Tag: union government

  • ಕೇಂದ್ರದ ತೆರಿಗೆ ಹಂಚಿಕೆ ಅನ್ಯಾಯ ಕುರಿತು ಪಕ್ಕದ ರಾಜ್ಯಗಳಿಗೆ ಪತ್ರ ಬರೆದ ಸಿಎಂ

    ಕೇಂದ್ರದ ತೆರಿಗೆ ಹಂಚಿಕೆ ಅನ್ಯಾಯ ಕುರಿತು ಪಕ್ಕದ ರಾಜ್ಯಗಳಿಗೆ ಪತ್ರ ಬರೆದ ಸಿಎಂ

    ಬೆಂಗಳೂರು: ಕೇಂದ್ರ ಸರ್ಕಾರದ (Union Govt) ಅನ್ಯಾಯದ ತೆರಿಗೆ ಹಂಚಿಕೆ ಕುರಿತು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

    ಕರ್ನಾಟಕ ಮತ್ತು ತಲಾವಾರು GSDP ಹೆಚ್ಚಿರುವ ರಾಜ್ಯಗಳು ತಮ್ಮ ಆರ್ಥಿಕ ಕಾರ್ಯಕ್ಷಮತೆಗಾಗಿ ದಂಡವನ್ನು ಅನುಭವಿಸುತ್ತಿವೆ. ಅಸಮಾನವಾಗಿ ಕಡಿಮೆ ತೆರಿಗೆ ಹಂಚಿಕೆಗಳನ್ನು ಪಡೆಯುತ್ತಿವೆ. ಈ ಅನ್ಯಾಯದ ವಿಧಾನವು ಸಹಕಾರಿ ಫೆಡರಲಿಸಂನ ಮನೋಭಾವವನ್ನು ದುರ್ಬಲಗೊಳಿಸುತ್ತದೆ. ಪ್ರಗತಿಪರ ರಾಜ್ಯಗಳ ಆರ್ಥಿಕ ಸ್ವಾಯತ್ತತೆಗೆ ಧಕ್ಕೆ ತರುತ್ತದೆ ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ: ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ- ಸುನಿಲ್ ಕುಮಾರ್

    ಹಣಕಾಸಿನ ಒಕ್ಕೂಟದ ಸಮಸ್ಯೆಗಳ ಕುರಿತು ಒಟ್ಟಾಗಿ ಚರ್ಚಿಸಲು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ನಾನು ಅವರನ್ನು ಆಹ್ವಾನಿಸಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

  • ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಕೇಂದ್ರ ಸರ್ಕಾರವೇ ಕೋಣ: ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ

    ಬೆಂಗಳೂರು: ಕೇಂದ್ರ ಸರ್ಕಾರವೇ (Union Govt) ಕೋಣ ಎಂದು ವಿಧಾನಸಭೆಯಲ್ಲಿ ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ (Rudrappa Lamani) ಹೇಳಿದ್ದಾರೆ.

    ಭದ್ರಾ ಜಲಾಶಯದ (Bhadra Dam) ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿರುವ ದರಖಾಸ್ತು ಜಮೀನುಗಳ ರೈತರನ್ನು ಒಕ್ಕಲೆಬ್ಬಿಸದಂತೆ ಹಾಗೂ ಸಂತ್ರಸ್ತರಿಗೆ ನೆರವು ನೀಡುವ ಬಗ್ಗೆ ತರೀಕೆರೆ ಶಾಸಕ ಜಿ.ಹೆಚ್. ಶ್ರೀನಿವಾಸ್‌ ಗಮನ ಸೆಳೆದರು. ಆಗ ಸಮಸ್ಯೆ ಕುರಿತು ಪಕ್ಷಾತೀತವಾಗಿ ಎಲ್ಲ ಶಾಸಕರು ಸರ್ಕಾರವನ್ನು ಆಗ್ರಹಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರು ಆರ್‌ಎಸ್‌ಎಸ್ ಸೇರಬಹುದು – ಇಂದಿರಾ ಗಾಂಧಿ ಅಂದು ನಿಷೇಧ ಹೇರಿದ್ದು ಯಾಕೆ?

     

    ಮಧ್ಯಪ್ರವೇಶ ಮಾಡಿದ ಡೆಪ್ಯುಟಿ ಸ್ಪೀಕರ್, ಸಂಸದರಿಗೆ ಹೇಳಿ ಕೇಂದ್ರ ಸರ್ಕಾರದ ಗಮನಕ್ಕೆ ತನ್ನಿ ಎಂದರು. ಅಲ್ಲದೇ ರಾಜ್ಯ ಸರ್ಕಾರಕ್ಕೆ ಕೂಡಾ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬನ್ನಿ ಎಂದು ಸೂಚಿಸಿದ್ರು. ಇದನ್ನೂ ಓದಿ: ದರ್ಶನ್‌ಗೆ ಜೈಲೂಟವೇ ಗತಿ

    ಈ ವೇಳೆ ಕೋಣನ ಮುಂದೆ ಕಿನ್ನರಿ ಬಾರಿಸಿದಂತಾಗಿದೆ ಎಂದು ಡೆಪ್ಯುಟಿ ಸ್ಪೀಕರ್ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಸುರೇಶ್ ಕುಮಾರ್, ಕೋಣ ಯಾರು ಅಂತಾ ಗೊತ್ತಾಗಲಿಲ್ಲ ಎಂದು ಕೇಳಿದರು. ಆಗ ಕೇಂದ್ರ ಸರ್ಕಾರವೇ ಕೋಣ ಎಂದು ಸ್ಪೀಕರ್ ಪೀಠದಲ್ಲಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ತಿರುಗೇಟು ನೀಡಿದರು.

     

  • ಬರ ಪರಿಹಾರ ಬಿಡುಗಡೆ – ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

    ಬರ ಪರಿಹಾರ ಬಿಡುಗಡೆ – ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

    ನವದೆಹಲಿ: ರಾಜ್ಯದ ಬರ ಪರಿಹಾರ (Drought Relief )ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ತಜ್ಞರ ಸಮಿತಿ ನೀಡಿದ ಅಂತರ್ ಸಚಿವಾಲಯದ ವರದಿಯನ್ನು (Inter Ministerial Central Team’s Report) ಸಲ್ಲಿಸುವಂತೆ ಸುಪ್ರೀಂಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಿತು.

    ಇಂದಿನ ವಿಚಾರಣೆಯಲ್ಲಿ ಕರ್ನಾಟಕ ಸರ್ಕಾರದ (Karnataka Government) ಪರ ವಾದ ಮಂಡಿಸಿದ ಕಪಿಲ್ ಸಿಬಲ್ (Kapil Sibal), ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ ಅದಕ್ಕಾಗಿ ಧನ್ಯವಾದಗಳು. ಆದರೆ ಬಿಡುಗಡೆ ಮಾಡಿರುವ ಪರಿಹಾರದ ಮೊತ್ತ ಕಡಿಮೆಯಾಗಿದೆ ಇದು ಅಸಮಂಜಸ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಪರ ವಾದಿಸಿದ ಅರ್ಟಾನಿ ಜನರಲ್ ಆರ್ ವೆಂಕಟರಮಣಿ, ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

     

    ಇದೇ ಅಂಶವನ್ನು ಪ್ರಸ್ತಾಪಿಸಿದ ಸಿಬಲ್, ರಾಜ್ಯಕ್ಕೆ ಆಗಮಿಸಿದ ತಜ್ಞರ ತಂಡದ ವರದಿ ಏನು ಎಂಬುದು ರಾಜ್ಯಕ್ಕೆ ತಿಳಿದಿಲ್ಲ, ಅದರ ಪ್ರತಿಯನ್ನು ರಾಜ್ಯಕ್ಕೆ ನೀಡಿಲ್ಲ. ಹೀಗಾಗಿ ಆ ಪ್ರತಿಯನ್ನು ಕೋರ್ಟ್ ಮುಂದೆ ಇಡಬೇಕು. ಅದರ ಅನ್ವಯ ಪರಿಹಾರ ನೀಡುವುದಕ್ಕೆ ನಮ್ಮದು ಯಾವುದೇ ತಕರಾರು ಇಲ್ಲ ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಲು ಸಮಯ ಬೇಕು ಎಂದು ಅರ್ಟಾನಿ ಜನರಲ್ ಕೇಳಿದರು‌. ಇದಕ್ಕೆ ನಿರಾಕರಿಸಿದ ಪೀಠ ಮುಂದಿನ ಸೋಮವಾರದೊಳಗೆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿತು.

    ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದ್ದು ಈ ಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಈಗ ಮತ್ತೆ ತಕರಾರು ಎತ್ತಿದೆ.

  • ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ಕಾಂಗ್ರೆಸ್‌ಗೆ ಕೇಂದ್ರದಿಂದ ಬಿಗ್‌ ರಿಲೀಫ್‌ – ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ

    ನವದೆಹಲಿ: ಕಾಂಗ್ರೆಸ್‌ (Congress) ಪಕ್ಷಕ್ಕೆ ಕೇಂದ್ರ ಸರ್ಕಾರ ಬಿಗ್‌ ರಿಲೀಫ್‌ ನೀಡಿದೆ. ಲೋಕಸಭಾ ಚುನಾವಣೆ (Lok Sabha Election) ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ಭರವಸೆ ನೀಡಿದೆ.

    ಆದಾಯ ತೆರಿಗೆ (Income Tax) ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಇದನ್ನೂ ಓದಿ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ – ತಿಹಾರ್‌ ಜೈಲಿಗೆ ಶಿಫ್ಟ್‌ ಆಗಲಿದ್ದಾರೆ ದೆಹಲಿ ಸಿಎಂ

    ಈ ವೇಳೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಚುನಾವಣೆ ನಡೆಯುತ್ತಿರುವುದರಿಂದ ಮತ್ತು ಚುನಾವಣೆಯ ನಂತರದ ವಿಚಾರಣೆಯವರೆಗೆ ಬಾಕಿ ಉಳಿಸಿರುವ ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ದಯವಿಟ್ಟು ಜೂನ್ ಎರಡನೇ ವಾರದಲ್ಲಿ ಈ ವಿಚಾರವನ್ನು ಪಟ್ಟಿ ಮಾಡಿ ಎಂದು ಮನವಿ ಮಾಡಿದರು.

    ಸರ್ಕಾರದ ಈ ಮನವಿಯನ್ನು ಕೇಳಿ ನ್ಯಾ. ನಾಗರತ್ನ ಅವರು, ನೀವು ಯಾರೊಬ್ಬರ ಬಗ್ಗೆ ಯಾವಾಗಲೂ ನಕಾರಾತ್ಮಕವಾಗಿ ಗ್ರಹಿಸಬಾರದು ಎಂದು ಕಾಂಗ್ರೆಸ್‌ ಪರ ಹಾಜರಾಗಿದ್ದ ವಕೀಲ ಅಭಿಷೇಕ್‌ ಮನು ಸಿಂಘ್ವಿ ಲಘುವಾಗಿ ಹೇಳಿದರು. ಇದಕ್ಕೆ ಸಿಂಘ್ವಿ, ನಾನು ಮೂಖನಾಗಿದ್ದೇನೆ. ಕೆಲವೇ ಬಾರಿ ನಾನು ಮೂಖನಾಗಿದ್ದೇನೆ ಎಂದು ಅಚ್ಚರಿ ವ್ಯಕ್ತಪಡಿಸಿದರು. ಇದನ್ನೂ ಓದಿ: ತಾಯಿ ಪ್ರಮೋದಾ ದೇವಿ ಮುಂದೆ ಬಿ ಫಾರಂ ಪಡೆದ ಯದುವೀರ್‌

    ಕೇಂದ್ರ ಸರ್ಕಾರದ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ಮುಂದೂಡಿತು.

     

  • 15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

    15 ಪತ್ರ ಬರೆದರೂ ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರಕ್ಕೆ 15 ಪತ್ರ ಬರೆದರೂ ಬರ ಪರಿಹಾರಕ್ಕೆ ಇದೂವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

    ವಿಧಾನ ಪರಿಷತ್ (Vidhan Parishad) ‌ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್‌ (JDS) ಶರವಣ ತೋಟಗಾರಿಕೆ ಬೆಲೆ ನಷ್ಟ ಮತ್ತು ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಪ್ರಚಾರಕ್ಕಾಗಿ ಭಾರತ್ ರೈಸ್ ಕೊಡ್ತಿದೆ – ಮುನಿಯಪ್ಪ ಕಿಡಿ

     

    ಇದಕ್ಕೆ ಉತ್ತರ ನೀಡಿದ ಚೆಲುವರಾಯಸ್ವಾಮಿ, ರಾಜ್ಯದಲ್ಲಿ ತೀವ್ರ ಬರಗಾಲದಿಂದ (Drought) 5,11,208 ಹೆಕ್ಟೇರ್ ತೋಟಗಾರಿಕೆ ಬೆಳೆ ನಷ್ಟವಾಗಿದೆ. ಕೇಂದ್ರಕ್ಕೆ ಪರಿಹಾರಕ್ಕಾಗಿ ಪತ್ರ ಬರೆದು 5 ತಿಂಗಳು ಆಗಿದೆ. ಈವರೆಗೂ ಕೇಂದ್ರ ಸರ್ಕಾರ (Union Government) ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಈವರೆಗೂ 15 ಪತ್ರ ಕೇಂದ್ರಕ್ಕೆ ಬರೆಯಲಾಗಿದೆ. ಸಿಎಂ ಅವರು ಪ್ರಧಾನಿ, ಅಮಿತ್ ಶಾ ಅವರಿಗೆ ಮನವಿ ಮಾಡಿದರೂ ಹಣ ಬಿಡುಗಡೆ ಮಾಡಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಸಭೆ ಮಾಡುತ್ತೇನೆ ಎಂದರೂ ಸಭೆ ಮಾಡಿಲ್ಲ. ಕೇಂದ್ರದ ಬರ ಅಧ್ಯಯನ ತಂಡವೇ ವರದಿ ಕೊಟ್ಟರೂ ಕೇಂದ್ರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪರೀಕ್ಷೆ ವೇಳೆ ಲೋಡ್ ಶೆಡ್ಡಿಂಗ್ – ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ ವಿದ್ಯಾರ್ಥಿನಿಯರು

    ನಾವು ಗ್ಯಾರಂಟಿ ಯೋಜನೆಗಳಿಂದ ಹಣ ಇಲ್ಲ ಎಂದು ಎಲ್ಲೂ ಹೇಳಿಲ್ಲ.ಕೇಂದ್ರ ಸರ್ಕಾರ ಪರಿಹಾರ ಕೊಡದೇ ಹೋದರೂ ರಾಜ್ಯ ಸರ್ಕಾರ 2 ಸಾವಿರ ಪರಿಹಾರ ಹಣ ಕೊಡಲಾಗುತ್ತಿದೆ. ಇಲ್ಲಿಯವರೆಗೆ 30,24,795 ರೈತರಿಗೆ 573.28 ಕೋಟಿ ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರದ ನಿರೀಕ್ಷೆಯಲ್ಲಿ ಇದ್ದೇವೆ.ಪರಿಹಾರ ಬಂದ ಕೂಡಲೇ ರೈತರಿಗೆ ಪರಿಹಾರ ಬಿಡುಗಡೆ ಮಾಡ್ತೀವಿ ಅಂತ ತಿಳಿಸಿದರು.

     

  • ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

    ಬೆಂಗಳೂರು: ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ (Bharath Brand) ಅಕ್ಕಿ ಗ್ರಾಹಕರಿಗೆ ಆನ್‌ಲೈನ್‌ಲೂ (Online) ಸಹ ಸಿಗಲ್ಲಿದ್ದು, ನಗರದಲ್ಲಿಯೂ ಅಕ್ಕಿ ಸಿಗಲಿದೆ

    ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್‌ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ತಂದತಹ ಭಾರತ್ ಅಟ್ಟಾ ಹಾಗೂ ಕಡಲೆ ಬೇಳೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ಪ್ರಿತಿಕ್ರಿಯೆ ಬಂದಿತ್ತು. ನಗರದಲ್ಲಿ 2,81,572 ಕೆ.ಜಿ ಭಾರತ್ ದಾಲ್ ಮತ್ತು 1,22,190 ಕೆ.ಜಿ ಗೋಧಿ ವ್ಯಾಪಾರವಾಗಿತ್ತು. ಇದನ್ನೂ ಓದಿ: ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸೋದಿಲ್ಲ: ರಾಮಲಿಂಗಾರೆಡ್ಡಿ

    ಇದೀಗ ಭಾರತ್ ಬ್ರ‍್ಯಾಂಡ್ ಅಡಿಯಲ್ಲಿ ಅಕ್ಕಿಯನ್ನು ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ. ಅದರಂತೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್‌ಸಿಸಿಎಫ್) ಮೂಲಕ ಮಾರಾಟ ಮಾಡಲು ಪ್ಲಾನ್ ಮಾಡಿದೆ. ಈ ಅಕ್ಕಿಯ ವಿತರಣೆ ಮಂಗಳವಾರ (ಫೆ.6) ಆರಂಭವಾಗುವ ಸಾಧ್ಯತೆಯಿದೆ. ಎನ್‌ಸಿಸಿಎಫ್‌ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಏರಿಯಾಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ.ಇದನ್ನೂ ಓದಿ: ನಮ್ಮ ಗ್ಯಾರಂಟಿಗಳನ್ನು ನೋಡಿಕೊಂಡು ಬಿಜೆಪಿ ಮೋದಿ ಗ್ಯಾರಂಟಿ, ಮೋದಿ ಗ್ಯಾರಂಟಿ ಅಂತಾರೆ: ಸಿದ್ದರಾಮಯ್ಯ

    ಪ್ರಮುಕವಾಗಿ ಭಾರತ್ ಬ್ರಾಂಡ್‌ನ ಅಕ್ಕಿ ಅಮೇಜಾನ್, ಫ್ಲಿಪ್ ಕಾರ್ಟ್ ನಂತಹ ಆನ್‌ಲೈನ್ ಶಾಪಿಂಗ್ ಆಪ್ಲಿಕೇಶನಲ್ಲೂ ಸಹ ಖರೀದಿಸಬಹುದು. ಇದರಿಂದ ಜನ ಸಾಮಾನ್ಯರಿಗೆ ಇನಷ್ಟು ಸುಲಭವಾಗಲಿದೆ. ಇದನ್ನೂ ಓದಿ:KSRTCಗೆ 800 ʻಅಶ್ವಮೇಧʼ ಕ್ಲಾಸಿಕ್ ಬಸ್‌ಗಳ ಬಲ – 100 ಬಸ್‌ಗಳಿಗೆ ಸಿದ್ದರಾಮಯ್ಯರಿಂದ ಚಾಲನೆ

    ನಗರದ ಯಾವ ಪ್ರಮುಖ ಪ್ರದೇಶಗಳಲ್ಲಿ ಅಕ್ಕಿ ಸಿಗಲ್ಲಿದೆ ಎಂಬುದರ ಪಟ್ಟಿ ಹೀಗಿದೆ.
    ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ್, ಜೆ.ಸಿ. ನಗರ, ಡೈರಿ ಸರ್ಕಲ್, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತೆ.  ಇದನ್ನೂ ಓದಿ:ಪತಿಯೊಂದಿಗೆ ಅಕ್ರಮ ಸಂಬಂಧ – ಗೆಳತಿಯ ಮನೆಗೆ ನುಗ್ಗಿ ಪತ್ನಿಯಿಂದ ದಾಂಧಲೆ

  • 29 ರೂ.ಗೆ ಸಿಗಲಿದೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

    29 ರೂ.ಗೆ ಸಿಗಲಿದೆ ʻಭಾರತ್‌ ಅಕ್ಕಿʼ – ಎಲ್ಲೆಲ್ಲಿ ಮಾರಾಟ?

    ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ (Bharat Rice) ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ (Union Governmen) ತಿಳಿಸಿದೆ.

    ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಬಿಜೆಪಿಯಿಂದ ಕೋಟಿ ಕೋಟಿ ಆಫರ್‌ – ಆರೋಪ ಮಾಡಿದ್ದ ಕೇಜ್ರಿವಾಲ್‌ಗೆ ಕಂಟಕ – ದೆಹಲಿ ಕ್ರೈಂಬ್ರ್ಯಾಂಚ್‌ ನೋಟಿಸ್‌

    ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ (Sanjeev Chopra) ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಮುಂದಿನ ವಾರದಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವೇ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ.ಗೆ 29 ರೂ. ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

    ಈಗಾಗಲೇ ʻಭಾರತ್‌ ಬ್ರ್ಯಾಂಡ್‌ʼ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‌ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ 62 ಸಾವಿರ ಕೋಟಿ ರೂ. ನಷ್ಟ – ಫೆ.7 ರಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರತಿಭಟನೆ ಎಂದ ಡಿಕೆಶಿ

    ಎಲ್ಲಿ ಮಾರಾಟ?
    ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ (NAFED), ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ (NCCF) ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‌ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ಕಾಂಗ್ರೆಸ್‌ 40 ಸೀಟು ಗೆಲ್ಲೋದು ಡೌಟ್‌ – ಬಿಜೆಪಿ ಪರ ದೀದಿ ಬ್ಯಾಟಿಂಗ್‌

  • ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ನವದೆಹಲಿ: ಕೇಂದ್ರ ಸರ್ಕಾರಕ್ಕೆ (Union Government) ಫೋನ್‌ ಕದ್ದಾಲಿಕೆ ಮಾಡುವ ಅವಶ್ಯಕತೆಯಿಲ್ಲ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಕೆಲ ಪ್ರತಿಪಕ್ಷ ನಾಯಕರಿಗೆ ಆಪಲ್‌ನಿಂದ (Apple) ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ ಎಂಬ ಆರೋಪವನ್ನ ತಳ್ಳಿಹಾಕಿದ್ದಾರೆ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು, ಅವರು ಅಧಿಕೃತವಾಗಿ ದೂರು ನೀಡಿದ್ರೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

    ಹ್ಯಾಕರ್ಸ್‌ ಸಕ್ರೀಯವಾಗಿದ್ದಾರೆ: ಪ್ರತಿಪಕ್ಷಗಳು ದುರ್ಬಲ ಸ್ಥಿತಿಯನ್ನು ಎದುರಿಸುತ್ತಿವೆ, ಎಲ್ಲದರಲ್ಲೂ ಪಿತೂರಿಯನ್ನ ಹುಡುಕುತ್ತಿದ್ದಾರೆ. ಆಪಲ್‌ ಕಂಪನಿ ಸ್ವತಃ ಸ್ಪಷ್ಟಪಡಿಸಿದೆ. ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್‌ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ. ಈ ದಾಳಿಯನ್ನ ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಹೇಳಿದೆ. ವಿಶ್ವದಾದ್ಯಂತ ಹ್ಯಾಕರ್‌ಗಳು ಸಕ್ರಿಯರಾಗಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರತಿಪಕ್ಷಗಳ ನಾಯಕರು ತಮ್ಮ ಆಂತರಿಕ ಕಚ್ಚಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಪರಿಸ್ಥಿತಿ ಹೇಗಿದೆ ಎಂಬುದು ದೇಶದ ಜನರಿಗೆ ತಿಳಿದಿದೆ. ಮೊದಲು ಅವರು ತಮ್ಮ ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ. ಫೋನ್‌ಗಳನ್ನು ಕದ್ದಾಲಿಕೆ ಮಾಡುವ ಅವಶ್ಯಕತೆಯೂ ಸರ್ಕಾರಕ್ಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಏನಿದು ಆರೋಪ?
    ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿತ್ತು?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಆಪಲ್‌ ಪ್ರತಿಕ್ರಿಯೆ ಏನು ಹೇಳಿಕೆಯಲ್ಲಿ ಏನಿದೆ?
    ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್‌ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಭಿವೃದ್ಧಿ Vs ಅನುದಾನ: ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡ್ಬೇಡಿ- ಸಿದ್ದರಾಮಯ್ಯ ಸೇಡಿನ ಆರೋಪಕ್ಕೆ ಕೇಂದ್ರ ತಿರುಗೇಟು

    ಅಭಿವೃದ್ಧಿ Vs ಅನುದಾನ: ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡ್ಬೇಡಿ- ಸಿದ್ದರಾಮಯ್ಯ ಸೇಡಿನ ಆರೋಪಕ್ಕೆ ಕೇಂದ್ರ ತಿರುಗೇಟು

    ಬೆಂಗಳೂರು: ಅಭಿವೃದ್ಧಿ ಮತ್ತು ಅನುದಾನದ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವೆ ಕದನ ಶುರುವಾಗಿದೆ. ಕೇಂದ್ರ ಸರ್ಕಾರ (Union Government) ಕರ್ನಾಟಕದ ವಿಚಾರದಲ್ಲಿ ಮಲತಾಯಿ ಧೋರಣೆ ತಳೆದಿದೆ ಎಂದು ಆರೋಪಿಸಿ ಕಳೆದ ಮೂರು ದಿನಗಳಿಂದ ಸಿಎಂ ಸಿದ್ದರಾಮಯ್ಯ (CM Siddaramaiah) ಇಲಾಖಾವಾರು ಅಂಕಿ ಅಂಶ ಪ್ರಕಟಿಸುತ್ತಾ ಸಂಘರ್ಷಕ್ಕೆ ಮುನ್ನುಡಿ ಬರೆದಿದ್ದಾರೆ.

    ಲೋಕಸಭೆ ಚುನಾವಣೆ ಸನಿಹದಲ್ಲಿರುವ ಈ ಸಂದರ್ಭದಲ್ಲಿ, ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ (Karnataka) ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಉತ್ತರ ಕೊಡಿ ಮೋದಿ ಎಂದು ಪ್ರಶ್ನಿಸುತ್ತಾ ಪೋಸ್ಟರ್ ಅಭಿಯಾನ ಮಾಡತೊಡಗಿದ್ದಾರೆ. ಇದು ಸಹಜವಾಗಿಯೇ ಬಿಜೆಪಿಗರಿಗೆ (BJP) ಮುಜುಗರ ತಂದಿಟ್ಟಿತ್ತು. ಮೂರು ದಿನಗಳ ನಂತರ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ಈಗ ಆಯಾ ಇಲಾಖೆಗಳ ಸಚಿವರ ಮೂಲಕವೇ ಉತ್ತರ ಕೊಡಿಸಲು ಹೊರಟಂತಿದೆ.

    ಇದರ ಮೊದಲ ಭಾಗವಾಗಿ ಕೇಂದ್ರ ಜಲಶಕ್ತಿ ಮಂತ್ರಿ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಟ್ವೀಟ್ ಮೂಲಕ ಸಿಎಂಗೆ ತಿರುಗೇಟು ನೀಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ. ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ ಎಂದು ಉತ್ತರ ನೀಡಿದ್ದಾರೆ.  ಇದನ್ನೂ ಓದಿ: ನೀವು ಕರ್ನಾಟಕದ ಚೀಫ್‌ ಲೈಯರ್‌ ಆಗಿದ್ದೀರಿ: ಸಿದ್ದರಾಮಯ್ಯ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

    ಸಿದ್ದರಾಮಯ್ಯ Vs ಗಜೇಂದ್ರ ಸಿಂಗ್ ಶೇಖಾವತ್
    ಸಿದ್ದು ಆರೋಪ – ಕೇಂದ್ರ ಅನುಮತಿ ನೀಡದ ಕಾರಣ ಮೇಕೆದಾಟು ಯೋಜನೆ ನೆನೆಗುದಿಗೆ
    ಜಲಮಂತ್ರಿ ಪ್ರತ್ಯುತ್ತರ – ಈ ಕಾರ್ಯಸೂಚಿ ಬಗ್ಗೆ ನೆರೆಯ ರಾಜ್ಯಗಳಲ್ಲಿ ಒಮ್ಮತ ಮೂಡಿಲ್ಲ. ಹೀಗಾಗಿ ಚರ್ಚೆ ಸಾಧ್ಯವಾಗಿಲ್ಲ. ಇದು ಕೇಂದ್ರ ಸರ್ಕಾರದ ತಪ್ಪಲ್ಲ

    ಸಿದ್ದು ಆರೋಪ – ಕೇಂದ್ರದ ನಿರ್ಲ್ಯಕ್ಷದ ಕಾರಣ ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿದೆ. ಕುಡಿಯುವ ನೀರಿನ ವಿಚಾರದಲ್ಲೂ ಕೀಳು ರಾಜಕೀಯ ಮಾಡುತ್ತಿದೆ
    ಜಲಮಂತ್ರಿ ಪ್ರತ್ಯುತ್ತರ – ಕಳಸಾ ಬಂಡೂರಿ ಯೋಜನೆ ಡಿಪಿಆರ್‌ಗೆ ಕೆಲ ಷರತ್ತುಗಳೊಂದಿಗೆ ಕೇಂದ್ರ ಜಲ ಆಯೋಗ ಅನುಮೋದಿಸಿದೆ. ನೀವು ಈ ಮಾಹಿತಿ ಮುಚ್ಚಿಟ್ಟಿದ್ದೀರಿ?

    ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದೇನು?
    ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.

    ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.

    ಮೊದಲನೆಯದಾಗಿ CWMA ಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.

    ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಸಮಗ್ರ ಯೋಜನಾ ವರದಿ(DPR) ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?

    2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY) ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?

    ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 2023ರ ಅಕ್ಟೋಬರ್‌ 10ರವರೆಗೆ  ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ.

    ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು‌‌ ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು.

     

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದು ರಾಷ್ಟ್ರ, ಒಂದು ಚುನಾವಣೆ – ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ಎಂದ ಪ್ರಶಾಂತ್ ಕಿಶೋರ್

    ಒಂದು ರಾಷ್ಟ್ರ, ಒಂದು ಚುನಾವಣೆ – ಉದ್ದೇಶ ಒಳ್ಳೆಯದಿದ್ದರೆ ಬೆಂಬಲ ಎಂದ ಪ್ರಶಾಂತ್ ಕಿಶೋರ್

    ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಸ್ತಾಪಿಸಿರುವ `ಒಂದು ರಾಷ್ಟ್ರ, ಒಂದು ಚುನಾವಣೆ’ (One Nation One Election) ಪರಿಕಲ್ಪನೆಗೆ ಐಎನ್‌ಡಿಐಎ (INDIA) ಮೈತ್ರಿಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನಡುವೆ ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಎಂದೇ ಹೆಸರಾಗಿರುವ ಪ್ರಶಾಂತ್ ಕಿಶೋರ್ (Prashant Kishor) ಈ ಪರಿಕಲ್ಪನೆಯ ಉದ್ದೇಶ ಒಳ್ಳೆಯದಾಗಿದ್ದರೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಶಾಂತ್ ಕಿಶೋರ್, ಈ ಹಿಂದೆಯೂ ಇಂತಹ ಚುನಾವಣಾ ಪದ್ಧತಿ ದೇಶದಲ್ಲಿ ಜಾರಿಯಲ್ಲಿತ್ತು. ಏಕಕಾಲದಲ್ಲಿ ಚುನಾವಣೆ ನಡೆದರೆ ಸಮಯ ಮತ್ತು ಹಣ ಉಳಿತಾಯವಾಗುತ್ತದೆ. ಜೊತೆಗೆ 5 ವರ್ಷದ ಅಧಿಕಾರವಧಿಯಲ್ಲಿ ಸರ್ಕಾರ ಪದೇ-ಪದೇ ಚುನಾವಣೆಗಳನ್ನ (Elections) ಎದುರಿಸುವ ಗೋಜಲು ತಪ್ಪಿಸಬಹುದು ಎಂದು ಸಲಹೆ ಕೊಟ್ಟಿದ್ದಾರೆ.

    ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಭಾರತದಂತಹ ದೊಡ್ಡ ದೇಶದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವೇ ಎಂಬುದನ್ನ ಗಮನಿಸಬೇಕು. ಏಕೆಂದರೆ ದೇಶದಲ್ಲಿ ಪ್ರತಿ ವರ್ಷ 25% ಜನರು ಚುನಾವಣೆಯಲ್ಲಿ ಮತದಾನ ಮಾಡುತ್ತಲೇ ಇರುತ್ತಾರೆ. ಸರ್ಕಾರಗಳು ಕೂಡ 5 ವರ್ಷದಲ್ಲಿ ಹಲವು ಬಾರಿ ಚುನಾವಣೆಗಳನ್ನ ಎದುರಿಸುತ್ತವೆ. ಇದರ ಬದಲಿಗೆ 1 ಅಥವಾ 2 ಬಾರಿ ಚುನಾವಣೆ ನಡೆಸಿದರೆ ಉತ್ತಮ. ಇದು ವೆಚ್ಚ ತಗ್ಗಿಸುವುದರ ಜೊತೆಗೆ ಜನರು ಒಂದೇ ಬಾರಿಗೆ ಯಾವ ಸರ್ಕಾರ ಬೇಕೆಂಬುದನ್ನು ನಿರ್ಧರಿಸಲು ಅವಕಾಶ ಸಿಗಲಿದೆ. ಈ ಪರಿಕಲ್ಪನೆ ಒಳ್ಳೆಯ ಉದ್ದೇಶ ಹೊಂದಿದ್ದರೆ ಅಥವಾ 4-5 ವರ್ಷಗಳ ಪರಿವರ್ತನೆಯ ಹಂತವಿದ್ದರೆ ಅದು ದೇಶಕ್ಕೆ ಹಿತಾಸಕ್ತಿಯಾಗುತ್ತದೆ. ಈ ಬಗ್ಗೆ ಜನರೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ರಾತ್ರೋ ರಾತ್ರಿ ಬದಲಾವಣೆ ತರಲು ಪ್ರಯತ್ನಿಸಿದರೆ ಸಮಸ್ಯೆಗಳೂ ಉಂಟಾಗುತ್ತವೆ ಎಂದು ಎಚ್ಚರಿಸಿದ್ದಾರೆ.

    ಏಕಾಏಕಿ ಪರಿವರ್ತನೆ ತರಲು ಸಾಧ್ಯವಿಲ್ಲ. ಇದರಿಂದ ಸಮಸ್ಯೆಗಳೇ ಹೆಚ್ಚಾಗುತ್ತವೆ. ಸರ್ಕಾರ ಒಂದೇ ಬಾರಿಗೆ ಚುನಾವಣೆ ನಡೆಸುವ ಮಸೂದೆ ತರುತ್ತಿದೆ. ಅದು ಮೊದಲು ಜಾರಿಗೆ ಬರಲಿ. ಇದನ್ನು ಸರ್ಕಾರ ಒಳ್ಳೆಯ ಉದ್ದೇಶದಿಂದ ತಂದಿದ್ದೇ ಆದಲ್ಲಿ, ದೇಶಕ್ಕೆ ಒಳಿತಾಗುತ್ತದೆ ಎಂದರೆ ಬೆಂಬಲ ನೀಡೋಣ. ಆದರೆ ಸರ್ಕಾರವು ಯಾವ ಉದ್ದೇಶದಿಂದ ಅದನ್ನ ತರುತ್ತಿದೆ ಎಂಬುದರ ಮೇಲೆ ಪ್ರತಿಕ್ರಿಯೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.

    ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆಗೆ ಐಎನ್‌ಡಿಐಎ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಲವು ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ನಡುವೆ ಪ್ರಶಾಂತ್ ಕಿಶೋರ್ ಅವರ ಹೇಳಿಕೆಯು ಅಚ್ಚರಿ ಉಂಟುಮಾಡಿದೆ.

    ಏನಿದು ಒನ್ ನೇಷನ್, ಒನ್ ಎಲೆಕ್ಷನ್?
    ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ‘ಒಂದು ದೇಶ, ಒಂದು ಚುನಾವಣೆ’ ನಡೆಸಲು ಮುಂದಾಗಿದೆ ಎಂಬ ಪ್ರಶ್ನೆ ಎದ್ದಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಅಧಿವೇಶನದ ಬಗ್ಗೆ ನಿರೀಕ್ಷೆ ಈಗ ಹೆಚ್ಚಾಗಿದೆ.

    1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು. ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]