Tag: United States of Kailasa

  • ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!

    ಸಿಸ್ಟರ್ ಸಿಟಿ ಹಗರಣ – ನಿತ್ಯಾನಂದನ ನಕಲಿ ದೇಶದೊಂದಿಗೆ ಅಮೆರಿಕದ 30 ನಗರಗಳು ಒಪ್ಪಂದ!

    ವಾಷಿಂಗ್ಟನ್: ಸ್ವಯಂ ಘೋಷಿತ ದೇವಮಾನವ ಹಾಗೂ ಭಾರತದಿಂದ ಪಲಾಯನಗೈದ ನಿತ್ಯಾನಂದನ (Nithyananda) ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ (United States of Kailasa) ಅಮೆರಿಕದ (America) 30 ಕ್ಕೂ ಹೆಚ್ಚು ನಗರಗಳ ಜೊತೆ ಸ್ನೇಹಪೂರ್ವಕವಾಗಿ ಸೇರಿರುವ ನಗರಗಳೆಂಬ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.

    ನ್ಯೂಜೆರ್ಸಿಯ ನೆವಾರ್ಕ್ ನಗರ ನಿತ್ಯಾನಂದನ ನಕಲಿ ರಾಷ್ಟ್ರದೊಂದಿಗೆ ಸಿಸ್ಟರ್ ಸಿಟಿ (Sister City) ಒಪ್ಪಂದವನ್ನು ರದ್ದುಗೊಳಿಸಿದೆ. ಇದಾದ ಬಳಿಕ ಅಮೆರಿಕದ ರಿಚ್ಮಂಡ್, ವರ್ಜೀನಿಯಾ, ಡೇಟನ್, ಬಹಿಯೊ, ಬುಯೆನಾ ಪಾರ್ಕ್, ಫ್ಲೋರಿಡಾ ಮುಂತಾದ ನಗರಾಡಳಿತಗಳು ಕೈಲಾಸದೊಂದಿಗೆ ಒಪ್ಪಂದ ಮಾಡಿಕೊಂಡು ತಾವೂ ಕೈಲಾಸದ ಭಾಗವಾಗಿರುವುದಾಗಿ ಹಾಗೂ ಉಪನಗರಗಳ ಮಾದರಿಯಲ್ಲಿ ಇರುವುದಾಗಿ ಘೋಷಿಸಿಕೊಂಡಿದೆ.

     

    ನೆವಾರ್ಕ್ ಹಾಗೂ ಕೈಲಾಸ ನಡುವಿನ ಸಿಸ್ಟರ್ ಸಿಟಿ ಒಪ್ಪಂದಕ್ಕೆ ಈ ವರ್ಷ ಜನವರಿ 12 ರಂದು ಸಹಿ ಹಾಕಲಾಗಿತ್ತು. ಈ ಒಪ್ಪಂದದ ಸಮಾರಂಭವನ್ನು ಕೂಡಾ ನೆವಾರ್ಕ್‌ನ ಸಿಟಿ ಹಾಲ್‌ನಲ್ಲಿ ನಡೆಸಲಾಗಿತ್ತು. ಇದನ್ನೂ ಓದಿ: ಭದ್ರತಾ ಪಡೆಯಿಂದ ಉಗ್ರರ ಮೇಲೆ ಗುಂಡಿನ ದಾಳಿ

    ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಅಮೆರಿಕದ ಫಾಕ್ಸ್ ನ್ಯೂಸ್ ಸಂಸ್ಥೆ ತನಿಖಾ ವರದಿಯೊಂದನ್ನು ಸಿದ್ಧಪಡಿಸಿದ್ದು, ಅದರಲ್ಲಿ ನಿತ್ಯಾನಂದ ಎಂಬ ನಕಲಿ ಸ್ವಾಮೀಜಿ ವಾಸ್ತವದಲ್ಲಿ ಅಸ್ತಿತ್ವದಲ್ಲಿಯೇ ಇಲ್ಲದ ಕೇವಲ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಬಹುದಾದಂತಹ ದೇಶವೊಂದನ್ನು ಸೃಷ್ಟಿಸಿದ್ದಾನೆ. ಅದಕ್ಕೆ ಕೈಲಾಸ ಎಂಬ ಹೆಸರು ಕೂಡಾ ಇಟ್ಟಿದ್ದಾನೆ. ಆ ದೇಶಕ್ಕೆ ಕರೆನ್ಸಿ, ಪಾಸ್‌ಪೋರ್ಟ್, ರಾಷ್ಟ್ರ ಲಾಂಛನ ಎಲ್ಲವೂ ಇರುವುದಾಗಿ ಘೋಷಿಸಿದ್ದಾನೆ. ಇಂತಹ ನಕಲಿ ಗುರುವಿನ ಜೊತೆ ಅಮೆರಿಕದ ಈ ಮಹಾನಗರಗಳು ಒಪ್ಪಂದ ಮಾಡಿಕೊಂಡಿರುವುದು ಹಾಸ್ಯಾಸ್ಪದ, ಇದು ತನಿಖೆಗೆ ಅರ್ಹವಾದ ವಿಚಾರ ಎಂದು ತಿಳಿಸಿದೆ.

    ಈ ತನಿಖಾ ವರದಿ ಪ್ರಕಟಗೊಳ್ಳುತ್ತಲೇ ನ್ಯೂಜೆರ್ಸಿ ನಗರ ಕೈಲಾಸದೊಂದಿಗೆ ಮಾಡಿಕೊಂಡಿದ್ದ ಸಿಸ್ಟರ್ ಸಿಟಿ ಒಪ್ಪಂದವನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಉರಿಗೌಡ-ನಂಜೇಗೌಡ ಚಿತ್ರ : ಫಿಲ್ಮ್ ಚೇಂಬರ್ ಗೆ ಪತ್ರ ಬರೆದ ಒಕ್ಕಲಿಗರ ಸಂಘ

  • ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ- ಕ್ರಮಕ್ಕೆ ಶಿಷ್ಯೆ ಒತ್ತಾಯ

    ನಿತ್ಯಾನಂದನಿಗೆ ಭಾರತದಲ್ಲಿರೋ ಹಿಂದೂ ವಿರೋಧಿಗಳಿಂದ ಕಿರುಕುಳ- ಕ್ರಮಕ್ಕೆ ಶಿಷ್ಯೆ ಒತ್ತಾಯ

    ಬರ್ರೆನ್: ನಿತ್ಯಾನಂದನಿಗೆ (Nithyananda) ಭಾರತದಿಂದ ಕಿರುಕುಳ ನೀಡುತ್ತಿಲ್ಲ. ಆದ್ರೆ ಭಾರತದಲ್ಲಿರುವ ಕೆಲವು ಹಿಂದೂ ವಿರೋಧಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಕೈಲಾಸ ಯುನೈಟೆಡ್ ಸ್ಟೇಟ್ಸ್‌ನ (United States Of Kailasa) ಶಾಶ್ವತ ರಾಯಭಾರಿ ವಿಜಯಾಪ್ರಿಯಾ ನಿತ್ಯಾನಂದ (Vijayapriya Nithyananda) ಸ್ಪಷ್ಟನೆ ನೀಡಿದ್ದಾರೆ.

    ಇತ್ತೀಚೆಗೆ ಜಿನಿವಾದಲ್ಲಿ ನಡೆದ ವಿಶ್ವಸಂಸ್ಥೆಯ (UN) ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CRSR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿತ್ತು. ಈ ಸಭೆಯಲ್ಲಿ ನಿತ್ಯಾನಂದಗೆ ತನ್ನ ಜನ್ಮಸ್ಥಳದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ನಿತ್ಯಾನಂದನ ಶಿಷ್ಯೆ, ಹಿಂದೂ ವಿರೋಧಿಗಳ ವಿರುದ್ಧ ಕ್ರಮಕ್ಕೆ ಅಗ್ರಹಿಸಿದ್ದಾರೆ.

    ಫೆಬ್ರವರಿ 24 ರಂದು ನಡೆದ ಮಹಾಸಭೆಯಲ್ಲಿ ನೀಡಿದ್ದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿತ್ಯಾನಂದ ತಮ್ಮ ಜನ್ಮಸ್ಥಳದಲ್ಲಿ ಕೆಲವು ಹಿಂದೂ ವಿರೋಧಿಗಳಿಂದ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ನಾನು ಹೇಳಿದ್ದೆ. ಕೈಲಾಸ ಯುನೈಟೆಡ್ ಸ್ಟೇಟ್ಸ್ ಭಾರತವನ್ನು ಉನ್ನತ ಗೌರವದಿಂದಲೇ ಕಾಣುತ್ತದೆ. ಈಗಲೂ ಭಾರತವನ್ನು ಗುರುಪೀಠವೆಂದೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ – ಭಾರತೀಯ ಮೂಲದ ವಿದ್ಯಾರ್ಥಿನಿ ಸಾವು

    ನಮ್ಮ ಕಳಕಳಿ ಏನಿದ್ದರೂ ಹಿಂದೂ ವಿರೋಧಿ ಅಂಶಗಳ ಕಡೆಗೆ ಮಾತ್ರ ಕೇಂದ್ರೀಕೃತವಾಗಿದೆ. ಹಿಂದೂ ಧರ್ಮ ಮತ್ತು ಕೈಲಾಸದ ಪರಮೋಚ್ಚ ಮಠಾಧೀಶರ ವಿರುದ್ಧ ಹಿಂಸಾಚಾರ ಮುಂದುವರೆಸುವ ಇಂತಹ ಅಂಶಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಾವು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.

    Vijayapriya Nithyananda

    ನಿತ್ಯಾನಂದನ ಶಿಷ್ಯೆ ಹೇಳಿದ್ದೇನು?: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (ಸಿಇಎಸ್‌ಆರ್) ಮಹಾಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ, ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ

    Kailasa

    ಕೈಲಾಸ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – ಎಸ್‌ಪಿಹೆಚ್) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದ್ದರು.

    Nithyananda

    ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು.

  • `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ

    `ಕೈಲಾಸ’ ಹಿಂದೂ ಧರ್ಮದ ಮೊದಲ ಸಾರ್ವಭೌಮ ರಾಜ್ಯ- UN ಮಹಾಸಭೆಯಲ್ಲಿ ನಿತ್ಯಾನಂದ ಶಿಷ್ಯೆ ಪ್ರತಿಪಾದನೆ

    ಬರ‍್ರೆನ್: ಜಿನಿವಾದಲ್ಲಿ ಈಚೆಗೆ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳ (CESR) ಮಹಾಸಭೆಯಲ್ಲಿ ಸ್ವಯಂಘೋಷಿತ ದೇವಮಾನವ ಹಾಗೂ ಕೈಲಾಸ ದೇಶದ ಸಂಸ್ಥಾಪಕ ಸ್ವಾಮಿ ನಿತ್ಯಾನಂದನ (Swamy Nithyananda) ಶಿಷ್ಯೆ ಭಾಗವಹಿಸಿದ್ದರು ಎಂದು ಹೇಳಲಾಗಿದೆ.

    ವಿಶ್ವಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಹಾಸಭೆಯಲ್ಲಿ (United Nations Meeting) ಅಮೆರಿಕ, ಯುಕೆ, ಸ್ಲೊವೇನಿಯಾ, ಫ್ರಾನ್ಸ್ ಮುಂತಾದ ಕಡೆಗಳಲ್ಲಿ ನಿತ್ಯಾನಂದ ಆಶ್ರಮಗಳನ್ನು ನಡೆಸುತ್ತಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸದ (United States of Kailasa) ಮಹಿಳಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಅಲ್ಲಿ ಸಾಮಾಜಿಕ, ಆರ್ಥಿಕ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಕೈಲಾಸ ಎಸ್‌ಪಿಹೆಚ್ ನಿತ್ಯಾನಂದ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಸಹ ಹಂಚಿಕೊಳ್ಳಲಾಗಿದೆ.

    ಇದೇ ಸಭೆಯಲ್ಲಿ ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಎಂದು ಹೇಳಿರುವ ವಿಜಯಪ್ರಿಯಾ (Vijayapriya Nithyananda) ಸಹ ಭಾಗವಹಿಸಿದ್ದರು. ಅಲ್ಲಿ ನಿತ್ಯಾನಂದ ತನ್ನ ಜನ್ಮಸ್ಥಳವಾದ ಭಾರತ ದೇಶದಿಂದ ಹಿಂಸೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪಾಕ್, ಚೀನಾದಲ್ಲಿ ತರಬೇತಿ ಪಡೆದ ಡೇಂಜರಸ್ ವ್ಯಕ್ತಿ ಭಾರತಕ್ಕೆ ಎಂಟ್ರಿ – NIA ಅಲರ್ಟ್

    ಕೈಲಾಸ ಹಿಂದೂ ಧರ್ಮದ (Hinduism) ಮೊದಲ ಸಾರ್ವಭೌಮ ರಾಜ್ಯ. ಅದನ್ನು ಹಿಂದೂ ಧರ್ಮದ ಸರ್ವೋಚ್ಛ ಮಠಾಧೀಶ (ಸುಪ್ರೀಂ ಪಾಂಟಿಫ್ ಆಫ್ ಹಿಂದೂಯಿಸಂ – SPH) ನಿತ್ಯಾನಂದ ಪರಮಶಿವಂ ಸ್ಥಾಪಿಸಿದ್ದಾರೆ. ಅವರು ಪ್ರಬುದ್ಧ ಹಿಂದೂ ನಾಗರಿಕತೆ ಮತ್ತು ಆದಿಶೈವ, ಸ್ಥಳೀಯ ಬುಡಕಟ್ಟು ಸೇರಿ ಹಿಂದೂ ಧರ್ಮದ 10 ಸಾವಿರ ಸಂಪ್ರದಾಯಗಳನ್ನ ಪುನರುಜ್ಜೀವನಗೊಳಿಸಿದ್ದಾರೆ. ಕೈಲಾಸ ಸುಸ್ಥಿರ ಅಭಿವೃದ್ಧಿಯೊಂದಿಗೆ ಯಶಸ್ವಿಯಾಗಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಉಗ್ರನನ್ನು ಹತ್ಯೆಗೈದ ಭದ್ರತಾ ಪಡೆ

    ಇತರ ಪ್ರತಿನಿಧಿಗಳು ಮಾತನಾಡಿ, ನಾನಾ ದೇಶಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಹಿಂಸೆಗಳು, ಪುರುಷ ಪ್ರಧಾನ ಸಮಾಜಗಳಲ್ಲಿ ಒಳಗಾಗುತ್ತಿರುವ ಅಪಮಾನಗಳ ಬಗ್ಗೆ ಪ್ರತಿಪಾದಿಸಿದ್ದಾರೆ. ಜಗತ್ತಿನಲ್ಲಿ ಶೇ.82ರಷ್ಟು ಮಹಿಳೆಯರು ಪದೇ ಪದೇ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಪುರುಷ ಪ್ರಧಾನ ವ್ಯವಸ್ಥೆಯನ್ನು ಪ್ರಶ್ನಿಸಿದ್ದಕ್ಕಾಗಿ ಶೇ. 42ರಷ್ಟು ಮಹಿಳೆಯರು, ಅತ್ಯಾಚಾರ ಸೇರಿದಂತೆ ಅನೇಕ ದೌರ್ಜನ್ಯಗಳಿಗೆ ಒಳಗಾಗುತ್ತಿದ್ದಾರೆ ಎಂದು ಹೇಳಿದರು.

    ಅಜ್ಞಾನ ಸ್ಥಳದಲ್ಲಿ ಕೈಲಾಸ ದೇಶ ಸ್ಥಾಪಿಸಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ದೇಶವನ್ನು ವಿಶ್ವಸಂಸ್ಥೆ ಗುರುತಿಸಿದೆಯೇ ಎಂಬುದು ಅಸ್ಪಷ್ಟವಾಗಿದೆ.

    ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ವಿರುದ್ಧ 2010ರಲ್ಲಿ ಕರ್ನಾಟಕ ಸೆಷನ್ಸ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಆಶ್ರಮದಲ್ಲಿಯೂ ಚಿತ್ರಹಿಂಸೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದಿತು. ಈ ಕುರಿತು ತನಿಖೆ ನಡೆಸಿದ ಗುಜರಾತ್ ಪೊಲೀಸರು, ನಿತ್ಯಾನಂದ ದೇಶದಿಂದಲೇ ತಲೆ ಮರೆಸಿಕೊಂಡಿರುವುದಾಗಿ ವರದಿ ಮಾಡಿದ್ದರು.