Tag: Union home ministry

  • ನಗದು, ಟಾರ್ಚ್, ವೈದ್ಯಕೀಯ ಕಿಟ್ ಕೈಲ್ಲಿಟ್ಟುಕೊಳ್ಳಿ – ನಾಳೆ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಹೇಗಿರಲಿದೆ?

    ನಗದು, ಟಾರ್ಚ್, ವೈದ್ಯಕೀಯ ಕಿಟ್ ಕೈಲ್ಲಿಟ್ಟುಕೊಳ್ಳಿ – ನಾಳೆ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಹೇಗಿರಲಿದೆ?

    ನವದೆಹಲಿ: ಭಾರತ (India) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಹೆಚ್ಚಾಗುತ್ತಿರುವ ಉದ್ವಿಗ್ನತೆ ನಡುವೆ ಇದೀಗ ಕೇಂದ್ರ ಗೃಹ ಸಚಿವಾಲಯದ ಸೂಚನೆ ಅನ್ವಯ ದೇಶದ 244 ಸಿವಿಲ್ ಡಿಫೆನ್ಸ್ ಜಿಲ್ಲೆಗಳಲ್ಲಿ ನಾಳೆ (ಮೆ 07) ಮಾಕ್ ಡ್ರಿಲ್ ನಡೆಯಲಿದೆ.

    ಮಾಕ್ ಡ್ರಿಲ್ (Mock Drill) ಮೂಲಕ ನಾಗರಿಕರಿಗೆ ತುರ್ತು ಪರಿಸ್ಥಿತಿಯ ಕಾಲ್ಪನಿಕತೆಯನ್ನು ಕಟ್ಟಿಕೊಡಲಾಗುತ್ತದೆ. ಈ ವೇಳೆ ರಕ್ಷಣಾ ಕ್ರಮದ ತರಬೇತಿ, ವಾಯುದಾಳಿಯ ಸೈರನ್‌ಗಳಿಗೆ ಹೇಗೆ ಪ್ರತಿಕ್ರಿಯಿಸುವುದು, ವಿದ್ಯುತ್ ಕಡಿತ ಹಾಗೂ ಇನ್ನಿತರ ಮೂಲಭೂತ ವಸ್ತುಗಳ ನಿಯಂತ್ರಣಗಳ ಕುರಿತು ತಿಳುವಳಿಕೆ ನೀಡಲಾಗುತ್ತದೆ.ಇದನ್ನೂ ಓದಿ: ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

    ಏ.22ರಂದು ಮಹಲ್ಗಾಮ್‌ನ (Pahalgam Terrorist Attack) ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿವಿಧ ತುರ್ತು ಪರಿಸ್ಥಿತಿಯಲ್ಲಿ ದೇಶವನ್ನು ಸಿದ್ಧಗೊಳಿಸುವ ಉದ್ದೇಶದಿಂದಾಗಿ ನಾಳೆ ಅಣಕು ಭದ್ರತಾ ಕವಾಯತು ನಡೆಸುವಂತೆ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ .

    ಗೃಹ ಸಚಿವಾಲಯದ ಹೇಳಿಕೆಯ ಪ್ರಕಾರ, ನಾಗರಿಕರಿಗೆ ತರಬೇತಿ ನೀಡುವುದು ಈ ಕವಾಯತುಗಳ ಪ್ರಮುಖ ಅಂಶವಾಗಿರುತ್ತದೆ. ವಾಯುದಾಳಿ ಸೈರನ್ ಮತ್ತು ವಿದ್ಯುತ್ ಕಡಿತದ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುವುದರ ಮೇಲೆ ಈ ಕವಾಯತುಗಳು ಗಮನಹರಿಸಲಿವೆ. ಈ ವೇಳೆ ನಾಗರಿಕರು ಅವಶ್ಯ ಸಾಮಗ್ರಿಗಳನ್ನು ಹೆಚ್ಚು ಇರಿಸಿಕೊಳ್ಳುವುದು, ಟಾರ್ಚ್, ಕ್ಯಾಂಡಲ್ ಮತ್ತು ವೈದ್ಯಕೀಯ ಸಲಕರಣೆಗಳನ್ನು ಇರಿಸಿಕೊಳ್ಳುವಂತೆ ಸೂಚನೆ ನೀಡಲಾಗುವುದು. ಜೊತೆಗೆ ಮೊಬೈಲ್ ಮತ್ತು ಡಿಜಿಟಲ್ ವಹಿವಾಟುಗಳ ವಿಫಲಗೊಳ್ಳುವ ಸಂದರ್ಭ ಉಂಟಾದರೆ ನಗದು ಹಣವನ್ನು ಕೈಯಲ್ಲಿ ಇರಿಸಿಕೊಳ್ಳುವಂತೆ ತಿಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

    ಇನ್ನೂ ಮಾಕ್ ಡ್ರಿಲ್ ನಡೆಸಲಾಗುವ 244 ಜಿಲ್ಲೆಗಳ ಪೈಕಿ 100ಕ್ಕೂ ಹೆಚ್ಚು ಜಿಲ್ಲೆಗಳನ್ನು ಅತ್ಯಂತ ಸೂಕ್ಷ್ಮ ಸ್ಥಳಗಳೆಂದು ಗುರುತಿಸಲಾಗಿದೆ. ಹೀಗಾಗಿ ಈ ಅಣಕು ಕವಾಯತು ಕೆಲವು ನಿರ್ಣಾಯಕ ಕ್ರಮಗಳನ್ನು ಒಳಗೊಂಡಿರಲಿದೆ.ಇದನ್ನೂ ಓದಿ: ಮಗಳ ಸಾವಿಗೆ ಪ್ರತೀಕಾರ – ‘ತಮ್ಮ’ನ ಅಪ್ಪನನ್ನು ಬರ್ಬರವಾಗಿ ಕೊಂದ ತಂದೆ

  • ಡಿಜಿಟಲ್ ಅರೆಸ್ಟ್ ವಂಚನೆ ವಿರುದ್ಧ ಸಮರ – ಕೇಂದ್ರ ಗೃಹ ಸಚಿವಾಲಯದಿಂದ ಉನ್ನತ ಮಟ್ಟದ ಸಮಿತಿ ರಚನೆ

    ಡಿಜಿಟಲ್ ಅರೆಸ್ಟ್ ವಂಚನೆ ವಿರುದ್ಧ ಸಮರ – ಕೇಂದ್ರ ಗೃಹ ಸಚಿವಾಲಯದಿಂದ ಉನ್ನತ ಮಟ್ಟದ ಸಮಿತಿ ರಚನೆ

    – 3.25 ಲಕ್ಷ ನಕಲಿ ಬ್ಯಾಂಕ್ ಖಾತೆ ಸ್ಥಗಿತಗೊಳಿಸುವಂತೆ ಆದೇಶ

    ನವದೆಹಲಿ: ಡಿಜಿಟಲ್ ಅರೆಸ್ಟ್‌ಗೆ (Digital Arrest) ಸಂಬಂಧಿಸಿದ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಇವುಗಳ ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯವು (Union Home Ministry) ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಮೂಲಗಳ ಪ್ರಕಾರ, ಸಮಿತಿಯು ಗೃಹ ಸಚಿವಾಲಯದ ಆಂತರಿಕ ಭದ್ರತಾ ಕಾರ್ಯದರ್ಶಿಯ ಮೇಲ್ವಿಚಾರಣೆಯಲ್ಲಿರಲಿದೆ.

    ಸಚಿವಾಲಯದ ಸೈಬರ್ ಅಪರಾಧ ಸಮನ್ವಯ ಕೇಂದ್ರವು 14ಅ ಎಂದು ಕರೆಯಲ್ಪಡುತ್ತದೆ, ಸಮಿತಿಯ ಬಗ್ಗೆ ತಿಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರನ್ನು ಸಂಪರ್ಕಿಸಿದೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಸಮಿತಿಗೆ ಸೂಚಿಸಿದೆ.ಇದನ್ನೂ ಓದಿ: ದರ್ಶನ್‌ಗೆ ಜಾಮೀನು – ಹೈಕೋರ್ಟ್‌ ವಿಧಿಸಿದ ಆ 8 ಷರತ್ತುಗಳೇನು?

    ಈ ವರ್ಷದಲ್ಲಿ ಈವರೆಗೂ 6,000ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್‌ ದೂರುಗಳು ದಾಖಲಾಗಿವೆ. ಹಗರಣಕ್ಕೆ ಸಂಬಂಧಿಸಿದಂತೆ 6 ಲಕ್ಷ ಮೊಬೈಲ್ ಸಂಖ್ಯೆಗಳನ್ನು ನಿರ್ಬಂಧಿಸಿದೆ. ಸೈಬರ್ ಅಪರಾಧ ಸಮನ್ವಯ ಕೇಂದ್ರವು ಕನಿಷ್ಠ 709 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ. ಸೈಬರ್ ವಂಚನೆಗೆ ಸಂಬಂಧಿಸಿದ 3.25 ಲಕ್ಷ ನಕಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂತಹ ಹಗರಣಗಳ ವಿರುದ್ಧ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಭಾನುವಾರ “ಮನ್ ಕಿ ಬಾತ್” ರೇಡಿಯೋ ಪ್ರಸಾರದಲ್ಲಿ, ಇಂತಹ ಹಗರಣಗಳಿಂದ ಎಚ್ಚರಿಕೆಯಿಂದ ಇರುವಂತೆ ಜನರಿಗೆ ಮನವಿ ಮಾಡಿದ್ದರು. ಕಾನೂನಿನಲ್ಲಿ “ಡಿಜಿಟಲ್ ಅರೆಸ್ಟ್” ಎಂಬುದೇನೂ ಇಲ್ಲ ಎಂದು ಪ್ರಧಾನಿ ಒತ್ತಿ ಹೇಳಿದರು.

    ಡಿಜಿಟಲ್ ಅರೆಸ್ಟ್ ಎಂದರೇನು?
    ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಹೊಸ ವಿಧಾನವಾಗಿದೆ. ಇದರಲ್ಲಿ ವಂಚಕರು ಕಾನೂನು ಜಾರಿ ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ ಮತ್ತು ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳಾಗಿರುತ್ತಾರೆ.ಇದನ್ನೂ ಓದಿ: ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ – ಅಪರಿಚಿತ ವ್ಯಕ್ತಿಯಿಂದ 2 ಕೋಟಿಗೆ ಬೇಡಿಕೆ

  • ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಇತ್ತೀಚೆಗೆ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ( Union Home Ministry) ರಾಷ್ಟ್ರೀಯ ತನಿಖಾ ಸಂಸ್ಥೆಗೆ (National Investigation Agency) ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತು ಅಮರನಾಥ ಯಾತ್ರೆಯ ಸಿದ್ಧತೆಗಳ ಬಗ್ಗೆ ಭಾನುವಾರ ಸಭೆ ನಡೆಸಿದ್ದರು. ಅಲ್ಲದೇ ರಿಯಾಸಿ ಜಿಲ್ಲೆಯಲ್ಲಿ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿ ಮತ್ತು ಇತರ ಕೆಲವು ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು. ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಎಸ್‌ವೈ

    ಜೂನ್ 9 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದರು. ಘಟನೆಯಲ್ಲಿ 41 ಜನ ಗಾಯಗೊಂಡಿದ್ದರು. ಬಸ್‍ನಲ್ಲಿದ್ದ ಯಾತ್ರಾರ್ಥಿಗಳು ಶಿವ ಖೋರಿ ದೇವಸ್ಥಾನದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿತ್ತು.

    ಜೂನ್ 11 ರಂದು ಭದೇರ್ವಾಹ್‍ನ ಚಟರ್‍ಗಲ್ಲದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಚೆಕ್‍ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಜೂನ್ 12 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ ಓರ್ವ ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

    ಈ ಘಟನೆಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರು ಜೂನ್ 13 ರಂದು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸುವಂತೆ ಅವರು ಸೂಚಿಸಿದ್ದರು. ಇದನ್ನೂ ಓದಿ: ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಹುಡುಕಾಟ

  • 20 ತಿಂಗಳಾದ್ರೂ ಜಾರಿಗೆ ಬರದ ಸಿಎಎ – ಇನ್ನೂ 6 ತಿಂಗಳು ಸಮಯ ಕೇಳಿದ ಕೇಂದ್ರ

    20 ತಿಂಗಳಾದ್ರೂ ಜಾರಿಗೆ ಬರದ ಸಿಎಎ – ಇನ್ನೂ 6 ತಿಂಗಳು ಸಮಯ ಕೇಳಿದ ಕೇಂದ್ರ

    ನವದೆಹಲಿ: ಕೇಂದ್ರ ಸರ್ಕಾರ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿಗೆ ತರಲು ಇನ್ನೂ ಆರು ತಿಂಗಳ ಸಮಯಾವಕಾಶ ಕೇಳಿದೆ.

    ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಗೌರವ್ ಗೊಗೊಯಿ ಕೇಂದ್ರ ಗೃಹ ಸಚಿವಾಲಯಕ್ಕೆ ಪ್ರಶ್ನೆ ಕೇಳಿದ್ದರು. ಕೇಂದ್ರ ಸರ್ಕಾರ ಸಿಎಎ ನಿಯಮಗಳನ್ನು ನೋಟಿಫೈ ಮಾಡಲು ದಿನಾಂಕವನ್ನು ಅಂತಿಮಗೊಳಿಸಿದೆಯೇ? ಒಂದು ನಿಗದಿಯಾಗಿದ್ರೆ ದಿನಾಂಕ ತಿಳಿಸಿ? ಇಲ್ಲ ಅಂದ್ರೆ ಯಾಕೆ ಎಂದು ಪ್ರಶ್ನೆ ಮಾಡಿದ್ದರು.

    ಗೌರವ್ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಸಚಿವಾಲಯ, ಡಿಸೆಂಬರ್ 12, 2019ರಂದು ಸಿಎಎ ನೋಟಿಫೈ ಮಾಡಲಾಗಿತ್ತು. 2020ರಲ್ಲಿ ಸಿಎಎ ಕಾನೂನಿನ ರೂಪ ಪಡೆದುಕೊಂಡಿತ್ತು. ಆದ್ರೆ ಲೋಕಸಭೆ ಮತ್ತು ರಾಜ್ಯಸಭೆಯ ಸಮಿತಿ ಈ ಕಾನೂನಿನ ನಿಯಮಗಳನ್ನು ಸಿದ್ಧಪಡಿಸಲು ಜನವರಿ 2022ರವರೆಗೆ ಸಮಯ ಕೇಳಿದೆ ಎಂದು ಉತ್ತರ ನೀಡಿದೆ.

    ಕೇಂದ್ರ ಸರ್ಕಾರ 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ. ಇದನ್ನೂ ಓದಿ: ಸಿಎಎ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲಿ: ಶೋಭಾ ಕರಂದ್ಲಾಜೆ

    ಕೇಂದ್ರ ಸರ್ಕಾರದ ಈ ಕಾನೂನು ವಿರೋಧಿಸಿ ದೇಶದ ಹಲವೆಡೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದಿದ್ದವು ಜೊತೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. ಲೋಕಸಭೆಯಲ್ಲಿ ಮತ್ತೊಂದು ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸರ್ಕಾರ 2020ರಲ್ಲಿ ದೆಹಲಿ ಪೊಲೀಸರು ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು ತಡೆಗಟ್ಟುವಿಕೆ ಕಾಯ್ದೆ) ಅಡಿ 9 ಪ್ರಕರಣ ದಾಖಲಿಸಿದ್ದು, 34 ಜನರನ್ನು ಬಂಧಿಸಿದೆ ಎಂದು ಮಾಹಿತಿ ನೀಡಿದೆ. ಇದನ್ನೂ ಓದಿ: ಸಿಎಎ ಕಾಯ್ದೆ ಭಾರತೀಯರಿಗೆ ಸಮಸ್ಯೆಯೆಂದು ಸಾಬೀತು ಪಡಿಸಿದ್ರೆ 1 ಕೋಟಿ ಬಹುಮಾನ

  • ಪಿಎಫ್‍ಐ ಸಂಘಟನೆ ನಿಷೇಧಿಸುವಂತೆ ಗೃಹ ಸಚಿವಾಲಯಕ್ಕೆ ಪೊಲೀಸರಿಂದ ಪತ್ರ

    ಪಿಎಫ್‍ಐ ಸಂಘಟನೆ ನಿಷೇಧಿಸುವಂತೆ ಗೃಹ ಸಚಿವಾಲಯಕ್ಕೆ ಪೊಲೀಸರಿಂದ ಪತ್ರ

    – ಹಿಂಸಾಚಾರದಲ್ಲಿ ಪ್ರಮುಖ ಪಾತ್ರದ ಆರೋಪ
    – ಸಾಮಾಜಿಕ ಜಾಲತಾಣಗಳಿಂದ ಪ್ರಚೋದನೆ

    ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ) ಸಂಘಟನೆಯನ್ನು ನಿಷೇಧಿಸುವಂತೆ ಉತ್ತರ ಪ್ರದೇಶ ಪೊಲೀಸ್ ಇಲಾಖೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

    ಉತ್ತರ ಪ್ರದೇಶದಲ್ಲಿ ನಡೆದ ಭಾರೀ ಹಿಂಸಾಚಾದಲ್ಲಿ ಸಂಘಟನೆ ಪ್ರಮುಖ ಪಾತ್ರ ವಹಿಸಿದೆ ಎಂದು ಪೊಲೀಸರು ಆರೋಪಿಸಿದ್ದು, ಇದಕ್ಕೆ ಸೂಕ್ತ ದಾಖಲೆಗಳನ್ನು ಸಹ ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪಿಎಫ್‍ಐ ಸಂಘಟನೆಯ ಕಾರ್ಯಕರ್ತರು ಹಿಂಸಾಚಾರ ನಡೆಸಿದ್ದಾರೆ. ಈ ಮೂಲಕ ಯುಪಿಯ ಹಿಂಸಾಚಾರದಲ್ಲಿ ಪ್ರಮುಖ ಪಾತ್ರವಹಿಸಿದ್ದು, ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಗೆ ಕಾರಣರಾಗಿದ್ದಾರೆ ಎಂದು ಗೃಹ ಸಚಿವಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೆ ಯುಪಿ ರಾಜಧಾನಿ ಲಕ್ನೋದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಪಿಎಫ್‍ಐ ಸಂಘಟನೆಯಾಗಿದೆ. ಸಿಎಎ ಕುರಿತು ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ. ಈ ಕುರಿತು ಪಿಎಫ್‍ಐ ಮುಖ್ಯಸ್ಥ ಹಾಗೂ ಖಜಾಂಚಿ ಹಿಂಸಾಚಾರದಲ್ಲಿ ತಮ್ಮ ಪಾತ್ರವಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪಿಎಫ್‍ಐ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ. ಅಲ್ಲದೆ ಸಿಕ್ಕ ಸಿಕ್ಕ ಕಡೆ ಬೆಂಕಿ ಹಚ್ಚುವಂತೆ ಭಾಗವಹಿಸಿದ್ದ ಪ್ರತಿಭಟನಾಕಾರರಿಗೆ ಪ್ರಚೋದನೆ ನೀಡಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಹೀಗಾಗಿ ಯುಪಿ ಪೊಲೀಸರು ಸಿಎಎ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ತೊಡಗಿದ ವಾಸಿಮ್, ನದೀಮ್ ಹಾಗೂ ಅಶ್ಫಾಕ್ ಮೂವರು ಪಿಎಫ್‍ಐ ಸದಸ್ಯರನ್ನು ಬಂಧಿಸಿದ್ದಾರೆ. ವಾಸಿಮ್ ಯುಪಿ ಪಿಎಫ್‍ಐ ಮುಖ್ಯಸ್ಥನಾಗಿದ್ದು, ಅಶ್ಫಾಕ್ ಖಜಾಂಚಿಯಾಗಿದ್ದಾನೆ. ನದೀಮ್ ಸಂಘಟನೆಯ ಕಾರ್ಯಕರ್ತನಾಗಿದ್ದಾನೆ.

    ತನಿಖೆ ವೇಳೆ ಪೊಲೀಸರು ಈ ಮೂವರಿಂದ ಸಿಎಎ ಪ್ರತಿಭಟನೆಗೆ ಸಂಬಂಧಿಸಿದ ಭಿತ್ತಿ ಪತ್ರಗಳು, ಬಾವುಟಗಳು, ಬರವಣಿಗೆ, ಪೋಸ್ಟರ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ನದೀಮ್ ಹಾಗೂ ಅಶ್ಫಾಕ್ ಅವರು ಈ ಕುರಿತು ತಪ್ಪೊಪ್ಪಿಕೊಂಡಿದ್ದು, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸಿಎಎ ವಿರುದ್ಧದ ಪ್ರತಿಭಟನೆಯ ಸಂದೇಶ ಕಳುಹಿಸುತ್ತಿದ್ದೆವು. ವಾಟ್ಸಪ್, ಟೆಲಿಗ್ರಾಂ ಬಳಸಿ ವಿಡಿಯೋ ಹಾಗೂ ಬರವಣಿಗೆ ಮೂಲಕ ಮಾಹಿತಿ ಹಂಚುತ್ತಿದ್ದೆವು ಎಂದು ತಿಳಿಸಿದ್ದಾರೆ.

    ಯುಪಿಯ ಶಾಮ್ಲಿಯಲ್ಲಿ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ತೊಡಗಿದ್ದ 14 ಪಿಎಫ್‍ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಮೀರತ್‍ನಲ್ಲಿ ಸಹ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಒಟ್ಟು 20 ಜನ ಸಾವನ್ನಪ್ಪಿದ್ದು, ಇದರಲ್ಲಿ ಬಹುತೇಕರು ಉತ್ತರ ಪ್ರದೇಶದವರಾಗಿದ್ದಾರೆ. ಉತ್ತರ ಪ್ರದೇಶದ ಡಿಜಿಪಿ ಒ.ಪಿ.ಸಿಂಗ್ ಅವರು ಈ ಕುರಿತು ಮಂಗಳವಾರ ಪ್ರತಿಕ್ರಿಯಿಸಿ, ಪಿಎಫ್‍ಐ ಸಂಘಟನೆಯನ್ನು ನಿಷೇಧಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದೇವೆ ಎಂದು ಖಚಿತಪಡಿಸಿದ್ದಾರೆ.

    ಈ ಮಧ್ಯೆ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಪ್ರತಿಕ್ರಿಯಿಸಿ, ಪೊಲೀಸರು ಪಿಎಫ್‍ಐ ಬ್ಯಾನ್ ಮಾಡುವ ಕುರಿತು ದಾಖಲೆಗಳನ್ನು ಸಲ್ಲಿಸಿದ್ದು, ಅವುಗಳನ್ನು ಆಧರಿಸಿ ಕೇಂದ್ರ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಹಿಂಸಾಚಾರದಲ್ಲಿ ಪಿಎಫ್‍ಐ ಪಾತ್ರವಿರುವುದು ಕಂಡು ಬಂದಿದೆ. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಗೃಹ ಸಚಿವಾಲಯ ನಿರ್ಧಾರ ಕೈಗೊಳ್ಳಲಿದೆ. ಸಂಘಟನೆ ಕುರಿತು ಹಲವು ಆರೋಪಗಳಿದ್ದು, ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾದೊಂದಿಗೆ ಸಂಪರ್ಕ ಹೊಂದಿತ್ತು ಎಂಬ ಆರೋಪ ಸಹ ಇದೆ ಎಂದು ತಿಳಿಸಿದ್ದಾರೆ.

  • ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

    ನವದೆಹಲಿ: 2012ರ `ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಆದ್ದರಿಂದ ಶೀಘ್ರದಲ್ಲೇ ದೋಷಿಗಳನ್ನು ಗಲ್ಲಿಗೇರಿಸಲಾಗುವುದು ಎನ್ನಲಾಗಿದೆ.

    ಈ ಸಂಬಂಧ ದೆಹಲಿ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದ್ದು, ಇದನ್ನು ಗೃಹ ಸಚಿವಾಲಯ ಪರಿಶೀಲಿಸಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ರವಾನಿಸಲಿದೆ. ಈ ಬಗ್ಗೆ ಅಂತಿಮ ನಿರ್ಧಾರವನ್ನು ರಾಷ್ಟ್ರಪತಿಗಳು ತೆಗೆದುಕೊಳ್ಳಲಿದ್ದಾರೆ. ಆದರೆ ಅವರು ಕೂಡ ದೆಹಲಿ ಸರ್ಕಾರದಂತೆ ಕ್ಷಮಾದಾನ ಅರ್ಜಿ ತಿರಸ್ಕರಿಸುವ ಸಾಧ್ಯತೆ ಹೆಚ್ಚಾಗಿದ್ದು, ಶೀಘ್ರದಲ್ಲೇ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 10ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಪೊಲೀಸ್ ಮಗನ ಜೊತೆ ಸಿಆರ್​ಪಿಎಫ್​ ಯೋಧನಿಂದ ಕೃತ್ಯ

    2012ರ ಡಿ. 16ರಂದು ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರಗೈದು, ಕೊಲೆ ಮಾಡಿ ದುರುಳರು ವಿಕೃತಿ ಮೆರೆದಿದ್ದರು. ಈ ಪ್ರಕರಣ ಸಂಬಂಧ ರಾಮ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮಾ, ಅಕ್ಷಯ್ ಠಾಕೂರ್, ಮುಕೇಶ್ ಸಿಂಗ್ ಬಂಧಿಸಲಾಗಿತ್ತು. ಆದರೆ 2013ರ ಮಾರ್ಚ್ ನಲ್ಲಿ ತಿಹಾರ್ ಜೈಲಿನಲ್ಲಿಯೇ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದನು. ಬಳಿಕ ಈ ದುಷ್ಟರ ಕೃತ್ಯ ಸಾಬೀತಾಗಿ, ಅವರನ್ನು ದೋಷಿಗಳು ಎಂದು ಪರಿಗಣಿಸಿ ಇನ್ನುಳಿದ ನಾಲ್ವರಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಅವರಲ್ಲಿ ಮೂವರಿಗೆ ಕ್ಷಮಾದಾನ ಕೋರುವ ಯಾವುದೇ ಅವಕಾಶ ಇರಲಿಲ್ಲ. ಆದರೆ ವಿನಯ್ ಶರ್ಮಾಗೆ ಅವಕಾಶವಿದ್ದ ಹಿನ್ನೆಲೆ ಆತ ಮಾತ್ರ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದನು. ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಖಡಕ್ ಪ್ರಶ್ನೆಗೆ ತಲೆ ತಗ್ಗಿಸಿ ನಿಂತ ಐಸಿಸ್ ರೇಪಿಸ್ಟ್

    ಆದರೆ ಆತನ ಕ್ಷಮದಾನ ಅರ್ಜಿಯನ್ನು ಬುಧವಾರ ದೆಹಲಿ ಸರ್ಕಾರ ತಿರಸ್ಕರಿಸಿದೆ. ಅಲ್ಲದೆ ಕೇಂದ್ರ ಗೃಹ ಸಚಿವಾಲಯ ಹಾಗೂ ರಾಷ್ಟ್ರಪತಿಗಳಿಗೂ ದೋಷಿಯ ಕ್ಷಮಾದಾನ ಅರ್ಜಿ ತಿರಸ್ಕರಿಸುವಂತೆ ಶಿಫಾರಸು ಮಾಡಿದೆ. ಒಂದು ವೇಳೆ ಗೃಹ ಸಚಿವಾಲಯ ದೋಷಿಯ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದರೆ ನಿರ್ಭಯಾ ಪ್ರಕರಣದ ನಾಲ್ವರು ಅತ್ಯಚಾರಿಗಳನ್ನು ಗಲ್ಲಿಗೇರಿಸುವುದು ಖಚಿತ.

    2012ರಲ್ಲಿ ನಡೆದಿದ್ದ ಈ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅತ್ಯಾಚಾರಿಗಳ ವಿರುದ್ಧ ಸಾರ್ವಜನಿಕರು ಹೋರಾಟ, ಪ್ರತಿಭಟನೆಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ, ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತನ್ನಿ ಎಂಬ ಕೂಗು ಕೇಳಿಬಂದಿತ್ತು. ಇದನ್ನೂ ಓದಿ: ಕೊಲೆಗೈದು ಮಹಿಳೆ ಶವದ ಮೇಲೆ ರೇಪ್ – ವಿಡಿಯೋ ಸೆರೆಹಿಡಿದ ವಿಕೃತಕಾಮಿ ಅರೆಸ್ಟ್

    ನಿರ್ಭಯಾ ಪ್ರಕರಣದ ರೀತಿಯೇ ನವೆಂಬರ್ 27ರಂದು ಹೈದರಾಬಾದಿನಲ್ಲಿಯೂ ಪಶುವೈದ್ಯೆಯ ಅತ್ಯಾಚಾರ ಪ್ರಕರಣ ನಡೆದಿದ್ದು, ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಹೆತ್ತವರು ಕೂಡ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿ, ತಮ್ಮ ಮಕ್ಕಳ ದುಷ್ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊಲೆಗೈದ ಮೇಲೂ ಪಶುವೈದ್ಯೆ ಮೇಲೆ ಅತ್ಯಾಚಾರವೆಸೆಗಿದ ರಾಕ್ಷಸರು

    ಹೈದರಾಬಾದ್ ಅತ್ಯಾಚಾರ, ಕೊಲೆ ಪ್ರಕರಣದ ಬಳಿಕ ದೇಶದಲ್ಲಿ ಪ್ರತಿನಿತ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅಪ್ರಾಪ್ತೆಯರು, ಮಹಿಳೆಯರು ಮಾತ್ರವಲ್ಲದೆ ವೃದ್ಧೆಯರ ಮೇಲೂ ಕಾಮುಕರು ಕ್ರೌರ್ಯ ಮೆರೆದ ಪ್ರಕರಣಗಳು ನಡೆಯುತ್ತಿವೆ. ಆದ್ದರಿಂದ ದೇಶದೆಲ್ಲೆಡೆ ಆತ್ಯಾಚಾರಿಗಳನ್ನು ಗಲ್ಲಿಗೇರಿಸಿ ಆಗ ಹೆಣ್ಣನ್ನು ಕಾಮ ದೃಷ್ಠಿಯಿಂದ ನೋಡುವ ದುರುಳರು ಹೆದರುತ್ತಾರೆ ಎಂದು ಜನರು ಆಗ್ರಹಿಸುತ್ತಿದ್ದಾರೆ.