ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ (BJP) ನಿಯೋಗವು ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ಗೆ (Thawar Chand Gehlot) ಮನವಿ ಸಲ್ಲಿಸಿದೆ.
ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಶ್ರೀಮತಿ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. ಇದನ್ನೂ ಓದಿ: ಕಾಪು ಮಾರಿಗುಡಿಗೆ ಕಂಗನಾ ರಣಾವತ್ ಭೇಟಿ
-ನೀರಿಗಾಗಿ ಹೋರಾಡುವಂತೆ ವಿದ್ಯೆಗಾಗಿ ಹೋರಾಟ ಎಂದ ವಿಪಕ್ಷ ನಾಯಕ
ಬೆಂಗಳೂರು: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ ಎಂದಿರುವ ಕಾಂಗ್ರೆಸ್ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದರು.
ಮಂಡ್ಯದಲ್ಲಿ (Mandya) ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಶಿಕ್ಷಣದಲ್ಲಿ ಹಿಂದುಳಿದಿದೆ. ಇದಕ್ಕಾಗಿ ಬಿಜೆಪಿ ಸರ್ಕಾರ ಹೊಸ 9 ವಿಶ್ವವಿದ್ಯಾಲಯಗಳನ್ನು ನೀಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಕಿತ್ತುಕೊಂಡಿದೆ. ವಿವಿಗಳನ್ನು ಮುಚ್ಚಲು ರೂಪಿಸಿದ ವರದಿಯಲ್ಲಿ ವಿವಿಗಳು ಲಾಭದಾಯಕವಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಶಿಕ್ಷಣ ಸಂಸ್ಥೆಗಳಿಂದಲೂ ಆದಾಯ ಬರಬೇಕು ಎಂಬುದು ಸರ್ಕಾರದ ಉದ್ದೇಶ ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಿಕ್ಷೆ ಬೇಡುತ್ತಿದ್ದಾರೆ. ಈ ಬಾರಿ 1 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಅತ್ಯಧಿಕ ಸಾಲ ಮಾಡಿದ್ದಾರೆ ಎಂದು ದೂರಿದರು.ಇದನ್ನೂ ಓದಿ: ಅಮಲಾ ಪೌಲ್ ಪ್ಯಾಂಟ್‌ಲೆಸ್ ಫೋಟೋಶೂಟ್ ನೋಡಿ ಕಾಲೆಳೆದ ನೆಟ್ಟಿಗರು
ಜಿಲ್ಲೆಗೆ ಒಂದು ವಿಶ್ವವಿದ್ಯಾಲಯವಿದ್ದರೆ ಆ ಜಿಲ್ಲೆ ಶಿಕ್ಷಣದಲ್ಲಿ ಸ್ವಾವಲಂಬಿಯಾಗುತ್ತದೆ:
ಶಿಕ್ಷಣ ಎಂದರೆ ವ್ಯಾಪಾರವಲ್ಲ, ಅದು ನಮ್ಮ ದೇಶದ ಆಸ್ತಿ. ಮುಚ್ಚಿರುವ ಬಾರ್‌ಗಳನ್ನು ತೆರೆದು, ವಿವಿಗಳನ್ನು ಮುಚ್ಚಲಾಗುತ್ತಿದೆ. ಎಲ್ಲ ವಿವಿಗಳನ್ನು ನಡೆಸಲು 252 ಕೋಟಿ ರೂ. ಇದ್ದರೆ ಸಾಕು. ಉಚಿತವಾಗಿ 2 ಸಾವಿರ ರೂ. ನೀಡಿ ವಿವಿಗಳನ್ನು ಮುಚ್ಚುತ್ತೇವೆ ಎಂದರೆ ಗ್ಯಾರಂಟಿಗೆ ಬೆಲೆ ಇರುವುದಿಲ್ಲ. ಬಿಜೆಪಿ ಸರ್ಕಾರ ವಿಶ್ವವಿದ್ಯಾಲಯಗಳನ್ನು ರೂಪಿಸಿದಾಗ ಹೊಸ ಹುದ್ದೆಗಳನ್ನು ಸೃಷ್ಟಿ ಮಾಡಿರಲಿಲ್ಲ. ಇರುವ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿತ್ತು. ವಿಶ್ವವಿದ್ಯಾಲಯ ಮುಚ್ಚುವುದರಿಂದ ಲಾಭವಾಗುತ್ತದೆಯೋ? ನಷ್ಟವಾಗುತ್ತದೆಯೋ? ಎಂಬುದು ಬೇಕಿಲ್ಲ. ಇದರಿಂದ ಮಕ್ಕಳಿಗೆ ಏನು ತೊಂದರೆಯಾಗುತ್ತದೆ? ಎಂಬ ಬಗ್ಗೆ ಸರ್ಕಾರ ಸ್ಪಷ್ಟಪಡಿಸಲಿ. ನೀರಿಗಾಗಿ ಹೋರಾಟ ಮಾಡುವಂತೆಯೇ, ವಿದ್ಯೆಗಾಗಿ ಮಂಡ್ಯದ ಜನರು ಹೋರಾಟ ಮಾಡಲಿದ್ದಾರೆ. ಸರ್ಕಾರದ ಬಳಿ ಹಣವಿಲ್ಲವೆಂದರೆ ಅದನ್ನು ನೇರವಾಗಿ ಹೇಳಲಿ. ನಾವೆಲ್ಲರೂ ಹಣ ಸಂಗ್ರಹಿಸಿ ವಿಶ್ವವಿದ್ಯಾಲಯ ನಡೆಸುತ್ತೇವೆ ಎಂದರು.
ಆರ್ಥಿಕ ಪರಿಸ್ಥಿತಿ ನೆಪವೊಡ್ಡಿ ಮಂಡ್ಯ ವಿವಿ ಸೇರಿದಂತೆ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ @INCKarnataka ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ಮಂಡ್ಯ ಜಿಲ್ಲೆಯ ಡಿಸಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪಾಪರ್ ಸರ್ಕಾರ
ಗ್ಯಾರಂಟಿಗಳಿಂದಾಗಿ ಪಾಪರ್ ಆಗಿರುವ ಸರ್ಕಾರ, ವಿವಿಗಳನ್ನು ಮುಚ್ಚಿದೆ. ಮಂಡ್ಯ, ಚಾಮರಾಜನಗರ ಮೊದಲಾದ ಜಿಲ್ಲೆಗಳು ಶಿಕ್ಷಣದಲ್ಲಿ ಮೇಲಕ್ಕೆ ಬರಬೇಕೆಂದು ವಿವಿಗಳನ್ನು ಆರಂಭಿಸಲಾಗಿತ್ತು. ಈಗ ವಿವಿಗಳನ್ನು ಮುಚ್ಚಿ ಅದೇ ಸ್ಥಳದಲ್ಲಿ ಬಾರ್‌ಗಳನ್ನು ಆರಂಭಿಸಬಹುದು. ಸರ್ಕಾರದ ಉದ್ದೇಶ ವಿದ್ಯೆ ನೀಡುವುದೋ ಅಥವಾ ಮದ್ಯ ಹಂಚುವುದೋ ಎಂದು ತಿಳಿಸಬೇಕು ಎಂದು ಹೇಳಿದರು.
ಸರ್ಕಾರ ಪಾಪರ್ ಆಗಿರುವುದಕ್ಕೆ ಇದಕ್ಕಿಂತ ಹೆಚ್ಚಿನ ಸಾಕ್ಷಿ ಬೇಡ. ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತದೆ. ಈಗ ರಾಜ್ಯದ ಪಾಲಿನ ಅನುದಾನ ನೀಡಲು ಇವರಿಗೆ ಸಾಧ್ಯವಾಗುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲವೆಂದಾದರೆ ಹೊಸ ಕಟ್ಟಡಗಳು ಎಲ್ಲಿಂದ ಬಂತು? ಮೂಲಸೌಕರ್ಯ ನೀಡಿಯೇ ವಿವಿಗಳನ್ನು ಆರಂಭಿಸಲಾಗಿತ್ತು. ಆದರೆ ಅದನ್ನು ಮುಂದುವರಿಸಲು ಈಗಿನ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ ಸದನದಲ್ಲಿ ಈ ಕುರಿತು ಹೋರಾಟ ಮಾಡಲಾಗುವುದು ಎಂದರು.ಇದನ್ನೂ ಓದಿ: ಕೋಲ್ಕತ್ತಾ| ತಂದೆ, ಮಗಳು ನೇಣಿಗೆ ಶರಣು – ಮಗಳ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ ಶಂಕೆ
ಬೆಂಗಳೂರು: ಕೈಯಲ್ಲಾಗದ ಹೇಡಿಗಳು ಮೈ ಪರಚಿಕೊಳ್ಳೋ ಹಾಗೆ ವಿವಿಗಳನ್ನು (Universities) ಮುಚ್ಚಿ ಯುವಕರನ್ನು ಶಿಕ್ಷಣದಿಂದ ವಂಚಿತರಾಗಿ ಮಾಡ್ತಿದ್ದಾರೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ (Ashwath Narayan) ಆರೋಪಿಸಿದರು.
8 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರ ನಿರ್ಧಾರದಿಂದ ಪ್ರಗತಿಗೆ ಹಿನ್ನಡೆಯಾಗಲಿದೆ. ಕಾಂಗ್ರೆಸ್‌ನಿಂದ ಎಲ್ಲ ಕ್ಷೇತ್ರಗಳಲ್ಲಿ ಹಿನ್ನಡೆಯಾಗಿದೆ. ಈ ತೀರ್ಮಾನದಿಂದ ಯುವಜನರ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗಲಿದೆ. ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡಿಸುವಾಗ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯ, ವಚನಕಾರರ ಮಾತುಗಳನ್ನು ಹೇಳಿದ್ದರು. ಆದರೆ ಈಗ ವಿವಿಗಳನ್ನು ಮುಚ್ಚಲಾಗುತ್ತಿದೆ. ಯುವಜನರಿಗೆ ಸಮಾನ ಅವಕಾಶ ದೊರೆಯಲು ಗುಣಮಟ್ಟದ ಶಿಕ್ಷಣ ನೀಡಬೇಕು. ಜಿಲ್ಲೆಗಳು ರೂಪುಗೊಂಡು ಹಲವಾರು ವರ್ಷಗಳಾದರೂ ಅಲ್ಲಿ ಪ್ರತ್ಯೇಕ ವಿವಿಗಳಿಲ್ಲ. ಹಣ ಇಲ್ಲ ಎಂಬ ನೆಪವೊಡ್ಡಿ ವಿವಿಗಳನ್ನು ಮುಚ್ಚಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ವಿವಿಗಳನ್ನು ರೂಪಿಸುವಾಗ, ಹೊಸ ಹುದ್ದೆಗಳನ್ನು ಸೃಷ್ಟಿಸಿಲ್ಲ. ಇರುವ ಹುದ್ದೆಗಳನ್ನೇ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.
2021ರ ಅಂಕಿ ಅಂಶಗಳ ಪ್ರಕಾರ, ಕಾಲೇಜುಗಳ ಪ್ರವೇಶಾತಿ ಪ್ರಮಾಣ ಸರಾಸರಿ ಶೇ.33 ಇದೆ. ಚಾಮರಾಜನಗರದಲ್ಲಿ ಶೇ.10, ಮಂಡ್ಯದಲ್ಲಿ ಶೇ.15, ಬಾಗಲಕೋಟೆಯಲ್ಲಿ ಶೇ.16 ಇದೆ. ಇಂತಹ ಸ್ಥಿತಿಯಲ್ಲಿ ಯುವಜನರನ್ನು ಶಿಕ್ಷಣ ವಂಚಿತರನ್ನಾಗಿ ಮಾಡಲಾಗುತ್ತಿದೆ. ವಿವಿಗಳಿಂದ ಆದಾಯ ಬರಲು ಇದು ಅಂಗಡಿಗಳಲ್ಲ. ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ಕ್ರಮ ಕೈಗೊಳ್ಳುವ ಮುನ್ನ ಸರ್ಕಾರ ಯಾವುದೇ ಪರಿಶೀಲನೆ ಮಾಡಿ ವರದಿ ರೂಪಿಸಿಲ್ಲ. ಬಿಜೆಪಿ ಅವಧಿಯಲ್ಲಿ ರೂಸಾ ಯೋಜನೆಯಡಿ ಅನುದಾನ ಪಡೆದು ಮಹಾರಾಣಿ ಕ್ಲಸ್ಟರ್, ಮಂಡ್ಯ ವಿವಿ ರೂಪಿಸಲಾಗಿದೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು. ಇದನ್ನೂ ಓದಿ: ಜಲಜೀವನ್ ಮಿಷನ್‌ಗೆ ರಾಜ್ಯಕ್ಕೆ ಘೋಷಿಸಿದ ಹಣ ಬಿಡುಗಡೆ ಮಾಡದೇ ಕೇಂದ್ರ ದ್ರೋಹ: ಸಿಎಂ
ಇದು ರಿಯಲ್ ಎಸ್ಟೇಟ್ ಸರ್ಕಾರ ಎಂದ ಛಲವಾದಿ:
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಮೊದಲು ಒತ್ತು ನೀಡಿದ್ದು ಶಿಕ್ಷಣಕ್ಕೆ. ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡುವ ಮೊದಲು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಸರ್ಕಾರಕ್ಕೆ 350 ಕೋಟಿ ರೂ. ಅನುದಾನ ನೀಡಲು ಆಗಲ್ಲ. ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಣಕ್ಕಿಂತ ರಿಯಲ್ ಎಸ್ಟೇಟ್ ಮುಖ್ಯ ಎಂದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿ ಅಂತ ನಾನೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ: ಹೆಚ್‌ಡಿಡಿ
ಕೇಂದ್ರ ಸರ್ಕಾರ ಜನ ಔಷಧಿ ಕೇಂದ್ರಗಳನ್ನು ನೀಡಿದರೆ, ಅದನ್ನು ಕೂಡ ಸರ್ಕಾರ ಮುಚ್ಚುತ್ತಿದೆ. ಕೇಂದ್ರ ಸರ್ಕಾರದಿಂದ 40 ಸಾವಿರ ಕಿ.ಮೀ. ರೈಲ್ವೆ ಮಾರ್ಗ ಹೆಚ್ಚಾಗಿದೆ. ರೈಲುಗಳ ಸಂಖ್ಯೆ ಹೆಚ್ಚಿದೆ. ರಾಜ್ಯ ಬಿಜೆಪಿಯಿಂದ ಹತ್ತು ವಿವಿಗಳನ್ನು ರೂಪಿಸಿದಾಗ, ಇನ್ನಷ್ಟು ಹೆಚ್ಚು ವಿವಿಗಳನ್ನು ಮಾಡುತ್ತೇವೆಂದು ಕಾಂಗ್ರೆಸ್ ಹೇಳಬೇಕಿತ್ತು. ಅದನ್ನು ಬಿಟ್ಟು ಬಿಜೆಪಿ ಕಟ್ಟಿದ ಮನೆಯನ್ನು ಒಡೆದು ಹಾಕಲು ಕಾಂಗ್ರೆಸ್ ಮುಂದಾಗಿದೆ. ಶಿಕ್ಷಣ ಹಾಗೂ ಆರೋಗ್ಯ ವಲಯದಲ್ಲಿ ಆದಾಯವನ್ನು ನೋಡಬಾರದು ಎಂದರು.
ನಿಮ್ಮ ಗ್ಯಾರಂಟಿಗಳನ್ನು ನಿಮ್ಮ ನಾಯಕರೇ ವಿರೋಧಿಸುತ್ತಿದ್ದಾರೆ. 5 ವರ್ಷದಲ್ಲಿ ಎಷ್ಟು ಲೂಟಿ ಮಾಡಬಹುದೆಂದು ಎಲ್ಲರೂ ನೋಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹುಡುಕಿದರೂ ಜಾಗ ಸಿಗದಷ್ಟು ಅಗ್ರಿಮೆಂಟ್‌ಗಳನ್ನು ಮಾಡಲಾಗುತ್ತಿದೆ. ಇದು ಲ್ಯಾಂಡ್ ಗ್ರ್ಯಾಬಿಂಗ್, ಲೂಟಿಯ ಸರ್ಕಾರ ಎಂದರು. ಇದನ್ನೂ ಓದಿ: ಗೋದಾವರಿ-ಕೃಷ್ಣ-ಕಾವೇರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 TMC ನೀರು ಕೊಡಬೇಕು: ಹೆಚ್.ಡಿ.ದೇವೇಗೌಡ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿವಿಗಳನ್ನು ಮುಚ್ಚುವ ಸಾಧ್ಯತೆ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಉಪ ಸಮಿತಿ ಈ ತೀರ್ಮಾನ ಕೈಗೊಂಡಿದೆ.
ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಕುರಿತು ಪರಿಶೀಲನೆಗೆ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ. ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ 9 ವಿವಿಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ.
ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿವಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ.
ಬಹುತೇಕ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ವಾಹನ ಖರೀದಿಸಲು ಹಣಕಾಸಿನ ಕೊರತೆಯಿದೆ. ಹೊಸ ವಿವಿಗಳನ್ನು ನಡೆಸಲು ಸರ್ಕಾರ ದೊಡ್ಡ ಮೊತ್ತದ ಹಣ ನೀಡಬೇಕಿದೆ. ಹೊಸ ವಿವಿಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ 342 ಕೋಟಿ ಅಗತ್ಯವಿದೆ. ವಿಶ್ವವಿದ್ಯಾಲಯಗಳ ಸ್ಥಾಪನೆಗೆ 100 ರಿಂದ 200 ಎಕರೆ ಅಗತ್ಯವಿದೆ. ಬಹುತೇಕ ವಿವಿಗಳಿಗೆ ಅಷ್ಟು ಪ್ರಮಾಣದ ಜಮೀನು ಲಭ್ಯವಿಲ್ಲ.
342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲಸೌಕರ್ಯ, ಸಲಕರಣೆ, ವಾಹನ, ಪೀಠೋಪಕರಣ ಇತರೆ ವಸ್ತುಗಳ ಖರೀದಿ ಅಗತ್ಯವಿದೆ. ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್ ಮಂಡ್ಯ, ನೃಪತುಂಗ ಯೂನಿವರ್ಸಿಟಿಗೆ ಬೀಗ ಬೀಳುವ ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಅಂಕ ವ್ಯವಸ್ಥೆ, ಗ್ರೇಡ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಅಂತ ಉನ್ನತ ಶಿಕ್ಷಣ ಸಚಿವ ಸುಧಾಕರ್ (MC Sudhakar) ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ (Congress) ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು. ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ (Karnataka Universities) ಅಂಕಗಳು ನೀಡುವ ವ್ಯವಸ್ಥೆ ಒಂದೊಂದು ವಿವಿಗೆ ಒಂದೊಂದು ವ್ಯವಸ್ಥೆ ಇದೆ. ವಿವಿಗಳಲ್ಲಿ ಮೌಲ್ಯಮಾಪನ ವ್ಯವಸ್ಥೆ ಭಿನ್ನವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತಿದೆ. ಹೀಗಾಗಿ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿ ಮಾಡಬೇಕು. ಫೇಕ್ ಡಾಕ್ಟರೇಟ್ ಕೊಡುವ ವಿವಿಗಳು ಜಾಸ್ತಿ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಪದವಿ ಪಡೆದ ಮೇಲೆ ಪದವಿಯನ್ನ ರಿಜಿಸ್ಟರ್ ಮಾಡಿಸುವ ವ್ಯವಸ್ಥೆ ಜಾರಿ ಮಾಡಬೇಕು. ನಮ್ಮ ಸರ್ಕಾರಿ ವಿವಿಗಳಲ್ಲಿ ಅಂಕಗಳು ನೀಡುವ ವ್ಯವಸ್ಥೆ ಬದಲಾಗಿ ಗ್ರೇಡ್ ವ್ಯವಸ್ಥೆ ವಿವಿಗಳಲ್ಲಿ ಜಾರಿ ಮಾಡಬೇಕು ಅಂತ ಒತ್ತಾಯಿಸಿದರು.
ಇದಕ್ಕೆ ಸಚಿವ ಸುಧಾಕರ್ ಉತ್ತರ ನೀಡಿ, ರಾಜ್ಯದಲ್ಲಿ 30 ಖಾಸಗಿ ವಿವಿಗಳು ಇವೆ. ಖಾಸಗಿ ವಿವಿಗಳಲ್ಲಿ ಗ್ರೇಡಿಂಗ್ ಸಿಸ್ಟಮ್, ಅಂಕ ವ್ಯವಸ್ಥೆ ಬೇರೆ ಬೇರೆ ಇದೆ. ನಮ್ಮ ಸರ್ಕಾರ ವಿವಿಗಳ ವ್ಯವಸ್ಥೆ ಬೇರೆ ಇದೆ. ಇದರಿಂದ ಸಮಸ್ಯೆ ಆಗ್ತಿದೆ. ಇತ್ತೀಚೆಗೆ ಒಬ್ಬ ವಿದ್ಯಾರ್ಥಿ ಸಹ ಅಂಕ ಕಡಿಮೆ ಬಂತು ಅಂತ ಆತ್ಮಹತ್ಯೆ ಮಾಡಿಕೊಂಡ. ಇದರಿಂದಾಗಿ ಅಂಕ ಮಾದರಿ ಅಧ್ಯಯನಕ್ಕೆ ಒಂದು ಸಮಿತಿ ಮಾಡಿದ್ವಿ. ಸಮಿತಿ ಎಲ್ಲಾ ವಿವಿಗಳಲ್ಲಿ ಅಂಕ ಮಾದರಿ, ಗ್ರೇಡ್ ಮಾದರಿ ಏಕರೂಪವಾಗಿ ಮಾಡಬೇಕು ಅಂತ ವರದಿ ಕೊಟ್ಟಿದೆ. ಕರ್ನಾಟಕ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇದನ್ನು ಇಟ್ಟು ನಿರ್ಧಾರ ಮಾಡ್ತೀವಿ. ಖಾಸಗಿ, ಸರ್ಕಾರ ವಿವಿಗಳಿಗೆ ಏಕರೂಪದ ಅಂಕ, ಗ್ರೇಡ್ ವ್ಯವಸ್ಥೆ ಜಾರಿ ಮಾಡ್ತೀವಿ ಎಂದರು. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ
ಡಾಕ್ಟರೇಟ್ ಪದವಿಗಳ ಬಗ್ಗೆ ಸ್ವಲ್ಪ ಗೊಂದಲ ಇದೆ. ಸುಪ್ರೀಂ ಕೋರ್ಟ್ ಆದೇಶದ ಮೇಲೆ ನಾವು ಇದನ್ನ ಜಾರಿ ಮಾಡ್ತೀವಿ. ಖಾಸಗಿ ವಿವಿಗಳು ಡಾಕ್ಟರೇಟ್ ಕೊಡುವ ವ್ಯವಸ್ಥೆ ಮಾಡುತ್ತಿವೆ. ಹೀಗಾಗಿ ಎಲ್ಲಾ ವಿವಿಗಳಲ್ಲಿ ಏಕರೂಪದ ಡಾಕ್ಟರೇಟ್ ವ್ಯವಸ್ಥೆ ತರುವ ನಿಟ್ಟಿನಲ್ಲಿ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ತೀವಿ ಅಂತ ತಿಳಿಸಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ
ಪದವಿ ವಿದ್ಯಾರ್ಥಿಗಳು ಪದವಿ ಪಡೆದ ಮೇಲೆ ರಿಜಿಸ್ಟರ್ ಮಾಡುವ ವ್ಯವಸ್ಥೆ ನಮ್ಮಲ್ಲಿ ಇಲ್ಲ. ಎಂಜಿನಿಯರಿಂಗ್ ಸೇರಿ ಹಲವು ಪದವಿಗಳ ರಿಜಿಸ್ಟರ್ ಮಾಡೋ ವ್ಯವಸ್ಥೆ ಇದೆ. ಈ ವಿಚಾರವಾಗಿ ಏಕರೂಪದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಅಂತ ಭರವಸೆ ನೀಡಿದರು. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ
ಆಂಸ್ಟರ್ಡ್ಯಾಮ್: ಹೆಚ್ಚುತ್ತಿರುವ ಚರ್ಮದ ಕ್ಯಾನ್ಸರ್ ಪ್ರಮಾಣ ತಗ್ಗಿಸಲು ನೆದರ್ಲೆಂಡ್ (Netherlands) ವಿಶೇಷ ಉಪಾಯ ಮಾಡಿದೆ. ಬೇಸಿಗೆಯಲ್ಲಿ ಸೂರ್ಯನ ಶಾಖದಿಂದ ರಕ್ಷಣೆ (Sun Protection) ಒದಗಿಸಲು ಎಲ್ಲರಿಗೂ ಉಚಿತವಾಗಿ ಸನ್ ಕ್ರೀಮ್ (Sun Cream) ವಿತರಿಸಲು ಮುಂದಾಗಿದೆ. ಅದಕ್ಕಾಗಿ ದೇಶಾದ್ಯಂತ ಶಾಲೆಗಳು, ವಿಶ್ವವಿದ್ಯಾಲಯಗಳು (Universities), ಉತ್ಸವಗಳು, ಉದ್ಯಾನವನಗಳು, ಕ್ರೀಡಾ ಸ್ಥಳಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸನ್ ಕ್ರೀಮ್ ವಿತರಕಗಳನ್ನು ಇರಿಸಲಾಗುತ್ತಿದೆ.
ವಾರಾಂತ್ಯದಲ್ಲಿ ಬ್ರೆಡಾದಲ್ಲಿ ನಡೆದ ಉತ್ಸವದಲ್ಲಿ ಸನ್ ಕ್ರೀಮ್ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಆಸ್ಟ್ರೇಲಿಯಾದ ಯಶಸ್ವಿ `ಸ್ಲಿಪ್, ಸ್ಲಾಪ್, ಸ್ಲ್ಯಾಪ್’ ಅಭಿಯಾನದಿಂದ ಸ್ಫೂರ್ತಿ ಪಡೆದ ನಂತರ ತನ್ನ ದೇಶದ ಪ್ರಜೆಗಳೂ ಬಿಸಿಲಿನ ವಾತಾವರಣದಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಉಡುಪು ಧರಿಸುವುದು, ಸನ್‌ಸ್ಕ್ರೀನ್ ಹಾಗೂ ಟೋಪಿ ಧರಿಸುವಂತೆ ಸೂಚಿಸಿದೆ. ಇಲ್ಲಿನ ಎಲ್ಲ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸುಮಾರು 120 ಪ್ರಾಥಮಿಕ ಶಾಲೆಗಳಿಗೆ ಸನ್ ಕ್ರೀಮ್ ವಿತರಿಸಲು ಹಣ ನೀಡಲು ಯೋಜಿಸಿದೆ.
ಇಲ್ಲಿನ ವೈದ್ಯಕೀಯ ತಜ್ಞರೂ ಇತ್ತೀಚಿನ ವರ್ಷಗಳಲ್ಲಿ ಜನ ಚರ್ಮದ ಕ್ಯಾನ್ಸರ್ ಪ್ರಕರಣಗಳಿಗೆ ತುತ್ತಾಗುತ್ತಿದ್ದಾರೆ. ಅದಕ್ಕೆ ಸನ್ ಕ್ರೀಮ್ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಡಲತೀರದಲ್ಲಿ ಸೆಕ್ಸ್ ಮಾಡೋದು ಬೇಡ – ಪ್ರವಾಸಿಗರಿಗೆ ಮನವಿ
ನವದೆಹಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತ ಬಿಬಿಸಿಯ ಸಾಕ್ಷ್ಯಚಿತ್ರ (BBC Documentary) ದೇಶದಲ್ಲೇ ಹೊಸ ವಿವಾದ ಹುಟ್ಟುಹಾಕಿದೆ. ಇಷ್ಟು ದಿನ ರಾಜಕೀಯ ಕೇಸರೆರಚಾಟಕ್ಕೆ ಸೀಮಿತವಾಗಿದ್ದ ಸಾಕ್ಷ್ಯಚಿತ್ರ ಈಗ ದೇಶದ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷ ಸೃಷ್ಟಿಸಿದೆ. ಸಿಎಎ (CAA), ಎನ್‌ಆರ್‌ಸಿ (NRC) ಬಳಿಕ ಕ್ಯಾಂಪಸ್ ಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮಾಡಲಾರಂಭಿಸಿದ್ದಾರೆ.
ಹೌದು. ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ಸಿದ್ಧಪಡಿಸಿರುವ ಸಾಕ್ಷ್ಯಚಿತ್ರ ದೇಶದಲ್ಲಿ ವಿಶ್ವವಿದ್ಯಾಲಯಗಳಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರಸಾರ ಮಾಡಲು ಕೇಂದ್ರ ಸರ್ಕಾರ ನಿರ್ಬಂಧ ಹೇರಿದ ಬೆನ್ನಲ್ಲೇ ವಿಶ್ವವಿದ್ಯಾಲಯಗಳಲ್ಲಿ ಅದನ್ನು ಪ್ರಸಾರ ಮಾಡಲು ವಿದ್ಯಾರ್ಥಿಗಳೇ ಪಟ್ಟು ಹಿಡಿದಿದ್ದಾರೆ. ತಾವೇ ಗುಂಪು ಕಟ್ಟಿಕೊಂಡು ಡಾರ್ಕ್ ನೆಟ್ (DarkNet) ಮೂಲಕ ಚಿತ್ರವನ್ನು ಕ್ಯಾಂಪಸ್ ನಲ್ಲಿ ಪ್ರಸಾರ ಮಾಡುವ ಪ್ರಯತ್ನ ಆರಂಭಿಸಿದ್ದಾರೆ.
ಇತ್ತೀಚೆಗಷ್ಟೇ ದೆಹಲಿಯ ಜೆಎನ್‌ಯು (JNU) ಹಾಗೂ ಹೈದರಾಬಾದ್‌ನ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ಚಿತ್ರ ಪ್ರದರ್ಶನ ಮಾಡುವ ಪ್ರಯತ್ನ ನಡೆದಿತ್ತು. ಈ ವೇಳೆ ಇದು ಸಂಘರ್ಷಕ್ಕೆ ಕಾರಣವಾಗಿತ್ತು. ಸೆಂಟ್ರಲ್ ವಿವಿಗಳಲ್ಲಿ ಗಲಭೆ ಸೃಷ್ಟಿಯಾದ್ರೆ, ಜೆಎನ್‌ಯು ಕ್ಯಾಂಪಸ್ ನಲ್ಲಿ ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಈ ಎರಡು ವಿವಿಗಳಿಗೆ ಸಂಘರ್ಷ ಸೀಮಿತವಾಗಿದೆ ಎಂದು ಕೊಳ್ಳುತ್ತಿರುವಾಗಲೇ ದೇಶದ ಹಲವು ವಿವಿಗಳಲ್ಲಿ ಇಂತಹದೇ ಘಟನೆಗಳು ವರದಿಯಾಗುತ್ತಿವೆ.
ಮೋದಿ ಸಾಕ್ಷ್ಯಚಿತ್ರ ಸಂಘರ್ಷ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್ ನಲ್ಲಿ ತಾರಕಕ್ಕೇರಿತ್ತು. ಚಿತ್ರವನ್ನು ಸಂಜೆ 6 ಗಂಟೆಗೆ ಕ್ಯಾಂಪಸ್ ನಲ್ಲಿ ಪ್ರದರ್ಶನ ಮಾಡುವುದಾಗಿ ವಿದ್ಯಾರ್ಥಿಗಳು ಘೋಷಣೆ ಮಾಡಿದರು. ಇದಕ್ಕೆ ವಿವಿ ಕುಲಪತಿಗಳು ವಿರೋಧ ವ್ಯಕ್ತಪಡಿಸಿದರು. ಅದಕ್ಕೆ ಜಗ್ಗದ ವಿದ್ಯಾರ್ಥಿಗಳು ಪ್ರದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ವಿದ್ಯಾರ್ಥಿಗಳ ವರ್ತನೆ ಕಂಡು ಕುಲಪತಿಗಳು ಪೊಲೀಸರಿಗೆ ದೂರು ನೀಡಿದರು. ಈ ಹಿನ್ನಲೆ ಕ್ಯಾಂಪಸ್ ಗೆ ಬಂದ ಪೊಲೀಸರು ಚಿತ್ರ ಪ್ರದರ್ಶನಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿತು.
ಇತ್ತ ಪಂಜಾಬ್ ವಿಶ್ವವಿದ್ಯಾಲಯಕ್ಕೂ ಸಾಕ್ಷ್ಯಚಿತ್ರದ ಬಿಸಿ ತಟ್ಟಿದೆ. ಕ್ಯಾಂಪಸ್ ನಲ್ಲಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುತ್ತಿತ್ತು. ಮಧ್ಯಪ್ರವೇಶ ಮಾಡಿದ ಪೊಲೀಸರೂ ಪ್ರದರ್ಶನವನ್ನು ತಡೆದು ಕೆಲವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೇರಳದ ತಿರುವನಂತಪುರಂ ವಿವಿ, ಪಾಂಡಿಚೇರಿ ವಿವಿಯಲ್ಲೂ ಸಾಕ್ಷ್ಯಚಿತ್ರ ಪ್ರದರ್ಶನದ ವಿಫಲ ಪ್ರಯತ್ನಗಳು ನಡೆದಿದೆ.
Live Tv
[brid partner=56869869 player=32851 video=960834 autoplay=true]
ಕಾಬೂಲ್: ಅಫ್ಘಾನಿಸ್ತಾನದಲ್ಲಿರುವ (Afghan) ತಾಲಿಬಾನ್ ಸರ್ಕಾರ (Taliban Government) ವಿದ್ಯಾರ್ಥಿನಿಯರಿಗೆ (Afghan Students) ವಿಶ್ವವಿದ್ಯಾಲಯ ಶಿಕ್ಷಣವನ್ನು ನಿಷೇಧಿಸಿದ ಬೆನ್ನಲ್ಲೇ ವಿದ್ಯಾರ್ಥಿಗಳು ತಮ್ಮ ತರಗತಿಗೆ ಗೈರಾಗಿದ್ದಾರೆ. ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗುವವರೆಗೂ ತಾವೂ ಕಾಲೇಜು ಪ್ರವೇಶ ಮಾಡುವುದಿಲ್ಲವೆಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ನಮ್ಮ ಸಹೋದರಿಯರಿಗೆ ವಿಶ್ವವಿದ್ಯಾನಿಲಯಗಳು (Universities) ಮುಚ್ಚಲ್ಪಟ್ಟಿವೆ. ಹಾಗಾಗಿ ನಮಗೂ ವಿಶ್ವವಿದ್ಯಾಲಯಕ್ಕೆ ಹೋಗಲು ಇಷ್ಟವಿಲ್ಲ ಎಂದು ವಿದ್ಯಾರ್ಥಿ ನವೀದುಲ್ಲಾ ಹೇಳಿಕೊಂಡಿದ್ದಾರೆ. ಇದರಿಂದ ಕಾಬೂಲ್ ವಿಶ್ವವಿದ್ಯಾಲಯದ ಉಪನ್ಯಾಸಕರು ತಮ್ಮ ನಿರ್ಧಾರ ಮರುಪರಿಶೀಲಿಸುವಂತೆ ತಾಲಿಬಾನ್‌ಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ
ಅಫ್ಘಾನಿಸ್ತಾನ ಸರ್ಕಾರವು ಇತ್ತೀಚೆಗೆ ಮಹಿಳಾ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ನಿರ್ಬಂಧ ವಿಧಿಸಿತು. ಈ ನಿರ್ಧಾರ ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆ ಮತ್ತು ಜಾಗತಿಕ ಖಂಡನೆಗೆ ಕಾರಣವಾಯಿತು. ಮಹಿಳಾ ವಿದ್ಯಾರ್ಥಿಗಳು ಶಿಕ್ಷಣ ನಿಷೇಧಿಸುವುದಕ್ಕಿಂತ ನಮ್ಮ ಶಿರಚ್ಛೇದನ ಮಾಡುವುದೇ ಉತ್ತಮ ಎಂದು ಬೀದಿಗಿಳಿದು ಹೋರಾಟ ನಡೆಸಲು ಮುಂದಾದರು. ಈ ಬೆನ್ನಲ್ಲೇ ಪುರುಷ ಅಭ್ಯರ್ಥಿಗಳೂ ಉನ್ನತ ಶಿಕ್ಷಣವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‍ಲೈನ್‍ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಲಾಗಿತ್ತು. ಆದರೂ ಕೆಲ ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!
ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲ ಉದ್ದೇಶವೇ ವಿಫಲವಾದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!
ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಎನ್‍ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್‍ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಸೂಚಿಸಿದ್ದಾರೆ.