Tag: unkown person

  • ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಮಹಿಳೆಗೆ ಚಾಕು ಇರಿತ!

    ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಮಹಿಳೆಗೆ ಚಾಕು ಇರಿತ!

    ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಚಾಕು ಇರಿದ ಘಟನೆಯೊಂದು ನಗರದ ಕೆಆರ್ ಪುರಂನ ಪೈ ಲೇಔಟ್ ನಲ್ಲಿ ನಡೆದಿದೆ.

    ಲುಮೀನ (35) ಹಲ್ಲೆಗೊಳಗಾದ ಮಹಿಳೆ. ಮಂಗಳವಾರ ತಡರಾತ್ರಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ಏಕಾಏಕಿ ಮಹಿಳೆಯಿದ್ದ ಮನೆಗೆ ನುಗ್ಗಿ ಆಕೆಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.

    ಘಟನೆಯಿಂದ ಗಂಭೀರ ಗಾಯಗೊಂಡ ಲುಮೀನ ಅವರನ್ನು ಕೂಡಲೇ ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

    ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.