Tag: Union Budget 2025

  • ಏ.1ರಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್

    ಏ.1ರಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್

    ನವದೆಹಲಿ: ಏ.1ರಿಂದ ಆದಾಯ ತೆರಿಗೆ ಸೇರಿದಂತೆ ಯುಪಿಐ (UPI) ಮತ್ತು ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ (Minimum Bank Balance) ನಿಯಮಗಳಲ್ಲಿ ಬದಲಾವಣೆಯಾಗಲಿದೆ.

    ಇದೇ ಏ.1 ರಿಂದ ಹಣಕಾಸು ನಿಯಮಗಳಲ್ಲಿ ಹಲವಾರು ಬದಲಾವಣೆಗಳು ಜಾರಿಗೆ ಬರಲಿದ್ದು, ತೆರಿಗೆದಾರರು, ಯುಪಿಐ ಬಳಕೆದಾರರು, ಕ್ರೆಡಿಟ್ ಕಾರ್ಡ್ ಹೊಂದಿರುವವರು ಮತ್ತು ಪಿಂಚಣಿದಾರರ ಮೇಲೆ ಇದು ಪರಿಣಾಮ ಬೀರಲಿದೆ. 2025-26ರ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆ, ಆದಾಯ ತೆರಿಗೆ, ಕ್ರೆಡಿಟ್ ಕಾರ್ಡ್ಗಳು, ಯುಪಿಐ ಭದ್ರತೆ, ಜಿಎಸ್‌ಟಿ ಹಾಗೂ ಬ್ಯಾಂಕಿಂಗ್ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರಲಿದೆ.ಇದನ್ನೂ ಓದಿ:ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    2025ರ ಕೇಂದ್ರ ಬಜೆಟ್‌ನಲ್ಲಿ ಪರಿಷ್ಕೃತ ಆದಾಯ ತೆರಿಗೆ ಸ್ಲ್ಯಾಬ್‌ಗಳು ಮತ್ತು ಕಡಿತಗಳನ್ನು ಪರಿಚಯಿಸಿದೆ. ಅವುಗಳನ್ನು ಈದೀಗ ಜಾರಿಗೆ ತರಲಾಗುತ್ತಿದ್ದು, ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವರ್ಷಕ್ಕೆ 12 ಲಕ್ಷ ರೂ.ವರೆಗೆ ಗಳಿಸುವವರು ಆದಾಯ ತೆರಿಗೆ ಪಾವತಿಸುವುದರಿಂದ ವಿನಾಯಿತಿ ಪಡೆಯುತ್ತಾರೆ. ಅದಕ್ಕೂ ಹೆಚ್ಚು ಸಂಬಳ ಪಡೆಯುವವರು 75,000 ರೂ.ಗಳ ಪ್ರಯೋಜನ ಪಡೆಯುತ್ತಾರೆ, ಇದರಿಂದಾಗಿ 12.75 ಲಕ್ಷ ರೂ.ವರೆಗಿನ ವಾರ್ಷಿಕ ಆದಾಯವು ತೆರಿಗೆ ಮುಕ್ತವಾಗಿರುತ್ತದೆ.

    ಯುಪಿಐ ನಿಯಮಗಳು:
    ಏ.1 ರಿಂದ ನಿಷ್ಕ್ರಿಯ ಮೊಬೈಲ್ ಸಂಖ್ಯೆಗಳಿಂದ ಯುಪಿಐ ವಹಿವಾಟು ನಡೆಸಲಾಗುವುದಿಲ್ಲ. ಭದ್ರತೆಯನ್ನು ಹೆಚ್ಚಿಸಲು, ಬ್ಯಾಂಕ್‌ಗಳು ಮತ್ತು ಫೋನ್ ಪೇ ಮತ್ತು ಗೂಗಲ್ ಪೇನಂತಹ ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳಲ್ಲಿ ದೀರ್ಘಕಾಲದವರೆಗೆ ಬಳಕೆಯಾಗದೆ ಉಳಿದಿರುವ ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಖಾತೆಗಳನ್ನು ಹಂತಹಂತವಾಗಿ ರದ್ದುಗೊಳಿಸಲು ಸೂಚಿಸಲಾಗಿದೆ. ಹೀಗಾಗಿ ಏ.1ರ ಮೊದಲು ಮೊಬೈಲ್ ಸಂಖ್ಯೆಗಳನ್ನು ನವೀಕರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಆದೇಶಿಸಿದೆ.

    ಪಿಂಚಣಿ ಯೋಜನೆ:
    ಮತ್ತೊಂದು ಮಹತ್ವದ ಆರ್ಥಿಕ ಬದಲಾವಣೆಯೆಂದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಬದಲಾಯಿಸುವ ಏಕೀಕೃತ ಪಿಂಚಣಿ ಯೋಜನೆ. 2024ರ ಆಗಸ್ಟ್ನಲ್ಲಿ ಪರಿಚಯಿಸಲಾದ ಯುಪಿಎಸ್, ಏ.1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಬದಲಾವಣೆಯಿಂದ ಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಲಿದೆ. ಕನಿಷ್ಠ 25 ವರ್ಷಗಳ ಸೇವೆಯನ್ನು ಹೊಂದಿರುವವರು ತಮ್ಮ ಕೊನೆಯ 12 ತಿಂಗಳ ಸರಾಸರಿ ಮೂಲ ವೇತನದ ಶೇ.50 ರಷ್ಟಕ್ಕೆ ಸಮಾನವಾದ ಪಿಂಚಣಿಯನ್ನು ಪಡೆಯಲಿದ್ದಾರೆ.

    ಕನಿಷ್ಠ ಬ್ಯಾಲೆನ್ಸ್:
    ಬ್ಯಾಂಕಿಂಗ್ ವಲಯದಲ್ಲಿ, ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾದಂತಹ ಪ್ರಮುಖ ಬ್ಯಾಂಕ್‌ಗಳು ಕನಿಷ್ಠ ಬ್ಯಾಲೆನ್ಸ್ ನಿಯಮಗಳನ್ನು ನವೀಕರಿಸುತ್ತಿದ್ದು, ಪರಿಷ್ಕೃತ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಸಾಧ್ಯವಾಗದಿದ್ದರೆ ಗ್ರಾಹಕರು ಹೊಸ ಬ್ಯಾಂಕಿಂಗ್ ಮಾರ್ಗಸೂಚಿಗಳ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ.ಇದನ್ನೂ ಓದಿ:ಮೇ.1 ರಿಂದ ಎಟಿಎಂ ವಿತ್ ಡ್ರಾ ಶುಲ್ಕ 2 ರೂ. ಹೆಚ್ಚಳ

  • ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಏನು – ಪರಮೇಶ್ವರ್ ಪ್ರಶ್ನೆ

    ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಏನು – ಪರಮೇಶ್ವರ್ ಪ್ರಶ್ನೆ

    ಬೆಂಗಳೂರು: ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಏನು ಎಂದು ಮೊದಲು ಹೇಳಲಿ. ಬಳಿಕ ಕರ್ನಾಟಕದ ಆರ್ಥಿಕ ಸ್ಥಿತಿ ಬಗ್ಗೆ ಮಾತನಾಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿರುದ್ಧ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನಿರ್ಮಲಾ ಸೀತಾರಾಮನ್ ಈ ದೇಶದ ಹಣಕಾಸು ಸಚಿವೆ. ಅವರ ಬಗ್ಗೆ ನಮಗೆ ಗೌರವ ಇದೆ. ನಮ್ಮ ರಾಜ್ಯದ ಹಣಕಾಸು ಬಗ್ಗೆ ಮಾತಾಡುವ ಮೊದಲು ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಹೇಳಲಿ? ಕರ್ನಾಟಕದಿಂದ ರಾಜ್ಯಸಭೆಗೆ ಹೋಗಿದ್ದಾರೆ. ಕರ್ನಾಟಕದಿಂದ ಹೋಗಿ ಕರ್ನಾಟಕದ ಹಿತ ಕಾಪಾಡಲು ಅವರು ವಿಫಲರಾಗಿದ್ದಾರೆ. ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಕೊಡುಗೆ ಏನು? ಅವರು ಯಾವ ಯೋಜನೆ ಕೊಟ್ಟಿದ್ದಾರೆ? ಅವರು ಹೇಳಿದ ಮೇಲೆ ಅವರನ್ನು ಹೊಗಳೋಣ. ಅದು ಬಿಟ್ಟು ರಾಜ್ಯದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ: ಮಹಾ ಕುಂಭಮೇಳ ಕಾಲ್ತುಳಿತದಲ್ಲಿ 1,000 ಜನ ಸಾವು – ಮಲ್ಲಿಕಾರ್ಜುನ ಖರ್ಗೆ ಬಾಂಬ್‌

    ಭದ್ರ ಯೋಜನೆಗೆ 5 ಸಾವಿರ ರೂ., ರಾಷ್ಟ್ರೀಯ ಯೋಜನೆ ಮಾಡ್ತೀವಿ ಎಂದು ಹೇಳಿ ಮಾಡಿದರಾ? ನಾವು ಬಡವರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆ ಮಾಡಿದ್ದೇವೆ. ರಾಜಕೀಯಕ್ಕೆ ಮಾಡಿದ್ದಾರೆ ಎಂದು ಹೇಳಿದರೂ ಕೂಡ ತಪ್ಪೇನಿಲ್ಲ. ನಾವು ಕೊಟ್ಟ ಗ್ಯಾರಂಟಿಯಿಂದ ತಾಯಿ ಮಗಳಿಗೆ ಕಂಪ್ಯೂಟರ್ ಕೊಡಿಸಿದ್ದಾರೆ. ಇಂತಹ ಅನೇಕ ಉದಾಹರಣೆ ಕೊಡಬಹುದು. ಕರ್ನಾಟಕದ ಬಳಿ ಹಣ ಇಲ್ಲ, ದಿವಾಳಿ ಆಗಿದೆ ಅನ್ನೋದು ಸರಿಯಲ್ಲ. ಹೀಗೆ ಅವರು ಮಾತನಾಡಿದರೆ ಮೊದಲು ನೀವು ಏನ್ ಮಾಡಿದ್ದೀರಾ ಕೇಳಬೇಕಾಗುತ್ತೆ ಎಂದು ವಾಗ್ದಾಳಿ ನಡೆಸಿದರು.

    ಬಜೆಟ್‌ನಲ್ಲಿ ಕರ್ನಾಟಕಕ್ಕೆ ತಮಿಳುನಾಡಿಗಿಂತ ಕಡಿಮೆ ಹಣ ಕೊಟ್ಟಿರೋದಕ್ಕೆ ನಮಗೆ ನಾಚಿಕೆ ಆಗುತ್ತದೆ. ಅವರು ಏನ್ ಕೊಟ್ಟಿದ್ದಾರೆ ಅಂತ ಹೇಳಲಿ. ನಾವು ಪಕ್ಷ ಯಾವುದು ಎಂದು ನೋಡದೇ ಹೊಗಳುತ್ತೇವೆ. ಯಾವುದಾದರೂ ಯೋಜನೆ ಕೊಡಬೇಕು ಅಲ್ಲವಾ? ಬೆಂಗಳೂರು, ನೀರಾವರಿ ಯೋಜನೆಗೆ ಹಣ ಕೊಟ್ಟಿದ್ದೇವೆ ಅಂತ ಹೇಳಲಿ ನೋಡೋಣ ಎಂದು ಕಿಡಿಕಾರಿದರು.ಇದನ್ನೂ ಓದಿ: ಸಿದ್ದರಾಮಯ್ಯ ಕರಡು ಬಿಲ್ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿ: ಪರಮೇಶ್ವರ್

  • ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ

    ʻಕೇಂದ್ರದಿಂದ ರಾಜ್ಯಕ್ಕೆ ಮತ್ತೆ ಚೊಂಬು, ಚಿಪ್ಪು.. ಗೋವಿಂದ ಗೋವಿಂದ..ʼ – ಎಂ. ಲಕ್ಷ್ಮಣ್‌ ಲೇವಡಿ

    ಮಡಿಕೇರಿ: ಕೇಂದ್ರ ಬಿಜೆಪಿ ಸರ್ಕಾರವು (BJP Union Government) ಈ ಸಾಲಿನ ಬಜೆಟ್‌ನಲ್ಲೂ (Budget 2025) ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ಕೊಟ್ಟಿದೆ. ಈ ಮೂಲಕ ಯಾವುದೇ ಹೊಸ ಯೋಜನೆ ನೀಡದೇ ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ (M Laxman) ಲೇವಡಿ ಮಾಡಿದ್ದಾರೆ.

    ಖಾಲಿ ಚೊಂಬು ಹಾಗೂ ಮೂರುನಾಮ ಬಳಿದ ತೆಂಗಿನಕಾಯಿ ಚಿಪ್ಪುಗಳನ್ನು ಮುಂದಿಟ್ಟುಕೊಂಡು ಮಡಿಕೇರಿಯಲ್ಲಿ ‌ಪತ್ರಿಕಾಗೋಷ್ಠಿ ನಡೆಸಿದ ಅವರು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಬಾಣ ಪ್ರಯೋಗಿಸಿದರು. ಗೋವಿಂದ.. ಗೋವಿಂದ.. ಎಂದು ಕೂಗುತ್ತಲೇ ಖಾಲಿ ಚೊಂಬು, ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿದರು.

    ಅಲ್ಲದೇ ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಹೆಚ್‌.ಡಿ ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.

    ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ, ಅದಕ್ಕೆ ಸ್ಪಂದನೆ ದೊರೆತಿಲ್ಲ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ 14 ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ 50 ಲಕ್ಷ ಕೋಟಿ ದಾಟಿದೆ. 16 ಲಕ್ಷ ಕೋಟಿ ಸಾಲ ತೆಗೆದುಕೊಂಡಿದ್ದಾರೆ. 1947 ರಿಂದ 2014ರ ವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ 10 ವರ್ಷಗಳಲ್ಲಿ ಸಾಲದ ಪ್ರಮಾಣ 205 ಲಕ್ಷ ಕೋಟಿಯಾಗಿದೆ ಎಂದು ದೂರಿದರು.

    ದೇಶವನ್ನು ಅಭಿವೃದ್ಧಿ ಪಥದತ್ತ ನಡೆಸುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ನರೇಗಾ ಅನುದಾನವನ್ನೂ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರಕ್ಕೆ ಅನುದಾನ ಹಂಚಿಕೆಯಲ್ಲೂ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಡೀ ದೇಶದಲ್ಲಿ ಟ್ಯಾಕ್ಸ್ ಕಟ್ಟುವುದಲ್ಲಿ ಕರ್ನಾಟಕದ 2ನೇ ಸ್ಥಾನದಲ್ಲಿ ಇದೆ. ಆದರೆ ನಮ್ಮ ಹಣವನ್ನು ನಮಗೆ ಕೊಡದೇ ನಮ್ಮಿಂದ ಸಂಗ್ರಹ ಮಾಡಿರುವ ಹಣವನ್ನು ಬೇರೆ ಬೇರೆ ರಾಜ್ಯಗಳಿಗೆ ಕೊಡುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ರು.

    ಇದೇ ವೇಳೆ ಕರ್ನಾಟಕದಲ್ಲಿ ಜಾತಿ ಜನಗಣತಿಯ ವರದಿ ಸದ್ಯದಲ್ಲೇ ಬಿಡುಗಡೆಯಾಗಲ್ಲಿದೆ ಕಾಂಗ್ರೆಸ್ ಪಕ್ಷದ ನಾಯಕರು ಯಾವುದೇ ರೀತಿಯಲ್ಲಿ ಇದಕ್ಕೆ ವಿರೋಧ ವ್ಯಕ್ತ ಪಡಿಸುತ್ತಿಲ್ಲ ಎಂದು ತಿಳಿಸಿದ್ರು.

  • ಕೇಂದ್ರದಿಂದ ಬೋಗಸ್ ಬಜೆಟ್, ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ: ಡಿಕೆ ಸುರೇಶ್

    ಕೇಂದ್ರದಿಂದ ಬೋಗಸ್ ಬಜೆಟ್, ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ: ಡಿಕೆ ಸುರೇಶ್

    ರಾಮನಗರ: ಇದು ಬೋಗಸ್ ಬಂಡಲ್ ಬಜೆಟ್. ಬಿಹಾರಕ್ಕೆ (Bihar) ಬಂಪರ್ ಕೊಟ್ಟು ಕರ್ನಾಟಕಕ್ಕೆ (Karnataka) ಬಂಡಲ್ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಕಿಡಿಕಾರಿದ್ದಾರೆ.

    ಚನ್ನಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಇಡೀ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದಾರೆ. ಇದನ್ನು ಸರಿಪಡಿಸದಿದ್ದರೆ ಬಹುಶಃ ಬೇರೆಬೇರೆ ರೀತಿ ಕೂಗೂ ಏಳುತ್ತಾ ಇರುತ್ತದೆ. ಆಮೇಲೆ ತಡೆಯೋದಕ್ಕೆ ನಿಮಗೆ ಕಷ್ಟ ಆಗುತ್ತದೆ. ಬಿಜೆಪಿಯವರಿಗೆ (BJP) ಚುನಾವಣಾ ದೃಷ್ಟಿ ಅಷ್ಟೇ. ಅವರಿಗೆ ಅಭಿವೃದ್ಧಿ ಮುಖ್ಯ ವಿಚಾರ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ನವೆಂಬರ್ ಗೂಗ್ಲಿ ಹಾಕಿದ ಆರ್.ಅಶೋಕ್; ಕಾಂಗ್ರೆಸ್ ಸಚಿವರು ಕೆಂಡ, ಇತ್ತ ದೆಹಲಿಗೆ ಹೋಗ್ತಾರಾ ಪರಂ ಟೀಂ?

    ಮಧ್ಯಮ ವರ್ಗಕ್ಕೆ ಒಂದಿಷ್ಟು ತೆರಿಗೆ ವಿನಾಯಿತಿ ನೀಡಿ ಉಳಿದಂತವರಿಗೆ ರೈತರು, ಮಹಿಳೆಯರು ಯುವಕರಿಗೆ, ದಲಿತರ ಹೆಸರು ಹೇಳಿದ್ದಾರೆ. ನೊಂದ ಜನರಿಗೆ ಯಾವ ರೀತಿ ಯೋಜನೆ ಮಾಡುತ್ತೇವೆ ಎಂದು ಹೇಳಿಲ್ಲ. ಜೊತೆಗೆ ಕರ್ನಾಟಕದ 5 ಲಕ್ಷ ಕೋಟಿ ತೆರಿಗೆ ಹಣ ಕೆಂದ್ರದ ಖಾತೆಗೆ ಹೋಗುತ್ತಿದೆ. ಇಷ್ಟು ಹಣ ಕೊಟ್ಟರೂ ರಾಜ್ಯದ ಯಾವುದೇ ಯೋಜನೆಗೆ ಅನುಮೋದನೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸ್ನೇಹಿತನಿಗೆ ಸಾಲ ಕೊಡಿಸಿದ್ದ ತಪ್ಪಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

    ಕನ್ನಡಿಗರು ಎಚ್ಚೆತ್ತುಕೊಳ್ಳುವ ಕಾಲ ಹತ್ತಿರ ಬಂದಿದೆ. ಇದು ರಾಜಕೀಯ ಹೇಳಿಕೆ ಅಲ್ಲ. ಕನ್ನಡಿಗರು ಮಲಗಿದರೆ ನಮ್ಮನ್ನು ಮುಗಿಸುತ್ತಾರೆ. ಕನ್ನಡಿಗರೇ ದಯವಿಟ್ಟು ಎದ್ದೇಳಿ. ಕರ್ನಾಟಕದ ನಿಮ್ಮ ಮಕ್ಕಳನ್ನು ಬೇರೆಯವರು ಆಳುವ ಸ್ಥಿತಿ, ಬೇರೆಯವರ ಹತ್ರ ಕೂಲಿ ಮಾಡುವ ಪರಿಸ್ಥಿತಿ ಬರುತ್ತದೆ. ತಕ್ಷಣ ಎದ್ದು ಹೋರಾಟ ಮಾಡಿ. ರಾಜ್ಯದ ಏಳೂವರೆ ಕೋಟಿ ಕನ್ನಡಿಗರಿಗೆ ನಾನು ಕರೆ ಕೊಡುತ್ತಿದ್ದೇನೆ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿಯ ಖಾಸಗಿ ಫೋಟೋ, ವಿಡಿಯೋ ವೈರಲ್‌ – ಪತಿ ವಿರುದ್ಧ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತ್ನಿ

    ರಾಜ್ಯ ಯಾವ ಮಂತ್ರಿಗಳು ನನ್ನನ್ನು ಸಂಪರ್ಕ ಮಾಡಿಲ್ಲ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಮಾಜಿ ಸಿಎಂ. ಯಾರು ಹೇಳಲಿ, ಬಿಡಲಿ ಅವರ ಮೇಲೆ ಜವಾಬ್ದಾರಿ ಇದೆ. ಅದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ರಾಜ್ಯದ ಪ್ರತಿ ವಿಚಾರ ಅವರಿಗೆ ಗೊತ್ತಿದೆ. ಕರ್ನಾಟಕದ ಗೌರವ, ಜನರ ರಕ್ಷಣೆ, ಯೋಜನೆ ಬಗ್ಗೆ ಒತ್ತಾಯ ಮಾಡೋದು ಅವರ ಜವಾಬ್ದಾರಿ. ಅವರನ್ನು ಕೇಳಬೇಕು, ಅರ್ಜಿ ಕೊಡಬೇಕು ಎಂದೇನಿಲ್ಲ. ಅದು ನಿಮ್ಮ ಜವಾಬ್ದಾರಿ. ದಯವಿಟ್ಟು ಕನ್ನಡಿಗರಿಗೆ ಅನ್ಯಾಯ ಮಾಡಬೇಡಿ. ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ. ರಾಜಕೀಯವನ್ನು ಚುನಾವಣೆಯಲ್ಲಿ ಮಾಡೋಣ. ಆದರೆ ಕರ್ನಾಟಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸಹಕಾರ ನೀಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ಗೆ ಮಾತೃವಿಯೋಗ

  • ಮಧ್ಯಮ ವರ್ಗದ ಜನತೆ ಪ್ರಧಾನಿ ಮೋದಿ ಹೃದಯದಲ್ಲಿದ್ದಾರೆ: ಅಮಿತ್‌ ಶಾ

    ಮಧ್ಯಮ ವರ್ಗದ ಜನತೆ ಪ್ರಧಾನಿ ಮೋದಿ ಹೃದಯದಲ್ಲಿದ್ದಾರೆ: ಅಮಿತ್‌ ಶಾ

    ನವದೆಹಲಿ: 2025 ರ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಕಡಿತವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ (PM Modi) ಹೃದಯದಲ್ಲಿದೆ ಎಂದು ಬಣ್ಣಿಸಿದ್ದಾರೆ.

    12 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಅಮಿತ್‌ ಶಾ ಅವರು, ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುನ್ನಡೆದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

    ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಎಂದು ಅಮಿತ್‌ ಶಾ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಕೇಂದ್ರ ಬಜೆಟ್ 2025 ಅನ್ನು ಮಂಡಿಸುತ್ತಾ, ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ 12 ಲಕ್ಷ ರೂ.ಗಳವರೆಗೆ – ಅಂದರೆ ಪ್ರಮಾಣಿತ ಕಡಿತಗಳನ್ನು ಒಳಗೊಂಡಂತೆ 12.75 ಲಕ್ಷ ರೂ.ಗಳವರೆಗೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಲಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: Union Budget 2025 | ಯಾವ ವರ್ಷ ಎಷ್ಟು ಲಕ್ಷ ತೆರಿಗೆ ವಿನಾಯಿತಿ ಸಿಕ್ಕಿತ್ತು? – ಇಲ್ಲಿದೆ ಪೂರ್ಣ ವಿವರ

  • Budget 2025: ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್‌ ಕ್ಯಾನ್ಸರ್‌ ಕೇಂದ್ರ ಸ್ಥಾಪನೆ

    Budget 2025: ದೇಶದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇಕೇರ್‌ ಕ್ಯಾನ್ಸರ್‌ ಕೇಂದ್ರ ಸ್ಥಾಪನೆ

    ನವದೆಹಲಿ: ಮುಂದಿನ 3 ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಡೇಕೇರ್‌ ಕ್ಯಾನ್ಸರ್‌ ಕೇಂದ್ರಗಳನ್ನು (Daycare Cancer Centres) ಸ್ಥಾಪಿಸಲಾಗುವುದು ಎಂದು ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

    ಈ ಪೈಕಿ 200 ಕೇಂದ್ರಗಳನ್ನು 2025-26ರಲ್ಲಿ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 10,000 ಸೀಟುಗಳನ್ನು ಸೇರಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಈ ಕಾಲೇಜುಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Budget 2025: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    ಬಜೆಟ್‌ನಲ್ಲಿ, ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಮತ್ತು ಇತರ ತೀವ್ರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೆರವಾಗಲು 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಾಗಿದೆ.

    ಔಷಧ ಕಂಪನಿಗಳು ನಡೆಸುವ ರೋಗಿಯ ಸಹಾಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಔಷಧಿಗಳನ್ನು ರೋಗಿಗಳಿಗೆ ಉಚಿತವಾಗಿ ಪೂರೈಸಿದರೆ, ಅವು ಬಿಸಿಡಿಯಿಂದ ಸಂಪೂರ್ಣವಾಗಿ ವಿನಾಯಿತಿ ಪಡೆಯಲಿವೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: Budget 2025: ಒಂದು ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ?

    ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮ ಮತ್ತು ‘ಹೀಲ್ ಇನ್ ಇಂಡಿಯಾ’ಗೆ ಉತ್ತೇಜನ ನೀಡಲಾಗುವುದು. ಜೊತೆಗೆ ಸಾಮರ್ಥ್ಯ ವೃದ್ಧಿ ಮತ್ತು ಸುಲಭ ವೀಸಾ ಮಾನದಂಡಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ.

    ಗಿಗ್ ಕೆಲಸಗಾರರಿಗೆ (ಗುತ್ತಿಗೆ ಸಂಸ್ಥೆ ಕೆಲಸಗಾರರು) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಆಯವ್ಯಯದಲ್ಲಿ ಸೀತಾರಾಮನ್‌ ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

  • ಸಚಿವರ ವೇತನಕ್ಕೆ ಬಜೆಟ್‌ನಲ್ಲಿ 1,024 ಕೋಟಿ ರೂ. ಹಂಚಿಕೆ

    ಸಚಿವರ ವೇತನಕ್ಕೆ ಬಜೆಟ್‌ನಲ್ಲಿ 1,024 ಕೋಟಿ ರೂ. ಹಂಚಿಕೆ

    ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ (Union Budget 2025) ಸಚಿವರ ವೇತನಕ್ಕಾಗಿ 1,024 ಕೋಟಿ ಹಣವನ್ನು ಹಂಚಿಕೆ ಮಾಡಲಾಗಿದೆ.

    ಶನಿವಾರ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ, ಸಚಿವ ಸಂಪುಟ, ಸಂಪುಟ ಸಚಿವಾಲಯ, ಪ್ರಧಾನ ಮಂತ್ರಿ ಕಚೇರಿಯ ವೆಚ್ಚಗಳು, ರಾಜ್ಯದ ಅತಿಥಿಗಳ ಆತಿಥ್ಯ ಮತ್ತು ಮನರಂಜನೆಗಾಗಿ 1,024.30 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ

    2024-25 ರಲ್ಲಿ 1,021.83 ಕೋಟಿ ರೂ. ಮೀಸಲಿಡಲಾಗಿತ್ತು. ಆ ಮೊತ್ತದಲ್ಲಿ ಈ ಬಾರಿ ಹೆಚ್ಚಳ ಆಗಿದೆ. ಮುಂಬರುವ ಹಣಕಾಸು ವರ್ಷದಲ್ಲಿ ಸಚಿವ ಸಂಪುಟದ ವೆಚ್ಚಗಳಿಗಾಗಿ ಒಟ್ಟು 619.04 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. 2024-25ರಲ್ಲಿ ಇದು 540.95 ಕೋಟಿ ರೂ.ಗಳಷ್ಟಿತ್ತು ಎಂದು ಹೇಳಿದ್ದಾರೆ.

    ಸಂಪುಟ ಸಚಿವರು, ರಾಜ್ಯ ಸಚಿವರು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಸಂಬಳ, ಇತರ ಭತ್ಯೆಗಳು ಮತ್ತು ಪ್ರಯಾಣದ ವೆಚ್ಚಕ್ಕಾಗಿ ಹಣ ಮೀಸಲಿಡಲಾಗಿದೆ. ಇದು ವಿವಿಐಪಿಗಳಿಗಾಗಿ ವಿಶೇಷ ಹೆಚ್ಚುವರಿ ಅವಧಿ ವಿಮಾನ ಕಾರ್ಯಾಚರಣೆಗಳ ನಿಬಂಧನೆಯನ್ನು ಸಹ ಒಳಗೊಂಡಿದೆ. ಇದನ್ನೂ ಓದಿ: Union Budget 2025| ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು?

    ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯಕ್ಕೆ 2024-25ರಲ್ಲಿ 270.08 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಾರಿ 182.75 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

  • ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಐತಿಹಾಸಿಕ ಬಜೆಟ್: ನಿಖಿಲ್

    ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಐತಿಹಾಸಿಕ ಬಜೆಟ್: ನಿಖಿಲ್

    ರಾಮನಗರ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರು (Nirmala Sitharaman) ಮಂಡನೆ ಮಾಡಿರೋದು ಐತಿಹಾಸಿಕ ಬಜೆಟ್. ಮಧ್ಯಮ ವರ್ಗಕ್ಕೆ ಅನುಕೂಲ ಆಗುವಂತೆ ನಿರ್ಣಯ ಮಾಡಿದ್ದಾರೆ ಎಂದು ಕೇಂದ್ರ ಬಜೆಟ್ ಬಗ್ಗೆ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರತಿಕ್ರಿಯೆ ನೀಡಿದ್ದಾರೆ.

    ರಾಮನಗರದಲ್ಲಿ (Ramanagara) ಮಾಧ್ಯಮಗಳ ಜೊತೆ ಮಾತನಾಡಿದ ಅವರು, 12 ಲಕ್ಷದ ವರೆಗೂ ತೆರಿಗೆ ವಿನಾಯಿತಿ ನೀಡಿರುವುದು ಖುಷಿಯ ವಿಚಾರ. ಮಧ್ಯಮ ವರ್ಗಕ್ಕೆ ಆರ್ಥಿಕ ಶಕ್ತಿ ತುಂಬುವ ಕೆಲಸ ಆಗಿದೆ. ಪ್ರಧಾನ ಮಂತ್ರಿಗಳ ಕನಸಿನಂತೆ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಾಗಿದೆ ಎಂದರು. ಇದನ್ನೂ ಓದಿ: ಬಜೆಟ್‌ ಮಂಡನೆ ವೇಳೆ ನಿರ್ಮಲಾ ಉಲ್ಲೇಖಿಸಿದ ಕವಿತೆ ಬರೆದ ಗುರಜದ ವೆಂಕಟ ಅಪ್ಪರಾವ್ ಯಾರು ಗೊತ್ತಾ?

    ಚನ್ನಪಟ್ಟಣ ಗೊಂಬೆ ಉದ್ಯಮಕ್ಕೆ ಪ್ರೋತ್ಸಾಹ ನೀಡಿರುವುದು ಸ್ವಾಗತಾರ್ಹ. ಬಜೆಟ್ ಬಗ್ಗೆ ಪರ-ವಿರೋಧ ಚರ್ಚೆ ಸಹಜ. ಆದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜ್ಯಕ್ಕೆ ಅನುದಾನ ಬರುವ ನಿರೀಕ್ಷೆ ಇದೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಉತ್ತಮ ಬಜೆಟ್ ಎಂದು ತಿಳಿಸಿದರು. ಇದನ್ನೂ ಓದಿ: ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

  • ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

    ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ ಸರ್ಕಾರ: ಆರ್‌.ಅಶೋಕ್

    ಬೆಂಗಳೂರು: ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ (Union Budget 2025) ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R.Ashok) ಹೇಳಿದರು.

    ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013-14 ರ ಮನಮೋಹನ್‌ ಸಿಂಗ್‌ ಸರ್ಕಾರದಲ್ಲಿ ಬಜೆಟ್‌ ಗಾತ್ರ 16,65,297 ಕೋಟಿ ರೂ. ಆಗಿತ್ತು. 2025-26 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 50,65,345 ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಲೂಟಿಯಾಗುತ್ತಿದ್ದ ಹಣವನ್ನು ಮರಳಿ ತಂದಿದ್ದರಿಂದ ಬಜೆಟ್‌ ಗಾತ್ರ ಹೆಚ್ಚಾಗಿದೆ. ಹಿಂದೆ 11,09,997 ಕೋಟಿ ರೂ. ಯೋಜನೇತರ ವೆಚ್ಚವಾಗಿದ್ದರೆ, ಈಗ ಅದು 39,44,255 ಕೋಟಿ ರೂ. ಗೆ ಏರಿದೆ. ಬಂಡವಾಳ ವೆಚ್ಚ ಆಗ 2,29,129 ಕೋಟಿ ರೂ. (13.7%) ಆಗಿದ್ದು, ಈಗ 11,21,090 ಕೋಟಿ ರೂ. ಆಗಿದೆ. ಅಂದರೆ ಬಂಡವಾಳ ವೆಚ್ಚ 9 ಲಕ್ಷ ಕೋಟಿ ರೂ. (22.13%) ಏರಿಕೆ ಕಂಡಿದೆ. ಅಂದರೆ ತೆರಿಗೆ ಸೋರಿಕೆ, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲಾಗಿದೆ ಎಂದರು. ಇದನ್ನೂ ಓದಿ: Union Budget 2025| ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು?

    ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಸಿಗುವ ಸಾಲದ ಮಿತಿಯನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ. ಗೆ ಏರಿಸಲಾಗಿದೆ. ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂ.ನಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ವರ್ಗದ 5 ಲಕ್ಷ ಮಹಿಳೆಯರಿಗೆ ಹೊಸ ಯೋಜನೆಯಡಿ ಟರ್ಮ್‌ಲೋನ್‌ ನೀಡಲಾಗುತ್ತದೆ ಎಂದರು.

    ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಕೇಂದ್ರ ಸರ್ಕಾರದಿಂದ 1 ಕೋಟಿ ತಾಯಂದಿರಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆ ತರಲಾಗಿದೆ. ಇದು ಬಾಣಂತಿಯರ ಆರೋಗ್ಯ ರಕ್ಷಣೆಗೆ ಸಹಾಯವಾಗಲಿದೆ ಎಂದು ತಿಳಿಸಿದರು.

    ಮಧ್ಯಮ ವರ್ಗಕ್ಕೆ ಉಡುಗೊರೆ
    ಮಧ್ಯಮ ವರ್ಗಕ್ಕೆ ಬಂಪರ್‌ ಉಡುಗೊರೆ ನೀಡಲಾಗಿದೆ. 12 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಜನರಿಗೆ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಗಾಳಿ ಒಂದನ್ನು ಬಿಟ್ಟು ಎಲ್ಲಕ್ಕೂ ತೆರಿಗೆ ವಿಧಿಸಿದ್ದಾರೆ. ಮೋದಿ ಸರ್ಕಾರ ಯಾವುದೇ ತೆರಿಗೆಯನ್ನು ಹೇರಿಲ್ಲ ಎಂದರು. ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್‌ ಕೇಂದ್ರ ಆರಂಭಿಸುವ ಮೂಲಕ ಬಡವರಿಗೆ ಅನುಕೂಲ ಕಲ್ಪಿಸಲಾಗಿದೆ. ಕ್ಯಾನ್ಸರ್‌ ಸೇರಿದಂತೆ 36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಕಾಲೇಜಿನಲ್ಲಿ 10 ಸಾವಿರ ಸೀಟುಗಳನ್ನು ಹೆಚ್ಚಿಸಲಾಗುತ್ತದೆ. ಟಿವಿ, ಸ್ವದೇಶಿ ಉಡುಪು, ಚರ್ಮ ಉತ್ಪನ್ನಗಳ ದರ ಇಳಿಕೆಯಾಗಲಿದೆ ಎಂದು ಹೇಳಿದರು.

    ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಂಗ್ರೆಸ್‌ ಇನ್ನೂ ಕೇಂದ್ರದಿಂದ ತಾರತಮ್ಯ ಎಂದು ಹೇಳುತ್ತಲೇ ಇದೆ. ಆದಾಯ ತೆರಿಗೆ ಮಿತಿ ಹೆಚ್ಚಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರು ಅಭಿನಂದನೆ ತಿಳಿಸಿಲ್ಲ. ಜಲಜೀವನ್‌ ಮಿಷನ್‌ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಎಲ್ಲ ಯೋಜನೆಗಳು ರಾಜ್ಯದ ಜನರಿಗೆ ಸಿಗಲಿದೆ. ಆದರೆ ಕರ್ನಾಟಕಕ್ಕೆ ಏನೂ ನೀಡಿಲ್ಲ ಎಂದು ಕಾಂಗ್ರೆಸ್‌ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: 3ನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಸ್ಫೂರ್ತಿದಾಯಕ ಬಜೆಟ್ – ಪ್ರಹ್ಲಾದ್ ಜೋಶಿ

    ಬೆಂಗಳೂರಿಗೆ 65 ಸಾವಿರ ಕೋಟಿ ರೂ., ನೀರಾವರಿಗೆ 85 ಸಾವಿರ ಕೋಟಿ ರೂ. ಅನುದಾನವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೇಳಿದ್ದಾರೆ. ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎಂದು ಮೊದಲು ಲೆಕ್ಕ ಕೊಡಲಿ. ಸಿಎಂ ಸಿದ್ದರಾಮಯ್ಯ ತೆರಿಗೆಯನ್ನು ಹೋಲಿಕೆ ಮಾಡುತ್ತಾರೆ. ಆಗ ಎಲ್ಲವೂ ಸೋರಿಕೆಯಾಗುತ್ತಿದ್ದುದರಿಂದ ಹೆಚ್ಚು ಅನುದಾನ ಬರುತ್ತಿರಲಿಲ್ಲ. ಈಗ ಸೋರಿಕೆ ನಿಯಂತ್ರಣವಾಗಿದೆ. ಕಾಂಗ್ರೆಸ್‌ ನಾಯಕರು ಕಾಮಾಲೆ ಕಣ್ಣನ್ನು ಬದಿಗಿಟ್ಟು ಮಾತಾಡಲಿ ಎಂದರು.

    ಸಿಎಂ ಸಿದ್ದರಾಮಯ್ಯನವರ ಸಂತೆ ಭಾಷಣವನ್ನು ಯಾರೂ ಕೇಳುವುದಿಲ್ಲ. ಮನಮೋಹನ್‌ ಸಿಂಗ್‌ ಅವರನ್ನು ಕೇಳಿದ ಕೂಡಲೇ ಅನುದಾನ ಕೊಟ್ಟಿದ್ದಾರಾ? ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಬೇಕೆಂದು ಇವರೇ ನಿಯಮ ಮಾಡಿದ್ದು, ಈಗ ಇವರೇ ಅದನ್ನು ವಿರೋಧಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಜನರೇ ಚೊಂಬು ಕೊಡುವ ಕಾಲ ಬರಲಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ದೂರಿದ್ದಾರೆ. ಈ ಸಮಸ್ಯೆಯನ್ನು ಮೊದಲು ಪರಿಹರಿಸಲಿ. ಈ ಸರ್ಕಾರ ಬೀಡಾಡಿ ದನಗಳಂತಾಗಿದೆ. ಇಲ್ಲಿ ಯಾರೂ ಹೇಳುವವರು, ಕೇಳುವವರು ಇಲ್ಲ ಎಂದು ತಿಳಿಸಿದರು.

  • Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ

    – ಹಿರಿಯ ನಾಗರಿಕರಿಗೆ ಬಡ್ಡಿ ಮೇಲಿನ ತೆರಿಗೆ ವಿನಾಯಿತಿ ಮಿತಿ 1 ಲಕ್ಷಕ್ಕೆ ಹೆಚ್ಚಳ

    ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿದ 2025-26ನೇ ಸಾಲಿನ ಆಯವ್ಯಯದಲ್ಲಿ, ಬಾಡಿಗೆ ಪಾವತಿಗೆ ಟಿಡಿಎಸ್ (TDS) ಮಿತಿಯನ್ನು 6 ಲಕ್ಷ ರೂ. ಹೆಚ್ಚಿಸಲಾಗಿದೆ.

    ಬಾಡಿಗೆ ಪಾವತಿಗಳು, ಹಣ ರವಾನೆ, ಉನ್ನತ ಶಿಕ್ಷಣ, ಸರಕುಗಳ ಮಾರಾಟ ಮತ್ತು ಅಪರಾಧಿಗಳ ಅಪರಾಧಮುಕ್ತೀಕರಣಕ್ಕೆ ಸಂಬಂಧಿಸಿದಂತೆ ಅವರು ಹಲವಾರು ಪ್ರಮುಖ ಸುಧಾರಣೆಗಳನ್ನು ಬಜೆಟ್‌ನಲ್ಲಿ ಪರಿಚಯಿಸಿದ್ದಾರೆ. ಇದನ್ನೂ ಓದಿ: ಮಧ್ಯಮ ವರ್ಗಕ್ಕೆ ಮತ್ತೊಂದು ಸಿಹಿ – ಎರಡನೇ ಮನೆಗೂ ತೆರಿಗೆ ಪಾವತಿಯಿಂದ ವಿನಾಯಿತಿ

    ಹಿರಿಯ ನಾಗರಿಕರಿಗೆ ಗುಡ್‌ನ್ಯೂಸ್
    ಹಿರಿಯ ನಾಗರಿಕರಿಗೆ ಬಡ್ಡಿಯ ಮೇಲಿನ ತೆರಿಗೆ ವಿನಾಯಿತಿ ಮಿತಿಯನ್ನು 50,000 ರೂ. ನಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.

    ಬಾಡಿಗೆ
    ಬಾಡಿಗೆ ಮೇಲಿನ ಟಿಡಿಎಸ್‌ನ ವಾರ್ಷಿಕ ಮಿತಿ 2.40 ಲಕ್ಷದಿಂದ 6 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದರರ್ಥ ಬಾಡಿಗೆದಾರರು ತಿಂಗಳಿಗೆ 20,000 ರೂ. ದರದಲ್ಲಿ ನೀಡಲಾಗುವ ಬಾಡಿಗೆಗೆ ಟಿಡಿಎಸ್ ಕಡಿತಗೊಳಿಸಬೇಕಾಗಿತ್ತು. ಆದರೆ, ಈಗ ಮಿತಿಯನ್ನು 50,000 ರೂ.ಗೆ ಹೆಚ್ಚಿಸಲಾಗಿದೆ.

    ಹಣ ರವಾನೆ
    ಆದಾಯ ಮೂಲದಿಂದ ತೆರಿಗೆ ಸಂಗ್ರಹ 7 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸಲಾಗಿದೆ. ವಿದೇಶದಿಂದ ರವಾನಿಸುವ ಹಣದ ಮೇಲಿನ ಟಿಡಿಎಸ್‌ ಕಡಿತಗೊಳಿಸಲಾಗಿದೆ. ಇದನ್ನೂ ಓದಿ: ಪ್ರವಾಸೋದ್ಯಮಕ್ಕೆ ಉತ್ತೇಜನ – ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್‌ ವಿಸ್ತರಣೆ

    ಉನ್ನತ ಶಿಕ್ಷಣ
    ಶೈಕ್ಷಣಿಕ ಉದ್ದೇಶಗಳಿಗಾಗಿ ಯಾರಾದರೂ ಬ್ಯಾಂಕಿನಿಂದ ಬ್ಯಾಂಕ್‌ನಿಂದ ಸಾಲ ಪಡೆದರೆ ಟಿಸಿಎಸ್ ಇರುವುದಿಲ್ಲ. ಹೆಚ್ಚಿನ ಟಿಡಿಎಸ್ ಕಡಿತದ ನಿಬಂಧನೆಗಳು ಪ್ಯಾನ್ ಅಲ್ಲದ ಪ್ರಕರಣಗಳಲ್ಲಿ ಮಾತ್ರ ಅನ್ವಯಿಸುತ್ತವೆ.

    ಸರಕುಗಳ ಮಾರಾಟ
    ಪ್ರಸ್ತುತ ಸರಕುಗಳ ಮಾರಾಟಕ್ಕೆ ಸಂಬಂಧಿಸಿದ ವಹಿವಾಟುಗಳಿಗೆ ಟಿಡಿಎಸ್ ಮತ್ತು ಟಿಸಿಎಸ್ ಎರಡೂ ಅನ್ವಯಿಸುತ್ತವೆ. ಟಿಸಿಎಸ್ ಅನ್ನು ಕೈಬಿಡುವ ಪ್ರಸ್ತಾಪ ಮಾಡಿದ್ದಾರೆ. ಇದನ್ನೂ ಓದಿ: Budget 2025 | ಉದ್ಯಮ ಆರಂಭಿಸುವ 5 ಲಕ್ಷ SC, ST ಮಹಿಳೆಯರಿಗೆ ಆರ್ಥಿಕ ನೆರವು: ನಿರ್ಮಲಾ ಸೀತಾರಾಮನ್‌