Tag: unemployment

  • ಏಪ್ರಿಲ್‍ನಲ್ಲಿ 7.83% ಕ್ಕೆ ಏರಿದೆ ಭಾರತದ ನಿರುದ್ಯೋಗ ದರ

    ಏಪ್ರಿಲ್‍ನಲ್ಲಿ 7.83% ಕ್ಕೆ ಏರಿದೆ ಭಾರತದ ನಿರುದ್ಯೋಗ ದರ

    ನವದೆಹಲಿ: ಭಾರತದಲ್ಲಿ ನಿರುದ್ಯೋಗ ದರ ಏಪ್ರಿಲ್‍ನಲ್ಲಿ 7.83% ಏರಿಕೆಯಾಗಿದ್ದು, ಈ ಕುರಿತು ಮಾಧ್ಯಮ ಅಂಕಿಅಂಶ ಪ್ರಕಟವಾಗಿದೆ.

    ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ(CMIE) ನಡೆಸಿದ ಸಮೀಕ್ಷೆಯ ಪ್ರಕಾರ, ದೇಶದ ನಿರುದ್ಯೋಗ ದರವು ಮಾರ್ಚ್‍ನಲ್ಲಿ 7.60% ರಿಂದ ಏಪ್ರಿಲ್‍ನಲ್ಲಿ 7.83%ಕ್ಕೆ ಏರಿದೆ. CMIE ಅಂಕಿಅಂಶಗಳ ಪ್ರಕಾರ, ನಗರ ನಿರುದ್ಯೋಗ ದರವು ಈ ವರ್ಷದ ಮಾರ್ಚ್‍ನಲ್ಲಿ 8.28% ಇತ್ತು. ಆದರೆ ಏಪ್ರಿಲ್ ಅಂದರೆ ಒಂದೇ ತಿಂಗಳ ಅಂತರದಲ್ಲಿ 9.22%ಕ್ಕೆ ಏರಿದೆ. ಆದರೆ ಗ್ರಾಮೀಣ ನಿರುದ್ಯೋಗ ದರವು 7.29% ರಿಂದ 7.18% ಕ್ಕೆ ಇಳಿದಿದೆ ಎಂದು ತಿಳಿಸಿದೆ. ಇದನ್ನೂ ಓದಿ:  ಆಸ್ತಿಗಾಗಿ ಹೆತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ

    ಮಾರ್ಚ್‍ನಲ್ಲಿ, ಹಣದುಬ್ಬರವು 17 ತಿಂಗಳ ಗರಿಷ್ಠ 6.95% ತಲುಪಿತು. ಏಪ್ರಿಲ್ 28 ರಂದು ನೀಡಲಾದ ಕೇಂದ್ರದ ತ್ರೈಮಾಸಿಕ ಉದ್ಯೋಗ ಸಮೀಕ್ಷೆ(QES) ಪ್ರಕಾರ, ವಾಣಿಜ್ಯ, ಉತ್ಪಾದನೆ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಒಂಬತ್ತು ಪ್ರಮುಖ ಕೈಗಾರಿಕೆಗಳು ಅಕ್ಟೋಬರ್ ಮತ್ತು ಡಿಸೆಂಬರ್ 2021 ರ ನಡುವೆ 4,00,000 ಉದ್ಯೋಗಗಳನ್ನು ನಿರ್ಮಿಸಿವೆ.

    ಈ ಹಿಂದೆ, ಇತ್ತೀಚಿನ ಎನ್‍ಎಸ್‍ಒ ಅಂಕಿಅಂಶಗಳ ಪ್ರಕಾರ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಸೆಪ್ಟೆಂಬರ್ 2012 ಮತ್ತು ಈ ವರ್ಷದ ಫೆಬ್ರವರಿ ನಡುವೆ ಸುಮಾರು 5.18 ಕೋಟಿ ಚಂದಾದಾರರನ್ನು ನೇಮಿಸಿಕೊಂಡಿದೆ. ರಾಷ್ಟ್ರೀಯ ಅಂಕಿಅಂಶ ಕಚೇರಿ ಒದಗಿಸಿದ ಅಂಕಿಅಂಶಗಳ ಪ್ರಕಾರ, ನಿರ್ದಿಷ್ಟ ಅವಧಿಯೊಳಗೆ ಇಪಿಎಫ್‍ಗೆ ಸೇರಿದ ಸದಸ್ಯರ ಸಂಖ್ಯೆಯು ದೇಶಾದ್ಯಂತ ಆ ಅವಧಿಯಲ್ಲಿ ರಚಿಸಲಾದ ಉದ್ಯೋಗಗಳ ಸಂಖ್ಯೆಯ ಒಳನೋಟವನ್ನು ಒದಗಿಸುತ್ತದೆ ಎಂದು ತಿಳಿಸಿದೆ.

    ರಾಷ್ಟ್ರೀಯ ಅಂಕಿಅಂಶ ಕಚೇರಿ(NSO)ಯ ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಸೆಪ್ಟೆಂಬರ್ 2017 ರಿಂದ ಫೆಬ್ರವರಿ 2022 ರ ಅವಧಿಗೆ ದೇಶದ ಉದ್ಯೋಗದ ದೃಷ್ಟಿಕೋನ ಕುರಿತು ಮಾಧ್ಯಮ ಟಿಪ್ಪಣಿಯನ್ನು ಬಿಡುಗಡೆ ಮಾಡಿದೆ. ಇದು ಪ್ರಗತಿಯನ್ನು ನಿರ್ಣಯಿಸಲು ಆಯ್ದ ಸರ್ಕಾರಿ ಏಜೆನ್ಸಿಗಳೊಂದಿಗೆ ಲಭ್ಯವಿರುವ ಆಡಳಿತಾತ್ಮಕ ದಾಖಲೆಗಳನ್ನು ಆಧರಿಸಿದೆ. ಇದನ್ನೂ ಓದಿ: ಸಿಐಡಿ ಕಚೇರಿಗೆ ಹೊಸಬಟ್ಟೆ ಸಮೇತ ಆಗಮಿಸಿದ ಆರೋಪಿ ಸದ್ದಾಂ ಫ್ಯಾಮಿಲಿ 

    ಸರ್ಕಾರವು ತನ್ನದೇ ಆದ ಮಾಸಿಕ ಅಂದಾಜುಗಳನ್ನು ಬಹಿರಂಗಪಡಿಸದ ಕಾರಣ, ಅರ್ಥಶಾಸ್ತ್ರಜ್ಞರು ಮತ್ತು ನೀತಿ ನಿರೂಪಕರು ಮುಂಬೈ ಮೂಲದ CMIE ಯಿಂದ ಡೇಟಾವನ್ನು ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ಮೋದಿಯಿಂದ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಕಿಡಿ

    ಮೋದಿಯಿಂದ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಕಿಡಿ

    ನವದೆಹಲಿ: ಪ್ರಧಾನಿ ಮೋದಿಯವರ ಕೆಲ ನಿರ್ಧಾರಗಳಿಂದಾಗಿ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ ಎಂದು ಪ್ರದಾನಿ ಮೋದಿಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ನಿರುದ್ಯೋಗ ಸಮಸ್ಯೆಯ ಬಗ್ಗೆ ಟ್ವೀಟ್ ಮಾಡಿ, ಕಳೆದ ಐದು ವರ್ಷಗಳಲ್ಲಿ 2.1 ಕೋಟಿ ಉದ್ಯೋಗಗಳು ಕಳೆದುಹೋಗಿವೆ. 45 ಕೋಟಿ ಜನರು ಉದ್ಯೋಗಕ್ಕಾಗಿ ಹುಡುಕುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆನೆ ದಂತದಲ್ಲಿ ಚೆಸ್ ಪಾನ್ ಕೆತ್ತನೆ – ಮಾರಾಟ ಮಾಡುವಾಗ ಸಿಕ್ಕಿಬಿದ್ದ

    MODi

    ಒಂದು ದಿನದ ಹಿಂದೆ, ರಾಹುಲ್ ಗಾಂಧಿ ಅವರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ವಾಸ್ತವವಾಗಿ ‘ಸೆಂಟ್ರಲ್ ಬೋರ್ಡ್ ಆಫ್ ಸಪ್ರೆಸಿಂಗ್ ಎಜುಕೇಶನ್’ ಎಂದು ಹೇಳಿದರು. ಸಿಬಿಎಸ್‍ಸಿ ಬೋರ್ಡ್ 10 ಮತ್ತು 12 ನೇ ತರಗತಿಗಳ ಪಠ್ಯಕ್ರಮವನ್ನು ಮಾರ್ಪಡಿಸಿದ ಕೆಲವು ದಿನಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

    ಪಠ್ಯಕ್ರಮದ ಮಾರ್ಪಾಡಿನ ಕುರಿತು ಗಾಂಧಿ ವಂಶಸ್ಥರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಟ್ಟುಕೊಂಡು ಅದನ್ನು ‘ರಾಷ್ಟ್ರೀಯ ಶಿಕ್ಷಾ ಛೇದಕ’ ಎಂದು ಕರೆದರು. ಆಂಗ್ಲೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತಗಳು, ಶೀತಲ ಸಮರ ಮತ್ತು ಕೈಗಾರಿಕಾ ಕ್ರಾಂತಿಯನ್ನು 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಸಿಬಿಎಸ್‍ಸಿ ತೆಗೆದುಹಾಕಿದೆ. ಆದ್ದರಿಂದ ರಾಹುಲ್ ಗಾಂಧಿ ಸಿಬಿಎಸ್‍ಸಿ ವಿರುದ್ಧ ಸಿಡಿದಿದ್ದರು. ಇದನ್ನೂ ಓದಿ:  ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ 

    ಎಪ್ರಿಲ್ 9 ರಂದು ದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನವನ್ನು ಉಳಿಸಲು ನಾವು ಆರ್‍ಎಸ್‍ಎಸ್ ಕೈಯಲ್ಲಿರುವ ಸಂಸ್ಥೆಗಳನ್ನು ರಕ್ಷಿಸಬೇಕು ಎಂದು ಹೇಳುವ ಮೂಲಕ ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

  • ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

    ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

    ಲಕ್ನೋ: ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು.

    ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ ಬಗ್ಗೆ ತಮ್ಮದೇ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ದೇಶದ ಕನಸುಗಳು ದೊಡ್ಡದಾಗಿದೆ. ಆದರೆ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ 1.5 ಕೋಟಿ ಹುದ್ದೆಗಳು ಖಾಲಿ ಇದ್ದರೂ ನಿರುದ್ಯೋಗಿಗಳು ಹೆಚ್ಚುತ್ತಿದ್ದರು. ಕೋಟ್ಯಂತರ ನಿರುದ್ಯೋಗಿಗಳಿಗೆ ಮುಂದೆ ಏನಾಗುತ್ತದೆ ಎಂದು ತಿಳಿದಿಲ್ಲ ಎಂದು ಕಿಡಿಕಾರಿದರು.

    ನಮ್ಮ ಹೋರಾಟ ಉದ್ಯೋಗ ಮತ್ತು ಆರ್ಥಿಕ ಸಮಾನತೆಗಾಗಿ ಆಗಿದೆ. ಸಂವಿಧಾನವು ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಪಡೆಯಬೇಕೆಂದು ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಶ್ರಮಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ

    ಇದೇ ವೇಳೆ ಕೇಂದ್ರದ ವಿರುದ್ಧ ತೆಗೆದುಕೊಂಡ ಅವರು, 2 ಕೋಟಿ ಜನರಿಗೆ ಉದ್ಯೋಗಗಳನ್ನು ನೀಡಿಲ್ಲ. ಜೊತೆಗೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. ರೈತರ ಆದಾಯವೂ ದ್ವಿಗುಣಗೊಂಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

    ರಾಜಕೀಯವು ದೇಶವನ್ನು ಕಟ್ಟುವ ಸಾಧನವಾಗಿದೆ. ನಮ್ಮ ದೇಶದ ನಿಜವಾದ ಹೋರಾಟವೆಂದರೆ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿದೆ. ಇದರಿಂದಾಗಿ ರಾಜಕೀಯ ಪಕ್ಷಗಳು ಮತ್ತು ನಾಯಕರು ತಮ್ಮ ಪೈಪೋಟಿಯನ್ನು ಬಿಟ್ಟು ದೇಶದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂಸು ಸಲಹೆ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆ ಹಿಂದೆ ಯಾರೇ ಇರಲಿ, ಎತ್ತಾಕೊಂಡು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

  • ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

    ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

    ನವದೆಹಲಿ: ದೇಶದ ಸ್ವಾಮೀಜಿಗಳು ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಖರೀದಿಸಲು ಜನರಿಗೆ ತಿಳಿಹೇಳಬೇಕೆಂದು ನಾನು ವಿನಂತಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

    ಹನುಮ ಜಯಂತಿಯಂದು ಗುಜರಾತಿನ ಮೊರ್ಬಿಯಲ್ಲಿ 108 ಅಡಿ ಎತ್ತರದ ಹನುಮಂತನ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ವಿದೇಶಿ ನಿರ್ಮಿತ ವಸ್ತುಗಳು ನಮಗೆ ಉತ್ತಮ ಎನಿಸಬಹುದು. ಆದರೆ ಅದು ನಮ್ಮ ಜನರ ಶ್ರಮಕ್ಕೆ ಪ್ರತೀಕವಾಗಿರುವುದಿಲ್ಲ. ನಮ್ಮ ಮಾತೃಭೂಮಿಯ ಸೊಗಡನ್ನು ಹೊಂದಿರುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ತಾಯ್ನಾಡಲ್ಲಿ 108 ಅಡಿ ಎತ್ತರದ ಹನುಮ ಮೂರ್ತಿಯನ್ನು ಅನಾವರಣಗೊಳಿಸಿದ ಮೋದಿ

    ದೇಶದ ಸ್ವಾಮೀಜಿಗಳು ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಖರೀದಿಸಲು ಜನರಿಗೆ ತಿಳಿಹೇಳಬೇಕೆಂದು ನಾನು ವಿನಂತಿಸುತ್ತೇನೆ. ʼವೋಕಲ್‌ ಫಾರ್‌ ಲೋಕಲ್‌ʼ ಅಭಿಯಾನ ಪರಿಣಾಮಕಾರಿಯಾಗಬೇಕಿದೆ. ನಮ್ಮ ಜನರು ತಯಾರಿಸಿದ ವಸ್ತುಗಳನ್ನು ಮಾತ್ರ ಮನೆಗಳಲ್ಲಿ ಬಳಸಬೇಕು. ಹೀಗೆ ಮಾಡುವುದರಿಂದ ಅಪಾರ ಸಂಖ್ಯೆಯಲ್ಲಿ ಜನರು ಉದ್ಯೋಗ ಪಡೆದುಕೊಳ್ಳಲು ಸಫಲರಾಗುತ್ತಾರೆ ಎಂದು ತಿಳಿಸಿದರು.

    ಭಾರತವು ಇಂದು ಸ್ಥಬ್ದವಾಗಿ ಉಳಿಯಲು ಸಾಧ್ಯವಿಲ್ಲ. ನಾವು ಇರುವಲ್ಲಿಯೇ ಉಳಿಯಲು ಸಾಧ್ಯವಿಲ್ಲ. ಜಾಗತಿಕ ಪರಿಸ್ಥಿತಿ ಹೇಗಿದೆ ಎಂದರೆ, ಇಡೀ ಜಗತ್ತು ‘ಆತ್ಮನಿರ್ಭರ್’ ಆಗುವುದು ಹೇಗೆ ಎಂದು ಯೋಚಿಸುತ್ತಿದೆ. ಭಾರತವು ಈ ಹಂತದಲ್ಲಿ ಸ್ಥಬ್ದವಾಗಿರದೇ, ಸ್ವಾವಲಂಬಿಯಾಗಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ‘ನಾನು ಪ್ರಧಾನಮಂತ್ರಿಗಳ ಖಾಸಗಿ ಕಾರ್ಯದರ್ಶಿ’ ಎಂದವನ ವಿರುದ್ಧ ದಾಖಲಾಯ್ತು ಎಫ್‍ಐಆರ್

    ಮುಂದಿನ 25 ವರ್ಷಗಳಲ್ಲಿ ನಾವು ಸ್ಥಳೀಯ ಉತ್ಪನ್ನಗಳನ್ನು ಮಾತ್ರ ಬಳಸಿದರೆ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದರು.

  • ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿದ್ದು, ರಾಜ್ಯದ ನಿರುದ್ಯೋಗ ಪರಿಸ್ಥಿತಿಯಿಂದ 40 ಲಕ್ಷ ಜನರು ಬಳಲುತ್ತಿದ್ದಾರೆ ಎಂದು ತಿಳಿಸಿದೆ.

    ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವಕ್ತಾರ ಹಾಗೂ ತೆಲಂಗಾಣ ಕಾಂಗ್ರೆಸ್ ಹಿರಿಯ ನಾಯಕ ಡಾ.ದಾಸೋಜು ಶ್ರವಣ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಿರುದ್ಯೋಗ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ನಿವಾರಿಸಲು ಸ್ಪಷ್ಟವಾದ ಉಪಕ್ರಮಗಳನ್ನು ಅನ್ವೇಷಿಸಬೇಕು ಎಂದಿದ್ದಾರೆ.

    ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾರ್ಯ ನೀತಿಗಳೊಂದಿಗೆ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ತಂತ್ರಜ್ಞರು ಮತ್ತು ನೀತಿ ನಿರೂಪಕರನ್ನು ಒಳಗೊಂಡ ಉನ್ನತ ಮಟ್ಟದ ಕಾರ್ಯಪಡೆಯನ್ನು ಸಂಘಟಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಖಾಸಗಿ ವಲಯದಲ್ಲೂ ಶೇ.95ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವಂತೆ ಶಾಸನಬದ್ಧ ಕಾಯಿದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದ 40 ಲಕ್ಷ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ಸೂಟ್‍ಕೇಸ್‍ನಲ್ಲಿ 40 ಕೆಜಿ ಹಸಿರು ಬಟಾಣಿ ತುಂಬಿ ಸಾಗಿಸಿದ ಐಪಿಎಸ್ ಅಧಿಕಾರಿ

  • ನಿರುದ್ಯೋಗ ಹೆಚ್ಚಾಗಲು ಕಾರಣ ಕೇಂದ್ರ ಸರ್ಕಾರ: ರಾಹುಲ್ ಗಾಂಧಿ

    ನಿರುದ್ಯೋಗ ಹೆಚ್ಚಾಗಲು ಕಾರಣ ಕೇಂದ್ರ ಸರ್ಕಾರ: ರಾಹುಲ್ ಗಾಂಧಿ

    ನವದೆಹಲಿ: ದೇಶದಲ್ಲಿರುವ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ರಾಹುಲ್ ಗಾಂಧಿ ಟ್ವೀಟ್‍ನಲ್ಲಿ ಏನಿದೆ?: ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ.  ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ. ಸಾಲ ಹಾಗೂ ನಿರುದ್ಯೋಗದಿಂದ 2018 ಮತ್ತು 2020ರ ನಡುವೆ ಸುಮಾರು 25 ಸಾವಿರ ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಾಧ್ಯಮವೊಂದರ ವರದಿಯನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಕೈಸೆ ಅಚ್ಚೆ ದಿನ್ ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

    ಮಲ್ಲಿಕಾರ್ಜುನ್ ಖರ್ಗೆ ಟ್ವೀಟ್‍ನಲ್ಲಿ ಏನಿದೆ?: ನಿರುದ್ಯೋಗದಿಂದ ಶೇಕಡಾ 24 ರಷ್ಟು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಶೇಕಡಾ 84 ರಷ್ಟು ಕುಟುಂಬಗಳಲ್ಲಿ ಆದಾಯ ಕುಸಿತವಾಗಿದೆ. ಆದಾಗ್ಯೂ ಮೋದಿ ಮತ್ತು ಅವರ ಸಚಿವರು ಇಂತಹ ಕಷ್ಟದ ಕಾಲವನ್ನು ಅಮೃತ ಕಾಲ ಎಂದು ಹೇಳುತ್ತಾರೆ. ಇದು ಅಂಧ ರಾಜನೊಂದಿಗೆ ಅಂಧಕಾಲದ ಭಾರತ ಎಂದು ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದಾರೆ.  ನಿರುದ್ಯೋಗ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್  ವಾಗ್ಧಾಳಿ   ನಡೆಸಿದೆ.

  • ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ

    ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ

    ನವದೆಹಲಿ: ಅವರದ್ದೇ ಪಕ್ಷದ ವಿರುದ್ಧ ಕೆಲವು ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರುದ್ಯೋಗ ಸಮಸ್ಯೆಯ ಕುರಿತಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

    ಇಂದು ದೇಶದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿ ಹೊರಹೊಮ್ಮುತ್ತಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ. ಇದರಿಂದ ದೂರ ಸರಿಯುವುದು ಎಂದರೆ ಹತ್ತಿಯಿಂದ ಬೆಂಕಿಯನ್ನು ಮುಚ್ಚಲು ಪ್ರಯತ್ನಿಸಿದಂತೆ ಎಂದು ಬಿಜೆಪಿ ಸರ್ಕಾರವನ್ನು ಎಚ್ಚರಿಸಿ ಟ್ವೀಟ್ ಮಾಡಿ ಖಾಸಗಿ ಸುದ್ದಿ ವಾಹಿನಿಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್

    ವರುಣ್ ಹಂಚಿಕೊಂಡಿರುವ ವೀಡಿಯೋದಲ್ಲಿ, ಯುವಕನೊಬ್ಬ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾನೆ. ರೈಲ್ವೆ ನೇಮಕಾತಿ ವಿರುದ್ಧದ ಪ್ರತಿಭಟನೆಯನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸದಿದ್ದರೆ ಅಧಿಕಾರದಲ್ಲಿ ಇರುವವರನ್ನು ಬದಲಾಯಿಸಬೇಕಾಗುತ್ತದೆ ಎಂದೂ ಯುವಕ ಎಚ್ಚರಿಕೆ ನೀಡಿದ್ದಾನೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್‌ ಮಾಡಿದ ವಧು

    ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು, ಕೃಷಿ ಕಾಯ್ದೆ ಮತ್ತು ಇತರ ವಿಚಾರಗಳ ಕುರಿತು ವರಣ್ ಗಾಂಧಿ ಟೀಕಾ ಪ್ರಹಾರ ನಡೆಸುತ್ತಲೇ ಇದ್ದಾರೆ. ರೈಲ್ವೆ ನೇಮಕಾತಿ ಪ್ರಕ್ರಿಯೆ ವಿರುದ್ಧ ಉತ್ತರ ಪ್ರದೇಶ ಮತ್ತು ಬಿಹಾರದ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ವರಣ್ ಗಾಂಧಿ ಅವರ ನಿರುದ್ಯೋಗದ ಕುರಿತ ಟ್ವೀಟ್ ಮಹತ್ವ ಪಡೆದುಕೊಂಡಿದೆ.

  • ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ

    ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ

    ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ನುಡಿದಂತೆ ನಡೆದುಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ನಿರುದ್ಯೋಗ ದಿನ ಆಚರಣೆ ಜತೆಗೆ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಮೋದಿ ಅವರಿಗೆ ಹಿಂದಿರುಗಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರೆಕೊಟ್ಟಿದ್ದಾರೆ.

    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಕೆಶಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ನುಡಿದಂತೆ ನಡೆಯಬೇಕು. ಅದೇ ನಮ್ಮ ನೀತಿ ಹಾಗೂ ಧರ್ಮ. ನಾವು ಜನರ ಸೇವೆ ಮಾಡಲು ಬಂದಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು. ಇದನ್ನು ನಮ್ಮ ದೇಶ ಹಾಗೂ ನಾಡಿನ ಎಲ್ಲ ಧರ್ಮದಲ್ಲೂ ಬಸವಣ್ಣನವರ ಕಾಲದಿಂದಲೂ ನಾಯಕರು ಪ್ರತಿಪಾದಿಸಿಕೊಂಡು ಬಂದಿದ್ದಾರೆ ಎಂದರು.

    ಪ್ರಧಾನಿ ನರೇಂದ್ರ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. 2 ಕೋಟಿ ಸರ್ಕಾರಿ ಉದ್ಯೋಗ ನೀಡಲು ಸಾಧ್ಯವಾಗದಿದ್ದರೂ ಕನಿಷ್ಠ ಖಾಸಗಿ ಉದ್ಯೋಗಗಳಾದರೂ ಸೃಷ್ಟಿಯಾಗುವಂತೆ ಮಾಡಬೇಕಿತ್ತು. ಉದ್ಯೋಗ ಸೃಷ್ಟಿಗೆ ಅಗತ್ಯ ನೀತಿ ರೂಪಿಸಬೇಕಾಗಿತ್ತು ಎಂದರು. ಇದನ್ನೂ ಓದಿ: ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸಿದ ಯುವ ಕಾಂಗ್ರೆಸ್

    ಕೋವಿಡ್ ಸಂದರ್ಭದಲ್ಲಿ ದೇಶದಲ್ಲಿ 2 ಕೋಟಿ ಉದ್ಯೋಗ ನಷ್ಟವಾಗಿದೆ. ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನವನ್ನು ನಮ್ಮ ಯೂಥ್ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ದಿನವನ್ನಾಗಿ ಆಚರಣೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ?’ ಕೇವಲ ನಿರುದ್ಯೋಗ ದಿನ ಆಚರಣೆ ಮಾಡುವುದಷ್ಟೇ ಅಲ್ಲ, ಎಲ್ಲ ನಿರುದ್ಯೋಗಿ ಯುವಕರು ತಮ್ಮ ಪದವಿ ಪ್ರಮಾಣ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಂದಿರುಗಿಸಬೇಕು ಎಂದು ಕರೆ ನೀಡುತ್ತೇನೆ ಎಂದರು.

  • ಪ್ರಧಾನಿ ಮೋದಿ ನೀತಿಗಳು 14 ಕೋಟಿ ಜನರಿಗೆ ನಿರುದ್ಯೋಗ ನೀಡಿವೆ: ರಾಹುಲ್ ಗಾಂಧಿ

    ಪ್ರಧಾನಿ ಮೋದಿ ನೀತಿಗಳು 14 ಕೋಟಿ ಜನರಿಗೆ ನಿರುದ್ಯೋಗ ನೀಡಿವೆ: ರಾಹುಲ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಾಲಿಸಿಗಳು ದೇಶದ 14 ಕೋಟಿ ಜನರಿಗೆ ನಿರುದ್ಯೋಗ ನೀಡಿವೆ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

    ದೇಶದ ಯುವಕರಿಗೆ ಮೋದಿಯವರು ಉದ್ಯೋಗ ನೀಡುವದಾಗಿ ಭರವಸೆ ನೀಡಿದ್ದರು. ಪ್ರತಿ ವರ್ಷ ಉದ್ಯೋಗ ಸೃಷ್ಟಿಯ ದೊಡ್ಡ ಕನಸನ್ನು ದೇಶದ ಜನತೆಯ ಮುಂದಿಟ್ಟಿದ್ದರು. ಆದ್ರೆ ಅವರ ಯೋಜನೆ, ನೀತಿಗಳು ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿವೆ ಎಂದಿದ್ದಾರೆ.

    ವಿಡಿಯೋ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನೋಟ್ ಬ್ಯಾನ್, ತಪ್ಪು ಜಿಎಸ್‍ಟಿ ಮತ್ತು ಪೂರ್ವ ತಯಾರಿಗಳಿಲ್ಲದ ಲಾಕ್‍ಡೌನ್. ಲ ಎಲ್ಲ ನಿರ್ಧಾರಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ. ಬಿಜೆಪಿ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ಸಂಪೂರ್ಣವಾಗಿ ವಿಫಲವಾಗಿದೆ. ಹೀಗಾಗಿ ಯುಥ್ ಕಾಂಗ್ರೆಸ್ ಇದರ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದ್ದಾರೆ.

    ಕೆಲಸ ಕೊಡಿ (ರೋಜಗಾರ್ ದೋ) ಅಭಿಯಾನದಲ್ಲಿ ನಮಗೆ ಸಾಥ್ ನೀಡಿ. ನಿದ್ದೆಯಲ್ಲಿರುವ ಸರ್ಕಾರ ಎಚ್ಚೆತ್ತಕೊಳ್ಳಬೇಕಿದೆ. ಇದು ದೇಶದ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ

  • 3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ

    3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ

    – ಸೇನೆ ಸೇರುವ ಮಂದಿಗೆ ಸುವರ್ಣಾವಕಾಶ
    – ಟೂರ್ ಆಫ್ ಡ್ಯೂಟಿ ಜಾರಿಗೆ ಗಂಭೀರ ಚಿಂತನೆ

    ನವದೆಹಲಿ: ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ತಾತ್ಕಾಲಿಕ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರ ಚಿಂತನೆ ನಡೆಸಿದೆ.

    ಹೌದು, ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕರ್ತವ್ಯ ಮಾಡಬೇಕಾಗುತ್ತದೆ. ಆದರೆ ಈಗ ಮೂರು ವರ್ಷಗಳ ಕಾಲ ‘ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅನುಮತಿ ನೀಡಲು ಮುಂದಾಗಿದೆ. ಸೇನೆಗೆ ಸೇರುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಅವರನ್ನು ಉತ್ತೇಜಿಸಲು ಈ ಯೋಜನೆಗೆ ಕೈ ಹಾಕಿದೆ.

    ಒಂದು ವೇಳೆ ಈ ಪ್ರಸ್ತಾಪಕ್ಕೆ ಅನುಮತಿ ಸಿಕ್ಕರೆ ಆರಂಭದಲ್ಲಿ 100 ಅಧಿಕಾರಿಗಳು ಮತ್ತು 1 ಸಾವಿರ ಸೈನಿಕರ ನೇಮಕವಾಗಲಿದೆ. ಈ ಸಂಬಂಧ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಪ್ರತಿಕ್ರಿಯಿಸಿ, ವಿವಿಧ ಸೇನಾ ಕಮಾಂಡ್ ಗಳ ಪ್ರತಿಕ್ರಿಯೆ ಪಡೆಯಲಾಗಿದೆ. ಟೂರ್ ಆಫ್ ಡ್ಯೂಟಿಯನ್ನು ಪ್ರಯೋಗಿಕವಾಗಿ ಆರಂಭಿಸಲಾಗುತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನೇಮಕವಾಗಲಿರುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

    26/ 27 ವಯಸ್ಸಿನ ಯುವಜನತೆಗೆ ತರಬೇತಿ ನೀಡಿ ಉದ್ಯೋಗ ನೀಡಿದಾಗ ತಾತ್ಕಲಿಕವಾಗಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಇಲ್ಲಿ ಸೇವೆ ಸಲ್ಲಿಸಿದ ಬಳಿಕ ಪ್ರಮಾಣಪತ್ರ ನೀಡಲಾಗುತ್ತದೆ. ಒಂದು ವೇಳೆ ಸೇನೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿದರೆ ಅವರನ್ನು ಮುಂದುವರಿಸಲಾಗುತ್ತದೆ. ಟೂರ್ ಆಫ್ ಡ್ಯೂಟಿಯನ್ನು ಪೂರ್ಣಗೊಂಡ ಬಳಿಕ ಆ ಸೈನಿಕರು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರ ಇಷ್ಟದ ಉದ್ಯೋಗಕ್ಕೆ ಸೇರಬಹುದು ಎಂಬ ನಂಬಿಕೆಯನ್ನು ಸೇನೆ ಇಟ್ಟುಕೊಂಡಿದೆ.

    ಯುವಜನತೆಗೆ ಸೇನೆ ಸೇರಬೇಕೆಂಬ ಆಸೆ ಇರುತ್ತದೆ. ಆದರೆ ಪೂರ್ಣಾವಧಿಗೆ ಸೇರಬೇಕೆಂಬ ಆಸೆ ಇರುವುದಿಲ್ಲ. ಸೇನೆಯ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರ ಭಕ್ತಿ ತೋರಿಸಲು, ಸಾಹಸ, ಅನುಭವ ಪಡೆದುಕೊಳ್ಳಲು ಇದು ಸಹಕಾರಿಯಾಗಲಿದೆ.

    ನಾಗರಿಕರಿಗೆ ಮೂರು ವರ್ಷಗಳ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಈಗಾಗಲೇ ಇಸ್ರೇಲಿನಲ್ಲಿದೆ. ಭಾರತದಲ್ಲಿ ಆಸಕ್ತರಿಗೆ ಮಾತ್ರ ಅವಕಾಶ ನೀಡುತ್ತಿದ್ದು ಇಸ್ರೇಲಿನಲ್ಲಿ ಇದು ಕಡ್ಡಾಯ. ಇಸ್ರೇಲ್ ಸುತ್ತ 7 ರಾಷ್ಟ್ರಗಳು ಇರುವ ಅಗತ್ಯಬಿದ್ದಾಗ ಜನರ ನೆರವನ್ನು ಪಡೆಯಲು ಸೇನಾ ತರಬೇತಿಯನ್ನು ನೀಡುತ್ತದೆ. 18 ವರ್ಷ ಮೇಲ್ಪಟ್ಟ ಯುವಕರು 36 ತಿಂಗಳ ಕಾಲ, ಯುವತಿಯು 24 ತಿಂಗಳ ಕಾಲ ಸೇನಾ ತರಬೇತಿ ಪಡೆಯುವುದನ್ನು ಇಸ್ರೇಲ್ ಕಡ್ಡಾಯಗೊಳಿಸಿದೆ.