Tag: UNESCO

  • ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ

    ವಾಷಿಂಗ್ಟನ್‌: ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ (USA) ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ಯುನೆಸ್ಕೋದಿಂದ (UNESCO) ಹೊರ ಬಂದಿದೆ.

    ಡೊನಾಲ್ಡ್‌ ಟ್ರಂಪ್‌ ಮೊದಲಿನಿಂದಲೂ ಯುನೆಸ್ಕೋ ನಡೆಯನ್ನು ಟೀಕಿಸುತ್ತಾ ಬಂದಿದ್ದರು. ಯುನೆಸ್ಕೋ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಇಲ್ಲ ಮತ್ತು ಇಸ್ರೇಲ್ (Isreal) ವಿರೋಧಿ ಧೋರಣೆ,  ಚೀನಾ ಪರ ನೀತಿಯಿಂದ  ನಾವು ಹೊರ ಬಂದಿದ್ದೇವೆ ಎಂದು ಅಮೆರಿಕ ಹೇಳಿದೆ.

    ಡೊನಾಲ್ಡ್ ಟ್ರಂಪ್ (Donald Trump) ಅವರ ಮೊದಲ ಆಡಳಿತದ ಅವಧಿಯಲ್ಲಿ ಅಮೆರಿಕ 2018 ರಲ್ಲಿ ಯುನೆಸ್ಕೋದಿಂದ ಹೊರ ಬಂದಿತ್ತು. ಜುಲೈ 2023 ರ ಬೈಡನ್‌ ಅವಧಿಯಲ್ಲಿ ಮತ್ತೆ ಯುನೆಸ್ಕೋವನ್ನು ಅಮೆರಿಕ ಸೇರಿತ್ತು.

    ವಿದೇಶಾಂಗ ಇಲಾಖೆಯ ವಕ್ತಾರ ಟ್ಯಾಮಿ ಬ್ರೂಸ್ ಪ್ರತಿಕ್ರಿಯಿಸಿ, ಪ್ಯಾಲೆಸ್ಟೈನ್‌ನ್ನು ಸದಸ್ಯ ರಾಷ್ಟ್ರವಾಗಿ ಒಪ್ಪಿಕೊಳ್ಳುವ ಯುನೆಸ್ಕೋದ ನಿರ್ಧಾರವು ಹೆಚ್ಚು ಸಮಸ್ಯಾತ್ಮಕವಾಗಿದೆ ಮತ್ತು ಇದು ಅಮೆರಿಕದ ನೀತಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO), UN ಮಾನವ ಹಕ್ಕುಗಳ ಮಂಡಳಿ, ಪ್ಯಾರಿಸ್ ಹವಾಮಾನ ಒಪ್ಪಂದ ಮತ್ತು ಇರಾನ್ ಪರಮಾಣು ಒಪ್ಪಂದ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಸಂಸ್ಥೆಗಳಿಂದ ಅಮೆರಿಕ ಹೊರಬಂದಿತ್ತು. ಎರಡನೇ ಅವಧಿಯಲ್ಲಿ ಟ್ರಂಪ್‌ ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಂದೆ ಸರಿಯುವಂತೆ ಆದೇಶಿಸಿದ್ದಾರೆ ಮತ್ತು ಪ್ಯಾಲೆಸ್ಟೀನಿಯನ್ ಪರಿಹಾರ ಸಂಸ್ಥೆ UNRWA ಗೆ ಹಣವನ್ನು ನಿಲ್ಲಿಸಿದ್ದಾರೆ.

    1945 ರಲ್ಲಿ ರಚನೆಯಾದ ಯುನೆಸ್ಕೋದ ಸ್ಥಾಪಕ ಸದಸ್ಯ ರಾಷ್ಟ್ರವಾಗಿರುವ ಅಮೆರಿಕ ಯುನೆಸ್ಕೋದ ಒಟ್ಟು ಬಜೆಟ್‌ನ ಸುಮಾರು 8% ರಷ್ಟು ಕೊಡುಗೆ ನೀಡುತ್ತದೆ. ಪ್ಯಾರಿಸ್‌ನಲ್ಲಿ ನೆಲೆಗೊಂಡಿರುವ ಯುನೆಸ್ಕೋವನ್ನು ಅಮೆರಿಕ ತೊರೆದಿರುವುದು ಇದು ಮೂರನೇ ಬಾರಿ. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ ವರದಕ್ಷಿಣೆ ಕಿರುಕುಳ ಆರೋಪ

    ಹಣಕಾಸಿನ ದುರುಪಯೋಗ ಮತ್ತು ಅದು ಅಮೇರಿಕನ್ ವಿರೋಧಿ ಪಕ್ಷಪಾತವೆಂದು ಪರಿಗಣಿಸಿದ ಬಗ್ಗೆ ಕಳವಳ ವ್ಯಕ್ತಪಡಿಸಿ 1984 ರಲ್ಲಿ ರೇಗನ್‌ ಅವಧಿಯಲ್ಲಿ ಮೊದಲು ಹಿಂದೆ ಸರಿಯಿತು. ಸುಧಾರಣೆಗಳನ್ನು ಮಾಡಿದ ನಂತರ 2003 ರಲ್ಲಿ ಅಧ್ಯಕ್ಷ ಜಾರ್ಜ್ ಡಬ್ಲ್ಯೂ. ಬುಷ್ ನೇತೃತ್ವದಲ್ಲಿ ಅಮೆರಿಕ ಮತ್ತೆ ಯುನೆಸ್ಕೋವನ್ನು ಸೇರ್ಪಡೆಯಾಗಿತ್ತು.

  • ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    ಐತಿಹಾಸಿಕ ಕ್ಷಣ; ಯುನೆಸ್ಕೋದ ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼಗೆ ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆ

    – ಪ್ರಧಾನಿ ನರೇಂದ್ರ ಮೋದಿ ಸಂತಸ

    ನವದೆಹಲಿ: ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತಹ ಐತಿಹಾಸಿಕ ಕ್ಷಣ ಇಂದು ಬಂದೊದಗಿದೆ. ಹೌದು. ಯುನೆಸ್ಕೋದ ವಿಶ್ವ ನೋಂದಣಿಯ ಸ್ಮರಣಿಕೆಯಲ್ಲಿ ಭಗವದ್ಗೀತೆ ಮತ್ತು ಭರತ ಮುನಿಯ ನಾಟ್ಯಶಾಸ್ತ್ರವನ್ನು ಸೇರ್ಪಡೆಗೊಳಿಸಲಾಗಿದೆ.

    ಈ ಮಾಹಿತಿಯನ್ನು ಕೇಂದ್ರದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸುಂಕ ಸಮರದ ನಡುವೆ ಯುಎಸ್‌ ಅಧ್ಯಕ್ಷರನ್ನ ಭೇಟಿಯಾದ ಇಟಲಿ ಪ್ರಧಾನಿ – ಮೆಲೊನಿ ಶ್ರೇಷ್ಠ ಪ್ರಧಾನಿ ಎಂದ ಟ್ರಂಪ್‌

    ಭರತ ಮುನಿ ಭಾರತದ ಖ್ಯಾತ ನಾಟ್ಯಶಾಸ್ತ್ರಜ್ಞ. ಇವರನ್ನು ಭಾರತದ ರಂಗಭೂಮಿಯ ಪಿತಾಮಹ ಎನ್ನಬಹುದು. ಇವರು ಬರೆದ ನಾಟ್ಯಶಾಸ್ತ್ರ ಎಂಬ ಗ್ರಂಥವು ಭಾರತದಲ್ಲಿ ನಾಟ್ಯ ಮತ್ತು ರಂಗಭೂಮಿಗೆ ಹೊಸ ದಿಶೆಯನ್ನು ತೋರಿದ ಗ್ರಂಥವಾಗಿದೆ. ನಾಟ್ಯಶಾಸ್ತ್ರ, ಕಾವ್ಯ ತತ್ವ ವಿವೇಚನೆಗೆ ಮಾತ್ರ ಸೀಮಿತವಾದ ಕೃತಿಯಲ್ಲ, ಇಡೀ ನಾಟಕ ಕಲೆಯ ಕುರಿತು ಒಂದು ಸಂಕ್ಷಿಪ್ತ ವಿಶ್ವಕೋಶವಾಗಿದೆ.

    ಇಂತಹ ಮಹತ್ವದ ಗ್ರಂಥವನ್ನು ʻಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ʼನಲ್ಲಿ ಸೇರ್ಪಡೆಗೊಳಿಸಲಾಗಿದೆ. ಇದು ಅತ್ಯುತ್ತಮ ಮೌಲ್ಯದ ಸಾಕ್ಷ್ಯಚಿತ್ರ ಪರಂಪರೆಯನ್ನು ಸಂರಕ್ಷಿಸುವ ಜಾಗತಿಕ ಉಪ್ರಕಮವೂ ಇದಾಗಿದೆ. ಇದನ್ನೂ ಓದಿ: ನಾವು ಹಿಂದೂಗಳಿಗಿಂತ ವಿಭಿನ್ನ – ಎರಡು ರಾಷ್ಟ್ರ ಥಿಯರಿ ಹೇಳಿ ಪಾಠ ಮಾಡಿದ ಪಾಕಿಸ್ತಾನ ಸೇನಾ ಮುಖ್ಯಸ್ಥ

    ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಕ್ಷಣ:
    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಸ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಪಂಚದಾದ್ಯಂತದ ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಈ ಸೇರ್ಪಡೆ ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆಯಾಗಿದೆ. ಗೀತೆ ಮತ್ತು ನಾಟ್ಯಶಾಸ್ತ್ರವು ಶತಮಾನಗಳಿಂದ ನಾಗರಿಕತೆ ಮತ್ತು ಪ್ರಜ್ಞೆಯನ್ನು ಪೋಷಿಸಿವೆ. ಅವರ ಒಳನೋಟಗಳು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಭಗವದ್ಗೀತೆ, ನಾಟ್ಯಶಾಸ್ತ್ರ ಸೇರ್ಪಡೆಗೊಳಿಸಿರುವುದು ಭಾರತದ ನಾಗರಿಕ ಪರಂಪರೆಗೆ ಐತಿಹಾಸಿಕ ಕ್ಷಣ. ಈ ಜಾಗತಿಕ ಗೌರವವು ಭಾರತದ ಶಾಶ್ವತ ಬುದ್ಧಿವಂತಿಕೆ ಮತ್ತು ಕಲಾತ್ಮಕ ಪ್ರತಿಭೆಗೆ ಸಾಕ್ಷಿಯಾಗಿದೆ. ಇದು ಭಾರತದ ವಿಶ್ವದೃಷ್ಟಿಕೋನ, ನಾವು ಯೋಚಿಸುವ, ಅನುಭವಿಸುವ, ಬದುಕುವ ತಾತ್ವಿಕ ಮತ್ತು ಸೌಂದರ್ಯಕ್ಕೆ ಅಡಿಪಾಯಗಳಾಗಿವೆ. ನಾವೀಗ ಅಂತಾರಾಷ್ಟ್ರೀಯ ನೋಂದಣಿಯಲ್ಲಿ ನಮ್ಮ ದೇಶದಿಂದ 14 ಶಾಸನಗಳನ್ನು ಹೊಂದಿದ್ದೇವೆ ಎಂದು ಮಾಹಿತಿಯನ್ನೂ ನೀಡಿದ್ದಾರೆ.  ಇದನ್ನೂ ಓದಿ: UK | ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನ 123ನೇ ಅಧ್ಯಕ್ಷರಾಗಿ ಭಾರತೀಯ ಮೂಲದ ಮುಮ್ತಾಜ್‌ ಆಯ್ಕೆ

  • ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ

    ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳು ಸೇರ್ಪಡೆ

    ನವದೆಹಲಿ: ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು (Hoysala Temples Karnataka) ಸೇರ್ಪಡೆ ಮಾಡಲಾಗಿದೆ.

    ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

    ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

    ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ.

    ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ರಕ್ಷಿತ ಸ್ಮಾರಕಗಳಾಗಿವೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರ ಪ್ರದೇಶದ ಶಾಲೆಗಳಲ್ಲಿ ಮೊಬೈಲ್‌ ಬ್ಯಾನ್‌, ಶಿಕ್ಷಕರೂ ಮೊಬೈಲ್‌ ಬಳಸುವಂತಿಲ್ಲ

    ಆಂಧ್ರ ಪ್ರದೇಶದ ಶಾಲೆಗಳಲ್ಲಿ ಮೊಬೈಲ್‌ ಬ್ಯಾನ್‌, ಶಿಕ್ಷಕರೂ ಮೊಬೈಲ್‌ ಬಳಸುವಂತಿಲ್ಲ

    ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ (Andhra Pradesh Government) ರಾಜ್ಯಾದ್ಯಂತ ಶಾಲೆಗಳಲ್ಲಿ ಮೊಬೈಲ್‌ ಫೋನ್‌ ಬಳಕೆಯನ್ನ ನಿಷೇಧಿಸಿದೆ. ವಿದ್ಯಾರ್ಥಿಗಳು ಶಾಲೆಗಳಿಗೆ ಮೊಬೈಲ್‌ ತರುವುದನ್ನ ನಿಷೇಧಿಸಿ ಶಿಕ್ಷಣ ಇಲಾಖೆ (Education Departments) ಆದೇಶ ಹೊರಡಿಸಿದೆ.

    ಅಲ್ಲದೇ ತರಗತಿಗಳಲ್ಲಿ ಶಿಕ್ಷಕರೂ ಸಹ ಮೊಬೈಲ್‌ ಫೋನ್‌ (Mobile Phones) ಬಳಸುವುದನ್ನ ಶಿಕ್ಷಣ ಇಲಾಖೆ ನಿಷೇಧಿಸಿದೆ. ತರಗತಿಗಳಿಗೆ ಹೋಗುವ ಮುನ್ನ ಶಿಕ್ಷಕರು ತಮ್ಮ ಮೊಬೈಲ್‌ಗಳನ್ನು ಮುಖ್ಯಶಿಕ್ಷಕರ ಬಳಿ ಕೊಟ್ಟು ಹೋಗಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ: ಮಮತಾ ಬ್ಯಾನರ್ಜಿ ಭವಿಷ್ಯ

    ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಜಾಗತಿಕ ಶಿಕ್ಷಣ ಮೇಲ್ವಿಚಾರಣಾ ವರದಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಶಿಕ್ಷಕರಿಂದ ಮಕ್ಕಳಿಗೆ ಉಂಟಾಗುವ ತೊಂದರೆ ತಪ್ಪಿಸಲು ಶಿಕ್ಷಕರೂ ತರಗತಿಗಳಲ್ಲಿ ಮೊಬೈಲ್‌ ಬಳಸುವುದನ್ನ ನಿಷೇಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತನಗಿಂತ 2 ವರ್ಷ ಕಿರಿಯವನನ್ನ ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ

    ವಿಶ್ವಸಂಸ್ಥೆಯು ಶಾಲೆಗಳಲ್ಲಿ ಫೋನ್‌ ಬಳಕೆಯನ್ನ ನಿಷೇಧಿಸಿದೆ. ಡೇಟಾ ಗೌಪ್ಯತೆ, ಸುರಕ್ಷತೆ ಮತ್ತು ಮಗುವಿನ ಯೋಗಕ್ಷೇಮ ಕಾಳಜಿಯಿಂದ ಜಾಗತೀಕವಾಗಿ ನಾಲ್ಕು ದೇಶಗಳಲ್ಲಿ ಈ ಕ್ರಮ ಅನುಷ್ಠಾನಕ್ಕೆ ಬಂದಿದೆ. ಇದನ್ನ ಮಾದರಿಯಾಗಿ ತೆಗೆದುಕೊಂಡಿರುವ ಶಿಕ್ಷಣ ಇಲಾಖೆ ಆಂಧ್ರ ಪ್ರದೇಶದ ಶಾಲೆಗಳಲ್ಲಿಯೂ ಮೊಬೈಲ್‌ ಬಳಕೆಗೆ ನಿಷೇಧ ಹೇರಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚರ್ಚ್‌ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ

    ಚರ್ಚ್‌ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ

    ಕೀವ್: ರಷ್ಯಾ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಉಕ್ರೇನ್ ಮೇಲೆ ಸತತವಾಗಿ ದಾಳಿ ನಡೆಸುತ್ತಲೇ ಇದೆ. ಈ ನಡುವೆ ಉಕ್ರೇನ್‌ನಲ್ಲಿರುವ 152 ಸಾಂಸ್ಕೃತಿಕ ಹಾಗೂ ಐತಿಹಾಸಿಕ ತಾಣಗಳನ್ನು ಸಂಪೂರ್ಣ ನಾಶ ಮಾಡಿರುವುದಾಗಿ ಯುಎನ್ ತಜ್ಞರು ದೃಢಪಡಿಸಿದ್ದಾರೆ ಎಂದು ಯುನೆಸ್ಕೋ ಸಾಂಸ್ಕೃತಿಕ ಸಂಸ್ಥೆ ತಿಳಿಸಿದೆ.

    ಅವುಗಳಲ್ಲಿ ವಸ್ತುಸಂಗ್ರಹಾಲಯಗಳು, ಸ್ಮಾರಕಗಳು, ಚರ್ಚ್‌ಗಳು, ಗ್ರಂಥಾಲಯಗಳು, ಧಾರ್ಮಿಕ ಕಟ್ಟಡಗಳು ಹಾಗೂ ಇತರ ಅಸಾಧಾರಣ ಕಟ್ಟಡಗಳೂ ಸೇರಿವೆ. ಕೆಲವು ಸಂಪೂರ್ಣ ಹಾನಿಯಾಗಿದ್ದಾರೆ, ಕೆಲವು ಭಾಗಶಃ ಹಾನಿಯಾಗಿವೆ ಎಂಬುದಾಗಿ ತಜ್ಞರ ವರದಿ ಹೇಳಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು – ನಾಳೆ ನಾಮಪತ್ರ ಸಲ್ಲಿಕೆ

    ಕಳೆದ ಫೆಬ್ರವರಿ 24 ರಿಂದ ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾಯಿತು. ಆಗಿನಿಂದಲೂ ರಷ್ಯಾ ಉಕ್ರೇನಿನ ತಾಣಗಳು ಹಾನಿಗೊಳಗಾಗಿವೆ. ಉಕ್ರೇನಿಯನ್ ಸಾಂಸ್ಕೃತಿಕ ತಾಣಗಳ ಮೇಲಿನ ಈ ಪುನರಾವರ್ತಿತ ದಾಳಿಗಳು ನಿಲ್ಲಬೇಕು. ಯಾವುದೇ ಸಂದರ್ಭದಲ್ಲಿಯೂ ಸಾಂಸ್ಕೃತಿಕ ಹಾಗೂ ಪಾರಂಪರಿಕ ತಾಣಗಳನ್ನು ಗುರಿಯಾಗಿಸಬಾರದು ಎಂದು ಯುನೆಸ್ಕೋದ ಮಹಾನಿರ್ದೇಶಕ ಆಡ್ರೆ ಅಜೌಲೆ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್‌ ಪತ್ತೆ – ತಂತ್ರಜ್ಞಾನ ಭಾರತದಲ್ಲೂ ಲಭ್ಯ

    ರಷ್ಯಾದ ಪಡೆಗಳು ಅಥವಾ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಉಕ್ರೇನ್ ಪಾರಂಪರಿಕ ತಾಣಗಳನ್ನು ನಾಶಪಡಿಸುವಲ್ಲಿ ತಪ್ಪಿತಸ್ಥರೆಂಬುದು ಕಂಡುಬಂದರೆ ಅಂತಾರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಬಹುದು ಎಂದು ಯುನೆಸ್ಕೋ ಎಚ್ಚರಿಸಿದೆ.

    Live Tv

  • ಅಯೋಧ್ಯೆ, ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಿದ ಪಾಕಿಗೆ ಚಳಿ ಬಿಡಿಸಿದ ಭಾರತದ ಅಧಿಕಾರಿ

    ಅಯೋಧ್ಯೆ, ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಿದ ಪಾಕಿಗೆ ಚಳಿ ಬಿಡಿಸಿದ ಭಾರತದ ಅಧಿಕಾರಿ

    – ವಿಶ್ವಸಂಸ್ಥೆಯಲ್ಲಿ ಮುಜುಗರಕ್ಕೀಡಾದ ಪಾಕ್

    ಪ್ಯಾರಿಸ್: ಕಾಶ್ಮೀರ ಮತ್ತು ಅಯೋಧ್ಯೆ ವಿಚಾರದಲ್ಲಿ ಮೂಗು ತೂರಿಸಿದ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತದ ಅಧಿಕಾರಿ ಚಳಿ ಬಿಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಮುಜುಗರಕ್ಕೀಡಾಗಿದೆ.

    ಯುನೆಸ್ಕೋ(UNESCO)ದ 40ನೇ ಸಾಮಾನ್ಯ ಸಭೆ(ಜನರಲ್ ಕಾನ್ಫರೆನ್ಸ್)ಯಲ್ಲಿ ಕಾಶ್ಮೀರ ಮತ್ತು ಅಯೋಧ್ಯೆ ವಿಷಯಗಳನ್ನು ಪಾಕಿಸ್ತಾನ ಪ್ರಸ್ತಾಪ ಮಾಡಿತು. ಈ ಎರಡು ಭಾರತದ ಆಂತರಿಕ ವಿಚಾರಗಳಾಗಿವೆ. ಹಾಗಾಗಿ ಪಾಕಿಸ್ತಾನ ಇದರಲ್ಲಿ ಹಸ್ತಕ್ಷೇಪ ಮಾಡದಿರುವುದೇ ಉತ್ತಮ ಹಾಗೂ ಈ ವಿಷಯಗಳಲ್ಲಿ ನಮ್ಮ ಮೇಲೆ ಯಾವುದೇ ಒತ್ತಡ ಹಾಕುವಂತಿಲ್ಲ ಎಂದು ಭಾರತದ ಪ್ರತಿನಿಧಿ ಖಡಕ್ ಆಗಿ ಯುನೆಸ್ಕೋದಲ್ಲಿ ಹೇಳಿದ್ದಾರೆ.

    ನಾವು ಪಾಕಿಸ್ತಾನದ ದುಷ್ಟಬುದ್ಧಿ ಮತ್ತು ಸುಳ್ಳು ಪ್ರಚಾರವನ್ನು ಬಲವಾಗಿ ಖಂಡಿಸುತ್ತೇವೆ. ಪಾಕಿಸ್ತಾನ ತನ್ನ ಸುಳ್ಳುಗಳಿಂದ ಭಾರತದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಭಾರತದ ಸವೋಚ್ಛ ನ್ಯಾಯಾಲಯ ನೀಡಿದ ಅಯೋಧ್ಯೆ ತೀರ್ಪನ್ನು ಪಾಕಿಸ್ತಾನ ಟೀಕಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡುತ್ತಿದೆ. ಅಯೋಧ್ಯೆ ವಿಷಯ ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರವಾಗಿದ್ದು, ಪಾಕಿಸ್ತಾನಕ್ಕೆ ಈ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದು ತಿರುಗೇಟು ನೀಡಿದರು.

    ಪಾಕಿಸ್ತಾನದ ಶಿಕ್ಷಣ ಮಂತ್ರಿ ಶಫಾಕತ್ ಮಹಮೂದ್ ಅಯೋಧ್ಯೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರಹಾಕುತ್ತಾ, ಯುನೆಸ್ಕೋದ ಧಾರ್ಮಿಕ ಸ್ವಾತಂತ್ರ್ಯದ ಮೌಲ್ಯಗಳಿಗೆ ಅನುಗುಣವಾಗಿ ತೀರ್ಪು ಬಂದಿಲ್ಲ ಎಂದು ಮೂಗು ತೂರಿಸುವ ಪ್ರಯತ್ನ ಮಾಡಿದ್ದರು.

    ಶಫಾಕತ್‍ಗೆ ತಿರುಗೇಟು ನೀಡಿದ ಭಾರತದ ಪ್ರತಿನಿಧಿ, ಜೀವನದ ಅಧಿಕಾರ (Right To life) ದೇಶದ ಮೂಲಭೂತ ಅಧಿಕಾರವಾಗಿದೆ. ವಿಶ್ವಮಟ್ಟದಲ್ಲಿ ಈ ಅಧಿಕಾರಕ್ಕೆ ಭಯೋತ್ಪಾದನೆ ದೊಡ್ಡ ವಿಘ್ನವಾಗಿದೆ. ಪಾಕಿಸ್ತಾನ ಭಯೋತ್ಪಾದನೆಯ ಉತ್ಪಾದಕ ಕೇಂದ್ರ ಮತ್ತು ರಪ್ತು ಮಾಡುವ ದೇಶವಾಗಿದೆ. ಪಾಕಿಸ್ತಾನದ ರಾಜಕಾರಣದಲ್ಲಿ ಭಯೋತ್ಪಾದನೆ ಬೇರೂರಿದೆ. ಪಾಕಿಸ್ತಾನದ ಮೂಲಕವೇ ಭಯೋತ್ಪಾದನೆ ಮುಖ್ಯವಾಹಿನಿಗೆ ಬರುತ್ತಿದೆ ಎಂಬುವುದು ವಿಶ್ವಮಟ್ಟದಲ್ಲಿ ಗೊತ್ತಾಗಿದೆ ಎಂದು ಚಳಿ ಬಿಡಿಸಿದರು.

    ಇದೇ ವೇಳೆ ಪಾಕಿಸ್ತಾನ ಕಾಶ್ಮೀರದ ವಿಚಾರವನ್ನು ಪ್ರಸ್ತಾಪ ಮಾಡಿತು. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಮೂರು ಭಾರತದ ಅವಿಭಾಜ್ಯ ಅಂಗಗಳಾಗಿವೆ. ಈ ಮೂರು ಭಾಗಗಳು ಯಾವಾಗಲೂ ಭಾರತದ ಅಂಗಗಳಾಗಿಯೇ ಇರಲಿವೆ. ಇದರಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸಹ ಸೇರಿದೆ. ಪಾಕಿಸ್ತಾನ ಕಾನೂನುಬಾಹಿರ ಮತ್ತು ಬಲವಂತವಾಗಿ ಕಾಶ್ಮೀರದ ಭಾಗವನ್ನು ಆಕ್ರಮಿಸಿಕೊಂಡಿದೆ ಎಂದು ಭಾರತದ ಪ್ರತಿನಿಧಿ ಆರೋಪಿಸಿದರು.