Tag: union ministers

  • ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

    ಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಜು.19 ರಂದು ಸರ್ವಪಕ್ಷಗಳ ಸಭೆ – ಪ್ರಹ್ಲಾದ್ ಜೋಶಿ

    ನವದೆಹಲಿ: ಇಂದಿಗೆ 100 ದಿನಗಳನ್ನು ಪೂರೈಸಿರುವ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಚರ್ಚಿಸಲು ಮಂಗಳವಾರ (ಜುಲೈ 21ರಂದು) ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

    ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿವಿಧ ಪಕ್ಷಗಳ ನಾಯಕರು ಭಾಗವಹಿಸಿದ್ದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ತಿನ ನಿಯಮಗಳು ಮತ್ತು ಕಾರ್ಯವಿಧಾನಗಳ ಅಡಿಯಲ್ಲಿ ಸರ್ಕಾರವು ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಮುಕ್ತವಾಗಿದೆ ಎಂದು ಹೇಳಿದ್ದಾರೆ.

    ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಕುರಿತು ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 100ನೇ ದಿನ ತಲುಪಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ಸಾವಿಗೆ ತೀವ್ರಗೊಂಡ ಪ್ರತಿಭಟನೆ – ಸ್ಕೂಲ್ ಬಸ್, ಪೊಲೀಸ್ ವಾಹನಗಳಿಗೆ ಬೆಂಕಿ

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೊಟಬಯ ರಾಜಪಕ್ಸೆ ತಮ್ಮ ಸ್ಥಾನಕ್ಕೆ ಈಚೆಗೆ ರಾಜೀನಾಮೆ ನೀಡಿದರು. ತಮ್ಮ ವಿರುದ್ಧದ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ಶ್ರೀಲಂಕಾ ತೊರೆದು ಪಲಾಯನಗೈದಿರುವ ಹಿನ್ನೆಲೆ ಕಳೆದ ಗುರುವಾರ ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮಾಡಿದ್ದರು.

    ಇದಕ್ಕೂ ಮುನ್ನ ಲಂಕಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದು, ರಾಜಪಕ್ಸೆ ಹಾಗೂ ಪ್ರಧಾನಿ ವಿಕ್ರಮಸಿಂಘೆ ತಮ್ಮ ಅಧಿಕಾರದಿಂದ ಕೆಳಗಿಳಿಯುವಂತೆ ಒತ್ತಾಯಿಸಿ, ಅಧ್ಯಕ್ಷೀಯ ಭವನಕ್ಕೆ ಮುತ್ತಿಗೆ ಹಾಕಿದ್ದರು. ಇದನ್ನೂ ಓದಿ: 18 ತಿಂಗಳಲ್ಲಿ 200 ಕೋಟಿ ಡೋಸ್‌ ಕೊರೊನಾ ಲಸಿಕೆ- ದಾಖಲೆ ಸೃಷ್ಟಿಸಿದ ಭಾರತ

    ಆ ನಂತರ ಶ್ರೀಲಂಕಾದ ಹಂಗಾಮಿ ಅಧ್ಯಕ್ಷರಾಗಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕರಿಸಿದ್ದು, ಹೊಸ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ 7 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದರು. ಸದ್ಯ ಮುಂದಿನ ವಾರ ನಡೆಯುವ ಮತದಾನದಲ್ಲಿ ಅವರು ಶಾಶ್ವತವಾಗಿ ಉತ್ತರಾಧಿಕಾರಿಯಾಗುವ ಪ್ರಮುಖ ಅಭ್ಯರ್ಥಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

    ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದೆ. ಇಂದು 36 ಹೊಸಬರು ಸೇರಿ 43 ಮಂದಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಪೈಕಿ ರಾಜ್ಯದ ನಾಲ್ವರು ಸಂಸದರು ಸೇರಿದ್ದಾರೆ. ನೂತನ ಸಚಿವರಿಗೆ ಖಾತೆಯನ್ನು ಸಹ ಹಂಚಿಕೆ ಮಾಡಲಾಗಿದೆ.

    ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಬೀದರ್ ಸಂಸದ ಭಗವಂತ್ ಖೂಬಾ, ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಾಲ್ವರು ಸಚಿವರಾಗುವುದರೊಂದಿಗೆ ಕೇಂದ್ರ ಸಂಪುಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಚಿವರ ಸಂಖ್ಯೆ ಆರಕ್ಕೇರಿದೆ.

    ಹೊಸದಾಗಿ ಸೃಷ್ಟಿಯಾಗಿರುವ ಸಹಕಾರ ಖಾತೆಯನ್ನು ಅಮಿತ್ ಶಾ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

    ಯಾರಿಗೆ ಯಾವ ಖಾತೆ?
    ಪ್ರಧಾನಿ ನರೇಂದ್ರ ಮೋದಿ- ವಿಜ್ಞಾನ ಮತ್ತು ತಂತ್ರಜ್ಞಾನ
    ಅಮಿತ್ ಶಾ – ಗೃಹ ಖಾತೆಯ ಜೊತೆಗೆ ಸಹಕಾರ
    ಜ್ಯೋತಿರಾದಿತ್ಯ ಸಿಂಧಿಯಾ- ನಾಗರಿಕ ವಿಮಾನಯಾನ
    ಹರ್ದೀಪ್ ಪುರಿ – ವಸತಿ, ನಗರಾಭಿವೃದ್ಧಿ ಜೊತೆಗೆ ಹೆಚ್ಚುವರಿಯಾ ಇಂಧನ
    ಧರ್ಮೇಂದ್ರ ಪ್ರಧಾನ್ – ಶಿಕ್ಷಣ
    ಪಿಯುಷ್ ಗೋಯಲ್ – ವಾಣಿಜ್ಯ ಜೊತೆಗೆ ಹೆಚ್ಚುವರಿಯಾಗಿ ಜವಳಿ
    ಶೋಭಾ ಕರಂದ್ಲಾಜೆ – ಕೃಷಿ ಮತ್ತು ರೈತರ ಕಲ್ಯಾಣ ಖಾತೆ(ರಾಜ್ಯ ಖಾತೆ)
    ನಾರಾಯಣ ಸ್ವಾಮಿ- ಸಾಮಾಜಿಕ ನ್ಯಾಯ ಮತ್ತು ಸಬಲಿಕರಣ
    ರಾಜೀವ್ ಚಂದ್ರಶೇಖರ್ – ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ(ರಾಜ್ಯ ಖಾತೆ)
    ಭಗವಂತ ಖುಬಾ – ರಾಸಾಯನಿಕ ಮತ್ತು ರಸಗೊಬ್ಬರ(ರಾಜ್ಯ ಖಾತೆ)
    ಸರ್ಬಾನಂದ ಸೋನೊವಾಲ್- ಬಂದರುಗಳು, ಹಡಗು ಮತ್ತು ಜಲ ಮಾರ್ಗಗಳು ಜೊತೆಗೆ ಆಯುಷ್
    ನಿರ್ಮಲಾ ಸೀತಾರಾಮನ್- ಹಣಕಾಸು
    ಪ್ರಹ್ಲಾದ್ ಜೋಷಿ- ಸಂಸದೀಯ ವ್ಯವಹಾರಗಳ ಖಾತೆ

  • ಸಂಸತ್ ಕಲಾಪಕ್ಕೆ ಗೈರಾದವರ ವಿರುದ್ಧ ಮೋದಿ ಕೆಂಡಾಮಂಡಲ, ಪಟ್ಟಿ ನೀಡುವಂತೆ ಸೂಚನೆ

    ಸಂಸತ್ ಕಲಾಪಕ್ಕೆ ಗೈರಾದವರ ವಿರುದ್ಧ ಮೋದಿ ಕೆಂಡಾಮಂಡಲ, ಪಟ್ಟಿ ನೀಡುವಂತೆ ಸೂಚನೆ

    ನವದೆಹಲಿ: ಸಂಸತ್ ಕಲಾಪಕ್ಕೆ ಗೈರಾದ ಸಚಿವರು ಹಾಗೂ ಸಂಸದ ವಿರುದ್ಧ ಪ್ರಧಾನಿ ಮೋದಿ ಕೆಂಡಾಮಂಡಲರಾಗಿದ್ದು, ಸಂಸತ್ ಕಲಾಪಕ್ಕೆ ಗೈರಾದವರ ಪಟ್ಟಿಯನ್ನು ಸಂಜೆಯೊಳಗೆ ನೀಡುವಂತೆ ಸೂಚಿಸಿದ್ದಾರೆ.

    ಬಿಜೆಪಿ ಸಂಸದೀಯ ಪಕ್ಷದ ವಾರದ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಸಂಸತ್‍ಗೆ ಹಾಜರಾಗಿಯೂ ಕಲಾಪಕ್ಕೆ ಗೈರಾದವರ ಪಟ್ಟಿಯನ್ನು ಸಿದ್ಧಪಡಿಸುವಂತೆ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸೂಚಿಸಿದ್ದಾರೆ.

    ಪ್ರಧಾನಿ ಮೋದಿ ಅವರು ಈ ಹಿಂದೆಯೇ ತಮ್ಮ ಸಂಸದರಿಗೆ ಈ ಕುರಿತು ಸಲಹೆ ನೀಡಿದ್ದರು. ಇದೀಗ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿಯೂ ಸಹ ಎಚ್ಚರಿಕೆ ನೀಡಿದ್ದು, ರಾಜಕಾರಣವನ್ನು ಮೀರಿ ಕೆಲಸ ಮಾಡುವ ಕುರಿತು ಸಲಹೆ ನೀಡಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

    ನೀರಿನ ಸಮಸ್ಯೆ ಒತ್ತು ನೀಡಿ, ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿ. ನಿಮ್ಮ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜನರೊಂದಿಗೆ ಸಂಪರ್ಕ ಬೆಳೆಸಿಕೊಳ್ಳಿ, ಪ್ರತಿ ದಿನ ನಿಮ್ಮ ಕಚೇರಿಯಲ್ಲಿ ಕುಳಿತು ಅಧಿಕಾರಿಗಳೊಂದಿಗೆ ಕ್ಷೇತ್ರದ ಸಮಸ್ಯೆಗಳ ಕುರಿತು ಚರ್ಚಿಸಿ ಎಂದು ಮತ್ತೊಮ್ಮೆ ಒತ್ತಿ ಹೇಳಿದ್ದಾರೆ.

    ಸಂಸದರು ಕಡ್ಡಾಯವಾಗಿ ನಿಮ್ಮ ಕ್ಷೇತ್ರವ್ಯಾಪ್ತಿಯಲ್ಲಿ ಕೆಲವು ವಿಶಿಷ್ಟ ಕೆಲಸಗಳನ್ನು ಮಾಡಬೇಕು. ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ ಎಂದು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಕುಟುಕಿದ್ದಾರೆ.

    ಕ್ಷಯ ಮತ್ತು ಕುಷ್ಠರೋಗವನ್ನು ತಡೆಗಟ್ಟಲು ಮಿಷನ್ ಮೋಡ್‍ನಲ್ಲಿ ಸಂಸದರು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ಈ ಹಿಂದೆಯೂ ಸಹ ಪ್ರಧಾನಿ ಮೋದಿ ಅವರು ಸಂಸತ್ ಕಲಾಪಕ್ಕೆ ಗೈರಾಗುವ ಸಂಸದರನ್ನು ತರಾಟೆ ತೆಗೆದುಕೊಂಡಿದ್ದರು. ಆದರೂ ಸಂಸದರು ಕಲಾಪಕ್ಕೆ ಗೈರಾಗಿದ್ದಾರೆ. ಹೀಗಾಗಿ ಮೋದಿ ಗೈರಾದವರ ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.

    ಇತ್ತೀಚೆಗೆ ಅಧಿಕಾರಿ ಮೇಲೆ ಬ್ಯಾಟ್‍ನಿಂದ ಹಲ್ಲೆ ಮಾಡಿದ್ದ ಶಾಸಕ ಆಕಾಶ್ ವಿಜಯ್‍ವರ್ಗಿಯಾ ಅವರ ಗೂಂಡಾ ವರ್ತನೆಯನ್ನು ಉದಾಹರಣೆಯಾಗಿ ನೀಡಿ ತರಾಟೆಗೆ ತೆಗೆದುಕೊಂಡಿದ್ದರು. ಇದು ಯಾವ ರೀತಿಯ ವರ್ತನೆ, ಭಾಷೆಯ ಬಳಕೆ ಎಂಥಹದ್ದು, ಜನಪ್ರತಿನಿಧಿಗಳಾದವರು ಹೇಗಿರಬೇಕು ಎಂದು ಸಂಸದರಿಗೆ ಮೋದಿ ಕ್ಲಾಸ್ ತೆಗೆದುಕೊಂಡಿದ್ದರು. ಇಂತಹವರನ್ನು ಯಾವುದೇ ಮುಲಾಜಿಲ್ಲದೆ, ಯಾವ ನಾಯಕರ ಮಗನೆಂದೂ ನೋಡದೆ ಪಕ್ಷದಿಂದ ಹೊರಗೆ ಹಾಕಿ ಎಂದು ಗುಡುಗಿದ್ದರು.

  • ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ಶೇ.2ರಷ್ಟು ತುಟ್ಟಿಭತ್ಯೆ ಏರಿಕೆ

    ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ಶೇ.2 ರಷ್ಟು ಹೆಚ್ಚುವರಿಯಾಗಿ ತುಟ್ಟಿಭತ್ಯೆ ನೀಡಲು ನಿರ್ಧರಿಸಿದ್ದು, ಇದರಿಂದ ಒಟ್ಟು 1.1 ಕೋಟಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಸಹಾಯವಾಗಲಿದೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ನಿರ್ಧಾರ ಕೈಗೊಂಡಿದ್ದು, 2018 ಜುಲೈ 1ರಿಂದ ಪೂರ್ವಾನ್ವಯವಾಗುಂತೆ ಜಾರಿಯಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರಿ ನೌಕರರು ಶೇ.7ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಈಗ ಈ ಪ್ರಮಾಣ ಶೇ.9ಕ್ಕೆ ಏರಿಕೆಯಾಗಿದೆ.

    7ನೇ ವೇತನ ಆಯೋಗದ ಶಿಫಾರಸಿನ ಹಿನ್ನೆಲೆಯಲ್ಲಿ ತುಟ್ಟಿಭತ್ಯೆ ಮತ್ತು ಪಿಚಣಿದಾರರ ತುಟ್ಟಿಭತ್ಯೆ ಪರಿಹಾರವನ್ನು(ಡಿಎಆರ್) ಏರಿಕೆ ಮಾಡಿದ್ದು, ಇದರಿಂದಾಗಿ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ 62.03 ಲಕ್ಷ ನಿವೃತ್ತಿ ವೇತನ ಪಡೆಯುವವರಿಗೆ ಅನುಕೂಲವಾಗಲಿದೆ. 2018-19ರ ಹಣಕಾಸು ವರ್ಷದಲ್ಲಿ ತುಟ್ಟಿಭತ್ಯೆ ಏರಿಕೆಯಿಂದ 6,112.20 ಕೋಟಿ ರೂ. ಮತ್ತು ಡಿಆರ್ ಏರಿಕೆಯಿಂದ 4,074.80 ಕೋಟಿ ರೂ. ಸರ್ಕಾರ ಬೊಕ್ಕಸಕ್ಕೆ ಹೊರೆಯಾಗಲಿದೆ.

    ಸರ್ಕಾರಿ ನೌಕರರು, ಸಾರ್ವಜನಿಕ ವಲಯದ ನೌಕರರು ಹಾಗೂ ಪಿಂಚಣಿದಾರರರಿಗೆ ತುಟ್ಟಿ ಭತ್ಯೆ ಸಿಗಲಿದ್ದು, ಇದು ನೌಕರರ ಮೂಲ ವೇತನದ ಮೇಲೆ ನಿಗದಿಯಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ದೆಹಲಿಗೆ ಬಂದ್ರೂ ಸಿಎಂಗೆ ತಪ್ಪಲಿಲ್ಲ ‘ಸೂಪರ್ ಸಿಎಂ’ ಕಾಟ!

    ನವದೆಹಲಿ: ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿದ್ದಂತೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣರು ಸಹ ಸಮ್ಮಿಶ್ರ ಸರ್ಕಾರದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ. ಕುಮಾರಸ್ವಾಮಿಯವರು ಎಲ್ಲಿಗೆ ಹೋದರು, ಬಂದರೂ ಅಲ್ಲಿ ರೇವಣ್ಣ ಜೊತೆಯಾಗುತ್ತಿದ್ದಾರೆ.

    ಇಂದು ದೆಹಲಿ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರ ಜೊತೆಗೆ ಸೂಪರ್ ಸಿಎಂ ರೇವಣ್ಣ ಅವರದ್ದೇ ಫುಲ್ ಹವಾ. ಸಿಎಂ ಕಾರ್ಯಕ್ರಮ, ಭೇಟಿ, ಸಭೆ ಎಲ್ಲದರಲ್ಲಿಯೂ ರೇವಣ್ಣ ಭಾಗವಹಿಸಿದ್ರು. ಮಂಗಳವಾರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಇಂದು ಕೃಷಿ ಸಚಿವ ರಾಧಮೋಹನ್ ಸಿಂಗ್, ರೈಲ್ವೆ ಸಚಿವ ಪಿಯೂಷ್ ಗೊಯೇಲ್ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿದ್ದರು. ಐದು ಜನ ಸಚಿವರ ಪೈಕಿ ಮೂವರನ್ನು ಭೇಟಿ ಮಾಡುವ ವೇಳೆ ಸಿಎಂಗೆ ರೇವಣ್ಣ ಸಾಥ್ ನೀಡಿದ್ದರು.

    ಕೃಷಿ ಸಚಿವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ರಾಜ್ಯದ ಕೃಷಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕೊಟ್ಟ ಮನವಿಗಳಿಗೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಹಲವು ಜಿಲ್ಲೆಗಳಲ್ಲಿ ಮೆಗಾ ಡೈರಿ ಆರಂಭಕ್ಕೆ 900 ಕೋಟಿ ರೂ. ನೆರವು ನೀಡಲು ಕೇಂದ್ರ ಒಪ್ಪಿಗೆ ನೀಡಿದೆ. ದೆಹಲಿ ಭೇಟಿ ಫಲ ಕೊಟ್ಟಿದೆ ಎಂಬ ತೃಪ್ತಿಯಿದೆ ಎಂದರು.

    ನವದೆಹಲಿಯ ಸೌತ್ ಬ್ಲಾಕ್ ನಲ್ಲಿರುವ ರಕ್ಷಣಾ ಕಚೇರಿಯಲ್ಲಿ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು, ರಕ್ಷಣಾ ಇಲಾಖೆಗೆ ಸೇರಿದ ಬೆಂಗಳೂರಿನ ಭೂಮಿಯನ್ನು ಮೆಟ್ರೋ ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು ಅನುಮತಿ ಕೇಳಿದ್ದಾರೆ.

    ಐಫೋನ್ ಗಿಫ್ಟ್ ನೀಡಲು ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆ ಮಾಡಿಲ್ಲ. ನನ್ನ ಗಮನಕ್ಕೆ ಬಾರದೆ ಹಣ ಬಿಡುಗಡೆ ಆಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲದೆ ಇದರಲ್ಲಿ ನನ್ನ ಪಾತ್ರವಿಲ್ಲ. ಐಫೋನ್ ಕೊಡುವ ಅವಶ್ಯಕತೆ ಇತ್ತೇ ಅಂತಾ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‍ಗೆ ಕೇಳಿದ್ದೆ. ಅವರು ಕಳೆದ ವರ್ಷವೂ ಕೊಟ್ಟಿದ್ದೆ, ಅದಕ್ಕೆ ಈ ಬಾರಿಯೂ ಕೊಟ್ಟಿದ್ದೇನೆ. ಆದರೆ ಕಳೆದ ಬಾರಿ ಗಿಫ್ಟ್ ನೀಡಿದಾಗ ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಹೀಗಾಗಿ ಕೊಟ್ಟಿರುವುದಾಗಿ ಅವರು ಹೇಳಿರುವರು ಎಂದು ಕುಮಾರಸ್ವಾಮಿ ತಿಳಿಸಿದರು.

  • ಒಂದೇ ದಿನ ಇಬ್ಬರು ಸಚಿವರು,ಇಬ್ಬರು ಕಾರ್ಯದರ್ಶಿಗಳ ಭೇಟಿ- ದೆಹಲಿಯಲ್ಲಿ ಮಧ್ವರಾಜ್ ರೌಂಡ್ಸ್

    ಒಂದೇ ದಿನ ಇಬ್ಬರು ಸಚಿವರು,ಇಬ್ಬರು ಕಾರ್ಯದರ್ಶಿಗಳ ಭೇಟಿ- ದೆಹಲಿಯಲ್ಲಿ ಮಧ್ವರಾಜ್ ರೌಂಡ್ಸ್

    ಉಡುಪಿ: ರಾಜ್ಯ ಸರ್ಕಾರದ ಈ ಅವಧಿಯ ಕೊನೆಯ ಬಜೆಟ್ ಮಂಡಿಸುತ್ತಿದ್ದಂತೆ ಮೀನುಗಾರಿಕಾ, ಕ್ರೀಡಾ, ಯುವಜನ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ದೆಹಲಿಗೆ ಹಾರಿದ್ದಾರೆ. ಕೇಂದ್ರ ಸಚಿವರನ್ನು ಭೇಟಿಯಾಗಿ ತನ್ನ ಇಲಾಖೆಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣಕ್ಕೆ ಸೂಕ್ತ ಸಲಹೆ ಪಡೆದಿದ್ದಾರೆ.

    ಕೇಂದ್ರ ಕ್ರೀಡಾ ಸಚಿವರಾದ ರಾಜ್ಯವರ್ಧನ್ ಸಿಂಗ್ ರಾಥೋಡ್ ರವರನ್ನು ದೆಹಲಿಯಲ್ಲಿರುವ ಅವರ ಕಚೇರಿಯಲ್ಲಿಂದು ಪ್ರಮೋದ್ ಮಧ್ವರಾಜ್ ಭೇಟಿ ಮಾಡಿದರು. ಕರ್ನಾಟಕದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಚರ್ಚೆ ಮಾಡಿದರು. ಕೇಂದ್ರ ಬಿಡುಗಡೆಗೊಳಿಸಬೇಕಾದ ಅನುದಾನವನ್ನು ಸ್ಥಗಿತಗೊಳಿಸಿದ್ದು ಅವುಗಳನ್ನು ಬಿಡುಗಡೆಗೊಳಿಸಲು ಒತ್ತಾಯಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾ ಸವಲತ್ತುಗಳನ್ನು ಅಭಿವೃದ್ಧಿ ಮಾಡಲು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆಯೂ ಪ್ರಮೋದ್ ಮಧ್ವರಾಜ್ ಮನವಿ ಮಾಡಿದರು.

    ಅಲ್ಲಿಂದ ಮಧ್ವರಾಜ್ ಕೇಂದ್ರದ ಕೃಷಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರನ್ನು ಭೇಟಿಯಾಗಲು ತೆರಳಿದರು. ರಾಜ್ಯ ಮತ್ತು ಕೇಂದ್ರ ಸಹಭಾಗಿತ್ವದ ಮೀನುಗಾರಿಕಾ ಇಲಾಖೆಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಮೀನುಗಾರರ ಕಲ್ಯಾಣ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ತಡೆ ಹಿಡಿದಿದೆ. ಕೇಂದ್ರ ಸರ್ಕಾರದ 80 ಕೋಟಿ ರೂ. ಬಾಕಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡಲಾಯಿತು.

    ಕೇಂದ್ರದ ಕ್ರೀಡಾ ಕಾರ್ಯದರ್ಶಿ ಮತ್ತು ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾಗಿರುವ ರಾಹುಲ್ ಭಟ್ನಾಗರ್ ರವರನ್ನು ಭೇಟಿ ಮಾಡಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಕೇಂದ್ರ ಸರ್ಕಾರದ ಅನುದಾನವನ್ನು ಮಂಜೂರುಗೋಳಿಸುವಂತೆ ಹಾಗೂ ಇಲಾಖೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಮನವಿ ನೀಡಲಾಯಿತು

    ಮೋದಿ ಸರ್ಕಾರದಲ್ಲಿ ಅಂಕಿ ಅಂಶ ಮತ್ತು ಕಾರ್ಯಕ್ರಮದ ಅನುಷ್ಠಾನ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರನ್ನು ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಮೀನುಗಾರಿಕಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಕಳುಹಿಸಲಾಗಿದೆ. ಸಂಬಂಧಪಟ್ಟವರನ್ನು ಭೇಟಿ ಮಾಡಿ ಮನವಿ ಮಾಡಿರುವುದನ್ನು ಮನವರಿಕೆ ಮಾಡಿದರು. ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರದಿಂದ ಮಂಜೂರು ಮಾಡಿಸಲು ಸಹಕಾರ ನೀಡುವಂತೆ ಪ್ರಮೋದ್ ಮಧ್ಚರಾಜ್ ಡಿ.ವಿ ಸದಾನಂದ ಗೌಡರಲ್ಲಿ ಮನವಿ ಮಾಡಿದರು. ಈ ವೇಳೆ ರಾಜ್ಯ ಮತ್ತು ಕೇಂದ್ರ ರಾಜಕಾರಣ ಬಗ್ಗೆ ಚರ್ಚೆಗಳು ನಡೆದಿದೆ ಎನ್ನಲಾಗಿದೆ.

    ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ರಕ್ಷಣಾ ಖಾತೆ ಸಚಿವ ಎ.ಕೆ.ಆಂಟನಿಯವರನ್ನು ಇಂದು ಪ್ರಮೋದ್ ಮಧ್ವರಾಜ್ ಭೇಟಿ ಮಾಡಿ ಪಕ್ಷದ ಬೆಳವಣಿಗೆಗಳ ಬಗ್ಗೆ ವಿಚಾರ ವಿಮರ್ಶೆ ನಡೆಸಿ ಅವರಿಂದ ಮಾರ್ಗದರ್ಶನ ಪಡೆದರು.

    ದೆಹಲಿ ಪ್ರವಾಸದಲ್ಲಿ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಇಲಾಖೆಗಳಿಗೆ ಶೀಘ್ರ ಅನುದಾನ ನೀಡುವಂತೆ ಪ್ರಮೋದ್ ಮಧ್ವರಾಜ್ ಒಂದೇ ದಿನ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.