ಬೆಂಗಳೂರು: ಕೇಂದ್ರ ಸರ್ಕಾರ 14 ಕೆಜಿ LPG ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ.
19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 158 ರೂ. ಇಳಿಕೆ ಕಂಡಿದೆ. ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ (Commercial Gas Cylinder) ಬೆಲೆ ಇಳಿಕೆ ಕಂಡಿದ್ದು, 1,767.50 ರೂ. ಇದ್ದ ಸಿಲಿಂಡರ್ ಬೆಲೆ ಇಂದು 1,609.50 ರೂ. ಆಗಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ. ಸಬ್ಸಿಡಿ ನೀಡುವುದಾಗಿ ಘೋಷಿಸಿತು. ಕಳೆದ ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದರು. ಇದನ್ನೂ ಓದಿ: ಚಂದ್ರನ ಮೇಲೆ ಹೊಸ ಕುಳಿ ಮೂಡಿಸಿದ ರಷ್ಯಾದ ಲೂನಾ-25 ಬಾಹ್ಯಾಕಾಶ ನೌಕೆ
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನ ಹೆಚ್ಚಿಸಿದ್ದವು. ರಾಜಸ್ಥಾನ, ಛತ್ತೀಸ್‌ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ. ಇದನ್ನೂ ಓದಿ: 11% ಏರಿಕೆ, ಆಗಸ್ಟ್‌ನಲ್ಲಿ 1.59 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ – ಕರ್ನಾಟಕದ ಪಾಲು ಎಷ್ಟು?
ನವದೆಹಲಿ: ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (VBI) ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಕೇಂದ್ರ ಸರ್ಕಾರದ (Union Government) ಶಿಫಾರಸಿನ ಬಳಿಕ ಅಧಿಕೃತವಾಗಿ ದೂರು ದಾಖಲಿಸಿಕೊಂಡಿರುವ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸಿದೆ.
ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ತನಿಖಾ ಸಂಸ್ಥೆ ಈ FIR ದಾಖಲಿಸಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಧಿಸೂಚನೆ ಹೊರಡಿಸಿದ ನಂತರ ಈ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ – ಪ್ರಧಾನಿ ಮೋದಿ ತಯಾರಿ ಏನು?
CBI ಸೆಕ್ಷನ್ 153A, 398, 427, 436, 448, 302, 354, 364, 326, 376, 34 ಐಪಿಸಿ ಮತ್ತು 25 (1-C)A ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನ ಈಗಾಗಲೇ ಬಂಧಿಸಲಾಗಿದ್ದು, ವಿಡಿಯೋ ಚಿತ್ರೀಕರಿಸಿದ ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ.
ಮಣಿಪುರದ ವೈರಲ್ ವೀಡಿಯೊದ ತನಿಖೆಯನ್ನ ತನಿಖಾ ಸಂಸ್ಥೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ವಹಿಸಿಕೊಳ್ಳಲಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಗುರುವಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿತ್ತು. ವಿಚಾರಣೆಯನ್ನು ಮಣಿಪುರದ ಹೊರಗೆ ನಡೆಸಲು ನಿರ್ದೇಶಿಸುವಂತೆ ಅಫಿಡವಿಟ್ ಮೂಲಕ ಮನವಿ ಮಾಡಿತು.
ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಸೋಮವಾರ ಅಧಿವೇಶನಕ್ಕೆ ಹಾಜರಾದ ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಹೂಗುಚ್ಛ ನೀಡಿ ಸಿಎಂ ಸಿದ್ದರಾಮಯ್ಯ (Siddaramaiah) ಸ್ವಾಗತಿಸಿದರು. ಈ ವೇಳೆ ಕಾನೂನು ಮಂತ್ರಿ ಹೆಚ್.ಕೆ ಪಾಟೀಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ನಂತರ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಿದರು.
ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಈ ಸರ್ಕಾರವನ್ನ ಆಯ್ಕೆ ಮಾಡಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನ ಈ ಸರ್ಕಾರ ಜಾರಿಗೊಳಿಸುತ್ತೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನ ಸರ್ಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂ ಕಚೇರಿಗೆ ಶಾಸಕರ ಲೆಟರ್ ತಗೊಂಡು ಹೋದ್ರೆ 30 ಲಕ್ಷ ಕೇಳ್ತಾರೆ: ಹೆಚ್‍ಡಿಕೆ ಹೊಸ ಆರೋಪ
ಈ ಹಿಂದೆ ಸಂಕುಚಿತ ಮನಸ್ಸುಗಳು ಸಮಾಜದಲ್ಲಿ ಜಾತಿ-ಜಾತಿಗಳ ನಡುವೆ ತಾರತಮ್ಯ ಸೃಷ್ಟಿಸಿದ್ದವು, ಒಡಕು ಮೂಡಿಸಿದ್ದವು. ಆದ್ರೆ ಈ ಸರ್ಕಾರ ದ್ವೇಷರಹಿತ, ಪ್ರೀತಿ ಯುಕ್ತ ಸಮಾಜ ನಿರ್ಮಾಣದ ಗುರಿ ಹೊಂದಿದೆ. ಪಂಚ ಗ್ಯಾರಂಟಿಗಳ ಜಾರಿಯಲ್ಲಿ ಶ್ರದ್ಧೆ, ಬದ್ಧತೆ, ನೈಜ ಕಾಳಜಿ ತೋರುತ್ತದೆ. ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. 5 ಕೆಜಿ ಅಕ್ಕಿ, ಉಳಿದ 5 ಕೆಜಿ ಅಕ್ಕಿ ಬದಲು ಹಣ ನೀಡಲು ಮುಂದಾಗಿದೆ. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಅಂತಹ ಯೋಜನೆಗಳ ಮೂಲಕ ಬಡಜನರ ಹಸಿವು ನೀಗಿಸುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ನೀಡಲಿದೆ. ಗೃಹಜ್ಯೋತಿ ಮೂಲಕ 2.14 ಕೋಟಿ ಮನೆಗಳಿಗೆ ಷರತ್ತುಗಳೊಂದಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ ಎಂದು ಶ್ಲಾಘಿಸಿದರು.
ಕೆಲವು ಸಂಕುಚಿತ ಮನಸ್ಸುಗಳು ಗಂಡು-ಹೆಣ್ಣುಗಳ ನಡುವೆ ಹಾಗೂ ಸಮಾಜದಲ್ಲಿ ವಿವಿಧ ಸಮುದಾಯಗಳ ನಡುವೆ ತಾರತಮ್ಯ, ಒಡಕುಗಳನ್ನು ಸೃಷ್ಟಿಸಿದ್ದವು. ಸಮಾಜದ ವಿವಿಧ ಪದರದಲ್ಲಿ ಈ ರೀತಿಯ ಮನಸ್ಥಿತಿಯ ಅವಶೇಷಗಳು ಇನ್ನೂ ಜೀವಂತವಾಗಿ ಉಳಿದುಕೊಂಡಿದೆ. ಆದರೀಗ ಸಂವಿಧಾನ ತೋರಿಸುವ ದಾರಿಯಲ್ಲಿ ನಡೆದು ಸಮಾಜದ ಎಲ್ಲಾ ವರ್ಗಗಳ ಜನರನ್ನ ಅಭಿವೃದ್ಧಿ ಮತ್ತು ನೆಮ್ಮದಿಯ ಕಡೆಗೆ ಮುನ್ನಡೆಸಲು ಸರ್ಕಾರ ಸಿದ್ಧವಾಗಿದೆ. ರಾಜ್ಯವನ್ನ ಆರ್ಥಿಕ ಸಂಕಷ್ಟದ ಸ್ಥಿತಿಯಿಂದ ಮೇಲೆತ್ತುವುದೂ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ ಜನ ಕಲ್ಯಾಣ ಮತ್ತು ಆರ್ಥಿಕ ಸ್ಥಿತಿ ಎರಡನ್ನೂ ಸಮತೂಕದಲ್ಲಿ ನಿಭಾಯಿಸಿ ಹೊಸ ಆಡಳಿತ ಮಾದರಿ ನೀಡುವುದು ಸರ್ಕಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಇದನ್ನ ಸಾಧಿಸಲು ಹೊರಟಿದೆ. ಇದರ ಅನುಷ್ಠಾನವನ್ನ ಶ್ರದ್ಧೆಯಿಂದ ಸರ್ಕಾರ ಮಾಡಲಿದೆ. ಹಸಿದವರಿಗೆ ಅನ್ನ ನೀಡದ ಸರ್ಕಾರ ಅತ್ಯಂತ ಜನದ್ರೋಹಿ ಸರ್ಕಾರ ಎಂದು ಕರೆಸಿಕೊಳ್ಳುತ್ತದೆ ಎಂದು ಅಸಮಾಧಾನ ಹೊರಹಾಕಿದರು. ಈ ಮೂಲಕ ಪರೋಕ್ಷವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟರು.
ಇನ್ನೂ ಭ್ರಷ್ಟಾಚಾರ ನಿರ್ಮೂಲನೆ, ಸಾಮಾಜಿಕ ನ್ಯಾಯ ಪಾಲನೆ ಸರ್ಕಾರದ ಗುರಿಯಾಗಿದೆ. ಏಕೆಂದರೆ ಇಂದು ಜನಸಂಖ್ಯೆಯ ಬಹುಭಾಗ ಸುಶಿಕ್ಷಿತವಾಗುತ್ತಿದ್ದಂತೆ ಅತ್ಯಾಧುನಿಕ ತಂತ್ರಜ್ಞಾನ ಬೆಳಯುತ್ತಿದ್ದು, ಜನರ ದುಷ್ಟ ಚಿಂತನೆಗಳು ಜಗತ್ತಿನಲ್ಲಿ ತಾಂಡವವಾಡುತ್ತಿವೆ. ಸಮಾಜದಲ್ಲಿ ಸಾಮರಸ್ಯ ಕದಡುವ ಗುಣವುಳ್ಳ ಬೆರಳೆಣಿಕೆಯ ಚಿಂತನೆಗಳು ತಲೆಯೆತ್ತುತ್ತಿವೆ. ಆದ್ದರಿಂದ ಜನರನ್ನ ಪರಸ್ಪರ ಬೆಸೆಯುವ ಕ್ರಮಗಳನ್ನು ಸರ್ಕಾರ ಕೈಗೊಳ್ಳುವುದು ಅವಶ್ಯಕವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ರೇಕಪ್ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಟೈಗರ್ ಶ್ರಾಫ್- ದಿಶಾ ಪಟಾನಿ ಜೋಡಿ
ನವದೆಹಲಿ: ಕೇಂದ್ರ ಸರ್ಕಾರದ (Union Government) ಮಹತ್ವಾಕಾಂಕ್ಷಿ ರೋಜಗಾರ್ ಮೇಳದಲ್ಲಿ (RozgarMela) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಹೊಸದಾಗಿ ನೇಮಕಗೊಂಡ ನೌಕರರಿಗೆ 71 ಸಾವಿರ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದಿದ್ದಾರೆ.
ವರ್ಚುವಲ್ ಮೂಲಕ ಕಾರ್ಯಮಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ (Narendra Modi), ಶಿಕ್ಷಕರು, ನರ್ಸ್, ಫಾರ್ಮಾಸಿಸ್ಟ್, ವೈದ್ಯರು ಸೇರಿದಂತೆ ವಿವಿಧ ಕ್ಷೇತ್ರದ 71 ಸಾವಿರ ವಿವಿಧ ಕ್ಷೇತ್ರದ ಉದ್ಯೋಗಾಕಾಂಕ್ಷಿಗಳಿಗೆ ನೇಮಕಾತಿ ಪತ್ರ ಹಸ್ತಾಂತರ ಮಾಡಿದ್ದಾರೆ. ಅಲ್ಲದೇ ನೇಮಕಗೊಂಡ ನೌಕರರಿಗೆ ಆನ್‌ಲೈನ್‌ನಲ್ಲಿ ತರಬೇತಿ ನೀಡುವ `ಕರ್ಮಯೋಗಿ ಪ್ರಾರಂಭ್’ (Karmayogi Prarambh) ಆನ್‌ಲೈನ್ ಕಾರ್ಯಕ್ರಮಕ್ಕೂ ಚಾಲನೆ ನೀಡಿದ್ದಾರೆ. ಇದನ್ನೂ ಓದಿ: ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ADGP ಅಲೋಕ್ ಕುಮಾರ್
ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು 45 ಪ್ರಮುಖ ನಗರಗಳಲ್ಲಿ 71 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ. ಇದು ಸಾವಿರಾರು ಯುವಜನರಿಗೆ ಸಂತಸದ ವಿಷಯ. ಕಳೆದ ತಿಂಗಳೂ ಸಹ 75 ಸಾವಿರ ಯುವಜನರಿಗೆ ನೇಮಕಾತಿ ನೀಡಲಾಗಿದೆ. ಇದು ರಾಷ್ಟ್ರದ ಅಭಿವೃದ್ಧಿಯ ವೇಗ ಹೆಚ್ಚಿಸುವ ನಮ್ಮ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: `ಕಾಂತಾರ’ ಚಿತ್ರದ ಹಾಡಿಗೆ ಧ್ವನಿಯಾದ ಜರ್ಮನ್ ಅಂದ ಗಾಯಕಿ
ಕೇಂದ್ರ ಸರ್ಕಾರ ಇನ್ನು 1 ವರ್ಷದಲ್ಲಿ 10 ಲಕ್ಷ ಉದ್ಯೊಗಿಗಳ ನೇಮಕ ಗುರಿ ಹೊಂದಿದೆ. ಈ ನಿಮಿತ್ತ ಕಳೆದ ಅಕ್ಟೊಬರ್‌ನಲ್ಲಿ ಸಹ ಮೋದಿ ನೇಮಕಗೊಂಡ 75 ಸಾವಿರ ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದರು. ಇದರ 2ನೇ ಭಾಗವಾಗಿ ಇಂದು 71 ಸಾವಿರ ಜನರಿಗೆ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಹಿಂದೂಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಕಡಿಮೆ ಪ್ರಮಾಣದಲ್ಲಿರುವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಕೇಂದ್ರ ಸರ್ಕಾರ ಹೇಳಿದೆ. ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಿಳಿಸಿದೆ.
ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್‌ನಲ್ಲಿ ಅಲ್ಪಸಂಖ್ಯಾತರಾಗಿರುವ ಜುದಾಯಿಸಂ, ಬಹಾಯಿಸಂ ಸಮುದಾಯವನ್ನು ಹಿಂದೂ ಧರ್ಮದ ಅನುಯಾಯಿಗಳು ಎಂದು ಘೋಷಿಸುವಂತೆ ಕೋರಿ ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಮೂಲಕ ಹೀಗೆ ಉತ್ತರಿಸಿದೆ. ಇದನ್ನೂ ಓದಿ:ತರಗತಿಗಳಲ್ಲಿ ಹಿಜಬ್ ನಿಷೇಧ – ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅರ್ಜಿ
1992 ರ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆಯ ಅಡಿ ಭಾಷಾವಾರು ಅಥವಾ ಧಾರ್ಮಿಕ ಸಮುದಾಯಗಳನ್ನು ‘ಅಲ್ಪಸಂಖ್ಯಾತರು’ ಎಂದು ಘೋಷಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ, ಈ ಅಧಿಕಾರವನ್ನು ಕೇಂದ್ರ ಕಸಿದುಕೊಳ್ಳುವುದಿಲ್ಲ. ರಾಜ್ಯ ಸರ್ಕಾರಗಳು ಈ ರಾಜ್ಯದೊಳಗೆ ಧಾರ್ಮಿಕ ಅಥವಾ ಭಾಷಾ ಸಮುದಾಯವನ್ನು ‘ಅಲ್ಪಸಂಖ್ಯಾತ ಸಮುದಾಯ’ ಎಂದು ಘೋಷಿಸಬಹುದು ಎಂದು ತಿಳಿಸಿದೆ. ಇದನ್ನೂ ಓದಿ: SSLC ಪರೀಕ್ಷೆಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಪರೀಕ್ಷಾ ಸಿಬ್ಬಂದಿಯಿಂದ ಮನವೊಲಿಕೆ
ಲಡಾಖ್, ಮಿಜೋರಾಂ, ಲಕ್ಷದ್ವೀಪ, ಕಾಶ್ಮೀರ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಪಂಜಾಬ್ ಮತ್ತು ಮಣಿಪುರಗಳು ಸದರಿ ರಾಜ್ಯದಲ್ಲಿ ತಮ್ಮ ಆಯ್ಕೆಯ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬಹುದು ಮತ್ತು ನಿರ್ವಹಿಸಬಹುದು. ರಾಜ್ಯ ಮಟ್ಟದಲ್ಲಿ ಅಲ್ಪಸಂಖ್ಯಾತರನ್ನು ಗುರುತಿಸಲು ಮಾರ್ಗಸೂಚಿಗಳನ್ನು ಸಂಬಂಧಪಟ್ಟ ರಾಜ್ಯ ಸರ್ಕಾರಗಳು ನಿರ್ಧರಿಸಬೇಕು ಎಂದು ಅಫಿಡವಿಟ್ ಹೇಳಿದೆ.
ನವದೆಹಲಿ: ಭಾರತೀಯ ಪೊಲೀಸ್ ಸೇವೆ (IPS), ಭಾರತೀಯ ರೈಲ್ವೆ ರಕ್ಷಣಾ ಪಡೆ ಸೇವೆ (IRPFS) ಹಾಗೂ ದೆಹಲಿ, ದಮನ್ – ದಿಯು, ದಾದ್ರಾ – ನಗರ್ ಹವೇಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪ ಪೊಲೀಸ್ ಸೇವೆಗಳ (DANIPS), ಯುಪಿಎಸ್‌ಸಿ ಪರೀಕ್ಷೆಗಳಿಗೆ ಗಡುವು ಮೀರಿದ್ದರೂ ಅರ್ಜಿ ಸಲ್ಲಿಸಲು ವಿಶೇಷ ಚೇತನ ಅಭ್ಯರ್ಥಿಗಳಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
#SupremeCourt to hear plea challenging a Central govt notification excluding persons with disability from the Indian Police Service, Indian Railways Protection Force Service, & Delhi, Daman & Diu, Dadra and Nagar Haveli, Andaman and Nicobar Islands and Lakshadweep Police Service pic.twitter.com/FyEbjz7GP4
ಈ ಮೇಲಿನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಅವಧಿ ಗುರುವಾರವೇ ಕೊನೆಗೊಂಡಿದೆ. ಆದರೂ ತಾತ್ಕಾಲಿಕವಾಗಿ ಅರ್ಜಿಗಳನ್ನು ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಅಭಯ್ ಎಸ್. ಓಕಾ ಅವರಿದ್ದ ಪೀಠ ನಿರ್ದೇಶಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಸಲಹೆಯಂತೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ರಾಜಕೀಯ ಪಕ್ಷಗಳಿಂದ ಉಚಿತ ಯೋಜನೆಗಳ ಭರವಸೆ – ಸುಪ್ರೀಂಕೋರ್ಟ್‍ಗೆ ಪಿಐಎಲ್ ಸಲ್ಲಿಕೆ, ಚು.ಆಯೋಗಕ್ಕೆ ನೋಟಿಸ್
ಕಾಳಗದ ಹುದ್ದೆಗಳನ್ನು ಮಾತ್ರವಲ್ಲದೆ ಆಡಳಿತಾತ್ಮಕ ಹುದ್ದೆಗಳಿಂದಲೂ ವಿಶೇಷ ಚೇತನರನ್ನು ದೂರ ಇಡಲಾಗಿದೆ ಎಂದು ನ್ಯಾಷನಲ್ ಪ್ಲಾಟ್‌ಫಾರ್ಮ್ ಫಾರ್ ದಿ ರೈಟ್ಸ್ ಆಫ್ ದಿ ಡಿಸೇಬಲ್ಡ್ ಸಂಘಟನೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಲಾಗಿತ್ತು. ವಿಕಲ ಚೇತನರನ್ನು ಐಪಿಎಸ್ ಮತ್ತಿತರ ಹುದ್ದೆಗಳಿಂದ ದೂರ ಇಡುವಂತೆ ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಕಾನೂನು ಬಾಹಿರ ಮತ್ತು ಮನಸೋ ಇಚ್ಛೆಯಿಂದ ಕೂಡಿರುವಂತಹದ್ದು ಎಂದು ಆರೋಪಿಸಿತ್ತು. ಇದನ್ನೂ ಓದಿ: ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಟ್ರಸ್ಟ್‌ಗೆ ಸುಪ್ರೀಂಕೋರ್ಟ್‍ನಲ್ಲಿ ಹಿನ್ನಡೆ
ಅರ್ಜಿದಾರರ ಪರ ವಾದಮಂಡಿಸಿದ ಹಿರಿಯ ವಕೀಲ ಅರವಿಂದ್ ದಾತಾರ್ ಗುರುವಾರವೇ ಅರ್ಜಿ ಸಲ್ಲಿಸಲು ಕೊನೆಯ ಇದ್ದುದರಿಂದ ಮಧ್ಯಂತರ ಪರಿಹಾರ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ಹಾಗಾಗಿ, ನ್ಯಾಯಮೂರ್ತಿಗಳ ಪೀಠವು ಕೇಂದ್ರ ಲೋಕಸೇವಾ ಅಯೋಗದ ಪ್ರಧಾನ ಕಾರ್ಯದರ್ಶಿಯವರಿಗೆ ಅರ್ಜಿದಾರರು ಹಾಗೂ ಅಂತಹದ್ದೇ ಸ್ಥಿತಿಯಲ್ಲಿರುವವರು ಏಪ್ರಿಲ್ 1, 2022ರ ಸಂಜೆ 4 ಗಂಟೆವರೆಗೆ ಅರ್ಜಿ ಸ್ವೀಕರಿಸುವಂತೆ ಸೂಚಿಸಿತು.
ಬಳಿಕ ನ್ಯಾಯಾಲಯವು ಈಗ ನಡೆಯುತ್ತಿರುವ ಪ್ರಕರಣವು ಹಾಲಿ ಪ್ರಕ್ರಿಯೆಗೆ ಯಾವುದೇ ರೀತಿಯಲ್ಲಿ ಅಡ್ಡಿ ಉಂಟುಮಾಡುವುದಿಲ್ಲ. ಏಪ್ರಿಲ್ ೧೮ಕ್ಕೆ ಮುಂದಿನ ವಿಚಾರಣೆ ನಡೆಸಲಾಗುತ್ತದೆ ಎಂದು ಹೇಳಿದೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ) ವಹಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ ವಹಿಸದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರವು ಮನವಿ ಮಾಡಿತ್ತು. ತನಿಖೆ ತಡೆಸಲು ವಿಶೇಷ ತಂಡವನ್ನೂ ರಚಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು ತನಿಖೆಯನ್ನು ಸಿಬಿಐಗೆ ವಹಿಸಿದೆ. ವಿಶೇಷ ತನಿಖಾ ತಂಡವು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ್ ಹಾಗೂ ಆರ್.ಭಾರದ್ವಾಜ್ ಅವರಿದ್ದ ಪೀಠವು ಆದೇಶ ನೀಡಿದೆ. ಅಲ್ಲದೆ ಏಪ್ರಿಲ್ ೭ರ ಒಳಗೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ. ಇದನ್ನೂ ಓದಿ: ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ನೆನ್ನೆಯಷ್ಟೇ ಹಿಂಸಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಘೋಷಿಸಿ, ಉದ್ಯೋಗಾವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದರು. ಅಲ್ಲದೆ, ಇಂದು ಬೆಳಿಗ್ಗೆಯಿಂದಲೇ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ವಿಶೇಷ ಕಾರ್ಯಾಚರಣೆಯನ್ನೂ ಪ್ರಾರಂಭಿಸಲು ಆದೇಶಿಸಿದ್ದರು. ಈ ಬೆನ್ನಲ್ಲೇ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಆದೇಶ ನೀಡಿದೆ. ಇದನ್ನೂ ಓದಿ: ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್
ಸದ್ಯ ಈ ಘಟನೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿರುವ ಪ್ರತಿ ಪಕ್ಷಗಳು, ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಲಾರಂಭಿಸಿವೆ. ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ, ಆರೋಪಿಗಳು ಪತ್ತೆಯಾಗದೇ ಇದ್ದಲ್ಲಿ ಅವರನ್ನು ಬೇಟೆಯಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-೬೦ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ೧೦ ರಿಂದ ೧೨ ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ ೮ ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‌ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದಿದ್ದರು.
ಬ್ಯಾಂಕ್, ರೈಲ್ವೆ ಖಾಸಗೀಕರಣವಾದರೆ ಸುಮಾರು 5 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಗಳ ಬದುಕು ಬೀದಿ ಪಾಲಾಗಲಿದೆ. ಯಾವುದೇ ಸರ್ಕಾರ ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸಬೇಕೇ ಹೊರತು ಬಂಡವಾಳಶಾಹಿಗಳನ್ನು ಬೆಳೆಸುವುದಲ್ಲ ಎಂದು ಟ್ವೀಟ್ ಮಾಡಿ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
ಕಳೆದ ವಾರವೂ ಸರ್ಕಾರದ ವಿರುದ್ಧ ವರುಣ್ ಗಾಂಧಿ ಟ್ವೀಟ್ ಮಾಡಿದ್ದರು. ದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಹಣಕಾಸು ವಂಚನೆ ಆಗುತ್ತಿದೆ. ವಿಜಯ್ ಮಲ್ಯ- 9,000 ಕೋಟಿ, ನೀರವ್ ಮೋದಿ- 14,000 ಕೋಟಿ, ರಿಶಿ ಅಗರ್ವಾಲ್-23,000 ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಆದರೆ ದೇಶದಲ್ಲಿ ಸಾಲದ ಹೊರೆಯಿಂದಾಗಿ ದಿನಕ್ಕೆ 14 ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟ ವ್ಯವಸ್ಥೆ ಕೊನೆಗಾಣಿಸಲು ಸರ್ಕಾರ ಬಲಿಷ್ಠವಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್
2020ರಲ್ಲಿ ರೈಲ್ವೆಗೆ ಖಾಸಗೀ ಪಾಲುದಾರರನ್ನು ಆಹ್ವಾನಿಸಿದ ಕೇಂದ್ರ ಸರ್ಕಾರದ ನಡೆಯ ವಿರುದ್ಧ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳ ಅನೇಕ ನಾಯಕರು ಪ್ರತಿರೋಧ ವ್ಯಕ್ತಪಡಿಸಿದ್ದರು. 10 ಲಕ್ಷಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿರುವ ಭಾರತೀಯ ರೈಲ್ವೆ ವಲಯ ವಿಶ್ವದಲ್ಲೇ ಹೆಸರಾಗಿದೆ.
ವಿಪಕ್ಷಗಳ ಟೀಕೆಯನ್ನು ಕೇಂದ್ರ ಸಚಿವ ಪೀಯುಷ್ ಗೋಯಲ್ ತಳ್ಳಿಹಾಕಿದ್ದರು. ರೈಲ್ವೆ ಖಾಸಗೀಕರಣ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದರು.
ಚಂಡೀಗಢ: ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಕೆಲಸ ಮಾಡಲಿದೆ ಎಂದು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಇತ್ತೀಚೆಗೆ ಪಂಜಾಬ್‌ನಲ್ಲಿ ನಡೆದ ಪ್ರಧಾನಿಗಳ ಭದ್ರತೆ ವೈಫಲ್ಯ ಪ್ರಕರಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್‌ನ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:
ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ, ರಾಜ್ಯ ಮತ್ತು ದೇಶದ ಭದ್ರತೆಯ ವಿಷಯದಲ್ಲಿ ಕೇಂದ್ರದೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಪ್ರಧಾನಿ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಆದರೆ ಎರಡೂ ಕಡೆಯಿಂದ ರಾಜಕೀಯ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಚಾಟಿ ಬೀಸಿದ್ದಾರೆ.
ಅಮಿತ್ ಶಾ, ಚನ್ನಿ, ಪ್ರಿಯಾಂಕಾ ಗಾಂಧಿ, ಅಕಾಲಿದಳ ನಾಯಕರು ಒಟ್ಟಾಗಿ ನನ್ನ ಮತ್ತು ಭಗವಂತ್ ಮಾನ್ ವಿರುದ್ಧ ನಿಂದನೆ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಏನನ್ನೂ ಹೇಳುವುದಿಲ್ಲ. ಅವರು ಪಡೆಗಳನ್ನು ಸೇರಿಕೊಂಡಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚಿಸಲು ಬಯಸುವುದಿಲ್ಲ. ನಾವು ಅಧಿಕಾರಕ್ಕೆ ಬಂದರೆ ತಮ್ಮ ಲೂಟಿ ಶಾಶ್ವತವಾಗಿ ನಿಲ್ಲುತ್ತದೆ ಎಂಬ ಭಯ ಅವರಿಗಿದೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪಂಜಾಬ್ ಹಾಲಿ ಸಿಎಂ ವಿರುದ್ಧ ಆಪ್ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್
ಶಾಲೆ, ಆಸ್ಪತ್ರೆಗಳನ್ನು ನಿರ್ಮಿಸುತ್ತೇವೆ. ವಿದ್ಯುತ್ ಸೌಲಭ್ಯ ಒದಗಿಸುತ್ತೇವೆ. ಕಾನೂನು ಸುವ್ಯವಸ್ಥೆ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದೇವೆ. ಇದರಲ್ಲಿ ತಪ್ಪೇನಿದೆ? ನಮ್ಮದು ಪ್ರಾಮಾಣಿಕ ಪಕ್ಷ. ನಾವು ಪ್ರಾಮಾಣಿಕ ಸರ್ಕಾರವನ್ನು ರಚಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಹಾಲಿ ಸಿಎಂ ವಿರುದ್ಧ ಆಪ್ ಸಿಎಂ ಅಭ್ಯರ್ಥಿಯಿಂದ ಓಪನ್ ಚಾಲೆಂಜ್
ನವದೆಹಲಿ: ಭಾರತದ ಭದ್ರತೆಗೆ ಅಪಾಯವನ್ನುಂಟು ಮಾಡುವ ಚೀನಾದ ಆ್ಯಪ್‌ಗಳನ್ನು ನಿಷೇಧಿಸಲು ಯೋಜಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ – ಸೆಲ್ಫಿ ಕ್ಯಾಮೆರಾ, ವಿವಾ ವೀಡಿಯೋ ಎಡಿಟರ್, ಟೆನ್ಸೆಂಟ್ ಎಕ್ಸ್‌ರಿವರ್, ಒನ್‌ಮಿಯೋಜಿ ಅರೆನಾ, ಆಪ್‌ಲಾಕ್, ಡುಯೆಲ್ ಸ್ಪೇಸ್ ಲೈಟ್ ಸೇರಿದಂತೆ ಅನೇಕ ಆ್ಯಪ್‌ಗಳನ್ನು ನಿಷೇಧಿಸಲಾಗುವುದು ಎಂದು ಹೇಳಿವೆ. ಇದನ್ನೂ ಓದಿ: ಸೀಜ್ ಆಗಿದ್ದ 350ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
ಕಳೆದ ವರ್ಷದ ಜೂನ್‌ನಲ್ಲೂ ಸಹ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಬಳಕೆಯಲ್ಲಿದ್ದ ಚೀನಾದ ಟಿಕ್‌ಟಾಕ್, ವಿಚಾಟ್, ಹೆಲೋ ಸಿಟಿಂಗ್ 59 ಅಪ್ಲಿಕೇಷನ್‌ಗಳನ್ನು ನಿಷೇಧಿಸಲಾಗಿತ್ತು. ಮಾಜಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಈ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿತ್ತು ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.
2020ರ ಮೇನಲ್ಲಿ ಚೀನಾದೊಂದಿಗೆ ಗಡಿ ಉದ್ವಿಗ್ನತೆಯ ನಂತರ ಭಾರತದಲ್ಲಿ ಸುಮಾರು 300 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲಾಗಿದೆ. ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗಿನ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ದಿನಗಳ ನಂತರ 2020ರ ಜೂನ್‌ನಲ್ಲಿ ಮೊದಲ ಸುತ್ತಿನ ನಿಷೇಧವನ್ನು ಘೋಷಿಸಲಾಗಿತ್ತು. ಇದನ್ನೂ ಓದಿ: ಅನ್ವೇಷಣೆಯ ಹಾದಿಯಲ್ಲಿ ಸೋಲಿಗೆ ಹೆದರಬೇಡಿ: ಯುವ ವಿಜ್ಞಾನಿ ಗೀತಾಂಜಲಿ ರಾವ್