತಮಿಳಿನ ನಟಿ ನಯನತಾರಾ (Nayanthara) ಜೊತೆಗಿನ ಸಿನಿಮಾ, ‘ಸಿಟಿ ಲೈಟ್ಸ್’ ಚಿತ್ರ ನಿರ್ದೇಶನ ಮಾಡುವುದರ ಜೊತೆಗೆ ಹಲವು ಚಿತ್ರಗಳು ವಿಜಯ್ ಕೈಯಲ್ಲಿದೆ.

  • ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಕ್ಕೆ 5 ಲಕ್ಷ ಪರಿಹಾರ ಯೋಜನೆ ಘೋಷಣೆ ಮಾಡಿ: ಉಮಾಶ್ರೀ

    ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಕ್ಕೆ 5 ಲಕ್ಷ ಪರಿಹಾರ ಯೋಜನೆ ಘೋಷಣೆ ಮಾಡಿ: ಉಮಾಶ್ರೀ

    ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ಕೈಮಗ್ಗ ನೇಕಾರರಿಗೆ 5 ಲಕ್ಷ ಪರಿಹಾರ ಕೊಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡೋದಾಗಿ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಉಮಾಶ್ರೀ ಪ್ರಶ್ನೆ ಕೇಳಿದ್ರು. ಸಂಕಷ್ಟಕ್ಕೆ ಸಿಲುಕಿರೋ ನೇಕಾರರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ ಪರಿಹಾರ ಕೊಡುವ ಕೆಲಸ ಸರ್ಕಾರ ಮಾಡಬೇಕು. ಬರ, ಕೋವಿಡ್, ಮೈಕ್ರೋ ಫೈನಾನ್ಸ್ ಸೇರಿ ಹಲವು ಸಮಸ್ಯೆಯಿಂದ ನೇಕಾರರು ಆತ್ಮಹತ್ಯೆ ಮಾಡಿಕೊಳ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರ ಹೆಂಡತಿಗೆ ಪಿಂಚಣಿ ಕೊಡಿ. ಅವರ ಮಕ್ಕಳಿಗೆ ಉಚಿತ ಶಿಕ್ಷಣ ‌ನೀಡಬೇಕು. ನೇಕಾರರು ಆತ್ಮಹತ್ಯೆ ಮಾಡಿಕೊಂಡರೆ ಅವರಿಗೆ ಪರಿಹಾರ ಕೊಡಲು ಪರಿಹಾರ ನಿಧಿ ಪ್ರಾರಂಭ ಮಾಡಬೇಕು ಅಂತ ಒತ್ತಾಯ ಮಾಡಿದ್ರು.

    ಇದಕ್ಕೆ ಸಚಿವ ಶಿವಾನಂದ ಪಾಟೀಲ್ ಉತ್ತರ ನೀಡಿ, 5 ವರ್ಷಗಳಲ್ಲಿ 51 ಜನ ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ ಪರಿಹಾರ ನೀಡಲು ಯಾವುದೇ ಯೋಜನೆ ಇಲ್ಲ. ಅದಾಗ್ಯೂ 2020-21, 2021-22 ರಲ್ಲಿ 25 ರೈತರಿಗೆ ಸಿಎಂ ಪರಿಹಾರ ನಿಧಿಯಿಂದ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ನೇಕಾರ ಪತ್ನಿಗೆ ಪಿಂಚಣಿ ನೀಡುವ, ಅವರ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ ನೀಡುವ ಯೋಜನೆ ಇಲ್ಲ. ಕೋವಿಡ್ ಸಮಯದಲ್ಲಿ ಮೃತರಾದ ನೇಕಾರರಿಗೆ ಪರಿಹಾರ ಕೊಡುವ ಕೆಲಸ ಆಯ್ತು. ಆತ್ಮಹತ್ಯೆ ಮಾಡಿಕೊಂಡ 25 ಜನರಿಗೆ ಮಾತ್ರ ಪರಿಹಾರ ಕೊಡಲಾಗಿತ್ತು. ಉಳಿದವರಿಗೆ ಸಿಎಂ ಅವರು ಪರಿಹಾರ ನೀಡುವ ಕೆಲಸ ಮಾಡ್ತಿದ್ದೇವೆ ಅಂತ‌ ತಿಳಿಸಿದರು.

    ಕೈಮಗ್ಗ ನೇಕಾರರು ಮೃತರಾದರೆ 5 ಲಕ್ಷ ಕೊಡುವ ಯೋಜನೆ ಪರಿಶೀಲನೆ ಹಂತದಲ್ಲಿ ಇದೆ. ಕೇಂದ್ರದ ಪಿಎಂ ಯೋಜನೆ ಅಡಿ 439 ರೂಪಾಯಿ ಪ್ರಿಮಿಯಂ ಕಟ್ಟಿದರೆ ಅವರು 2 ಲಕ್ಷ ಕೊಡ್ತಾರೆ. ಉಳಿದ 3 ಲಕ್ಷ ರಾಜ್ಯ ಸರ್ಕಾರ ಸಿಎಂ ನಿಧಿಯಿಂದ ಕೊಡುವ ಕೆಲಸ ಮಾಡ್ತೀವಿ. ಕೈಮಗ್ಗ ನೇಕಾರರು ಆತ್ಮಹತ್ಯೆ ಮಾಡಿಕೊಂಡರೆ 5 ಲಕ್ಷ ಪರಿಹಾರ ಯೋಜನೆ ಸಿಎಂ ಜೊತೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ತೀವಿ ಅಂತ ತಿಳಿಸಿದರು.

  • ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ, ಎಷ್ಟು ಏರಿಕೆ ಅಂತ ಸಿಎಂ ಜೊತೆ ಚರ್ಚೆ – ವೆಂಕಟೇಶ್

    ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ, ಎಷ್ಟು ಏರಿಕೆ ಅಂತ ಸಿಎಂ ಜೊತೆ ಚರ್ಚೆ – ವೆಂಕಟೇಶ್

    ಬೆಂಗಳೂರು: ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಎಷ್ಟು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುವುದಾಗಿ ಪಶುಸಂಗೋಪನೆ c (Venkatesh) ತಿಳಿಸಿದ್ದಾರೆ.ಇದನ್ನೂ ಓದಿ: ಅರಣ್ಯ ಭೂಮಿಯಲ್ಲಿ ಶೂಟಿಂಗ್ ನಡೆಸಿತ್ತಾ ತರುಣ್ ಸುಧೀರ್ ಚಿತ್ರತಂಡ?- ಅರಣ್ಯಾಧಿಕಾರಿ ಹೇಳೋದೇನು?

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎಂಜಿ ಮೂಳೆ, ಕಾಂಗ್ರೆಸ್‌ನ ಉಮಾಶ್ರೀ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಹಾಲು ಉತ್ಪಾದಕರಿಗೆ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿದುಕೊಂಡಿದೆ. 9,04,547 ಫಲಾನುಭವಿಗಳಿಗೆ ಬಾಕಿ ಹಣ ಕೊಡಬೇಕಾಗಿದೆ. ಇದರಲ್ಲಿ ಸಾಮಾನ್ಯ ವರ್ಗಕ್ಕೆ 613.58 ಕೋಟಿ ರೂ., ಪರಿಶಿಷ್ಟ ಜಾತಿಯವರಿಗೆ 18.29 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡಕ್ಕೆ 24.20 ಕೋಟಿ ರೂ. ಬಾಕಿಯಿದೆ ಎಂದು ಮಾಹಿತಿ ನೀಡಿದರು.

    ಬಾಕಿ ಹಣ ಬಿಡುಗಡೆಗೆ ಆರ್ಥಿಕ ಇಲಾಖೆಗೆ ಕೇಳಿದ್ದೇವೆ. ಆರ್ಥಿಕ ಇಲಾಖೆ ಬಿಡುಗಡೆ ಮಾಡಿದ ಕೂಡಲೇ ಬಾಕಿ ಹಣ ಬಿಡುಗಡೆ ಮಾಡ್ತೀವಿ. ಹಾಲಿನ ಉತ್ಪಾದನೆ ಜಾಸ್ತಿ ಆಗಿದೆ. ಬಜೆಟ್ ಅಲೋಕೇಷನ್ ಅದರಂತೆ ಕೊಡ್ತಿಲ್ಲ. ಹೀಗಾಗಿ ಬಾಕಿ ಉಳಿದಿದೆ. ಸಿಎಂ ಅವರಿಗೆ ಬಾಕಿ ಹಣ ಬಿಡುಗಡೆಗೆ ಮನವಿ ಮಾಡಿದ್ದೇನೆ. ಆದಷ್ಟು ಶೀಘ್ರವೇ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಇನ್ನೂ ಹಾಲಿನ ದರ ಏರಿಕೆಗೆ ರೈತರ ಬೇಡಿಕೆಯಿದ್ದು, 10 ರೂ. ಜಾಸ್ತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿನ ದರ ಏರಿಕೆ ಮಾಡೇ ಮಾಡ್ತೀವಿ. ಎಷ್ಟು ಅಂತ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ವಿವರಿಸಿದರು.ಇದನ್ನೂ ಓದಿ: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಮರು ಜಾರಿ ಮಾಡಿ: ಯತೀಂದ್ರ

  • `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    `ಪುಟ್ಟಕ್ಕ’ ಉಮಾಶ್ರೀ ಹೋರಾಟಕ್ಕೆ ನಟ ರವಿಚಂದ್ರನ್ ಸಾಥ್

    ಜೀ಼ ಕನ್ನಡ ವಾಹಿನಿಯಲ್ಲಿ ಸಂಜೆ 6-30 ಕ್ಕೆ ಪ್ರಸಾರವಾಗುವ ಅತ್ಯಂತ ಯಶಸ್ವಿ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ (Puttakkana Makkalu). ಪ್ರಸಾರದ ಮೊದಲ ವಾರದಲ್ಲಿ ಅತೀ ಹೆಚ್ಚು ಕನ್ನಡಿಗರ ಮನಸುಗಳನ್ನ ಗೆದ್ದ ಖ್ಯಾತಿ ಈ ಧಾರಾವಾಹಿಯದು. ಇದೀಗ 900 ಸಂಚಿಕೆಗಳನ್ನು ಪೂರೈಸಿ ಸಾವಿರ ಸಂಚಿಕೆಗಳತ್ತ ಹೆಜ್ಜೆ ಇಡುತ್ತಿದ್ದರೂ ತನ್ನ ಜನಪ್ರಿಯತೆಯನ್ನು ಕಳೆದುಕೊಳ್ಳದೆ ಮುನ್ನುಗ್ಗುತ್ತಿದೆ. ಈ ಸಮಯದಲ್ಲಿ ನಟ ರವಿಚಂದ್ರನ್ ಧಾರಾವಾಹಿಗೆ ಎಂಟ್ರಿ ಕೊಟ್ಟು ಕುತೂಹಲ ಮೂಡಿಸಿದ್ದಾರೆ.

    ‘ಹೆಣ್ಣು ಮಕ್ಕಳ ಹೆತ್ತೋರು ಎಲ್ಲ ದೇವರಿಗು ದೊಡ್ಡೋರು’ ಅನ್ನುವ ಈ ಧಾರಾವಾಹಿಯ ಹಾಡಿನ ಸಾಲು ಪುಟ್ಟಕ್ಕನ ಕತೆಯ ಸಾರವನ್ನು ತೋರಿಸುತ್ತದೆ. ಗಂಡು ಮಗು ಆಗಿಲ್ಲ ಅನ್ನುವ ಕಾರಣಕ್ಕೆ ಗಂಡ ಗೋಪಾಲ ಪುಟ್ಟಕ್ಕನನ್ನು ಬಿಟ್ಟು ಹೋಗುತ್ತಾನೆ. ತಂದೆ ಇಲ್ಲದೆ ತಬ್ಬಲಿಯಾದ ಮೂರು ಹೆಣ್ಣು ಮಕ್ಕಳನ್ನು ಹೆಗಲಿಗೆ ಕಟ್ಟಿಕೊಂಡು, ಅವರಿಗೆ ಬದುಕಿನ ದಾರಿ ತೋರಿಸಲು ಹೋರಾಡುವ ದಿಟ್ಟ ಮಹಿಳೆಯ ಕಥೆಯೇ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ.

    ಧಾರಾವಾಹಿಯ ಮುಖ್ಯ ಪಾತ್ರವಾದ ‘ಪುಟ್ಟಕ್ಕ’ನ ಪಾತ್ರವನ್ನು ಕನ್ನಡದ ಖ್ಯಾತ ನಟಿ ಉಮಾಶ್ರೀ (Umashree) ಮಾಡುತ್ತಿದ್ದಾರೆ. ಪುಟ್ಟಕ್ಕನಿಗೆ ಜೊತೆಯಾಗಿ ನಿಂತವರು ಮಗಳು ಸಹನಾ, ಸ್ನೇಹಾ, ಸುಮಾ. ಗೆಳತಿ ಬಂಗಾರಮ್ಮ. ಅಳಿಯ ಕಂಠಿ ಮತ್ತಿತರ ಪಾತ್ರ. ಇದೀಗ ಈ ಧಾರಾವಾಹಿ ಮಹತ್ತರ ಘಟ್ಟದಲ್ಲಿ ಬಂದು ನಿಂತಿದೆ. ತನ್ನ ಆಸೆ, ಕನಸಿನಂತೆ ಜಿಲ್ಲಾಧಿಕಾರಿ ಆಗಿದ್ದ ಸ್ನೇಹಾ, ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ದಳು. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಆಗಿದ್ದ ಅವಳ ಮೇಲೆ ನಿಧನದ ಬಳಿಕವೂ ಅವ್ಯವಹಾರದ ಆರೋಪ ಬಂದಿದ್ದು, ಮಗಳ ಪರವಾಗಿ ಪುಟ್ಟಕ್ಕ ಹೋರಾಟಕ್ಕೆ ಮುಂದಾಗಿದ್ದಾಳೆ.

    ಮಗಳು ಸ್ನೇಹಾ ಮೇಲಿನ ಸುಳ್ಳು ಆರೋಪಕ್ಕೆ ಪ್ರತಿಯಾಗಿ ಪಾದಯಾತ್ರೆ ಮಾಡುತ್ತಿದ್ದು, ನ್ಯಾಯಕ್ಕಾಗಿ ಹಂಬಲಿಸುತ್ತಿದ್ದಾಳೆ. ಮಗಳಿಗೆ ಅಂಟಿದ ಕಳಂಕ ತೊಳೆಯುವ ಈ ಕಾರ್ಯಕ್ಕೆ ಯಾರಿಂದಲೂ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ. ಹೀಗೆ ಬೇಸತ್ತಿರುವ ಪುಟ್ಟಕ್ಕನಿಗೆ ಸಾಥ್ ಕೊಡಲು ‘ಕ್ರೇಜಿ ಸ್ಟಾರ್ ರವಿಚಂದ್ರನ್’ ಮುಂದಾಗಿದ್ದಾರೆ. ಜಸ್ಟಿಸ್ ಫಾರ್ ಸ್ನೇಹಾ ಹೋರಾಟಕ್ಕೆ ಪುಟ್ನಂಜ ಕೈ ಜೋಡಿಸಿದ್ದಾರೆ.

    ಪುಟ್ನಂಜ ಸಿನಿಮಾದಲ್ಲಿ ಮೊಡಿ ಮಾಡಿದ್ದ ಉಮಾಶ್ರೀ ಮತ್ತು ರವಿಚಂದ್ರನ್ (Ravichandran), ಇದೀಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಒಂದಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರವಿಚಂದ್ರನ್ ಅವರಿಂದ ಪುಟ್ಟಕ್ಕನ ಹೋರಾಟಕ್ಕೆ ನ್ಯಾಯ ಸಿಗುತ್ತಾ? ಮಗಳಿಗೆ ಅಂಟಿದ ಕಳಂಕ ಹೋಗುತ್ತಾ?  ಅನ್ನೋದನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ.

  • ಹೊನ್ನಾವರದಲ್ಲಿ ಯಕ್ಷಗಾನದ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ ನಟಿ ಉಮಾಶ್ರೀ

    ಹೊನ್ನಾವರದಲ್ಲಿ ಯಕ್ಷಗಾನದ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ ನಟಿ ಉಮಾಶ್ರೀ

    ಕಾರವಾರ: ಖ್ಯಾತ ಸಿನಿಮಾ ತಾರೆ, ಮಾಜಿ ಸಚಿವ ಉಮಾಶ್ರೀ (Umashree) ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೊದಲ ಬಾರಿ ಯಕ್ಷಗಾನದ ಮೂಲಕ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಲಿದ್ದಾರೆ.

    ಕನ್ನಡ ಸಿನಿಮಾ ರಂಗದಲ್ಲಿ 125 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಲ್ಲದೇ ನಾಟಕ ರಂಗದಲ್ಲಿ ನಟಿಸಿ ಹೆಸರುಗಳಿಸಿರುವ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಲಿದ್ದಾರೆ.

    ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯ ಶ್ರೀರಾಮ ಪಟ್ಟಾಭಿಷೇಕ, ಮಾಯಮೃಗಾವತಿ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಈ ಯಕ್ಷಗಾನದಲ್ಲಿ ನಟಿ ಉಮಾಶ್ರೀ ಅವರು ಮಂಥರೆಯಾಗಿ ಕಾಣಿಸಿಕೊಳ್ಳಲಿದ್ದಾರೆ‌.

    ಇವರೊಂದಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕಾರ್ತಿಕ್ ಚಿಟ್ಟಾಣಿ, ಉದಯ್ ಹೆಗಡೆ, ಅಪ್ಟಣ್ಣ ಗೌಡ ಮಾಗೋಡು ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಭಾಗಿಯಾಗಲಿದ್ದಾರೆ.

    ಯಾರೀ ಮಂಥರೆ?
    ಮಂಥರ ರಾಮಾಯಣದ ಒಂದು ವಿಶೇಷ ಪಾತ್ರ. ರಾಮಾಯಣದಲ್ಲಿ ಅವಳನ್ನು ಕುರೂಪಿಯಂತೆ ವರ್ಣಿಸಲಾಗಿದೆ. ಅವಿವಾಹಿತೆಯಾದ ಅವಳು ಕೈಕೇಯಿಯ ನಂಬಿಗಸ್ತ ಸೇವಕಿ, ಸಖಿ. ರಾಮಾಯಣ ಮಹಾಕಾವ್ಯದಲ್ಲಿ, ಅಯೋಧ್ಯೆಯ ಸಿಂಹಾಸನವು ತನ್ನ ಮಗ ಭರತನಿಗೆ ಸೇರಿದ್ದು ಮತ್ತು ರಾಮನನ್ನು ರಾಜ್ಯದಿಂದ ಗಡಿಪಾರು ಮಾಡಬೇಕೆಂದು ರಾಣಿ ಕೈಕೇಯಿಗೆ ಮನವರಿಕೆ ಮಾಡಿಕೊಟ್ಟಳು ಈ ಮಂಥರೆ. ಕೈಕೇಯಿಯ ತಾಯಿಯನ್ನು ಹೊರಹಾಕಿದ ನಂತರ ಕೈಕೇಯಿ ಮತ್ತು ಅವಳ ಅವಳಿ ಯುಧಜಿತ್‍ಗೆ ಸಾಕು ತಾಯಿಯಾಗಿ ಅವಳನ್ನು ಚಿತ್ರಿಸಲಾಗಿದೆ. ಕೈಕೇಯಿ ದಶರಥನನ್ನು ಮದುವೆಯಾದ ನಂತರ ಅವಳು ಕೈಕೇಯಿಯೊಂದಿಗೆ ಅಯೋಧ್ಯೆಗೆ ಹೋದಳು. ರಾಮಾಯಣ ಕಥನಕ್ಕೆ ಈಕೆ ಮುಖ್ಯ ಪಾತ್ರಧಾರಿ.

    ಯಕ್ಷಗಾನದಲ್ಲಿ ಮಂಥರೆ ಪಾತ್ರವನ್ನು ಹೆಚ್ಚಾಗಿ ಪುರುಷರೇ ಮಾಡುತ್ತಾರೆ. ನವರಸವನ್ನು ಹೊಂದಿದ ಈ ಪಾತ್ರ ಯಕ್ಷ ರಾಮಾಯಣದಲ್ಲಿ ಪ್ರಮುಖ ಪಾತ್ರವೂ ಹೌದು‌. ಇತ್ತೀಚಿನ ದಿನದಲ್ಲಿ ಯಕ್ಷಗಾನ ತನ್ನ ಹೊಸತನಕ್ಕೆ ಬೆಸೆದುಕೊಳ್ಳುತ್ತಿದ್ದು, ಪುರಷರಿಗೆ ಸೀಮಿತವಾಗಿದ್ದ ಗಂಡು ಕಲೆಯನ್ನು ಇದೀಗ ಮಹಿಳೆಯರು ಸಹ ಮಾಡುತ್ತಿದ್ದಾರೆ. ಮೊದಲ ಬಾರಿ ಯಕ್ಷ ಲೋಕಕ್ಕೆ ಉಮಾಶ್ರೀ ಪಾದಾರ್ಪಣೆ ಹೊಸ ಹುಮ್ಮಸ್ಸು ತರಿಸಿದೆ.

  • ಲಕ್ಷ್ಮಿ ಹೆಬ್ಬಾಳ್ಕರ್, ಸಿಟಿ ರವಿ ಗಲಾಟೆ ಪ್ರಕರಣ – ಸಿಐಡಿ ಮುಂದೆ ಸಾಕ್ಷ್ಯ ನುಡಿದ ಎಂಎಲ್‌ಸಿ ಉಮಾಶ್ರೀ

    ಲಕ್ಷ್ಮಿ ಹೆಬ್ಬಾಳ್ಕರ್, ಸಿಟಿ ರವಿ ಗಲಾಟೆ ಪ್ರಕರಣ – ಸಿಐಡಿ ಮುಂದೆ ಸಾಕ್ಷ್ಯ ನುಡಿದ ಎಂಎಲ್‌ಸಿ ಉಮಾಶ್ರೀ

    ಬೆಂಗಳೂರು: ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ಸಿ.ಟಿ ರವಿ (CT Ravi) ಮಧ್ಯೆ ಬೆಳಗಾವಿ ಅಧಿವೇಶನದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮುಂದೆ ಎಂಎಲ್‌ಸಿ ಉಮಾಶ್ರೀ (Umashree) ಸಾಕ್ಷ್ಯ ನುಡಿದಿದ್ದಾರೆ.

    ಗಲಾಟೆ ಸಂದರ್ಭದಲ್ಲಿ ಉಮಾಶ್ರೀ ಸದನದ ಒಳಗೆ ಇದ್ದರು. ಹೀಗಾಗಿ ಇಂದು (ಜ.16) ಉಮಾಶ್ರೀ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣ – ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಅಂದರ್‌?

    ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ಸಿಐಡಿ ನೋಟಿಸ್ ನೀಡಲಾಗಿದೆ. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ (Belagavi Winter Session) ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಚಿತ್ರವಿಚಿತ್ರ ಸನ್ನಿವೇಶ – 9 ವರ್ಷದಿಂದ ಸಾಧು ತಲೆಯ ಮೇಲೆ ಕುಳಿತ ಪಾರಿವಾಳ!

    ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್‌ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ (ಜ.17) ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ ಕೇಸ್‌ – 1 ಕೋಟಿಗೆ ಬೇಡಿಕೆಯಿಟ್ಟಿದ್ದ ಹಂತಕನ ಫೋಟೋ ಬಹಿರಂಗ

  • ಸೂಲಗಿತ್ತಿಯ ಕಥಾನಕ ‘ತಾಯವ್ವ’ ಶೀರ್ಷಿಕೆ ಅನಾವರಣ

    ಸೂಲಗಿತ್ತಿಯ ಕಥಾನಕ ‘ತಾಯವ್ವ’ ಶೀರ್ಷಿಕೆ ಅನಾವರಣ

    ನ್ನಡ ಚಿತ್ರರಂಗದಲ್ಲೀಗ ಕಮರ್ಷಿಯಲ್ ಸಿನಿಮಾಗಳ ಅಬ್ಬರದ ನಡುವೆಯೇ ಒಳ್ಳೊಳ್ಳೆಯ ಕಂಟೆಂಟ್ ಸಿನಿಮಾಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ. ಈ ಸಾಲಿಗೀಗ ಹೊಸ ಸೇರ್ಪಡೆ ತಾಯವ್ವ. ಸೂಲಗಿತ್ತಿ ಸುತ್ತ ಸಾಗುವ ಕಥೆಯಾಗಿರುವ ‘ತಾಯವ್ವ’ನಿಗೆ (Thayavva Film) ವಿಪಕ್ಷ ನಾಯಕ ಆರ್.ಅಶೋಕ್ (R. Ashok) ಹಾಗೂ ಹಿರಿಯ ನಟಿ ಉಮಾಶ್ರೀ (Umashree) ಸಾಥ್ ಕೊಟ್ಟಿದ್ದಾರೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ತಾಯವ್ವ ಟೈಟಲ್ ಲಾಂಚ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಆರ್.ಅಶೋಕ್ ಹಾಗೂ ಉಮಾಶ್ರೀ ಟೈಟಲ್ ಲಾಂಚ್ ಮಾಡಿ ಹೊಸತಂಡಕ್ಕೆ ಬೆಂಬಲ ಕೊಟ್ಟರು.

    ಇದೇ ವೇಳೆ ಆರ್.ಅಶೋಕ್ ಮಾತನಾಡಿ, ತಾಯವ್ವ ಮನಸ್ಸಿಗೆ ಮುಟ್ಟು ಪದ. ತಾಯಿ ಅನ್ನೋ ಪದವೇ ಹಾಗೇ. ವಿಶೇಷವಾಗಿ ಹೆಣ್ಣು ಮಕ್ಕಳ ಬಗ್ಗೆ ತಯಾರಾಗಿರುವ ಸಿನಿಮಾ ಇದು. ಮಕ್ಕಳನ್ನು ಹೊರಲು ತಾಯಿಬೇಕು. ಹೆಂಡ್ತಿಯಾಗಿ ನಮ್ಮ ಎಲ್ಲಾ ಕಷ್ಟ ಸುಖಗಳಲ್ಲಿ ನಿಲ್ಲಲು ಹೆಣ್ಣು ಬೇಕು. ಆದರೆ ಮಗಳಾಗಿ ಬೇಡ ಅನ್ನುವುದು ಬಂದಿದೆ. ನಾನು ಮಂಡ್ಯದ ಸಾಕಷ್ಟು ಕಡೆ ಹೋಗಿದ್ದೆ. ಅಲ್ಲೊಂದು ಅಲೆಮನೆಯಲ್ಲಿ ಲ್ಯಾಪ್ ಟಪ್ ಇಟ್ಕೊಂಡು ಅಲ್ಲೇ ಪರೀಕ್ಷೆ ಮಾಡಿ ಹೆಣ್ಣು ಅಂತಾ ಹೇಳಿದ್ರೆ ಅಲ್ಲೇ ಅಬಾಷನ್ ಮಾಡುವುದು. ಕದ್ದು ಮುಚ್ಚಿ ಹೆಣ್ಣು ಮಗುವನ್ನು ಕೊಲೆ ಮಾಡುವಂತಹದ್ದು. ಈ ತರದ ಘಟನೆ ಒಂದಲ್ಲ ಲಕ್ಷಾಂತರ ಆಗಿದೆ. ಈಗ ಬರುತ್ತಾ ಬರುತ್ತಾ ಜನಕ್ಕೆ ಒಂದು ಜಾಗೃತಿ ಬಂದಿದೆ. ಜನ ಗಂಡು ಹೆಣ್ಣು ಎರಡನ್ನು ಸ್ವೀಕಾರ ಮಾಡುವ ಮನಸ್ಸು ಬಂದಿದೆ. ಹೆಣ್ಣು ವಿಚಾರ ಬಂದಾಗ ತಾಯಿ ಭಾವನೆ ಇವೆಲ್ಲಾ ಪ್ರಮುಖವಾಗುತ್ತದೆ. ಈ ದೃಷ್ಟಿಯಿಂದ ‘ತಾಯವ್ವ’ ಸಿನಿಮಾ ಮೂಡಿ ಬಂದಿದೆ. ಟೈಟಲ್ ಸಾಂಗ್ ಬಿಡುಗಡೆ ಮಾಡಲಾಗಿದೆ. ಜನರನ್ನು ಮುಟ್ಟುವಂತ ಸಿನಿಮಾ ಆಗಿ ಹೊರಹೊಮ್ಮಲಿ ಎಂದು ಶುಭ ಹಾರೈಸಿದರು.

    ಹಿರಿಯ ನಟಿ ಉಮಾಶ್ರೀ ಮಾತನಾಡಿ, ಸುದೀಪ್ ಮೊದಲ ಸಿನಿಮಾ ‘ತಾಯವ್ವ’ ಅನ್ನೋ ಟೈಟಲ್ ಮೇಲೆಯೇ ಆಗಿದೆ. ನಾನು ಆ ಚಿತ್ರದಲ್ಲಿ ಅಜ್ಜಿ ಅಥವಾ ತಾಯಿ ಪಾತ್ರ ಮಾಡಿದ್ದೆ. ಅದೇ ಟೈಟಲ್ ಈಗ ಕನ್ನಡ ಚಿತ್ರರಂಗದಲ್ಲಿ ರೀಪೀಟ್ ಆಗ್ತಿದೆ. ಭಾ.ಮ ಹರೀಶ್ ಬಹಳ ಒಳ್ಳೆಯ ಪ್ರಯತ್ನ ಮಾಡಿದ್ದಾರೆ. ಮಕ್ಕಳು, ಮಹಿಳೆಯರಿಗಾಗಿ ಮಾಡುತ್ತಿರುವ ಪ್ರಯತ್ನ. ವಿಧಾನಸಭೆಗಳಲ್ಲಿ ಮಾತನಾಡುತ್ತೇವೆ ಹೆಣ್ಣು ಭ್ರೂಣ ಹತ್ಯೆ, ಸಮಾಜದಲ್ಲಿರುವ ಮನಸ್ಥಿತಿ ಬಗ್ಗೆ ಮಾತನಾಡುತ್ತೇನೆ. ಸಮಾಜಕ್ಕೆ ಅರಿವು ಮೂಡಿಸುವಂತಹ ಇಂತಹ ಸಿನಿಮಾಗಳು ಬಹಳ ಮುಖ್ಯವಾಗುತ್ತವೆ. ಇಂತಹ ಸ್ಪರ್ಧಾತ್ಮಕ ಜಗತ್ತಿನಲ್ಲಿ ಈ ರೀತಿ ಸಿನಿಮಾಗಳನ್ನು ಕಮರ್ಷಿಟಲ್ ವಿಧಾನದಲ್ಲಿ ಮಾಡುವುದು ಕಷ್ಟ ಎಂದು ಅನಿಸುತ್ತದೆ. ಆದರೆ ಅದರ ಉದ್ದೇಶ ಒಳ್ಳೆಯದು ಇದೆಯಲ್ಲಾ. ಹೀಗಾಗಿ ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

    ‘ತಾಯವ್ವ’ ಸಿನಿಮಾವನ್ನು ನಂದಿ ಪ್ರಶಸ್ತಿ ಸಂಸ್ಥಾಪಕಿಯಾಗಿರುವ ಎಸ್.ಪದ್ಮಾವತಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದು, ತಮ್ಮ ಚೊಚ್ಚಲ ಪ್ರಯತ್ನದಲ್ಲಿಯೇ ಕಂಟೆಂಟ್ ಸಿನಿಮಾವನ್ನು ನಿರ್ಮಿಸಿದ್ದು, ಅದನ್ನು ಕನ್ನಡ ಪ್ರೇಕ್ಷಕರಿಗೆ ಸಮರ್ಪಿಸುವ ಖುಷಿ ಅವರಿಗಿದೆ. ಸಾತ್ವಿಕ್ ಪವನ್ ಕುಮಾರ್ ನಿರ್ದೇಶನದ ಜೊತೆಗೆ ಛಾಯಾಗ್ರಹಣ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಪಿ.ಶೇಷಗಿರಿ ಕಥೆ ಚಿತ್ರಕಥೆ ಸಂಭಾಷಣೆ ಬರೆದಿರುವ ತಾಯವ್ವನಿಗೆ ಅನಂತ್ ಆರ್ಯನ್ ಸಂಗೀತ ಸಂಯೋಜಿಸಿದ್ದಾರೆ. ‘ತಾಯವ್ವ’ ಚಿತ್ರದ ಮೂಲಕ ಗೀತಪ್ರಿಯ ಚಿತ್ರರಂಗ ಪರಿಯಚವಾಗುತ್ತಿದ್ದು, ಬಂಡೇ ಮಹಾಕಾಳಿ ದೇಗುಲದ ಲತಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಬಹುತೇಕ ರಂಗಭೂಮಿ ಕಲಾವಿದರು ನಟಿಸಿದ್ದಾರೆ. ನಿರ್ಮಾಪಕ ಭಾ.ಮ.ಹರೀಶ್ ಈ ಚಿತ್ರವನ್ನು ಅರ್ಪಿಸುತ್ತಿದ್ದು, ಶೂಟಿಂಗ್ ಮುಗಿಸಿರುವ ‘ತಾಯವ್ವ’ ಸಿನಿಮಾ ಸೆನ್ಸಾರ್ ಗೆ ಸಜ್ಜಾಗಿದೆ.

  • ‘ಉತ್ತರಕಾಂಡ’ ಚಿತ್ರದ ವಿಶೇಷ ಪಾತ್ರದಲ್ಲಿ ಉಮಾಶ್ರೀ

    ‘ಉತ್ತರಕಾಂಡ’ ಚಿತ್ರದ ವಿಶೇಷ ಪಾತ್ರದಲ್ಲಿ ಉಮಾಶ್ರೀ

    ನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.

    ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು (Rangayana Raghu) ನಟಿಸಲಿದ್ದಾರೆ. ಬಂಡೆ ಕಾಕಾ (Bandekaka) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಉತ್ತರಾಕಾಂಡದಲ್ಲಿ(Uttarkanda) ನಟಿಸಲಿದ್ದಾರೆ‌. ಪಾಟೀಲ್ ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಭಟ್ಟರು ಪಾತ್ರ ಮಾಡುವುದು ಹೊಸದೇನೂ ಅಲ್ಲ. ಅವರಿಗೆ ಉತ್ತರ ಕರ್ನಾಟಕ ಭಾಷೆ  ಚೆನ್ನಾಗಿಯೇ ಬರುತ್ತದೆ.

    ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

     

    ಈ ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.