Tag: Unicode

  • ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!

    ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!

    ಚಾಮರಾಜನಗರ: ಕನ್ನಡ ಅಕ್ಷರ ಶೈಲಿಗೆ ಬಂಡೀಪುರ ಹೆಸರಿನ ಹೊಸ ಫಾಂಟ್ ಸೇರ್ಪಡೆಗೊಂಡಿದೆ.

    KANNADA FLAG

    ಟಿ.ನರಸೀಪುರ ಮೂಲದ ಅನಿಮೇಷನ್ ಕೋರ್ಸ್ ಹಾಗು ಗ್ರಾಫಿಕ್ ಡಿಸೈನ್ ಶಿಕ್ಷಕ ಆರ್.ಮಂಜುನಾಥ್ ಬಂಡೀಪುರ ಹೆಸರಿನಲ್ಲಿ ಕನ್ನಡಕ್ಕೆ ಮತ್ತೊಂದು ಹೊಸ ಯುನಿಕೋಡ್ ಫಾಂಟ್ ವಿನ್ಯಾಸಗೊಳಿಸಿ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ:  ಪರ್ಯಾಯ ಅಂದ್ರೆ ಏನು? ಮಧ್ವಾಚಾರ್ಯರು ಕೊಟ್ಟಿರುವ ಅಕ್ಷಯ ಪಾತ್ರೆ, ಸಟ್ಟುಗವೇ ಅಧಿಕಾರ ಹಸ್ತಾಂತರಕ್ಕೆ ಅಂಕಿತ

    ಆನೆಗಳಿಂದ ಪ್ರೇರಣೆ!
    ಮಂಜುನಾಥ್ ಅವರು ತಮ್ಮ ಅಕ್ಷರ ಟೈಪ್ ಸ್ಟುಡಿಯೋದಿಂದ ಬಂಡೀಪುರ ಹೆಸರಿನಲ್ಲಿ ಹೊಸ ಫಾಂಟ್ ಬಿಡುಗಡೆ ಮಾಡಿದ್ದು, ಬಂಡೀಪುರದ ಆನೆಗಳಿಂದ ಪ್ರೇರಣೆಗೊಂಡು ಫಾಂಟ್ ರಚಿಸಿದ್ದಾರೆ. ಫಾಂಟ್ ಚೂಪಾದ ಅಂಚುನ್ನು ಎಷ್ಟು ಬೇಕಾದರು ಹಿಗ್ಗಿಸಬಹುದು. ದಪ್ಪ ಇರುವ ಈ ಹೊಸ ಯುನಿಕೋಡ್ ಫಾಂಟ್ ಆನೆಯ ದಂತ ಹಾಗು ಆನೆಯ ಸೊಂಡಿಲನ್ನು ಬಿಂಬಿಸುತ್ತಿದೆ.

    ಕನ್ನಡ ಯುನಿಕೋಡ್ ನಲ್ಲಿ ಕೆಲವೇ ಕೆಲವು ಅಕ್ಷರ ಶೈಲಿಗಳು ಲಭ್ಯವಿದ್ದು, ಯುನಿಕೋಡ್ ಕನ್ನಡ ಫಾಂಟ್ ಕೊರತೆ ನೀಗಿಸುವ ಯತ್ನವಾಗಿ ಬಂಡೀಪುರ ಫಾಂಟ್ ಬಿಡುಗಡೆ ಮಾಡಲಾಗಿದೆ. ಕನ್ನಡದ ಜೊತೆಗೆ ಇಂಗ್ಲೀಷ್, ಲ್ಯಾಟಿನ್ ಲಿಪಿಗಳ ಸಹಾಯದಿಂದ ಬಂಡೀಪುರ ಫಾಂಟ್ ರಚನೆ ಮಾಡಲಾಗಿದೆ. ಶೀರ್ಷಿಕೆಗಳಿಗೆ ಬಳಸಲು, ದೊಡ್ಡಗಾತ್ರದಲ್ಲಿ ಬ್ಯಾನರ್ ಗಳಲ್ಲಿ ಬಳಸಲು ಉತ್ತಮ ಫಾಂಟ್ ಇದಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ ಸ್ಫೋಟ – 41,457 ಪಾಸಿಟಿವ್, ಬೆಂಗಳೂರಿನಲ್ಲಿ 25,595 ಕೇಸ್ ಪತ್ತೆ

     

    ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: https://aksharatypestudio.in/fonts/bandipura/

     

  • ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ- ಅರವಿಂದ ಲಿಂಬಾವಳಿ

    ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

    ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

    ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು. ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಅಲ್ಲದೆ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.

    ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ : 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್ 

    ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದಿರುವ ಅವರು  ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

    ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.