Tag: unknown

  • ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ- ಗ್ರಾಮಸ್ಥರಲ್ಲಿ ಆತಂಕ

    ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ- ಗ್ರಾಮಸ್ಥರಲ್ಲಿ ಆತಂಕ

    ಗದಗ: ಕೊರೊನಾ ಲಾಕ್‍ಡೌನ್ ವೇಳೆ ಅನ್ಯಕೋಮಿನ ಅನಾಮಧೇಯ ವ್ಯಕ್ತಿಗಳು ದಿನಸಿ ಕಿಟ್ ವಿತರಿಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ.

    ಗುರುವಾರ ರಾತ್ರಿ 3 ಜನರ ಯುವಕರು, ಗ್ರಾಮದ ಹತ್ತಾರು ಮನೆಗಳಿಗೆ ಅಕ್ಕಿ, ಗೋಧಿ, ಬೆಳೆ, ಸಕ್ಕರೆ, ಎಣ್ಣೆ ಪ್ಯಾಕೆಟ್ ಹೀಗೆ ಅನೇಕ ವಸ್ತುವಿನ ದಿನಸಿ ಕಿಟ್ ವಿತರಿಸಿದ್ದಾರೆ. ನಮಗೆ ಬೇಡ ಅಂದರೂ ಕೊಟ್ಟು ಹೋಗಿದ್ದಾರೆ ಎಂದು ಸ್ಥಳೀಯ ಅಜ್ಜಿಯರಿಬ್ಬರು ಹೇಳುತ್ತಿದ್ದಾರೆ. ಇವರು ವಯಸ್ಸಾದವರು ಹಾಗೂ ಹೆಚ್ಚು ಮಕ್ಕಳಿದ್ದ ಮನೆಯೇ ಟಾರ್ಗೆಟ್ ಮಾಡಿ ಕೇವಲ ಬೆರಳೆಣಿಕೆಯಷ್ಟು ಮನೆಗಳಿಗೆ ಮಾತ್ರ ಹಂಚಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

    ತಾಲೂಕಾಡಳಿತ ಅನುಮತಿ ಇಲ್ಲದೇ ಯಾರು ಎಲ್ಲಿಂದ ಬಂದರು ಏನು ಎಂಬುದನ್ನು ತಿಳಿಸದೇ ಕಿಟ್ ನೀಡಿ ಪರಾರಿಯಾಗಿದ್ದಾರೆ. ಇದು ಈ ಸಂದರ್ಭದಲ್ಲಿ ಗ್ರಾಮದ ಜನರಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ಗದಗ ಎಸ್.ಪಿ ಯತೀಶ್ ಎನ್, ರೋಣ ತಹಶೀಲ್ದಾರ್ ಜಕ್ಕನಗೌಡ ತಾಲೂಕ ಆಹಾರ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅನುಮಾನಸ್ಪದ ವ್ಯಕ್ತಿಗಳು ಗುರುತು ಸಿಕ್ಕಿದ್ದು, ಈ ಕುರಿತು ಪೊಲೀಸರ ತನಿಖೆ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ.

  • ಮಾಜಿ ಸಿಎಂ ಮನೆಗೆ ಕಾರು ನುಗ್ಗಿಸಿದವನ ಮೇಲೆ ಭದ್ರತಾ ಪಡೆ ಗುಂಡಿನ ದಾಳಿ

    ಮಾಜಿ ಸಿಎಂ ಮನೆಗೆ ಕಾರು ನುಗ್ಗಿಸಿದವನ ಮೇಲೆ ಭದ್ರತಾ ಪಡೆ ಗುಂಡಿನ ದಾಳಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯ ಮೇಲೆ ಭದ್ರತಾ ಪಡೆ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.

    ಅಪರಿಚಿತ ವ್ಯಕ್ತಿಯೋರ್ವ ನಿರಾಯುಧನಾಗಿ ತನ್ನ ಮಹೀಂದ್ರ ಎಕ್ಸ್ ಯುವಿ 500 ವಾಹನದೊಂದಿಗೆ ಏಕಾಏಕಿ ಫಾರೂಕ್ ಅಬ್ದುಲ್ಲಾ ಮನೆಯ ಗೇಟಿನಲ್ಲಿ ನುಗ್ಗಿಸಿದ್ದಾನೆ. ಬಳಿಕ ಮನೆಯ ಒಳಗೆ ಹೋಗಿ ಗಾಜಿನ ಮೇಜನ್ನು ಒಡೆದು ಹಾಕಿದ್ದಾನೆ. ಅಲ್ಲದೇ ವ್ಯಕ್ತಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಯ ಮೇಲೂ ಸಹ ಹಲ್ಲೆ ನಡೆಸಿದ್ದ ಈ ವೇಳೆ ಭದ್ರತೆಯ ದೃಷ್ಟಿಯಿಂದ ಸಿಬ್ಬಂದಿ ವ್ಯಕ್ತಿಯ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯಾದ ವಿವೇಕ್ ಗುಪ್ತ ತಿಳಿಸಿದ್ದಾರೆ.

    ಅಪರಿಚಿತ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯು ಮನೆಯ ಕೋಣೆಯ ಬಳಿ ಹೊಡೆದು ಹಾಕಿದೆ. ಮೃತ ವ್ಯಕ್ತಿಯ ಬಳಿ ಆಧಾರ್ ಕಾರ್ಡ್ ಪತ್ತೆಯಾಗಿದ್ದು, ಈತ ಜಮ್ಮು ಕಾಶ್ಮೀರದ ಫೂಂಚ್ ಜಿಲ್ಲೆಯವನಾಗಿದ್ದಾನೆ. ಘಟನೆಯಲ್ಲಿ ಶಂಕಿತ ವ್ಯಕ್ತಿಯನ್ನು ತಡೆಯಲು ಯತ್ನಿಸಿದ ಭದ್ರತಾ ಸಿಬ್ಬಂದಿಯೂ ಸಹ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇನ್ನು ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿ ಆತಂಕ ವ್ಯಕ್ತಪಡಿಸಿರುವ ಫಾರೂಕ್ ಅಬ್ದುಲ್ಲಾ ಅವರ ಪುತ್ರ ಮತ್ತು ಕಾಶ್ಮೀರ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಅವರು ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲ್ಲಿದ್ದಾರೆ ಎಂದು ಹೇಳಿದ್ದಾರೆ.

    ಘಟನೆ ನಡೆದ ಸಂದರ್ಭ ಫಾರೂಕ್ ಅಬ್ದುಲ್ಲಾರವರು ಮನೆಯಲ್ಲಿ ಇಲ್ಲವಾದ್ದರಿಂದ ಆಗಬಹುದಾಗಿದ್ದ ಅವಘಡ ತಪ್ಪಿದೆ. ಹಾಲಿ ಶ್ರೀನಗರದ ಸಂಸದರಾಗಿರುವ ಫಾರೂಕ್ ಅಬ್ದುಲ್ಲಾರವರಿಗೆ ಕೇಂದ್ರ ಸರ್ಕಾರ ಜೆಡ್ ಫ್ಲಸ್ ಭದ್ರತೆಯನ್ನು ನೀಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅಪರಿಚಿತರ ಮನೆಯಲ್ಲಿ ಅಪರಿಚಿತ ಮಹಿಳೆ ನೇಣಿಗೆ ಶರಣು!

    ಅಪರಿಚಿತರ ಮನೆಯಲ್ಲಿ ಅಪರಿಚಿತ ಮಹಿಳೆ ನೇಣಿಗೆ ಶರಣು!

    ಮಂಡ್ಯ: ಅಪರಿಚಿತ ಮಹಿಳೆಯೊರ್ವರು ನೇಣು ಹಾಕಿಕೊಂಡ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯ ಅಗ್ರಹಾರ ಬಡಾವಣೆಯಲ್ಲಿ ನಡೆದಿದೆ.

    ಶನಿವಾರ ತಡರಾತ್ರಿ ಅಗ್ರಹಾರ ಬಡಾವಣೆಯ ಭಾಗ್ಯಮ್ಮ ಎಂಬುವರ ಮನೆಗೆ ಬಂದ ಮಹಿಳೆಯು ತಾನು ಅನಾಥೆ ಎಂದು ಮನೆಯಲ್ಲಿ ಆಶ್ರಯ ಪಡೆದಿದ್ದರು. ಆದರೆ ಇಂದು ಬೆಳಗಿನ ಜಾವ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಭಾಗ್ಯಮ್ಮರವರು, ಮಹಿಳೆ ಯಾರು, ಎಲ್ಲಿಯವರು ಎಂಬುದು ಗೊತ್ತಿಲ್ಲ. ತಡರಾತ್ರಿ ಅಸಹಾಯಕ ಸ್ಥಿತಿಯಲ್ಲಿದ್ದ ಮಹಿಳೆಯು ತಾನು ಅನಾಥೆ ಎಂದು ಹೇಳಿಕೊಂಡಿದ್ದಳು. ಹೀಗಾಗಿ ಮಹಿಳೆಗೆ ಆಶ್ರಯ ನೀಡಿದ್ದೆ, ಇಂದು ಮುಂಜಾನೆ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

    ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೆ.ಆರ್.ಪೇಟೆ ಟೌನ್ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಹಿಳೆಯ ಎಡಗೈ ಮೇಲೆ ಸುರೇಶ ಎಂಬುವರ ಹೆಸರಿದ್ದು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.