Tag: umeshkatti

  • ಎಂಟು ಬಾರಿ ಶಾಸಕನಾದವನು, ಸಿಎಂ ಆಗುವ ಯೋಗ್ಯತೆ ನನಗಿದೆ: ಸಚಿವ ಕತ್ತಿ

    ಎಂಟು ಬಾರಿ ಶಾಸಕನಾದವನು, ಸಿಎಂ ಆಗುವ ಯೋಗ್ಯತೆ ನನಗಿದೆ: ಸಚಿವ ಕತ್ತಿ

    ಧಾರವಾಡ: ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಆದಲ್ಲಿ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅರವಿಂದ್ ಬೆಲ್ಲದ್, ಯತ್ನಾಳ್, ಮುರಗೇಶ್ ನಿರಾಣಿ ಹಾಗೂ ನಾನು ಸೇರಿದಂತೆ ಈ ನಾಲ್ವರಲ್ಲಿ ಯಾರು ಬೇಕಾದರೂ ಸಿಎಂ ಆಗಬಹುದು ಎಂದರು.

    ನಾನು 8 ಸಲ ಎಂಎಲ್‍ಎ ಆದವನು, 6 ಇಲಾಖೆ ನಿರ್ವಹಿಸಿದವನು, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ. ನನ್ನ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ, ಕಳಂಕ ರಹಿತ ಶಾಸಕನಾಗಿದ್ದೆನೆ ಎಂದರು. ಇದನ್ನೂ ಓದಿ: ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ – ಗುಡುಗಿದ ದರ್ಶನ್

    ಪಕ್ಷ ತೀರ್ಮಾನ ಮಾಡಿದರೆ ಸಿಎಂ ಆಗುವ ಆಸೆ ಇದೆ, ಸಿಎಂ ಆದ ಮೇಲೆ ಪ್ರಧಾನಿಯಾಗುವ ಅಸೆಯೂ ಇರುತ್ತದೆ ಎನ್ನುವ ಮೂಲಕ ತಾವು ಸಿಎಂ ಆಗಬೇಕು ಎನ್ನುವುದನ್ನು ಪುನರುಚ್ಛರಿಸಿದ ಅವರು, ಈಗ ಸದ್ಯಕ್ಕೆ ನಾವು ಅಖಂಡ ಕರ್ನಾಟಕದಲ್ಲಿ ಬದುಕಿದ್ದೇನೆ, ಹೀಗಾಗಿ ನಾನು ಅಖಂಡ ಕರ್ನಾಟಕ ಸಿಎಂ ಆಗುತ್ತೇನೆ. ಏನಾದರೂ ಉತ್ತರ ಕರ್ನಾಟಕ ತೊಂದರೆ ಆದಲ್ಲಿ ಪ್ರತ್ಯೇಕ ರಾಜ್ಯದ ಕೂಗು ಎಬ್ಬಿಸುವೆ, ಉತ್ತರ ಕರ್ನಾಟಕಕ್ಕೆ ಆಗುವ ತೊಂದರೆ ಮುಂದುವರಿದರೆ ನಾನು ಮತ್ತೆ ಧ್ವನಿ ಎತ್ತುವೆ ಎಂದರು.

    ದಿನಾ ಬೆಳಗ್ಗೆ ಎದ್ದ ತಕ್ಷಣ ಉತ್ತರ ಕರ್ನಾಟಕ ಒಡೆಯಲು ಆಗುವುದಿಲ್ಲ. ತೊಂದರೆ ಆದಾಗ ಕೂಗು ಎಬ್ಬಿಸಬೇಕಾಗುತ್ತದೆ ಎಂದ ಅವರು, ಉತ್ತರ ಕರ್ನಾಟಕ ಒಡೆಯುವ ಉದ್ದೇಶ ನನಗಿಲ್ಲ. ಅಖಂಡ ಕರ್ನಾಟಕದಲ್ಲಿ ಬದುಕಬೇಕು, ಅದನ್ನು ಆಳಬೇಕು ಎನ್ನುವ ಉದ್ದೇಶ ಇದೆ ಎಂದು ಹೇಳಿದರು. ಇದನ್ನೂ ಓದಿ: ಸುಮಲತಾ ಬೇಬಿ ಬೆಟ್ಟಕ್ಕೆ ಬನ್ನಿ ಅಂದ್ರೆ ಬರುತ್ತೇನೆ: ಪುಟ್ಟರಾಜು

    ಅರವಿಂದ್ ಬೆಲ್ಲದ್ ಯಾಕೆ ಸಿಎಂ ಆಗಬಾರದು, ಅವರ ತಂದೆ ಶಾಸಕರಾಗಿ ಒಳ್ಳೆ ಕೆಲಸ ಮಾಡಿದ್ದಾರೆ. ಬೆಲ್ಲದ್ ಎರಡು ಸಲ ಶಾಸಕರಾಗಿದ್ದಾರೆ ಎಂದು ಉಮೇಶ್ ಕತ್ತಿ ಹೇಳಿದರು.

  • ಸಿಎಂಗೆ ನಿತ್ಯ ಬೆಳಗ್ಗೆ ‘ಕತ್ತಿ’ ದರ್ಶನ

    ಸಿಎಂಗೆ ನಿತ್ಯ ಬೆಳಗ್ಗೆ ‘ಕತ್ತಿ’ ದರ್ಶನ

    ಬೆಂಗಳೂರು: ಉಪಚುನಾವಣೆ ಫಲಿತಾಂಶ ಬಂದಿದ್ದೇ ತಡ ಸಿಎಂ ಯಡಿಯೂರಪ್ಪ ಅವರು ಅದರ ಸಂಭ್ರಮವನ್ನೂ ಸರಿಯಾಗಿ ಅನುಭವಿಸದೇ ತಳಮಳ ಪಡುತ್ತಿದ್ದಾರೆ. ಭರ್ಜರಿ ಫಲಿತಾಂಶಕ್ಕೆ ಖುಷಿ ಪಡಬೇಕೋ ಇಲ್ಲ ಸಂಪುಟ ತಲೆನೋವು ಕಡಿಮೆ ಮಾಡಿಕೊಳ್ಳಬೇಕೋ ಅಂತ ಗೊತ್ತಾಗದೇ ಸಿಎಂ ತೊಳಲಾಡುತ್ತಿದ್ದಾರೆ. ಈ ಮಧ್ಯೆ ಸಂಪುಟ ವಿಸ್ತರಣೆಗೆ ಇನ್ನಷ್ಟು ವಿಳಂಬ ಆಗುವುದರಿಂದ ಸಿಎಂ ಅವರ ತಾಳ್ಮೆಯೂ ಕಮ್ಮಿಯಾಗತೊಡಗಿದೆ. ಇದೆಲ್ಲದರ ನಡುವೆ ಸಚಿವ ಸ್ಥಾನದ ಪ್ರಭಾವೀ ಆಕಾಂಕ್ಷಿ ಹಿರಿಯ ಶಾಸಕ ಉಮೇಶ್ ಕತ್ತಿ, ಸಿಎಂಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದ್ದಾರೆ.

    ಸರ್ಕಾರದ ಮೊದಲ ಸಂಪುಟ ರಚನೆ ಬಳಿಕ ಮುನಿಸಿಕೊಂಡಿದ್ದ ಉಮೇಶ್ ಕತ್ತಿ, ಉಪಚುನಾವಣೆವರೆಗೂ ಸಿಎಂ ಭೇಟಿಗೆ ಅಷ್ಟಾಗಿ ಮನಸ್ಸು ಮಾಡುತ್ತಿರಲಿಲ್ಲ. ಆದರೆ ಯಾವಾಗ ಫಲಿತಾಂಶ ಬಂತೋ ಅಂದು ರಾತ್ರಿಯೇ ಬೆಳಗಾವಿಯಿಂದ ಹೊರಟ ಉಮೇಶ್ ಕತ್ತಿ ಬೆಂಗಳೂರಿನಲ್ಲೇ ಇದ್ದಾರೆ.

    ಫಲಿತಾಂಶ ಬಂದ ನಂತರ ಸಚಿವ ಸ್ಥಾನ ಬೇಕೇ ಬೇಕು ಎಂದು ಶಾಸಕ ಉಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ. ಅವತ್ತಿನಿಂದಲೂ ನಿತ್ಯ ಎರಡು-ಮೂರು ಸಲ ಉಮೇಶ್ ಕತ್ತಿ ಸಿಎಂ ಭೇಟಿ ಮಾಡುತ್ತಿದ್ದಾರೆ. ಬೆಳಗ್ಗೆ ಎದ್ದರೆ ಸಾಕು ಉಮೇಶ್ ಕತ್ತಿ ಸಿಎಂ ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಪ್ರತ್ಯಕ್ಷರಾಗುತ್ತಿದ್ದಾರೆ. ಇಂದು ಸಹ ಬೆಳ್ಳಂಬೆಳಗ್ಗೆ 2 ಬಾರಿ ಉಮೇಶ್ ಕತ್ತಿ ಸಿಎಂ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಸಿಎಂಗೆ ಬೆಳಗ್ಗೆ ಎದ್ದರೆ ಕತ್ತಿಯವರೇ ದರ್ಶನ ಕೊಡುತ್ತಿದ್ದಾರೆ.

    ಸಿಎಂ ನಿವಾಸ, ವಿಧಾನಸೌಧ, ಗೃಹ ಕಚೇರಿ ಕೃಷ್ಣಾ.. ಹೀಗೆ ಎಲ್ಲೆಂದರಲ್ಲಿ ಉಮೇಶ್ ಕತ್ತಿಯವರು ಸಿಎಂ ಭೇಟಿ ಮಾಡುತ್ತಿದ್ದಾರೆ. ಉಪಚುನಾವಣೆಗೂ ಮುನ್ನ ಕಾಣಿಸಿಕೊಳ್ಳದ ಶಾಸಕ, ಈಗ ನಿತ್ಯ ಸಿಎಂ ಎದುರು ಪ್ರತ್ಯಕ್ಷರಾಗಿ ಸಚಿವ ಸ್ಥಾನಕ್ಕೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದುಬಂದಿದೆ.

    ಉಮೇಶ್ ಕತ್ತಿ ಕಾಟದಿಂದ ಹೇಗೆ ತಪ್ಪಿಸಿಕೊಳ್ಳಬೇಕೆಂದು ಸಿಎಂ ಯೋಚನೆ ಮಾಡಿರೋದರಲ್ಲಿ ಅಚ್ಚರಿಯಿಲ್ಲ. ಸದ್ಯದ ಸನ್ನಿವೇಶದಲ್ಲಿ ಸಚಿವ ಸಂಪುಟ ವಿಸ್ತರಣೆ ಇನ್ನೊಂದು ತಿಂಗಳು ಆಗುವುದಿಲ್ಲ ಎಂಬ ಮಾತುಗಳು ಕೇಳಿಬರ್ತಿವೆ. ಇದು ನಿಜವಾದ್ರೆ ಅಲ್ಲಿಯವರೆಗೂ ಸಿಎಂ ಯಡಿಯೂರಪ್ಪ ಉಮೇಶ್ ಕತ್ತಿಯವರ ಈ ಕೊಸರಾಟವನ್ನು ಸಹಿಸಿಕೊಳ್ಳಲೇಬೇಕಾಗುತ್ತದೆ.

     

  • ಆಡಿಯೋ ಲೀಕ್ ಮಾಡಿದವ್ರ ವಿರುದ್ಧ ಕ್ರಮ ಕೈಗೊಳ್ಳಿ- ಸಿಎಂಗೆ ಕತ್ತಿ ಮನವಿ

    ಆಡಿಯೋ ಲೀಕ್ ಮಾಡಿದವ್ರ ವಿರುದ್ಧ ಕ್ರಮ ಕೈಗೊಳ್ಳಿ- ಸಿಎಂಗೆ ಕತ್ತಿ ಮನವಿ

    ಬೆಂಗಳೂರು: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಆಡಿಯೋ ಲೀಕ್ ಮಾಡಿದವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಿ ಎಂದು ಮಾಜಿ ಸಚಿವ ಉಮೇಶ್ ಕತ್ತಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.

    ಇಂದು ಸಿಎಂ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಎಸ್‌ವೈ ಅವರನ್ನು ಭೇಟಿಯಾದ ಕತ್ತಿ ಸುಮಾರು ಒಂದು ಗಂಟೆಗಳ ಕಾಲ ಜೊತೆ ಚರ್ಚೆ ನಡೆಸಿದರು. ಸಿಎಂ ಹಾಗೂ ಕತ್ತಿ ಚರ್ಚೆ ತೀವ್ರ ಕುತೂಹಲ ಮೂಡಿಸಿದ್ದು, ಆಡಿಯೋ ರೆಕಾರ್ಡ್ ಮಾಡಿದೋರು ಬೆಳಗಾವಿಯ ಅತೃಪ್ತ ಬಣ ಎಂಬ ಶಂಕೆ ಹಿನ್ನೆಲೆಯಲ್ಲಿ ಈ ಚರ್ಚೆ ನಡೆದಿದೆ ಎನ್ನಲಾಗಿದೆ.

    ಚರ್ಚೆಯ ವೇಳೆ ಆಡಿಯೊ ಲೀಕ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ. ನಮ್ಮ ಜಿಲ್ಲೆ ಬಗ್ಗೆ ಹೆಚ್ಚು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಯಾರ ಕಡೆಯವರೇ ಆಗಲಿ ಕ್ರಮ ಕೈಗೊಳ್ಳಿ ಎಂದು ಸಿಎಂಗೆ ಉಮೇಶ್ ಕತ್ತಿ ಮನವಿ ಮಾಡಿದ್ದಾರೆ. ಅಲ್ಲದೆ ಅವರನ್ನು ಸುಮ್ಮನೆ ಬಿಡಬಾರದು ಎಂದು ಇದೇ ವೇಳೆ ಸಿಎಂ ಮೇಲೆ ಕತ್ತಿ ಒತ್ತಡ ಹಾಕಿದ್ದಾರೆ.

    ಬೆಳಗಾವಿ ರಾಜಕೀಯ ಕಿತ್ತಾಟವೇ ಆಡಿಯೋ ಲೀಕ್ ಗೆ ಕಾರಣ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಕತ್ತಿ ಇಂದು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಹಾಗಾದ್ರೆ ಆಡಿಯೋ ಲೀಕ್ ನಿಂದ ಬೆಳಗಾವಿ ಬಿಜೆಪಿಯಲ್ಲಿ ಮತ್ತಷ್ಟು ಫೈಟ್ ಹೆಚ್ಚಾಗುತ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಇದನ್ನೂ ಓದಿ: ಈ ಆಡಿಯೋದಲ್ಲಿ ಹೊಸದಾಗಿ ಏನಿದೆ? – ಸುಪ್ರೀಂನಲ್ಲಿ ಏನಾಯ್ತು? ಕಾಂಗ್ರೆಸ್ಸಿಗೆ ಜಯವೋ? ಹಿನ್ನಡೆಯೋ?

    ಆಡಿಯೋದಲ್ಲಿ ಬಿಎಸ್‌ವೈ ಹೇಳಿದ್ದೇನು?
    ಅ.26ರಂದು ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ್ದ ಬಿಎಸ್‌ವೈ, ಯಾಕೋ ಇವತ್ತು ನೀವು ಮಾತಾಡಿದಂತ ಧಾಟಿ ಸರ್ಕಾರ ಉಳಿಸೋಕೆ ಇದೆ ಅಂತ ಅನ್ನಿಸುತ್ತಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ ಮುಂದೆ ನಿಂತು 17 ಜನರು 2-3 ತಿಂಗಳು ಮುಂಬೈಯಲ್ಲಿರಿಸಿದ್ದರು. ಅವರೆಲ್ಲರು ಕ್ಷೇತ್ರಕ್ಕೂ ಬರಲಿಲ್ಲ. ಹೆಂಡ್ತಿ ಮಕ್ಕಳ ಮುಖ ನೋಡಿರಲಿಲ್ಲ. 3-4 ವರ್ಷ ವಿಪಕ್ಷದಲ್ಲಿ ಇರಬೇಕಾದ ನಮ್ಮನ್ನ ಆಡಳಿತ ಪಕ್ಷಕ್ಕೆ ಬರುವಂತೆ ಮಾಡಿದರು. ನಿಮ್ಮ ಬಾಯಲ್ಲಿ ಅನರ್ಹ ಪರ ಗಟ್ಟಿಯಾಗಿ ನಿಂತುಕೊಳ್ಳುತ್ತೇವೆ ಅನ್ನೋ ಮಾತು ಬರಲಿಲ್ಲ. ಇದನ್ನ ನಾನು ಖಂಡಿತಾ ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ. ಐ ಆಮ್ ಸಾರಿ. ನನಗೇನೂ ಸಿಎಂ ಗಿರಿ ಬೇಕಾಗಿರಲಿಲ್ಲ. ಈಗಾಗಲೇ 3-4 ಬಾರಿ ಸಿಎಂ ಆಗಿದ್ದೇನೆ. ದೊಡ್ಡತನ, ಧಾರಾಳತನ, ವಾಸ್ತವ ಸ್ಥಿತಿಯನ್ನ ತಿಳಿಯದೆ ನೀವು ಮಾತಾಡಿದ್ದೀರಾ ಗೋಕಾಕ್ ಬಗ್ಗೆ ನೀವೇಕೆ ಮಾತಾಡಿಲ್ಲ? ಅದರಲ್ಲಿ ಅಂತಹ ವಿಶೇಷ ಏನಿದೆ? ಅವರನ್ನೆಲ್ಲ ನಂಬಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತು ನಾನು ಅಪರಾಧ ಮಾಡಿದ್ದೇನೆ ಅಂತ ಈಗ ಅನ್ನಿಸುತ್ತಿದೆ ಎಂದು ಹೇಳಿದ್ದರು.

    ಸಿಎಂ ಅವರ ಈ ಆಡಿಯೋ ಅಕ್ಟೋಬರ್ 31ರಂದು ಲೀಕ್ ಆಗಿದ್ದು, ದೇಶದ್ಯಾಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಕಾಂಗ್ರೆಸ್ ಕೂಡ ಈ ಸಂಬಂಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಲಾಗುವುದು ಎಂದು ಮಂಗಳವಾರ ಹೇಳಿತ್ತು.